Tag: Massive Fire

  • ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ – ಒಂದೇ ಕುಟುಂಬದ ನಾಲ್ವರು ಸೇರಿ ಐವರು ಸಜೀವ ದಹನ

    ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ – ಒಂದೇ ಕುಟುಂಬದ ನಾಲ್ವರು ಸೇರಿ ಐವರು ಸಜೀವ ದಹನ

    ಬೆಂಗಳೂರು: ಇಲ್ಲಿನ ಕೆ.ಆರ್ ಮಾರ್ಕೆಟ್ (KR Market) ಬಳಿಯ ನಗರ್ತಪೇಟೆಯ ವಾಣಿಜ್ಯ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ (Massive Fire) ಒಂದೇ ಕುಟುಂಬದ ನಾಲ್ವರು ಸೇರಿ ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ.

    ದುರಂತದಲ್ಲಿ ಸಜೀವ ದಹನವಾದ ಮದನ್ (38), ಪತ್ನಿ ಸಂಗೀತಾ (33) ಮಿತೇಶ್ (8), ವಿಹಾನ್ (5) ಒಂದೇ ಕುಟುಂಬದವರಾಗಿದ್ದು, ಮತ್ತೊಂದು ಮಹಡಿಯಲ್ಲಿ ಸುರೇಶ್‌ ಎಂಬವರೂ ಸುಟ್ಟು ಕರಕಲಾಗಿದ್ದಾರೆ. ಇದನ್ನೂ ಓದಿ: ಮುಂಬೈನಲ್ಲಿ ಭಾರೀ ಮಳೆಯಿಂದ ಭೂಕುಸಿತ – ಇಬ್ಬರು ಸಾವು, ಇಂದು ರೆಡ್ ಅಲರ್ಟ್ ಘೋಷಣೆ

    ಇನ್ನೂ ಘಟನಾ ಸ್ಥಳಕ್ಕೆ ನಗರ ಪೊಲೀಸ್‌ ಆಯುಕ್ತ (Bengaluru Police Commissioner) ಸೀಮಂತ್‌ ಕುಮಾರ್‌ ಸಿಂಗ್‌ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ರಾತ್ರಿ 2.30ರ ಸುಮಾರಿಗೆ ಅಗ್ನಿ ಅವಗಢ ಸಂಭವಿಸಿದ ಮಾಹಿತಿ ಬಂತು. ಅಗ್ನಿಶಾಮಕ ದಳದವರು ನಮ್ಮ ಪೊಲೀಸ್ರು ಪರಿಶೀಲನೆ ಮಾಡ್ತಿದ್ದಾರೆ. ಗ್ರೌಂಡ್ ಫ್ಲೋರ್ ನಲ್ಲಿರುವ ಗೋಡೌನ್ ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ನಂತರ ಅದು ಮೇಲಿನ ಫ್ಲೋರ್ ಗಳಿಗೆ ಆವರಿಸಿದೆ. ಬೆಂಕಿ ಹೊತ್ತಿಕೊಂಡ ಕೂಡಲೇ ಕಟ್ಟಡದಲ್ಲಿದ್ದ ಬಹುತೇಕ ಜನ ಓಡಿ ಹೋಗಿದ್ದಾರೆ. ಆದ್ರೆ ಒಂದು ಫ್ಯಾಮಿಲಿ ಮಾತ್ರ ಬೆಂಕಿ ಕೆನ್ನಾಲಿಗೆಗೆ ಸಿಲುಕಿಕೊಂಡಿದೆ.

    ಎರಡು ಮೃತದೇಹಗಳನ್ನ ಈಗಾಗಲೇ ಹೊರ ತೆಗೆಯಲಾಗಿದೆ. ಮೇಲಿನ ಫ್ಲೋರ್ ನಲ್ಲಿ ಕಂಪ್ಲೀಟ್ ಬೆಂಕಿ, ಹೊಗೆ ಆವರಿಸಿದೆ ಒಳಗಡೆ ಹೋಗೋದಕ್ಕೆ ಆಗ್ತಿಲ್ಲ, ಹೀಗಾಗಿ ಒಳಗಡೆ ಸಿಲುಕಿದವರನ್ನ ಹುಡುಕಲು ಆಗ್ತಿಲ್ಲ. ಕಾರ್ಯಾಚರಣೆ ಮುಂದುವರಿಸಲಾಗಿದೆ. ಅಗ್ನಿಶಾಮಕ ಸಿಬ್ಬಂದಿ, ವಿಧಿವಿಜ್ಞಾನ ಪ್ರಯೋಗಾಲಯ ಅಧಿಕಾರಿಗಳು ಹಾಗೂ ನಮ್ಮ ರಕ್ಷಣಾ ತಂಡದವರು ಕಾರ್ಯಾಚರಣೆ ಮಾಡ್ತಿದ್ದಾರೆ. ಇನ್ನು ಮೃತದೇಹಗಳು ಇರುವ ಶಂಕೆ ಇದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು | ನಗರ್ತಪೇಟೆಯಲ್ಲಿ ಭೀಕರ ಅಗ್ನಿ ದುರಂತ – ಓರ್ವ ಸುಟ್ಟು ಕರಕಲು, ಸಾವಿನ ಸಂಖ್ಯೆ ಏರಿಕೆ ಸಾಧ್ಯತೆ

    ಏನಿದು ದುರಂತ?
    ಕೆ.ಆರ್ ಮಾರ್ಕೆಟ್ ಬಳಿಯ ನಗರ್ತಪೇಟೆಯ ವಾಣಿಜ್ಯ ಕಟ್ಟಡದಲ್ಲಿದ್ದ ಮಹಡಿ ಮನೆಯಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಡಿತ್ತು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ್ದ ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಸ್ಥಳದಲ್ಲಿ ಅಂಬುಲೆನ್ಸ್‌ಗಳನ್ನ ನಿಯೋಜನೆ ಮಾಡಲಾಗಿದೆ. ಇದನ್ನೂ ಓದಿ: ಸರ್ಕಾರ ಧರ್ಮಸ್ಥಳದ ಜೊತೆಗಿರುತ್ತೆ, ದಿಕ್ಕು ತಪ್ಪಿಸಿದವರನ್ನ ನಾವು ಬಿಡಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

  • ಬೆಂಗಳೂರು | ನಗರ್ತಪೇಟೆಯಲ್ಲಿ ಭೀಕರ ಅಗ್ನಿ ದುರಂತ – ಓರ್ವ ಸುಟ್ಟು ಕರಕಲು, ಸಾವಿನ ಸಂಖ್ಯೆ ಏರಿಕೆ ಸಾಧ್ಯತೆ

    ಬೆಂಗಳೂರು | ನಗರ್ತಪೇಟೆಯಲ್ಲಿ ಭೀಕರ ಅಗ್ನಿ ದುರಂತ – ಓರ್ವ ಸುಟ್ಟು ಕರಕಲು, ಸಾವಿನ ಸಂಖ್ಯೆ ಏರಿಕೆ ಸಾಧ್ಯತೆ

    ಬೆಂಗಳೂರು: ಇಲ್ಲಿನ ಕೆ.ಆರ್ ಮಾರ್ಕೆಟ್ (KR Market) ಬಳಿಯ ನಗರ್ತಪೇಟೆಯ ವಾಣಿಜ್ಯ ಕಟ್ಟಡದಲ್ಲಿದ್ದಲ್ಲಿ ಭೀಕರ ಅಗ್ನಿ ಅವಘಡ (Massive fire) ಸಂಭವಿಸಿದ್ದು, ಓರ್ವ ವ್ಯಕ್ತಿ ಸುಟ್ಟುಕರಕಲಾಗಿರುವ ಘಟನೆ ನಡೆದಿದೆ.

    ರಾಜಸ್ಥಾನ ಮೂಲದ ಮದನ್ ಸಿಂಗ್ ಮೃತಪಟ್ಟಿರುವ‌ ವ್ಯಕ್ತಿ. ವಾಣಿಜ್ಯ ಕಟ್ಟಡದ (Commercial building) 3ನೇ ಅಂತಸ್ಥಿನಲ್ಲಿದ್ದ ಮನೆಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ದುರಂತ ಸಂಭವಿಸಿದೆ. ಈ ವೇಳೆ ಮಳಿಗೆಯಲ್ಲೇ ಇದ್ದ ಮದನ್ ಸಿಂಗ್ ಸಾವನ್ನಪ್ಪಿದ್ದಾನೆ. ಇನ್ನೂ ದುರಂತ ನಡೆದ ಮಳಿಗೆಯಲ್ಲಿ ಒಂದೇ ಕುಟುಂಬದ ಇನ್ನೂ ಮೂವರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಒಟ್ಟು ನಾಲ್ವರು ಮನೆಯಲ್ಲಿ ವಾಸಿಸುತ್ತಿದ್ದರು. ಮನೆಯಲ್ಲಿ ಪತಿ, ಪತ್ನಿ ಹಾಗೂ 8 ಮತ್ತು 5 ವರ್ಷದ ಇಬ್ಬರು ಮಕ್ಕಳಿದ್ದರು. ಮದನ್‌ ಸಿಂಗ್‌ ಎಂಬಾತ ಸಾವನ್ನಪ್ಪಿದ್ದು, ಉಳಿದ ಮೂವರು ಸಾವನ್ನಪ್ಪಿರುವ ಶಂಕ್ಯೆ ವ್ಯಕ್ತವಾಗಿದೆ. ಇದನ್ನೂ ಓದಿ: ಈ ದೇಶಗಳಲ್ಲಿ ಬೀದಿ ನಾಯಿಗಳಿಗೆ ಗ್ಯಾಸ್‌ ಚೇಂಬರ್‌, ದಯಾಮರಣ ಶಿಕ್ಷೆ – ಯಾವ ದೇಶದಲ್ಲಿ ಏನು ಕಾನೂನು?

    ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿರುವ ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಇದರೊಂದಿಗೆ ಸ್ಥಳದಲ್ಲಿ ಮೂರು ಅಂಬುಲೆನ್ಸ್‌ಗಳನ್ನ ನಿಯೋಜನೆ ಮಾಡಲಾಗಿದೆ. ಇದನ್ನೂ ಓದಿ: ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಟ್ರಕ್‌ಗೆ ಬಸ್ ಡಿಕ್ಕಿ – 10 ಮಂದಿ ಯಾತ್ರಿಕರು ಸಾವು

    ಘಟನಾ ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿರುವ ಹಿನ್ನೆಲೆ ರಕ್ಷಣಾ ಸಿಬ್ಬಂದಿ ಆಕ್ಸಿಜನ್ ಸಿಲಿಂಡರ್ ಧರಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇನ್ನೂ ದುರಂತ ನಡೆದ ಮಳಿಗೆಯಲ್ಲಿ ತಾಯಿ-ಮಗು ಒಳಗೆ ಸಿಲುಕಿದ್ದಾರೆಂದು ಹೇಳಲಾಗುತ್ತಿದೆ. ಅವಘಡಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಇದನ್ನೂ ಓದಿ: ಇಂದು ಬಿಜೆಪಿಯಿಂದ ʻಧರ್ಮಸ್ಥಳ ಚಲೋʼ – 500 ಕಾರುಗಳಲ್ಲಿ ಬೃಹತ್‌ ಯಾತ್ರೆ

  • ಸಿಎನ್‌ಜಿ ಟ್ಯಾಂಕರ್‌ ನಡುವೆ ಡಿಕ್ಕಿ – ಧಗಧಗಿಸಿದ ಅಗ್ನಿ ಜ್ವಾಲೆ, ನಾಲ್ವರು ಸಜೀವ ದಹನ

    ಸಿಎನ್‌ಜಿ ಟ್ಯಾಂಕರ್‌ ನಡುವೆ ಡಿಕ್ಕಿ – ಧಗಧಗಿಸಿದ ಅಗ್ನಿ ಜ್ವಾಲೆ, ನಾಲ್ವರು ಸಜೀವ ದಹನ

    ಜೈಪುರ: ರಾಜಸ್ಥಾನ ಜೈಪುರದ ಭಂಕ್ರೋಟಾ ಪ್ರದೇಶದ ಪೆಟ್ರೋಲ್ ಪಂಪ್‌ನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಎರಡು ಸಿಎನ್‌ಜಿ ಟ್ಯಾಂಕರ್‌ಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಪಂಪ್‌ನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಹಲವು ವಾಹನಗಳಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ, ಈ ವೇಳೆ ನಾಲ್ವರು ಸಜೀವ ದಹನವಾಗಿದ್ದಾರೆ.

    ಶುಕ್ರವಾರ (ಇಂದು) ಮುಂಜಾನೆ 5:30ರ ಸುಮಾರಿಗೆ ಅಜ್ಮೀರ್‌ ರಸ್ತೆಯಲ್ಲಿ ಘಟನೆ ನಡೆದಿದೆ. ಟ್ರಕ್‌ ಇತರ ವಾಹನಗಳಿಗೆ ಡಿಕ್ಕಿ ಹೊಡೆದ ನಂತರ ಪೆಟ್ರೋಲ್‌ ಪಂಪ್‌ ಬಳಿ ನಿಲ್ಲಿಸಿದ್ದ ಸಿಎನ್‌ಜಿ ಟ್ಯಾಂಕರ್‌ಗೂ ಬೆಂಕಿ ಹೊತ್ತಿಕೊಂಡಿದೆ. ನಾಲ್ವರು ಸಜೀವ ದಹನವಾಗಿದ್ದಾರೆ. ಸುಮಾರು 15 ಮಂದಿಗೆ ಸುಟ್ಟ ಗಾಯಗಳಾಗಿವೆ. ಅಪಘಾತದಲ್ಲಿ ಗಾಯಗೊಂಡವರನ್ನು ಸವಾಯಿ ಮಾನ್ಸಿಂಗ್ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗಕ್ಕೆ ದಾಖಲು ಮಾಡಲಾಗಿದೆ. ಅಧಿಕಾರಿಗಳ ಪ್ರಕಾರ ಇನ್ನೂ ಹಲವಾರು ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

    ಸದ್ಯ ಪೊಲೀಸರು ಹಾಗೂ ರಕ್ಷಣಾ ತಂಡಗಳು ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ. 20ಕ್ಕೂ ಹೆಚ್ಚು ಅಗ್ನಿಶಾಮಕ ಸಿಬ್ಬಂದಿ ಸ್ಥಳದಲ್ಲೇ ಬೆಂಕಿ ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ. ಸುರಕ್ಷತೆ ದೃಷ್ಟಿಯಿಂದ ಸಮೀಪದ ಮಾರ್ಗವನ್ನು ಬೇರೆಡೆಗೆ ತಿರುಗಿಸಲಾಗಿದೆ. ಅಪಘಾತದ ವೀಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ಸದ್ದು ಮಾಡುತ್ತಿವೆ.

    ಪ್ರಾಥಮಿಕ ಮಾಹಿತಿಯ ಪ್ರಕಾರ, ಇತರ ವಾಹನಗಳಿಗೆ ಡಿಕ್ಕಿ ಹೊಡೆದ ಟ್ರಕ್‌ನಲ್ಲಿ ರಾಸಾಯನಿಕ ತುಂಬಿತ್ತು. ಟ್ರಕ್‌ ಡಿಕ್ಕಿ ಹೊಡೆಯುತ್ತಿದ್ದಂತೆ ಬೆಂಕಿ ಹೊತ್ತಿ, ಇತರ ವಾಹನಗಳಿಗೂ ವ್ಯಾಪಿಸಿದೆ. ಎಷ್ಟು ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಸದ್ಯಕ್ಕೆ ಖಚಿತ ಮಾಹಿತಿ ಇಲ್ಲ. ಸಂತ್ರಸ್ತರನ್ನು ಭೇಟಿ ಮಾಡಲು ರಾಜಸ್ಥಾನ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ಕೂಡ ಆಸ್ಪತ್ರೆಗೆ ಧಾವಿಸಿದ್ದಾರೆ.

  • ಮುಂಬೈನಲ್ಲಿ ಭಾರೀ ಅಗ್ನಿ ಅವಘಡ – 6 ಮಂದಿ ಸಾವು, 40 ಮಂದಿಗೆ ಗಾಯ

    ಮುಂಬೈನಲ್ಲಿ ಭಾರೀ ಅಗ್ನಿ ಅವಘಡ – 6 ಮಂದಿ ಸಾವು, 40 ಮಂದಿಗೆ ಗಾಯ

    ಮುಂಬೈ: ಇಲ್ಲಿನ ಗೋರೆಗಾಂವ್‍ನ (Goregaon) ಬಹುಮಹಡಿ ಕಟ್ಟಡ ಒಂದರಲ್ಲಿ ಇಂದು ಮುಂಜಾನೆ ಸಂಭವಿಸಿದ ಭಾರೀ ಅಗ್ನಿ (Massive Fire) ಅವಘಡದಲ್ಲಿ ಆರು ಜನ ಸಾವಿಗೀಡಾಗಿದ್ದಾರೆ. ಘಟನೆಯಲ್ಲಿ 40 ಮಂದಿ ಗಾಯಗೊಂಡಿದ್ದಾರೆ.

    ಬೆಂಕಿಗೆ ಆಹುತಿಯಾದ ಆರು ಜನರಲ್ಲಿ ಓರ್ವ ಪುರುಷ, ಐವರು ಮಹಿಳೆಯರು ಹಾಗೂ ಇಬ್ಬರು ಮಕ್ಕಳು ಸೇರಿದ್ದಾರೆ. ಗಾಯಗೊಂಡ 40 ಜನರಲ್ಲಿ 12 ಪುರುಷರು ಮತ್ತು 28 ಮಹಿಳೆಯರು, ಓರ್ವ ಅಪ್ರಾಪ್ತ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಮುಂಬೈನ ಎಚ್‍ಬಿಟಿ ಮತ್ತು ಕೂಪರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ರಾಹುಲ್ ಗಾಂಧಿ ಆಧುನಿಕ ಕಾಲದ ರಾವಣ – ಪೋಸ್ಟರ್ ರಿಲೀಸ್ ಮಾಡಿದ ಬಿಜೆಪಿ

    ಗೋರೆಗಾಂವ್‍ನ ಪಶ್ಚಿಮ ಆಜಾದ್ ನಗರದ ಪ್ರದೇಶದ ಜೈ ಭವಾನಿ ಕಟ್ಟಡದಲ್ಲಿ ಮುಂಜಾನೆ 3ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿ ಅವಘಡಕ್ಕೆ ಕಾರಣ ಏನೆಂಬುದನ್ನು ತಿಳಿಯಲು ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿಯವರು ಘಟನೆಗೆ ತೀವ್ರ ವಿಷಾಧ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಮೃತರ ಕುಟುಂಬಕ್ಕೆ ಪಿಎಂ ಪರಿಹಾರ ನಿಧಿಯಿಂದ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 50,000 ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಇದನ್ನೂ ಓದಿ: ಮುಕ್ತ ವಿವಿಯಲ್ಲಿ 250 ಕೋಟಿ ಅಕ್ರಮ – ಎಫ್‌ಐಆರ್‌ ದಾಖಲಿಸಿದ ಸಿಬಿಐ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಆಕಸ್ಮಿಕ ಅಗ್ನಿ ಅವಘಡ – 700 ಮಳಿಗೆಗಳು ಭಸ್ಮ

    ಆಕಸ್ಮಿಕ ಅಗ್ನಿ ಅವಘಡ – 700 ಮಳಿಗೆಗಳು ಭಸ್ಮ

    ಇಟಾನಗರ: ಅರುಣಾಚಲ ಪ್ರದೇಶದ (Arunachal Pradesh) ನಹರ್ಲಗುನ್ ಪ್ರದೇಶದಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡಿದ್ದು, ಅಗ್ನಿ ಅವಘಡದಿಂದ 700ಕ್ಕೂ ಹೆಚ್ಚು ಮಳಿಗೆಗಳು ಸುಟ್ಟು ಭಸ್ಮವಾಗಿವೆ.

    ಇಷ್ಟು ದೊಡ್ಡ ಪ್ರಮಾಣದಲ್ಲಿ ಬೆಂಕಿ (Fire) ಕಾಣಿಸಿಕೊಳ್ಳಲು ನಿಖರ ಕಾರಣ ಏನೆಂಬುದು ತಿಳಿದುಬಂದಿಲ್ಲ. ಸದ್ಯ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ವರದಿಯಾಗಿದೆ. ಇದನ್ನೂ ಓದಿ: ಅಪಾರ್ಟ್‍ಮೆಂಟ್ ಕಿಟಕಿಗಳಿಗೆ ರಾಕೆಟ್ ಬಿಟ್ಟ ಕಿಡಿಗೇಡಿ – ವೀಡಿಯೋ ವೈರಲ್

    ಮೂಲಗಳ ಪ್ರಕಾರ, ಬೆಂಕಿ ಕಾಣಿಸಿಕೊಂಡ ಎರಡು ಗಂಟೆಗಳವರೆಗೆ ಕೇವಲ 2 ಮಳಿಗೆಗಳಿಗೆ ಮಾತ್ರ ಆವರಿಸಿತ್ತು. ಆದರೆ ಅಗ್ನಿಶಾಮಕ ದಳ (Fire Department) ಬೆಂಕಿ ನಿಯಂತ್ರಿಸುವಲ್ಲಿ ವಿಫಲವಾದ್ದರಿಂದ ಗಾಢವಾಗಿ ವ್ಯಾಪಿಸಿದೆ ಎಂದು ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಧಗಧಗನೇ ಹೊತ್ತಿ ಉರಿದ ಸೂರತ್‍ ಬಂದರಿನ ಒಎನ್‍ಜಿಸಿ- ಎದೆ ಝಲ್ ಎನಿಸೋ ಶಬ್ದ- ವಿಡಿಯೋ ನೋಡಿ

    ಧಗಧಗನೇ ಹೊತ್ತಿ ಉರಿದ ಸೂರತ್‍ ಬಂದರಿನ ಒಎನ್‍ಜಿಸಿ- ಎದೆ ಝಲ್ ಎನಿಸೋ ಶಬ್ದ- ವಿಡಿಯೋ ನೋಡಿ

    ಸೂರತ್: ದೇಶದ ಪ್ರಮುಖ ಬಂದರು ಎಂದು ಗುರುತಿಸಿಕೊಂಡಿರುವ ಸೂರತ್‍ನ ಹಜೀರಾ ಬಂದರಿನ ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ಒಎನ್‍ಜಿಸಿ) ಘಟಕದಲ್ಲಿ ಭಾರೀ ಪ್ರಮಾಣದ ಸ್ಫೋಟ ಸಂಭವಿಸಿದೆ.

    ಇಂದು ಮುಂಜಾನೆ 3 ಗಂಟೆ ಸಮಯದಲ್ಲಿ ಸ್ಫೋಟ ಸಂಭವಿಸಿದ್ದು, ಸ್ಥಳೀಯ ನಿವಾಸಿಗಳು ಭಾರೀ ಶಬ್ದ ಕೇಳಿ ನಿದ್ದೆಯಿಂದ ಎಚ್ಚರಗೊಂಡಿದ್ದು, ಬೆಂಕಿಯ ತೀವ್ರತೆಯ ಕಂಡು ಆತಂಕಗೊಂಡಿದ್ದಾರೆ. ಸದ್ಯದ ಮಾಹಿತಿಯ ಅನ್ವಯ, ಹಜೀರಾ ಬಂದರಿನ ಟರ್ಮಿನಲ್‍ನಲ್ಲಿ ಸ್ಫೋಟ ಸಂಭವಿಸಿದೆ ಎನ್ನಲಾಗಿದೆ. ಬೆಂಕಿ ತೀವ್ರತೆಗೆ ಬಂದರಿನ ಆಕಾಶ ಸಂಪೂರ್ಣ ಕೆಂಪಾಗಿ ಬದಲಾಗಿತ್ತು.

    ಘಟನೆ ಕುರಿತಂತೆ ಸ್ಥಳೀಯ ನಿವಾಸಿಗಳು ಬೆಂಕಿ ಹೊತ್ತಿ ಉರಿಸುತ್ತಿರುವ ಸಂದರ್ಭದ ವಿಡಿಯೋ ಹಾಗೂ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಬೆಂಕಿಯ ಕಾರಣದಿಂದ ಘಟನೆ ನಡೆದ ಸ್ಥಳದಿಂದ ಸುಮಾರು 10 ಕಿಮೀ ದೂರದವರೆಗೂ ಗ್ಯಾಸ್ ವಾಸನೆ ಆವರಿಸಿದೆ ಎಂದು ನಿವಾಸಿಗಳು ಹೇಳಿದ್ದರೆ. ಘಟನೆ ನಡೆದ ಸಂದರ್ಭದಲ್ಲಿ ಹಲವರು ಭೂಕಂಪನದಿಂದ ದುರಂತ ನಡೆದಿದೆ ಎಂದು ಹಲವರು ತಪ್ಪಾಗಿ ಭಾವಿಸಿದ್ದರು ಎನ್ನಲಾಗಿದೆ.

    ಸ್ಫೋಟದ ಕುರಿತು ಸ್ಪಷ್ಟನೆ ನೀಡಿರುವ ಒಎನ್‍ಜಿಸಿ, ಹಜೀರಾ ಅನಿಲ ಸಂಸ್ಕರಣಾ ಘಟಕದಲ್ಲಿ ಇಂದು ಬೆಳಗ್ಗೆ ಬೆಂಕಿ ಕಾಣಿಸಕೊಂಡಿದೆ. ಸದ್ಯ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ. ಘಟನೆಯಲ್ಲಿ ಯಾವುದೇ ವ್ಯಕ್ತಿಗೆ ಅಪಘಾತ ಅಥವಾ ಗಾಯವಿಲ್ಲ ಎಂದು ಸ್ಪಷ್ಟಪಡಿಸಿದೆ.

    ಭಾರೀ ಪ್ರಮಾಣದ ಸ್ಫೋಟ ಸಂಭವಿಸಿದ ಕೂಡಲೇ ಘಟನಾ ಸ್ಥಳಕ್ಕೆ ಹತ್ತಿರವಾಗಿದ್ದ ರಿಲಯನ್ಸ್, ಕ್ರಿಬ್ಕೊ, ಎನ್‍ಟಿಪಿಸಿ, ಅದಾನಿ, ಶೆಲ್, ಗೇಲ್, ಜಿಎಸ್‍ಇಜಿ ಮತ್ತು ಇತರ ಹಲವು ಸ್ಥಾವರಗಳನ್ನು ಮುನ್ನೆಚ್ಚರಿಕ ಕ್ರಮವಾಗಿ ಮುಚ್ಚಲಾಗಿದೆ ಎಂಬ ಮಾಹಿತಿ ಲಭಿಸಿದೆ. ಹಜೀರಾ ಬಂದರು ಅರಬ್ಬೀ ಸಮುದ್ರದಿಂದ 8 ಕಿಮೀ ದೂರಲ್ಲಿರುವ ತಪತಿ ನದಿಯ ದಡದಲ್ಲಿದೆ. ಆಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿದ್ದು, ರಕ್ಷಣಾ ಕ್ರಮಗಳನ್ನು ಕೈಗೊಳ್ಳುತ್ತಿದೆ.