Tag: Mawlawi

  • ಕೌಟುಂಬಿಕ ಸಮಸ್ಯೆ ಬಗೆಹರಿಸಿಕೊಡೋದಾಗಿ ಮೌಲ್ವಿಯಿಂದ ಮಹಿಳೆಗೆ ಲೈಂಗಿಕ ಕಿರುಕುಳ – ಕೇಸ್‌ ದಾಖಲು

    ಕೌಟುಂಬಿಕ ಸಮಸ್ಯೆ ಬಗೆಹರಿಸಿಕೊಡೋದಾಗಿ ಮೌಲ್ವಿಯಿಂದ ಮಹಿಳೆಗೆ ಲೈಂಗಿಕ ಕಿರುಕುಳ – ಕೇಸ್‌ ದಾಖಲು

    – ಯಂತ್ರಶಾಸ್ತ್ರ ನೆಪದಲ್ಲಿ ಮಹಿಳೆಯ ಖಾಸಗಿ ಅಂಗ ಮುಟ್ಟಿ ಕಿರುಕುಳ

    ನೆಲಮಂಗಲ: ಕೌಟುಂಬಿಕ ಸಮಸ್ಯೆ ಪರಿಹರಿಸಿಕೊಳ್ಳಲು ಬಂದ ಮಹಿಳೆಯೊಬ್ಬರ ಮೇಲೆ ಮೌಲ್ವಿಯೊಬ್ಬ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ (Nelamangala) ತಾಲೂಕಿನ ಡಾಬಸ್‌ಪೇಟೆ ಪೊಲೀಸ್ ಠಾಣಾ (Dabaspete Police Station) ವ್ಯಾಪ್ತಿಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

    ತುಮಕೂರು ಮೂಲದ ಮಹಿಳೆ (Tumkur Women) ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದು ಸೋಂಪುರ ಹೋಬಳಿಯ ಕೂತಘಟ್ಟ ಗ್ರಾಮದ ಭದ್ರೆ ಅಲಂ ಲೈಂಗಿಕ ದೌರ್ಜನ್ಯ ಮಾಡಿದ ಆರೋಪಿ. ಇದನ್ನೂ ಓದಿ: ಹಾಸನ ಹೃದಯಾಘಾತ ವರದಿ ಬಹಿರಂಗ: 8 ಲಕ್ಷ ಚಾಲಕರಿಗೆ ಹೆಲ್ತ್‌ ಕ್ಯಾಂಪ್‌ ಆಯೋಜಿಸಲು ಮುಂದಾದ ಸರ್ಕಾರ

    ಜೂನ್‌ 30ರಂದು ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅಂದು ಸಂಜೆ 7 ಗಂಟೆ ಸುಮಾರಿಗೆ ತುಮಕೂರು ಮೂಲದ ಮಹಿಳೆ ತನ್ನ ಪತಿಯ ಜೊತೆ ಕೂತಗಟ್ಟದಲ್ಲಿರುವ ಭದ್ರೆ ಅಲಂ ಯಂತ್ರಶಾಸ್ತ್ರ ಮಾಡುತ್ತಾರೆಂದು ತಿಳಿದು ಅವರ ಬಳಿ ಬಂದು ಸಂಸಾರದ ತೊಂದರೆ ಹೇಳಿ ಕಟಲೇ ಮಾಡಿಕೊಡುವಂತೆ ಕೇಳಿದ್ದಾರೆ. ಆಗ ಭದ್ರೆ ಅಲಂ ಮಹಿಳೆಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ.

    ಮಹಿಳೆಯ ಖಾಸಗಿ ಅಂಗ ಮುಟ್ಟಿ ದೈಹಿಕವಾಗಿ ಹಿಂಸೆ ಮಾಡಿದ್ದಾನೆ. ಈ ಹಿನ್ನೆಲೆಯಲ್ಲಿ ಜುಲೈ 9ರಂದು ಮಹಿಳೆ ಡಾಬಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮಹಿಳೆ ನೀಡಿದ ದೂರಿನ ಅನ್ವಯ ಡಾಬಸ್‌ಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಬಂಧನಕ್ಕೆ ಬಲೆ ಬೀಸಿದ್ದಾರೆ. ಇದನ್ನೂ ಓದಿ: ಮೈಸೂರು| ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ, ವ್ಯಕ್ತಿ ಮೇಲೆ ಡೆಡ್ಲಿ ಅಟ್ಯಾಕ್‌

  • ಮಸೀದಿಯಲ್ಲಿ ಮೌಲ್ವಿಯಿಂದ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಬಂಧನ

    ಮಸೀದಿಯಲ್ಲಿ ಮೌಲ್ವಿಯಿಂದ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಬಂಧನ

    ಕಾರವಾರ: ಕುರಾನ್ ಓದಲು ಬರುತಿದ್ಧ ಅಪ್ರಾಪ್ತ ಬಾಲಕನ ಮೇಲೆ ಮೌಲ್ವಿಯೊಬ್ಬ (Mawlawi) ಮಸೀದಿಯಲ್ಲಿ ಲೈಂಗಿಕ ದೌರ್ಜನ್ಯವೆಸಗಿದ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಕುಮಟಾ ನಗರದಲ್ಲಿ ನಡೆದಿದೆ.

    ಘಟನೆ ಸಂಬಂಧ ಕುಮಟಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆತನ ಬಂಧನ ಮಾಡಲಾಗಿದೆ. ಇದನ್ನೂ ಓದಿ: ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಬುರ್ಕಾ ಧರಿಸಿ ನೃತ್ಯ – ವ್ಯಕ್ತಿ ಬಂಧನ

    ಪಶ್ಚಿಮ ಬಂಗಾಳ ಮೂಲದ ಅಬ್ಬುಸ್ ಸಮದ್ ಜಿಯಾಯಿ (25) ಬಂಧಿತ ಮೌಲ್ವಿಯಾಗಿದ್ದಾನೆ. ನಿನ್ನೆ ರಾತ್ರಿ ಬಾಲಕನಿಗೆ ಮಸೀದಿಯಲ್ಲಿ ವಸ್ತ್ರ ಬಿಚ್ಚಿಸಿ ಲೈಂಗಿಕ ದೌರ್ಜನ್ಯವೆಸಗಿದ್ದನು.

    ಈ ಕುರಿತು ಬಾಲಕನ ತಂದೆಯ ದೂರಿನನ್ವಯ ಮೌಲ್ವಿಯನ್ನು ಕುಮಟಾ ಠಾಣೆ ಪೊಲೀಸರು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಇದನ್ನೂ ಓದಿ: ಮಸೀದಿ ಮೇಲೆ ಭಗವಾಧ್ವಜ ಹಾರಿಸಿ ಪರಾರಿಯಾದ ಕಿಡಿಗೇಡಿಗಳು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅಂಗವಿಕಲ ಮಹಿಳೆಯನ್ನು ಮದುವೆಯಾಗಿ ಹಣ ದೋಚಿ ಪರಾರಿಯಾದ ಮೌಲ್ವಿ

    ಅಂಗವಿಕಲ ಮಹಿಳೆಯನ್ನು ಮದುವೆಯಾಗಿ ಹಣ ದೋಚಿ ಪರಾರಿಯಾದ ಮೌಲ್ವಿ

    ಕಾರವಾರ: ಅಂಗವಿಕಲ ಮಹಿಳೆಯನ್ನು ನಂಬಿಸಿ ಮದುವೆಯಾಗಿ, ನಂತರ ಆಕೆಯ ಬಳಿ ಇದ್ದ ಹಣ ದೋಚಿ ದರ್ಗಾದಲ್ಲಿದ್ದ ಮೌಲ್ವಿ ಪಲಾಯನ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ದಾಸನಕೊಪ್ಪದಲ್ಲಿ ನಡೆದಿದೆ.

    ಬನವಾಸಿಯ ದಾಸನಕೊಪ್ಪದ ಕುರೇಷಿ ಮಕ್ಬುಲ್ ಸಾಬ್ ದರ್ಗಾದ ಉತ್ತರ ಪ್ರದೇಶ ಮೂಲದ ಮೌಲ್ವಿ ಮಹ್ಮದ್ ಜಾಕಿರ್ (28) ಅಂಗವಿಕಲ ಮಹಿಳೆಗೆ ವಂಚಿಸಿದ್ದಾನೆ. ಮಹಿಳೆ ಈ ಹಿಂದೆ ಮದುವೆಯಾಗಿ ಹತ್ತು ವರ್ಷದ ಮಗನಿದ್ದಾನೆ. ಗಂಡ ಬಿಟ್ಟು ಹೋಗಿದ್ದರಿಂದ ಸಣ್ಣಪುಟ್ಟ ಕೆಲಸ ಮಾಡಿಕೊಂಡು ದರ್ಗಾದ ಬಳಿಯೇ ಚಿಕ್ಕ ಗುಡಿಸಲಿನಲ್ಲಿ ಮಹಿಳೆ ವಾಸವಿದ್ದಳು. ಇದನ್ನೂ ಓದಿ: ಜನರ ಮರ್ಯಾದೆಯನ್ನೆ ಬಂಡವಾಳ ಮಾಡಿಕೊಂಡಿದ್ದ ಗ್ಯಾಂಗ್ ರೇಪ್ ಕಿರಾತಕರು

    ಈ ವೇಳೆ ಮಹಿಳೆಯನ್ನು ಪರಿಚಯ ಮಾಡಿಕೊಂಡು, ಬಾಳು ಕೊಡುವುದಾಗಿ ನಂಬಿಸಿ, ಮದುವೆಯಾಗಿದ್ದಾನೆ. ಕೆಲವು ತಿಂಗಳವರೆಗೆ ಜೀವನ ನಡೆಸಿ, ಮಹಿಳೆಯ ಮನೆಯಲ್ಲಿದ್ದ ಹಣ, ಮೊಬೈಲ್ ಸೇರಿದಂತೆ ಎಲ್ಲವನ್ನೂ ದೋಚಿ ಪರಾರಿಯಾಗಿದ್ದಾನೆ. ಘಟನೆ ಸಂಬಂಧ ವಂಚನೆಗೊಳಗಾದ ಮಹಿಳೆ ಬನವಾಸಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಮೌಲ್ವಿಯ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.