Tag: Maternity

  • ಹೊಟ್ಟೆಯಲ್ಲಿದ್ದ ಮಗು ಅಂಗವೈಕಲ್ಯತೆ ಬಗ್ಗೆ ಪೋಷಕರಿಗೆ ಮಾಹಿತಿ ನೀಡದ ವೈದ್ಯೆ – 11.10 ಲಕ್ಷ ದಂಡ

    ಹೊಟ್ಟೆಯಲ್ಲಿದ್ದ ಮಗು ಅಂಗವೈಕಲ್ಯತೆ ಬಗ್ಗೆ ಪೋಷಕರಿಗೆ ಮಾಹಿತಿ ನೀಡದ ವೈದ್ಯೆ – 11.10 ಲಕ್ಷ ದಂಡ

    ಧಾರವಾಡ: ವೈದ್ಯೋ ನಾರಾಯಣ ಹರಿ ಎನ್ನುವ ಮಾತಿದೆ. ವೈದ್ಯರು ಎಂದರೆ ದೇವರು ಎಂದು ನಂಬಲಾಗುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಈ ಮಾತಿಗೆ ಅನೇಕ ವೈದ್ಯರು (Doctor) ಅಪಚಾರವೆಸಗುವಂತಹ ಕೃತ್ಯ ನಡೆಸುತ್ತಿರುವುದು ಬೆಳಕಿಗೆ ಬರುತ್ತಿವೆ. ಇದೀಗ ಧಾರವಾಡದ (Dharwad) ವೈದ್ಯೆಯೊಬ್ಬರು ಇಂತಹುದೇ ಕೆಲಸ ಮಾಡಿದ್ದು, ಅವರಿಗೆ ನ್ಯಾಯಾಲಯ 11.10 ಲಕ್ಷ ರೂ. ದಂಡ ವಿಧಿಸಿದೆ.

    ಧಾರವಾಡದ ಬಾವಿಕಟ್ಟಿ ಪ್ಲಾಟ್ ಬಡಾವಣೆ ನಿವಾಸಿಯಾಗಿರುವ ಪರಶುರಾಮ ಘಾಟಗೆ ಅವರು ತಮ್ಮ ಪತ್ನಿ ಪ್ರೀತಿ ಗರ್ಭವತಿಯಾದಾಗ (Pregnant), 3 ರಿಂದ 9 ತಿಂಗಳಿನವರೆಗೆ ಧಾರವಾಡದ ಮಾಳಮಡ್ಡಿ ಬಡಾವಣೆಯಲ್ಲಿರುವ ಪ್ರಶಾಂತ ನರ್ಸಿಂಗ್ ಹೋಮ್‌ನ ಡಾ. ಸೌಭಾಗ್ಯ ಕುಲಕರ್ಣಿ ಅವರಿಗೆ ತೋರಿಸಿದ್ದರು. ಒಟ್ಟು 5 ಬಾರಿ ಸ್ಕ್ಯಾನ್ ಮಾಡಿದ್ದರೂ ಗರ್ಭದಲ್ಲಿನ ಮಗುವಿನ (Baby) ಬೆಳವಣಿಗೆ ಚೆನ್ನಾಗಿದೆ ಎಂದು ವೈದ್ಯೆ ಹೇಳಿದ್ದರು. ಹೆರಿಗೆ ನೋವು ಆರಂಭವಾಗಿ, ಆಸ್ಪತ್ರೆಗೆ ಹೋದಾಗ ಸಿಸೇರಿಯನ್ ಮೂಲಕ ಹೆರಿಗೆ ಮಾಡಿಸಲು ಡಾ. ಸೌಭಾಗ್ಯ ಕುಲಕರ್ಣಿ ಸಲಹೆ ನೀಡಿದ್ದರು. ಆದರೆ ಹಣಕಾಸಿನ ತೊಂದರೆಯಿಂದಾಗಿ ಪರಶುರಾಮ ತಮ್ಮ ಪತ್ನಿಯನ್ನು ಧಾರವಾಡದ ಎಸ್‌ಡಿಎಮ್ ಆಸ್ಪತ್ರೆಗೆ ಕರೆದೊಯ್ದಿದ್ದರು.

    husband forced a woman to eat human bones to get pregnant

    2019ರ ಜನವರಿ 31 ರಂದು ಪ್ರೀತಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಆದರೆ ಮಗುವನ್ನು ನೋಡಿದ ತಂದೆ-ತಾಯಿಗೆ ಆಘಾತ ಆಗಿತ್ತು. ಏಕೆಂದರೆ ಮಗುವಿನ ಎರಡೂ ಕಾಲುಗಳು ಅಂಗವಿಕಲತೆಯಿಂದ (Disability) ಕೂಡಿದ್ದವು. ಇದನ್ನು ನೋಡಿದ ಪೋಷಕರಿಗೆ ದಿಕ್ಕು ಕಾಣದಂತೆ ಆಗಿತ್ತು. ಬಳಿಕ ದಂಪತಿ ವೈದ್ಯೆ ಸೌಭಾಗ್ಯ ಕುಲಕರ್ಣಿ ಬಳಿ ಹೋಗಿ ಚರ್ಚೆ ಮಾಡಿದ್ದಾರೆ. ಆದರೆ ವೈದ್ಯೆ ತಮ್ಮ ತಪ್ಪೇ ಇಲ್ಲ ಎಂದಿದ್ದರು.

    ಬಳಿಕ ಮಗುವಿನ ಪೋಷಕರು ಧಾರವಾಡ ಜಿಲ್ಲಾ ವ್ಯಾಜ್ಯಗಳ ಗ್ರಾಹಕರ ನ್ಯಾಯಾಲದ ಮೊರೆ ಹೋಗಿದ್ದರು. ಇದರಲ್ಲಿ ವೈದ್ಯರ ತಪ್ಪಾಗಿದೆ ಎಂದು ಮನಗಂಡು ಡಾ. ಸೌಭಾಗ್ಯ ಕುಲಕರ್ಣಿ ಅವರಿಗೆ ಧಾರವಾಡ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಆಯೋಗ 11.10 ಲಕ್ಷ ರೂ. ದಂಡ ವಿಧಿಸಿದೆ.

    ಸರ್ವೋಚ್ಚ ನ್ಯಾಯಾಲಯದ ತೀರ್ಪುಗಳ ಪ್ರಕಾರ ಹಾಗೂ ಅಲ್ಟ್ರಾಸೌಂಡ್ ಸ್ಕ್ಯಾನ್‌ನ ನಿಯಮಾವಳಿ ಪ್ರಕಾರ ಗರ್ಭಧಾರಣೆಯ 18-20 ವಾರಗಳ ಸ್ಕ್ಯಾನಿಂಗ್‌ನಲ್ಲಿ ಮಗುವಿನ ಆರೋಗ್ಯ, ಅದರ ಅಂಗಾಂಗಗಳು ಸರಿಯಾಗಿ ಇವೆಯೋ ಅಥವಾ ಇಲ್ಲವೋ ಅನ್ನುವ ಬಗ್ಗೆ ತಪಾಸಣೆ ಮಾಡಿದಾಗ ವೈದ್ಯರಿಗೆ ಎಲ್ಲಾ ವಿವರಗಳು ಗೊತ್ತಾಗುತ್ತದೆ. ಆದರೆ ಡಾ. ಸೌಭಾಗ್ಯ ಈ ಎಲ್ಲಾ ವಿಚಾರ ತಿಳಿದಿದ್ದರೂ ದಂಪತಿಗೆ ತಿಳಿಸಿರಲಿಲ್ಲ. ವೈದ್ಯಕೀಯ ನಿರ್ಲಕ್ಷ್ಯ ತೋರಿದ್ದರಿಂದ ಸೇವಾ ನ್ಯೂನ್ಯತೆ ಎಸಗಿದ್ದಾರೆಂದು ಇದರಲ್ಲಿ ಕಂಡು ಬಂದಿದೆ. ದೂರಿನ ಬಗ್ಗೆ ಕೂಲಂಕುಷವಾಗಿ ವಿಚಾರಣೆ ನಡೆಸಿದ ಆಯೋಗ, ವೈದ್ಯೆಗೆ 11.10 ಲಕ್ಷ ರೂ. ಪರಿಹಾರವನ್ನು ಒಂದು ತಿಂಗಳೊಳಗಾಗಿ ದೂರುದಾರರಿಗೆ ನೀಡುವಂತೆ ಆದೇಶಿಸಿದೆ. ಈ ಪರಿಹಾರ ನೀಡದಿದ್ದಲ್ಲಿ ಮೊತ್ತದ ಮೇಲೆ ಶೇ.8 ರಷ್ಟು ಬಡ್ಡಿ ಕೊಡುವಂತೆ ತಜ್ಞ ವೈದ್ಯರಿಗೆ ಆಯೋಗ ಆದೇಶಿಸಿದೆ. ಇದನ್ನೂ ಓದಿ: ಆದಿಯೋಗಿ ಪ್ರತಿಮೆ ವಿವಾದ – ಪಿಐಎಲ್‌ ವಜಾ, ಇಶಾ ಫೌಂಡೇಷನ್‌ಗೆ ಬಿಗ್‌ ರಿಲೀಫ್‌

    ಈ ಬಗ್ಗೆ ವೈದ್ಯೆ ಡಾ. ಸೌಭಾಗ್ಯ ಕುಲಕರ್ಣಿ ಅವರನ್ನು ಕೇಳಿದರೆ, ಇದರಲ್ಲಿ ನನ್ನದೇನೂ ತಪ್ಪಿಲ್ಲ. ಕೆಲವೊಮ್ಮೆ ಇಂತಹ ಘಟನೆಗಳು ನಡೆಯುತ್ತವೆ. ಅಪರೂಪದಲ್ಲಿ ಅಪರೂಪದ ಪ್ರಕರಣವಿದು ಎಂದು ಹೇಳಿದ್ದಾರೆ. ದಂಡದ ಮೊತ್ತದಲ್ಲಿ 8 ಲಕ್ಷ ರೂ. ಯನ್ನು ಮಗುವಿನ ಹೆಸರಿನಲ್ಲಿ, ಆಕೆ ವಯಸ್ಕಳಾಗುವವರೆಗೆ ತಂದೆ-ತಾಯಿ ಇಚ್ಚಿಸುವ ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಠೇವಣಿಯಾಗಿಡಲು ಮತ್ತು ಪರಿಹಾರದ ಪೂರ್ತಿ ಹಣವನ್ನು ಅಂಗವಿಕಲ ಹೆಣ್ಣು ಮಗುವಿನ ಭವಿಷ್ಯಕ್ಕಾಗಿ ಖರ್ಚು ಮಾಡಲು ಆಯೋಗ ತಿಳಿಸಿದೆ. ಇಂತಹದ್ದೊಂದು ತೀರ್ಪು ನೀಡುವ ಮೂಲಕ ಆಯೋಗ ನಿರ್ಲಕ್ಷ್ಯ ತೋರುವ ವೈದ್ಯರಿಗೆ ಎಚ್ಚರಿಕೆಯನ್ನು ನೀಡಿದಂತಾಗಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ 5 ಹೊಸ ಟ್ರಾಫಿಕ್ ಪೊಲೀಸ್ ಠಾಣೆ: ಬೊಮ್ಮಾಯಿ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಅವಳಿ ಮಕ್ಕಳಿಗೆ ಜನ್ಮ ನೀಡಿದ ಕನ್ನಡದ  ಮತ್ತೋರ್ವ ನಟಿ ನಮಿತಾ

    ಅವಳಿ ಮಕ್ಕಳಿಗೆ ಜನ್ಮ ನೀಡಿದ ಕನ್ನಡದ ಮತ್ತೋರ್ವ ನಟಿ ನಮಿತಾ

    ವಿಚಂದ್ರನ್ ನಟನೆಯ ‘ಹೂ’ ಸೇರಿದಂತೆ ಕನ್ನಡದಲ್ಲಿ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿರುವ ಬಹುಭಾಷಾ ನಟಿ ನಮಿತಾ ಕೃಷ್ಣ ಜನ್ಮಾಷ್ಟಮಿ ದಿನದಂದೇ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಈ ವಿಷಯವನ್ನು ಸ್ವತಃ ನಮಿತಾ ಅವರೇ ಸೋಷಿಯಲ್ ಮೀಡಿಯಾದ ಮೂಲಕ ಬಹಿರಂಗ ಪಡಿಸಿದ್ದಾರೆ. ಪತಿಯ ಜೊತೆ ಅವಳಿ ಮಕ್ಕಳ ಪೋಟೋವನ್ನೂ ಅವರು ಸೋಷಿಯಲ್ ಮೀಡಿಯಾದಲ್ಲಿ ಅಪ್ ಲೋಡ್ ಮಾಡಿದ್ದಾರೆ.

    ನಾಲ್ಕು ವರ್ಷಗಳ ಹಿಂದೆ ನಮಿತಾ ಅವರಿಗೆ ಮದುವೆ ಆಗಿತ್ತು. 2017ರಲ್ಲಿ ಚೆನ್ನೈ ಮೂಲದ ವೀರೇಂದ್ರ ಚೌಧರಿ ಅವರ ಜೊತೆ ನಟಿ ಹಸೆಮಣೆ ಏರಿದ್ದರು. ಇತ್ತೀಚೆಗಷ್ಟೇ ಅವರು ಬೇಬಿ ಪಂಪ್ ಫೋಟೋಗಳನ್ನು ಅಭಿಮಾನಿಗಳಿಗಾಗಿ ಹಂಚಿಕೊಂಡಿದ್ದರು. ಸಾಕಷ್ಟು ಅಭಿಮಾನಿಗಳು ನೆಚ್ಚಿನ ನಟಿಗೆ ಶುಭ ಹಾರೈಸಿದ್ದರು. ಮದುವೆಯ ನಂತರ ಸಿನಿಮಾ ರಂಗದಿಂದ ನಮಿತಾ ದೂರವಿದ್ದರೂ, ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಅವರು ಹೊಂದಿದ್ದರು. ಇದನ್ನೂ ಓದಿ:ಉದಯ್‌ ಹಿಂಬದಿಯಿಂದ ತಬ್ಬಿ ಕಿಸ್‌ ಮಾಡ್ತಾರೆ: ಬಿಗ್‌ ಬಾಸ್‌ ಮನೆಯಲ್ಲಿ ಮಹಿಳಾ ಸ್ಪರ್ಧಿಗಳು ಗರಂ

    ನಮಿತಾ ಮೂಲತಃ ಗುಜರಾತ್ ಮೂಲದವರು ಆಗಿದ್ದರು, ಹೆಚಚ್ಉ ಫೇಮಸ್ ಆಗಿದ್ದ ತೆಲುಗು ಸಿನಿಮಾ ರಂಗದ ಮೂಲಕ ಆನಂತರ ಕನ್ನಡ ಸಿನಿಮಾ ರಂಗಕ್ಕೂ ಕಾಲಿಟ್ಟ ಅವರು, ರವಿಚಂದ್ರನ್ ಸೇರಿದಂತೆ ಅನೇಕ ಕಲಾವಿದರ ಚಿತ್ರದಲ್ಲಿ ನಟಿಸಿದ್ದಾರೆ. ಸೊಂತಮ್ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟವರು ನೂರಾರು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಆಕ್ಸಿಜನ್ ಇಲ್ಲದಿದ್ರೂ ಚಿಕಿತ್ಸೆಗೆ ಕರೆದೊಯ್ದ ಚಾಲಕ: ಉಸಿರಾಟದ ಕೊರತೆಯಿಂದ ನವಜಾತ ಶಿಶು ಸಾವು

    ಆಕ್ಸಿಜನ್ ಇಲ್ಲದಿದ್ರೂ ಚಿಕಿತ್ಸೆಗೆ ಕರೆದೊಯ್ದ ಚಾಲಕ: ಉಸಿರಾಟದ ಕೊರತೆಯಿಂದ ನವಜಾತ ಶಿಶು ಸಾವು

    ದಾವಣಗೆರೆ: ರಾಜ್ಯ ಸರ್ಕಾರ ತುರ್ತು ಚಿಕಿತ್ಸಾ ಸಹಾಯಕ್ಕಾಗಿ 108 ಅಂಬುಲೆನ್ಸ್ ಸೇವೆ ಪ್ರಾರಂಭಿಸಿದೆ. ಆದರೆ ಆಂಬುಲೆನ್ಸ್ ನಲ್ಲಿ ಪ್ರಥಮ ಚಿಕಿತ್ಸೆಗೆ ಬೇಕಾದ ಸೂಕ್ತ ಸೌಲಭ್ಯವಿಲ್ಲದೆ ನವಜಾತ ಶಿಶುವೊಂದನ್ನು ಬಲಿ ಪಡೆದುಕೊಂಡಿದೆ.

    ಹೌದು… ಅಂಬುಲೆನ್ಸ್ ನಲ್ಲಿ ಆಕ್ಸಿಜನ್ ಇಲ್ಲದ ಕಾರಣ ಉಸಿರಾಟದ ಕೊರತೆಯಾಗಿ ನವಜಾತ ಶಿಶುವೊಂದು ಮೃತಪಟ್ಟಿರುವ ಘಟನೆ ಚೆನ್ನಗಿರಿ ತಾಲ್ಲೂಕಿನ ಬಸವಪಟ್ಟಣ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಶೃಂಗಾಯಬಾಬು ತಾಂಡದ ಹಾಲೇಶ್ ನಾಯಕ್ ಹಾಗೂ ಸ್ವಾತಿ ದಂಪತಿಯ ಮೊದಲ ಮಗುವೇ ಮೃತಪಟ್ಟಿರುವುದು. ಇದನ್ನೂ ಓದಿ: ಚಂದ್ರು ಹತ್ಯೆ ಕೇಸ್‌ಗೆ ಬಿಗ್ ಟ್ವಿಸ್ಟ್- ಘಟನೆಯ ಇಂಚಿಂಚು ಮಾಹಿತಿ ನೀಡಿದ ಸ್ನೇಹಿತ ಸೈಮನ್ ರಾಜ್

    HOSPITAL

    ಏನಿದು ಘಟನೆ?
    ಶುಕ್ರವಾರ ರಾತ್ರಿ 2 ಗಂಟೆ ವೇಳೆ ಸ್ವಾತಿ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಈ ವೇಳೆ ಬಸವಪಟ್ಟಣ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದು, ಬೆಳಗ್ಗೆ 7 ಗಂಟೆ ವೇಳೆಗೆ ಹೆರಿಗೆ ಮಾಡಿಸಲಾಗಿದೆ. ಮಗುವಿಗೆ ಉಸಿರಾಟ ತೊಂದರೆಯಿದ್ದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಹೊನ್ನಾಳಿಗೆ ಕರೆದೊಯ್ಯಲು ಪೋಷಕರು ಮುಂದಾಗಿದ್ದಾರೆ. ಆದರೆ, ಆಸ್ಪತ್ರೆಗೆ ಕರೆದೊಯ್ಯಬೇಕಿದ್ದ ಆಂಬ್ಯುಲೆನ್ಸ್‌ನಲ್ಲಿ ಆಕ್ಸಿಜನ್ ಇಲ್ಲದಿದ್ದರೂ ಚಾಲಕ ಮಾರ್ಗಮಧ್ಯೆ ಬೇರೊಂದು ಆಂಬುಲೆನ್ಸ್ ಬರುತ್ತದೆ ಎಂದು ಹೇಳಿ ಕರೆದೊಯ್ದಿದ್ದಾನೆ. ಹೊನ್ನಾಳಿಗೆ ತಲುಪುವವರೆಗೂ ಆಕ್ಸಿಜನ್ ಸಿಗದ ಕಾರಣ ಮಗು ಮಾರ್ಗಮಧ್ಯೆಯೇ ಮೃತಪಟ್ಟಿದೆ. ಇದನ್ನೂ ಓದಿ: ಕೆನಡಾ ತುಂಬಾ ಸೇಫ್ ಎನ್ನುತ್ತಿದ್ದ ಭಾರತದ ವಿದ್ಯಾರ್ಥಿ ಗುಂಡೇಟಿಗೆ ಬಲಿ

    108 ambulance karnataka A copy
    ಸಾಂದರ್ಭಿಕ ಚಿತ್ರ

    ಇದರಿಂದಾಗಿ ಪೋಷಕರು ಹಾಗೂ ಮಗುವಿನ ಸಂಬಂಧಿಕರು ಆಸ್ಪತ್ರೆ ಸಿಬ್ಬಂದಿ ವಿರುದ್ಧ ಆಕ್ರೋಶಗೊಂಡಿದ್ದು, ಆಸ್ಪತ್ರೆಯ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದಾರೆ. ಮೊದಲೇ ಇಲ್ಲಿ ಸರಿಯಾದ ಸಮಯಕ್ಕೆ 108 ಅಂಬುಲೆನ್ಸ್ ಬರುತ್ತಿಲ್ಲ. ಇದ್ದ ಅಂಬುಲೆನ್ಸ್ ನಲ್ಲಿ ಸರಿಯಾದ ಚಿಕಿತ್ಸಾ ವ್ಯವಸ್ಥೆಯಿಲ್ಲ ಎಂದು ದೂರುತ್ತಿದ್ದಾರೆ. ಜಿಲ್ಲಾ ಆರೋಗ್ಯಾಧಿಕಾರಿಗಳು ಬರುವವರೆಗೂ ಸ್ಥಳದಿಂದ ಕದಲುವುದಿಲ್ಲ ಎಂದು ಪಟ್ಟುಹಿಡಿದಿದ್ದಾರೆ. ಸದ್ಯ ಸ್ಥಳಕ್ಕೆ ಬಸವಪಟ್ಟಣ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

  • ಬಾಣಂತನದ ಬಟ್ಟೆಗಳನ್ನು ಆನ್‍ಲೈನ್‍ನಲ್ಲಿ ಹರಾಜಿಗಿಟ್ಟ ನಟಿ ಅನುಷ್ಕಾ ಶರ್ಮಾ

    ಬಾಣಂತನದ ಬಟ್ಟೆಗಳನ್ನು ಆನ್‍ಲೈನ್‍ನಲ್ಲಿ ಹರಾಜಿಗಿಟ್ಟ ನಟಿ ಅನುಷ್ಕಾ ಶರ್ಮಾ

    ಮುಂಬೈ: ಮದುವೆ ಹಾಗೂ ಮಗುವಿಗೆ ಜನ್ಮ ನೀಡಿದ ಬಳಿಕ ಸಿನಿಮಾದಿಂದ ದೂರ ಉಳಿದಿರುವ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಅವರು ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸಕ್ರಿಯರಾಗಿರುತ್ತಾರೆ. ಇದೀಗ ನಟಿ ತಮ್ಮ ಬಟ್ಟೆಗಳನ್ನು ಹರಾಜಿಗಿಡುವ ಮೂಲಕ ಸುದ್ದಿಯಾಗಿದ್ದಾರೆ.

    ಹೌದು, ಸದ್ಯ ಹೆಣ್ಣು ಮಗುವಿನ ಆರೈಕೆಯಲ್ಲಿರುವ ನಟಿ ತಮ್ಮ ಬಾಣಂತನದ ಬಟ್ಟೆಗಳನ್ನು ಆನ್ ಲೈನ್ ಮೂಲಕ ಹರಾಜಿಗಿಟ್ಟಿದ್ದಾರೆ. ಈ ಮೂಲಕ ಬಟ್ಟೆಗಳ ಮರು ಬಳಕೆ ಮಾಡಲು ಪ್ರೋತ್ಸಾಹ ನೀಡಿದ್ದಾರೆ. ಇದನ್ನು ಸರ್ಕುಲರ್ ಫ್ಯಾಷನ್ ಟ್ರೆಂಡ್ ಎಂದು ಕರೆದಿರುವ ನಟಿ, ತಾಯಿಯ ಆರೋಗ್ಯನ್ನು ಬೆಂಬಲಿಸುವ ಉದ್ದೇಶದಿಂದ ಇದನ್ನು ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಅಲ್ಲದೆ ಇದಕ್ಕೆ ಸ್ನೇಹ ಫೌಂಡೇಶನ್ ಎಂದು ಹೆಸರು ಕೂಡ ಇಟ್ಟಿದ್ದಾರೆ. ಇದನ್ನೂ ಓದಿ: ಹೂ ಮಾರುವ ಹುಡ್ಗಿ ಮತ್ತು ಪಬ್ಲಿಕ್ ಟಿವಿ ಬಿಗ್ ಬುಲೆಟಿನ್‍ನ ಆ ಬ್ರೇಕ್..!

    ಈ ಸಂಬಂಧ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿ, ತಾವು ಬಳಸುವ ವಸ್ತುಗಳನ್ನು ಪುನರ್ ಬಳಕೆ ಮಾಡುವ ಟ್ರೆಂಡ್ ಅನುಸರಿಸಿದರೆ ನಮ್ಮ ಪರಿಸರದ ಮೇಲೆ ಇದು ದೊಡ್ಡ ಪರಿಣಾಮ ಬೀರಬಹುದು. ಗರ್ಭಿಣಿಯಾಗಿರುವ ಸಂದರ್ಭದಲ್ಲಿ ನಮ್ಮ ಜೀವನದಲ್ಲಿ ಈ ಹಂತವು ತುಂಬಾ ಮುಖ್ಯವಾದುದು ಅಂತ ನನಗೆ ಅನಿಸಿತು. ಹೀಗಾಗಿ ನಾವೆಲ್ಲರೂ ಒಟ್ಟು ಸೇರಿ ಈ ಕಾರ್ಯವನ್ನು ಆರಂಭಿಸಿಸೋಣ ಎಂದು ಅನುಷ್ಕಾ ಕರೆ ನೀಡಿದ್ದಾರೆ.

    ಇಡೀ ದೇಶದಲ್ಲಿನ ಗರ್ಭಿಣಿಯರ ಪೈಕಿ ಶೇ.1ರಷ್ಟು ಮಹಿಳೆಯರು ಮಾತ್ರ ತಮ್ಮ ಬಟ್ಟೆಗಳನ್ನು ಮರು ಬಳಕೆ ಮಾಡಬಲ್ಲರು. ಬಾಣಂತನದ ಬಟ್ಟೆ ಖರೀದಿ ಮಾಡಿದರೆ ನೀರಿನ ಉಳಿತಾಯ ಮಾಡಬಹುದು. ಈ ಮೂಲಕ ಪರಿಸರದಲ್ಲಿ ನಾವು ದೊಡ್ಡ ಬದಲಾವಣೆ ತರಬಹುದು ಎಂದು ಅನುಷ್ಕಾ ಅಭಿಪ್ರಾಯ ಪಟ್ಟಿದ್ದಾರೆ. ಇದೇ ವರ್ಷ ಜನವರಿ 11ರಂದು ನಟಿ ಅನುಷ್ಕಾ ಶರ್ಮಾ ಹಾಗೂ ವಿರಾಟ್ ಕೊಹ್ಲಿ ದಂಪತಿಗೆ ಹೆಣ್ಣು ಮಗು ಜನಿಸಿತ್ತು. ಮಗಳಿಗೆ ವಿರುಷ್ಕಾ ದಂಪತಿ ವಮಿಕಾ ಎಂದು ಹೆಸರಿಟ್ಟಿದ್ದಾರೆ.

     

    View this post on Instagram

     

    A post shared by AnushkaSharma1588 (@anushkasharma)

  • ಕೊರೊನಾ ಸೋಂಕಿತ ಗರ್ಭಿಣಿಗೆ ಹೆರಿಗೆ- ತಾಯಿ, ಮಗು ಪ್ರತ್ಯೇಕವಾಗಿರಿಸಿ ಚಿಕಿತ್ಸೆ

    ಕೊರೊನಾ ಸೋಂಕಿತ ಗರ್ಭಿಣಿಗೆ ಹೆರಿಗೆ- ತಾಯಿ, ಮಗು ಪ್ರತ್ಯೇಕವಾಗಿರಿಸಿ ಚಿಕಿತ್ಸೆ

    ಶಿವಮೊಗ್ಗ: ಕೊರೊನಾ ಸೋಂಕಿತ ಗರ್ಭಿಣಿಗೆ ಜಿಲ್ಲೆಯ ಹೊಸನಗರ ಸರ್ಕಾರಿ ಆಸ್ಪತ್ರೆಯ ವೈದ್ಯರು ಯಶಸ್ವಿಯಾಗಿ ಹೆರಿಗೆ ಮಾಡಿಸಿ ತಾಯಿ ಮತ್ತು ಮಗುವಿಗೆ ಪ್ರತ್ಯೇಕ ಚಿಕಿತ್ಸೆ ನೀಡುತ್ತಿದ್ದಾರೆ.

    ಹೊಸನಗರ ತಾಲೂಕಿನ ಸಂಪೇಕಟ್ಟೆ ಗ್ರಾಮದ ಗರ್ಭಿಣಿಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಹೆರಿಗೆ ನೋವು ಕಾಣಿಸಿಕೊಂಡ ತಕ್ಷಣ ಕುಟುಂಬಸ್ಥರು ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಈ ವೇಳೆ ಕೊರೊನಾ ಪರೀಕ್ಷೆಗೆ ಒಳಪಡಿಸಿದಾಗ ಗರ್ಭಿಣಿ ಮಹಿಳೆಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

    ಕೂಡಲೇ ಕಾರ್ಯಪ್ರವೃತ್ತರಾದ ಡಾ.ಲಿಂಗರಾಜು ಮತ್ತು ಸಿಬ್ಬಂದಿ ಮಹಿಳೆಗೆ ಯಶಸ್ವಿಯಾಗಿ ಹೆರಿಗೆ ಮಾಡಿಸಿದ್ದು, ಆರೋಗ್ಯವಂತ ಮೂರು ಕೆ.ಜಿ. ತೂಕದ ಹೆಣ್ಣು ಮಗು ಜನಿಸಿದೆ. ಸೋಂಕಿತ ಮಹಿಳೆಗೆ ಪ್ರತ್ಯೇಕವಾಗಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಮಗು ಸಹ ಆರೋಗ್ಯವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

  • ಹೆರಿಗೆ ನಂತರ ತೀವ್ರ ರಕ್ತಸ್ರಾವವಾಗಿ ತಾಯಿ ಸಾವು-ವೈದ್ಯರ ವಿರುದ್ಧ ಆಕ್ರೋಶ

    ಹೆರಿಗೆ ನಂತರ ತೀವ್ರ ರಕ್ತಸ್ರಾವವಾಗಿ ತಾಯಿ ಸಾವು-ವೈದ್ಯರ ವಿರುದ್ಧ ಆಕ್ರೋಶ

    – ಹುಟ್ಟುತ್ತಲೇ ಅಮ್ಮನನ್ನ ಕಳೆದುಕೊಂಡ ಕಂದಮ್ಮ

    ಚಿಕ್ಕಬಳ್ಳಾಪುರ: ಹೆರಿಗೆ ಶಸ್ತ್ರಚಿಕಿತ್ಸೆ ವೇಳೆ ವೈದ್ಯರ ನಿರ್ಲಕ್ಷ್ಯದಿಂದ ತೀವ್ರ ರಕ್ತಸ್ರಾವವಾಗಿ ಮಹಿಳೆ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆದಿದೆ.

    ಮಮತಾ (26) ಮೃತ ದುರ್ದೈವಿ. ಈಕೆ ದೊಡ್ಡಬಳ್ಳಾಪುರ ನಗರದ ರಾಜೀವ್ ಗಾಂಧಿ ಬಡಾವಣೆಯ ನಿವಾಸಿ. ಸಹಜ ಹೆರಿಗೆಯಾಗಲ್ಲ ಅಂತ ವೈದ್ಯರು ಸಿಜೇರಿಯನ್ ಮಾಡಿದ್ದರು. ಈ ವೇಳೆ ಆಧಿಕ ರಕ್ತಸ್ರಾವದಿಂದ ಬಾಣಂತಿಯ ಆರೋಗ್ಯದಲ್ಲಿ ಏರುಪೇರಾದಾಗ ಬೆಂಗಳೂರಿನ ವಾಣಿ ವಿಲಾಸ್ ಆಸ್ಪತ್ರೆಗೆ ಕಳಿಸಲಾಗಿದೆ. ಚಿಕಿತ್ಸೆ ಫಲಕಾರಿಯಾಗದೆ ಇದೀಗ ಬಾಣಂತಿ ಸಾವನ್ನಪ್ಪಿದ್ದಾರೆ.

    ಮಮತಾ ತುಮಕೂರಿನ ಹಿರೇಹಳ್ಳಿಯ ಸಂತೋಷ್ ಜೊತೆ ಒಂದೂವರೆ ವರ್ಷಗಳ ಹಿಂದೆ ವಿವಾಹವಾಗಿದ್ದರು. ಗರ್ಭಿಣಿಯಾಗಿದ್ದ ಮಮತಾ ತವರು ಮನೆ ದೊಡ್ಡಬಳ್ಳಾಪುರಕ್ಕೆ ಬಂದಿದ್ದರು. ದೊಡ್ಡಬಳ್ಳಾಪುರದ ಆಸ್ಪತ್ರೆಯಲ್ಲಿ ತಾಯಿ-ಮಗುವಿಗೆ ವೈದಕೀಯ ತಪಾಸಣೆ ಮಾಡಿಸುತ್ತಿದ್ದರು. ಏಪ್ರಿಲ್ 7ರಂದು ಹೆರಿಗೆ ಮಾಡುವುದಾಗಿ ವೈದ್ಯರು ಹೇಳಿದ ಹಿನ್ನೆಲೆ ಮಮತಾಳನ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು.

    ಮನೆಯಿಂದ ಬರುವಾಗ ಆರೋಗ್ಯವಾಗಿಯೇ ಇದ್ದ ಮಮತಾ, ಆಸ್ಪತ್ರೆಗೆ ಬಂದ ಬಳಿಕ ಹೆರಿಗೆ ನೋವು ಬರದಿದ್ದಾಗ ಇಂಜೆಕ್ಷನ್ ನೀಡಿದ್ದಾರೆ. ನಂತರ ಸಹಜ ಹೆರಿಗೆ ಆಗದಿದ್ದಾಗ ಸಿಜೇರಿಯನ್ ಮಾಡಿದ್ದು, ಗಂಡು ಮಗುವಾಗಿದೆ. ಆದರೆ ಅಧಿಕ ರಕ್ತಸ್ರಾವವಾದ ಹಿನ್ನೆಲೆ ಬಾಣಂತಿಯನ್ನ ಬೆಂಗಳೂರಿನ ವಾಣಿ ವಿಲಾಸ್ ಆಸ್ಪತ್ರೆಗೆ ಕಳುಹಿಸಿದ್ದಾರೆ.

    ವಾಣಿ ವಿಲಾಸ್ ಆಸ್ಪತ್ರೆಯಲ್ಲಿ ಗರ್ಭಕೋಶವನ್ನ ತೆಗೆದಿದ್ದಾರೆ. ಈ ಸಮಯದಲ್ಲಿ ಅಧಿಕ ರಕ್ತಸ್ರಾವದಿಂದ ಮಮತಾ ಸಾವನ್ನಪ್ಪಿದ್ದಾರೆ. ಮಮತಾಳ ಸಾವಿನಿಂದ ಕುಟುಂಬಸ್ಥರು ಆಕ್ರೋಶಭರಿತರಾಗಿ ಮೃತದೇಹದೊಂದಿಗೆ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆ ಎದುರು ಪ್ರತಿಭಟಿಸಿದ್ದಾರೆ.

    ಮಮತಾಳ ಸಾವಿಗೆ ವೈದ್ಯರ ನಿರ್ಲಕ್ಷ್ಯತೆಯೇ ಕಾರಣ, ಹೆರಿಗೆ ಮಾಡಿಸಲು ವೈದ್ಯರು ಆಶಾ ಕಾರ್ಯಕರ್ತೆಯ ಮೂಲಕ 6 ಸಾವಿರ ಹಣ ತೆಗೆದು ಕೊಂಡಿದ್ದಾರೆ. ಆಸ್ಪತ್ರೆಯಲ್ಲಿ ರೋಗಿಯನ್ನ ಕರೆದುಕೊಂಡು ಹೋಗಲು ಸಹ ಸಿಬ್ಬಂದಿ ಇಲ್ಲವೆಂದು ಗಲಾಟೆ ನಡೆಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ದೊಡ್ಡಬಳ್ಳಾಪುರ ನಗರ ಪೆÇಲೀಸರು ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ.

  • ಜೀವನದ ಅತ್ಯಂತ ಸುಂದರ ಕ್ಷಣ- ಪ್ರೆಗ್ನೆನ್ಸಿ ಅನುಭವ ಹಂಚಿಕೊಂಡ ಶ್ರೇಯಾ ಘೋಷಾಲ್

    ಜೀವನದ ಅತ್ಯಂತ ಸುಂದರ ಕ್ಷಣ- ಪ್ರೆಗ್ನೆನ್ಸಿ ಅನುಭವ ಹಂಚಿಕೊಂಡ ಶ್ರೇಯಾ ಘೋಷಾಲ್

    ಮುಂಬೈ: ಸುಮಧುರ ಕಂಠದಿಂದ ಮನೆಮಾತಾಗಿರುವ ಗಾಯಕಿ ಶ್ರೇಯಾ ಘೋಷಾಲ್ ಇತ್ತೀಚೆಗಷ್ಟೇ ತಾವು ತಾಯಿಯಾಗುತ್ತಿರುವ ಸಂತಸದ ವಿಚಾರವನ್ನು ಹಂಚಿಕೊಂಡಿದ್ದರು. ಇದೀಗ ಪ್ರೆಗ್ನೆನ್ಸಿ ಅನುಭವವನ್ನು ತಿಳಿಸಿದ್ದು, ಭಾವನಾತ್ಮಕ ಸಾಲುಗಳ ಮೂಲಕ ವಿವರಿಸಿದ್ದಾರೆ.

    ಈ ಕುರಿತು ಕೆಲ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಸಾಲುಗಳನ್ನು ಬರೆದಿರುವ ಅವರು, ನನ್ನ ಜೀವನದ ಅತ್ಯಂತ ಸುಂದರ ಕ್ಷಣಗಳನ್ನು ಅನುಭವಿಸುತ್ತಿದ್ದೇನೆ. ದಿ ಡಿವೈನ್ ಮಿರಾಕಲ್ ಆಫ್ ಗಾಡ್ ಎಂದು ಬರೆದಿದ್ದಾರೆ. ಈ ಸಾಲುಗಳ ಜೊತೆಗೆ ಸುಂದರ ಫೋಟೋಗಳನ್ನು ಸಹ ಹಂಚಿಕೊಂಡಿದ್ದಾರೆ.

     

    View this post on Instagram

     

    A post shared by shreyaghoshal (@shreyaghoshal)

    ಇತ್ತೀಚೆಗಷ್ಟೇ ತಾವು ತಾಯಿಯಾಗುತ್ತಿರುವ ಖುಷಿ ವಿಚಾರವನ್ನು ತಮ್ಮ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದರು. ಬೇಬಿ ಶ್ರೇಯಾದಿತ್ಯ ನಿರೀಕ್ಷೆಯಲ್ಲಿದ್ದೇವೆ. ಶಿಲಾದಿತ್ಯ ಹಾಗೂ ನಾನು ಈ ಸಂತಸದ ವಿಚಾರವನ್ನು ನಿಮ್ಮೆಲ್ಲರೊಂದಿಗೆ ಹಂಚಿಕೊಳ್ಳಲು ರೋಮಾಂಚನವಾಗುತ್ತಿದೆ. ನಮ್ಮ ಜೀವನದ ಹೊಸ ಅಧ್ಯಾಯಕ್ಕೆ ನಾವು ಸಿದ್ಧರಾಗುತ್ತಿದ್ದು, ನಿಮ್ಮೆಲ್ಲರ ಪ್ರೀತಿ, ಆಶೀರ್ವಾದ ಸದಾ ಇರಲಿ ಎಂದು ಮನವಿ ಮಾಡಿದ್ದರು. ಬೇಬಿ ಬಂಪ್ ಫೋಟೋವನ್ನು ಸಹ ಹಂಚಿಕೊಂಡಿದ್ದರು.

     

    View this post on Instagram

     

    A post shared by shreyaghoshal (@shreyaghoshal)

    ಇದೀಗ ಮತ್ತೆ ಕೆಲ ಮೆಟರ್ನಿಟಿ ಫೋಟೋಗಳನ್ನು ಹಂಚಿಕೊಂಡು ತಾಯ್ತನದ ಅನುಭವದ ಬಗ್ಗೆ ತಿಳಿಸಿದ್ದಾರೆ. ಹತ್ತು ವರ್ಷಗಳ ಕಾಲ ಶ್ರೇಯಾ ಮತ್ತು ಶಿಲಾದಿತ್ಯ ಪ್ರೀತಿಸಿದ್ದರು. ಬಳಿಕ 2015ರ ಫೆಬ್ರವರಿ 5ರಂದು ಸಾಂಪ್ರದಾಯಿಕ ಬಂಗಾಳಿ ಶೈಲಿಯಲ್ಲಿ ಶ್ರೇಯಾ ಮತ್ತು ಶಿಲಾದಿತ್ಯ ವಿವಾಹ ಮಹೋತ್ಸವ ನಡೆಯಿತು. ಇದೀಗ ಮದುವೆಯಾಗಿ 6 ವರ್ಷಗಳ ಬಳಿಕ ತಾಯಿ ಆಗುವ ಮೂಲಕ ಶ್ರೇಯಾ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.

  • ವಾಹನ ತರಲು ಹೋದ ಪತಿ – ಕಾಡಿನಲ್ಲೇ ಮಗುವಿಗೆ ಜನ್ಮ ನೀಡಿದ ಮಹಾತಾಯಿ

    ವಾಹನ ತರಲು ಹೋದ ಪತಿ – ಕಾಡಿನಲ್ಲೇ ಮಗುವಿಗೆ ಜನ್ಮ ನೀಡಿದ ಮಹಾತಾಯಿ

    – ಮಗುವಿನ ಜತೆ ಕಾಡಿನಲ್ಲೇ ಕಾಲ ಕಳೆದ ಗಟ್ಟಿಗಿತ್ತಿ

    ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದ ಮಲೆ ಮಹದೇಶ್ವರ ವನ್ಯಜೀವಿ ಧಾಮ ವ್ಯಾಪ್ತಿಯ ಕಾಡಿನ ದುರ್ಗಮ ಹಾದಿಯಲ್ಲಿ ಪ್ರಸವ ವೇದನೆ ತಾಳಲಾರದೆ ಪತಿಯೊಂದಿಗೆ ಆಸ್ಪತ್ರೆಗೆ ನಡೆದು ಹೋಗುತ್ತಿದ್ದ ಗರ್ಭಿಣಿಗೆ ರಸ್ತೆಯಲ್ಲೇ ಚೊಚ್ಚಲ ಹೆರಿಗೆಯಾಗಿರುವ ಘಟನೆ ತಡರಾತ್ರಿ ನಡೆದಿದೆ.

    ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ ಪತಿ ವಾಹನ ಕರೆ ತರಲು ಹೋದಾಗ ಕಾಡಿನಲ್ಲಿ ಹಸುಗೂಸಿನ ಜತೆ ಜೀವ ಹಿಡಿದು ಕಾಡಲ್ಲೇ ಕುಳಿತಿದ್ದಾಳೆ. ಈ ಗಟ್ಟಿಗಿತ್ತಿ ತಾಯಿಯನ್ನು ಮಲೆ ಮಹದೇಶ್ವರ ಬೆಟ್ಟದ ತಪ್ಪಲಿನ ಅಣ್ಣೇಹೊಲ ಗ್ರಾಮದ ವೀರಣ್ಣ ಪತ್ನಿ ಕಮಲ (22) ಎಂದು ಗುರುತಿಸಲಾಗಿದೆ.

    ಗುರುವಾರ ರಾತ್ರಿ ಕಮಲ ಅವರಿಗೆ ಹೆರಿಗೆ ನೋವು ಕಾಣಿಕೊಂಡಿತ್ತು. ಕಾಡಂಚಿನ ಗ್ರಾಮವಾಗಿರುವುದರಿಂದ ವಾಹನ ಸಿಗದೆ ಪತಿ ವೀರಣ್ಣ ಪತ್ನಿಯನ್ನು ನಡೆಸಿಕೊಂಡೆ ಸುಮಾರು 5 ಕಿ.ಮೀ ದೂರದಲ್ಲಿರುವ ಮಹದೇಶ್ವರ ಬೆಟ್ಟದ ಸಾರ್ವಜನಿಕ ಆಸ್ಪತ್ರೆಗೆ ಹೊರಟ್ಟಿದ್ದಾರೆ. ಹೊಟ್ಟೆ ನೋವಿನೊಂದಿಗೆ ಭಾರದ ಹೆಜ್ಜೆ ಇಡುತ್ತಿದ್ದ ಗರ್ಭಿಣಿಗೆ ಕಾಡಿನ ರಸ್ತೆಯಲ್ಲೇ ಹೆರಿಗೆಯಾಗಿ ಹೆಣ್ಣು ಮಗು ಜನಿಸಿದೆ.

    ತಾಯಿ ಮತ್ತು ಮಗುವನ್ನು ತಕ್ಷಣ ಆಸ್ಪತ್ರೆಗೆ ಸೇರಿಸಲು ವಾಹನ ಕರೆತರಲು ವೀರಣ್ಣ ಗ್ರಾಮದತ್ತ ತೆರಳಿದಾಗ ಕಗ್ಗತ್ತಲಲ್ಲಿ, ಕಾಡು ಪ್ರಾಣಿಗಳ ಭಯದ ನಡುವೆ ಮಗುವಿನೊಂದಿಗೆ ತಾಯಿ ಕಾಲ ದೂಡಿದ್ದಾಳೆ. ಬಳಿಕ ಪತಿ ವೀರಣ್ಣ ನೆರೆ ಹೊರೆಯವರೊಂದಿಗೆ ಸರಕು ಸಾಗಣೆ ವಾಹನವನ್ನು ಕರೆತಂದು ತಾಯಿ ಮತ್ತು ಮಗುವನ್ನು ಆಸ್ಪತ್ರೆಗೆ ದಾಖಲಿಸಿದ್ದಾನೆ. ಚಿಕಿತ್ಸೆ ನೀಡಿದ ಡಾ.ಮುಕುಂದ ಮಗು 3 ಕೆ.ಜಿ ಇದ್ದು, ತಾಯಿ ಮತ್ತು ಮಗು ಆರೋಗ್ಯವಾಗಿರುವುದಾಗಿ ತಿಳಿಸಿದ್ದಾರೆ.

  • ಕೊರೊನಾ ಸೋಂಕಿತ ಗರ್ಭಿಣಿಗೆ ಅಂಬುಲೆನ್ಸ್‌ನಲ್ಲೇ ಹೆರಿಗೆ

    ಕೊರೊನಾ ಸೋಂಕಿತ ಗರ್ಭಿಣಿಗೆ ಅಂಬುಲೆನ್ಸ್‌ನಲ್ಲೇ ಹೆರಿಗೆ

    ರಾಯಚೂರು: ಆಸ್ಪತ್ರೆಗೆ ಕರೆತರುವ ಮಾರ್ಗ ಮಧ್ಯೆಯೇ ಅಂಬುಲೆನ್ಸ್‌ನಲ್ಲಿ ಕೊರೊನಾ ಸೋಂಕಿತೆಗೆ ಹೆರಿಗೆಯಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

    ರಾಯಚೂರು ತಾಲೂಕಿನ ಮಂಜರ್ಲಾ ಗ್ರಾಮದ ಸೋಂಕಿತೆ ಅಂಬುಲೆನ್ಸ್‌ನಲ್ಲೇ ಮಗುವಿಗೆ ಜನ್ಮ ನೀಡಿದ್ದಾರೆ. ಒಂದು ವಾರದ ಹಿಂದೆ ಮಹಿಳೆಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಮಹಿಳೆಯನ್ನ ಇಂದು ರಿಮ್ಸ್‌ಗೆ ಕರೆತರುವಾಗ ಮಾರ್ಗ ಮಧ್ಯೆ ಹೆರಿಗೆ ನೋವು ಕಾಣಿಸಿಕೊಂಡಿದೆ.

    ಹೆರಿಗೆ ನೋವು ತೀವ್ರವಾಗಿದ್ದರಿಂದ ಅಂಬುಲೆನ್ಸ್‌ನಲ್ಲೇ 108 ಸಿಬ್ಬಂದಿ ಭೀಮರಾಯ, ಚಾಲಕ ಭೀಮಸೇನರಾವ್ ಹಾಗೂ ಮನೆಯವರ ನೆರವಿನೊಂದಿಗೆ ಹೆರಿಗೆ ಮಾಡಿಸಿದ್ದಾರೆ. ಬಾಣಂತಿಗೆ ಇದು ಮೂರನೆ ಹೆರಿಗೆಯಾಗಿದ್ದು ತಾಯಿ, ಮಗು ಇಬ್ಬರೂ ಆರೋಗ್ಯವಾಗಿದ್ದಾರೆ.

  • ಬೆಳಗ್ಗೆ ಆಶಾ ಕಾರ್ಯಕರ್ತೆ, ಮಧ್ಯಾಹ್ನ ನಂತರ ಆಟೋ ಚಾಲಕಿ

    ಬೆಳಗ್ಗೆ ಆಶಾ ಕಾರ್ಯಕರ್ತೆ, ಮಧ್ಯಾಹ್ನ ನಂತರ ಆಟೋ ಚಾಲಕಿ

    – ಹೆರಿಗೆಗೆ ದಿನದ 24 ಗಂಟೆಯೂ ಸೇವೆ
    – ಸಾಮಾಜಿಕ ಜಾಲತಾಣದಲ್ಲಿ ರಾಜೀವಿಗೆ ಪ್ರಶಂಸೆ

    ಉಡುಪಿ: ಹತ್ತು ಆಸ್ಪತ್ರೆ ಸುತ್ತಿದರೂ ಚಿಕಿತ್ಸೆ ಸಿಗಲಿಲ್ಲ. ವೈದ್ಯರನ್ನು ಕಂಡು ಮನಸ್ಸು ರೋಸಿ ಹೋದಾಗ, ಉಡುಪಿಯಲ್ಲಿ ನಡೆದ ಈ ಘಟನೆ ಮಾನವೀಯತೆ ಸತ್ತಿಲ್ಲ. ಬದುಕಿದೆ ಎಂಬುದನ್ನು ಸಾಬೀತುಪಡಿಸುತ್ತದೆ. ಕಾಸಿನ ಮುಂದೆ ಕರುಣೆ ಕಣ್ಮರೆಯಾಗಿರುವ ಕಾಲದಲ್ಲಿ ಆಶಾ ಕಾರ್ಯಕರ್ತೆಯೊಬ್ಬರು ಸಹಾಯ ಮಾಡಿ ಮಾನವೀಯತೆ ಮೆರೆದಿದ್ದಾರೆ.

    ಉಡುಪಿಯ ಪೆರ್ಣಂಕಿಲದ ಆಶಾ ಕಾರ್ಯಕರ್ತೆ ರಾಜೀವಿ ಅವರು ಮಹಿಳೆಯನ್ನು ಹೆರಿಗೆಗೆ ಆಟೋದಲ್ಲೇ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ರಾಜೀವಿ ಇದಕ್ಕೂ ಮೊದಲು ಆಟೋ ಚಾಲಕಿಯಾಗಿದ್ದರು. ಇವರಿಗೆ ರಾತ್ರಿ 3.15 ಕರೆ ಬಂದಿದೆ. ದಿನಪೂರ್ತಿ ದುಡಿದು ಸುಸ್ತಾಗಿದ್ದ ಇವರು ಪೋನ್ ಬಂದ್ ಮಾಡಿ ಮಲಗಬಹುದಿತ್ತು. ಆದರೆ ರಾಜೀವಿ ಫೋನ್ ಸ್ವೀಕರಿಸಿ ಮಾತನಾಡಿರೆ. ಆಗ ಮಹಿಳೆ ಹೆರಿಗೆ ನೋವು ಕೇಳಿ ಎದ್ದು ಕೂತಿದ್ದಾರೆ. ನಂತರ ಒಂದೆರಡು ನಿಮಿಷಕ್ಕೆ ಆಟೋ ರಸ್ತೆಗೆ ಇಳಿಸಿದ್ದಾರೆ.

    ತನ್ನದೇ ಊರಿನ ಮಹಿಳೆಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಆಶಾ ಕಾರ್ಯಕರ್ತೆಯೂ ಆಗಿರುವುದರಿಂದ ರಾಜೀವಿಯ ಆಟೋ ಗರ್ಭಿಣಿ ಮನೆ ಮುಂದೆ ನಿಂತಿತು. ಮಹಿಳೆಯನ್ನು ತಕ್ಷಣ ಉಡುಪಿಯ ಕೂಸಮ್ಮ ಶಂಭು ಶೆಟ್ಟಿ ಹಾಜಿ ಅಬ್ದುಲ್ಲ ಹೆರಿಗೆ ಆಸ್ಪತ್ರೆಗೆ ಕರೆದುಕೊಂಡು ಹೊರಟಿತು.

    ಸೂಕ್ತ ಸಾರಿಗೆ ಸೌಲಭ್ಯಗಳಿಲ್ಲದ ಪೆರ್ಣಂಕಿಲ ಗ್ರಾಮದಿಂದ ಸುಮಾರು 20 ಕಿ.ಮೀ ದೂರದ ಉಡುಪಿ ನಗರಕ್ಕೆ ಆ ಹೊತ್ತಲ್ಲಿ ಬರೋದಕ್ಕೆ ಯಾವ ವಾಹನವೂ ಸಿಗಲ್ಲ. ರಾಜೀವಿ ಗರ್ಭಿಣಿಯನ್ನು ಸೂಕ್ತ ಸಮಯದಲ್ಲಿ ಆಸ್ಪತ್ರೆಗೆ ತಲುಪಿಸಿ ಮಾನವೀಯತೆ ಮೆರೆದಿದ್ದಾರೆ. ಎರಡು ಜೀವ ಉಳಿಸಿದ್ದಾರೆ. ಶ್ರೀಲತಾಗೆ ಹೆಣ್ಣುಮಗು ಜನಿಸಿದೆ. ತಾಯಿ, ಮಗು ಆರೋಗ್ಯವಾಗಿದ್ದಾರೆ.

    ಗರ್ಭಿಣಿಯರಿಗೆ ರಾಜೀವಿಯ ಉಚಿತ ಆಟೋ ಸೇವೆ ಇಂದು ನೆನ್ನೆ ಶುರುವಾದದ್ದಲ್ಲ. ಬಹಳ ವರ್ಷಗಳ ಹಿಂದೆನಿಂದಲೇ ಈ ಕಾಳಜಿ ತೋರುತ್ತಿದ್ದಾರೆ. ಬೋರ್ಡ್ ಹಾಕಿದಂತೆ 24/7 ಸಹಾಯಕ್ಕೆ ಬರುತ್ತಾರೆ.

    ಎರಡು ಮಕ್ಕಳ ತಾಯಿ ಹವ್ಯಾಸಕ್ಕಾಗಿ ಪತಿಯ ಸಹಕಾರದಿಂದ ಆಟೊ ಚಾಲನೆ ಕಲಿತಿದ್ದರು. 20 ವರ್ಷದಿಂದ ಆಟೊ ಓಡಿಸುತ್ತಿರುವ ಈಕೆಯ ಪತಿ, ಐದು ವರ್ಷದ ಹಿಂದೆ ಅನಾರೋಗ್ಯದಿಂದ ಸಾವನ್ನಪ್ಪಿದ್ದರು. ಜೀವನ ನಿರ್ವಹಣೆಗೆ ಅರ್ಧ ದಿನ ಆಶಾ ಕಾರ್ಯಕರ್ತೆಯಾಗಿ, ಉಳಿದ ಅರ್ಧ ದಿನ ಆಟೊ ಚಾಲಕಿಯಾಗಿ ರಾಜೀವಿ ದುಡಿಯುತ್ತಾರೆ. ಚಿಕಿತ್ಸೆ ಕೊಡಲು ಮೀನ ಮೇಷ ಎಣಿಸುವ, ಮಾನವೀಯತೆ ಮರೆತಿರುವ ವೈದ್ಯರಿಗೆ ರಾಜೀವಿ ಮಾದರಿಯಾಗಲಿ ಎಂದು ಸ್ಥಳೀಯರು ಕೊಂಡಾಡುತ್ತಿದ್ದಾರೆ.