Tag: Mark Shankar

  • ಸಿಂಗಾಪುರದಲ್ಲಿ ಅಗ್ನಿ ಅವಘಡ: ಪವನ್ ಕಲ್ಯಾಣ್ ಪುತ್ರನ ಆರೋಗ್ಯದ ಬಗ್ಗೆ ಅಪ್‌ಡೇಟ್ ಕೊಟ್ರು ಚಿರಂಜೀವಿ

    ಸಿಂಗಾಪುರದಲ್ಲಿ ಅಗ್ನಿ ಅವಘಡ: ಪವನ್ ಕಲ್ಯಾಣ್ ಪುತ್ರನ ಆರೋಗ್ಯದ ಬಗ್ಗೆ ಅಪ್‌ಡೇಟ್ ಕೊಟ್ರು ಚಿರಂಜೀವಿ

    ಸಿಂಗಾಪುರದಲ್ಲಿ ನಡೆದ ಅಗ್ನಿ ಅವಘಡದಲ್ಲಿ (Singapore School Fire) ಗಾಯಗೊಂಡಿದ್ದ ಪವನ್ ಕಲ್ಯಾಣ್ (Pawan Kalyan) ಪುತ್ರ ಮಾರ್ಕ್ ಶಂಕರ್ (Mark Shankar) ಚಿಕಿತ್ಸೆಯ ಬಳಿಕ ಹೇಗಿದ್ದಾನೆ ಎಂಬುದನ್ನು ಚಿರಂಜೀವಿ ಮಾಹಿತಿ ಹಂಚಿಕೊಂಡಿದ್ದಾರೆ. ಶಂಕರ್ ಸದ್ಯ ವಿಶ್ರಾಂತಿ ಪಡೆಯುತ್ತಿದ್ದು, ಶೀಘ್ರದಲ್ಲೇ ಗುಣಮುಖನಾಗೋದಾಗಿ ಅವರು ತಿಳಿಸಿದ್ದಾರೆ. ಇದನ್ನೂ ಓದಿ:ಅಂದುಕೊಂಡಿದ್ದಕ್ಕಿಂತಲೂ ಹೆಚ್ಚಿನ ಗಾಯಗಳಾಗಿದೆ: ಪುತ್ರನ ಹೆಲ್ತ್ ಬಗ್ಗೆ ಅಪ್‌ಡೇಟ್‌ ಕೊಟ್ಟ ಪವನ್ ಕಲ್ಯಾಣ್

    ಅಗ್ನಿ ಅವಘಡದಲ್ಲಿ ಗಾಯಗೊಂಡಿದ್ದ ಮಾರ್ಕ್ ಶಂಕರ್‌ನನ್ನು ನೋಡಲು ಪವನ್ ಕಲ್ಯಾಣ್ ಜೊತೆ ಚಿರಂಜೀವಿ ದಂಪತಿ ಸಿಂಗಾಪುರಕ್ಕೆ ಹೋಗಿದ್ದಾರೆ. ಈ ಬೆನ್ನಲ್ಲೇ ಪವನ್ ಪುತ್ರನ ಆರೋಗ್ಯ ಸ್ಥಿತಿ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಚಿರಂಜೀವಿ ಬರೆದುಕೊಂಡಿದ್ದಾರೆ. ನಮ್ಮ ಮಗ ಮಾರ್ಕ್ ಶಂಕರ್ ಮನೆಗೆ ಬಂದಿದ್ದಾನೆ. ಆದರೆ ಅವನು ಇನ್ನೂ ಚೇತರಿಸಿಕೊಳ್ಳಬೇಕಾಗಿದೆ. ನಮ್ಮ ಕುಲದೇವರಾದ ಆಂಜನೇಯನ ಕೃಪೆ ಮತ್ತು ಕರುಣೆಯಿಂದ, ಮಾರ್ಕ್ ಶಂಕರ್ ಶೀಘ್ರದಲ್ಲೇ ಸಂಪೂರ್ಣ ಗುಣವಾಗಿ, ಮೊದಲಿನಂತೆ ಆಗಲಿದ್ದಾನೆ. ಹನುಮಾನ್ ಜಯಂತಿಯಂದು (ಏ.11) ಆ ಪುಟ್ಟ ಮಗುವನ್ನು ದೊಡ್ಡ ಅಪಾಯ, ದುರಂತದಿಂದ ರಕ್ಷಿಸುವ ಮೂಲಕ ಆ ದೇವರು ನಮ್ಮೊಂದಿಗೆ ನಿಂತಿದ್ದಾನೆ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ:ವಿಜಯ್ ಸೇತುಪತಿ ಸಿನಿಮಾದಲ್ಲಿ ಬಾಲಿವುಡ್ ಬೆಡಗಿ ಟಬು

    ಈ ಸಂದರ್ಭದಲ್ಲಿ ಪ್ರತಿಯೊಬ್ಬರೂ ನಮ್ಮ ಕುಟುಂಬದ ಬೆಂಬಲಕ್ಕೆ ನಿಂತು, ಮಾರ್ಕ್ ಶಂಕರ್ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ. ಎಲ್ಲರೂ ನಮ್ಮ ಮಗುವಿಗಾಗಿ ಪ್ರಾರ್ಥಿಸುತ್ತಿದ್ದಾರೆ, ಆಶೀರ್ವಾದಗಳನ್ನು ನೀಡುತ್ತಿದ್ದಾರೆ. ನನ್ನ ಪರವಾಗಿ, ನನ್ನ ಕಿರಿಯ ಸಹೋದರ ಪವನ್ ಕಲ್ಯಾಣ್ ಪರವಾಗಿ, ನಮ್ಮ ಇಡೀ ಕುಟುಂಬದ ಪರವಾಗಿ ನಿಮಗೆಲ್ಲರಿಗೂ ಧನ್ಯವಾದಗಳು ಎಂದು ಚಿರಂಜೀವಿ ತಿಳಿಸಿದ್ದಾರೆ.

    ಅಂದಹಾಗೆ, ಏ.8ರಂದು ಸಿಂಗಾಪುರದಲ್ಲಿ ಬೇಸಿಗೆ ಶಿಬಿರದಲ್ಲಿ ಭಾಗಿಯಾಗಿದ್ದ ಮಾರ್ಕ್ ಶಂಕರ್ ಭಾಗಿಯಾಗಿದ್ದು, ಈ ವೇಳೆ ಬೆಂಕಿ ಅವಘಡ ಸಂಭವಿಸಿದೆ. ಒಂದು ಮಗು ಸಾವನ್ನಪ್ಪಿದ್ದರೆ ಇನ್ನೂ ಕೆಲವು ಮಕ್ಕಳು ಗಾಯಗೊಂಡಿದ್ದರು. ಅದರಲ್ಲಿ ಪವನ್ ಪುತ್ರ ಶಂಕರ್‌ಗೆ ಕೈ ಮತ್ತು ಕಾಲುಗಳಿಗೂ ಗಾಯವಾಗಿತ್ತು. ಅಲ್ಲದೆ, ಆತ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ. ಕೂಡಲೇ ಮಾರ್ಕ್ ಶಂಕರ್‌ಗೆ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿತ್ತು.

  • ಅಂದುಕೊಂಡಿದ್ದಕ್ಕಿಂತಲೂ ಹೆಚ್ಚಿನ ಗಾಯಗಳಾಗಿದೆ: ಪುತ್ರನ ಹೆಲ್ತ್ ಬಗ್ಗೆ ಅಪ್‌ಡೇಟ್‌ ಕೊಟ್ಟ ಪವನ್ ಕಲ್ಯಾಣ್

    ಅಂದುಕೊಂಡಿದ್ದಕ್ಕಿಂತಲೂ ಹೆಚ್ಚಿನ ಗಾಯಗಳಾಗಿದೆ: ಪುತ್ರನ ಹೆಲ್ತ್ ಬಗ್ಗೆ ಅಪ್‌ಡೇಟ್‌ ಕೊಟ್ಟ ಪವನ್ ಕಲ್ಯಾಣ್

    ಸಿಂಗಾಪುರದಲ್ಲಿ ನಿನ್ನೆ (ಏ.8) ನಡೆದ ಅಗ್ನಿ ಅವಘಡದಲ್ಲಿ ಆಂಧ್ರ ಪ್ರದೇಶದ ಡಿಸಿಎಂ ಪವನ್ ಕಲ್ಯಾಣ್ (Pawan Kalyan) ಪುತ್ರ ಮಾರ್ಕ್ ಶಂಕರ್‌ಗೆ ಗಾಯಗಳಾಗಿದ್ದು, ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ಸಿಂಗಾಪುರಕ್ಕೆ ತೆರಳುವ ಮುನ್ನ ಪುತ್ರನ ಆರೋಗ್ಯ ಸ್ಥಿತಿ ಹೇಗಿದೆ ಎಂದು ಪವನ್ ಕಲ್ಯಾಣ್ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಶಂಕರ್‌ಗೆ ನಾವು ಅಂದುಕೊಂಡಿದ್ದಕ್ಕಿಂತಲೂ ಹೆಚ್ಚಿನ ಗಾಯಗಳಾಗಿದೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ:ಸಿಂಗಾಪುರ ಶಾಲೆಯಲ್ಲಿ ಬೆಂಕಿ ಅವಘಡ – ಪವನ್ ಕಲ್ಯಾಣ್ ಕಿರಿಯ ಪುತ್ರನಿಗೆ ಗಂಭೀರ ಗಾಯ

    ಮಾಧ್ಯಮಕ್ಕೆ ಪವನ್ ಕಲ್ಯಾಣ್ ಮಾತನಾಡಿ, ಪುತ್ರ ಮಾರ್ಕ್ ಶಂಕರ್ (Mark Shankar0 ಶಾಲೆಯ ಸಮ್ಮರ್ ಕ್ಯಾಂಪ್‌ಗೆ ಭಾಗಿಯಾಗಿದ್ದು, ಈ ವೇಳೆ ಬೆಂಕಿ ಅವಘಡ ಸಂಭವಿಸಿದೆ. ಪುತ್ರನೊಂದಿಗೆ ಇತರೆ ವಿದ್ಯಾರ್ಥಿಗಳು ಸಹ ಇದ್ದರು. ಮಗನ ಕೈ ಹಾಗೂ ಕಾಲುಗಳಿಗೆ ಸುಟ್ಟ ಗಾಯಗಳಾಗಿವೆ. ನಾವು ಅಂದುಕೊಂಡಿದ್ದಕ್ಕಿಂತಲೂ ಹೆಚ್ಚಿನ ಗಾಯಗಳಾಗಿದೆ ಎಂದಿದ್ದಾರೆ. ಇದನ್ನೂ ಓದಿ:ಇಂಟರ್ವಲ್ ಬಗ್ಗೆ ಸೃಷ್ಟಿಕರ್ತ ಸುಕಿ ತೆರೆದಿಟ್ಟ ಬೆರಗಿನ ಸಂಗತಿ!

    ಮಗನ ಶ್ವಾಸಕೋಶವನ್ನು ಸರಿಪಡಿಸಲು ಬ್ರಾಂಕೋಸ್ಕೋಪಿ ಮಾಡಲಾಗಿದೆ. ಅವನ ದೇಹಕ್ಕೆ ಸಾಕಷ್ಟು ಹೊಗೆ ಸೇರಿದೆ. ಹಾಗಾಗಿ ಮಗನಿಗೆ ಚಿಕಿತ್ಸೆ ಮುಂದುವರೆದಿದೆ. ಈ ಬೆಂಕಿ ಅವಘಡದಲ್ಲಿ ನನ್ನ ಮಗನ ಮುಂದೆ ಕುಳಿತಿದ್ದ ಹುಡುಗನಿಗೆ ತೀವ್ರ ಗಾಯಗಳಾಗಿವೆ. ಮತ್ತೋರ್ವ ಹುಡುಗ ನಿಧನ ಹೊಂದಿದ್ದಾನೆ ಎಂದು ಪವನ್ ಕಲ್ಯಾಣ್ ಹೇಳಿದ್ದಾರೆ.

    ಸಹೋದರ ಮೆಗಾಸ್ಟಾರ್ ಚಿರಂಜೀವಿ ದಂಪತಿ ಜೊತೆ ಪವನ್ ಕಲ್ಯಾಣ್ ಸಿಂಗಾಪುರಕ್ಕೆ ತೆರಳಿದ್ದಾರೆ. ಮಗನನ್ನು ನೋಡಲು ಕುಟುಂಬದ ಜೊತೆ ಹೋಗಿದ್ದಾರೆ.

  • ಸಿಂಗಾಪುರ ಶಾಲೆಯಲ್ಲಿ ಬೆಂಕಿ ಅವಘಡ – ಪವನ್ ಕಲ್ಯಾಣ್ ಕಿರಿಯ ಪುತ್ರನಿಗೆ ಗಂಭೀರ ಗಾಯ

    ಸಿಂಗಾಪುರ ಶಾಲೆಯಲ್ಲಿ ಬೆಂಕಿ ಅವಘಡ – ಪವನ್ ಕಲ್ಯಾಣ್ ಕಿರಿಯ ಪುತ್ರನಿಗೆ ಗಂಭೀರ ಗಾಯ

    -ದಟ್ಟ ಹೊಗೆಯಿಂದ ಉಸಿರಾಟದ ತೊಂದರೆ

    ಸಿಂಗಾಪುರ: ಆಂಧ್ರಪ್ರದೇಶ ಡಿಸಿಎಂ, ನಟ ಪವನ್ ಕಲ್ಯಾಣ್ (Pawan Kalyan) ಕಿರಿಯ ಮಗ ಓದುತ್ತಿದ್ದ ಸಿಂಗಾಪುರ (Singapore) ಶಾಲೆಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಲ್ಲಿ ಪುತ್ರ ಮಾರ್ಕ್ ಶಂಕರ್ ಗಂಭೀರ ಗಾಯಗೊಂಡಿದ್ದಾರೆ.

    ಬೆಂಕಿ ಅವಘಡದಲ್ಲಿ ಶಂಕರ್ ಕೈ, ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು, ಶ್ವಾಸಕೋಶಕ್ಕೆ ಹೊಗೆ ನುಗ್ಗಿ ತೀವ್ರ ಉಸಿರಾಟದ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸದ್ಯ ಪವನ್ ಕಲ್ಯಾಣ್ ಪುತ್ರನನ್ನು ಸಿಂಗಾಪುರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಕೃಷಿಹೊಂಡದಲ್ಲಿ ಮುಳುಗಿ ಅಕ್ಕ, ತಂಗಿಯ ದಾರುಣ ಸಾವು

    ಪವನ್ ಕಲ್ಯಾಣ್ ಹಾಗೂ ಅನ್ನಾ ದಂಪತಿಗೆ 2017ರಲ್ಲಿ ಮಾರ್ಕ್ ಶಂಕರ್ ಜನಿಸಿದರು. ಸದ್ಯ ಪವನ್ ಕಲ್ಯಾಣ್ ಮೂರನೇ ಹೆಂಡತಿ ಅನ್ನಾ ಸಿಂಗಪುರದಲ್ಲೇ ಇದ್ದಾರೆ. ಮಾರ್ಕ್ ಶಂಕರ್ ಕೂಡ ಸಿಂಗಾಪುರದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಇದನ್ನೂ ಓದಿ: ವಿಚಾರಣೆಗೆ ದರ್ಶನ್‌ ಗೈರು – ಬೆಂಗಳೂರು ಕೋರ್ಟ್‌ ಅಸಮಾಧಾನ