Tag: mass jathra

  • ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಲಿದ್ದಾರೆ ರವಿತೇಜ ಪುತ್ರಿ

    ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಲಿದ್ದಾರೆ ರವಿತೇಜ ಪುತ್ರಿ

    ಟಾಲಿವುಡ್ ನಟ ರವಿತೇಜ (Ravi Teja) ಸದಾ ಹೊಸ ಬಗೆಯ ಪಾತ್ರಗಳ ಗಮನ ಸೆಳೆಯುತ್ತಲೇ ಇರುತ್ತಾರೆ. ಇದೀಗ ಅವರ ಮುದ್ದಿನ ಮಗಳು ಮೋಕ್ಷಧಾ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಲು ರೆಡಿಯಾಗಿದ್ದಾರೆ. ಇದನ್ನೂ ಓದಿ:ಭಾರತದಲ್ಲೇ ಮೊದಲ ಬಾರಿಗೆ ಅನಿರುದ್ಧ್ ಹುಕುಂ ಟೂರ್

    ರವಿತೇಜ ಮಗ ಮಹಾಧನ್ ನಿರ್ದೇಶಕನಾಗುವ ಕನಸು ಕಾಣುತ್ತಿದ್ದಾರೆ. ಇತ್ತ ಪುತ್ರಿ ಮೋಕ್ಷಧಾ (Mokshadha) ನಿರ್ಮಾಪಕಿಯಾಗುವ ನಿರ್ಣಯಕ್ಕೆ ಬಂದಿದ್ದಾರೆ. ಸಿನಿಮಾವೊಂದರಲ್ಲಿ ಕಾರ್ಯಕಾರಿ ನಿರ್ಮಾಪಕಿ ಆಗಿ ಅವರು ಕೈಜೋಡಿಸಲಿದ್ದಾರೆ. ಇದನ್ನೂ ಓದಿ:ಮಚ್ಚು ಹಿಡಿದು ರೀಲ್ಸ್ ಪ್ರಕರಣ; ವಿನಯ್‌ ಗೌಡ – ರಜತ್‌ ನಡುವೆ ಬಿರುಕು?

    ವಿನೋದ್ ನಿರ್ದೇಶನದ ಹಾಗೂ ಆನಂದ್ ದೇವರಕೊಂಡ ನಟನೆಯ ಸಿನಿಮಾದಲ್ಲಿ ಮೋಕ್ಷಧಾ ಕಾರ್ಯಕಾರಿ ನಿರ್ಮಾಪಕಿ ಆಗಿ ಚಿತ್ರತಂಡ ಸೇರಿಕೊಳ್ಳಲಿದ್ದಾರೆ. ಈ ಸಿನಿಮಾವನ್ನು ಸಿತಾರಾ ಸಂಸ್ಥೆ ನಿರ್ಮಾಣ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ರವಿತೇಜ ಅವರ ನಿರ್ಮಾಣ ಸಂಸ್ಥೆ ನೋಡಿಕೊಳ್ಳಲು ಈಗ ತರಬೇತಿ ಪಡೆಯುತ್ತಿದ್ದಾರೆ. ಈ ವಿಚಾರದ ಕುರಿತು ಇನ್ನೂ ಅಧಿಕೃತ ಘೋಷಣೆ ಆಗಬೇಕಿದೆ.

    ಅಂದಹಾಗೆ, ಶ್ರೀಲೀಲಾ ಜೊತೆ ರವಿತೇಜ ‘ಮಾಸ್ ಜಾತ್ರಾ’ ಎಂಬ ಸಿನಿಮಾ ಮಾಡಿದ್ದಾರೆ. ಈ ಚಿತ್ರದ ರಿಲೀಸ್‌ಗೆ ಫ್ಯಾನ್ಸ್ ಎದುರು ನೋಡ್ತಿದ್ದಾರೆ.