Tag: masidi

  • ಪ್ರತಾಪ್ ಸಿಂಹ ವಿರುದ್ಧ ಕಾಂಗ್ರೆಸ್‍ನಿಂದ ಜಿಲ್ಲಾಧಿಕಾರಿಗಳಿಗೆ ದೂರು

    ಪ್ರತಾಪ್ ಸಿಂಹ ವಿರುದ್ಧ ಕಾಂಗ್ರೆಸ್‍ನಿಂದ ಜಿಲ್ಲಾಧಿಕಾರಿಗಳಿಗೆ ದೂರು

    ಮೈಸೂರು: ರಾಜಕೀಯ ಲಾಭಕ್ಕಾಗಿ ಸಂಸದ ಪ್ರತಾಪ್ ಸಿಂಹ ಕೋಮು ಗಲಭೆ ಸೃಷ್ಟಿಸಲು ಹುನ್ನಾರ ರೂಪಿಸಿದ್ದಾರೆ ಎಂದು ಆರೋಪಿಸಿ ಮೈಸೂರು ಕಾಂಗ್ರೆಸ್ ನಿಯೋಗ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದೆ.

    ಮುಸ್ಲಿಂರ ದರ್ಗಾ ಹೊಡೆಯಲು ನಿಮಗೆ ತೊಡೆ ನಡುಗುತ್ತಾ ಎಂದು ಪ್ರತಾಪ್ ಸಿಂಹ ಹೇಳಿಕೆ ಸರಿಯಲ್ಲ. ಕೆಡಿಪಿ ಸಭೆಯಲ್ಲಿ ಸಂಸದರು ಜಿಲ್ಲಾಧಿಕಾರಿಗಳಿಗೆ ಧಮ್ಕಿ ಹಾಕಿರುವುದು ಅಕ್ಷಮ್ಯ ಅಪರಾಧ. ರಾಜಕೀಯ ಲಾಭಕ್ಕಾಗಿ ರಾತ್ರೋ ರಾತ್ರಿ ದೇವಸ್ಥಾನಗಳನ್ನು ಹೊಡೆದು ಹಾಕಿ ಕೋಮು ಗಲಾಭೆ ಸೃಷ್ಟಿಸಲು ಮುಂದಾಗಿದ್ದಾರೆ ಎಂದು ಗಂಭೀರ ಆರೋಪ ಮಾಡಿ ಮೈಸೂರು ಜಿಲ್ಲಾಧಿಕಾರಿಗಳಿಗೆ ನೀಡಿದೆ. ಇದನ್ನೂ ಓದಿ: ಮೈಸೂರಿನಲ್ಲಿ ದೇವಸ್ಥಾನ ತೆರವು ಕಾರ್ಯಚರಣೆಗೆ ಜಿಲ್ಲಾಡಳಿತ ಬ್ರೇಕ್

    ಅರಸು ರಸ್ತೆಯ ದರ್ಗಾ, ಇರ್ವೀನ್ ರಸ್ತೆಯಲ್ಲಿರುವ ಮಸೀದಿ, ಎರಡು ವಿಚಾರ ಈಗ ಕೋರ್ಟ್ ನಲ್ಲಿದೆ. ಆದರೂ ಪದೇ ಪದೇ ಇದನ್ನು ಕೆಡವಿ ಎಂದು ಕೆಡಿಪಿ ಸಭೆಯಲ್ಲಿ ಸಂಸದರು ಆಗ್ರಹಿಸಿದ್ದಾರೆ. ಇದರ ಹಿಂದೆ ರಾಜಕೀಯ ಲಾಭದ ಹುನ್ನಾರವಿದೆ ಎಂದು ಆರೋಪಿಸಿದೆ. ಇದನ್ನೂ ಓದಿ: ದೇಶ-ಧರ್ಮದ ವಿಚಾರದಲ್ಲಿ ನಾನು ಸದಾ ಧ್ವನಿ ಎತ್ತುತ್ತೇನೆ: ಪ್ರತಾಪ್ ಸಿಂಹ

  • ಹಿಂದೂ ದೇವಾಲಯಗಳನ್ನ ಏಕಾಏಕಿ ತೆರವು ಮಾಡುತ್ತಿಲ್ಲ: ಶಾಸಕ ರಾಮದಾಸ್

    ಹಿಂದೂ ದೇವಾಲಯಗಳನ್ನ ಏಕಾಏಕಿ ತೆರವು ಮಾಡುತ್ತಿಲ್ಲ: ಶಾಸಕ ರಾಮದಾಸ್

    ಮೈಸೂರು: ದೇವಸ್ಥಾನ ತೆರವು ವಿಚಾರದಲ್ಲಿ ಆ ಧರ್ಮ ಈ ಧರ್ಮ ಎಂಬುದೇನೂ ಇಲ್ಲ ಎನ್ನುವ ಮೂಲಕ ಶಾಸಕ ರಾಮದಾಸ್ ಅವರು ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಟಾಂಗ್ ಕೊಟ್ಟಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂ ದೇವಸ್ಥಾನ ತೆರವು ವಿಚಾರ ಕ್ರಮ ಸರಿಯಲ್ಲ ಎಂಬ ಪ್ರತಾಪ್ ಸಿಂಹ ಹೇಳಿಕೆಗೆ ಪ್ರತಿಕ್ರಿಯಿಸಿ, ಈ ವಿಚಾರದಲ್ಲಿ ಅವರ ಅಭಿಪ್ರಾಯ ಬೇರೆ, ನನ್ನ ಅಭಿಪ್ರಾಯ ಬೇರೆ. ಹಿಂದೂ ದೇವಾಲಯಗಳನ್ನು ಏಕಾಏಕಿ ತೆರವು ಮಾಡುತ್ತಿಲ್ಲ. ಮೊದಲು ದೇವಸ್ಥಾನಗಳನ್ನು ಉಳಿಸಿಕೊಳ್ಳಲು ಯೋಚನೆ ಮಾಡಲಾಗುತ್ತಿದೆ ಎಂದಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‍ಗೆ ಸೋನಿಯಾ ಗಾಂಧಿ ಅನಿವಾರ್ಯತೆ ಇದೆ, ನಮಗೆ ಇಲ್ಲ: ಪ್ರತಾಪ್ ಸಿಂಹ

    ಮೊದಲ ಹಂತದಲ್ಲಿ ದೇವಸ್ಥಾನವನ್ನು ಉಳಿಸಿಕೊಳ್ಳಲು ಆಗದಿದ್ದರೆ ಎರಡನೇ ಹಂತದಲ್ಲಿ ಸ್ಥಳಾಂತರಕ್ಕೆ ಚಿಂತನೆ ಮಾಡುತ್ತಿದ್ದೇವೆ. ಇದೆರೆಡು ಸಾಧ್ಯವಾಗದಿದ್ದಾಗ ಮಾತ್ರ ತೆರವು ಕಾರ್ಯ ಮಾಡಲಾಗುತ್ತಿದೆ. ಈ ವಿಚಾರದಲ್ಲಿ ಆ ಧರ್ಮದ್ದು ಈ ಧರ್ಮದ್ದು ಎಂಬುದೇನು ಇಲ್ಲ. ಸುಪ್ರೀಂ ಕೋರ್ಟ್ ಸೂಚನೆಯಂತೆ ಕ್ರಮ ಜರುಗಿಸಲಾಗುತ್ತಿದೆ ಎಂದು ಹೇಳಿದರು.  ಇದನ್ನೂ ಓದಿ: ನಿಮ್ಮ ಧಮ್ಕಿಗೆ ಹೆದರಲ್ಲ – ಪ್ರತಾಪ್ ಸಿಂಹಗೆ ತನ್ವೀರ್ ಸೇಠ್ ತಿರುಗೇಟು

    ನಾವು ಆದಷ್ಟು ಎಲ್ಲಾ ಧಾರ್ಮಿಕ ಕೇಂದ್ರಗಳನ್ನು ಉಳಿಸಿಕೊಳ್ಳಲು ಹಾಗೂ ಸ್ಥಳಾಂತರಿಸಲು ಪ್ರಯತ್ನ ನಡೆಸಿದ್ದೇವೆ. ಈ ವಿಚಾರವನ್ನು ಮುಖ್ಯಮಂತ್ರಿಗಳ ಗಮನಕ್ಕೂ ತರುತ್ತೇವೆ. ಇದರಲ್ಲಿ ಒಂದು ಕ್ಷೇತ್ರ ಒಂದು ಧರ್ಮ ಎಂಬುವ ವಿಚಾರ ಇರುವುದಿಲ್ಲ ಎಂದು ರಾಮದಾಸ್ ತಿಳಿಸಿದ್ದಾರೆ. ಇದನ್ನೂ ಓದಿ: ಮುಂಬೈ ಅತ್ಯಾಚಾರ ಪ್ರಕರಣ- ಚಿಕಿತ್ಸೆ ಫಲಿಸದೆ ಮೃತಪಟ್ಟ ಸಂತ್ರಸ್ತೆ

    ಪ್ರತಾಪ್ ಸಿಂಹ ಹೇಳಿದ್ದೇನು..?

    ಕೇವಲ ಹಿಂದೂ ಧರ್ಮದ ದೇವಸ್ಥಾನಗಳನ್ನು ಮಾತ್ರ ಟಾರ್ಗೆಟ್ ಮಾಡಿದರೆ ಸುಮ್ಮನಿರಲ್ಲ. ರಸ್ತೆ ಆಗಲೀಕರಣಕ್ಕೆ ತೊಂದರೆಯಾಗಿರುವ ಇರ್ವಿನ್ ರಸ್ತೆಯ ಮಸೀದಿಯನ್ನು ತೆರವುಗೊಳಿಸಿಲ್ಲ. ದೇವರಾಜ ರಸ್ತೆಯಲ್ಲಿರುವ ದರ್ಗಾವನ್ನು ಯಾಕೆ ತೆರವು ಮಾಡಿಲ್ಲ ಎಂದು ಮೈಸೂರು ಜಿಲ್ಲಾಡಳಿತದ ವಿರುದ್ಧ ಸಂಸದ ಪ್ರತಾಪ್ ಸಿಂಹ ಕೆಡಿಪಿ ಮೀಟಿಂಗ್‍ನಲ್ಲಿ ಕಿಡಿಕಾರಿದ್ದರು.

     

  • ಹಿಂದೂ ಧಾರ್ಮಿಕ ದತ್ತಿಯಿಂದ ಮಸೀದಿ, ಮದರಸಾಗಳಿಗೆ ತಸ್ತಿಕ್ ಭತ್ತೆ ನೀಡಲು ನಿರ್ಧಾರ- ವಿಹೆಚ್‍ಪಿ ವಿರೋಧ

    ಹಿಂದೂ ಧಾರ್ಮಿಕ ದತ್ತಿಯಿಂದ ಮಸೀದಿ, ಮದರಸಾಗಳಿಗೆ ತಸ್ತಿಕ್ ಭತ್ತೆ ನೀಡಲು ನಿರ್ಧಾರ- ವಿಹೆಚ್‍ಪಿ ವಿರೋಧ

    – ನಿರ್ಧಾರ ಹಿಂಪಡೆಯಲು ಆಗ್ರಹ

    ಮಂಗಳೂರು: ರಾಜ್ಯದಲ್ಲಿ ಕೋವಿಡ್ 19 ಸೋಂಕಿನಿಂದಾಗಿ ಅರ್ಚಕರು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ಕಾರಣ ಸರ್ಕಾರದಿಂದ ತಸ್ತಿಕ್ ಭತ್ತೆ ನೀಡಲು ಆದೇಶಿಸಿದನ್ನು ವಿಶ್ವ ಹಿಂದೂ ಪರಿಷತ್ ಸ್ವಾಗತಿಸುತ್ತದೆ. ಆದರೆ ಅದೇ ಆದೇಶದ ಪ್ರಕಾರ ತಸ್ತಿಕ್ ಹಣವನ್ನು ಹಿಂದೂ ಧಾರ್ಮಿಕ ದತ್ತಿ ಇಲಾಖೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ 41 ಮಸೀದಿ, ಮದರಸಾದ ಮೌಲ್ವಿಗಳಿಗೆ ನೀಡಲು ನಿರ್ಧರಿಸಿದ್ದನ್ನು ವಿಶ್ವ ಹಿಂದೂ ಪರಿಷದ್ ವಿರೋಧಿಸುತ್ತದೆ.

    ದೈವಸ್ಥಾನ, ದೇವಸ್ಥಾನದ ಹಣವನ್ನು ಹಿಂದೂಗಳಿಗೆ ಮತ್ತು ದೇವಸ್ಥಾನದ ಕಾರ್ಯಗಳಿಗೆ ಮಾತ್ರ ಉಪಯೋಗಿಸಬೇಕು ವಿನಃ ಮಸೀದಿ, ಮದರಸಾಗಳಿಗೆ ಉಪಯೋಗಿಸುವುದನ್ನು ಖಂಡಿಸುವ ಮೂಲಕ ಈ ನಿರ್ಧಾರವನ್ನು ಹಿಂಪಡೆಯಬೇಕೆಂದು ಧಾರ್ಮಿಕ ದತ್ತಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮನವಿ ಸಲ್ಲಿಸಲಾಯಿತು.

    ಮನವಿಗೆ ಸ್ಪಂದಿಸಿದ ಸಚಿವರು ನಿರ್ಧಾರವನ್ನು ಹಿಂದೆ ಪಡೆಯುವುದಾಗಿ ಭರವಸೆ ಕೊಟ್ಟರು. ವಿಶ್ವ ಹಿಂದೂ ಪರಿಷದ್ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ ವೆಲ್, ಜಿಲ್ಲಾ ಅಧ್ಯಕ್ಷ ಗೋಪಾಲ್ ಕುತ್ತಾರ್, ಜಿಲ್ಲಾ ಕಾರ್ಯದರ್ಶಿ ಶಿವಾನಂದ್ ಮೆಂಡನ್, ಜಿಲ್ಲಾ ಉಪಾಧ್ಯಕ್ಷರು ಮನೋಹರ್ ಸುವರ್ಣ, ಜಿಲ್ಲಾ ಸಂಚಾಲಕ್ ಪುನೀತ್ ಅತ್ತಾವರ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.  ಇದನ್ನೂ ಓದಿ: ಕೈಗಾರಿಕೆಗಳು, ಆಸ್ಪತ್ರೆಗಳಿಗೆ ಆಮ್ಲಜನಕ ಸರಬರಾಜು ಮೇಲುಸ್ತುವಾರಿಗೆ ಜಿಲ್ಲೆಗಳಲ್ಲಿ ನೋಡಲ್ ಅಧಿಕಾರಿ: ಶೆಟ್ಟರ್