Tag: match referee

  • ಐಸಿಸಿಯ ಮೊದಲ ಮಹಿಳಾ ರೆಫ್ರಿಯಾಗಿ ಜಿ.ಎಸ್.ಲಕ್ಷ್ಮೀ ಆಯ್ಕೆ

    ಐಸಿಸಿಯ ಮೊದಲ ಮಹಿಳಾ ರೆಫ್ರಿಯಾಗಿ ಜಿ.ಎಸ್.ಲಕ್ಷ್ಮೀ ಆಯ್ಕೆ

    ನವದೆಹಲಿ: ಐಸಿಸಿಯ ಮೊದಲ ಮಹಿಳಾ ರೆಫ್ರಿಯಾಗಿ ಭಾರತದ ಮಾಜಿ ಕ್ರಿಕೆಟರ್ ಜಿ.ಎಸ್.ಲಕ್ಷ್ಮೀ ಆಯ್ಕೆಯಾಗಿದ್ದಾರೆ.

    ಜಿ.ಎಸ್.ಲಕ್ಷ್ಮೀ ಅವರು 51 ವರ್ಷದವರಾಗಿದ್ದು, 2008-09ರಲ್ಲಿ ನಡೆದ ದೇಶಿಯ ಮಹಿಳಾ ಕ್ರಿಕೆಟ್‍ನಲ್ಲಿ ಮ್ಯಾಚ್ ರೆಫ್ರಿಯಾಗಿದ್ದರು. ಅಷ್ಟೇ ಅಲ್ಲದೆ ಜಿ.ಎಸ್.ಲಕ್ಷ್ಮೀ ಅವರು ಮಹಿಳೆಯರ ಮೂರು ಏಕದಿನ ಪಂದ್ಯ ಹಾಗೂ ಮಹಿಳಾ ಟಿ-20 ಪಂದ್ಯದಲ್ಲಿ ರೆಫ್ರಿಯಾಗಿ ಕಾರ್ಯನಿರ್ವಹಿಸಿದ್ದಾರೆ.

    ಐಸಿಸಿಯ ಈ ಆಯ್ಕೆ ನಿರ್ಧಾರದಿಂದ ಲಕ್ಷ್ಮೀ ಅವರು ಇನ್ನು ಮುಂದೆ ಅಂತರಾಷ್ಟ್ರೀಯ ಕ್ರಿಕೆಟ್ ಪಂದ್ಯದಲ್ಲಿ ರೆಫ್ರಿಯಾಗಿ ಕಾರ್ಯನಿರ್ವಹಿಸಬಹುದಾಗಿದೆ.

    ಈ ಆಯ್ಕೆ ನನಗೆ ಖುಷಿ ತಂದಿದೆ. ನಾನು ಭಾರತದ ಮಹಿಳಾ ಕ್ರಿಕೆಟ್ ಟೀಂ ಆಟಗಾರ್ತಿಯಾಗಿ ಹಾಗೂ ಮ್ಯಾಚ್ ರೆಫ್ರಿಯಾಗಿ ದೀರ್ಘ ಅವಧಿಯ ವೃತ್ತಿಜೀವನ ಕಳೆದಿದ್ದೇನೆ. ನನ್ನ ಸುದೀರ್ಘ ಸೇವೆ, ಆಟಗಾರ್ತಿಯಾಗಿ ಹಾಗೂ ಮ್ಯಾಚ್ ರೆಫ್ರಿಯಾಗಿ ಕೆಲಸ ಮಾಡಿದ ಅನುಭವವನ್ನು ಪರಿಣಿಸಿ ನನ್ನನ್ನು ಆಯ್ಕೆ ಮಾಡಿದ್ದಾರೆ ಎನ್ನುವುದು ನನ್ನ ಅಭಿಪ್ರಾಯವಾಗಿದೆ ಎಂದು ಜಿ.ಎಸ್.ಲಕ್ಷ್ಮೀ ಸಂತಸ ವ್ಯಕ್ತಪಡಿಸಿದ್ದಾರೆ.

    ಐಸಿಸಿ ಅಧಿಕಾರಿಗಳು, ಬಿಸಿಸಿಐ, ಹಿರಿಯರು, ಕುಟುಂಬಸ್ಥರು ನನ್ನ ಬೆಂಬಲಕ್ಕೆ ನಿಂತಿದ್ದಾರೆ. ಎಲ್ಲರಿಗೂ ನಾನು ಧನ್ಯವಾದ ತಿಳಿಸುತ್ತೇನೆ ಎಂದು ಹೇಳಿದ್ದಾರೆ.

  • ಪಂದ್ಯದ ಬಳಿಕ ಮ್ಯಾಚ್ ರೆಫ್ರಿ ರೂಮ್‍ಗೆ ನುಗ್ಗಿದ್ದ ಕೊಹ್ಲಿ!

    ಪಂದ್ಯದ ಬಳಿಕ ಮ್ಯಾಚ್ ರೆಫ್ರಿ ರೂಮ್‍ಗೆ ನುಗ್ಗಿದ್ದ ಕೊಹ್ಲಿ!

    ಬೆಂಗಳೂರು: ಮುಂಬೈ ಇಂಡಿಯನ್ಸ್ ಜೊತೆಗಿನ ಪಂದ್ಯ ಮುಗಿದ ಬಳಿಕ ಆರ್‍ಸಿಬಿ ನಾಯಕ ಕೊಹ್ಲಿ ಮ್ಯಾಚ್ ರೆಫ್ರಿ ರೂಮ್‍ಗೆ ನುಗ್ಗಿದ್ದರು ಎಂದು ಮಾಧ್ಯಮವೊಂದು ವರದಿ ಮಾಡಿದೆ.

    ಪಂದ್ಯದ ಬಳಿಕ ಬಹಿರಂಗವಾಗಿಯೇ ಅಂಪೈರ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದ ಕೊಹ್ಲಿ, ಆ ಬಳಿಕವೂ ಕೋಪಗೊಂಡಿದ್ದರು ಎನ್ನಲಾಗಿದೆ. ಈ ವೇಳೆ ಅಂಪೈರ್ ರವಿ ಕೊಠಡಿಗೆ ಪ್ರವೇಶದ ಮಾಡಿದ್ದ ಕೊಹ್ಲಿ ಅಂಪೈರ್ ರವಿ ವಿರುದ್ಧ ಅವಾಚ್ಯ ಪದವನ್ನು ಬಳಸಿ ನಿಂದನೆ ಮಾಡಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

    ಅಂಪೈರ್ ನಿಂದನೆ ಮಾಡಿದ್ದು ಅಲ್ಲದೇ ಇದರಿಂದ ನನ್ನ ಮೇಲೆ ಯಾವುದೇ ಕ್ರಮಕೈಗೊಂಡರೂ ನನಗೆ ಚಿಂತೆ ಇಲ್ಲ ಎಂದಿದ್ದಾರೆ ಎನ್ನಲಾಗಿದೆ. ಮ್ಯಾಚ್ ರೆಫ್ರಿ ಆಗಿದ್ದ ಮನು ನಯ್ಯರ್ ವಿರುದ್ಧ ಕೂಡ ಕೊಹ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಘಟನೆ ಹಿನ್ನೆಲೆಯಲ್ಲಿ ಶಿಕ್ಷೆ ನೀಡುವುದು ಅನುಮಾನ ಎನ್ನಲಾಗಿದೆ. ಆದರೆ ಫೇರ್ ಪ್ಲೇ ಅವಾರ್ಡ್ ನಲ್ಲಿ ಆರ್‍ಸಿಬಿ ಅಂಕ ಕಳೆದುಕೊಳ್ಳುವ ಸಾಧ್ಯತೆ ಇದೆ.

    ಪಂದ್ಯದಲ್ಲಿ ಅಂಪೈರ್ ಮಾಡಿದ್ದ ಎಡವಿಟ್ಟಿನ ಬಗ್ಗೆ ಇತ್ತಂಡಗಳ ನಾಯಕರು ಕೂಡ ಅಸಮಾಧಾನವನ್ನು ಹೊರಹಾಕಿದ್ದರು. ಅಲ್ಲದೇ ಇದು ಕ್ಲಬ್ ಕ್ರಿಕೆಟ್ ಅಲ್ಲ, ಮತ್ತಷ್ಟು ಎಚ್ಚರಿಕೆ ವಹಿಸುವುದು ಅಗತ್ಯ. ಅಂಪೈರ್ ಕಣ್ಣು ಬಿಟ್ಟು ನೋಡಬೇಕಾಗಿತ್ತು ಎಂದು ಕೊಹ್ಲಿ ಖಾರವಾಗಿಯೇ ಪ್ರತಿಕ್ರಿಯೆ ನೀಡಿದ್ದರು.

  • ಐಪಿಎಲ್ ಮ್ಯಾಚ್‍ಗಳಲ್ಲಿ ಅಂಪೈರ್‍ಗಳಿಗೆ ಎಷ್ಟು ಸಂಬಳ ಸಿಗುತ್ತೆ? ಇಲ್ಲಿದೆ ಮಾಹಿತಿ

    ಐಪಿಎಲ್ ಮ್ಯಾಚ್‍ಗಳಲ್ಲಿ ಅಂಪೈರ್‍ಗಳಿಗೆ ಎಷ್ಟು ಸಂಬಳ ಸಿಗುತ್ತೆ? ಇಲ್ಲಿದೆ ಮಾಹಿತಿ

    ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್‍ನಲ್ಲಿ (ಐಪಿಎಲ್) ಹಣದ ಹೊಳೆ ಹರಿಯುವುದು ನಿಮಗೆ ಗೊತ್ತೆ ಇರುವ ವಿಚಾರ. ಆಟಗಾರರು ಕೋಟಿಗಟ್ಟಲೇ ಹಣಕ್ಕೆ ಸೇಲ್ ಆದರೆ ಅಂಪೈರ್‍ಗಳಿಗೂ ಲಕ್ಷಗಟ್ಟಲೇ ಹಣ ಸಂಬಳ ರೂಪದಲ್ಲಿ ಸಿಗುತ್ತಿದೆ.

    2016ರಲ್ಲಿ ಸಿ.ಕೆ.ನಂದನ್, ಅನಿಲ್ ಚೌಧರಿ ಮತ್ತು ಸಿ.ಸಂಶುದ್ದೀನ್ ಐಪಿಎಲ್ ಪಂದ್ಯಗಳ ಅಂಪೈರ್‍ಗಳಾಗಿ ಕಾರ್ಯನಿರ್ವಹಿಸಿದ್ದು ಇವರು ಹತ್ತಿರ ಹತ್ತಿರ ಒಟ್ಟು 40 ಲಕ್ಷ ರೂ. ಸಂಬಳವನ್ನು ಪಡೆದಿದ್ದಾರೆ.

    2016 ರಲ್ಲಿ ಅನಿಲ್ ಚೌಧರಿ ಅವರು ಸರಿಸುಮಾರು 39.63 ಲಕ್ಷ ಸಂಭಾವನೆಯನ್ನು ಪಡೆದಿದ್ದರೆ, ನಂದನ್ ಸಂಶುದ್ದೀನ್ ಕೂಡ ಸರಿ ಸುಮಾರು 40.83 ಲಕ್ಷ ರೂ. ಸಂಬಳವನ್ನು ಐಪಿಎಲ್‍ನಿಂದ ಪಡೆದಿದ್ದರು.

    ರೆಫ್ರಿಗಳಿಗೂ ಐಪಿಎಲ್ ಒಳ್ಳೆಯ ಸಂಭಾವನೆಯನ್ನ ನೀಡುತ್ತಿದೆ. ಜಾವಗಲ್ ಶ್ರೀನಾಥ್ ಹಲವು ವರ್ಷಗಳಿಂದ ಮ್ಯಾಚ್ ರೆಫ್ರಿಯಾಗಿದ್ದು, ಐಪಿಎಲ್ ನಿಂದ ಬರೋಬ್ಬರಿ 26.42 ಲಕ್ಷ ರೂ. ಸಂಬಳವನ್ನು ಪಡೆದಿದ್ದಾರೆ. ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಶ್ರೀನಾಥ್ ಅವರನ್ನು ಹತ್ತು ವರ್ಷಗಳ ಹಿಂದೆ ಮ್ಯಾಚ್ ರೆಫ್ರಿಯಾಗಿ ನೇಮಕ ಮಾಡಿಕೊಂಡಿತ್ತು. ಇದೂವರೆಗೂ 24 ಟೆಸ್ಟ್, 122 ಅಂತರಾಷ್ಟ್ರೀಯ ಏಕದಿನ ಮತ್ತು 25 ಅಂತರಾಷ್ಟ್ರೀಯ ಟಿ-20 ಪಂದ್ಯಗಳಿಗೆ ಶ್ರೀನಾಥ್ ಮ್ಯಾಚ್ ರೆಫ್ರಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಮತ್ತೊಬ್ಬ ಅಂಪೈರ್ ಕೆ.ಎನ್. ಅನಂತಪದ್ಮನಾಭನ್ ಅವರಿಗೆ 26.65 ಲಕ್ಷ ರೂ.ಸಂಬಳವನ್ನು ಬಿಸಿಸಿಐ ನೀಡಿದೆ.

    ಇದನ್ನೂ ಓದಿ: ಟೀಂ ಇಂಡಿಯಾದ ಬ್ಯಾಟಿಂಗ್, ಫೀಲ್ಡಿಂಗ್ ಕೋಚ್‍ಗೆ 15 ಲಕ್ಷ ರೂ. ಸಂಬಳ!

    ದೆಹಲಿ ಮೂಲದವರಾದ ಅನಿಲ್ ಚೌಧರಿ ವಿಶ್ವ ಕ್ರಿಕೆಟ್‍ನ ಅಂಪೈರ್‍ನಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಅನಿಲ್ ಈಗಾಗಲೇ 39 ಐಪಿಎಲ್ ಮ್ಯಾಚ್‍ಗಳಿಗೆ ನಿರ್ಣಾಯಕರಾಗಿ ಕೆಲಸ ಮಾಡಿದ್ದಾರೆ. ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ 17 ಏಕದಿನ ಪಂದ್ಯಗಳು ಮತ್ತು 16 ಅಂತರಾಷ್ಟ್ರೀಯ ಟಿ-20 ಪಂದ್ಯಗಳಿಗೆ ಅಂಪೈರಾಗಿ ಕೆಲಸ ಮಾಡಿದ್ದಾರೆ.

    ಸಿ.ಕೆ.ನಂದನ್ ಇವರು ಹುಟ್ಟಿದ್ದು ದೆಹಲಿ ಆದರೆ ರಣಜಿ ಕ್ರಿಕೆಟ್‍ನಲ್ಲಿ ಕರ್ನಾಟಕ ರಾಜ್ಯದ ಪರವಾಗಿ ಆಡಿದ್ದಾರೆ. ನಂದನ್ 6 ಅಂತರಾಷ್ಟ್ರೀಯ ಏಕದಿನ ಪಂದ್ಯಗಳು ಮತ್ತು 7 ಅಂತರಾಷ್ಟ್ರೀಯ ಟಿ-20 ಪಂದ್ಯಗಳಿಗೆ ನಿರ್ಣಾಯಕರಾಗಿದ್ದರು.

    ಹೈದರಾಬಾದ್ ನಿವಾಸಿಯಾಗಿರುವ ಸಿ.ಸಂಶುದ್ದೀನ್ ಇದೂವರೆಗೂ 17 ಅಂತರಾಷ್ಟ್ರೀಯ ಏಕದಿನ ಪಂದ್ಯ ಮತ್ತು 11 ಟಿ-20 ಪಂದ್ಯಗಳಿಗೆ ನಿರ್ಣಾಯಕರಾಗಿ ಕೆಲಸ ಮಾಡಿರುವ ಅನುಭವವಿದೆ.

    ಇದನ್ನೂ ಓದಿ: ಆರ್‍ಸಿಬಿ 12 ಕೋಟಿ ನೀಡಿ ಟೈಮಲ್ ಮಿಲ್ಸ್ ಅವರನ್ನೇ ಖರೀದಿಸಿದ್ದು ಯಾಕೆ?