Tag: Marijuana

  • ಮಂಡ್ಯ| ಅಲಂಕಾರಿಕ ಗಿಡ ಅಂತ ಮನೆ ಮುಂದೆಯೇ ಗಾಂಜಾ ಬೆಳೆದ ಭೂಪ

    ಮಂಡ್ಯ| ಅಲಂಕಾರಿಕ ಗಿಡ ಅಂತ ಮನೆ ಮುಂದೆಯೇ ಗಾಂಜಾ ಬೆಳೆದ ಭೂಪ

    ಮಂಡ್ಯ: ಅಲಂಕಾರಿಕ ಗಿಡ ಎಂದು ಜನರನ್ನು ನಂಬಿಸಿ ಮನೆಯ ಮುಂದೆಯೇ ಐದು ಗಾಂಜಾ ಗಿಡ ಬೆಳೆದಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಶ್ರೀನಿವಾಸ ಅಗ್ರಹಾರದಲ್ಲಿ‌ ಜರುಗಿದೆ.

    ಶ್ರೀನಿವಾಸ ಅಗ್ರಹಾರದ ಸುರೇಶ್ ಎಂಬಾತ ತನ್ನ ಮನೆಯ ಮುಂದೆ ಐದು ಗಾಂಜಾ ಗಿಡಗಳನ್ನು ಬೆಳೆದಿದ್ದ. ಸ್ಥಳೀಯರು ಇದು ಯಾವ ಗಿಡ ಎಂದು‌ ಕೇಳಿದಾಗ ಸುರೇಶ್ ಇದು ಅಲಂಕಾರಿಕ‌‌ ಗಿಡ ಎಂದು‌ ಹೇಳುತ್ತಿದ್ದ. ಗಾಂಜಾ ಗಿಡ ಹೂ ಬಿಡುವ ಹಂತಕ್ಕೆ ಬಂದ ವೇಳೆ ಗಿಡಗಳಿಗೆ ಸೀರೆ ಸುತ್ತಿ ಮರೆ ಮಾಡಿದ್ದಾನೆ. ಈ ವಿಚಾರವನ್ನು ಸ್ಥಳೀಯರೊಬ್ಬರು ಶ್ರೀರಂಗಪಟ್ಟಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

    ಮಾಹಿತಿ ಆಧರಿಸಿ ದಾಳಿ‌ ನಡೆಸಿದ ಪೊಲೀಸರು ಪರಿಶೀಲನೆ ಮಾಡಿದ ವೇಳೆ ಅದು ಅಲಂಕಾರಿಕ‌ ಗಿಡ ಅಲ್ಲ ಗಾಂಜಾ ಗಿಡ ಎಂದು‌ ತಿಳಿದು ಬಂದಿದೆ. ಸದ್ಯ 9 ಕೆಜಿಯ 3 ಲಕ್ಷ ಮೌಲ್ಯದ ಗಾಂಜಾ ಗಿಡವನ್ನು ಪೊಲೀಸರು ಜಪ್ತಿ ಮಾಡಿ ಸುರೇಶ್‌ನನ್ನು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

  • ಬೆಂಗಳೂರು | ಎನ್‌ಸಿಬಿ ಅಧಿಕಾರಿಗಳ ಭರ್ಜರಿ ಬೇಟೆ – 50 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ

    ಬೆಂಗಳೂರು | ಎನ್‌ಸಿಬಿ ಅಧಿಕಾರಿಗಳ ಭರ್ಜರಿ ಬೇಟೆ – 50 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ

    – ಓರ್ವ ಲಂಕಾ ಪ್ರಜೆ ಸೇರಿ ಮೂವರ ಬಂಧನ

    ಬೆಂಗಳೂರು: ಭರ್ಜರಿ ಕಾರ್ಯಾಚರಣೆಯೊಂದರಲ್ಲಿ ಎನ್‌ಸಿಬಿ ಅಧಿಕಾರಿಗಳು (NCB Officers) 50 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು (Narcotics) ಜಪ್ತಿ ಮಾಡಿರುವ ಘಟನೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.

    ಕಾರ್ಯಾಚರಣೆ ವೇಳೆ ಮೂವರು ಆರೋಪಿಗಳನ್ನ ಎನ್‌ಸಿಬಿ ಬಂಧಿಸಿದೆ. ಬಂಧಿತರಿಂದ ಒಟ್ಟು 45 ಕೆ ಜಿ ಹೈಡ್ರೋಗಾಂಜಾ, 6 ಕೆಜಿ ಸೈಲೋಸಿಬಿನ್ ಅಣಬೆಯನ್ನ ಜಪ್ತಿ ಮಾಡಲಾಗಿದೆ. ಇದನ್ನೂ ಓದಿ: ಬಿಹಾರದಲ್ಲಿ ಸೀಟು ಹಂಚಿಕೆ ಇತ್ಯರ್ಥ – ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ

    ಮೊದಲಿಗೆ ಥೈಲ್ಯಾಂಡ್‌ನಿಂದ ಡ್ರಗ್ಸ್‌ ಸಾಗಾಟ ಮಾಡುತ್ತಿರುವುದಾಗಿ ಅಧಿಕಾರಿಗಳಿಗೆ ಮಾಹಿತಿ ಬಂದಿತ್ತು. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ಕೈಗೊಂಡ ಅಧಿಕಾರಿಗಳು ಕೊಲಂಬೋದಿಂದ‌ ಬರ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದರು. ಬಂಧಿತರಿಂದ 31 ಕೆಜಿ ಹೈಡ್ರೋಗಾಂಜಾ, 4 ಕೆಜಿ ಸೈಲೋಸಿಬಿನ್ ಅಣಬೆ ಜಪ್ತಿ ಮಾಡಿದ್ದರು. ಇವರಿಬ್ಬರ ವಿಚಾರಣೆ ವೇಳೆ ಮುಂದಿನ ಫ್ಲೈಟ್‌ನಲ್ಲಿ ಹ್ಯಾಂಡ್ಲರ್‌ ಶ್ರೀಲಂಕಾದಿಂದ ಬರುವ ಮಾಹಿತಿ ಸಿಕ್ಕಿತ್ತು. ಅದರಂತೆ ಕಾದು ಕುಳಿತಿದ್ದ ಅಧಿಕಾರಿಗಳು ಶ್ರೀಲಂಕಾದ ಪ್ರಜೆಯನ್ನೂ ಬಂಧಿಸಿ, ಆತನ ಬಳಿಯಿದ್ದ 14 ಕೆ ಜಿ ಹೈಡ್ರೋಗಾಂಜಾ, 2 ಕೆಜಿ ಅಣಬೆಯನ್ನು ಜಪ್ತಿ ಮಾಡಿದರು.

    ಆರೋಪಿಗಳು ಒಟ್ಟು 250 ಫುಡ್‌ ಟಿನ್‌ಗಳಲ್ಲಿ ಡ್ರಗ್ಸ್ ಸೀಲ್ ಮಾಡಿಕೊಂಡು ಬಂದಿದ್ದರು. ಇನ್ನೂ ಈ ವರ್ಷ ಎನ್‌ಸಿಬಿ 100 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಿದೆ. 18 ಕೇಸ್‌ಗಳಲ್ಲಿ ಪ್ರಕರಣಗಳಲ್ಲಿ 45 ಆರೋಪಿಗಳನ್ನ ಬಂಧಿಸಲಾಗಿದೆ. ಕೇರಳ, ರಾಜಸ್ಥಾನ, ಗುಜರಾತ್, ಮಾಹಾರಾಷ್ಟ್ರದಲ್ಲಿ ಗಾಂಜಾ ದಂಧೆ ನಡೆಸುತ್ತಿದ್ದ ಆರೋಪಿಗಳು ಎನ್‌ಸಿಬಿ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ. ಇದನ್ನೂ ಓದಿ: ʻಏಯ್ ಕರಿ ಟೋಪಿ ಎಂಎಲ್‌ಎ ಬಾರಪ್ಪʼ – ಡಿಕೆಶಿ Vs ವರ್ಸಸ್ ಮುನಿರತ್ನ ನಡ್ವೆ ʻಕರಿ ಟೋಪಿʼ ಕದನ!

  • ಉಡುಪಿ: ಟ್ರಕ್‌ನಲ್ಲಿದ್ದ 35 ಲಕ್ಷ ಮೌಲ್ಯದ 65 ಕೆಜಿ ಗಾಂಜಾ ಸೀಜ್‌

    ಉಡುಪಿ: ಟ್ರಕ್‌ನಲ್ಲಿದ್ದ 35 ಲಕ್ಷ ಮೌಲ್ಯದ 65 ಕೆಜಿ ಗಾಂಜಾ ಸೀಜ್‌

    ಉಡುಪಿ: ಕರಾವಳಿ ಜಿಲ್ಲೆ ಉಡುಪಿಯಲ್ಲಿ ಗಾಂಜಾ ಸಾಗಾಟ ಮಾರಾಟ ಮತ್ತು ಸೇವನೆ ಹೆಚ್ಚಾಗುತ್ತಿದೆ. ಪ್ರವಾಸಿಗರು ಮತ್ತು ವಿದ್ಯಾರ್ಥಿಗಳನ್ನು ಪೆಡ್ಲರ್‌ಗಳು ಟಾರ್ಗೆಟ್ ಮಾಡುತ್ತಿದ್ದಾರೆ. ಈ ನಡುವೆ ಟ್ರಕ್ ಒಂದರಲ್ಲಿ 65 ಕೆಜಿ ಗಾಂಜಾ ಉಡುಪಿ ಮಾರ್ಗದಲ್ಲಿ ಚಲಿಸುತ್ತಿದ್ದಾಗ ಪೊಲೀಸರು ದಾಳಿ ನಡೆಸಿ ಮಾಲು ಸಮೇತ ಇಬ್ಬರನ್ನು ವಶಪಡಿಸಿಕೊಂಡಿದ್ದಾರೆ.

    ಉಡುಪಿಯಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಮಲ್ಪೆ ವೃತ್ತ ನಿರೀಕ್ಷಕ, ಸೆನ್ ವಿಭಾಗದ ಇನ್ಸ್ಪೆಕ್ಟರ್ ನಿತ್ಯಾನಂದ ನಾಯಕ್ ಟ್ರಕ್ ಒಂದನ್ನು ಅಡ್ಡ ಹಾಕಿದ್ದಾರೆ. ಅನುಮಾನ ಬಂದು ತಪಾಸಣೆ ನಡೆಸಿದಾಗ ಪೊಲೀಸರಿಗೆ ಶಾಕ್ ಕಾದಿತ್ತು.

    ಉಡುಪಿಯ ಕಿನ್ನಿಮೂಲ್ಕಿ ಜಂಕ್ಷನ್‌ನಲ್ಲಿ ಲಾರಿಯನ್ನು ಅಡ್ಡ ಹಾಕಿದ ಪೊಲೀಸರು ತಪಾಸಣೆ ನಡೆಸಿದ್ದಾರೆ. ಗೋಣಿಯಲ್ಲಿ ಅನುಮಾನಾಸ್ಪದ ವಸ್ತು ಇರುವುದು ಪತ್ತೆಯಾಗಿದೆ. ತೆಗೆದು ನೋಡಿದಾಗ ಅದರಲ್ಲಿ ಅಪಾರ ಪ್ರಮಾಣದ ಗಾಂಜಾ ಸಿಕ್ಕಿದೆ.

    ಮಹಜರು ನಡೆಸಿ ತೂಕ ಹಾಕಿದಾಗ 65 ಕೆಜಿಗಿಂತ ಹೆಚ್ಚು ಗಾಂಜಾ ಇರುವುದು ಬೆಳಕಿಗೆ ಬಂದಿದೆ. ಇಬ್ಬರು ಆರೋಪಿಗಳಾದ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಗಣೇಶ್, ಆಂದ್ರ ಪ್ರದೇಶದ ಅನಂತಪುರಂನ ಗೋಪಾಲ ರೆಡ್ಡಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆಂಧ್ರಪ್ರದೇಶ-ಒರಿಸ್ಸಾ ಗಡಿಭಾಗದಿಂದ ಈ ಗಾಂಜಾ ರಾವಾನೆಯಾಗಿರುವ ಸಾಧ್ಯತೆಯಿದೆ.

    ಗಾಂಜಾ ಮೌಲ್ಯ 35 ಲಕ್ಷ ರುಪಾಯಿ ಎಂದು ಅಂದಾಜಿಸಲಾಗಿದೆ. ಮಾರುಕಟ್ಟೆಯಲ್ಲಿ 50 ಲಕ್ಷ ವರೆಗೆ ಡಿಮ್ಯಾಂಡ್ ಇದೆ ಎನ್ನಲಾಗಿದೆ. 20 ಲಕ್ಷ ರೂಪಾಯಿ ಮೌಲ್ಯದ ಗೂಡ್ಸ್ ಲಾರಿ, ಎರಡು ಮೊಬೈಲ್ ಫೋನ್ ನಗದು ಸೇರಿದಂತೆ ಒಟ್ಟು 72,21,520 ರುಪಾಯಿ ಸ್ವತ್ತುಗಳನ್ನು ವಶಪಡಿಸಲಾಗಿದೆ. ಅಪಾರ ಪ್ರಮಾಣದ ಗಾಂಜಾ ಸಾಗಾಟವಾಗುತ್ತಿದ್ದದ್ದು ಎಲ್ಲಿಗೆ ಎಂಬುದನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕರಾವಳಿಯ ಪ್ರವಾಸೋದ್ಯಮ, ಶಿಕ್ಷಣ ಕ್ಷೇತ್ರವನ್ನು ಟಾರ್ಗೆಟ್ ಮಾಡುತ್ತಿರುವುದು ನಿರಂತರವಾಗಿ ನಡೆಯುತ್ತಿದೆ. ಪೊಲೀಸರು ಇದರ ಮೂಲಕ್ಕೆ ಇಳಿದು ತನಿಖೆ ನಡೆಸಬೇಕು ಎಂಬುದು ಸಾರ್ವಜನಿಕರ ಒತ್ತಾಯಿಸಿದ್ದಾರೆ.

  • ಜಮೀನಿನಲ್ಲಿ ಬೆಳೆದಿದ್ದ 12 ಲಕ್ಷ ಮೌಲ್ಯದ ಗಾಂಜಾ ವಶ – ಆರೋಪಿ ಬಂಧನ

    ಜಮೀನಿನಲ್ಲಿ ಬೆಳೆದಿದ್ದ 12 ಲಕ್ಷ ಮೌಲ್ಯದ ಗಾಂಜಾ ವಶ – ಆರೋಪಿ ಬಂಧನ

    ಚಾಮರಾಜನಗರ: ಗಾಂಜಾ ಬೆಳೆದಿದ್ದ ಜಮೀನಿನ ಮೇಲೆ ಪೊಲೀಸರು ದಾಳಿ ನಡೆಸಿ 12 ಲಕ್ಷ ರೂಪಾಯಿ ಮೌಲ್ಯದ ಗಾಂಜಾ ಗಿಡಗಳನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

    ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕುರಟ್ಟಿಹೊಸೂರು ಗ್ರಾಮದ ಮಾರ ಎಂಬಾತ ತನ್ನ ಜಮೀನಿನಲ್ಲಿ ಗಾಂಜಾ ಬೆಳೆದಿದ್ದ. ಮಾಹಿತಿ ಮೇರೆಗೆ ರಾಮಾಪುರ ಠಾಣೆಯ ಪೊಲೀಸರು ದಾಳಿ ನಡೆಸಿದ್ದರು.

    211 ಕೆಜಿ ತೂಕದ ಗಾಂಜಾ ಗಿಡಗಳನ್ನು ವಶಪಡಿಸಿಕೊಂಡು ಆರೋಪಿ ಮಾರನನ್ನು ಬಂಧಿಸಿದ್ದಾರೆ. ರಾಮಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ತುಮಕೂರು| ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರ ಬಂಧನ

    ತುಮಕೂರು| ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರ ಬಂಧನ

    ತುಮಕೂರು: ಕೊರಟಗೆರೆ (Koratagere) ಪಟ್ಟಣ ಸೇರಿದಂತೆ ತುಮಕೂರು (Tumakuru) ತಾಲೂಕಿನ ಕೆಲವೆಡೆಗಳಲ್ಲಿ ಗಾಂಜಾ (Marijuana) ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಕೊರಟಗೆರೆ ಪೊಲೀಸರು ಬಂಧಿಸಿದ್ದಾರೆ.

    ತುಮಕೂರು ಕ್ಯಾತಸಂದ್ರ ನಿವಾಸಿ ಚೇತನ್, ಗೋಕುಲ ಬಡಾವಣೆಯ ನಾಗರಾಜು, ಊರುಕೆರೆಯ ಪ್ರೀತಂ, ಊರುಕೆರೆ ಚೆಕ್‌ಪೋಸ್ಟ್ ಬಳಿಯ ಸಿಂಗಾವೇಲು ಬಂಧಿತ ಆರೋಪಿಗಳು. ಬಂಧಿತರು ಬೇರೆಡೆಯಿಂದ ಗಾಂಜಾವನ್ನು ಪ್ಯಾಕೆಟ್‌ಗಳಲ್ಲಿ ತಂದು ಪಟ್ಟಣ ಸೇರಿದಂತೆ ಕೆಲವು ಕಡೆಗಳಲ್ಲಿ ಮಾರಾಟ ಮಾಡುತ್ತಿದ್ದರು. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ‘ಮಹಾಯುತಿ’ ವಿಜಯ – ಎನ್‌ಡಿಎ ಮೈತ್ರಿಕೂಟ ಪ್ರಮಾಣ ವಚನ ನಾಳೆ?

    ಪಟ್ಟಣದ ಹೊರವಲಯದ ಬೈಲಾಂಜನೇಯ ದೇವಸ್ಥಾನದ ಬಳಿ ಸಣ್ಣ ಸಣ್ಣ ಪ್ಯಾಕ್‌ಗಳಲ್ಲಿ ಗಾಂಜಾ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಆಧರಿಸಿ ಪಿಎಸ್‌ಐ ಚೇತನ್ ಕುಮಾರ್ ನೇತೃತ್ವದ ತಂಡ ದಾಳಿ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಉಪಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ರಾಜ್ಯಾಧ್ಯಕ್ಷರೊಬ್ಬರೇ ಹೊಣೆಯಲ್ಲ: ಎನ್ ರವಿಕುಮಾರ್

  • ಗಾಂಜಾ ದಾಸ್ತಾನು ಇಟ್ಟುಕೊಂಡಿದ್ದ ಮನೆ ಮೇಲೆ ಪೊಲೀಸರ ದಾಳಿ – ಮೂವರ ಬಂಧನ

    ಗಾಂಜಾ ದಾಸ್ತಾನು ಇಟ್ಟುಕೊಂಡಿದ್ದ ಮನೆ ಮೇಲೆ ಪೊಲೀಸರ ದಾಳಿ – ಮೂವರ ಬಂಧನ

    – 6.43 ಲಕ್ಷ ರೂ. ಮೌಲ್ಯದ ಗಾಂಜಾ ವಶಕ್ಕೆ

    ಉಡುಪಿ: ಗಾಂಜಾ ದಾಸ್ತಾನು ಇಟ್ಟುಕೊಂಡಿದ್ದ ಮನೆಗೆ ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗುಲ್ವಾಡಿಯ ಉದಯನಗರದಲ್ಲಿ ನಡೆದಿದೆ.

    ಕುಂದಾಪುರ ಗ್ರಾಮಾಂತರ ಪೊಲೀಸರು ಕಾರ್ಯಚರಣೆ ನಡೆಸಿ ಗಾಂಜಾ ದಾಸ್ತಾನು ಇಟ್ಟುಕೊಂಡಿದ್ದ ಮನೆ ಮೇಲೆ ದಾಳಿ ನಡೆಸಿ, ಮಹಿಳೆ ಸಹಿತ ಇಬ್ಬರು ಬಂಧಿಸಿದ್ದಾರೆ. ಕಾರ್ಯಾಚರಣೆ ವೇಳೆ 6.43 ಲಕ್ಷ ರೂ. ಮೌಲ್ಯದ ಗಾಂಜಾ ವಶಕ್ಕೆ ಪಡೆದಿದ್ದಾರೆ.

    ನಜರುಲ್ಲಾ ಖಾನ್ (40) ಮತ್ತು ಫಾತಿಮಾ (33) ಬಂಧಿತ ಆರೋಪಿಗಳು. 8 ಕೆಜಿ 374 ಗ್ರಾಂ ತೂಕದ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಗಾಂಜಾವನ್ನು ಮಾರಾಟ ಮಾಡಲು ಗುಲ್ವಾಡಿಯ ಉದಯ ನಗರದ ಮನೆಯೊಂದರಲ್ಲಿ ಅಕ್ರಮ ದಾಸ್ತಾನು ಇಡಲಾಗಿತ್ತು.

    ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಕಾರವಾರ| ಗಾಂಜಾ ಜೊತೆ ನಿಷೇಧಿತ ಮಾದಕ ವಸ್ತು ವಶ; ನಾಲ್ವರ ಬಂಧನ

    ಕಾರವಾರ| ಗಾಂಜಾ ಜೊತೆ ನಿಷೇಧಿತ ಮಾದಕ ವಸ್ತು ವಶ; ನಾಲ್ವರ ಬಂಧನ

    ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಗಾಂಜಾ ಹಾಗೂ ಮಾದಕ ವಸ್ತುಗಳನ್ನು ಮಾರಾಟ ಮಾಡುತಿದ್ದ ಗ್ಯಾಂಗ್ ಅನ್ನು ಶಹರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಭಟ್ಕಳದ ಅಂಜುಮನ ಇಂಜಿನಿಯರ್ ಕಾಲೇಜಿನ ಸಮೀಪ ಇರುವ ಪುರಸಭೆ ವಾಟರ ಫಿಲ್ಟರ್‌ ಟ್ಯಾಂಕ್‌ ಹತ್ತಿರ ಅಕ್ರಮವಾಗಿ ಗಾಂಜಾ ಮಾರಾಟ ಮಾಡುವಾಗ ಮಾಲು ಸಮೇತ ಪೊಲೀಸರು ಆರೋಪಿಗಳನ್ನು ಹಿಡಿದಿದ್ದಾರೆ.

    ಬಂಧಿತರು ಭಟ್ಕಳ ಮೂಲದ ಹಿಲಾಲ್ ಸ್ಟ್ರೀಟ್, ಮಗ್ಗುಂ ಕಾಲೋನಿಯ ಮೊಹಮ್ಮದ್‌ ಜೀಯಾಮ್ (19), ನಸರುದ್ದೀನ ಶೇಖ್ (25), ನೌಮಾನ (25), ಮೊಹಮ್ಮದ್‌ ಫರಾನ ಬಂಧಿತ ಆರೋಪಿಗಳಾಗಿದ್ದಾರೆ.

    ಇವರಿಂದ ಕೃತ್ಯಕ್ಕೆ ಬಳಸಿದ ಹುಂಡಾಯ್ ಕಂಪನಿಯ ವೆನ್ಯೂ ಕಾರು, 15,000 ಮೌಲ್ಯದ 370 ಗ್ರಾಂ ಗಾಂಜಾ ಹಾಗೂ 3,000 ಮೌಲ್ಯದ 1.8 ಗ್ರಾಂ MDMA (Methaphetamine) ನಿಷೇಧಿತ ಮಾದಕ ಪದಾರ್ಥವನ್ನು ವಶಕ್ಕೆ ಪಡೆಯಲಾಗಿದೆ.

  • ಹಾವೇರಿಯಲ್ಲಿ 7.91 ಲಕ್ಷ ರೂ. ಮೌಲ್ಯದ ಗಾಂಜಾ ಜಪ್ತಿ – ನಾಲ್ವರು ಆರೋಪಿಗಳು ಅರೆಸ್ಟ್

    ಹಾವೇರಿಯಲ್ಲಿ 7.91 ಲಕ್ಷ ರೂ. ಮೌಲ್ಯದ ಗಾಂಜಾ ಜಪ್ತಿ – ನಾಲ್ವರು ಆರೋಪಿಗಳು ಅರೆಸ್ಟ್

    ಹಾವೇರಿ: ಹಾವೇರಿ (Haveri) ನಗರ ಠಾಣೆ ಪೊಲೀಸರು (Police) ಕಾರ್ಯಾಚರಣೆ ನಡೆಸಿ ಬರೋಬ್ಬರಿ 10 ಕೆ.ಜಿ ಗಾಂಜಾ (Marijuana) ಜಪ್ತಿ ಮಾಡಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

    ಘಟನೆಗೆ ಸಂಬಂಧಿಸಿದಂತೆ ಹಾವೇರಿ ನಗರದ ಸುಭಾಶ್ ಸರ್ಕಲ್ ಮತ್ತು ನಾಗೇಂದ್ರನಮಟ್ಟಿಯ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಮುಖ ಆರೋಪಿ ದಿಳ್ಳೆಪ್ಪ ಅಳಲಗೇರಿ ಎಂಬಾತ ಒಡಿಶಾದಿಂದ ಅಕ್ರಮವಾಗಿ ಗಾಂಜಾ ತಂದು ತನ್ನ ಅಂಗಡಿಯಲ್ಲಿ ಇಟ್ಟುಕೊಂಡು ಮಾರಾಟ ಮಾಡುತ್ತಿದ್ದ. ಅಲ್ಲದೆ ಆರೋಪಿಗಳಾದ ಫಾರೂಕ್ ಅಹಮ್ಮದ್ ಕುಂಚೂರು, ಇಸ್ಮಾಯಿಲ್ ನದಾಫ ಮತ್ತು ಸಾಹಿಲ್ ಕರ್ಜಗಿ ಗಾಂಜಾವನ್ನು ಸಣ್ಣಸಣ್ಣ ಪ್ಯಾಕೆಟ್‌ಗಳಲ್ಲಿ ತುಂಬಿಸಿ ಮಾರಾಟ ಮಾಡುತ್ತಿದ್ದರು.ಇದನ್ನೂ ಓದಿ: ನವೀನ್‌ ಪಟ್ನಾಯಕ್‌ ಆಪ್ತ ವಿ.ಕೆ.ಪಾಂಡಿಯನ್‌ ಸಕ್ರಿಯ ರಾಜಕಾರಣಕ್ಕೆ ವಿದಾಯ

    ಬಂಧಿತರಿಂದ 4 ಮೊಬೈಲ್ ಮತ್ತು 7,91,000 ರೂ. ಮೌಲ್ಯದ ಗಾಂಜಾವನ್ನ ವಶಪಡಿಸಿಕೊಳ್ಳಲಾಗಿದೆ. ಹಾವೇರಿ ಶಹರ ಪೊಲೀಸ್ ಠಾಣೆ ಸಿಪಿಐ ಡಾ.ಮೋತಿಲಾಲ್ ಪವಾರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇದನ್ನೂ ಓದಿ: ಮತ್ತೆ ಪ್ರಧಾನಿಯಾಗಿ ಮೋದಿ ಪದಗ್ರಹಣ – ಪುರಿ ಬೀಚ್‌ನಲ್ಲಿ ಮರಳು ಕಲಾಕೃತಿ ರಚಿಸಿ ಶುಭಕೋರಿದ ಕಲಾವಿದ

  • ಪೊಲೀಸರ ಭರ್ಜರಿ ಕಾರ್ಯಾಚರಣೆ – 1 ಕೋಟಿ 65 ಲಕ್ಷ ರೂ. ಮೌಲ್ಯದ ಗಾಂಜಾ ಜಪ್ತಿ

    ಪೊಲೀಸರ ಭರ್ಜರಿ ಕಾರ್ಯಾಚರಣೆ – 1 ಕೋಟಿ 65 ಲಕ್ಷ ರೂ. ಮೌಲ್ಯದ ಗಾಂಜಾ ಜಪ್ತಿ

    ಬೀದರ್: ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 1 ಕೋಟಿ 65 ಲಕ್ಷ ಮೌಲ್ಯದ 165 ಕೆಜಿ ಗಾಂಜಾವನ್ನು (Marijuana) ಪೊಲೀಸರು ಜಪ್ತಿ ಮಾಡಿರುವ ಘಟನೆ ಬೀದರ್‌ನಲ್ಲಿ (Bidar) ನಡೆದಿದೆ.

    ಆಂದ್ರಪ್ರದೇಶದ (Andhra Pradesh) ವಿಜಯವಾಡದಲ್ಲಿ ಗಾಂಜಾದ ಮೂಲ ಕಿಂಗ್‌ಪಿನ್ ಓರ್ವನನ್ನು ಬಂಧಿಸಲಾಗಿತ್ತು. ಆತ ನೀಡಿದ ಖಚಿತ ಮಾಹಿತಿಯ ಮೇರೆಗೆ ಹೈದರಾಬಾದ್‌ನಿಂದ (Hyderabad) ಮಹಾರಾಷ್ಟ್ರಕ್ಕೆ (Maharashtra) ಕಾರಿನಲ್ಲಿ ಸಾಗಿಸುತ್ತಿದ್ದ 156 ಕೆಜಿ ಗಾಂಜಾವನ್ನು ಬೀದರ್ ಪೊಲೀಸರು ಜಪ್ತಿ ಮಾಡಿದ್ದಾರೆ. ಜಿಲ್ಲೆಯ ಚಿಟ್ಟಗುಪ್ಪ (Chittaguppa) ತಾಲೂಕಿನ ಬೆಳಕೇರಾ ಗ್ರಾಮದ ಬಳಿ 1 ಕೋಟಿ 56 ಲಕ್ಷ ಮೌಲ್ಯದ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಇದನ್ನೂ ಓದಿ: BWSSB ಅರೆಬರೆ ಕಾಮಗಾರಿ – ಗುಂಡಿಗೆ ಬಿದ್ದ ಬಾಲಕ ಬಲಿ 

    ಅದೇ ರೀತಿ ಬೀದರ್ ನಗರದ ರೈಲ್ವೇ ಟ್ರ್ಯಾಕ್‌ (Railway Track) ಬಳಿ ಪ್ರತ್ಯೇಕ ಎರಡು ಪ್ರಕರಣಗಳಲ್ಲಿ ತಲಾ 5 ಕೆಜಿಯಂತೆ ಒಟ್ಟು 10 ಕೆಜಿ ಗಾಂಜಾವನ್ನು ಜಪ್ತಿ ಮಾಡಿದ್ದಾರೆ. ಇದನ್ನೂ ಓದಿ: ರೈಸ್ ಪುಲ್ಲಿಂಗ್ ದಂಧೆ – ನಿವೃತ್ತ ಕಾನ್ಸ್‌ಟೇಬಲ್ ಸಹಿತ ಮೂವರ ಬಂಧನ 

    ಒಟ್ಟು ಮೂರು ಪ್ರಕರಣದಲ್ಲಿ 165 ಕೆಜಿ ಗಾಂಜಾ ಜಪ್ತಿ ಮಾಡಿದ ಬೀದರ್ ಪೊಲೀಸರು ಆರು ಜನ ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಎಸ್ಪಿ ಚನ್ನಬಸವಣ್ಣ ಲಂಗೋಟಿಯವರ ಮಾರ್ಗದರ್ಶನದಲ್ಲಿ ಭರ್ಜರಿ ಕಾರ್ಯಾಚರಣೆ ಮಾಡಿದ್ದು, ಕಾರ್ಯಾಚರಣೆ ಮಾಡಿದ ಪೊಲೀಸರಿಗೆ ಎಸ್ಪಿ ಪ್ರಶಂಸಾ ಪತ್ರ ಹಾಗೂ 1 ಲಕ್ಷ ಬಹುಮಾನ ನೀಡಿ ಗೌರವಿಸಿದ್ದಾರೆ. ಇದನ್ನೂ ಓದಿ: ಗ್ಯಾಂಗ್‌ಸ್ಟರ್‌ ಅತೀಕ್‌ ಅಹ್ಮದ್‌ ಹಂತಕರು ಜೈಲಿಗೆ

  • ಗಾಂಜಾ ಸಾಗಾಟ ಎಂದು ತನಿಖೆ ಮಾಡಿದ ಪೊಲೀಸರಿಗೆ ತಿಳಿಯಿತು ಕೊಲೆ ರಹಸ್ಯ

    ಗಾಂಜಾ ಸಾಗಾಟ ಎಂದು ತನಿಖೆ ಮಾಡಿದ ಪೊಲೀಸರಿಗೆ ತಿಳಿಯಿತು ಕೊಲೆ ರಹಸ್ಯ

    ಶಿವಮೊಗ್ಗ: ಖಾಸಗಿ ಬಸ್‍ನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ಮಾಡಿದಾಗ ಕೊಲೆ ರಹಸ್ಯ ಬಯಲಾಗಿದೆ ಎಂದು ಶಿವಮೊಗ್ಗ ಪೊಲೀಸರು ತಿಳಿಸಿದ್ದಾರೆ.

    ಖಚಿತ ಮಾಹಿತಿ ಮೇರೆಗೆ ತೀರ್ಥಹಳ್ಳಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಖಾಸಗಿ ಬಸ್‍ನಲ್ಲಿ ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿಗಳನ್ನು ಬಂಧಿಸಿದ್ದಾರೆ. ಈ ವೇಳೆ 2 ಕೆಜಿ 300 ಗ್ರಾಂ ಗಾಂಜಾ ವಶಕ್ಕೆ ಪಡೆದುಕೊಂಡಿದ್ದು, ಕೇರಳ ಮೂಲದ ಅಜೀಲ್‍ನನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಗಡಿ ಬಳಿ ಯುದ್ಧ ವಿಮಾನ ಹಾರಿಸಿ ಭಾರತವನ್ನು ಕೆಣಕುತ್ತಿದೆ ಚೀನಾ

    ವಿಚಾರಣೆ ವೇಳೆ ಶಾಕ್
    ಪೊಲೀಸರು ಬಂಧಿತ ಆರೋಪಿಯನ್ನು ವಿಚಾರಣೆ ನಡೆಸಿದ ಹಿನ್ನೆಲೆ ಫುಲ್ ಶಾಕ್ ಆಗಿದ್ದಾರೆ. ಗಾಂಜಾ ಸಾಗಾಟದ ಕಿಂಗ್ ಪಿನ್ ವಿಲ್ಸನ್‍ನ್ನು ಬಂಧಿಸಿದ ಪೊಲೀಸರು ಬೆಂಗಳೂರು ಮೂಲದ ಮತ್ತೊಬ್ಬ ಆರೋಪಿ ಅಲೆಕ್ಸ್‌ನನ್ನು ಬಂಧಿಸಿದ್ದಾರೆ.

    CRIME 2

    ಪೊಲೀಸೇ ಭಾಗಿ
    ಗೃಹ ಸಚಿವರ ತವರು ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೇ ಗಾಂಜಾ ಪ್ರಕರಣದಲ್ಲಿ ಭಾಗಿಯಾಗಿರುವುದು ವಿಚಾರಣೆ ವೇಳೆ ಪತ್ತೆಯಾಗಿದೆ. ಅದು ಅಲ್ಲದೇ ಕೇವಲ ಗಾಂಜಾ ಪ್ರಕರಣವಷ್ಟೇ ಅಲ್ಲದೆ ವಿಲ್ಸನ್ ಮತ್ತು ಅಲೆಕ್ಸ್ ಓರ್ವನ ಕೊಲೆಗೂ ಸುಪಾರಿ ನೀಡಿದ್ದರು. ಕೊಲೆ ಮಾಡಲು ಅಪ್ರೋಜ್ ಅಹಮ್ಮದ್‍ಗೆ 80 ಸಾವಿರ ರೂ. ಸುಪಾರಿ ನೀಡಲಾಗಿತ್ತು ಎಂಬುದು ತನಿಖೆ ವೇಳೆ ಪತ್ತೆಯಾಗಿದೆ. ಇದನ್ನೂ ಓದಿ: ಅಕ್ಷರ್ ಪಟೇಲ್ ಸ್ಫೋಟಕ ಬ್ಯಾಟಿಂಗ್ – ಭಾರತಕ್ಕೆ ವಿಶ್ವದಾಖಲೆಯ ಸರಣಿ ಜಯ

    ಪೊಲೀಸರು ಅಪ್ರೋಜ್ ಅಹಮ್ಮದ್‍ನನ್ನು ಬಂಧಿಸಿದ್ದಾರೆ. ಪ್ರಸ್ತುತ ಪೊಲೀಸರು ವಿಲ್ಸನ್, ಅಲೆಕ್ಸ್ ಮತ್ತು ಅಪ್ರೋಜ್ ಅಹಮ್ಮದ್‍ನನ್ನು ಬಂಧಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]