Tag: mass fever

  • ಗ್ರಾಮದಲ್ಲಿ ಸಾಮೂಹಿಕ ಜ್ವರ -ಯುವತಿ ಸಾವು

    ಗ್ರಾಮದಲ್ಲಿ ಸಾಮೂಹಿಕ ಜ್ವರ -ಯುವತಿ ಸಾವು

    ಚಾಮರಾಜನಗರ: ಗ್ರಾಮದಲ್ಲಿ ಸಾಮೂಹಿಕ ಜ್ವರದಿಂದ ಗ್ರಾಮಸ್ಥರು ಬಳುತ್ತಿದ್ದು, ಯುವತಿಯೊಬ್ಬಳು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಉಯಿಲನತ್ತ ಗ್ರಾಮದಲ್ಲಿ ನಡೆದಿದೆ.

    ಜ್ವರಕ್ಕೆ ತುತ್ತಾಗಿ ಸಾವನ್ನಪ್ಪಿದ ಯುವತಿಯನ್ನು 20 ವರ್ಷದ ಗೀತಾ ಎಂದು ಗುರುತಿಸಲಾಗಿದೆ. ಹನೂರು ತಾಲೂಕು ಉಯಿಲನತ್ತ ಗ್ರಾಮದಲ್ಲಿ 80ಕ್ಕೂ ಹೆಚ್ಚು ಕುಟುಂಬಗಳಿದ್ದು ಪ್ರತಿ ಕುಟುಂಬದಲ್ಲೂ ಒಬ್ಬರಲ್ಲ ಒಬ್ಬರು ಜ್ವರ, ಮೈ-ಕೈನೋವು, ಮೂಳೆ ನೋವು, ಸಂಧಿನೋವಿನಿಂದ ಬಳಲುತ್ತಿದ್ದಾರೆ. ಇವರಿಗೆ ಕೇವಲ ಮಾತ್ರೆ ನೀಡಿ ಮತ್ತೆ ಯಾವುದೇ ಚಿಕಿತ್ಸೆ ನೀಡದೆ ಆರೋಗ್ಯ ಇಲಾಖೆ ನಿರ್ಲಕ್ಷ್ಯ ವಹಿಸಿದೆ.

    ತೀವ್ರ ಜ್ವರ ಹಾಗು ಸಂಧಿನೋವಿನಿಂದ ಬಳಲುತ್ತಿರುವುದರಿಂದ ಪಕ್ಕದ ಊರುಗಳಿಗೆ ತೆರಳಿ ಚಿಕಿತ್ಸೆ ಪಡೆಯುಲು ಸಾಧ್ಯವಾಗದೆ ಗ್ರಾಮಸ್ಥರು ಪರದಾಡುತ್ತಿದ್ದಾರೆ. ಆದರೆ ನಾಮಕಾವಾಸ್ತೆಗೆ ಮಾತ್ರೆ ಕೊಟ್ಟು ಆರೋಗ್ಯ ಇಲಾಖೆ ನಿರ್ಲಕ್ಷ್ಯ ವಹಿಸಿದೆ. ಇಲಾಖೆಯಿಂದ ಗ್ರಾಮದಲ್ಲೇ ಒಂದು ಕ್ಯಾಂಪ್ ಮಾಡಿ ಸಮರ್ಪಕ ಚಿಕಿತ್ಸೆ ನೀಡಬೇಕು ಇಲ್ಲವೇ ತಾಲೂಕು ಆಸ್ಪತ್ರೆ ಹಾಗೂ ಜಿಲ್ಲಾಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.