Tag: MBA Student

  • ಮದುವೆಯಲ್ಲಿ ಡಾನ್ಸ್‌ ಮಾಡುತ್ತಿದ್ದಾಗಲೇ ಹೃದಯ ಸ್ತಂಭನ – ವೇದಿಕೆಯಲ್ಲೇ ಎಂಬಿಎ ಪದವೀಧರೆ ಸಾವು

    ಮದುವೆಯಲ್ಲಿ ಡಾನ್ಸ್‌ ಮಾಡುತ್ತಿದ್ದಾಗಲೇ ಹೃದಯ ಸ್ತಂಭನ – ವೇದಿಕೆಯಲ್ಲೇ ಎಂಬಿಎ ಪದವೀಧರೆ ಸಾವು

    – 12ನೇ ವಯಸ್ಸಿನಲ್ಲೇ ಆಕೆಯ ಸಹೋದರನೂ ಹೃದಯಾಘಾತದಿಂದಲೇ ಸಾವು

    ಭೋಪಾಲ್‌: ಮದುವೆ ಕಾರ್ಯಕ್ರಮದಲ್ಲಿ ನೃತ್ಯ ಮಾಡುತ್ತಿದ್ದಾಗಲೇ ಹೃದಯಸ್ತಂಭನದಿಂದ (Cardiac Arrest) 23ರ ಯುವತಿಯೊಬ್ಬಳು ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ (Madhya Pradesh) ವಿದಿಶಾ ಜಿಲ್ಲೆಯ ರೆಸಾರ್ಟ್‌ನಲ್ಲಿ ನಡೆದಿದೆ.

    ಯುವತಿಯನ್ನು ಇಂದೋರ್ ನಿವಾಸಿ ಪರಿಣಿತಾ ಜೈನ್ ಎಂದು ಗುರುತಿಸಲಾಗಿದ್ದು, ಆಕೆಯ ಸೋದರ ಸಂಬಂಧಿ ಮದುವೆಯಲ್ಲಿ (Wedding) ಪಾಲ್ಗೊಂಡಿದ್ದರು. 200ಕ್ಕೂ ಹೆಚ್ಚು ಗಣ್ಯರು ಉಪಸ್ಥಿತರಿದ್ದರು. ಈ ವೇಳೆ ಪರಿಣಿತಾ ವೇದಿಕೆಯಲ್ಲಿ ಬಾಲಿವುಡ್‌ ಗೀತೆಯೊಂದಕ್ಕೆ ನೃತ್ಯ ಮಾಡುತ್ತಿದ್ದಾಗಲೇ ಹೃದಯ ಸ್ತಂಬನದಿಂದ ಸಾವನ್ನಪ್ಪಿದ್ದಾರೆ. ಆಕೆ ಕುಸಿದು ಬಿದ್ದ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ಹರಿದಾಡಿದ ನಂತರ ಘಟನೆ ಬೆಳಕಿಗೆ ಬಂದಿದೆ.

    ಈ ವೇಳೆ ಸಮಾರಂಭದಲ್ಲಿ ಪಾಲ್ಗೊಂಡಿದ್ದ ವೈದ್ಯರು ಆಕೆಗೆ ಸಿಪಿಆರ್ (ಕಾರ್ಡಿಯೋಪಲ್ಮನರಿ ರೆಸಸಿಟೇಶನ್) ನೀಡಲು ಪ್ರಯತ್ನಿಸಿದ್ರು, ಆದ್ರೆ ಪ್ರಯೋಜನವಾಗಲಿಲ್ಲ. ತಕ್ಷಣ ಅಲ್ಲಿಂದ ಖಾಸಗಿ ಅಸ್ಪತ್ರೆಗೆ ಕರೆದೊಯ್ಯಲಾಯಿತು ಅಷ್ಟರಲ್ಲಿ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ರು. ಇದನ್ನೂ ಓದಿ: ಇಂದಿನಿಂದ ಟಿ.ನರಸೀಪುರದಲ್ಲಿ ದಕ್ಷಿಣ ಭಾರತದ ಏಕೈಕ ಕುಂಭಮೇಳ

    ಎಂಬಿಎ ಪದವೀಧರರಾಗಿದ್ದ ಪರಿಣಿತಾ ತಮ್ಮ ಪೋಷಕರೊಂದಿಗೆ ಇಂದೋರ್‌ನ ದಕ್ಷಿಣ ತುಕೋಗಂಜ್‌ನಲ್ಲಿ ವಾಸಿಸುತ್ತಿದ್ದರು. ಮೂಲಗಳ ಪ್ರಕಾರ, ಆಕೆಯ ಸಹೋದರನೊಬ್ಬ 12ನೇ ವಯಸ್ಸಿನಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿದ. ಇದನ್ನೂ ಓದಿ:  Aero India 2025 | ವೈಮಾನಿಕ ಪ್ರದರ್ಶನಕ್ಕಿಂದು ಚಾಲನೆ – ರಷ್ಯಾ, ಅಮೆರಿಕ ಸೇರಿ 90 ದೇಶಗಳು ಭಾಗಿ

  • ಮಕ್ಕಳನ್ನು ಹೆರುವ ವಿಷಯದ ಆಯ್ಕೆ ಮಹಿಳೆಗೆ ಬಿಟ್ಟಿದ್ದು – ಹೈಕೋರ್ಟ್

    ಮಕ್ಕಳನ್ನು ಹೆರುವ ವಿಷಯದ ಆಯ್ಕೆ ಮಹಿಳೆಗೆ ಬಿಟ್ಟಿದ್ದು – ಹೈಕೋರ್ಟ್

    ತಿರುವನಂತಪುರಂ: ಗರ್ಭ ಧರಿಸುವ ಅಥವಾ ಧರಿಸದೇ ಇರುವ ಮಹಿಳೆಯ ಸಂತಾನೋತ್ಪತ್ತಿ (Reproductive) ಆಯ್ಕೆ ವಿಚಾರದಲ್ಲಿ ಮಹಿಳಾ ಹಕ್ಕಿಗೆ (Woman’s Right) ಯಾವುದೇ ನಿರ್ಬಂಧವಿಲ್ಲ ಎಂದು ಕೇರಳ ಹೈಕೋರ್ಟ್ (Kerala High Court) ಹೇಳಿದೆ.

    ಸುಚಿತ್ರಾ ಶ್ರೀವಾಸ್ತವ ವರ್ಸಸ್ ಚಂಡೀಗಢ ಆಡಳಿತ ಪ್ರಕರಣದಲ್ಲಿ ಸುಪ್ರೀಂಕೋರ್ಟ್ (Supreme Court) ನೀಡಿದ ತೀರ್ಪನ್ನು ಉಲ್ಲೇಖಿಸಿ ನ್ಯಾಯಮೂರ್ತಿ ವಿ.ಜಿ ಅರುಣ್ ನೇತೃತ್ವದ ಏಕಸದಸ್ಯ ಪೀಠವು, ಸಂವಿಧಾನದ-21 (Constitution of India) ವಿಧಿಯ ಅಡಿ ಸಂತಾನೋತ್ಪತ್ತಿ ಆಯ್ಕೆ ವಿಚಾರದಲ್ಲಿ ನಿರ್ಧಾರ ಕೈಗೊಳ್ಳುವ ಹಕ್ಕು ಮಹಿಳೆಗೆ ಇದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: 

    ಗರ್ಭಧರಿಸುವ ಅಥವಾ ಗರ್ಭಧರಿಸದೇ ಇರುವ ತನ್ನ ಆಯ್ಕೆಯ ಹಕ್ಕನ್ನು ಚಲಾಯಿಸಲು ಮಹಿಳೆಗೆ ಯಾವುದೇ ನಿರ್ಬಂಧವಿರುವುದಿಲ್ಲ. ಇದು ಆಕೆಯ ವೈಯಕ್ತಿಕ ಸ್ವಾತಂತ್ರ‍್ಯದ ಭಾಗವಾಗಿದೆ ಎಂದು ಪೀಠವು ತನ್ನ ಆದೇಶದಲ್ಲಿ ತಿಳಿಸಿದೆ.

    20 ವಾರ ಮೀರಿದ ಗರ್ಭಾವಸ್ಥೆಯನ್ನು ಗರ್ಭಪಾತ ಮಾಡಿಸುವ ಆಯ್ಕೆ ವಿಧಾನದಿಂದ ಅವಿವಾಹಿತ ಮಹಿಳೆಯನ್ನು ಹೊರಗಿಡುವುದು ಸಂವಿಧಾನ 14ನೇ ವಿಧಿಗೆ ವಿರುದ್ಧವಾಗಿದೆ ಎಂದು ಸುಪ್ರೀಂ ಕೋರ್ಟ್ (Supreme Court) ಇತ್ತೀಚೆಗೆ ಹೇಳಿದ್ದನ್ನು ನ್ಯಾಯಾಲಯ ತೀರ್ಪಿನಲ್ಲಿ ಉಲ್ಲೇಖಿಸಿತು.

    ಸಹಪಾಠಿಯೊಂದಿಗೆ ನಡೆಸಿದ ಒಪ್ಪಿತ ಲೈಂಗಿಕ ಸಂಪರ್ಕದಿಂದಾಗಿ ಗರ್ಭ ಧರಿಸಿದ್ದನ್ನು ತೆಗೆಸಲು ಕೋರಿ 23 ವರ್ಷದ ಎಂಬಿಎ ವಿದ್ಯಾರ್ಥಿನಿ (MBA Student) ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ ಪೀಠವು ಈ ಆದೇಶ ಮಾಡಿತು.

    ಏನಿದು ಪ್ರಕರಣ?
    ಗರ್ಭ ನಿರೋಧಕ ವಿಫಲವಾಗಿದ್ದರಿಂದ ಎಂಬಿಎ ವಿದ್ಯಾರ್ಥಿನಿ ಗರ್ಭ ಧರಿಸಿದ್ದಳು. ಅಲ್ಲದೇ ಆಕೆ ಪಾಲಿಸಿಸ್ಟಿಕ್ ಓವೇರಿಯನ್ ಕಾಯಿಲೆಯಿಂದ ಬಳಲುತ್ತಿದ್ದಳು. ಅಲ್ಟ್ರಾ ಸೌಂಡ್ ಸ್ಕ್ಯಾನ್ ಮಾಡಿಸಿದ ಬಳಿಕ ಗರ್ಭಧರಿಸುವ ವಿಚಾರ ತಿಳಿದಿದೆ.

    ವಿದ್ಯಾರ್ಥಿನಿ ನಿಯಂತ್ರಿತವಾಗಿ ಮುಟ್ಟಾಗದೇ ಇರುವುದರಿಂದ ತಪಾಸಣೆಗೆ ವೈದ್ಯರ ಬಳಿ ತೆರಳಿದ್ದಳು. ಈ ವೇಳೆ ವೈದ್ಯರು ಅಲ್ಟ್ರಾ ಸ್ಕ್ಯಾನ್ ಮಾಡಿಸಲು ಸೂಚಿಸಿದ್ದಾರೆ. ಬಳಿಕವೇ ಈ ವಿಚಾರ ತಿಳಿದಿದೆ. ಇದರಿಂದ ಮಾನಸಿಕ ಮತ್ತು ದೈಹಿಕವಾಗಿ ಯಾತನೆ ಅನುಭವಿಸುತ್ತಿದ್ದು, ಲೈಂಗಿಕ ಸಂಬಂಧ ಹೊಂದಿದ್ದ ಸಹಪಾಠಿಯು ಉನ್ನತ ಶಿಕ್ಷಣ ಪಡೆಯಲು ವಿದೇಶಕ್ಕೆ ತೆರಳಿದ್ದಾನೆ ಎಂದು ಆಕೆ ಮನವಿಯಲ್ಲಿ ವಿವರಿಸಿದ್ದಾಳೆ.

    ಗರ್ಭಧಾರಣೆಯನ್ನು ಮುಂದವರಿಸಿದರೆ ಮಾನಸಿಕ ವೇದನೆ ಹೆಚ್ಚಾಗಲಿದೆ. ಜೊತೆಗೆ ಮಗು ಪಡೆಯುವುದು ಶಿಕ್ಷಣ ಮತ್ತು ಜೀವನ ನಿರ್ವಹಣೆಗೆ ಅಡ್ಡಿಯಾಗಲಿದೆ. ಗರ್ಭಾವಸ್ಥೆಯು 24 ವಾರ ದಾಟಿರುವುದರಿಂದ ಯಾವುದೇ ಆಸ್ಪತ್ರೆ ಗರ್ಭಪಾತ ಮಾಡಿಸಲು ಸಿದ್ಧವಿಲ್ಲ. ಹೀಗಾಗಿ, ನ್ಯಾಯಾಲಯ ಮೆಟ್ಟಿಲೇರಿದ್ದಾಗಿ ಆಕೆ ಮನವಿಯಲ್ಲಿ ಉಲ್ಲೇಖಿಸಿದ್ದಳು. ಇದನ್ನೂ ಓದಿ: ಕೋಟೆ ನಾಡಿನಲ್ಲಿ ದಾರುಣ ಘಟನೆ – ಒಂದೇ ಕುಟುಂಬದ ಮೂವರು ಆತ್ಮಹತ್ಯೆ

    ಇದನ್ನು ಪರಿಗಣಿಸಿರುವ ಪೀಠವು ಸರ್ಕಾರಿ ಆಸ್ಪತ್ರೆಯಲ್ಲಿ ಗರ್ಭಪಾತ ಮಾಡಿಸಿಕೊಳ್ಳಲು ಅನುಮತಿಸಿದೆ. ಪ್ರಕ್ರಿಯೆ ನಡೆಸಲು ವೈದ್ಯಕೀಯ ತಂಡ ರಚಿಸುವಂತೆ ಸಂಬಂಧಿತ ಆಸ್ಪತ್ರೆಗೆ ನಿರ್ದೇಶಿಸಿದೆ. ಒಂದೊಮ್ಮೆ ಮಗು ಜೀವಂತವಾಗಿ ಉಳಿದರೆ ಮಗುವಿಗೆ ಅತ್ಯುತ್ತಮ ವೈದ್ಯಕೀಯ ವ್ಯವಸ್ಥೆ ಮಾಡುವಂತೆ ನ್ಯಾಯಾಲಯವು ಆಸ್ಪತ್ರೆಗೆ ನಿರ್ದೇಶನ ನೀಡಿದೆ.

    ಅರ್ಜಿದಾರರ ಪರ ವಕೀಲರಾದ ಆಕಾಶ್ ಎಸ್, ಗಿರೀಶ್ ಕುಮಾರ್, ವಿ.ಎಸ್ ವರಲಕ್ಷ್ಮೀ ಹಾಗೂ ಎಸ್. ನೀತು ವಾದಿಸಿದರು.

    Live Tv
    [brid partner=56869869 player=32851 video=960834 autoplay=true]

  • ಮೆಟ್ರೋದಲ್ಲಿ ಮಹಿಳೆಗೆ ಕಿರುಕುಳ – ಸೀನಿಯರ್ ಮ್ಯಾನೇಜರ್, ಎಂಬಿಎ ವಿದ್ಯಾರ್ಥಿ ಅರೆಸ್ಟ್

    ಮೆಟ್ರೋದಲ್ಲಿ ಮಹಿಳೆಗೆ ಕಿರುಕುಳ – ಸೀನಿಯರ್ ಮ್ಯಾನೇಜರ್, ಎಂಬಿಎ ವಿದ್ಯಾರ್ಥಿ ಅರೆಸ್ಟ್

    ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯ ರಾಜೀವ್ ಚೌಕ್ ಮೆಟ್ರೋ ನಿಲ್ದಾಣದಲ್ಲಿ ಮಹಿಳೆಯೊಬ್ಬರಿಗೆ ಕಿರುಕುಳ ನೀಡಿ, ಬೆದರಿಕೆಯೊಡ್ಡಿದ ಆರೋಪದಡಿ ಹಿರಿಯ ಮ್ಯಾನೇಜರ್ ಮತ್ತು ಎಂಬಿಎ ವಿದ್ಯಾರ್ಥಿಯನ್ನು ಬಂಧಿಸಲಾಗಿದೆ.

    ಮೇ 3 ರಂದು ಈ ಘಟನೆ ನಡೆದಿದ್ದು, ಆರೋಪಿಯನ್ನು ಜೆನ್‍ಪ್ಯಾಕ್ಟ್‍ನ ಹಿರಿಯ ವ್ಯವಸ್ಥಾಪಕ ಲವ್ ಬಗ್ಗಾ ಎಂದು ಗುರುತಿಸಲಾಗಿದೆ. ರಾಜೀವ್ ಚೌಕ್ ಮೆಟ್ರೋ ನಿಲ್ದಾಣದಲ್ಲಿ ತನಗೆ ಕಿರುಕುಳ ನೀಡುವುದರ ಜೊತೆಗೆ ಬೆದರಿಕೆ ಹಾಕಲಾಗಿದೆ ಎಂದು ಮಹಿಳೆ ಆರೋಪಿಸಿದ್ದು, ಈ ಕುರಿತಂತೆ ಟ್ವೀಟ್ ಕೂಡ ಮಾಡಿದ್ದರು. ಇದನ್ನೂ ಓದಿ: ಕತ್ತು, ಮರ್ಮಾಂಗ ಹಿಸುಕಿ ಕೊಲೆಗೈದು ದತ್ತುಮಗನ ಶವ ಚೀಲದಲ್ಲಿ ತುಂಬಿ ಕಥೆ ಕಟ್ಟಿದ್ಳು!

    ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ವಿಶ್ಲೇಷಿಸಿ ನಂತರ ಆರೋಪಿ ಬಗ್ಗೆ ಮಾಹಿತಿ ಕಲೆಹಾಕಲು ಪ್ರಾರಂಭಿಸಿದರು. ಮೊದಲಿಗೆ ಮೆಟ್ರೋ ನಿಲ್ದಾಣಕ್ಕೆ ವ್ಯಕ್ತಿ ಆಗಮಿಸಿದ್ದನ್ನು ಸಿಸಿಟಿವಿ ದೃಶ್ಯದಲ್ಲಿ ಗಮನಿಸಿದ ಪೊಲೀಸರು, ಬಳಿಕ ಆರೋಪಿ ಪ್ರಯಾಣಿಸಲು ಬಳಸುತ್ತಿದ್ದ ಮೆಟ್ರೋ ಕಾರ್ಡ್‍ನಿಂದ ಆತನ ವಿವರವನ್ನು ಸಂಗ್ರಹಿಸಿದ್ದಾರೆ.

    CNG CRIME

    ಮೂರು ತಿಂಗಳ ತನಿಖೆಯ ನಂತರ ಪ್ರಮುಖ ಆರೋಪಿಯನ್ನು 38 ವರ್ಷದ ಲುವ್ ಬಗ್ಗಾ ಎಂದು ಗುರುತಿಸಿದ ಪೊಲೀಸರು ಆತನನ್ನು ದೆಹಲಿಯ ಪಾಂಡವ್ ನಗರದಲ್ಲಿ ಪತ್ತೆಹಚ್ಚಿ ಬಂಧಿಸಿದ್ದಾರೆ ಮತ್ತು ಪ್ರಕರಣದ ಎರಡನೇ ಆರೋಪಿ ದೆಹಲಿ ವಿಶ್ವವಿದ್ಯಾನಿಲಯದಲ್ಲಿ ಎಂಬಿಎ ವಿದ್ಯಾರ್ಥಿಯಾಗಿರುವ 24 ವರ್ಷದ ಶಿವ ಓಂ ಗುಪ್ತಾ ಎಂದು ಗುರುತಿಸಿ ಬಂಧಿಸಿದ್ದಾರೆ. ಇದನ್ನೂ ಓದಿ: ಪೈಪ್‍ಲೈನ್ ಅಡುಗೆ ಅನಿಲದ ಬೆಲೆ ಪ್ರತಿ ಯೂನಿಟ್‍ಗೆ 2.63 ರೂ. ಏರಿಕೆ

    ತನಿಖೆಯ ವೇಳೆ ಇಬ್ಬರು ಆರೋಪಿಗಳು ಯಾವುದೇ ಕ್ರಿಮಿನಲ್ ದಾಖಲೆ ಹೊಂದಿಲ್ಲ ಎಂದು ತಿಳಿದುಬಂದಿದೆ. ಜೆನ್‍ಪ್ಯಾಕ್ಟ್‍ನಲ್ಲಿ ಸೀನಿಯರ್ ಮ್ಯಾನೇಜರ್ ಆಗಿರುವ ಲವ್ ಬಗ್ಗಾ ಅವರಿಗೆ ಮದುವೆಯಾಗಿದ್ದು, ಮಗು ಕೂಡ ಇದೆ.

    Live Tv
    [brid partner=56869869 player=32851 video=960834 autoplay=true]

  • ಹಾಸ್ಟೆಲ್‍ನಲ್ಲಿ ವಾದ್ಯದ ತಂತಿಯಿಂದ ನೇಣು ಬಿಗಿದುಕೊಂಡ ಎಂಬಿಎ ವಿದ್ಯಾರ್ಥಿ

    ಹಾಸ್ಟೆಲ್‍ನಲ್ಲಿ ವಾದ್ಯದ ತಂತಿಯಿಂದ ನೇಣು ಬಿಗಿದುಕೊಂಡ ಎಂಬಿಎ ವಿದ್ಯಾರ್ಥಿ

    ಚಂಡಿಗಢ: ಎಂಬಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಹಾಸ್ಟೆಲ್‍ನ ರೂಮಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಪಂಜಾಬ್‍ನ ಲವ್ಲಿ ಪ್ರೋಫೆಷನಲ್ ಯೂನಿರ್ವಸಿಟಿಯಲ್ಲಿ ನಡೆದಿದೆ.

    ಜೈಂಬಲಿ ಮುನೀಶ್ (22) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಜೈಂಬಲಿ ಮುನೀಶ್ ಮೂಲತಃ ಆಂಧ್ರ ಪ್ರದೇಶದ ವಿಶಾಕಪಟ್ಟಣದವನು ಎಂದು ಸತ್ನಾಂಪುರ ಎಸ್‍ಎಚ್‍ಒ ಇನ್ಸ್ ಪೆಕ್ಟರ್ ಓಂಕಾರ್ ಸಿಂಗ್ ಬ್ರಾರ್ ತಿಳಿಸಿದ್ದಾರೆ.

    ಸದ್ಯ ಪೊಲೀಸರು ಈ ಪ್ರಕರಣವನ್ನು ದಾಖಲಿಸಿಕೊಂಡು ಮುನೀಶ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಲೋಕಲ್ ಸಿವಿಲ್ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಘಟನೆ ಬಗ್ಗೆ ಮುನೀಶ್ ಪೋಷಕರು ಮಾಹಿತಿ ನೀಡಲಾಗಿದೆ.

    2ನೇ ವರ್ಷದ ವಿದ್ಯಾರ್ಥಿಯಾಗಿರುವ ಮುನೀಶ್ ತನ್ನ ರೂಮಿನಲ್ಲಿ ಫ್ಯಾನಿಗೆ ವಾದ್ಯದ ತಂತಿಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮುನೀಶ್ ಒತ್ತಡದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ.