Tag: Markandeya Dam

  • ಮಾರ್ಕಂಡೇಯ ಅಣೆಕಟ್ಟು ನಿರ್ಮಾಣಕ್ಕೆ ಆಕ್ಷೇಪ – ನ್ಯಾಯಮಂಡಳಿ ರಚಿಸಲು ತಮಿಳುನಾಡು ಒತ್ತಡ

    ಮಾರ್ಕಂಡೇಯ ಅಣೆಕಟ್ಟು ನಿರ್ಮಾಣಕ್ಕೆ ಆಕ್ಷೇಪ – ನ್ಯಾಯಮಂಡಳಿ ರಚಿಸಲು ತಮಿಳುನಾಡು ಒತ್ತಡ

    ಚೆನ್ನೈ: ಕೋಲಾರ, ಬಂಗಾರಪೇಟೆ ಮತ್ತು ಮಾಲೂರು ನಗರ ಪಟ್ಟಣಗಳಿಗೆ ನೀರು ಪೂರೈಸುವ ಮಾರ್ಕಂಡೇಯ ಅಣೆಕಟ್ಟು ಯೋಜನೆ ವಿರುದ್ಧ ಕ್ಯಾತೆ ತೆಗೆದಿರುವ ತಮಿಳುನಾಡು ಸರ್ಕಾರ ನ್ಯಾಯಮಂಡಳಿ ರಚನೆ ಮಾಡುವಂತೆ ಮತ್ತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದೆ.

    ಇಂದು ಈ ಬಗ್ಗೆ ಮಾತನಾಡಿರುವ ತಮಿಳುನಾಡು ಜಲ ಸಂಪನ್ಮೂಲ ಸಚಿವ ಎಸ್. ದೊರೈ ಮುರುಗನ್, ಮಾರ್ಕಂಡೇಯ ನದಿಗೆ ಅಡ್ಡಲಾಗಿ ಅಣೆಕಟ್ಟು ಯೋಜನೆ ನಿರ್ಮಾಣವನ್ನು ತಮಿಳುನಾಡು ಸರ್ಕಾರ ವಿರೋಧಿಸುತ್ತಿದೆ. ಈ ಹಿನ್ನೆಲೆ ಸಮಸ್ಯೆಯನ್ನು ಬಗೆಹರಿಸಲು ನ್ಯಾಯಮಂಡಳಿ ರಚಿಸುವಂತೆ ಒತ್ತಡ ಹೇರಿದ್ದಾರೆ.

    ಈ ಹಿಂದೆಯೂ ನ್ಯಾಯಮಂಡಳಿ ರಚನೆಗೆ ತಮಿಳುನಾಡು ಕೇಂದ್ರ ಸರ್ಕಾರಕ್ಕೆ ಒತ್ತಾಯ ಮಾಡಿತ್ತು. ಆದರೆ ಸಮಸ್ಯೆ ಇತ್ಯರ್ಥ ಪಡಿಸಲು ಕೇಂದ್ರ ಸರ್ಕಾರ ಸಮಿತಿಯೊಂದನ್ನು ರಚನೆ ಮಾಡಿತ್ತು. 240 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ಡ್ಯಾಂನ ಕಾಮಗಾರಿ ಶೇ.85ರಷ್ಟು ಪೂರ್ಣಗೊಂಡಿದೆ. ಇದಕ್ಕಾಗಿ ಈಗಾಗಲೇ 210 ಕೋಟಿಗಳನ್ನು ರಾಜ್ಯ ಸರ್ಕಾರ ವೆಚ್ಚ ಮಾಡಿದೆ.

  • ಮಾರ್ಕಂಡೇಯ ಜಲಾಶಯ ನಿರ್ಮಾಣ- ಮಾತುಕತೆಗೆ ಸಮಿತಿ ರಚಿಸಿದ ಕೇಂದ್ರ ಸರ್ಕಾರ

    ಮಾರ್ಕಂಡೇಯ ಜಲಾಶಯ ನಿರ್ಮಾಣ- ಮಾತುಕತೆಗೆ ಸಮಿತಿ ರಚಿಸಿದ ಕೇಂದ್ರ ಸರ್ಕಾರ

    ನವದೆಹಲಿ: ಮಾರ್ಕಂಡೇಯ ಜಲಾಶಯ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕದ ನಡುವೆ ಸೌಹರ್ದ ಮಾತುಕತೆಗೆ ಕೇಂದ್ರ ಸರ್ಕಾರ ಸಮಿತಿವೊಂದನ್ನು ರಚಿಸಿದೆ. ಸಮಿತಿ ಮೂಲಕ ವಿವಾದಕ್ಕೆ ಬಗೆಹರಿಸಿಕೊಳ್ಳಲು ಕೇಂದ್ರ ಸರ್ಕಾರ ಸೂಚಿಸಿದೆ.

    ಪೆನ್ನಾರ್ ನದಿ ಕಣಿವೆ ವ್ಯಾಪ್ತಿಯಲ್ಲಿ ಕರ್ನಾಟಕದ ಕೋಲಾರ ಜಿಲ್ಲೆಯಲ್ಲಿ ಮಾರ್ಕಂಡೇಯ ಜಲಾಶಯ ನಿರ್ಮಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಇದನ್ನು ವಿರೋಧಿಸಿದ ತಮಿಳುನಾಡು ಕೇಂದ್ರ ಸರ್ಕಾರಕ್ಕೆ ನ್ಯಾಯಾಧೀಕರಣ ರಚನೆ ಮಾಡಲು ಮನವಿ ಮಾಡಿತ್ತು. ತಮಿಳುನಾಡಿನ ಮನವಿ ಮೇರೆಗೆ ಕೇಂದ್ರ ಸರ್ಕಾರ ನ್ಯಾಯಮಂಡಳಿ ಬದಲು ಸಮಾಲೋಚನಾ ಸಮಿತಿಯೊಂದನ್ನು ರಚಿಸಿದ್ದು ಈ ಮೂಲಕ ವಿವಾದ ಬಗೆಹರಿಸಿಕೊಳ್ಳುವಂತೆ ತಿಳಿಸಿದೆ.

    ಸಮಿತಿಯು ಫೆಬ್ರವರಿ 24ರಂದು ದೆಹಲಿಯಲ್ಲಿ ಸಭೆ ನಡೆಸಲಿದ್ದು, ಅಂದು ಕರ್ನಾಟಕ ತಮಿಳುನಾಡಿನ ವಾದವನ್ನು ಕೇಳಲಿದೆ. ಕಳೆದ ವರ್ಷ ಕರ್ನಾಟಕ ಪೆನ್ನಾರ್ ನದಿಗೆ ಅಡ್ಡಲಾಗಿ ಹೊಸ ಅಣೆಕಟ್ಟು ನಿರ್ಮಿಸುವುದನ್ನು ತಡೆಯಲು ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ತಮಿಳುನಾಡಿನ ಮನವಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿ, ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಳ್ಳಲು ನಿರ್ದೇಶನ ನೀಡಿತು.