Tag: marriege

  • ಗಿಣಿಮೂಗಿನ ಹುಡುಗಿ ಜತೆ ಸಲ್ಲು ಸೀಕ್ರೆಟ್ ಮದುವೆ: ಫೋಟೋ ನೋಡಿ ನಕ್ಕರಾ ಸೋನಾಕ್ಷಿ ಸಿನ್ಹಾ

    ಗಿಣಿಮೂಗಿನ ಹುಡುಗಿ ಜತೆ ಸಲ್ಲು ಸೀಕ್ರೆಟ್ ಮದುವೆ: ಫೋಟೋ ನೋಡಿ ನಕ್ಕರಾ ಸೋನಾಕ್ಷಿ ಸಿನ್ಹಾ

    ಮುಂಬೈ: ಬಾಲಿವುಡ್ ನ ಮೋಸ್ಟ್ ಎಲಿಜಬಲ್ ಬ್ಯಾಚುಲರ್ ಸಲ್ಮಾನ್ ಖಾನ್ ಕೊನೆಗೂ ಮದುವೆಯಾದರು ಎಂದು ಬಿಟೌನ್ ನಿಟ್ಟುಸಿರಿಟ್ಟಿತ್ತು. ಅದರಲ್ಲೂ ದಬಂಗ್ ಸಿನಿಮಾದಲ್ಲಿ ತಮ್ಮೊಂದಿಗೆ ನಟಿಸಿದ್ದ ಸೋನಾಕ್ಷಿ ಸಿನ್ಹಾ ಅವರೇ ಸಲ್ಮಾನ್ ಪತ್ನಿ ಎಂದು ಹಿರಿಹಿರಿ ಹಿಗ್ಗಿತ್ತು. ಈ ಖುಷಿ ಒಂದೇ ಠುಸ್ಸು ಆಗಿದೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಇವರಿಬ್ಬರ ಮದುವೆ ಫೋಟೋದ ಹಿಂದೆ ಹೊಸದೊಂದು ಕಹಾನಿಯೇ ಅಡಗಿದೆ.

    ಮೋಸ್ಟ್ ಎಲಿಜಬಲ್ ಬ್ಯಾಚುಲರ್ ಸಲ್ಮಾನ್ ಹಲವರ ಜೊತೆ ಡೇಟಿಂಗ್ ಮಾಡಿದ್ದರು ಎನ್ನುವುದು ಅವರ ಸಿನಿಮಾಗಳಷ್ಟೇ ಸತ್ಯ. ಆದರೆ ಯಾರೂ ಕೂಡ ಸಲ್ಲು ಜೊತೆ ಮದುವೆ ಆಗಲು ಮುಂದೆ ಬಂದಿರಲಿಲ್ಲ. ಈಗ ಸಲ್ಮಾನ್ ಖಾನ್ ಮತ್ತು ಸೋನಾಕ್ಷಿ ಸಿನ್ಹಾ ಮದುವೆ ಆಗಿದ್ದಾರೆ ಎಂಬ ಗಾಸಿಪ್ ಬಿಟೌನ್ ತುಂಬಾ ಸದ್ದು ಮಾಡುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಫೋಟೋವೊಂದು ಈ ಗಾಸಿಪ್‍ಗೆ ಕಾರಣವಾಗಿದೆ. ಸಲ್ಲು ಮತ್ತು ಸೋನಾಕ್ಷಿ ಸಿನ್ಹಾ ನವ ದಂಪತಿಯ ರೀತಿಯಲ್ಲಿ ಕಂಗೊಳಿಸುತ್ತಿದ್ದ ಆ ಫೋಟೋ ವೈರಲ್ ಕೂಡ ಆಗಿದೆ. ಆದರೆ, ಅದರ ಹಿಂದಿನ ಅಸಲಿಯತ್ತೇ ಬೇರೆ ಇದೆ. ಇದನ್ನೂ ಓದಿ : ಮಾಜಿ ಪತಿಯ ಬಗ್ಗೆ ಬೆಂಕಿಯುಗುಳಿದ ಪೂನಂ ಪಾಂಡೆ : ಟಾಪ್ ನಟಿಯ ದಾಂಪತ್ಯ ಹೀಗೂ ಇತ್ತಾ?

    ಸಲ್ಲು ಮತ್ತು ಸೋನಾಕ್ಷಿ ಜೋಡಿಯ ಮಧ್ಯೆ ಒಂದೊಳ್ಳೆ ಭಾಂದವ್ಯ ಇರುವುದು ನಿಜ. ಆದರೆ ಮದುವೆ ಆಗಿದ್ದಾರೆ ಎಂಬುದೆಲ್ಲ ಒಂದು ಸುಳ್ಳು. ಗಾಸಿಪ್‍ಗೆ ಕಾರಣವಾಗಿರುವ ಈ ಫೋಟೋವನ್ನು ಎಡಿಟ್ ಮಾಡಲಾಗಿದ್ದು, ಬೇರೊಬ್ಬ ದಂಪತಿ ತೆಗೆಸಿಕೊಂಡಿದ್ದ ಮದುವೆ ಫೋಟೋ ಅದಾಗಿದೆ. ಅವರ ಮುಖಕ್ಕೆ ಸೋನಾಕ್ಷಿ ಹಾಗೂ ಸಲ್ಮಾನ್ ಅವರ ಮುಖವನ್ನು ಫಿಕ್ಸ್ ಮಾಡಲಾಗಿದೆ. ವೈರಲ್ ಆದ ಫೋಟೋ ನೋಡಿದ ಎಷ್ಟೋ ನೆಟ್ಟಗರು ಅದನ್ನು ನಿಜ ಎಂದು ನಂಬಿದ್ದರು. ಗುಟ್ಟು ರಟ್ಟಾದ ನಂತರ ಪೆಚ್ಚಾಗಿದ್ದಾರೆ. ಇದನ್ನೂ ಓದಿ : ಕಾಲಿಂದ ಕುಡಿಕೆಯೊದ್ದ ರಾಣಾ: ಪವರ್ ಸ್ಟಾರ್ ಪವನ್ ಕಲ್ಯಾಣ್ ಸಿನಿಮಾ ವಿರುದ್ಧ ದೂರು ದಾಖಲು

    ಸೋನಾಕ್ಷಿ ಸಿನ್ಹಾ 2010ರಲ್ಲಿ ಸಲ್ಲು ಭಾಯ್ ಜೊತೆ ದಬಂಗ್ ಚಿತ್ರದಲ್ಲಿ ಸ್ಕ್ರೀನ್ ಶೇರ್ ಮಾಡಿದ್ದರು. ನಟಿಸಿದ ಮೊದಲ ಸಿನಿಮಾದಲ್ಲಿಯೇ ಅವರಿಗೆ ಭರ್ಜರಿ ಯಶಸ್ಸು ಸಿಕ್ಕಿತ್ತು. ಈ ಗೆಲುವೇ ಸಲ್ಮಾನ್ ಜೊತೆ ಸೋನಾಕ್ಷಿ ಉತ್ತಮ ಒಡನಾಟ ಇಟ್ಟುಕೊಳ್ಳಲು ಸಾಧ್ಯವಾಯಿತು. ಸದ್ಯ ಕೆಲವು ಸಿನಿಮಾಗಳ ಕೆಲಸಗಳಲ್ಲಿ ಬ್ಯುಸಿಯಾಗಿರುವ ಸೋನಾಕ್ಷಿ ಬ್ಯುಸಿ, ಸದ್ಯಕ್ಕಂತೂ ಮದುವೆ ಬಗ್ಗೆ ಆಲೋಚನೆ ಮಾಡಿಲ್ಲವಂತೆ.

  • ಪ್ರಿಯಕರನ ಸಾವಿನಿಂದ ಮನನೊಂದ ಯುವತಿ ಆತ್ಮಹತ್ಯೆ

    ಪ್ರಿಯಕರನ ಸಾವಿನಿಂದ ಮನನೊಂದ ಯುವತಿ ಆತ್ಮಹತ್ಯೆ

    ಕಲಬುರಗಿ: ಪ್ರಿಯಕರನ ಸಾವಿನಿಂದ ಮನನೊಂದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕ್ವಾಟರ್ಸ್‍ನಲ್ಲಿ ನಡೆದಿದೆ.

    ದ್ವಿತೀಯ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದ ಶೃತಿ (18) ಆತ್ಮಹತ್ಯೆಗೆ ಶರಣಾದ ಯುವತಿ. ಒಂದು ತಿಂಗಳ ಹಿಂದೆಯಷ್ಟೇ ಆಕೆಯ ಪ್ರಿಯಕರ ಕಾಲು ಜಾರಿ ಬಾವಿಯಲ್ಲಿ ಬಿದ್ದು ಸಾವನ್ನಪ್ಪಿದ್ದ. ಇದನ್ನೂ ಓದಿ: ಒಂಟಿಯಾಗಿದ್ದ ಅಮ್ಮನಿಗೆ ಮದುವೆ ಮಾಡಿಸಿದ ಮಗಳು

    ಪ್ರಿಯತಮನ ಸಾವಿನಿಂದ ಮನನೊಂದು ಕೆಲವು ದಿನಗಳ ಹಿಂದೆ ಆಹಾರವನ್ನು ಶೃತಿ ತ್ಯಜಿಸಿದ್ದಳು ಎಂದು ಆಕೆಯ ಪೋಷಕರು ಹೇಳಿದ್ದಾರೆ.

    ಈಕೆಯ ಹಳೆ ನೆನಪನ್ನು ಮರೆಸುವ ಸಲುವಾಗಿ ಮನೆಯವರು ಸಂಬಂಧಿಕ ಯುವಕನೊಂದಿಗೆ ಮದುವೆ ಮಾಡಲು ನಿಶ್ಚಯಿಸಿದ್ದರು. ಕೋಪಗೊಂಡ ಯುವತಿ ನಿನ್ನೆ ಸಂಜೆ ಮನೆಯಲ್ಲಿ ಯಾರು ಇಲ್ಲದಿರುವ ಸಂದರ್ಭವನ್ನು ನೋಡಿಕೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದನ್ನೂ ಓದಿ: ಕ್ರಿಸ್ತನಿಗೆ ಪರಿವರ್ತನೆಯಾದ್ರೆ ಸಿದ್ದರಾಮಯ್ಯಗೆ ಜಾಗ ಎಲ್ಲಿದೆ: ಸಿ.ಟಿ ರವಿ

    ಈ ಕುರಿತು ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಮದುವೆಗಾಗಿ ಅಪ್ರಾಪ್ತೆಯ ಜನ್ಮ ದಿನಾಂಕ ತಿದ್ದಲು ಹೊರಟ ಪೋಷಕರು

    ಮದುವೆಗಾಗಿ ಅಪ್ರಾಪ್ತೆಯ ಜನ್ಮ ದಿನಾಂಕ ತಿದ್ದಲು ಹೊರಟ ಪೋಷಕರು

    – ನಿರಾಕರಿಸಿದ ಮುಖ್ಯೋಪಾಧ್ಯಾಯರ ಮೇಲೆ ಹಲ್ಲೆ

    ವಿಜಯಪುರ: ಅಪ್ರಾಪ್ತ ಬಾಲಕಿಯ ಜನ್ಮ ದಿನಾಂಕ ತಿದ್ದುಪಡಿಗೆ ನಿರಾಕರಿಸಿದ್ದಕ್ಕೆ ಶಾಲಾ ಮುಖ್ಯೋಪಾಧ್ಯಾಯರ ಮೇಲೆ ಬಾಲಕಿ ಪೋಷಕರು ಹಲ್ಲೆ ಮಾಡಿರುವ ಘಟನೆ ವಿಜಯಪುರದ ಸಿಂದಗಿ ತಾಲೂಕಿನ ಹಚ್ಯಾಳ ಗ್ರಾಮದಲ್ಲಿ ನಡೆದಿದೆ.

    ರಾಜು ಮೇಲಿನಮನೆ ಎಂಬವರು ತಮ್ಮ ಮಗಳ ವಿವಾಹವನ್ನ ತಮ್ಮ ಗ್ರಾಮದಲ್ಲಿ ನಡೆಯುತ್ತಿದ್ದ ಸಾಮೂಹಿಕ ಮದುವೆ ಕಾರ್ಯಕ್ರಮದಲ್ಲಿ ಮಾಡಲು ಮುಂದಾಗಿದ್ದರು. ಆದ್ರೆ ಬಾಲಕಿ ಅಪ್ರಾಪ್ತ ವಯಸ್ಕಳಾಗಿರುವುದರಿಂದ ಹಚ್ಯಾಳ ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯ ಹುಸೇನಸಾಬ್‍ಗೆ ಆಕೆಯ ಜನ್ಮದಿನಾಂಕ ತಿದ್ದುಪಡಿ ಮಾಡಿಕೊಡಲು ಒತ್ತಾಯಿಸಿದ್ದಾರೆ. ಆಗ ಮುಖ್ಯೋಪಾಧ್ಯಾಯರು ಈ ಕೆಲಸ ಮಾಡಿಕೊಡಲು ನಿರಾಕರಿದ್ದರು.

    ಎಷ್ಟೇ ಒತ್ತಾಯಿಸಿದರು ಮುಖ್ಯೋಪಾಧ್ಯಾಯರು ಮಾತ್ರ ಜನ್ಮ ದಿನಾಂಕ ತಿದ್ದುಪಡಿ ಮಾಡಿಕೊಡಲ್ಲ ಎಂದು ಹೇಳಿದ್ದಾರೆ. ಇಷ್ಟಕ್ಕೆ ಕೋಪಗೊಂಡ ಬಾಲಕಿ ಪೋಷಕರು ಮುಖ್ಯೋಪಾಧ್ಯಾಯರ ಮೇಲೆ ಏಕಾಏಕಿ ಹಲ್ಲೆ ಮಾಡಿದ್ದಾರೆ. ಸದ್ಯ ಮುಖ್ಯೋಪಾಧ್ಯಾಯ ಹುಸೇನಸಾಬ್ ಸಿಂದಗಿ ತಾಲೂಕು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಈ ಘಟನೆ ಕುರಿತು ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • 15ರ ವಿದ್ಯಾರ್ಥಿನಿಯನ್ನೇ ಮದುವೆಯಾದ ಟ್ಯೂಷನ್ ಟೀಚರ್!

    15ರ ವಿದ್ಯಾರ್ಥಿನಿಯನ್ನೇ ಮದುವೆಯಾದ ಟ್ಯೂಷನ್ ಟೀಚರ್!

    – ಹೆಣ್ಣು ಮಕ್ಕಳಿಗೆ ಶಿಕ್ಷಣ ಕೊಡಿಸಲು ಗ್ರಾಮಸ್ಥರ ಹಿಂದೇಟು

    ಪಟ್ನಾ: ಟ್ಯೂಷನ್ ಕಲಿಸುತ್ತಿದ್ದ ಬಿಹಾರದ ಗ್ರಾಮವೊಂದರ ಶಿಕ್ಷಕನೊಬ್ಬ ತನ್ನ ಬಳಿ ಬರುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯನ್ನೇ ಮದುವೆಯಾಗಿದ್ದಾನೆ.

    ನಾರಾಯಣ್‍ಪುರ ಗ್ರಾಮದಲ್ಲಿ ಶಿಕ್ಷಕ ಚಂದ್ರಪ್ರಕಾಶ್ ಮೆಹ್ತಾ(50) ವಿದ್ಯಾರ್ಥಿಗಳಿಗೆ ಖಾಸಗಿ ಟ್ಯೂಷನ್ ಕೇಂದ್ರವನ್ನು ನಡೆಸುತ್ತಿದ್ದನು. ಆತನ ಬಳಿ ಗ್ರಾಮದ ಹಲವು ಹೆಣ್ಣು ಮಕ್ಕಳು ಟ್ಯೂಷನ್‍ಗೆ ಹೋಗುತ್ತಿದ್ದರು. ಆದ್ರೆ ಕೆಲವು ದಿನಗಳ ಹಿಂದೆ ಚಂದ್ರಪ್ರಕಾಶ್ ಟ್ಯೂಷನ್‍ಗೆ ಬರುತ್ತಿದ್ದ 15 ವರ್ಷದ ವಿದ್ಯಾರ್ಥಿನಿಯೊಬ್ಬಳನ್ನು ಯಾರಿಗೂ ತಿಳಿಯದಂತೆ ವಿವಾಹವಾಗಿದ್ದನು. ಅಷ್ಟೇ ಅಲ್ಲದೆ ಅವಳ ಜೊತೆ ದೈಹಿಕ ಸಂಬಂಧವನ್ನು ಕೂಡ ಇಟ್ಟುಕೊಂಡಿದ್ದನು.

    ಈ ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ಇಡೀ ಗ್ರಾಮದ ಜನರು ಆತಂಕಕ್ಕೆ ಒಳಗಾಗಿದ್ದಾರೆ. ತಮ್ಮ ಮಕ್ಕಳಿಗೂ ಯಾರಾದರೂ ಮೋಡಿ ಮಾಡಿ ಮದುವೆಯಾಗಿಬಿಟ್ಟರೆ ಏನು ಗತಿ ಎಂದು ಹೆದರಿ ಹೆಣ್ಣು ಮಕ್ಕಳನ್ನು ಶಾಲೆಗೆ ಕಳುಹಿಸುವುದು ಬೇಡ ಎನ್ನುವ ತೀರ್ಮಾನಕ್ಕೆ ಬಂದಿದ್ದಾರೆ.

    ಯಾರೋ ಮಾಡಿದ ತಪ್ಪಿಗೆ ನಮಗೇಕೆ ಶಿಕ್ಷೆ ಅಂತ ಶಿಕ್ಷಣದಿಂದ ವಂಚಿತರಾಗಿರುವ ಹೆಣ್ಣು ಮಕ್ಕಳು ಈಗ ಕಣ್ಣೀರಿಡುತ್ತಿದ್ದಾರೆ. ಘಟನೆ ಕುರಿತು ತಿಳಿಯುತ್ತಿದಂತೆ ಸ್ಥಳಕ್ಕೆ ಭೇಟಿ ನೀಡಿದ ಮಹಿಳಾ ಪರ ಸಂಘಟನೆಯ ಸದಸ್ಯರು ಗ್ರಾಮಸ್ಥರ ಮನವೊಲಿಸಲು ಪ್ರಯತ್ನಿಸಿದ್ದಾರೆ. ಆದರೇ ಗ್ರಾಮಸ್ಥರು ಮಾತ್ರ ಯಾರ ಮೇಲೂ ನಮಗೆ ನಂಬಿಕೆ ಇಲ್ಲ. ನಮ್ಮ ಮಕ್ಕಳ ಭದ್ರತೆ ನಮಗೆ ಮುಖ್ಯ. ನಾವು ಅವರನ್ನು ಶಾಲೆಗೆ ಕಳುಹಿಸುವುದಿಲ್ಲ ಎಂದು ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • 6 ವರ್ಷ ಪ್ರೀತಿಸಿ ಗಂಡಂದಿರಿಗೆ ವಿಚ್ಛೇದನ ನೀಡಿ ಕೊನೆಗೂ ಒಂದಾದ ಲೆಸ್ಬಿಯನ್‍ಗಳು!

    6 ವರ್ಷ ಪ್ರೀತಿಸಿ ಗಂಡಂದಿರಿಗೆ ವಿಚ್ಛೇದನ ನೀಡಿ ಕೊನೆಗೂ ಒಂದಾದ ಲೆಸ್ಬಿಯನ್‍ಗಳು!

    ಲಕ್ನೋ: 6 ವರ್ಷಗಳಿಂದ ಪ್ರೀತಿಸುತ್ತಿದ್ದ ಇಬ್ಬರು ಲೆಸ್ಬಿಯನ್ ಮಹಿಳೆಯರು ಕೊನೆಗೂ ತಮ್ಮ ಗಂಡಂದಿರಿಗೆ ವಿಚ್ಛೇದನ ನೀಡಿ ಶನಿವಾರ ದೇವಾಲಯವೊಂದರಲ್ಲಿ ಸರಳವಾಗಿ ವಿವಾಹವಾಗಿದ್ದಾರೆ.

    ಉತ್ತರಪ್ರದೇಶದ ಹಮೀರ್‌ಪುರದ 24 ಮತ್ತು 26 ವರ್ಷದ ಮಹಿಳೆಯರು ಬುಂದೇಲ್‍ಖಂಡ್ ಪ್ರದೇಶದಲ್ಲಿರುವ ದೇವಸ್ಥಾನದಲ್ಲಿ ಮದುವೆಯಾಗಿದ್ದಾರೆ. ಕಳೆದ ಆರು ವರ್ಷಗಳಿಂದ ಉತ್ತರ ಪ್ರದೇಶದ ಇಬ್ಬರು ಮಹಿಳೆಯರು ಪ್ರೀತಿಸುತ್ತಿದ್ದರು. ಆದರೆ ಮನೆಯವರ ಒತ್ತಾಯಕ್ಕೆ ಇಬ್ಬರು ದೂರವಾಗಿದ್ದರು. ಪ್ರೀತಿಯಿಂದ ದೂರವಿರಲು ಆಗದೇ ಕೊನೆಗೂ ಇಬ್ಬರು ಮದುವೆಯಾಗಿದ್ದಾರೆ. ಆದ್ರೆ ಅವರ ಮದುವೆ ನೋಂದಣಿ ಮಾಡಿಕೊಳ್ಳಲು ಅಧಿಕಾರಿಗಳು ನಿರಾಕರಿಸಿದ್ದಾರೆ.

    ಆರು ವರ್ಷಗಳ ಹಿಂದೆ ಕಾಲೇಜಿನಲ್ಲಿ ಓದುತ್ತಿದ್ದ ವೇಳೆ ಇಬ್ಬರಿಗೂ ಪ್ರೇಮಾಂಕುರವಾಗಿತ್ತು. ಆಗಿನಿಂದಲೂ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಆದ್ರೆ ಪಾಲಕರಿಗೆ ಈ ವಿಷಯ ತಿಳಿದಾಗ ಇಬ್ಬರ ಶಿಕ್ಷಣವನ್ನು ಅರ್ಧಕ್ಕೆ ನಿಲ್ಲಿಸಿ ಯುವಕರ ಜೊತೆ ಮದುವೆ ಮಾಡಿಸಿದ್ದರು.

    ಕಾಲೇಜು ಬಿಟ್ಟ ಆರು ತಿಂಗಳಿಗೆ ನಮಗೆ ಬೇರೆಯವರ ಜೊತೆ ವಿವಾಹವಾಗಿತ್ತು. ಆದರೂ ಒಬ್ಬರನ್ನೊಬ್ಬರು ಮರೆತಿರಲಿಲ್ಲ. ಹೀಗಾಗಿ ಇಬ್ಬರೂ ಕೂಡ ಪತಿಗೆ ವಿಚ್ಛೇದನ ನೀಡಿ ಒಂದಾಗಿದ್ದೇವೆ ಎಂದು ನವ ವಿವಾಹಿತ ಸಲಿಂಗಿ ಜೋಡಿ ಹೇಳಿಕೊಂಡಿದೆ. ವಿಚ್ಛೇದನ ನೀಡಿದ ದಾಖಲೆಗಳನ್ನು ಸಲ್ಲಿಸದ ಕಾರಣ ವಿವಾಹ ನೋಂದಣಿ ಆಗಿಲ್ಲ.

    ಸಲಿಂಗಿ ಜೋಡಿ ಪರ ಇರುವ ವಕೀಲ ದಯಾ ಶಂಕರ್ ತಿವಾರಿ ಮಾತನಾಡಿ, ಒಂದೇ ಲಿಂಗದವರ ವಿವಾಹ ನೋಂದಣಿಗೆ ಯಾವುದೇ ಸರ್ಕಾರಿ ಆದೇಶ ಇಲ್ಲವೆಂದು ವಿವಾಹ ನೋಂದಣಿ ಮಾಡಲು ನಿರಾಕರಿಸಿದ್ದಾರೆ. ಇದು ತಪ್ಪು ಈ ಕುರಿತು ಹೋರಾಡುತ್ತೇವೆ ಎಂದು ತಿಳಿಸಿದ್ದಾರೆ.

    ಸುಪ್ರೀಂ ಹೇಳಿದ್ದು ಏನು?
    ಐಪಿಸಿ ಸೆಕ್ಷನ್ 377ರ ಪ್ರಕಾರ ಯಾವುದೇ ವ್ಯಕ್ತಿ, ಮಹಿಳೆ ಅಥವಾ ಪ್ರಾಣಿಗಳೊಂದಿಗೆ ನಿಸರ್ಗಕ್ಕೆ ವಿರುದ್ಧವಾಗಿ ಲೈಂಗಿಕ ಕ್ರಿಯೆ ನಡೆಸಿದರೆ, ಅದು ಅಪರಾಧವಾಗಿತ್ತು. ಇಂತಹ ಅಪರಾಧಕ್ಕೆ ಜೀವಾವಧಿ ಶಿಕ್ಷೆ ಅಥವಾ 10 ವರ್ಷ ಜೈಲು ಹಾಗೂ ದಂಡ ವಿಧಿಸಬಹುದಾಗಿತ್ತು. 2018ರ ಸೆಪ್ಟೆಂಬರ್ ನಲ್ಲಿ ಸುಪ್ರೀಂ ಕೋರ್ಟ್ ಭಾರತದಲ್ಲಿ ಸಲಿಂಗಕಾಮ ಅಪರಾಧ ಎಂದು ಪರಿಗಣಿಸುವ ಐಪಿಸಿ ಸೆಕ್ಷನ್ 377 ಅನ್ನು ರದ್ದುಗೊಳಿಸಿತ್ತು.

    ಸಲಿಂಗಕಾಮ ಅಪರಾಧ ಎಂದು ಪರಿಗಣಿಸುವ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 377ರ ಸಿಂಧುತ್ವ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳಿಗೆ ಸಂಬಂಧಿಸಿದಂತೆ ಕೋರ್ಟ್ ಈ ತೀರ್ಪು ಪ್ರಕಟಿಸಿತ್ತು. ಕಾಲದ ಜೊತೆ ಕಾನೂನು ಕೂಡ ಬದಲಾಗಬೇಕು ಎಂದು ಹೇಳಿ ಐಪಿಸಿ 377 ಅನ್ನು ಅಸಿಂಧುಗೊಳಿಸಿತ್ತು. ಈ ಮೂಲಕ 156 ವರ್ಷದ ಹಿಂದಿನ ಬ್ರಿಟಿಷ್ ಕಾನೂನು ರದ್ದಾಗಿತ್ತು.

    ಕೇಂದ್ರ ಸರ್ಕಾರ ಸೆಕ್ಷನ್ 377ರ ರದ್ದತಿ ವಿಚಾರವನ್ನು ನ್ಯಾಯಾಲಯದ ವಿವೇಚನೆಗೆ ಬಿಡುವುದಾಗಿ ಹೇಳಿತ್ತು. ಆದರೆ ಸಲಿಂಗ ವಿವಾಹ ಮತ್ತು ಕೆಲವು ಹಕ್ಕುಗಳ ವಿಚಾರದಲ್ಲಿ ಗೊಂದಲ ಉಂಟಾಗಬಹುದು ಎಂಬ ಕಳವಳವನ್ನು ವ್ಯಕ್ತಪಡಿಸಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv