Tag: mansur khan

  • ಐಎಂಎ ಬಹುಕೋಟಿ ವಂಚನೆ ಪ್ರಕರಣ- ಪ್ರಮುಖ ಆರೋಪಿ ಮನ್ಸೂರ್ ಖಾನ್‍ಗೆ ಜಾಮೀನು

    ಐಎಂಎ ಬಹುಕೋಟಿ ವಂಚನೆ ಪ್ರಕರಣ- ಪ್ರಮುಖ ಆರೋಪಿ ಮನ್ಸೂರ್ ಖಾನ್‍ಗೆ ಜಾಮೀನು

    – ಜಾಮೀನು ಸಿಕ್ಕರೂ ಇಲ್ಲ ಬಿಡುಗಡೆ ಭಾಗ್ಯ

    ಬೆಂಗಳೂರು: ಭಾರೀ ಸಂಚಲನ ಸೃಷ್ಟಿಸಿದ್ದ ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಮನ್ಸೂರ್ ಖಾನ್‍ಗೆ ಹೈಕೋರ್ಟ್ ಏಕಸದಸ್ಯ ಪೀಠ ಜಾಮೀನು ನೀಡಿದೆ.

    ಮನ್ಸೂರ್ ಖಾನ್ ವಿರುದ್ಧ ಇಡಿ ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾ.ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಏಕಸದಸ್ಯ ಪೀಠ ಕೆಲ ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಿದೆ.

    ಅಧೀನ ನ್ಯಾಯಾಲಯ ಸೂಚಿಸಿದಾಗ ವಿಚಾರಣೆಗೆ ಹಾಜರಾಗಬೇಕು, ಯಾವುದೇ ಕಾರಣಕ್ಕೂ ಸಾಕ್ಷ್ಯ ನಾಶ ಹಾಗೂ ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು. ಪ್ರಕರಣದ ವಿಚಾರಣೆ ಮುಗಿಯುವ ವರೆಗೆ ಆಸ್ತಿ ವಿಲೇವಾರಿ ಮಾಡುವಂತಿಲ್ಲ. 15 ದಿನಗಳಿಗೊಮ್ಮೆ ಇಡಿ ಕಚೇರಿಗೆ ಭೇಟಿ ನೀಡಿ ಸಹಿ ಹಾಕಬೇಕು. ಟ್ರಯಲ್ ಕೋರ್ಟ್ ಅನುಮತಿ ಇಲ್ಲದೆ ಕೋರ್ಟ್ ವ್ಯಾಪ್ತಿ ಬಿಟ್ಟು ಹೊರ ಹೋಗುವಂತಿಲ್ಲ ಎಂಬುದು ಸೇರಿದಂತೆ ಇತರ ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಿದೆ.

    ಈ ಮೂಲಕ ಬಂಧನವಾಗಿ 15 ತಿಂಗಳ ನಂತರ ಮನ್ಸೂರ್ ಖಾನ್‍ಗೆ ಜಾಮೀನು ಸಿಕ್ಕಂತಾಗಿದೆ. ಸದ್ಯ ಇಡಿ ದಾಖಲಿಸಿದ್ದ ಪ್ರಕರಣದಲ್ಲಿ ಮಾತ್ರ ಜಾಮೀನು ಸಿಕ್ಕಿದೆ. ಸಿಬಿಐ ದಾಖಲಿಸಿರುವ ಪ್ರಕರಣದಲ್ಲಿ ಜಾಮೀನು ಸಿಕ್ಕಿಲ್ಲ. ಹೀಗಾಗಿ ಈ ಪ್ರಕರಣದಲ್ಲಿ ಜಾಮೀನು ಸಿಕ್ಕರೂ ಮನ್ಸೂರ್ ಖಾನ್ ಗೆ ಬಿಡುಗಡೆಯ ಭಾಗ್ಯ ಇಲ್ಲದಂತಾಗಿದೆ.

    ಬಹುಕೋಟಿ ವಂಚನೆ ಪ್ರಕರಣದ ಆರೋಪಿ ಐಎಂಎ ಸಂಸ್ಥಾಪಕ ಮನ್ಸೂರ್ ಖಾನ್ ಪ್ರಾಥಮಿಕ ತನಿಖೆ ನಡೆಸಲಾಗಿತ್ತು. ಜಾರಿ ನಿದೇಶನಾಲಯ(ಇಡಿ) ಅಧಿಕಾರಿಗಳು ವಿಚಾರಣೆ ನಡೆಸಿದ್ದು, ಪ್ರಕರಣದ ಕುರಿತು ಸ್ಫೋಟಕ ಮಾಹಿತಿಯನ್ನು ಮನ್ಸೂರ್ ಬಾಯ್ಬಿಟ್ಟಿದ್ದ. 1000ಕ್ಕೂ ಹೆಚ್ಚು ಕೋಟಿ ಮೌಲ್ಯದ ವ್ಯವಹಾರದ ರಹಸ್ಯ ವಿವರವನ್ನು ಇಡಿ ಅಧಿಕಾರಿಗಳು ಪಡೆದಿದ್ದಾರೆ ಎನ್ನಲಾಗಿತ್ತು. ಅಲ್ಲದೆ ಕೆಲ ಪ್ರಭಾವಿಗಳ ಹೆಸರುಗಳನ್ನು ಕೂಡ ಮನ್ಸೂರ್ ಪ್ರಸ್ತಾಪಿಸಿದ್ದಾನೆ ಎಂದು ಮೂಲಗಳಿಂದ ತಿಳಿದು ಬಂದಿತ್ತು.

    ಗ್ರಾಹಕರಿಗೆ ವಂಚಿಸಿದ್ದು ಹೇಗೆ?
    ಐಎಂಎ ಜ್ಯುವೆಲ್ಸ್ ಚಿನ್ನ ಖರೀದಿಸುವ ಗ್ರಾಹಕರಿಗೆ ಮೇಕಿಂಗ್ ಹಾಗೂ ವೇಸ್ಟೇಜ್ ಶುಲ್ಕ ವಿಧಿಸುತ್ತಿರಲಿಲ್ಲ. ಈ ಪ್ರಕಟಣೆ ನೋಡಿ ಜನ ಚಿನ್ನ ಖರೀದಿ ಮಾಡುತ್ತಿದ್ದರು. ಖರೀದಿಗೆ ಬಂದ ಗ್ರಾಹಕರಿಗೆ ಕಂಪನಿಯಲ್ಲಿ ಹಣ ಹೂಡುವಂತೆ ಸಿಬ್ಬಂದಿ ಪುಸಲಾಯಿಸುತ್ತಿದ್ದರು. ಜ್ಯುವೆಲ್ಸ್ ಸಿಬ್ಬಂದಿಯ ಮಾತಿಗೆ ಮರುಳಾದ ಜನ ತಮ್ಮಲ್ಲಿದ್ದ ಹಣವನ್ನು ಹೂಡಿಕೆ ಮಾಡುತ್ತಿದ್ದರು. 1 ಲಕ್ಷ ರೂ. 3 ಸಾವಿರ ರೂ. ನಂತೆ ಕಂಪನಿ ಬಡ್ಡಿ ನೀಡುತಿತ್ತು. ಕಂಪನಿ ಸರಿಯಾದ ಸಮಯದಲ್ಲಿ ಲಾಭಾಂಶ ನೀಡುತ್ತಿದ್ದ ಕಾರಣ ವಿಶ್ವಾಸಾರ್ಹತೆ ಗಳಿಸಿಕೊಂಡಿತ್ತು.’

    ಲಾಭಾಂಶ ಪಡೆದ ಗ್ರಾಹಕರು ಸ್ನೇಹಿತರಿಗೆ ಹೇಳುತ್ತಿದ್ದ ಕಾರಣ ಅವರು ಹೂಡಿಕೆ ಮಾಡತೊಡಗಿದರು. ಭಾರೀ ಪ್ರಚಾರ ಸಿಕ್ಕಿದ ಪರಿಣಾಮ ಹೂಡಿಕೆ ಹೆಚ್ಚಾಯಿತು. ಆದರೆ ಕಳೆದ ಕಳೆದ ಏಪ್ರಿಲ್, ಮೇ ತಿಂಗಳಿನಲ್ಲಿ ಸಂಸ್ಥೆ ಬಡ್ಡಿ ನೀಡಿರಲಿಲ್ಲ. ಈ ನಡುವೆ ಜೂನ್ 10 ರಂದು ಸಂಪೂರ್ಣ ಹಣ ನೀಡುವುದಾಗಿ ಭರವಸೆ ನೀಡಿತ್ತು. ಆದರೆ ಜೂ.9 ರಂದು ಮಾಲೀಕ ಮನ್ಸೂರ್ ಅಲಿ ಖಾನ್ ಆತ್ಮಹತ್ಯೆಯ ವಿಡಿಯೋ ವೈರಲ್ ಆದ ಬಳಿಕ ಮಳಿಗೆಯ ಮುಂದೆ ಜನರು ಜಮಾಯಿಸಿ ಹೂಡಿದ್ದ ಹಣವನ್ನು ಕೇಳಲು ಆರಂಭಿಸಿದ್ದರು.

  • ಐಎಂಎ ಪ್ರಕರಣ: ಜೈಲಿನಿಂದ ಹೊರಬಂದವನಿಗೆ ರಾಜಮರ್ಯಾದೆ

    ಐಎಂಎ ಪ್ರಕರಣ: ಜೈಲಿನಿಂದ ಹೊರಬಂದವನಿಗೆ ರಾಜಮರ್ಯಾದೆ

    ಬೆಂಗಳೂರು: ಐಎಂಎ ಜ್ಯುವೆಲ್ಸ್ ಬಹುಕೋಟಿ ವಂಚನೆ ಪ್ರಕರಣದಲ್ಲಿ ಅಮಾಯಕರ ಹಣ ತಿಂದವನಿಗೆ ರಾಜಮರ್ಯಾದೆ ನೀಡಲಾಗಿದೆ. ಈ ಪ್ರಕರಣದಲ್ಲಿ ಬಂಧಿತರಾಗಿರುವ ನಿರ್ದೇಶಕರಲ್ಲಿ ಒಬ್ಬನಾದ ಮುಜಾಹಿದ್ದೀನ್ ಜೈಲಿನಿಂದ ಹೊರಬಂದಿದ್ದು, ಆತನಿಗೆ ಅದ್ಧೂರಿ ಸ್ವಾಗತ ಕೋರಲಾಗಿದೆ.

    ಐಎಂಎ ಕೇಸಲ್ಲಿ ಮುಖ್ಯ ಆರೋಪಿ ಆಗಿರುವ ಐಎಂಎ ಜ್ಯುವೆಲ್ಸ್ ಮಾಲೀಕ ಮನ್ಸೂರ್ ಖಾನ್ ಪರಾರಿಯಾಗಲು ಮುಜಾಹಿದ್ದೀನ್ ಸಹಾಯ ಮಾಡಿದ್ದನು. ಈ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಲಾಗಿತ್ತು. ಆದರೆ ಈಗ ಮುಜಾಹಿದ್ದೀನ್ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾನೆ. ಈತನನ್ನು ಬೆಂಬಲಿಗರು ಪಟಾಕಿ ಸಿಡಿಸಿ, ಹಾರ ಹಾಕಿ ಸ್ವಾಗತಿಸಿದ್ದಾರೆ. ಬೆಂಗಳೂರಿನ ಫ್ರೆಜರ್‍ಟೌನ್ ನಲ್ಲಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

    ಇದೇ ತಿಂಗಳ 11ರಂದು ಮುಜಾಹಿದ್ದೀನ್‍ಗೆ ಹೈಕೋರ್ಟ್ ಏಕಸದಸ್ಯ ಪೀಠ ಜಾಮೀನು ನೀಡಿತ್ತು. ಮನ್ಸೂರ್ ಖಾನ್ ಎಸ್ಕೇಪ್ ಆಗಲು ಸಹಾಯ ಮಾಡಿದ್ದ ಮುಜಾಯಿದ್ದೀನ್ ಮೇಲೆ ಎಸ್‍ಐಟಿ ರೇಡ್ ಮಾಡಿ ಅರೆಸ್ಟ್ ಮಾಡಿತ್ತು.

    ಗ್ರಾಹಕರಿಗೆ ವಂಚಿಸಿದ್ದು ಹೇಗೆ?
    ಐಎಂಎ ಜ್ಯುವೆಲ್ಸ್ ಚಿನ್ನ ಖರೀದಿಸುವ ಗ್ರಾಹಕರಿಗೆ ಮೇಕಿಂಗ್ ಹಾಗೂ ವೇಸ್ಟೇಜ್ ಶುಲ್ಕ ವಿಧಿಸುತ್ತಿರಲಿಲ್ಲ. ಈ ಪ್ರಕಟಣೆ ನೋಡಿ ಜನ ಚಿನ್ನ ಖರೀದಿ ಮಾಡುತ್ತಿದ್ದರು. ಖರೀದಿಗೆ ಬಂದ ಗ್ರಾಹಕರಿಗೆ ಕಂಪನಿಯಲ್ಲಿ ಹಣ ಹೂಡುವಂತೆ ಸಿಬ್ಬಂದಿ ಪುಸಲಾಯಿಸುತ್ತಿದ್ದರು. ಜ್ಯುವೆಲ್ಸ್ ಸಿಬ್ಬಂದಿಯ ಮಾತಿಗೆ ಮರುಳಾದ ಜನ ತಮ್ಮಲ್ಲಿದ್ದ ಹಣವನ್ನು ಹೂಡಿಕೆ ಮಾಡುತ್ತಿದ್ದರು. 1 ಲಕ್ಷ ರೂ. 3 ಸಾವಿರ ರೂ. ನಂತೆ ಕಂಪನಿ ಬಡ್ಡಿ ನೀಡುತಿತ್ತು. ಕಂಪನಿ ಸರಿಯಾದ ಸಮಯದಲ್ಲಿ ಲಾಭಾಂಶ ನೀಡುತ್ತಿದ್ದ ಕಾರಣ ವಿಶ್ವಾಸಾರ್ಹತೆ ಗಳಿಸಿಕೊಂಡಿತ್ತು.

    ಲಾಭಾಂಶ ಪಡೆದ ಗ್ರಾಹಕರು ಸ್ನೇಹಿತರಿಗೆ ಹೇಳುತ್ತಿದ್ದ ಕಾರಣ ಅವರು ಹೂಡಿಕೆ ಮಾಡತೊಡಗಿದರು. ಭಾರೀ ಪ್ರಚಾರ ಸಿಕ್ಕಿದ ಪರಿಣಾಮ ಹೂಡಿಕೆ ಹೆಚ್ಚಾಯಿತು. ಆದರೆ ಕಳೆದ 2-3 ತಿಂಗಳಿನಿಂದ ಸಂಸ್ಥೆ ಬಡ್ಡಿ ನೀಡಿರಲಿಲ್ಲ. ಈ ನಡುವೆ ಜೂನ್ 10 ರಂದು ಸಂಪೂರ್ಣ ಹಣ ನೀಡುವುದಾಗಿ ಭರವಸೆ ನೀಡಿತ್ತು. ಆದರೆ ಜೂ.9 ರಂದು ಮಾಲೀಕ ಮನ್ಸೂರ್ ಅಲಿ ಖಾನ್ ಆತ್ಮಹತ್ಯೆಯ ವಿಡಿಯೋ ವೈರಲ್ ಆದ ಬಳಿಕ ಮಳಿಗೆಯ ಮುಂದೆ ಜನರು ಜಮಾಯಿಸಿ ಹೂಡಿದ್ದ ಹಣವನ್ನು ಕೇಳಲು ಆರಂಭಿಸಿದ್ದರು.

  • ಐಎಂಎ ಆಸ್ತಿ ಸಂಪೂರ್ಣ ಮುಟ್ಟುಗೋಲು- ಆರ್.ಅಶೋಕ್

    ಐಎಂಎ ಆಸ್ತಿ ಸಂಪೂರ್ಣ ಮುಟ್ಟುಗೋಲು- ಆರ್.ಅಶೋಕ್

    ಬೆಂಗಳೂರು: ಬಹುಕೋಟಿ ವಂಚನೆಯ ಐಎಂಎ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸ್ಥೆಗೆ ಸೇರಿದ ಸಂಪೂರ್ಣ ಆಸ್ತಿಯನ್ನು ಕಂದಾಯ ಇಲಾಖೆ ಮುಟ್ಟುಗೋಲು ಹಾಕಿಕೊಂಡಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

    ವಿಧಾನಸೌಧದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಐಎಂಎಗೆ ಸೇರಿದ ಬಿಬಿಎಂಪಿ ವ್ಯಾಪ್ತಿಯ ಚರಾಸ್ತಿ, ಸ್ಥಿರಾಸ್ತಿ, ಸೇರಿದಂತೆ ಹಲವು ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಸುಮಾರು 21.73 ಕೋಟಿ ರೂ.ನ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಸುಮಾರು 17 ಆಸ್ತಿಗಳನ್ನು ಕಂದಾಯ ಇಲಾಖೆ ಮುಟ್ಟುಗೋಲು ಹಾಕಿಕೊಂಡಿದೆ ಎಂದು ವಿವರಿಸಿದರು.

    ಒಟ್ಟು 2.85 ಕೋಟಿ ರೂ. ನಗದು, 8.86 ಕೋಟಿ ರೂ. ಡಿಡಿ ಜಪ್ತಿ ಮಾಡಲಾಗಿದೆ. 59 ಲಕ್ಷ ರೂ.ನ 5 ವಾಹನಗಳು, 91.57 ಲಕ್ಷ ರೂ.ನ ಚಿನ್ನ ಮತ್ತು ಬೆಳ್ಳಿ ಆಭರಣಗಳು, 303 ಕೆ.ಜಿ.ಯ 5,880 ನಕಲಿ ಚಿನ್ನದ ಬಿಸ್ಕೆಟ್‍ಗಳನ್ನು ಜಪ್ತಿ ಮಾಡಲಾಗಿದೆ. ಸುಮಾರು 23 ಬ್ಯಾಂಕ್ ಅಕೌಂಟ್‍ನಲ್ಲಿನ 58 ಸಾವಿರ ರೂ. ಜಪ್ತಿ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

    ಜನ ಸಾಮಾನ್ಯರಿಗೆ ವಂಚಿಸುತ್ತಿದ್ದ ಆರೋಪದ ಮೇಲೆ ಯಲ್ಲೊ ಎಕ್ಸ್‍ಪ್ರೆಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸೇರಿದಂತೆ ಅದರ 5 ಅಂಗ ಸಂಸ್ಥೆಗಳ ಅಕ್ರಮದ ವಿರುದ್ಧ ಸಿಐಡಿ ತನಿಖೆಗೆ ಸರ್ಕಾರ ಆದೇಶ ನೀಡಿದೆ. ಜನರಿಂದ 2 ರಿಂದ 2.5 ಲಕ್ಷ ರೂ. ಹೂಡಿಕೆ ಮಾಡಿಸಿಕೊಂಡು ಕಾರ್ ಖರೀದಿ ಮಾಡಿ ಹೂಡಿಕೆದಾರರಿಗೆ ಮಾಸಿಕ 27 ಸಾವಿರ ರೂ. ಬಾಡಿಗೆ ನೀಡುವ ಕೆಲಸವನ್ನು ಈ ಕಂಪನಿ ಮಾಡುತ್ತಿತ್ತು. ಆದರೆ, ಈ ಕಂಪನಿ ಅಕ್ರಮವಾಗಿ ನಡೆಯುತ್ತಿದ್ದು, ಕೋಟ್ಯಂತರ ರೂ. ಅಕ್ರಮ ಮಾಡಿರುವ ಶಂಕೆ ಹಿನ್ನೆಲೆಯಲ್ಲಿ ಸಿಐಡಿ ತನಿಖೆಗೆ ಆದೇಶ ನೀಡಲಾಗಿದೆ ಎಂದು ತಿಳಿಸಿದರು.

    2018ರಲ್ಲಿ ಪ್ರಾರಂಭವಾದ ಈ ಕಂಪನಿ ಕೇರಳ ಮೂಲದ್ದಾಗಿದೆ. ಈಗಾಗಲೇ 2 ಸಾವಿರ ಖಾತೆಗಳಿಗೆ ಹಣ ಜಮಾ ಮಾಡಿಕೊಂಡು, ಕೇವಲ 63 ಜನರಿಗೆ ಮಾತ್ರ ಕಾರ್ ನೀಡಲಾಗಿದೆ. ಈಗಾಗಲೇ 40-60 ಕೋಟಿ ರೂ. ಹಣ ಸಂಗ್ರಹ ಮಾಡಿದೆ. ಇದು ಅಕ್ರಮವಾಗಿದ್ದು, ಸಂಸ್ಥೆಯ ನಿರ್ದೇಶಕರಾದ ರಮೀತ್ ಮಲ್ಹೋತ್ರ, ಜೋಜೊ ಥಾಮಸ್, ಮಾಡಿ ನಾಯರ್ ಸೇರಿದಂತೆ ಸಂಸ್ಥೆಯ ಪಾಲುದಾರರಾದ ಲಕ್ಷ್ಮಿ ಸುರೇಖ, ಆಯುಷಾ ಸಿದ್ದಿಕಿ ಹಾಗೂ ಇತರರನ್ನು ಬಂಧಿಸುವಂತೆ ಆದೇಶಿಸಲಾಗಿದೆ ಎಂದರು.

    ಕಂಪನಿಯಿಂದ ಸಾವಿರಾರು ಜನ ಮೋಸ ಹೋಗುವ ಸಾಧ್ಯತೆ ಇತ್ತು. ಇದೊಂದು ಬೋಗಸ್, ಬ್ಲೇಡ್ ಕಂಪನಿ. ಬೆಂಗಳೂರು ಗ್ರಾಮಾಂತರ ಎಸ್‍ಪಿ ರವಿ ಚೆನ್ನಣ್ಣವರ್, ಡಿಸಿ, ಎಸಿಗಳು ಸಂಪೂರ್ಣ ತನಿಖೆ ಮಾಡಿ ಇದೊಂದು ಅಕ್ರಮ ಕಂಪನಿ ಎಂದು ವರದಿ ನೀಡಿದ್ದಾರೆ. ಹೀಗಾಗಿ ಈ ಕಂಪನಿ ವಿರುದ್ಧ ಸಿಐಡಿ ತನಿಖೆಗೆ ಆದೇಶ ನೀಡಲಾಗಿದೆ. ಆರ್‍ಬಿಐ ಸಹ ಇದೊಂದು ಬೋಗಸ್ ಕಂಪನಿ ಎಂದು ಪತ್ರ ಬರೆದಿದೆ. ಹೀಗಾಗಿ ಸಂಪೂರ್ಣ ತನಿಖೆ ಮಾಡಲು ಸಿಐಡಿಗೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

    ಇಂತಹ ಆರ್ಥಿಕ ಅಪರಾಧ ತಡೆಯಲು ಬೋಗಸ್ ಕಂಪನಿಗಳ ಬಗ್ಗೆ ಮೂರು ತಿಂಗಳ ಒಳಗೆ ಸಂಪೂರ್ಣ ಮಾಹಿತಿ ನೀಡುವಂತೆ ಎಲ್ಲ ಜಿಲ್ಲಾಧಿಕಾರಿಗಳಿಗೂ ಸೂಚಿಸಲಾಗಿದೆ. ಅಕ್ರಮದಲ್ಲಿ ಯಾರೇ ಇದ್ದರು ಕ್ರಮ ಕೈಗೊಳ್ಳುತ್ತೇವೆ. ತನಿಖೆಗೆ ಆದೇಶ ನೀಡಲಾಗಿದೆ. ಯಾರು ಈ ಅಕ್ರಮದಲ್ಲಿ ಇದ್ದಾರೆ ಎನ್ನುವುದು ತನಿಖೆ ನಂತರ ತಿಳಿಯಲಿದೆ. ಐಎಂಎ ತರಹ ಎರಡನೇ ದೊಡ್ಡ ಎಕ್ಸ್ ಪ್ರೆಸ್ ಜಾಲ ಇದು. ಮುಗ್ದರನ್ನು ಯಾಮಾರಿಸೋದು ಇದರ ಕೆಲಸ. ಜನರು ಸಹ ಇಂತಹ ಕಂಪನಿಗಳ ಬಗ್ಗೆ ಎಚ್ಚರದಿಂದ ಇರಬೇಕು ಎಂದು ಸಚಿವರು ಸಲಹೆ ನೀಡಿದರು.

  • ಐಎಂಎ ಸಾಕ್ಷ್ಯ ನಾಶ – ಮುಂದಿನ ವಾರ ರಾಜಕಾರಣಿಗಳಿಗೆ ಸಿಬಿಐನಿಂದ ಸಮನ್ಸ್?

    ಐಎಂಎ ಸಾಕ್ಷ್ಯ ನಾಶ – ಮುಂದಿನ ವಾರ ರಾಜಕಾರಣಿಗಳಿಗೆ ಸಿಬಿಐನಿಂದ ಸಮನ್ಸ್?

    ಬೆಂಗಳೂರು: ಐ ಮಾನಿಟರಿ ಅಡ್ವೈಸರಿ (ಐಎಂಎ) ಬಹುಕೋಟಿ ಹಗರಣ ಸಂಬಂಧ ವಿಚಾರಣೆ ನಡೆಸುತ್ತಿರುವ ಸಿಬಿಐ ಮುಂದಿನ ವಾರ ರಾಜ್ಯದ ಪ್ರಮುಖ ರಾಜಕಾರಣಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡುವ ಸಾಧ್ಯತೆಯಿದೆ.

    ಬಂಧನಕ್ಕೆ ಒಳಗಾಗಿರುವ ಐಎಂಎ ಮುಖ್ಯಸ್ಥ ಮನ್ಸೂರ್ ಖಾನ್ ವಿಚಾರಣೆಯ ಸಮಯದಲ್ಲಿ ನಾನು ಹಲವು ರಾಜಕಾರಣಿಗಳಿಗೆ ಹಣವನ್ನು ನೀಡಿದ್ದೆ. ಹಣ ಸಂದಾಯ ಮಾಡಿದ್ದ ದಾಖಲೆಗಳನ್ನು ಅಧಿಕಾರಿಗಳ ಸಹಾಯದಿಂದ ಈಗ ವ್ಯವಸ್ಥಿತವಾಗಿ ನಾಶ ಮಾಡಿದ್ದಾರೆ. ಅದರಲ್ಲೂ ಓರ್ವ ರಾಜಕಾರಣಿಗೆ 11 ಕೋಟಿ ರೂ. ಹಣವನ್ನು ನೀಡಿದ್ದೇನೆ ಎಂದು ಬಾಯಿಬಿಟ್ಟಿದ್ದಾನೆ. ಈ ಹಿನ್ನೆಲೆಯಲ್ಲಿ ರಾಜ್ಯದ ಪ್ರಮುಖ ರಾಜಕಾರಣಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಸಮನ್ಸ್ ಜಾರಿ ಮಾಡುವ ಸಾಧ್ಯತೆಯಿದೆ.

    ವಿಶೇಷ ತಂಡ ರೆಡಿ:
    ಕಂಪ್ಯೂಟರಿನಲ್ಲಿದ್ದ ಹಲವು ದಾಖಲೆಗಳನ್ನು ಐಪಿಎಸ್ ಅಧಿಕಾರಿಗಳು ನಾಶ ಮಾಡಿದ್ದಾರೆ ಎಂದು ಮನ್ಸೂರ್ ಅಲಿಖಾನ್ ಹೇಳಿದ ಹಿನ್ನೆಲೆಯಲ್ಲಿ ಸಿಬಿಐ 12 ಮಂದಿ ಸದಸ್ಯರ ತಂಡವನ್ನು ರಚಿಸಿದೆ. ಈ ತಂಡದಲ್ಲಿ ಚಾರ್ಟೆಡ್ ಅಕೌಂಟೆಂಟ್ ಮತ್ತು ಕಂಪ್ಯೂಟರ್ ಫಾರೆನ್ಸಿಕ್ ತಜ್ಞರು ಇದ್ದು ನಾಶವಾಗಿರುವ ದಾಖಲೆಗಳನ್ನು ಬಯಲು ಮಾಡಲಿವೆ.

    ಐಎಂಎ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಬೆಂಗಳೂರಿನ ವಿಶೇಷ ಸಿಬಿಐ ನ್ಯಾಯಾಲಯಕ್ಕೆ ಮೊದಲ ಚಾರ್ಜ್‍ಶೀಟ್ ಸಲ್ಲಿಸಿದೆ. ಐಎಂಎ ಹಗರಣದ ಮಾಸ್ಟರ್‍ ಮೈಂಡ್ ಮನ್ಸೂರ್ ಖಾನ್ ಮತ್ತು ಇತರ 24 ಜನರನ್ನು ಆರೋಪಿಗಳನ್ನಾಗಿ ಸಿಬಿಎ ಹೆಸರಿಸಿದೆ. ಕರ್ನಾಟಕ ಸರ್ಕಾರ ಮನವಿ ಮೇರೆಗೆ ಸಿಬಿಐ ಆಗಸ್ಟ್ 30ರಂದು ರಾತ್ರಿ ಈ ತನಿಖೆಯನ್ನು ಕೈಗೆತ್ತಿಕೊಂಡಿತ್ತು.

    ಆರೋಪ ಪಟ್ಟಿಯಲ್ಲಿ ಮುಸ್ಲಿಂ ಸಮುದಾಯವರಿಗೆ ಧರ್ಮದ ಹೆಸರಿನಲ್ಲಿ, ಹೆಚ್ಚಿನ ಬಡ್ಡಿಯ ಆಸೆ ತೋರಿಸಿ ವಂಚಿಸಲಾಗಿದೆ. ಈ ಪ್ರಕರಣದಲ್ಲಿ ಹಲವು ಮುಸ್ಲಿಂ ಮೌಲ್ವಿಗಳ ಪಾತ್ರವೂ ಇದೆ ಎಂದು ಉಲ್ಲೇಖಿಸಲಾಗಿದೆ.

    ಮನ್ಸೂರ್ ಖಾನ್ ದುಬೈಗೆ ಓಡಿ ಹೋಗುವುದರೊಂದಿಗೆ ವಂಚನೆ ಪ್ರಕರಣ ಬೆಳಕಿಗೆ ಬಂದಿತ್ತು. ಈ ಸಂದರ್ಭದಲ್ಲಿ ಮನ್ಸೂರ್ ಖಾನ್ ವಿಡಿಯೋ ಬಿಡುಗಡೆ ಮಾಡಿ ರಾಜ್ಯ ಮತ್ತು ಕೇಂದ್ರ ಸರಕಾರದ ಭ್ರಷ್ಟಾಚಾರದಿಂದ ಬೇಸತ್ತು ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ನಾಟಕವಾಡಿದ್ದ. ನಂತರ ಭಾರತಕ್ಕೆ ಮರಳಿದ್ದ ಖಾನ್‍ರನ್ನು ನವದೆಹಲಿಯಲ್ಲಿ ಜುಲೈ 21ರಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದರು. ಸದ್ಯ ಖಾನ್ ನ್ಯಾಯಾಂಗ ಬಂಧನದಲ್ಲಿದ್ದಾನೆ.

  • ಐಎಂಎ ಬಹುಕೋಟಿ ವಂಚನೆ ಪ್ರಕರಣ- ತನಿಖೆ ಪ್ರಾರಂಭಿಸಿದ ಸಿಬಿಐ

    ಐಎಂಎ ಬಹುಕೋಟಿ ವಂಚನೆ ಪ್ರಕರಣ- ತನಿಖೆ ಪ್ರಾರಂಭಿಸಿದ ಸಿಬಿಐ

    ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣ ಸಂಬಂಧಿಸಿದಂತೆ ಇಂದು ಸಿಬಿಐ ಅಧಿಕೃತವಾಗಿ ತನಿಖೆ ಆರಂಭಿಸಿದೆ. ಎಸ್‍ಐಟಿ ಮುಖ್ಯಸ್ಥ ರವಿಕಾಂತೇಗೌಡ ಮತ್ತು ತನಿಖಾಧಿಕಾರಿ ಗಿರೀಶ್ ಭೇಟಿ ಮಾಡಿ ಸಿಬಿಐ ಅಧಿಕಾರಿಗಳು ತನಿಖೆಯ ಫೈಲ್ ಪಡೆದುಕೊಂಡಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

    ಈ ಹಿಂದೆ ಎಸ್‍ಐಟಿಯ ಎಫ್‍ಐಆರ್‍ನಲ್ಲಿ ಮನ್ಸೂರ್ ಖಾನ್ ಸೇರಿದಂತೆ ಎಲ್ಲ ನಿರ್ದೇಶಕರನ್ನು ಆರೋಪಿಗಳನ್ನಾಗಿ ಮಾಡಲಾಗಿತ್ತು. ಈ ಎಲ್ಲರನ್ನು ಆರೋಪಿಗಳನ್ನಾಗಿಸಿ, ಐಎಂಎಗೆ ಸೇರಿದ ಮೂವತ್ತು ಸಂಸ್ಥೆಗಳ ಮೇಲೆ ಸಿಬಿಐ ಇದೀಗ ಮತ್ತೊಂದು ಹೊಸ ಎಫ್‍ಐಆರ್ ದಾಖಲಿಸಿದೆ.

    ಅಲ್ಲದೆ ವಂಚನೆಗೊಳಗಾದ 40 ಸಾವಿರ ಜನರು ಕಮರ್ಶಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಸಲ್ಲಿಸಿದ್ದ ದೂರುಗಳನ್ನು ಸಹ ಸಿಬಿಐ ಪಡೆದಿದ್ದು, ಎಲ್ಲ ಆಯಾಮಗಳಿಂದಲೂ ತನಿಖೆ ಪ್ರಾರಂಭಿಸಿದೆ. ಮನ್ಸೂರ್ ಖಾನ್‍ನಿಂದ ಅಕ್ರಮವಾಗಿ ಹಣ ಪಡೆದು ಸದ್ಯ ಜೈಲಿನಲ್ಲಿರುವ ಎಲ್ಲ ಆರೋಪಿಗಳನ್ನು ಸಿಬಿಐ ಹಂತ ಹಂತವಾಗಿ ವಿಚಾರಣೆ ನಡೆಸಲಿದೆ.

    ಬೆಂಗಳೂರು ಮತ್ತು ಹೈದ್ರಾಬಾದ್‍ನ ಸಿಬಿಐ ಅಧಿಕಾರಗಳ ತಂಡ ಐಎಂಎ ಪ್ರಕರಣದ ತನಿಖೆ ನಡೆಸುತ್ತಿದೆ. ಪ್ರಕರಣದ ಮಾಹಿತಿಯನ್ನು ಸಾಕ್ಷಿ ಸಮೇತ ಸಿಬಿಐ ಅಧಿಕಾರಿಗಳಿಗೆ ಹಂತ ಹಂತವಾಗಿ ಎಸ್‍ಐಟಿ ಅಧಿಕಾರಿಗಳು ನೀಡಲಿದ್ದಾರೆ. ತನಿಖೆಯನ್ನು ಸಿಬಿಐಗೆ ವಹಿಸಿರುವುದರಿಂದ ಮನ್ಸೂರ್ ಖಾನ್ ಸೇರಿದಂತೆ ಇತರ ವಂಚಕರಿಗೆ ನಡುಕ ಆರಂಭವಾಗಿದೆ.

  • ಮನ್ಸೂರ್ ಖಾನ್ ಮತ್ತೆ ಎದೆ ನೋವು ಡ್ರಾಮಾ

    ಮನ್ಸೂರ್ ಖಾನ್ ಮತ್ತೆ ಎದೆ ನೋವು ಡ್ರಾಮಾ

    ಬೆಂಗಳೂರು: ಬಹುಕೋಟಿ ವಂಚನೆಯ ಐಎಂಎ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಖಾನ್ ಎಸ್‍ಐಟಿ ಅಧಿಕಾರಿಗಳ ವಿಚಾರಣೆ ವೇಳೆ ಮತ್ತೆ ಎದೆ ನೋವು ಎಂದು ಹೇಳಿದ್ದು, ಅಧಿಕಾರಿಗಳು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ.

    ಎಸ್‍ಐಟಿ ಅಧಿಕಾರಿಗಳು ಶನಿವಾರ ಮನ್ಸೂರ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲು ಪ್ರಾರಂಭಿಸಿದ್ದರು. ವಿಚಾರಣೆ ವೇಳೆ ತಡರಾತ್ರಿ ಮತ್ತೆ ಎದೆ ನೋವು ಎಂದು ಮನ್ಸೂರ್ ಖಾನ್ ಹೇಳಿದ್ದು, ನಂತರ ಅಧಿಕಾರಿಗಳು ಮನ್ಸೂರ್ ಖಾನ್ ನನ್ನು ಜಯದೇವ ಆಸ್ಪತ್ರೆಗೆ ಸೇರಿದ್ದಾರೆ. ಇದನ್ನೂ ಓದಿ: 14 ದಿನಗಳ ನ್ಯಾಯಾಂಗ ಬಂಧನಕ್ಕೆ ಮನ್ಸೂರ್ ಖಾನ್

    ಡಿಸಿಪಿ ಗಿರೀಶ್ ಹಾಗೂ ಎಸಿಪಿ ಬಾಲರಾಜ್ ನೇತೃತ್ವದಲ್ಲಿ ವಿಚಾರಣೆ ಮಾಡಲಾಗುತ್ತಿತ್ತು. ವಿಚಾರಣೆ ಮಾಡುವಾಗ ರಾತ್ರಿ ಎದೆ ನೋವು ಎಂದು ಮನ್ಸೂರ್ ಖಾನ್ ಡ್ರಾಮಾ ಮಾಡಿದ್ದಾನೆ. ಬಳಿಕ ಜಯದೇವಕ್ಕೆ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿ ನಂತರ ಅಧಿಕಾರಿಗಳು ವಾಪಸ್ ಕರೆ ತಂದಿದ್ದಾರೆ. ಸದ್ಯ ಆರೋಪಿ ಮನ್ಸೂರ್ ಖಾನ್ ವಿಶ್ರಾಂತಿ ಪಡೆಯುತಿದ್ದಾನೆ. ಮನ್ಸೂರ್ ಜೊತೆ ತನಿಖಾಧಿಕಾರಿಗಳು ಹೊರತು ಪಡಿಸಿದರೆ ಬೇರೆ ಯಾರೊಬ್ಬರಿಗೂ ಮಾತನಾಡಲು ಅವಕಾಶ ನೀಡಿಲ್ಲ.

  • ಐಎಂಎ ವಂಚನೆ ಕೇಸ್ – ಎಸ್‍ಐಟಿ ಪೊಲೀಸರಿಂದ ಜಮೀರ್‌ಗೆ ಫುಲ್ ಡ್ರಿಲ್

    ಐಎಂಎ ವಂಚನೆ ಕೇಸ್ – ಎಸ್‍ಐಟಿ ಪೊಲೀಸರಿಂದ ಜಮೀರ್‌ಗೆ ಫುಲ್ ಡ್ರಿಲ್

    ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಇಂದು ಎಸ್‍ಐಟಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದು, ಸುಮಾರು ಆರು ಗಂಟೆಗಳಿಂದ ವಿಚಾರಣೆ ನಡೆಸುತ್ತಿದ್ದಾರೆ.

    ಸಿಐಡಿ ಕಚೇರಿಗೆ ಮಾಜಿ ಸಚಿವ ಜಮೀರ್ ಅಹ್ಮದ್‍ ಖಾನ್ ಇಂದು ಹಾಜರಾಗಿದ್ದು, ಎಸ್‍ಐಟಿ ಮುಖ್ಯಸ್ಥ ರವಿಕಾಂತೇಗೌಡ ಹಾಗೂ ಡಿಸಿಪಿ ಗಿರೀಶ್ ಅವರು ಜಮೀರ್ ಅಹ್ಮದ್ ಅವರನ್ನು ಸುಮಾರು ಆರು ಗಂಟೆಗಳಿಂದ ವಿಚಾರಣೆ ನಡೆಸುತ್ತಿದ್ದಾರೆ. ಸಂಜೆ ಆರು ಗಂಟೆಯಾದರೂ ಸಹ ಇನ್ನೂ ಬಿಟ್ಟಿಲ್ಲ.

    ನನಗೆ ಮನ್ಸೂರ್ ಖಾನ್ ಯಾರು ಎಂಬುದೇ ಗೊತ್ತಿರಲಿಲ್ಲ. ಕಾರ್ಪೋರೇಟರ್ ಮುಜಾಹೀದ್ ಆತನನ್ನು ಪರಿಚಯಿಸಿದ್ದ. ನಿವೇಶನ ಮಾರಾಟ ಮಾಡುವಂತೆ ಡೀಲ್ ತಂದಿದ್ದೇ ಮುಜಾಹೀದ್. ಜಮೀನು ಮಾರಾಟಕ್ಕೆ ಮಧ್ಯಸ್ಥಿಕೆ ವಹಿಸಿ ಮಾರಾಟ ಮಾಡಿಸಿದ್ದ. ಐಎಂಎ ಹಣ ನನ್ನ ಬಳಿ ಇಲ್ಲ, ನಾನು ಐಎಂಎ ಸಂಸ್ಥೆಯಲ್ಲಿ ಹಣ ಹೂಡಿಕೆ ಮಾಡಿಲ್ಲ ಎಂದು ವಿಚಾರಣೆ ವೇಳೆ ವಿವರಿಸಿದ್ದಾರೆ ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

    ಸೈಟ್ ಮಾರಾಟದ ವ್ಯವಹಾರ ಹೊರತುಪಡಿಸಿದರೆ ಬೇರೆ ಯಾವುದೇ ವ್ಯವಹಾರವನ್ನು ಮನ್ಸೂರ್ ಖಾನ್ ಜೊತೆ ನಾನು ಮಾಡಿಲ್ಲ ಎಂದು ಎಸ್‍ಐಟಿ ಪೊಲೀಸರ ಮುಂದೆ ಜಮೀರ್ ಅಹ್ಮದ್‍ ಖಾನ್ ಹೇಳಿಕೆ ನೀಡಿದ್ದಾರೆ.

    ಕಾಲಾವಕಾಶ ನೀಡಿ: ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಹಾಗೂ ಶಾಸಕ ರೋಷನ್ ಬೇಗ್ ಇಬ್ಬರಿಗೂ ಸಹ ಇಂದು ವಿಚಾರಣೆಗೆ ಹಾಜರಾಗುವಂತೆ ಎಸ್‍ಐಟಿ ಅಧಿಕಾರಿಗಳು ಸೂಚಿಸಿದ್ದರು. ಆದರೆ, ಜಮೀರ್ ಅಹ್ಮದ್ ಖಾನ್ ಹಾಜರಾಗಿದ್ದು, ರೋಷನ್ ಬೇಗ್ ಮತ್ತೆ ಒಂದು ವಾರ ಕಾಲಾವಕಾಶ ಕೇಳಿದ್ದಾರೆ.

    ಈವರೆಗೆ ಎಸ್‍ಐಟಿ ಅಧಿಕಾರಿಗಳು 4 ಬಾರಿ ನೋಟಿಸ್ ನೀಡಿದ್ದು, ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ, ಈ ಹಿಂದೆ ಏರ್‍ಪೋರ್ಟ್ ನಲ್ಲಿ ವಶಕ್ಕೆ ಪಡೆಯಲಾಗಿತ್ತು. ಇಂದು ಸಹ ವಿಚಾರಣೆಗೆ ಹಾಜರಾಗುವಂತೆ ಎಸ್‍ಐಟಿ ಪೊಲೀಸರು ನೋಟಿಸ್ ನೀಡಿದ್ದರು. ಇದೀಗ ಮತ್ತೆ ಒಂದು ವಾರ ಕಾಲಾವಕಾಶ ನೀಡುವಂತೆ ರೋಷನ್ ಬೇಗ್ ಕೇಳಿಕೊಂಡಿದ್ದಾರೆ. ಕಾಲಾವಕಾಶ ಕೊಡುವ ಬಗ್ಗೆ ಎಸ್‍ಐಟಿ ಅಧಿಕಾರಿಗಳು ಈವರೆಗೆ ಯಾವುದೇ ತೀರ್ಮಾನವನ್ನು ಕೈಗೊಂಡಿಲ್ಲ.

  • ಐಎಂಎ ವಂಚನೆ ಪ್ರಕರಣ – ಸಂಸ್ಥೆಗೆ ಸೇರಿದ ಜಮೀನು ವಶಕ್ಕೆ

    ಐಎಂಎ ವಂಚನೆ ಪ್ರಕರಣ – ಸಂಸ್ಥೆಗೆ ಸೇರಿದ ಜಮೀನು ವಶಕ್ಕೆ

    ಕೋಲಾರ: ಬಹು ಕೋಟಿ ಐಎಂಎ ವಂಚನೆ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸದ್ಯ ಸಂಸ್ಥೆಗೆ ಸೇರಿದ ಜಮೀನುಗಳನ್ನು ಕೋಲಾರ ಜಿಲ್ಲಾಡಳಿತ ವಶಕ್ಕೆ ನೀಡಲಾಗಿದೆ.

    ಜಿಲ್ಲೆಯ ಮಾಲೂರು ತಾಲೂಕಿನ ಪುರ ಮತ್ತು ಬೈರತನಹಳ್ಳಿ ಗ್ರಾಮದಲ್ಲಿ ಐಎಂಐ ಜಮೀನುಗಳನ್ನು ವಶಕ್ಕೆ ಪಡೆಯಲಾಗಿದೆ. ಪುರ ಗ್ರಾಮದ ಸರ್ವೆ ನಂ.6ರ 0.20 ಗುಂಟೆ ಮತ್ತು ಸರ್ವೆ ನಂ.5 ರ ಗುಂಟೆ ಜಮೀನನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೇ ಬೈರತನಹಳ್ಳಿಯ ಪಾರಂ ಹೌಸನ್ನು ಕೂಡ ಜಿಲ್ಲಾಡಳಿತ ವಶಕ್ಕೆ ನೀಡಲಾಗಿದೆ.

    ಇಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್ ನೇತೃತ್ವದಲ್ಲಿ ಅಧಿಕಾರಿಗಳು ಪ್ರದೇಶಗಳಿಗೆ ಭೇಟಿ ನೀಡಿ ಜಮೀನು ವಶಕ್ಕೆ ಪಡೆದಿದ್ದು, ವಶಪಡಿಸಿಕೊಂಡಿರುವ ಜಮೀನುಗಳ ಅತಿಕ್ರಮ ಪ್ರವೇಶ ನಿಷೇಧಿಸಲಾಗಿದೆ.

    ಬಹುಕೋಟಿ ವಂಚನೆ ಪ್ರಕರಣದ ಆರೋಪಿ ಐಎಂಎ ಸಂಸ್ಥಾಪಕ ಮನ್ಸೂರ್ ಖಾನ್ ಪ್ರಾಥಮಿಕ ತನಿಖೆ ನಡೆಸಲಾಗಿತ್ತು. ಜಾರಿ ನಿದೇಶನಾಲಯ(ಇಡಿ) ಅಧಿಕಾರಿಗಳು ವಿಚಾರಣೆ ನಡೆಸಿದ್ದು, ಪ್ರಕರಣದ ಕುರಿತು ಸ್ಫೋಟಕ ಮಾಹಿತಿಯನ್ನು ಮನ್ಸೂರ್ ಬಾಯ್ಬಿಟ್ಟಿದ್ದ. 1000ಕ್ಕೂ ಹೆಚ್ಚು ಕೋಟಿ ಮೌಲ್ಯದ ವ್ಯವಹಾರದ ರಹಸ್ಯ ವಿವರವನ್ನು ಇಡಿ ಅಧಿಕಾರಿಗಳು ಪಡೆದಿದ್ದಾರೆ ಎನ್ನಲಾಗಿತ್ತು. ಅಲ್ಲದೆ ಕೆಲ ಪ್ರಭಾವಿಗಳ ಹೆಸರುಗಳನ್ನು ಕೂಡ ಮನ್ಸೂರ್ ಪ್ರಸ್ತಾಪಿಸಿದ್ದಾನೆ ಎಂದು ಮೂಲಗಳಿಂದ ತಿಳಿದು ಬಂದಿತ್ತು.

  • ಮನ್ಸೂರ್ ಖಾನ್ ಯಾರು ಅನ್ನೋದೆ ನನಗೆ ಗೊತ್ತಿಲ್ಲ: ಶರವಣ

    ಮನ್ಸೂರ್ ಖಾನ್ ಯಾರು ಅನ್ನೋದೆ ನನಗೆ ಗೊತ್ತಿಲ್ಲ: ಶರವಣ

    ಬೆಂಗಳೂರು: ಮನ್ಸೂರ್ ಖಾನ್ ಯಾರು ಎನ್ನುವುದೇ ನನಗೆ ಗೊತ್ತಿಲ್ಲ ಎಂದು ಜೆಡಿಎಸ್ ವಿಧಾನ ಪರಿಷತ್ ಸದಸ್ಯ, ಕರ್ನಾಟಕ ಜ್ಯುವೆಲರ್ಸ್ ಅಸೋಸಿಯೇಷನ್ ಅಧ್ಯಕ್ಷ ಟಿ.ಎ.ಶರವಣ ಸ್ಪಷ್ಟಪಡಿಸಿದ್ದಾರೆ.

    ಮನ್ಸೂರ್ ಖಾನ್ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ತಮ್ಮ ಹೆಸರು ಉಲ್ಲೇಖವಾಗಿರುವ ಕುರಿತು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಮನ್ಸೂರ್ ಖಾನ್ ಯಾರೆಂಬುದೇ ಗೊತ್ತಿಲ್ಲ. ಐಎಂಎ ಜ್ಯುವೆಲ್ಲರ್ಸ್ ಮಾತ್ರ ನನಗೆ ಗೊತ್ತು. ಕಳೆದ ಎರಡು ವರ್ಷಗಳಿಂದ ಈ ಅಂಗಡಿಯಲ್ಲಿ ವೇಸ್ಟೇಜ್, ಮೇಕಿಂಗ್ ಚಾರ್ಜ್ ಇಲ್ಲದೆ, ಕೇವಲ ಚಿನ್ನದ ಬೆಲೆಗೆ ಆಭರಣಗಳನ್ನು ಮಾರಾಟ ಮಾಡುತ್ತಿದ್ದಾರೆ ಎಂದು ನಮ್ಮ ಅಸೋಸಿಯೇಷನ್ ಸದಸ್ಯರು ತಿಳಿಸಿದ್ದರು. ಈ ಕುರಿತು ಹೆಚ್ಚಿನ ಮಾಹಿತಿ ನನಗಿಲ್ಲ ಎಂದು ತಿಳಿಸಿದ್ದಾರೆ.

    ಐಎಂಎ ಜ್ಯುವೆಲರ್ಸ್‍ನ ಮಾಲೀಕತ್ವದ ಜಯನಗರ ಅಂಗಡಿಯವರು ವೇಸ್ಟೇಜ್, ಮೇಕಿಂಗ್ ಚಾರ್ಜ್ ಇಲ್ಲದೆ, ಕಡಿಮೆ ಬೆಲೆಗೆ ಆಭರಣಗಳನ್ನು ಮಾರುತ್ತಿದ್ದಾರೆ. ಈ ಕುರಿತು ಏನಾದರೂ ಕ್ರಮ ಕೈಗೊಳ್ಳಬೇಕು ಎಂದು ಜಯಗನರದ ವಿವಿಧ ಜ್ಯುವೆಲ್ಲರಿ ಶಾಪ್‍ನ ಮಾಲೀಕರು ಹಾಗೂ ಸಂಘದ ಸದಸ್ಯರು ನನ್ನ ಬಳಿ ವಿನಂತಿಸಿದ್ದರು. ಈ ಕುರಿತು ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ. ಅವರ ವೈಯಕ್ತಿಕ ಅಂಗಡಿಯಲ್ಲಿ ಅವರವರ ಬೆಲೆಗೆ ಮಾರುತ್ತಾರೆ. ಕ್ವಾಲಿಟಿಯಲ್ಲಿ ಮೋಸವಾದರೆ, ಗ್ರಾಹಕರಿಗೆ ತೊಂದರೆ ಆದರೆ ಮಾತ್ರ ನಾವು ದೂರು ನೀಡಲು ಸಾಧ್ಯ ಎಂದು ಮನವರಿಕೆ ಮಾಡಿದ್ದೆ ಎಂದು ತಿಳಿಸಿದರು.

    ಈ ಕುರಿತು ನಮ್ಮ ವಕೀಲರ ಬಳಿ ಚರ್ಚಿಸಿದಾಗ, ಕಡಿಮೆ ಬೆಲೆಗೆ ಮಾರುತ್ತಾರೆಂದು ಏನೂ ಮಾಡಲು ಸಾಧ್ಯವಿಲ್ಲ. ಅವರ ಅಂಗಡಿಯಲ್ಲಿ ಅವರು ಯಾವುದೇ ಬೆಲೆಗೆ ಮಾರಬಹುದು. ಗುಣಮಟ್ಟದಲ್ಲಿ ಮೋಸ ಮಾಡಿದ್ದರೆ ಮಾತ್ರ ನಾವು ಕೇಳಬಹುದು ಎಂದು ಸ್ಪಷ್ಟಪಡಿಸಿದ್ದರು. ಅದೇ ರೀತಿ ನಾನು ಅಸೋಸಿಯೇಷನ್ ಸದಸ್ಯರಿಗೆ ತಿಳಿಸಿದ್ದೆ ಎಂದು ಹೇಳಿದರು.

    ನಾವೇನು ಮಾಡಲು ಸಾಧ್ಯವಿಲ್ಲ, ಈ ಹಿಂದೆ ಇದೇ ರೀತಿ ಮಾರಾಟ ಮಾಡಿ ಕೆಲವು ಅಂಗಡಿಗಳು ಮುಚ್ಚಿಕೊಂಡು ಹೋಗಿವೆ ಇದು ಅದೇ ರೀತಿ ಆಗುತ್ತದೆ ಬಿಡಿ ಎಂದು ನಮ್ಮ ಸದಸ್ಯರಿಗೆ ತಿಳಿಸಿದ್ದೆ ಎಂದರು.

    ಮನ್ಸೂರ್ ಖಾನ್ ವಿಡಿಯೋದಲ್ಲಿ ನನ್ನ ಹೆಸರನ್ನು ಯಾಕೆ ಉಲ್ಲೇಖಿಸಿದ್ದಾರೆ ಎಂದು ತಿಳಿದಿಲ್ಲ. ಅವರ ಮುಖವನ್ನೂ ನಾನು ಈವರೆಗೆ ನೋಡಿಲ್ಲ. ನಮ್ಮ ಅಂಗಡಿಗೆ ಸಪ್ಲೈ ಮಾಡುವವರೇ ಅವರಿಗೂ ಸಪ್ಲೈ ಮಾಡುತ್ತಾರೆ. ನಮಗೆ ನೀಡಿದ ದರದಲ್ಲೇ ಅವರಿಗೂ ಚಿನ್ನ ನೀಡುತ್ತಾರೆ. ಆದರೆ, ಅವರು ವೇಸ್ಟೇಜ್, ಮೇಕಿಂಗ್ ಚಾರ್ಜ್ ಇಲ್ಲದೆ ಚಿನ್ನದ ದರದಲ್ಲೇ ಆಭರಣವನ್ನು ಮಾರುತ್ತಿದ್ದರು ಎಂದು ಶರವಣ ವಿವರಿಸಿದರು.

    ನಮ್ಮ ಸದಸ್ಯರು ದೂರು ನೀಡಿರುವುದನ್ನು ಬಿಟ್ಟರೆ, ಇನ್ನಾವುದು ನನಗೆ ತಿಳಿದಿಲ್ಲ. ಐಎಂಎ ಜ್ಯುವೆಲರ್ಸ್ ಮಾಲೀಕರು ಯಾರೆಂಬುದೇ ನನಗೆ ತಿಳಿದಿರಲಿಲ್ಲ. ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾದ ನಂತರ ಗೊತ್ತಾಯಿತು ಎಂದು ಹೇಳಿದರು.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ಐಎಂಎ ಪ್ರಕರಣ- ಅಜ್ಜಿ, 3ನೇ, 4ನೇ ಪತ್ನಿ, ಮಕ್ಕಳು ಸೇರಿ 10 ಮಂದಿಯೊಂದಿಗೆ ಖಾನ್ ಎಸ್ಕೇಪ್

    ಐಎಂಎ ಪ್ರಕರಣ- ಅಜ್ಜಿ, 3ನೇ, 4ನೇ ಪತ್ನಿ, ಮಕ್ಕಳು ಸೇರಿ 10 ಮಂದಿಯೊಂದಿಗೆ ಖಾನ್ ಎಸ್ಕೇಪ್

    ಬೆಂಗಳೂರು: ರಾಜ್ಯಾದ್ಯಂತ ಭಾರೀ ವಂಚನೆ ಮಾಡಿದ ಐಎಂಎ ಜ್ಯುವೆಲ್ಲರಿ ಮಾಲೀಕ ಮನ್ಸೂರ್ ತನ್ನ ಅಜ್ಜಿ, 3ನೇ ಪತ್ನಿ, 4ನೇ ಹೆಂಡತಿ ಹಾಗೂ ಮಕ್ಕಳು ಸೇರಿದಂತೆ ಸುಮಾರು 10 ಮಂದಿಯೊಂದಿಗೆ ಪರಾರಿಯಾಗಿದ್ದಾನೆ ಎಂಬ ಮಾಹಿತಿಯೊಂದು ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಸೋಮವಾರ(ಮೇ 10)ದಂದು 2 ತಿಂಗಳ ಬಡ್ಡಿ ಹಾಕೋಣ ಎಂದು ಹೇಳಿದ್ದ ಖತರ್ನಾಕ್ ಖಾನ್ ಬಗ್ಗೆ ಇದೀಗ ಮತ್ತಷ್ಟು ದೋಖಾಗಳು ಬಯಲಾಗುತ್ತಿವೆ. ಐಎಂಎ ಕಂಪನಿ ವಂಚನೆಯಿಂದ ಕಂಗಾಲಾದ ಗ್ರಾಹಕರು ಬೀದಿಗಿಳಿಯುತ್ತಿದ್ದಂತೆಯೇ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಈ ವೇಳೆ ಆತನ ಒಂದೊಂದೇ ಖತರ್ನಾಕ್ ಸ್ಟೋರಿಗಳು ಹೊರಬರುತ್ತಿವೆ.

    1,900 ಕೋಟಿ ಹಣವಿರುವ ಖಾತೆಯಿಂದ ಬರೋಬ್ಬರಿ 1,200 ಕೋಟಿ ಹಣವನ್ನು ತನ್ನ ಮತ್ತೊಂದು ಖಾತೆಗೆ ವರ್ಗಾವಣೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಹೀಗೆ ಹಣ ವರ್ಗಾವಣೆ ಮಾಡಿಕೊಂಡ ತಕ್ಷಣ ಮನ್ಸೂರ್ ತನ್ನ ಕುಟುಂಬಸ್ಥರ ಜೊತೆ ಎಸ್ಕೇಪ್ ಆಗಿದ್ದಾನೆ.

    ಈ ಮಧ್ಯೆ ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ನಾಟಕವಾಡಿದ್ದನು. ಈ ಹೇಳಿಕೆ ನೀಡಿದ ಬಳಿಕ ಆತ ನಿನ್ನೆಯೇ 17 ಕೋಟಿ ಹಣವನ್ನು ವರ್ಗಾವಣೆ ಮಾಡಿಕೊಂಡಿರುವುದು ಸ್ಪಷ್ಟವಾಗಿದೆ. ಇತ್ತ ಐಎಂಎ ಮಾಲೀಕ ಮನ್ಸೂರ್ ಅವರಿಗೆ ಏನು ಆಗಿಲ್ಲ ಎಂದು ಜ್ಯುವೆಲ್ಲರಿಯ ಸೇಲ್ಸ್ ಅಸೋಶಿಯೇಟ್ ಮಹಮ್ಮದ್ ಶಾಬಾದ್ ತಿಳಿಸಿದ್ದಾರೆ.

    ವಂಚನೆ ಹೇಗೆ?
    ಐಎಂಎ ಜ್ಯುವೆಲ್ಸ್ ಚಿನ್ನ ಖರೀದಿಸುವ ಗ್ರಾಹಕರಿಗೆ ಮೇಕಿಂಗ್ ಹಾಗೂ ವೇಸ್ಟೇಜ್ ಶುಲ್ಕ ವಿಧಿಸುತ್ತಿರಲಿಲ್ಲ. ಈ ಪ್ರಕಟಣೆ ನೋಡಿ ಜನ ಚಿನ್ನ ಖರೀದಿ ಮಾಡುತ್ತಿದ್ದರು. ಖರೀದಿಗೆ ಬಂದ ಗ್ರಾಹಕರಿಗೆ ಕಂಪನಿಯಲ್ಲಿ ಹಣ ಹೂಡುವಂತೆ ಸಿಬ್ಬಂದಿ ಪುಸಲಾಯಿಸುತ್ತಿದ್ದರು. ಜ್ಯುವೆಲ್ಸ್ ಸಿಬ್ಬಂದಿಯ ಮಾತಿಗೆ ಮರುಳಾದ ಜನ ತಮ್ಮಲ್ಲಿದ್ದ ಹಣವನ್ನು ಹೂಡಿಕೆ ಮಾಡುತ್ತಿದ್ದರು. 1 ಲಕ್ಷ ರೂ. 3 ಸಾವಿರ ರೂ. ನಂತೆ ಕಂಪನಿ ಬಡ್ಡಿ ನೀಡುತಿತ್ತು. ಕಂಪನಿ ಸರಿಯಾದ ಸಮಯದಲ್ಲಿ ಲಾಭಾಂಶ ನೀಡುತ್ತಿದ್ದ ಕಾರಣ ವಿಶ್ವಾಸಾರ್ಹತೆ ಗಳಿಸಿಕೊಂಡಿತ್ತು. ಲಾಭಾಂಶ ಪಡೆದ ಗ್ರಾಹಕರು ಸ್ನೇಹಿತರಿಗೆ ಹೇಳುತ್ತಿದ್ದ ಕಾರಣ ಅವರು ಹೂಡಿಕೆ ಮಾಡತೊಡಗಿದರು. ಭಾರೀ ಪ್ರಚಾರ ಸಿಕ್ಕಿದ ಪರಿಣಾಮ ಹೂಡಿಕೆ ಹೆಚ್ಚಾಯಿತು. ಆದರೆ ಕಳೆದ 2-3 ತಿಂಗಳಿನಿಂದ ಸಂಸ್ಥೆ ಬಡ್ಡಿ ನೀಡಿರಲಿಲ್ಲ. ಈ ನಡುವೆ ಜೂನ್ 10 ರಂದು ಸಂಪೂರ್ಣ ಹಣ ನೀಡುವುದಾಗಿ ಭರವಸೆ ನೀಡಿತ್ತು. ಆದರೆ ಜೂ.9 ರಂದು ಮಾಲೀಕ ಮನ್ಸೂರ್ ಅಲಿ ಖಾನ್ ಆತ್ಮಹತ್ಯೆಯ ವಿಡಿಯೋ ವೈರಲ್ ಆದ ಬಳಿಕ ಮಳಿಗೆಯ ಮುಂದೆ ಜನರು ಜಮಾಯಿಸಿ ಹೂಡಿದ್ದ ಹಣವನ್ನು ಕೇಳಲು ಆರಂಭಿಸಿದರು.