Tag: marriage invitation card

  • ಮದುವೆ ಆಮಂತ್ರಣ ಪತ್ರಿಕೆಗಳನ್ನು ಹಂಚಲು ಹೋಗಿದ್ದ ಯುವತಿಯ ಮೇಲೆ ಗ್ಯಾಂಗ್‍ರೇಪ್

    ಮದುವೆ ಆಮಂತ್ರಣ ಪತ್ರಿಕೆಗಳನ್ನು ಹಂಚಲು ಹೋಗಿದ್ದ ಯುವತಿಯ ಮೇಲೆ ಗ್ಯಾಂಗ್‍ರೇಪ್

    ಭೋಪಾಲ್: ಉತ್ತರ ಪ್ರದೇಶದ ಯುವತಿಯೊಬ್ಬಳು ತನ್ನ ಮದುವೆ ಆಮಂತ್ರಣ ಪತ್ರಿಕೆಗಳನ್ನು ಹಂಚಲು ಹೋಗುತ್ತಿದ್ದಾಗ ಆಕೆಯನ್ನು ಅಪಹರಿಸಿ ಮೂವರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರಗೈದು ಅವಳನ್ನು ಮಾರಾಟ ಮಾಡಿದ ಘಟನೆ ಮಧ್ಯಪ್ರದೇಶದ ಪಕ್ಕದ ದಾತಿಯಾ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

    ಏಪ್ರಿಲ್ 21 ರಂದು ನಡೆಯಲಿರುವ ಆಕೆಯ ಮದುವೆಯ ಕಾರ್ಡ್‍ಗಳನ್ನು ವಿತರಿಸಲು ಹೋದಾಗ ಗ್ರಾಮದ ಮೂವರು ಯುವಕರು ಏಪ್ರಿಲ್ 18 ರಂದು ಅವಳನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರಗೈದಿದ್ದಾರೆ. ಅಲ್ಲದೇ ರಾಜಕೀಯ ಪಕ್ಷದ ನಾಯಕರೊಬ್ಬರ ಬಳಿಗೆ ಕರೆದೊಯ್ದು ಅವರೊಂದಿಗೆ ಇರಿಸಿದಲ್ಲದೇ ಬಳಿಕ ಆಕೆಯನ್ನು ಮತ್ತೊಬ್ಬ ವ್ಯಕ್ತಿಯೊಂದಿಗೆ ಇರಲು ಒತ್ತಾಯಿಸಿದ್ದರು ಎಂದು ಯುವತಿಯು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾಳೆ. ಇದನ್ನೂ ಓದಿ: ಕುಣಿಗಲ್‍ನಲ್ಲಿ ಭೀಕರ ಅಪಘಾತ- ಬೆಂಗಳೂರಿಗೆ ಹೋಗುತ್ತಿದ್ದ ಇಬ್ಬರು ಸಾವು

    KIDNAP

    ಕೆಲವು ದಿನಗಳ ಕಾಲ ಸಂತ್ರಸ್ತೆಯನ್ನು ಬೇರೆ ಬೇರೆ ಸ್ಥಳಗಳಲ್ಲಿ ಇಟ್ಟುಕೊಂಡಿದ್ದರು. ನಂತರದಲ್ಲಿ ಆಕೆಯನ್ನು ರಾಜಕೀಯ ಪಕ್ಷದ ನಾಯಕನಿಗೆ ಒಪ್ಪಿಸಿದ್ದಾರೆ. ನಾಯಕನೊಂದಿಗೆ 5 ದಿನಗಳ ಕಾಲ ಝಾನ್ಸಿ ಜಿಲ್ಲೆಯಲ್ಲಿ ಇರಿಸಿದ್ದಲ್ಲದೇ, ಬಳಿಕ ಯುವತಿಯನ್ನು ಆಕೆಯ ಇಚ್ಛೆಗೆ ವಿರುದ್ಧವಾಗಿ ಮತ್ತೊಬ್ಬ ವ್ಯಕ್ತಿಯೊಂದಿಗೆ ಇರಲು ಒತ್ತಾಯಿಸಿ ಮಧ್ಯಪ್ರದೇಶದ ಪಕ್ಕದ ದಾತಿಯಾ ಜಿಲ್ಲೆಯ ಹಳ್ಳಿಗೆ ಕಳುಹಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಈ ವೇಳೆ ಯುವತಿಯು ಹೇಗೋ ತನ್ನ ತಂದೆಯನ್ನು ದಾತಿಯಾದಿಂದ ಕರೆಸುವಲ್ಲಿ ಯಶಸ್ವಿಯಾದರು. ನಂತರ ಆಕೆಯನ್ನು ಪೊಲೀಸರ ಸಹಾಯದಿಂದ ಪಠಾರಿ ಗ್ರಾಮದಿಂದ ರಕ್ಷಿಸಲಾಯಿತು. ಇದನ್ನೂ ಓದಿ: ಕಾರಿನ ಗಾಜು ಪುಡಿ ಮಾಡಿದ ಕಿಡಿಗೇಡಿಗಳು- ಸಿಸಿ ಕ್ಯಾಮರಾದಲ್ಲಿ ದುಷ್ಕೃತ್ಯ ಸೆರೆ

    ಸಂತ್ರಸ್ತೆಯನ್ನು ಅಪಹರಿಸಿ, ಅತ್ಯಾಚಾರ ಮಾಡಿ ಮಾರಾಟ ಮಾಡಿದ ಆರೋಪದ ಮೇಲೆ ಕೆಲವರ ವಿರುದ್ಧ ಯುವತಿ ನೀಡಿದ ದೂರಿನ ಮೇರೆಗೆ ಸಂಬಂಧಿತ ಸೆಕ್ಷನ್‍ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ, ಮ್ಯಾಜಿಸ್ಟ್ರೇಟ್ ಮುಂದೆ ಆಕೆಯ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ. ಈ ವಿಷಯವನ್ನು ಗಂಭೀರವಾಗಿ ತನಿಖೆ ನಡೆಸಲಾಗುತ್ತಿದೆ. ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತೆಹ್ರಾಲಿ ಸರ್ಕಲ್ ಆಫೀಸರ್ (ಸಿಒ) ಅನುಜ್ ಸಿಂಗ್ ತಿಳಿಸಿದ್ದಾರೆ.

  • ತನ್ನ ಮದುವೆ ಆಹ್ವಾನಪತ್ರಿಕೆ ಮುದ್ರಣಕ್ಕೆ ಕೊಡಲು ಹೋಗುವಾಗ ಅಪಘಾತವಾಗಿ ವ್ಯಕ್ತಿ ಸಾವು

    ತನ್ನ ಮದುವೆ ಆಹ್ವಾನಪತ್ರಿಕೆ ಮುದ್ರಣಕ್ಕೆ ಕೊಡಲು ಹೋಗುವಾಗ ಅಪಘಾತವಾಗಿ ವ್ಯಕ್ತಿ ಸಾವು

    ಮಂಡ್ಯ: ತನ್ನ ಮದುವೆಯ ಆಹ್ವಾನ ಪತ್ರಿಕೆ ಮುದ್ರಣಕ್ಕೆ ಕೊಡಲು ಬೈಕ್‍ನಲ್ಲಿ ಹೋಗುತ್ತಿದ್ದಾಗ ಕೆಎಸ್‍ಆರ್‍ಟಿಸಿ ಬಸ್ ಹರಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಮನಕಲಕುವ ಘಟನೆ ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ, ಕಿಕ್ಕೇರಿ ಸಮೀಪ ನಡೆದಿದೆ.

    33 ವರ್ಷದ ಶೇಖರ್ ಮೃತ ದುರ್ದೈವಿ. ಡಿಂಕ ಗ್ರಾಮದ ಶೇಖರ್ ಅವರ ಮದುವೆ ಜನವರಿ 27 ಮತ್ತು 28 ರಂದು ನಿಗದಿಯಾಗಿತ್ತು. ಹೀಗಾಗಿ ತನ್ನ ಮದುವೆಯ ಆಹ್ವಾನ ಪತ್ರಿಕೆ ಮುದ್ರಣಕ್ಕೆ ಕೊಡಲು ಶೇಖರ್ ಹೋಗುತ್ತಿದ್ದರು. ಈ ವೇಳೆ ಕಿಕ್ಕೇರಿ ಸಮೀಪ ಶೇಖರ್ ಬೈಕ್‍ಗೆ ಸರ್ಕಾರಿ ಬಸ್ ಡಿಕ್ಕಿ ಹೊಡೆದಿದೆ. ಕೆಳಗೆ ಬಿದ್ದ ಶೇಖರ್ ತಲೆಯ ಮೇಲೆ ಬಸ್ ಚಕ್ರ ಹರಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

    ಶೇಖರ್ ಸಾವಿನ ವಿಷಯ ತಿಳಿದು ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಘಟನೆ ಸಂಬಂಧ ಕಿಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.