Tag: Mantri Square Mall

  • ಪಠಾಣ್ ಚಿತ್ರ ನೋಡಲು ತೆರಳಿದ್ದ ಕುಟುಂಬದ ಮೇಲೆ ಹಲ್ಲೆ- ಖಾಸಗಿ ಅಂಗ ಮುಟ್ಟಿ ಅಸಭ್ಯ ವರ್ತನೆ

    ಪಠಾಣ್ ಚಿತ್ರ ನೋಡಲು ತೆರಳಿದ್ದ ಕುಟುಂಬದ ಮೇಲೆ ಹಲ್ಲೆ- ಖಾಸಗಿ ಅಂಗ ಮುಟ್ಟಿ ಅಸಭ್ಯ ವರ್ತನೆ

    ಬೆಂಗಳೂರು: ಪಠಾಣ್ (Pathaan) ಚಿತ್ರ ನೋಡಲು ತೆರಳಿದ್ದ ಕುಟುಂಬದ ಮೇಲೆ ಜೋಡಿಯೊಂದು ಅಸಭ್ಯವಾಗಿ ವರ್ತಿಸಿ ಹಲ್ಲೆ ಮಾಡಿದ ಘಟನೆ ಮಲ್ಲೇಶ್ವರಂ (Malleshwaram) ಮಂತ್ರಿಮಾಲ್‍ನ (Mantri Square Mall) ಐನಾಕ್ಸ್ (Inox) ಚಿತ್ರಮಂದಿರದಲ್ಲಿ ನಡೆದಿದೆ.

    ನಾಗರಾಜ್ ಹಾಗೂ ಅವರ ಪತ್ನಿ ಪ್ರೇಮ, ಮಗಳು, ಅಳಿಯನ ಜೊತೆ ಪಠಾಣ್ ಚಿತ್ರ ನೋಡಲು ತೆರಳಿದ್ದರು. ಚಿತ್ರ ನೋಡುವಾಗ ಹಿಂದಿನ ಸೀಟಿನಲ್ಲಿ ಕುಳಿತಿದ್ದ ಯುವಕ ಮತ್ತು ಯುವತಿ ಪದೇ ಪದೇ ಕಿರುಚಾಡುತ್ತಿದ್ದರು. ಎದುರು ಸೀಟಿನಲ್ಲಿದ್ದ ಕುಟುಂಬ ಕಿರುಚಾಡದಂತೆ ಮನವಿ ಮಾಡಿದೆ. ಈ ವೇಳೆ ನಾಗರಾಜ್ ಕುಟುಂಬ ಹಾಗೂ ಜೋಡಿಯ ನಡುವೆ ಕಿರಿಕ್ ನಡೆದು ನಂತರ ಸುಮ್ಮನಾಗಿದ್ದರು. ಇದನ್ನೂ ಓದಿ: ಉದ್ಯೋಗದಲ್ಲಿ ಬಡ್ತಿ ಪಡೆಯಲು ಬಾಸ್ ಜೊತೆ ಮಲಗಲು ಪತ್ನಿಯನ್ನು ಒತ್ತಾಯಿಸಿದ!

    POLICE JEEP

    ಸಿನಿಮಾ ಮುಗಿಸಿ ಹೊರಗೆ ಬರುತ್ತಿದ್ದಂತೆ ಜೋಡಿ, ಕುಟುಂಬದೊಂದಿಗೆ ಗಲಾಟೆ ಶುರು ಮಾಡಿದೆ. ಇದನ್ನು ಪ್ರಶ್ನಿಸಿದ್ದಕ್ಕೆ ನಾಗರಾಜ್ ಅವರ ಮೇಲೆ ಹಲ್ಲೆ ಮಾಡಿದ್ದಾರೆ. ಯುವತಿ ಸಹ ತನ್ನ ಹೈ ಹೀಲ್ಡ್ ಚಪ್ಪಲಿಯಿಂದ ಪ್ರೇಮ ಅವರ ಮೇಲೆ ಹಲ್ಲೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾಳೆ.

    ಮಗಳು ಅಳಿಯನ ಮೇಲೆ ಸಹ ಜೋಡಿ ಹಲ್ಲೆ ನಡೆಸಿದೆ. ನಾಗರಾಜ್ ಅವರ ಮಗಳ ಖಾಸಗಿ ಅಂಗ ಮುಟ್ಟಿ ಯುವಕ ಅಸಭ್ಯವಾಗಿ ವರ್ತಿಸಿ ಪ್ರಾಣ ಬೆದರಿಕೆ ಹಾಕಿದ್ದಾನೆ. ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ನಾಗರಾಜ್ ಕುಟುಂಬ ದೂರು ದಾಖಲಿಸಿದೆ. 506, 504, 354 ಸೆಕ್ಷನ್‍ನಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಇದನ್ನೂ ಓದಿ: ಚೀನಾದ ಟಿಕ್‌ಟಾಕ್ ಅನ್ನು 30 ದಿನದೊಳಗೆ ಡಿವೈಸ್‌ಗಳಿಂದ ಡಿಲೀಟ್ ಮಾಡಿ – ಸರ್ಕಾರಿ ನೌಕರರಿಗೆ ಯುಎಸ್ ಸೂಚನೆ

  • 42.63 ಕೋಟಿ ಆಸ್ತಿ ತೆರಿಗೆ ಬಾಕಿ – ಮಂತ್ರಿ ಮಾಲ್ ಮೇಲೆ ಬಿಬಿಎಂಪಿ ತಂಡ ದಾಳಿ

    42.63 ಕೋಟಿ ಆಸ್ತಿ ತೆರಿಗೆ ಬಾಕಿ – ಮಂತ್ರಿ ಮಾಲ್ ಮೇಲೆ ಬಿಬಿಎಂಪಿ ತಂಡ ದಾಳಿ

    ಬೆಂಗಳೂರು: 42.63 ಕೋಟಿ ರೂ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಮಂತ್ರಿ ಮಾಲ್ (Mantri Square Mall) ಮೇಲೆ ಬಿಬಿಎಂಪಿ (BBMP) ಅಧಿಕಾರಿಗಳ ತಂಡ ದಾಳಿ ನಡೆಸಿದೆ.

    ಈ ಹಿಂದೆಯೇ ಮಂತ್ರಿ ಮಾಲ್ ಕೊಟ್ಟಿದ್ದ ಚೆಕ್ ಬೌನ್ಸ್ ಆಗಿತ್ತು. ಇದಕ್ಕೆ ಸಂಬಂಧಿಸಿದಂತೆ ನೋಟಿಸ್ ಕೊಟ್ಟಿದ್ದರೂ ತೇರಿಗೆ ಕಟ್ಟದ ಮಂತ್ರಿ ಮಾಲ್ ಮೇಲೆ ಬಿಬಿಎಂಪಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಆಸ್ತಿ ತೆರಿಗೆ (Property Tax) ಕಟ್ಟದ ಹಿನ್ನೆಲೆಯಲ್ಲಿ ಮಾಲ್‌ನಲ್ಲಿರುವ ಕಚೇರಿ ವಸ್ತುಗಳನ್ನ ವಶಪಡಿಸಿಕೊಳ್ಳೋದಕ್ಕೆ ಬಿಬಿಎಂಪಿ ಮುಂದಾಗಿದೆ. ಇದನ್ನೂ ಓದಿ: ಏರ್ ಇಂಡಿಯಾ ಬಳಿಕ 500 ವಿಮಾನಗಳ ಖರೀದಿಗೆ IndiGo ಆರ್ಡರ್

    ಪೊಲೀಸ್ ಮತ್ತು ಮಾರ್ಷಲ್ ನೇತೃತ್ವದಲ್ಲಿ ದಿಢೀರ್ ದಾಳಿ ಮಾಡಿರುವ ಬಿಬಿಎಂಪಿ ಅಧಿಕಾರಿಗಳು ಮಂತ್ರಿ ಮಾಲ್ ಕಚೇರಿಯ ಲ್ಯಾಪ್‌ಟಾಪ್, ಕಂಪ್ಯೂಟರ್, ಚೇರ್, ಟೇಬಲ್, ಮ್ಯೂಯೆಬಲ್ ಸೇರಿದಂತೆ ಎಲ್ಲಾ ಯಂತ್ರೋಪಕರಣ ವಸ್ತುಗಳನ್ನ ವಶಕ್ಕೆ ಪಡೆದುಕೊಳ್ಳುತ್ತಿದೆ. ಇದನ್ನೂ ಓದಿ: ಕಾಂಬೋಡಿಯಾದಲ್ಲಿ ಅಕ್ರಮ ವಶದಲ್ಲಿರುವ ತೀರ್ಥಹಳ್ಳಿಯ ಸಾಫ್ಟ್‌ವೇರ್‌ ಇಂಜಿನಿಯರ್; ಬಿಡುಗಡೆಗೆ ಗೃಹ ಸಚಿವ ಶತಪ್ರಯತ್ನ

    ಈ ಕುರಿತು ಮಾತನಾಡಿರುವ ಬಿಬಿಎಂಪಿ ಆಯುಕ್ತ ಯೋಗೇಶ್, ಬಿಬಿಎಂಪಿ ವ್ಯಾಪ್ತಿಯಲ್ಲಿ ಮುಖ್ಯ ಆಯುಕ್ತರ ನಿರ್ದೇಶನದ ಮೇರೆಗೆ ಆಸ್ತಿ ತೆರಿಗೆ ತೆಗೆದುಕೊಳ್ಳುತ್ತಿದ್ದೇವೆ. ನಮ್ಮ ವ್ಯಾಪ್ತಿಯಲ್ಲಿ ಮಂತ್ರಿ ಮಾಲ್ 42. 63 ಕೋಟಿ ರೂ. ಬಾಕಿ ಉಳಿಸಿಕೊಂಡಿಸಿದೆ. ನೋಟಿಸ್ ಕೊಟ್ಟರೂ ಯಾವುದೇ ಪ್ರತಿಕ್ರಿಯೆ ಕೊಟ್ಟಿಲ್ಲ. ಆದ್ದರಿಂದ ವಸ್ತುಗಳನ್ನ ವಶಪಡಿಸಿಕೊಳ್ಳೋದಕ್ಕೆ ಮುಂದಾಗಿದ್ದೇವೆ. ಚರಾಸ್ತಿಗಳ ಮೊತ್ತ ಎಷ್ಟಿದೆ ಎಂದು ಪರಿಶೋಧನೆ ಮಾಡುತ್ತಿದ್ದೇವೆ. ಮಾರ್ಗಸೂಚಿ ಪ್ರಕಾರವೇ ದಾಳಿ ಮಾಡಿದ್ದು, ಇನ್ನಷ್ಟು ವಸ್ತುಗಳನ್ನ ವಶಪಡಿಸಿಕೊಳ್ಳಲಿದ್ದೇವೆ ಎಂದು ತಿಳಿಸಿದ್ದಾರೆ.

    ಮಂತ್ರಿ ಮಾಲ್ ಮುಖ್ಯ ವ್ಯವಸ್ಥಾಪಕ ಶಬೀರ್ ಮಾತನಾಡಿ, ಆಸ್ತಿ ಉಳಿಸಿಕೊಂಡಿರೋದು ಅಭಿಷೇಕ್ ಡೆವಲಪರ್ಸ್. ಮಂತ್ರಿ ಮಾಲ್ ಬಾಕಿ ಉಳಿಸಿಕೊಂಡಿಲ್ಲ. ಬಿಬಿಎಂಪಿ ದಾಳಿ ಮಾಡ್ತಿರೋದು ಕಾನೂನು ಬಾಹಿರ. ನಾವು ಕೋರ್ಟ್ನಿಂದ ತಡೆಯಾಜ್ಞೆ ಕೂಡಾ ತಂದಿದ್ದೇವೆ. ಏಕಾಏಕಿ ಈ ರೀತಿ ಮಾಡಿರೋದು ಸರಿಯಲ್ಲ. ನಾವು ಕೋರ್ಟಿಗೆ ಹೋಗ್ತೇವೆ ಎಂದಿದ್ದಾರೆ.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • 39 ಕೋಟಿ ತೆರಿಗೆ ಬಾಕಿ- ಬಿಬಿಎಂಪಿಯಿಂದ ಮಂತ್ರಿ ಮಾಲ್‍ಗೆ ಬೀಗ

    39 ಕೋಟಿ ತೆರಿಗೆ ಬಾಕಿ- ಬಿಬಿಎಂಪಿಯಿಂದ ಮಂತ್ರಿ ಮಾಲ್‍ಗೆ ಬೀಗ

    ಬೆಂಗಳೂರು: ಬರೋಬ್ಬರಿ 39 ಕೋಟಿ ರೂ. ತೆರಿಗೆ ಬಾಕಿ ಉಳಿಸಿಕೊಂಡಿದ್ದಕ್ಕೆ ಬಿಬಿಎಂಪಿ ಮಲ್ಲೇಶ್ವರದಲ್ಲಿರುವ ಮಂತ್ರಿ ಮಾಲ್‍ಗೆ ಬೀಗ ಹಾಕಿದೆ. ತೆರಿಗೆ ಕಟ್ಟುವವರೆಗೆ ಮಾಲ್ ಓಪನ್ ಮಾಡಲು ಬಿಡುವುದಿಲ್ಲ ಎಂದು ಬಿಬಿಎಂಪಿ ಖಡಕ್ ಎಚ್ಚರಿಕೆ ನೀಡಿದೆ.

    ಕಳೆದ ಮೂರು ವರ್ಷಗಳಿಂದ ಮಂತ್ರಿ ಮಾಲ್ ತೆರಿಗೆ ಕಟ್ಟಿಲ್ಲ, ಬಡ್ಡಿ ಸೇರಿ ಒಟ್ಟು 39 ಕೋಟಿ ರೂ. ತೆರಿಗೆ ಬಾಕಿ ಉಳಿದಿದೆ. ಇಂದು ಪಾಲಿಕೆ ಅಧಿಕಾರಿಗಳು ವಸೂಲಿಗೆ ತೆರಳಿದ್ದರು. ಈ ವೇಳೆ ಸಹ ತೆರಿಗೆ ಕಟ್ಟಿಲ್ಲ. ಹೀಗಾಗಿ ಬೀಗ ಜಡಿಯಲಾಗಿದೆ ಎಂದು ಮಲ್ಲೇಶ್ವರ ಪಶ್ವಿಮ ಡಿಸಿ ಪ್ರಸನ್ನ ಕುಮಾರ್ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ.

    ಎಷ್ಟೇ ನೋಟಿಸ್ ನೀಡಿದರೂ ಮಂತ್ರಿ ಮಾಲ್ ಮಾತ್ರ ಬುದ್ಧಿ ಕಲಿತಿಲ್ಲ. ಪ್ರತಿಷ್ಟಿತ ಮಂತ್ರಿ ಮಾಲ್ 39 ಕೋಟಿ ರೂಪಾಯಿ ತೆರಿಗೆಯನ್ನು ಬಾಕಿ ಉಳಿಸಿಕೊಂಡಿದೆ. ತೆರಿಗೆ ಬಾಕಿ ಪಾವತಿಸುವಂತೆ ಬಿಬಿಎಂಪಿ ಪಶ್ಚಿಮ ವಿಭಾಗದ ಜಂಟಿ ಆಯುಕ್ತರು ನೋಟಿಸ್ ನೀಡಿದ್ದರು. 2017ರಿಂದ ತೆರಿಗೆ ಬಾಕಿ ಉಳಿಸಿಕೊಂಡಿದ್ದು, ತೆರಿಗೆ ಬಾಕಿ ಹಿನ್ನೆಲೆ ಮಂತ್ರಿ ಮಾಲ್ ಗೆ ಬೀಗ ಹಾಕಲು ಬಿಬಿಎಂಪಿ ಮುಂದಾಗಿದೆ. ಬಿಬಿಎಂಪಿ ಪಶ್ಚಿಮ ವಲಯದ ಜಂಟಿ ಆಯುಕ್ತ ಶಿವಸ್ವಾಮಿ ಹಾಗೂ ಬಿಬಿಎಂಪಿ ಅಧಿಕಾರಿಗಳಿಂದ ಮಂತ್ರಿ ಮಾಲ್ ಗೆ ಬೀಗ ಹಾಕಲಾಗಿತ್ತು. ಬಳಿಕ 5 ಕೋಟಿ ರೂ. ಪಾವತಿ, ಉಳಿದ ಹಣವನ್ನು ಅಕ್ಟೋಬರ್ ಅಂತ್ಯದ ವೇಳೆ ಕಟ್ಟುವುದಾಗಿ ಭರವಸೆ ನೀಡಿದ್ದರಿಂದ ಬೀಗ ತೆರವುಗೊಳಿಸಲಾಗಿದೆ. ಇದನ್ನೂ ಓದಿ: ಮೆಟ್ರೋ ಕಾಮಗಾರಿ – 30 ಅಡಿ ಮಣ್ಣು ಕುಸಿತ, ತಪ್ಪಿತು ಭಾರೀ ಅನಾಹುತ

    ಆಸ್ತಿ ತೆರಿಗೆ ಕಟ್ಟಲು ಸಾಕಷ್ಟು ಕಾಲಾವಕಾಶ ನೀಡಲಾಗಿತ್ತು. ಆದರೂ ಮಂತ್ರಿ ಮಾಲ್ ನಿರ್ಲಕ್ಷ್ಯ ವಹಿಸಿದೆ. ಆಸ್ತಿ ತೆರಿಗೆ ಕಟ್ಟುವಲ್ಲಿ ಮಂತ್ರಿ ಮಾಲ್ ಹಿಂದೇಟು ಹಾಕುತ್ತಿದೆ. ಬೆಂಗಳೂರಿನಲ್ಲಿ ಬಿಬಿಎಂಪಿ ಆಸ್ತಿ ತೆರಿಗೆ ವಂಚಕರ ಸಂಖ್ಯೆ ಹೆಚ್ಚಾಗಿದ್ದು, ಬಿಬಿಎಂಪಿಗೆ ಮಂತ್ರಿ ಮಾಲ್ ದೊಡ್ಡ ತಲೆನೋವಾಗಿದೆ. ಇದನ್ನೂ ಓದಿ:ರಾತ್ರಿ ರಾಜಕಾರಣ ಮಾಡುವ ಸಂಸ್ಕೃತಿ ಬಿಜೆಪಿಯದ್ದಲ್ಲ ಕಾಂಗ್ರೆಸ್ಸಿನದ್ದು: ಸಂಜಯ್ ಪಾಟೀಲ್

    ಅಭಿಷೇಕ್ ಡೆವಲಪರ್ಸ್ ಹೆಸರಿನಲ್ಲಿ ಮಂತ್ರಿ ಮಾಲ್ ಬಿಬಿಎಂಪಿಗೆ ತೆರಿಗೆ ಪಾವತಿ ಮಾಡುತ್ತಿದೆ. 2017ರಿಂದ ಇದೂವರೆಗೂ ಆಸ್ತಿ ತೆರಿಗೆ ಕಟ್ಟಿಲ್ಲ. ಮಂತ್ರಿ ಮಾಲ್ ಗೆ ನೋಟಿಸ್ ಕೊಟ್ಟು ಬಿಬಿಎಂಪಿ ಸುಸ್ತಾಗಿದೆ. ತೆರಿಗೆ ಕಟ್ಟದಿದ್ದರೆ ಆಸ್ತಿ ಮುಟ್ಟುಗೋಲು ಹಾಕುವ ಎಚ್ಚರಿಕೆಯನ್ನು ಸಹ ನೀಡಲಾಗಿದೆ. ಎಷ್ಟೇ ಹೇಳಿದರೂ ಮಂತ್ರಿ ಮಾಲ್ ನ ಆಡಳಿತಾಧಿಕಾರಿ ಮಾತ್ರ ಕೇಳುತ್ತಿಲ್ಲ. ಬಿಬಿಎಂಪಿ ಪಶ್ಚಿಮ ವಲಯದಲ್ಲಿ ಅತೀ ದೊಡ್ಡ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರ ಪಟ್ಟಿಯಲ್ಲಿ ಮಂತ್ರಿ ಮಾಲ್ ಮೊದಲ ಸ್ಥಾನದಲ್ಲಿದೆ.

    ಈ ಕುರಿತು ಮಾಹಿತಿ ನೀಡಿರುವ ಬಿಬಿಎಂಪಿ ಪಶ್ಚಿಮ ವಲಯದ ಜಂಟಿ ಆಯುಕ್ತ ಶಿವಸ್ವಾಮಿ, ಕಳೆದ 3 ವರ್ಷದಿಂದ ಬಡ್ಡಿ ಸೇರಿ ಒಟ್ಟು 39 ಕೋಟಿ ರೂ.ಗಳನ್ನು ಬಾಕಿ ಉಳಿಸಿಕೊಂಡಿದ್ದರು. ಈ ಪೈಕಿ ಡಿಡಿ ಮೂಲಕ ಇಂದು 5 ಕೋಟಿ ರೂ.ಗಳಷ್ಟು ಪಾವತಿ ಮಾಡಿದ್ದಾರೆ. ಇನ್ನೂ 34 ಕೋಟಿ ರೂ.ಗಳನ್ನು ಅಕ್ಟೋಬರ್ ಕೊನೆಯಲ್ಲಿ ನೀಡುವುದಾಗಿ ಹೇಳಿದ್ದಾರೆ. ಕೊರೊನಾ ನೆಪ ಹೇಳಿದ್ದರು. ಆದರೆ ಸೆಪ್ಟೆಂಬರ್ ಒಳಗಡೆ ಪೂರ್ತಿ ತೆರಿಗೆ ಕಟ್ಟುವಂತೆ ನೋಟಿಸ್ ನೀಡಲಾಗಿತ್ತು. ಆದರೆ ಆರ್ಥಿಕ ಸಂಕಷ್ಟದ ಹಿನ್ನೆಲೆ ತೆರಿಗೆ ಪಾವತಿಸಲು ಆಗುತ್ತಿಲ್ಲ ಎಂದು ಹೇಳಿದ್ದರು ಎಂದು ತಿಳಿಸಿದ್ದಾರೆ.