Tag: Mauni Amavasya

  • ನೀವು ಇರುವ ಗಂಗಾ ಮಾತೆಯ ಘಾಟ್ ಬಳಿಯೇ ಸ್ನಾನ ಮಾಡಿ, ವದಂತಿ ನಂಬಬೇಡಿ: ಯೋಗಿ ಅದಿತ್ಯನಾಥ್‌

    ನೀವು ಇರುವ ಗಂಗಾ ಮಾತೆಯ ಘಾಟ್ ಬಳಿಯೇ ಸ್ನಾನ ಮಾಡಿ, ವದಂತಿ ನಂಬಬೇಡಿ: ಯೋಗಿ ಅದಿತ್ಯನಾಥ್‌

    ಪ್ರಯಾಗ್‌ರಾಜ್‌: ಸಂಗಮದ ಎಲ್ಲಾ ಘಾಟ್‌ಗಳಲ್ಲಿ ಜನರು ಶಾಂತಿಯುತವಾಗಿ ಸ್ನಾನ ಮಾಡುತ್ತಿದ್ದಾರೆ. ಯಾವುದೇ ವದಂತಿಗೆ ಕಿವಿಗೊಡಬೇಡಿ ಎಂದು ಉತ್ತರ ಪ್ರದೇಶ (Uttar Pradesh) ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್‌ (Yogi Adityanath) ಜನರಲ್ಲಿ ಮನವಿ ಮಾಡಿದ್ದಾರೆ.

    ಮಹಾಕುಂಭ ಮೇಳದಲ್ಲಿ (MahaKumba Mela) ಕಾಲ್ತುಳಿತ (Stampede) ಸಂಭವಿಸಿದ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ ಯೋಗಿ ನೀವು ಇರುವ ಗಂಗಾ ಮಾತೆಯ ಘಾಟ್ ಬಳಿಯೇ ಸ್ನಾನ ಮಾಡಿ ತ್ರಿವೇಣಿ ಸಂಗಮಕ್ಕೆ ಹೋಗಲು ಪ್ರಯತ್ನ ಮಾಡಬೇಡಿ ಎಂದು ವಿನಂತಿ ಮಾಡಿದ್ದಾರೆ.

    ನಾನು ಸಾಧು ಸಂತರ ಜೊತೆಗೆ ಮಾತನಾಡಿದ್ದೇವೆ. ಮೊದಲು ಭಕ್ತಾಧಿಗಳು ಪುಣ್ಯಸ್ನಾನ ಮಾಡಲಿ. ಆಮೇಲೆ ನಾವು ಸ್ನಾನ ಮಾಡುವುದಾಗಿ ಸಾಧು ಸಂತರು, ಅಖಾಡಗಳ ಮುಖ್ಯಸ್ಥರು ಹೇಳಿದ್ದಾರೆ. ಆರೋಗ್ಯ ಸಮಸ್ಯೆ ಇರುವವರು ದೂರು ನಡೆಯಬೇಡಿ. ಯಾವುದೇ ಘಾಟ್‌ನಲ್ಲಿ ಸ್ನಾನ ಮಾಡಿದರು ಅದು ಗಂಗಾ ನದಿಯ ನೀರು. ಮೌನಿ ಅಮವಾಸ್ಯೆ ಗಂಗಾ ಸ್ನಾನ ಪುಣ್ಯ ಪ್ರಾಪ್ತಿ ಮಾಡಲಿದೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ, ಜನಸ್ತೋಮ ಇರುವ ಹಿನ್ನಲೆ ಜನರು ಸಂಯಮದಿಂದ ವರ್ತಿಸಿ ಎಂದು ಮನವಿ ಮಾಡಿದರು.

    ಆಡಳಿತದ ಸೂಚನೆಗಳನ್ನು ಅನುಸರಿಸಿ ಮತ್ತು ಅವರೊಂದಿಗೆ ಸಹಕರಿಸಬೇಕು. ಯಾವುದೇ ವದಂತಿಗಳಿಗೆ ಗಮನ ಕೊಡಬೇಡಿ ಎಂದು ಕೇಳಿಕೊಂಡಿದ್ದಾರೆ. ಇದನ್ನೂ ಓದಿ: GSLV ರಾಕೆಟ್‌ ಹಾರಿಸಿ ಶತಕ ಹೊಡೆದ ಇಸ್ರೋ! – ಏನಿದು ನಾವಿಕ್‌? ಲಾಭ ಏನು?

    ಇಂದು ಮೌನಿ ಅಮಾವಾಸ್ಯೆ (Mauni Amavasya) ಇರುವ ಹಿನ್ನೆಲೆಯಲ್ಲಿ ಭಾರೀ ಸಂಖ್ಯೆಯಲ್ಲಿ ಸ್ನಾನ ಮಾಡಲು ತ್ರೀವೇಣಿ ಸಂಗಮಕ್ಕೆ ಆಗಮಿಸಿದ್ದರು. ಈ ವೇಳೆ ಕೆಲವರು ಬ್ಯಾರಿಕೇಡ್‌ ಹಾರಿ ಪವಿತ್ರ ಸ್ನಾನಕ್ಕೆ ಮುನ್ನುಗಿದ್ದರಿಂದ ಪ್ರಯಾಗ್‌ರಾಜ್‌ನಲ್ಲಿ ಕಾಲ್ತುಳಿತ ಸಂಭವಿಸಿತ್ತು.

    ಕಾಲ್ತುಳಿತ ಸುದ್ದಿ ಪ್ರಕಟವಾಗುತ್ತಿದ್ದಂತೆ ಪ್ರಧಾನಿ ಮೋದಿ ಅವರು ಇಂದು ಮೂರು ಬಾರಿ ಕರೆ ಮಾಡಿ ಯೋಗಿ ಅದಿತ್ಯನಾಥ್‌ ಅವರಲ್ಲಿ ಮಾತನಾಡಿದ್ದಾರೆ.

    ಕುಂಭಮೇಳದಲ್ಲಿ ಕಾಲ್ತುಳಿತ ವರದಿಯಾದ ಬೆನ್ನಲ್ಲೇ ಮುನ್ನೆಚ್ಚರಿಕೆ ಕ್ರಮವಾಗಿ ಅಖಾಡಗಳು ಅಮೃತ ಸ್ನಾನವನ್ನು ತಾತ್ಕಾಲಿಕವಾಗಿ ರದ್ದು ಮಾಡಿದ್ದವು. ಈಗ ಪರಿಸ್ಥಿತಿ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದ್ದು ಪವಿತ್ರ ಸ್ನಾನ ಮತ್ತೆ ಆರಂಭಗೊಂಡಿದೆ.

     

  • ಮಹಾಕುಂಭ ಮೇಳದಲ್ಲಿ ಕಾಲ್ತುಳಿತ – 10 ಸಾವು

    ಮಹಾಕುಂಭ ಮೇಳದಲ್ಲಿ ಕಾಲ್ತುಳಿತ – 10 ಸಾವು

    ಪ್ರಯಾಗ್‌ರಾಜ್‌: ಮಹಾಕುಂಭ ಮೇಳದಲ್ಲಿ (Mahakumbh )ಕಾಲ್ತುಳಿತ (Stampede) ಸಂಭವಿಸಿ ಹತ್ತು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

    ಇದು ಮೌನಿ ಅಮಾವಾಸ್ಯೆ (Mauni Amavasya) ಹಿನ್ನೆಲೆಯಲ್ಲಿ ಕೋಟ್ಯಂತರ ಭಕ್ತರು ಪವಿತ್ರ ಸ್ನಾನ ಮಾಡಲು ಪ್ರಯಾಗ್‌ರಾಜ್‌ಗೆ ಬರುತ್ತಿದ್ದಾರೆ. ಈ ಸಂದರ್ಭದಲ್ಲಿ ನೂಕು ನುಗ್ಗಲು ಸಂಭವಿಸಿ ಕಾಲ್ತುಳಿತವಾಗಿದೆ.

     

    ಘಟನೆಯಲ್ಲಿ ಹಲವು ಮಂದಿ ಗಾಯಗೊಂಡಿದ್ದು, ಗಾಯಗೊಂಡವರನ್ನ ಸೆಕ್ಟರ್ 2 ನಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲವಾರು ಜನರು ಕುಟುಂಬಸ್ಥರಿಂದ ಬೇರ್ಪಟ್ಟಿದ್ದಾರೆ.

    ಇಂದು ಒಂದೇ ದಿನ ಹತ್ತು ಕೋಟಿ ಜನರು ಅಮೃತ ಸ್ನಾನ ಮಾಡುವ ನಿರೀಕ್ಷೆ ಮಾಡಲಾಗಿತ್ತು.