ಕನ್ನಡದ ಮತ್ತೋರ್ವ ನಟಿ ಹೊಸ ಜೀವನಕ್ಕೆ ಕಾಲಿಡಲು ಸಿದ್ಧರಾಗಿದ್ದಾರೆ. ಕೆಂಡ ಸಂಪಿಗೆ ಸಿನಿಮಾ ಮೂಲಕ ಚಿತ್ರೋದ್ಯಮಕ್ಕೆ ಕಾಲಿಟ್ಟ ಮಾನ್ವಿತಾ ಕಾಮತ್ (Manvita Kamat) ಮೇ 1ರಂದು ಹೊಸ ಜೀವನಕ್ಕೆ ಕಾಲಿಡುತ್ತಿದ್ದಾರೆ. ಮದುವೆ ಕುರಿತಾದ ಡಿಜಿಟೆಲ್ ಆಮಂತ್ರಣ ಪತ್ರಿಕೆಯನ್ನು ಸೋಷಿಯಲ್ ಮೀಡಿಯಾದಲ್ಲಿ ಅವರು ಅಪ್ ಲೋಡ್ ಮಾಡಿದ್ದಾರೆ.
ಅರುಣ್ ಎನ್ನುವವರ ಜೊತೆ ಮಾನ್ವಿತಾ ಮದುವೆ ಆಗುತ್ತಿದ್ದು, ಮೈಸೂರು ಮೂಲದ ಅರುಣ್ ಸಿನಿಮಾ ರಂಗಕ್ಕೆ ಹತ್ತಿರದವರೇ ಎಂದು ಹೇಳಲಾಗುತ್ತಿದೆ. ಏಪ್ರಿಲ್ 30ಕ್ಕೆ ಅರಿಶಿನ ಶಾಸ್ತ್ರ ಮತ್ತು ಮೇ 1ಕ್ಕೆ ಮದುವೆ ನಡೆಯಲಿದೆ.
ಆರ್.ಜೆಯಾಗಿ ವೃತ್ತಿಯನ್ನು ಆರಂಭಿಸಿದ್ದ ಮಾನ್ವಿತಾ ಆನಂತರ ಸಿನಿಮಾ ರಂಗಕ್ಕೆ ಬಂದರು. ಸೂರಿ ನಿರ್ದೇಶನದ ಕೆಂಡ ಸಂಪಿಗೆ ಸಿನಿಮಾ ಅವರಿಗೆ ಹೆಸರು ತಂದುಕೊಟ್ಟಿತು. ಆನಂತರ ಟಗರು ಸಿನಿಮಾದ ಮೂಲಕ ಸಾಕಷ್ಟು ಜನಕ್ಕೆ ಪರಿಚಯವಾದರು. ಅಲ್ಲಿಂದ ಟಗರು ಪುಟ್ಟಿ ಎಂದೇ ಫೇಮಸ್ ಆದರು ಮಾನ್ವಿತಾ.
ಎಸ್ ಆರ್ ವೆಂಕಟೇಶ್ ಗೌಡ ನಿರ್ಮಿಸಿರುವ ಹಾಗೂ ನಕುಲ್ ಗೌಡ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ ‘BAD’ ಚಿತ್ರಕ್ಕಾಗಿ ಖ್ಯಾತ ಸಾಹಿತಿ ಕವಿರಾಜ್ ‘ಮಾತಿಗೂ ಮಾತಿಗೂ’ ಎಂಬ ಸುಂದರ ಯುಗಳಗೀತೆ ಬರೆದಿದ್ದಾರೆ. ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಹಾಡನ್ನು ಸರಿಗಮಪ ಖ್ಯಾತಿಯ ಪೃಥ್ವಿ ಭಟ್ ಹಾಗೂ ಸುನೀಲ್ ಗುಜಗೊಂಡ ಸುಶ್ರಾವ್ಯವಾಗಿ ಹಾಡಿದ್ದಾರೆ. ಈಗಾಗಲೇ ಟೀಸರ್ ಹಾಗೂ ಟ್ರೈಲರ್ ಮೂಲಕ ಸದ್ದು ಮಾಡುತ್ತಿರುವ ಈ ಚಿತ್ರ, ಹಾಡುಗಳ ಮೂಲಕವೂ ಜನಪ್ರಿಯವಾಗುತ್ತಿದೆ.
ಅರ್ಜುನ್ ಜನ್ಯ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ನಿರ್ದೇಶಕ ಪಿ.ಸಿ.ಶೇಖರ್ ಅವರೆ ಸಂಕಲನ ಕಾರ್ಯ ಮಾಡಿದ್ದಾರೆ. ಜಿ.ರಾಜಶೇಖರ್ ಕಲಾ ನಿರ್ದೇಶನ ಹಾಗೂ ಶಕ್ತಿ ಶೇಖರ್ ಛಾಯಾಗ್ರಹಣವಿರುವ ಚಿತ್ರಕ್ಕೆ ಸಚಿನ್ ಜಡೇಶ್ವರ ಎಸ್ ಬಿ ಸಂಭಾಷಣೆ ಬರೆದಿದ್ದಾರೆ.
ಪ್ರೀತಿಯ ರಾಯಭಾರಿ ಚಿತ್ರದ ಮೂಲಕ ಜನರ ಮನಗೆದ್ದಿರುವ ನಕುಲ್ ಗೌಡ (Nakul) ಚಿತ್ರದ ನಾಯಕನಾಗಿ ಕಾಣಿಸಿಕೊಂಡಿದ್ದು, ಮಾನ್ವಿತ ಹರೀಶ್ (Manvita Kamat), ಸಾಯಿ ಕೃಷ್ಣ, ಅಪೂರ್ವ ಭಾರದ್ವಾಜ್, ಮಂಜುನಾಥ್ , ಅಶ್ವಿನಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಕಾಮ, ಕ್ರೋಧ ಮೊದಲಾದ ಅರಿಷಡ್ವರ್ಗಗಳನ್ನು ಪ್ರತಿನಿಧಿಸುವ ಆರು ಪಾತ್ರಗಳಲ್ಲಿ ಆರು ಜನ ಕಲಾವಿದರು ಅಭಿನಯಿಸಿರುವುದು ಈ ಚಿತ್ರದ ವಿಶೇಷ.
ರಿಚ್ಚಿ (ಹೇಮಂತ್ ಕುಮಾರ್) ನಾಯಕನಾಗಿ ನಟಿಸಿ, ನಿರ್ದೇಶಿಸುತ್ತಿರುವ ರಿಚ್ಚಿ (Ritchie) ಚಿತ್ರದಲ್ಲಿ ಟಗರು ಖ್ಯಾತಿಯ ಮಾನ್ವಿತ ಕಾಮತ್ (Manvita Kamat) ನಟಿಸುತ್ತಿದ್ದಾರೆ. ಖ್ಯಾತ ಗಾಯಕ ಸೋನು ನಿಗಮ್ ಹಾಡಿರುವ (Song), ಅಗಸ್ತ್ಯ ಸಂಗೀತ ಸಂಯೋಜಿಸಿರುವ ‘ಸನಿಹ ನೀ ಇರುವಾಗ’ ಎಂಬ ಹಾಡಿಗೆ ಮಾನ್ವಿತ ಹೆಜ್ಜೆ ಹಾಕಲಿದ್ದಾರೆ. ಜೊತೆಗೆ ಕೆಲವು ಮಾತಿನ ಭಾಗದ ಸನ್ನಿವೇಶಗಳಲ್ಲೂ ಅವರು ಅಭಿನಯಿಸಲಿದ್ದಾರೆ ಎಂದು ರಿಚ್ಚಿ ತಿಳಿಸಿದ್ದಾರೆ.
ಈ ಸಿನಿಮಾದಲ್ಲಿ ಮಾನ್ವಿತಾ ಕಾಮತ್ ಕೇವಲ ಹಾಡಿಗೆ ಮಾತ್ರ ಹೆಜ್ಜೆ ಹಾಕುತ್ತಿಲ್ಲ, ಜೊತೆಗೆ ಕೆಲವು ದೃಶ್ಯಗಳಲ್ಲೂ ಅವರು ನಟಿಸಲಿದ್ದಾರೆ. ಹಾಗಾಗಿ ಈ ಸಿನಿಮಾವನ್ನು ಅವರು ಒಪ್ಪಿಕೊಂಡಿದ್ದಾರಂತೆ. ವಿಶೇಷ ಸನ್ನಿವೇಶಗಳು ಅವು ಆಗಿರಲಿವೆ ಎನ್ನುವುದು ಚಿತ್ರತಂಡದ ಮಾತು.
ಅಗಸ್ತ್ಯ ಕ್ರಿಯೇಷನ್ಸ್ ಲಾಂಛನದಲ್ಲಿ ವೆಂಕಟಾಚಲಯ್ಯ ಅವರು ನಿರ್ಮಾಣ ಮಾಡುತ್ತಿರುವ ಈ ಚಿತ್ರಕ್ಕೆ ರಾಕೇಶ್ ರಾವ್ ಅವರ ಸಹ ನಿರ್ಮಾಣವಿದೆ. ರಿಚ್ಚಿ ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಒಂದು ಹಾಡು ಹಾಗೂ ಕೆಲವು ಮಾತಿನ ಭಾಗದ ಚಿತ್ರೀಕರಣ ಮಾತ್ರ ಬಾಕಿಯಿದೆ. ಅಜಿತ್ ಕುಮಾರ್ ಅವರ ಛಾಯಾಗ್ರಹಣ ರಿಚ್ಚಿ ಚಿತ್ರಕ್ಕಿದೆ.
ಸ್ಯಾಂಡಲ್‌ವುಡ್ ಖ್ಯಾತ ನಟಿ ಮಾನ್ವಿತಾ ಕಾಮತ್ (Manvita Kamat) ಮತ್ತೆ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. ಗ್ಯಾಪ್‌ನ ಬಳಿಕ ಮಾನ್ವಿತಾ ಮತ್ತೆ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಕೆಂಡಸಂಪಿಗೆ ಬ್ಯೂಟಿ ಲೋಹಿತ್ (Lohit) ನಿರ್ದೇಶನದ ‘ಕ್ಯಾಪ್ಚರ್’ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರುತ್ತಿದ್ದಾರೆ. ಕ್ಯಾಪ್ಟರ್ ಸಿನಿಮಾದಲ್ಲಿ ಪ್ರಿಯಾಂಕಾ ಉಪೇಂದ್ರ (Priyanka) ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ವಿಶೇಷ ಎಂದರೆ ಪ್ರಿಯಾಂಕಾ ಮಗಳ ಪಾತ್ರದಲ್ಲಿ ಮಾನ್ವಿತಾ ನಟಿಸಿದ್ದಾರೆ.
ಕ್ಯಾಪ್ಚರ್ (Capture) ಈಗಾಗಲೇ ಗೊತ್ತಿರುವ ಹಾಗೆ ಇದೊಂದು ಹಾರರ್ ಸಿನಿಮಾ. ಸಂಪೂರ್ಣ ಸಿನಿಮಾ ಸಿಸಿ ಟಿವಿ ಕಾನ್ಸೆಪ್ಟ್ ನಲ್ಲಿ ಚಿತ್ರೀಕರಣ ಮಾಡಲಾಗಿದೆ. ವಿಶ್ವದಲ್ಲಿಯೇ ಮೊದಲ ಬಾರಿಗೆ ಈ ರೀತಿಯ ಪ್ರಯತ್ನ ಮಾಡುತ್ತಿರುವುದು ವಿಶೇಷ. ಈಗಾಗಲೇ ಪ್ರಿಯಾಂಕಾ ಉಪೇಂದ್ರ ಅವರ ಫಸ್ಟ್ ಲುಕ್ ರಿಲೀಸ್ ಮಾಡಲಾಗಿದೆ. ಇದೀಗ ಮಾನ್ವಿತಾ ಕೂಡ ನಟಿಸುತ್ತಿದ್ದಾರೆ ಎನ್ನುವ ವಿಚಾರ ಕ್ಯಾಪ್ಚರ್ ಮೇಲಿನ ಕುತೂಹಲ ಹೆಚ್ಚಿಸಿದೆ. ಮಾನ್ವಿತಾ ಈ ಸಿನಿಮಾದಲ್ಲಿ ಸ್ನೇಹಾ ಎನ್ನುವ ಪಾತ್ರದಲ್ಲಿ ನಟಿಸಿದ್ದಾರೆ. ಮೊದಲ ಬಾರಿಗೆ ಹಾರರ್ ಸಿನಿಮಾಗೆ ಬಣ್ಣ ಹಚ್ಚಿದ್ದಾರೆ.
‘ಮೊದಲ ಬಾರಿಗೆ ಹಾರರ್ ಸಿನಿಮಾದಲ್ಲಿ ನಟಿಸಿದ್ದೇನೆ. ಮೊದಲ ತುಂಬಾ ಭಯವಿತ್ತು. ಆದರೆ ಪಾತ್ರ ಚೆನ್ನಾಗಿದೆ ಎನ್ನುವ ಕಾರಣಕ್ಕೆ ಒಪ್ಪಿಕೊಂಡೆ. 15 ದಿನಗಳು ಗೋವಾದಲ್ಲಿ ಶೂಟಿಂಗ್ ಮಾಡಿದ್ವಿ, ಪ್ರಿಯಾಂಕಾ ಮೇಡಮ್ ಜೊತೆ ಕೆಲಸ ಮಾಡಿದ್ದು ತುಂಬಾ ಇಷ್ಟವಾಯಿತು. ಶೂಟಿಂಗ್ ಮುಗಿಸಿ ಮನೆಗೆ ಬಂದಾಗ ತುಂಬಾ ದೃಷ್ಟಿ ಆಗಿತ್ತು ಅನಿಸುತ್ತೆ. ಜ್ವರ ಕೂಡ ಬಂದಿತ್ತು. ದೃಷ್ಟಿ ತೆಗಿಸಿಕೊಂಡ ಮೇಲೆ ಸರಿ ಆಯಿತು’ ಎಂದು ಹೇಳಿದರು.
ಮಾನ್ವಿತಾ ಕೊನೆಯದಾಗಿ ‘ಶಿವ 143’ ಸಿನಿಮಾದಲ್ಲಿ ನಟಿಸಿದ್ದರು. ಇದೀಗ ವರ್ಷದ ಬಳಿಕ ತೆರೆಮೇಲೆ ಬರುತ್ತಿದ್ದಾರೆ. ಕ್ಯಾಪ್ಚರ್ ಸಿನಿಮಾದಲ್ಲಿ ಮಾನ್ವಿತಾ ಲುಕ್ ಹೇಗಿರಲಿದೆ ಎನ್ನುವುದು ಸದ್ಯದಲ್ಲೇ ರಿವೀಲ್ ಆಗಲಿದೆ. ಕ್ಯಾಪ್ಚರ್ ಸಿನಿಮಾಗೆ ರವಿರಾಜ್ ಅವರು ತಮ್ಮ ಶ್ರಿ ದುರ್ಗಪರಮೇಶ್ವರಿ ಪ್ರೊಡಕ್ಷನ್ ಮೂಲಕ ನಿರ್ಮಾಣ ಮಾಡುತ್ತಿದ್ದಾರೆ. ಈ ಬ್ಯಾನರ್‌ನಲ್ಲಿ ಮೂಡಿಬರುತ್ತಿರುವ ಮೊದಲ ಸಿನಿಮಾ ಇದಾಗಿದೆ. ಈಗಾಗಲೇ ಬಹುತೇಕ ಶೂಟಿಂಗ್ ಮುಗಿಸಿರುವ ಸಿನಿಮಾತಂಡ ಸದ್ಯದಲ್ಲೇ ಚಿತ್ರಮಂದಿರದ ಅಂಗಳಕ್ಕೆ ಕಾಲಿಡಲಿದೆ.
ಟಗರು ಸೇರಿದಂತೆ ಅನೇಕ ಚಿತ್ರಗಳಲ್ಲಿ ತಮ್ಮ ಅಮೋಘ ಅಭಿನಯದ ಮೂಲಕ ಜನಪ್ರಿಯರಾಗಿರುವ ಮಾನ್ವಿತ ಕಾಮತ್ (Manvita Kamat), ಪ್ರಸ್ತುತ ಪಿ.ಸಿ ಶೇಖರ್ (PC Shekhar) ನಿರ್ದೇಶನದ ‘BAD ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈಗಾಗಲೇ ಈ ಚಿತ್ರ ಫಸ್ಟ್ ಲುಕ್ ಮೂಲಕ ಜನರ ಮನ ಗೆದ್ದಿದೆ. ಪ್ರಮುಖ ಪಾತ್ರಧಾರಿ ನಕುಲ್ ಗೌಡ ಅವರ ಲುಕ್ ಗೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಮಾನ್ವಿತ ಕಾಮತ್ ಅವರ ಪಾತ್ರದ ಕುರಿತು ಮಾತನಾಡುವ ನಿರ್ದೇಶಕ ಪಿ.ಸಿ.ಶೇಖರ್, ಈ ಚಿತ್ರದಲ್ಲಿ ಮಾನ್ವಿತ ಅವರ ಪಾತ್ರದ ಹೆಸರು ಪವಿತ್ರ(ಪವಿ). ತುಂಬಾ ಬೋಲ್ಡ್ ಕ್ಯಾರೆಕ್ಟರ್ ಅವರದು. ವಿಲೇಜ್ ಬ್ಯಾಕ್ ಡ್ರಾಪ್ ನಲ್ಲಿ ಅವರ ಸ್ಟೋರಿ ಸಾಗುತ್ತಾ ಹೋಗುತ್ತದೆ. ನಾನು ಮುಂಚೆ ತಿಳಿಸಿದ ಹಾಗೆ ಕಾಮ, ಕ್ರೋಧ ಸೇರಿದಂತೆ ಅರಿಷಡ್ವರ್ಗಗಳನ್ನು ಪ್ರತಿನಿಧಿಸುವ ಆರು ಪಾತ್ರಗಳು ನಮ್ಮ ಚಿತ್ರದಲ್ಲಿದೆ. ಈ ಆರು ಪಾತ್ರಗಳಲ್ಲದೆ ಇನ್ನೊಂದು ಪಾತ್ರ ಕೂಡ ಇದೆ ಎಂದು. ಆ ಪಾತ್ರದಲ್ಲಿ ಮಾನ್ವಿತ ಅಭಿನಯಿಸುತ್ತಿದ್ದಾರೆ ಎಂದರು.
ನನಗೆ ಈ ಚಿತ್ರದ ಪಾತ್ರ ಬಹಳ ಇಷ್ಟವಾಯಿತು. ಪವಿತ್ರ ನನ್ನ ಪಾತ್ರದ ಹೆಸರು. ಯಾವುದಕ್ಕೂ ಅಂಜದ, ಬೋಲ್ಡ್ ಹುಡುಗಿಯ ಪಾತ್ರ ನನ್ನದು. ಈ ಹಿಂದೆ ನಿರ್ದೇಶಕ ಸೂರಿ ಅವರು ಕಾಸ್ಟ್ಯೂಮ್ಸ್ ಇದೇ ರೀತಿ ಇರಬೇಕು ಎಂದು ಆಸಕ್ತಿ ತೋರಿಸುತ್ತಿದ್ದರು. ಅದೇ ರೀತಿ ಪಿ.ಸಿ.ಶೇಖರ್ ಅವರು ಕೂಡ ಕಾಸ್ಟ್ಯೂಮ್ಸ್ ಗೆ ಹೆಚ್ಚು ಒತ್ತು ಕೊಟ್ಟಿದ್ದಾರೆ. ನಾನು ಈವರೆಗೂ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತದ್ದೇನೆ ಎಂದು ನಟಿ ಮಾನ್ವಿತ ಕಾಮತ್ ತಿಳಿಸಿದ್ದಾರೆ. ಇದನ್ನೂ ಓದಿ:ಗಂಡು ಮಗುವಿಗೆ ಜನ್ಮ ನೀಡಿದ ರಾಧಿಕಾ ರಾವ್
ಎಸ್ ಆರ್ ವೆಂಕಟೇಶ್ ಗೌಡ ನಿರ್ಮಾಣದ ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಪಿ.ಸಿ.ಶೇಖರ್ ಸಂಕಲನ ಹಾಗೂ ಶಕ್ತಿ ಶೇಖರ್ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಸಚಿನ್ ಬಿ ಹೊಳಗುಂಡಿ ಸಂಭಾಷಣೆ ಬರೆದಿದ್ದಾರೆ. ಜಿ.ರಾಜಶೇಖರ್ ಅವರ ಕಲಾ ನಿರ್ದೇಶನ “BAD” ಚಿತ್ರಕ್ಕಿದೆ.
ಪ್ರೀತಿಯ ರಾಯಭಾರಿ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದ ನಕುಲ್ ಗೌಡ (Nakul Gowda), ಮಾನ್ವಿತ ಹರೀಶ್, ಸಾಯಿ ಕೃಷ್ಣ, ಅಪೂರ್ವ ಭಾರದ್ವಾಜ್, ಮಂಜುನಾಥ್ , ಅಶ್ವಿನಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಕನ್ನಡದಲ್ಲಿ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿರುವ ನಟಿ ಮಾನ್ವಿತಾ ಕಾಮತ್, ಬಾಲಿವುಡ್ ನಟ ಸೋನು ಸೂದ್ ಅವರಿಗೆ ಧನ್ಯವಾದಗಳನ್ನು ತಿಳಿಸಿ, ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ತಮ್ಮ ತಾಯಿಯ ಚಿಕಿತ್ಸೆಗಾಗಿ ಸೋನು ನೆರವಾಗಿದ್ದನ್ನು ಅವರು ನೆನದಿದ್ದಾರೆ. ನನ್ನ ಕುಟುಂಬದ ಪಾಲಿನ ರಿಯಲ್ ಹೀರೋ ನೀವು ಎಂದು ಸೋನು ಸೂದ್ ಅವರನ್ನು ಗುಣಗಾನ ಮಾಡಿದ್ದಾರೆ.
ಏಪ್ರಿಲ್ ತಿಂಗಳಲ್ಲಿ ಮಾನ್ವಿತಾ ಅವರ ತಾಯಿಗೆ ಕಿಡ್ನಿ ಸಮಸ್ಯೆ ಆಗಿತ್ತು. ಚಿಕಿತ್ಸೆಗಾಗಿ ಒಳ್ಳೆಯ ವೈದ್ಯರನ್ನು ಸಲಹೆ ನೀಡಿ ಎಂದು ಅವರು ಪೋಸ್ಟ್ ಮಾಡಿಕೊಂಡಿದ್ದರು. ಇದನ್ನು ಗಮನಿಸಿದ್ದ ಮಂಗಳೂರಿನ ಸೋನು ಸೂದ್ ಟ್ರಸ್ಟ್, ಮಾನ್ವಿತಾ ಅವರನ್ನು ಸಂಪರ್ಕಿಸಿತ್ತು. ತಾಯಿಯ ಚಿಕಿತ್ಸೆಗೆ ಅಗತ್ಯವಿರುವ ನೆರವನ್ನು ನೀಡುವುದಾಗಿ ಫೌಂಡೇಷನ್ ತಿಳಿಸಿತ್ತು. ತಾನು ಕೊಟ್ಟ ಮಾತಿನಂತೆ ನೆರವಾಗಿದೆ. ಹಾಗಾಗಿಯೇ ಮಾನ್ವಿತಾ ಅವರು ಸೋನು ಅವರನ್ನು ನೆನೆದಿದ್ದಾರೆ. ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ಈಗೀಗ ಚೈತ್ರಾ ಹಳ್ಳಿಕೇರಿ ಮುಖವಾಡ ಕಳಚ್ತಾ ಇದ್ದಾರೆ : ಸ್ಪೂರ್ತಿ ಗೌಡ
ಮಾನ್ವಿತಾ ಅವರ ತಾಯಿ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿ ಬೇಕಾಗುತ್ತದೆ. ಅಲ್ಲದೇ, ಅವರಿಗೆ ಕಿಡ್ನಿ ಕಸಿಯನ್ನೂ ಮಾಡಿಸಬೇಕಿದೆಯಂತೆ. ಈ ಚಿಕಿತ್ಸೆಗೆ ಅಗತ್ಯ ಇರುವ ನೆರವನ್ನೂ ಸೋನು ಸೂದ್ ನೀಡುವುದಾಗಿ ಆಸ್ಪತ್ರೆಗೆ ತಿಳಿಸಿದ್ದಾರಂತೆ. ಆದಷ್ಟು ಬೇಗ ಮಾನ್ವಿತಾ ತಾಯಿಯ ಆರೋಗ್ಯ ಸುಧಾರಿಸಲಿ ಎಂದು ಅವರೂ ಹಾರೈಸಿದ್ದಾರಂತೆ.
ಕೆಂಡಸಂಪಿಗೆ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಪ್ರವೇಶ ಮಾಡಿದ ಮಾನ್ವಿತಾ, ಆನಂತರ ಅನೇಕ ಚಿತ್ರಗಳಿಗೆ ನಾಯಕಿಯಾಗಿ ಆಯ್ಕೆಯಾದರು. ಈ ವಾರ ಮಾನ್ವಿತಾ ನಟನೆಯ ಶಿವ 143 ಸಿನಿಮಾ ರಿಲೀಸ್ ಆಗುತ್ತಿದೆ. ಈ ಸಿನಿಮಾದಲ್ಲಿ ಅವರು ಹೊಸ ಬಗೆಯ ಪಾತ್ರ ಮಾಡಿದ್ದಾರಂತೆ. ಅಲ್ಲದೇ, ಮತ್ತಷ್ಟು ಚಿತ್ರಗಳಿಗೂ ಅವರು ಸಹಿ ಮಾಡಿದ್ದಾರಂತೆ.
Live Tv
[brid partner=56869869 player=32851 video=960834 autoplay=true]