Tag: mass rape

  • ವರದಕ್ಷಿಣೆ ನೀಡ್ಲಿಲ್ಲ ಅಂತ ಪತ್ನಿ ಮೇಲೆ ಸಾಮೂಹಿಕ ಅತ್ಯಾಚಾರ – ವೀಡಿಯೋ ವೈರಲ್ ಮಾಡಿ ಹಣ ಗಳಿಸುತ್ತೇನೆಂದ ಪತಿ

    ವರದಕ್ಷಿಣೆ ನೀಡ್ಲಿಲ್ಲ ಅಂತ ಪತ್ನಿ ಮೇಲೆ ಸಾಮೂಹಿಕ ಅತ್ಯಾಚಾರ – ವೀಡಿಯೋ ವೈರಲ್ ಮಾಡಿ ಹಣ ಗಳಿಸುತ್ತೇನೆಂದ ಪತಿ

    ಜೈಪುರ: ಒಂದೂವರೆ ಲಕ್ಷ ರೂಪಾಯಿ ವರದಕ್ಷಿಣೆ ನೀಡಲಿಲ್ಲ ಎಂಬ ಕಾರಣಕ್ಕೆ ಪತ್ನಿ ಮೇಲೆ ಸಂಬಂಧಿಕರಿಂದಲೇ ಪತಿಯೊಬ್ಬ ಸಾಮೂಹಿಕ ಅತ್ಯಾಚಾರ ಎಸಗಿಸಿರುವ ಘಟನೆ ರಾಜಸ್ಥಾನದ ಭರತ್‍ಪುರದಲ್ಲಿ ನಡೆದಿದೆ. ಅಲ್ಲದೇ ಗ್ಯಾಂಗ್ ರೇಪ್ ವೀಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದಾನೆ.

    RAPE

    ಯೂಟ್ಯೂಬ್‍ನಲ್ಲಿ ಲೈಂಗಿಕ ದೌರ್ಜನ್ಯದ ವೀಡಿಯೋವನ್ನು ಅಪ್‍ಲೋಡ್ ಮಾಡುವ ಮೂಲಕ ಬರಬೇಕಾಗಿರುವ ವರದಕ್ಷಿಣೆ ಹಣವನ್ನು ಪಡೆಯುತ್ತೇನೆ ಎಂದು ಪತಿ ತನ್ನ ಹೆಂಡತಿಗೆ ಹೇಳಿದ್ದಾನೆ. ಇದೀಗ ಸಂತ್ರಸ್ತೆ ಪತಿ ಮತ್ತು ಆತನ ಸಂಬಂಧಿಕರಿಬ್ಬರ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದಾಳೆ. ಇದನ್ನೂ ಓದಿ: ಮದುವೆ ಮನೆಯಲ್ಲಿ ಗುಂಡಿನ ದಾಳಿ – ಮಹಿಳೆಗೆ ಗಾಯ

    ಭರತ್‍ಪುರದ ಕಮಾನ್ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ ದೌಲತ್ ಸಾಹು ಅವರು, ಮಹಿಳೆಯೊಬ್ಬಳು ತನ್ನ ಪತಿ ಮತ್ತು ಇಬ್ಬರು ಸಂಬಂಧಿಕರು ಅತ್ಯಾಚಾರ ಎಸಗಿರುವುದಾಗಿ ದೂರು ದಾಖಲಿಸಿದ್ದಾಳೆ. ಅಲ್ಲದೇ ಯೂಟ್ಯೂಬ್‍ಗೆ ಅಶ್ಲೀಲ ವೀಡಿಯೋ ಅಪ್‍ಲೋಡ್ ಮಾಡಲಾಗಿದೆ ಎಂಬ ಮಾತು ಕೇಳಿ ಬರುತ್ತಿದೆ. ಆದರೆ ಈ ಬಗ್ಗೆ ಖಚಿತ ಮಾಹಿತಿ ಇಲ್ಲ ಎಂದು ತಿಳಿಸಿದ್ದಾರೆ.

    POLICE JEEP

    ದೂರಿನಲ್ಲಿ ಸಂತ್ರಸ್ತೆ, ನನ್ನ ಅತ್ತೆಯಂದಿರು ವರದಕ್ಷಿಣೆಗಾಗಿ ನನಗೆ ಕಿರುಕುಳ ನೀಡುತ್ತಿದ್ದರು. ಅವರಿಗೆ ವರದಕ್ಷಿಣೆ ನೀಡದಿದ್ದಾಗ, ಅವರು ನನ್ನ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಪತಿಯ ಸಂಬಂಧಿಕರು ನನ್ನ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ನಡೆಸಿದ್ದಾರೆ ಮತ್ತು ಘಟನೆಯನ್ನು ಮೊಬೈಲ್‍ನಲ್ಲಿ ಸೆರೆ ಹಿಡಿದು, ಆ ವೀಡಿಯೋವನ್ನು ಯೂಟ್ಯೂಬ್‍ನಲ್ಲಿ ಅಪ್ಲೋಡ್ ಮಾಡಿದ್ದಾರೆ ಎಂದು ಉಲ್ಲೇಖಿಸಿದ್ದಾಳೆ.  ಇದನ್ನೂ ಓದಿ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯನ್ನು ಭೇಟಿಯಾದ ಶರದ್ ಪವಾರ್

    2019ರಲ್ಲಿ ದಂಪತಿ ಹರಿಯಾಣದಲ್ಲಿ ಮದುವೆಯಾಗಿದ್ದು, ಅಂದಿನಿಂದ ಮಹಿಳೆಗೆ ಅತ್ತೆ ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದರು. ಈ ಕಾರಣದಿಂದ ಆಕೆ ತನ್ನ ಪೋಷಕರ ಮನೆಗೆ ಮರಳಿದ್ದಳು. ಆದರೆ ಪತಿ ಮತ್ತೆ ಆಕೆಯನ್ನು ಮನೆಗೆ ಕರೆದುಕೊಂಡು ಬಂದಿದ್ದನು. ನಂತರ ಪತಿ ತನ್ನ ಇಬ್ಬರು ಸಂಬಂಧಿಕರನ್ನು ಮನೆಗೆ ಕರೆದುಕೊಂಡು ಬಂದು ಸಂತ್ರಸ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸುವಂತೆ ಸಂಬಂಧಿಕರಿಗೆ ಹೇಳಿ, ಘಟನೆಯನ್ನು ತನ್ನ ಮೊಬೈಲ್‍ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದಾನೆ ಮತ್ತು ನಿಮ್ಮ ಕುಟುಂಬಸ್ಥರು ನನಗೆ ವರದಕ್ಷಿಣೆ ನೀಡಲು ಸಾಧ್ಯವಾಗಲಿಲ್ಲ. ಹಾಗಾಗಿ ನಾನು ಈ ವೀಡಿಯೋವನ್ನು ಯೂಟ್ಯೂಬ್‍ನಲ್ಲಿ ಹಾಕುವ ಮೂಲಕ ಅದೇ ಮೊತ್ತವನ್ನು ಗಳಿಸುತ್ತೇನೆ ಎಂದು ಹೇಳಿ ಅಶ್ಲೀಲ ವೀಡಿಯೋವನ್ನು ಯೂಟ್ಯೂಬ್‍ನಲ್ಲಿ ಅಪ್‍ಲೋಡ್ ಮಾಡಿದ್ದಾನೆ ಎಂದು ಸಂತ್ರಸ್ತೆ ಆರೋಪಿಸಿದ್ದಾಳೆ.

  • ಸಾಮೂಹಿಕ ಅತ್ಯಾಚಾರ ಮಾಡಿ ಮಹಿಳೆಯನ್ನು ಕೊಲೆಗೈದ ಪಾಪಿಗಳು

    ಸಾಮೂಹಿಕ ಅತ್ಯಾಚಾರ ಮಾಡಿ ಮಹಿಳೆಯನ್ನು ಕೊಲೆಗೈದ ಪಾಪಿಗಳು

    ಜೈಪುರ: ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ, ಆಕೆಯನ್ನು ಕೊಲೆಗೈದಿರುವ ಘಟನೆ ರಾಜಸ್ಥಾನದ ದೌಸಾದಲ್ಲಿ ನಡೆದಿದೆ. ಈ ಹಿನ್ನೆಲೆ  ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

    ರಾಜಸ್ಥಾನದ ದೌಸಾ ಜಿಲ್ಲೆಯ ಹಳ್ಳಿಯೊಂದರಲ್ಲಿ ಭಾನುವಾರ 35 ವರ್ಷದ ಮಹಿಳೆ ಮೇಲೆ ಗ್ಯಾಂಗ್ ರೇಪ್ ಮಾಡಿದ ಪಾಪಿಗಳು, ಆಕೆಯನ್ನು ಕೊಲೆ ಮಾಡಿದ್ದರು. ಈ ಪರಿಣಾಮ ಪೊಲೀಸರು ಆರೋಪಿಗಳಿಗಾಗಿ ಬಲೆ ಹಾಕಿದ್ದು, ಸೋಮವಾರ ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಇತರ ಆರೋಪಿಗಳನ್ನು ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಮಾಲೀಕನ ಅನುಮತಿ ಇಲ್ಲದೇ ಸಮೋಸಾ ತಿಂದಿದ್ದಕ್ಕೆ ಕೊಲೆ

    KILLING CRIME

    ನಡೆದಿದ್ದೇನು?
    ಈ ಕುರಿತು ದೌಸಾದ ಪೊಲೀಸ್ ಅಧೀಕ್ಷಕ ರಾಜ್‍ಕುಮಾರ್ ಗುಪ್ತಾ ವಿವರಿಸಿದ್ದು, ಮಹಿಳೆ ಭಾನುವಾರ ಬೆಳಗ್ಗೆ ಜೈಪುರದಿಂದ ದೌಸಾಗೆ ಬಸ್ಸಿನಲ್ಲಿ ಹೋಗುತ್ತಿದ್ದಳು. ಬಸ್ಸನ್ನು ಇಳಿದು ತನ್ನ ಪೋಷಕರ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಆರೋಪಿಗಳು ತಮ್ಮ ಕಾರಿನಲ್ಲಿ ಲಿಫ್ಟ್ ನೀಡುವುದಾಗಿ ಹತ್ತಿಸಿಕೊಂಡಿದ್ದಾರೆ.

    ಮಹಿಳೆ ಕೇಳಿದ ಜಾಗಕ್ಕೆ ಬಿಟ್ಟು ಬೇರೆ ಪ್ರದೇಶಕ್ಕೆ ಕರೆದುಕೊಂಡು ಹೋದ ಆರೋಪಿಗಳು, ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ನಂತರ ಆರೋಪಿಗಳು ಮಹಿಳೆಯನ್ನು ಕೊಂದು ಆಕೆಯ ದೇಹವನ್ನು ಬಾವಿಗೆ ಎಸೆದು ಪರಾರಿಯಾಗಿದ್ದಾರೆ. ಇದನ್ನೂ ಓದಿ:  ಮಹಿಳಾ ಪೊಲೀಸ್ ಮೇಲೆ ಹಲ್ಲೆ ಆರೋಪ – ಜಿಗ್ನೇಶ್ ಮೇವಾನಿ ವಿರುದ್ಧ ಮತ್ತೊಂದು ಕೇಸ್

    ಸೋಮವಾರ ಬೆಳಗ್ಗೆ ಮಹಿಳೆಯ ಶವವನ್ನು ಬಾವಿಯಿಂದ ಹೊರತೆಗೆಯಲಾಯಿತು. ಪ್ರಸ್ತುತ ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಅಪರಾಧಕ್ಕೆ ಬಳಸಿದ ಕಾರನ್ನು ಗುರುತಿಸಲಾಗಿದೆ. ಈ ಆಧಾರ ಮೇಲೆ ಆರೋಪಿಗಳನ್ನು ಹುಡುಕುತ್ತಿದ್ದೇವೆ ಎಂದು ಹೇಳಿದ್ದಾರೆ.