Tag: Maulvi

  • ಮಸೀದಿ ಕೊಠಡಿಯಲ್ಲಿ 6 ವರ್ಷದ ಮಗು ಮೇಲೆ ಅತ್ಯಾಚಾರ ಆರೋಪ – ಪ್ರಕರಣ ದಾಖಲು

    ಮಸೀದಿ ಕೊಠಡಿಯಲ್ಲಿ 6 ವರ್ಷದ ಮಗು ಮೇಲೆ ಅತ್ಯಾಚಾರ ಆರೋಪ – ಪ್ರಕರಣ ದಾಖಲು

    ಚಿಕ್ಕಬಳ್ಳಾಪುರ: 6 ವರ್ಷದ ಬಾಲಕಿ ಮೇಲೆ 55 ವರ್ಷದ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದ್ದು, ಚಿಕ್ಕಬಳ್ಳಾಪುರ ಮಹಿಳಾ ಪೊಲೀಸ್ ಠಾಣೆಯಲ್ಲಿ (Chikkaballapura Women Police Station) ದೂರು ದಾಖಲಾಗಿದೆ.

    ಚಿಕ್ಕಬಳ್ಳಾಪುರ ನಗರದ ಶಮ್ಸ್ ಮಸೀದಿಯಾ ಕೊಠಡಿಯಲ್ಲಿ ಘಟನೆ ನಡೆದಿದೆ. ಮಸೀದಿಯೊಂದರ ಮೌಲ್ವಿಯ ತಂದೆ ಬಾಲಕಿಗೆ ಚಾಕೊಲೆಟ್‌ ಕೊಡಿಸುವುದಾಗಿ ಆಮಿಷವೊಡ್ಡಿ ಅತ್ಯಾಚಾರ ಎಸಗಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಬಾಲಕಿಯ ತಾಯಿ ದೂರು ನೀಡಿದ ಬಳಿಕ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಪಾಕ್‌ಗೆ ಆಪರೇಷನ್ ಸಿಂಧೂರದ ಸೂಕ್ಷ್ಮ ಮಾಹಿತಿ ಹಂಚಿಕೆ – ಪಂಜಾಬ್ ವ್ಯಕ್ತಿ ಅರೆಸ್ಟ್

    ಈ ಸಂಬಂಧ ಆರೋಪಿ ಮಹಪ್ಯೂಸ್ ಬಂಧಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆರೋಪಿಯ ಮಗ ಬೇರೊಂದು ಮಸೀದಿಯಲ್ಲಿ ಮೌಲ್ವಿಯಾಗಿ ಕೆಲಸ ಮಾಡುತ್ತಿದ್ದಾರೆ. ಇದರಿಂದ ಮೌಲ್ವಿಯ ಆಶ್ರಯಕ್ಕೆ ಜಮಾತ್‌ನಿಂದ ಮಸೀದಿಯ ಕೊಠಡಿ ನೀಡಲಾಗಿತ್ತು. ಆದ್ರೆ ಮಸೀದಿಯ ಕೊಠಡಿಯನ್ನು ದುರುಪಯೋಗ ಪಡಿಸಿಕೊಂಡು ಬಾಲಕಿ ಮೇಲೆ ಅತ್ಯಾಚಾರ ಮಾಡಲಾಗಿದೆ ಎಂದು ಬಾಲಕಿ ತಾಯಿ ಗಂಭೀರ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಬೆಂಗಳೂರು| ಓವರ್‌ಟೇಕ್ ಮಾಡಲು ಹೋಗಿ ಪರಸ್ಪರ ಬೈಕ್ ಡಿಕ್ಕಿ – ಇಬ್ಬರು ಸಾವು

    ಇನ್ನೂ ಆರೋಪಿ ಮಹಪ್ಯೂಸ್ ಮೂಲತಃ ಉತ್ತರ ಪ್ರದೇಶದವನು. 20 ವರ್ಷಗಳ ಹಿಂದೆ ಚಿಕ್ಕಬಳ್ಳಾಪುರಕ್ಕೆ ಬಂದು ಬೀದಿ ಬದಿ ಬಟ್ಟೆ ವ್ಯಾಪಾರ ಮಾಡಿಕೊಂಡಿದ್ದ. ಮಸೀದಿ ಬಳಿ ಆಟವಾಡಿಕೊಂಡಿದ್ದ ಬಾಲಕಿಗೆ ಆಮೀಷ ಹೊಡ್ಡಿ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ.

    ಮಸೀದಿಯ ಮೌಲ್ವಿ ಸುಹೇಬ್‌ನನ್ನ ಸ್ಥಳಿಯರು ತರಾಟೆಗೆ ತೆಗೆದುಕೊಂಡಿದ್ದು, ಮೌಲ್ವಿ ಆಶ್ರಯಕ್ಕೆ ಕೊಠಡಿ ಪಡೆದು ತಂದೆಗೆ ಯ್ಯಾಕೆ ನೀಡಿದ್ದು? ಅಂತ ಬಾಲಕಿಯ ತಾಯಿ ಆರೋಪಿಗೆ ಹಿಗ್ಗಾ ಮುಗ್ಗಾ ತರಾಟೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: IPL 2025 Final – ಪಂದ್ಯಕ್ಕೂ ಮುನ್ನವೇ ಮೋದಿ ಸ್ಟೇಡಿಯಂ ಹೊರಗೆ ಸಿಲಿಂಡರ್ ಬ್ಲಾಸ್ಟ್

  • ಯತ್ನಾಳ್ ಆರೋಪಿಸಿದ ಅದೇ ಮೌಲ್ವಿ ಜೊತೆ ಗಡ್ಕರಿ ಫೋಟೋ ಬಿಡುಗಡೆ ಮಾಡಿದ ಕಾಂಗ್ರೆಸ್ ಮುಖಂಡ

    ಯತ್ನಾಳ್ ಆರೋಪಿಸಿದ ಅದೇ ಮೌಲ್ವಿ ಜೊತೆ ಗಡ್ಕರಿ ಫೋಟೋ ಬಿಡುಗಡೆ ಮಾಡಿದ ಕಾಂಗ್ರೆಸ್ ಮುಖಂಡ

    ಧಾರವಾಡ: ಹುಬ್ಬಳ್ಳಿಯಲ್ಲಿ ನಡೆದ ಮೌಲ್ವಿಗಳ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಭಾಗವಹಿಸಿದ ನಂತರ ಮೌಲ್ವಿ ತನ್ವೀರ್ ಪೀರಾ (Tanveer Peer) ಬಗ್ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಬಹಳಷ್ಟು ಆರೋಪಗಳನ್ನು ಮಾಡಿದರು. ಈ ಆರೋಪಕ್ಕೆ ಈಗ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಯತ್ನಾಳ್ ಆರೋಪಕ್ಕೆ ಕಾಂಗ್ರೆಸ್ ಮುಖಂಡರೊಬ್ಬರು ಫೋಟೋ ಬಿಡುಗಡೆ ಮಾಡಿ ತಿರುಗೇಟು ನೀಡಿದ್ದಾರೆ.

    ಕೇಂದ್ರ ಸಚಿವ ನಿತಿನ್ ಗಡ್ಕರಿ (Nitin Gadkari) ಫೋಟೋ ಬಿಡುಗಡೆ ಮಾಡಿ ತಿರುಗೇಟು ನೀಡಿರುವ ಧಾರವಾಡದ ಮುಸ್ಲಿಂ ಮುಖಂಡ ಇಸ್ಮಾಯಿಲ್ ತಮಟಗಾರ, ಶಾಸಕ ಯತ್ನಾಳ್ ಆರೋಪ ಮಾಡಿದ್ದ ಮೌಲ್ವಿ ತನ್ವೀರ್ ಪೀರಾ ಜೊತೆಯಲ್ಲೇ ಕೇಂದ್ರ ಸಚಿವ ನಿತಿನ್ ಗಡ್ಕರಿ ಇರುವ ಫೋಟೋ ಬಿಡುಗಡೆ ಮಾಡಿದ್ದಾರೆ.

    ಫೋಟೋ ಬಿಡುಗಡೆ ಮಾಡಿ ಹೇಳಿಕೆ ನೀಡಿದ ಇಸ್ಮಾಯಿಲ್ ತಮಟಗಾರ, ಯತ್ನಾಳ್ ಅವರು ಒಂದು ಫೋಟೋ ಬಿಡುಗಡೆ ಮಾಡಿದ್ದಾರೆ, ಆ ಫೋಟೋಗಳನ್ನು ಈಗ ವೆಬ್‌ಸೈಟ್‌ನಿಂದ ತೆಗೆದಿದ್ದಾರೆ. ಅದೇ ವೆಬ್‌ಸೈಟ್‌ನಲ್ಲಿ ಬಿಜೆಪಿ ಮುಖಂಡರ ಫೋಟೋಗಳೂ ಇವೆ ಎಂದು ಹೇಳಿದರು. ಇದನ್ನೂ ಓದಿ: ಗಣ್ಯರ ಮಾಹಿತಿ ಮೊದಲೇ ಗೊತ್ತಿತ್ತು – ಸಿಎಂ ಭದ್ರತಾ ವಿಚಾರದಲ್ಲಿ ಎಡವಿದ್ರಾ ಧಾರವಾಡ ಪೊಲೀಸರು?

    ಅದರಲ್ಲಿ ಗಡ್ಕರಿಯವರ ಫೋಟೋ ಸಹ ಇದೆ. ಇರಾಕ್‌ನಲ್ಲಿನ ಪ್ರಸಿದ್ಧ ದರ್ಗಾ ಅದು. ಆ ದರ್ಗಾದ ಮುಖ್ಯಸ್ಥರ ಜೊತೆ ಮೌಲ್ವಿ ತನ್ವೀರ್ ಪೀರಾ ಇರೋ ಫೋಟೋ ಇವೆ. ಅದೇ ಮುಖ್ಯಸ್ಥರನ್ನು ಗಡ್ಕರಿಯವರು ಈ ಹಿಂದೆ ಭೇಟಿಯಾಗಿದ್ದಾರೆ. ಆ ಭೇಟಿ ವೇಳೆಯ ಫೋಟೋ ಇದಾಗಿದೆ. ಈ ಫೋಟೋದಲ್ಲಿ ಇರಾಕ್ ರಾಷ್ಟ್ರಧ್ವಜವೂ ಇದೆ. ಅದು ಜಗತ್ಪ್ರಸಿದ್ಧ ದರ್ಗಾ. ಅಲ್ಲಿ ಜಗತ್ತಿನ ಅನೇಕರು ಹೋಗುತ್ತಾರೆ. ಅದನ್ನೇ ಇಟ್ಟುಕೊಂಡು ಯತ್ನಾಳ್ ಆರೋಪ ಮಾಡುತ್ತಿದ್ದಾರೆ ಎಂದರು.

    ಯತ್ನಾಳರಿಗೆ ಧಾರವಾಡ ಹುಚ್ಚಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಬೇಕು. ಇಲ್ಲವೇ ಇಲ್ಲಿನ ಹುಚ್ಚಾಸ್ಪತ್ರೆಯಿಂದ ಮಾತ್ರೆಯಾದರೂ ಒಯ್ದು ಕೊಡಬೇಕಿದೆ. ಇಲ್ಲಿ 50 ಕಿಮೀ ಸಮೀಪದ ಬೆಳಗಾವಿಗೆ ಅವರು ಬಂದಿದ್ದಾರೆ. ಹೀಗಾಗಿ ಧಾರವಾಡ ಮೆಂಟಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲಿ ಎಂದು ಇಸ್ಮಾಯಿಲ್ ಯತ್ನಾಳ್ ಬಗ್ಗೆ ಲೇವಡಿ ಮಾಡಿದ್ದಾರೆ. ಇದನ್ನೂ ಓದಿ: ನಾನು ರಾಜ್ಯಾಧ್ಯಕ್ಷನಾದ 20 ದಿನಗಳಲ್ಲಿಯೇ ಬದಲಾವಣೆ: ವಿಜಯೇಂದ್ರ

  • ಮೈಲಿಗೆ ಆಗುತ್ತೆ ಅಂತಾ ದತ್ತಪೀಠದಲ್ಲಿ ಮೌಲ್ವಿಗಳ ಪೂಜೆಗೆ ನಕಾರ – ಅರ್ಚಕರ ವಿರುದ್ಧ ಆರೋಪ

    ಮೈಲಿಗೆ ಆಗುತ್ತೆ ಅಂತಾ ದತ್ತಪೀಠದಲ್ಲಿ ಮೌಲ್ವಿಗಳ ಪೂಜೆಗೆ ನಕಾರ – ಅರ್ಚಕರ ವಿರುದ್ಧ ಆರೋಪ

    ಚಿಕ್ಕಮಗಳೂರು: 47 ವರ್ಷಗಳ ಹೋರಾಟದ ಫಲವಾಗಿ ಚಿಕ್ಕಮಗಳೂರಿನ ದತ್ತಪೀಠಕ್ಕೆ (Dattapeeta) ಹಿಂದೂ ಅರ್ಚಕರ ನೇಮಕವಾಗಿದೆ. ಆದರೆ ಈಗ ಹೊಸ ವಿವಾದ ತಲೆದೋರಿದೆ. ದತ್ತಪೀಠದಲ್ಲಿ ಅರ್ಚಕರು ಮೈಲಿಗೆ ಆಗುತ್ತೆ ಎಂದು ಮೌಲ್ವಿಗಳಿಗೆ (Maulvi) ಪೂಜೆ ಮಾಡಲು ಬಿಡ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.

    ಮೈಲಿಗೆ ಆಗುತ್ತದೆ ಎಂದು ದತ್ತಪೀಠದಲ್ಲಿ ಮೌಲ್ವಿಗಳಿಗೆ ಪೂಜೆ ಮಾಡಲು ಅವಕಾಶ ನೀಡುತ್ತಿಲ್ಲ ಎಂದು ಅರ್ಚಕರ ವಿರುದ್ಧ ಕೋಮು ಸೌಹಾರ್ದ ವೇದಿಕೆ ಗಂಭೀರ ಆರೋಪ ಮಾಡಿದೆ. ಇದನ್ನೂ ಓದಿ: ಹಿಂದೂ ಕಾರ್ಯಕರ್ತನಿಗೆ ಬೆದರಿಕೆ ಆರೋಪ – ಸರ್ಕಲ್‌ ಇನ್‌ಸ್ಪೆಕ್ಟರ್‌ ಸೇರಿ 7 ಮಂದಿ ವಿರುದ್ಧ FIR

    ಕೋರ್ಟ್ ಹೇಳಿದ್ದು ದತ್ತಪೀಠದ ಹೊರಾಂಡದಲ್ಲಿ ಪೂಜೆ ಮಾಡ್ಬೇಕು ಅಂತ. ಆದರೆ ಗುಹೆಯೊಳಗೆ ಪೂಜೆ ಮಾಡಿದ್ದಾರೆ. ಜೊತೆಗೆ ಕಲ್ಲಪ್ಪ ಹಂಡೀಭಾಗ್ ಆತ್ಮಹತ್ಯೆ ಪ್ರಕರಣ ಮುಖ್ಯ ಆರೋಪಿ ಖಾಂಡ್ಯ ಪ್ರವೀಣ್ ಕೂಡ ಪೂಜೆ ಮಾಡಿದ್ದಾನೆ ಅಂತ ಆರೋಪಿಸಲಾಗಿದೆ.

    ಈ ಬಗ್ಗೆ ಡಿಸಿಗೆ ದೂರು ನೀಡಿದ್ರೆ, ಈ ಸಮಿತಿಗೂ ನನಗೂ ಯಾವುದೇ ಸಂಬಂಧವೇ ಇಲ್ಲ ಅಂತಿದ್ದಾರೆ. ಕೂಡಲೇ ಜಿಲ್ಲಾಡಳಿತ ಎಚ್ಚೆತ್ತು ಅರ್ಚಕರನ್ನ ವಾಪಸ್ ಕಳುಹಿಸಬೇಕು. ಕೋರ್ಟ್ ಹೇಳಿದ್ದು ಕೇವಲ ಮೂರು ದಿನಕ್ಕೆ ಮಾತ್ರ ಅರ್ಚಕರು ಪೂಜೆ ಮಾಡ್ಬೇಕು ಅಂತ. ಆದರೆ ದತ್ತಜಯಂತಿ ಮುಗಿದರೂ ಡಿಸಿ ಅರ್ಚಕರನ್ನ ಮುಂದುವರಿಸುತ್ತಿದ್ದಾರೆ ಎಂದು ಮುಸ್ಲಿಂ ಮುಖಂಡರು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ: ನೀರು ತುಂಬಿದ್ದ ಬಕೆಟ್‌ಗೆ ಬಿದ್ದು 10 ತಿಂಗಳ ಕಂದಮ್ಮ ಸಾವು

    Live Tv
    [brid partner=56869869 player=32851 video=960834 autoplay=true]

  • ಹುಬ್ಬಳ್ಳಿ ಗಲಭೆಯಲ್ಲಿ ಕಾಣಿಸಿಕೊಂಡಿದ್ದ ಮೌಲ್ವಿಯ ಅಸಲಿ ರೂಪ ಬಯಲು

    ಹುಬ್ಬಳ್ಳಿ ಗಲಭೆಯಲ್ಲಿ ಕಾಣಿಸಿಕೊಂಡಿದ್ದ ಮೌಲ್ವಿಯ ಅಸಲಿ ರೂಪ ಬಯಲು

    ಹುಬ್ಬಳ್ಳಿ: ಶನಿವಾರ ರಾತ್ರಿ ನಡೆದ ಹುಬ್ಬಳ್ಳಿ ಗಲಭೆಯಲ್ಲಿ ಕಾಣಿಸಿಕೊಂಡಿದ್ದ ಮೌಲ್ವಿಯ ಅಸಲಿ ರೂಪ ಬಯಲಾಗಿದೆ. ಈ ಎಕ್ಸ್‌ಕ್ಲೂಸಿವ್ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದ್ದು, ಆತ ಮೌಲ್ವಿಯೇ ಅಲ್ಲ. ಮೌಲ್ವಿಯ ವೇಷ ಧರಿಸಿ ಬಂದಿದ್ದ ಲಾರಿಚಾಲಕ ಎಂಬುದು ಗೊತ್ತಾಗಿದೆ.

    HUBBALLI_ ACCUSED_SHIFT

    ಹುಬ್ಬಳ್ಳಿ ಗಲಾಟೆಯಲ್ಲಿ ಮೌಲ್ವಿ ವೇಷದಲ್ಲಿ ಕಾಣಿಸಿಕೊಂಡಿದ್ದ ವ್ಯಕ್ತಿ ಅಸಲಿಗೆ ಮೌಲ್ವಿಯೇ ಅಲ್ಲ. ಆತ ಲಾರಿ ಚಾಲಕ ವಾಸಿಂ. ಈ ಹಿಂದೆ ಲಾರಿ ಚಾಲಕನಾಗಿದ್ದ ಈತ ಮೌಲ್ವಿಯಂತೆ ವೇಷ ಹಾಕಿಕೊಂಡು ಓಡಾಡುತ್ತಿದ್ದ. ಈ ವೇಷ ಹಾಕಿ ತನ್ನದೇ ಆದ ಅಭಿಮಾನಿಗಳನ್ನು ಬೆಳೆಸಿಕೊಂಡಿದ್ದ ಎಂಬ ರಹಸ್ಯ ಬಯಲಾಗಿದೆ. ಇದನ್ನೂ ಓದಿ: ಹುಬ್ಬಳ್ಳಿ ಗಲಭೆ ಹಿಂದೆ ವ್ಯವಸ್ಥಿತ ಪಿತೂರಿ- ಶಿರಚ್ಛೇದದ ಮಾತು, RSS ವಿರುದ್ಧ ಘೋಷಣೆ

    ALTHAF HALLURA 3

    ಹುಬ್ಬಳ್ಳಿಯಲ್ಲಿನ ಗಲಭೆಯ ಹಿಂದೆ ಮೌಲ್ವಿಯೊಬ್ಬರ ಕೈವಾಡ ಇರುವ ಶಂಕೆ ವ್ಯಕ್ತವಾಗಿತ್ತು. ಗಲಾಟೆಗೂ ಮುನ್ನ ಮೌಲ್ವಿಯೊಬ್ಬರು ಕಮಿಷನರ್ ಅವರ ಇನ್ನೋವಾ ಕಾರಿನ ಮೇಲೆ ಹತ್ತಿ ಭಾಷಣ ಮಾಡಿರುವ ವೀಡಿಯೋ ವೈರಲ್ ಆಗಿತ್ತು. ಅಲ್ಲದೆ, ಇದು ಗಲಭೆಗೆ ಪ್ರಚೋದನೆ ನೀಡಿರುವ ಭಾಷಣ ಎಂದು ಹೇಳಲಾಗಿತ್ತು. ಪೊಲೀಸ್ ಠಾಣೆ ಅನ್ನೋದನ್ನೂ ನೋಡದೇ ಪ್ರಚೋದನೆ ಕೊಟ್ಟಿದ್ದೇ ಇಷ್ಟು ದೊಡ್ಡ ಗಲಾಟೆಗೆ ಕಾರಣ ಎಂದು ಪೊಲೀಸರು ಹೇಳಿದ್ದರು. ಹುಬ್ಬಳ್ಳಿಯ ದರ್ಗಾವೊಂದರ ಮೌಲ್ವಿ ಎಂಬ ಮಾಹಿತಿ ಸಿಕ್ಕಿತ್ತು. ಈಗ ಈತನ ಬಗ್ಗೆ ತನಿಖೆ ನಡೆಸುತ್ತಿದ್ದಾಗ ವಾಸೀಂ ಮೌಲ್ವಿಯೇ ಅಲ್ಲ ಎಂಬ ವಿಚಾರ ಬೆಳಕಿಗೆ ಬಂದಿದೆ.

  • ಗಂಗಾವತಿಯಲ್ಲಿ ಮೌಲ್ವಿಗೆ ಸೋಂಕು- ಹೆಚ್ಚಿದ ಆತಂಕ

    ಗಂಗಾವತಿಯಲ್ಲಿ ಮೌಲ್ವಿಗೆ ಸೋಂಕು- ಹೆಚ್ಚಿದ ಆತಂಕ

    ಕೊಪ್ಪಳ: ಆಂಧ್ರದಿಂದ ಮರಳಿದ ಮೌಲ್ವಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಜಿಲ್ಲೆಯ ಗಂಗಾವತಿ ಪಟ್ಟಣದಲ್ಲಿ ಆತಂಕ ಮನೆ ಮಾಡಿದೆ.

    ಈ ಕುರಿತು ಜಿಲ್ಲಾಧಿಕಾರಿ ಸುನೀಲ್ ಕುಮಾರ್ ಮಾಹಿತಿ ನೀಡಿದ್ದು, ಜಿಲ್ಲೆಯ ಗಂಗಾವತಿಯಲ್ಲಿ ಆಂಧ್ರದ ಆಧೋನಿ ಮೂಲದ 32 ವರ್ಷದ ಮೌಲ್ವಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈತ ನಗರದ ಹೃದಯ ಭಾಗದಲ್ಲಿರುವ ಜಾಮೀಯಾ ಮಸೀದಿಯಲ್ಲಿ ಮೌಲ್ವಿಯಾಗಿದ್ದು, ಕಳೆದ ಮೂರು ದಿನಗಳ ಹಿಂದೆ ಗಂಗಾವತಿಗೆ ಆಗಮಿಸಿ ಜಾಮೀಯಾ ಮಸೀದಿಯಲ್ಲಿ ದಿನಕ್ಕೆ ಐದು ಬಾರಿ ನಮಾಜ್ ಮಾಡಿಸಿದ್ದಾರೆ. ರೋಗ ಲಕ್ಷಣ ಕಾಣಿಸಿಕೊಂಡ ಹಿನ್ನಲೆಯಲ್ಲಿ ಪರೀಕ್ಷೆ ಮಾಡಿಸಿದಾಗ ಕೊರೊನಾ ಸೋಂಕು ತಗುಲಿರುವುದು ದೃಢ ಪಟ್ಟಿದೆ ಎಂದು ವಿವರಿಸಿದ್ದಾರೆ.

    ಕೊರೊನಾ ಪಾಸಿಟಿವ್ ಬರುತ್ತಿದಂತೆ ಗಂಗಾವತಿ ಆರೋಗ್ಯ ಇಲಾಖೆ ಸಿಬ್ಬಂದಿ ಮತ್ತು ನಗರಸಭೆ ಅಧಿಕಾರಿಗಳು, ಸೋಂಕಿತ ಮೌಲ್ವಿಯನ್ನು ಕೊಪ್ಪಳದ ಕೋವಿಡ್-19 ಆಸ್ಪತ್ರೆಗೆ ರವಾನಿಸಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಮೌಲ್ವಿ ವಾಸವಿದ್ದ ಮನೆ ಮತ್ತು ಮಸೀದಿ ಸುತ್ತಲಿನ ಪ್ರದೇಶವನ್ನು ಸೀಲ್‍ಡೌನ್ ಮಾಡಿದ್ದಾರೆ. ಅಲ್ಲದೆ ಮಸೀದಿ ಬಳಿ ಇರುವ ಡೇಲಿ ಮಾರ್ಕೆಟ್ ಕೂಡ ಬಂದ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

    ಆತ ವಾಸವಿದ್ದ ಮನೆ, ಮಸೀದಿ ಹಾಗೂ ಸುತ್ತಲಿನ ಪ್ರದೇಶವನ್ನು ನಗರಸಭೆ ಸಿಬ್ಬಂದಿ ಸ್ಯಾನಿಟೈಸ್ ಮಾಡಿದ್ದಾರೆ. ಅಲ್ಲದೆ ಆ ಪ್ರದೇಶದಿಂದ ಯಾರೂ ಹೊರ ಬಾರದಂತೆ ಎಚ್ಚರಿಕೆ ನೀಡಲಾಗಿದೆ. ಭಯಾನಕ ವಿಚಾರವೆಂದರೆ ಮೌಲ್ವಿ ನಗರಕ್ಕೆ ಆಗಮಿಸುತ್ತಿದ್ದಂತೆ ಮಾರ್ಕೆಟ್‍ಗೆ ತೆರಳಿ ಹಣ್ಣು ಹಂಪಲು, ತರಕಾರಿ ಖರೀದಿಸಿದ್ದಾರೆ. ಅದಲ್ಲದೆ ಹೋಟೆಲ್ ಗಳಿಗೆ ಹೋಗಿ ತಿನಿಸುಗಳನ್ನು ಪಾರ್ಸಲ್ ತಂದಿದ್ದಾರೆ. ಹೀಗಾಗಿ ಈತನೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಪತ್ತೆಹಚ್ಚಲು ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ. ಮಸೀದಿಯಲ್ಲಿ ಪ್ರಾರ್ಥನೆ ಮಾಡಿದವರನ್ನೆಲ್ಲ ಕ್ವಾರಂಟೈನ್ ಮಾಡಲಾಗುತ್ತಿದೆ. ಸೀಲ್ ಡೌನ್ ಮಾಡಿದ ಪ್ರದೇಶದ ನಜ ಭಯಭೀತರಾಗಿದ್ದು, ನಗರಸಭೆ ಸಿಬ್ಬಂದಿ ಹಾಗೂ ವಾರ್ಡ್ ಸದಸ್ಯರು ಜನರಿಗೆ ತಿಳಿ ಹೇಳುತ್ತಿದ್ದಾರೆ.

  • ಅತ್ಯಾಚಾರವೆಸಗಿ ಐರನ್ ಬಾಕ್ಸ್‌ನಿಂದ ಸುಟ್ಟು ವಿಕೃತಿ ಮೆರೆದ ಮೌಲ್ವಿ

    ಅತ್ಯಾಚಾರವೆಸಗಿ ಐರನ್ ಬಾಕ್ಸ್‌ನಿಂದ ಸುಟ್ಟು ವಿಕೃತಿ ಮೆರೆದ ಮೌಲ್ವಿ

    ಬೆಂಗಳೂರು: ಯುವತಿಗೆ ಕೆಲಸಕ್ಕೆಂದು ಕರೆ ತಂದು ಗೃಹಬಂಧನದಲ್ಲಿಟ್ಟು ಮೌಲ್ವಿಯೊಬ್ಬ ಅತ್ಯಾಚಾರವೆಸಗಿ ರಾಕ್ಷಕನ ರೀತಿಯಲ್ಲಿ ನಡೆದುಕೊಂಡಿರುವ ಘಟನೆ ಬೆಂಗಳೂರಿನ ಕೋರಮಂಗಲದಲ್ಲಿ ನಡೆದಿದೆ.

    ಫರ್ವೆಜ್ ಯುವತಿಗೆ ಅಮಾನಿಯವಾಗಿ ನಡೆಸಿಕೊಂಡಿರುವ ಮೌಲ್ವಿ. ಆರೋಪಿ ಮೌಲ್ವಿ ಕೋರಮಂಗಲದ 8ನೇ ಕ್ರಾಸ್‍ನಲ್ಲಿ ಮದರಸ ಹಾಗೂ ಟ್ಯುಟೋರಿಯಲ್ ನಡೆಸುತ್ತಿದ್ದನು. ಅಲ್ಲದೆ ಮದರಸದಲ್ಲಿ ಕೆಲಸ ಮಾಡಲು ಬಿಹಾರದಿಂದ ಯುವತಿಯನ್ನು ಕರೆದು ತಂದು ಇರಿಸಿಕೊಂಡಿದ್ದಾನೆ.

    ಕಳೆದ ನಾಲ್ಕು ವರ್ಷದಿಂದ ಮೌಲ್ವಿ ಫರ್ವೇಜ್ ನ ಮದರಸದಲ್ಲಿ ಯುವತಿ ಕೆಲಸ ಮಾಡಿಕೊಂಡಿದ್ದಳು. ಈ ಸಂದರ್ಭದಲ್ಲಿ ಮೌಲ್ವಿ ಯುವತಿಗೆ ಅತ್ಯಾಚಾರವೆಸಗಿ ಐರನ್ ಬಾಕ್ಸ್‌ನಿಂದ ಸುಟ್ಟು ವಿಕೃತಿ ಮೆರೆದಿದ್ದಾನೆ ಎಂದು ಸಂತ್ರಸ್ತ ಯುವತಿ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ.

    ಪೊಲೀಸರು ಮೌಲ್ವಿಯನ್ನು ಬಂಧಿಸಿ ಹೆಚ್ಚಿನ ತನಿಖೆಗೆ ಒಳಪಡಿಸಿದ್ದಾರೆ. ಈ ಘಟನೆ ಸಂಬಂದ ಆರೋಪಿ ಫರ್ವೇಜ್ ವಿರುದ್ಧ ಐಪಿಸಿ ಸೆಕ್ಷನ್ 344 (ಅಕ್ರಮ ಬಂಧನ), 376 (ಅತ್ಯಾಚಾರ), 307 (ಕೊಲೆ ಯತ್ನ), 506, 507 (ಬೈಗುಳ), (ಜೀವ ಬೆದರಿಕೆ) ಆರೋಪದಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

  • ಐಎಂಎ ವಂಚನೆ ಪ್ರಕರಣದಲ್ಲಿ ಜೈಲು ಸೇರಿದ್ದ ಮೌಲ್ವಿಗೆ ಅದ್ದೂರಿ ಸನ್ಮಾನ

    ಐಎಂಎ ವಂಚನೆ ಪ್ರಕರಣದಲ್ಲಿ ಜೈಲು ಸೇರಿದ್ದ ಮೌಲ್ವಿಗೆ ಅದ್ದೂರಿ ಸನ್ಮಾನ

    ಬೆಂಗಳೂರು: ಬಹುಕೋಟಿ ಐಎಂಎ ವಂಚನೆ ಪ್ರಕರಣದಲ್ಲಿ ಜೈಲು ಸೇರಿ, ಜಾಮೀನಿನ ಮೇಲೆ ಬಿಡುಗಡೆಯಾದ ಮೌಲ್ವಿಗೆ ಅದ್ದೂರಿಯಾಗಿ ಸನ್ಮಾನ ಮಾಡಿರುವ ವಿಡಿಯೋ ಸಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಆರ್.ಟಿ.ನಗರ ಮೂಲದ ಮೌಲ್ವಿ ಅಫ್ಸರ್ ಹನೀಜ್ ಮನ್ಸೂರ್ ಖಾನ್‍ನಿಂದ ಮೂರು ಕೋಟಿ ರೂ. ಮೌಲ್ಯದ ಬಂಗಲೆ ಪಡೆದುಕೊಂಡಿದ್ದ. ಬಂಗಲೆ ಪಡೆದಿದ್ದರಿಂದ ತನ್ನ ಸಮುದಾಯದವರಿಗೆ ಐಎಂಎನಲ್ಲಿ ಹೂಡಿಕೆ ಮಾಡುವಂತೆ ಪ್ರೇರಣೆ ನೀಡುತ್ತಿದ್ದ. ಮಸೀದಿಯಲ್ಲಿ ಪ್ರಾರ್ಥನೆಗೆ ಬಂದ ವೇಳೆ ಪ್ರೇರೇಪಣೆ ನೀಡಿ ಹೂಡಿಕೆ ಮಾಡುವಂತೆ ಸೂಚನೆ ನೀಡುತ್ತಿದ್ದ. ಈ ಹಿನ್ನೆಲೆ ಸೆಪ್ಟೆಂಬರ್ ನಲ್ಲಿ ಎಸ್‍ಐಟಿ ಅಧಿಕಾರಿಗಳು ಮೌಲ್ವಿಯನ್ನು ಬಂಧಿಸಿದ್ದರು.

    ಆರೋಪಿ ಅಫ್ಸರ್ ಹನೀಜ್ ಎರಡು ದಿನಗಳ ಹಿಂದೆ ಸಿಬಿಐ ವಿಶೇಷ ನ್ಯಾಯಾಲಯದಿಂದ ಜಾಮೀನು ದೊರೆತು ಜೈಲಿನಿಂದ ಹೊರ ಬಂದಿದ್ದ. ಶಿವಾಜಿನಗರದ ಓಪಿಎಚ್ ರಸ್ತೆಯ ಬೇಪಾರಿಯನ್ ಮಸೀದಿಯಲ್ಲಿ ಬುಧವಾರ ಅಫ್ಸರ್ ಹನೀಜ್‍ಗೆ ಅದ್ದೂರಿಯಾಗಿ ಸನ್ಮಾನ ಮಾಡಲಾಗಿದೆ. ಮೌಲ್ವಿಯ ಸನ್ಮಾನದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರ ಟೀಕೆಗೆ ಗುರಿಯಾಗಿದೆ.

    ಈ ಹಿಂದೆ ಮಾಜಿ ಸಚಿವ ಜಮೀರ್ ಅಹ್ಮದ್ ಹಾಗೂ ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ ಅವರು ಐಎಂಎ ಬಹು ಕೋಟಿ ವಂಚನೆ ಪ್ರಕರಣದಲ್ಲಿ ಜೈಲು ಸೇರಿದ್ದ ಆರೋಪಿಯ ಜೊತೆಗೆ ಪಾರ್ಟಿ ಮಾಡಿದ್ದರು. ಐಎಂಎ ಪ್ರಕರಣದಲ್ಲಿ ಜೈಲು ಸೇರಿದ್ದ ಮುಜಾಹಿದ್ದೀನ್ ಅಕ್ಟೋಬರ್ 13ರಂದು ಜಾಮೀನಿನ ಆಧಾರದ ಮೇಲೆ ಹೊರ ಬಂದಿದ್ದ. ಅಂದು ರಾತ್ರಿ ಮಾಜಿ ಸಚಿವ ಜಮೀರ್ ಅಹ್ಮದ್ ಅವರು ಮುಜಾಹಿದ್ದೀನ್ ಜೊತೆಗೆ ಪಾರ್ಟಿ ಮಾಡಿದ್ದರು.

    ಐಎಂಎ ಪ್ರಕರಣದಲ್ಲಿ ಮುಖ್ಯ ಆರೋಪಿ ಆಗಿರುವ ಐಎಂಎ ಜ್ಯುವೆಲ್ಸ್ ಮಾಲೀಕ ಮನ್ಸೂರ್ ಖಾನ್ ಪರಾರಿಯಾಗಲು ಮುಜಾಹಿದ್ದೀನ್ ಸಹಾಯ ಮಾಡಿದ್ದ. ಈ ಹಿನ್ನೆಲೆಯಲ್ಲಿ ಮುಜಾಹಿದ್ದೀನ್ ಮೇಲೆ ಎಸ್‍ಐಟಿ ರೇಡ್ ಮಾಡಿ ಅರೆಸ್ಟ್ ಮಾಡಿತ್ತು. ಆದರೆ ಅಕ್ಟೋಬರ್ 11ರಂದು ಮುಜಾಹಿದ್ದೀನ್‍ಗೆ ಹೈಕೋರ್ಟ್ ಏಕಸದಸ್ಯ ಪೀಠವು ಜಾಮೀನು ನೀಡಿತ್ತು. ಅಕ್ಟೋಬರ್ 13ರಂದು ಮುಜಾಹಿದ್ದೀನ್ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ. ಜೈಲಿನ ಹೊರಗೆ ನಿಂತಿದ್ದ ಬೆಂಬಲಿಗರು ಪಟಾಕಿ ಸಿಡಿಸಿ, ಹಾರ ಹಾಕಿ ಸ್ವಾಗತಿಸಿದ್ದರು.

    ಗ್ರಾಹಕರಿಗೆ ವಂಚಿಸಿದ್ದು ಹೇಗೆ?
    ಐಎಂಎ ಜ್ಯುವೆಲ್ಸ್ ಚಿನ್ನ ಖರೀದಿಸುವ ಗ್ರಾಹಕರಿಗೆ ಮೇಕಿಂಗ್ ಹಾಗೂ ವೇಸ್ಟೇಜ್ ಶುಲ್ಕ ವಿಧಿಸುತ್ತಿರಲಿಲ್ಲ. ಈ ಪ್ರಕಟಣೆ ನೋಡಿ ಜನ ಚಿನ್ನ ಖರೀದಿ ಮಾಡುತ್ತಿದ್ದರು. ಖರೀದಿಗೆ ಬಂದ ಗ್ರಾಹಕರಿಗೆ ಕಂಪನಿಯಲ್ಲಿ ಹಣ ಹೂಡುವಂತೆ ಸಿಬ್ಬಂದಿ ಪುಸಲಾಯಿಸುತ್ತಿದ್ದರು. ಜ್ಯುವೆಲ್ಸ್ ಸಿಬ್ಬಂದಿಯ ಮಾತಿಗೆ ಮರುಳಾದ ಜನ ತಮ್ಮಲ್ಲಿದ್ದ ಹಣವನ್ನು ಹೂಡಿಕೆ ಮಾಡುತ್ತಿದ್ದರು. 1 ಲಕ್ಷ ರೂ. 3 ಸಾವಿರ ರೂ. ನಂತೆ ಕಂಪನಿ ಬಡ್ಡಿ ನೀಡುತಿತ್ತು. ಕಂಪನಿ ಸರಿಯಾದ ಸಮಯದಲ್ಲಿ ಲಾಭಾಂಶ ನೀಡುತ್ತಿದ್ದ ಕಾರಣ ವಿಶ್ವಾಸಾರ್ಹತೆ ಗಳಿಸಿಕೊಂಡಿತ್ತು.

    ಲಾಭಾಂಶ ಪಡೆದ ಗ್ರಾಹಕರು ಸ್ನೇಹಿತರಿಗೆ ಹೇಳುತ್ತಿದ್ದ ಕಾರಣ ಅವರು ಹೂಡಿಕೆ ಮಾಡತೊಡಗಿದರು. ಭಾರೀ ಪ್ರಚಾರ ಸಿಕ್ಕಿದ ಪರಿಣಾಮ ಹೂಡಿಕೆ ಹೆಚ್ಚಾಯಿತು. ಆದರೆ ಕಳೆದ 2-3 ತಿಂಗಳಿನಿಂದ ಸಂಸ್ಥೆ ಬಡ್ಡಿ ನೀಡಿರಲಿಲ್ಲ. ಈ ನಡುವೆ ಜೂನ್ 10 ರಂದು ಸಂಪೂರ್ಣ ಹಣ ನೀಡುವುದಾಗಿ ಭರವಸೆ ನೀಡಿತ್ತು. ಆದರೆ ಜೂ.9 ರಂದು ಮಾಲೀಕ ಮನ್ಸೂರ್ ಅಲಿ ಖಾನ್ ಆತ್ಮಹತ್ಯೆಯ ವಿಡಿಯೋ ವೈರಲ್ ಆದ ಬಳಿಕ ಮಳಿಗೆಯ ಮುಂದೆ ಜನರು ಜಮಾಯಿಸಿ ಹೂಡಿದ್ದ ಹಣವನ್ನು ಕೇಳಲು ಆರಂಭಿಸಿದ್ದರು.