Tag: MC Nanaiah

  • ಪ್ರಧಾನಿಯಾಗುವ ಅವಕಾಶವಿದೆ ಅಂದಿದ್ದಕ್ಕೆ ನಕ್ಕಿದ್ದರು – ಮಾಜಿ ಸಚಿವ ಎಂ.ಸಿ ನಾಣಯ್ಯ

    ಪ್ರಧಾನಿಯಾಗುವ ಅವಕಾಶವಿದೆ ಅಂದಿದ್ದಕ್ಕೆ ನಕ್ಕಿದ್ದರು – ಮಾಜಿ ಸಚಿವ ಎಂ.ಸಿ ನಾಣಯ್ಯ

    – ತಲಕಾವೇರಿ ಜೀರ್ಣೋದ್ಧಾರಕ್ಕೆ 18 ಕೋಟಿ ಅನುದಾನ ಕೊಟ್ಟಿದ್ದ ಎಸ್‌ಎಂಕೆ!

    ಮಡಿಕೇರಿ: ಎಸ್.ಎಂ ಕೃಷ್ಣ (SM Krishna) ದೇಶಕಂಡ ಅತ್ಯುತ್ತಮ ರಾಜಕಾರಣಿ ಅಂದ್ರೆ ತಪ್ಪಾಗಲ್ಲ. ತಾನು ಓದುವ ಸಂದರ್ಭದಲ್ಲೇ ಅವರ ಭಾಷಣ ಕೇಳಲು ವಿಧಾನ ಪರಿಷತ್‌ಗೆ ಹೋಗಿದ್ದೆ. ಅವರ ಮಾತಿನ ಸ್ಫೋರ್ತಿಯಿಂದಲೇ ನಾನು ರಾಜಕೀಯ ರಂಗ ಪ್ರವೇಶಿಸಿದೆ ಎಂದು ಮಾಜಿ ಸಚಿವ ಎಂ.ಸಿ ನಾಣಯ್ಯ (MC Nanaiah) ತಮ್ಮ ನೆನಪುಗಳನ್ನು ಹಂಚಿಕೊಂಡರು.

    ʻಪಬ್ಲಿಕ್‌ ಟಿವಿʼಯೊಂದಿಗೆ ಮಾತನಾಡಿದ ಅವರು, ಎಸ್‌ಎಂಕೆ ನಿಧನಕ್ಕೆ ಸಂತಾಪ ಸೂಚಿಸಿದರು. ಪ್ರಜಾ ಸೋಷಿಯಲಿಸ್ಟ್ ಪಾರ್ಟಿ ಮೂಲಕ ರಾಜಕೀಯ ರಂಗ ಪ್ರವೇಶ ಮಾಡಿದರು. ನಾನು ಓದುವ ಸಂದರ್ಭದಲ್ಲೇ ಪರಿಷತ್‌ನಲ್ಲಿ ವಿಪಕ್ಷ ನಾಯಕರಾಗಿದ್ದರು. ಅತ್ಯಂತ ಸರಳವಾಗಿ ಅಳೆದು ತೂಗಿ ಮಾತಾನಾಡುವ ವ್ಯಕ್ತಿತ್ವ ಅವರದ್ದಾಗಿತ್ತು. ಅಂದಿನ ರಾಜಕೀಯ ದಿನಗಳ ಬಗ್ಗೆ ಮೆಲುಕು ಹಾಕುವ ಸಂದರ್ಭದಲ್ಲಿ ನಾನು ರಾಜ್ಯದ ಮುಖ್ಯಮಂತ್ರಿಗಳ ಬಗ್ಗೆ ʻನಾ ಕಂಡ ಮುಖ್ಯಮಂತ್ರಿಗಳು‌ʼ ಎಂಬ ಪುಸ್ತಕ ಬರೆದಿದ್ದೆ. ಅದರಲ್ಲಿ ಎಸ್.ಎಂ ಕೃಷ್ಣ ಅವರ ಸಾಧನೆಗಳ ಬಗ್ಗೆ ಹಾಗೂ ನನ್ನೊಂದಿಗೆ ಇರುವ ನಿಕಟಪೂರ್ವ ಸಂಬಂಧಗಳ ಬಗ್ಗೆಯೂ ಉಲ್ಲೇಖ ಮಾಡಿದ್ದೇನೆ ಎಂದು ತಿಳಿಸಿದ್ರು.

    ಎಸ್‌ಎಂಕೆ ಅವರು ಮುಖ್ಯಮಂತ್ರಿ ಆಗುವ ಸಂದರ್ಭದಲ್ಲಿ ನಾನು ವಿಪಕ್ಷ ನಾಯಕನಾಗಿ ಕೆಲಸ ಮಾಡಿದ್ದೆ. ಅಂದು ನಾನು ಸದನದಲ್ಲಿ ಕೃಷ್ಣ ಅವರಿಗೆ ನಿಮಗೆ ಪ್ರಧಾನಿಯಾಗುವ ಎಲ್ಲಾ ಲಕ್ಷಣ ಇದೆ ಎಂದು ಹೇಳಿದ್ದೆ. ಅದಕ್ಕೆ ಅವರು ಅಯ್ಯೋ ನಾಣಯ್ಯ ಅವ್ರೇ ಏನ್‌ ಹೇಳ್ತಾ ಇದ್ದೀರಿ, ರಾಜಕೀಯದಿಂದ ಬೇಗ ಕಳಿಸಿಕೋಡುವ ಆಸೆ ಏನಾದ್ರೂ ಇದೆಯೇ ಎಂದು ನಕ್ಕಿದ್ದರು ಎಂದು ತಮ್ಮ ಅನುಭವ ಹಂಚಿಕೊಂಡರು. ಇದನ್ನೂ ಓದಿ: ಭಾಗ-1 | ಶಾಸಕನಿಂದ ಮುಖ್ಯಮಂತ್ರಿವರೆಗೆ…. ಎಸ್‌ಎಂಕೆ ರಾಜಕೀಯ ಜೀವನದ ಏಳುಬೀಳು!

    ತಲಕಾವೇರಿ ಜೀರ್ಣೋದ್ಧಾರಕ್ಕೆ ಎಸ್‌ಎಂಕೆ ಕೊಡಗೆ ಅಪಾರ:
    ಇನ್ನೂ ʻಪಬ್ಲಿಕ್‌ ಟಿವಿʼ ಜೊತೆಗೆ ಮಾಜಿ ಸಚಿವೆ ಸುಮಾ ವಸಂತ್ ಮಾತನಾಡಿ, ದಕ್ಷಿಣ ಭಾರತದ ಪ್ರಮುಖ ನದಿ, ಕಾವೇರಿಯ ಉಗಮ ಸ್ಥಾನ, ತಲಕಾವೇರಿಯ (Tala Kaveri) ದೇವಾಲಯದ ಜೀರ್ಣೋದ್ಧಾರಕ್ಕೆ ಕೃಷ್ಣ ಅವರ ಕೊಡುಗೆ ಅಪಾರವಾಗಿದೆ ಎಂದು ಸ್ಮರಿಸಿದರು. ಇದನ್ನೂ ಓದಿ:  ರಾಜ್‌ಕುಮಾರ್ ಕಿಡ್ನಾಪ್ ವೇಳೆ ಸ್ಯಾಟ್‌ಲೈಟ್ ಫೋನ್‌ನಿಂದ ವೀರಪ್ಪನ್ ಜೊತೆ ಮಾತನಾಡಿದ್ದ ಎಸ್‌ಎಂಕೆ

    ಎಸ್‌ಎಂಕೆ ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ಕೊಡಗಿನ ಟಿ ಜಾನ್‌, ಎಂ.ಎಂ ನಾಣಯ್ಯ ಮತ್ತು ನನಗೆ ಸಚಿವ ಸ್ಥಾನ ನೀಡಿದ್ರು. ನಾನು ರಾಜಕೀಯವಾಗಿ ಬೆಳೆಯಲು ಅವರೇ ನೇರ ಕಾರಣ ತನ್ನಗೆ ಸಾಕಷ್ಟು ಧೈರ್ಯ ತುಂಬಿದ್ರು. ಕೊಡಗು ಜಿಲ್ಲೆಯ ಭಾಗಮಂಡಲ ಹಾಗೂ ತಲಕಾವೇರಿ ಜೀರ್ಣೋದ್ಧಾರ ಮಾಡಲು ಅವರು ಕೊಟ್ಟ ಕೊಡುಗೆ ಯಾವತ್ತೂ ಮರೆಯಲು ಸಾದ್ಯವಿಲ್ಲ. ನಾವು ಕೇಳಿದ ತಕ್ಷಣ ಅಂದಿನ ಕಾಲಘಟ್ಟಕ್ಕೆ ಸುಮಾರು 18 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ರು. ಆದ್ರೆ ಶಂಕುಸ್ಥಾಪನೆ ಮಾಡುವ ಸಂದರ್ಭದಲ್ಲಿ ಅವರ ಹೆಸರು ಹಾಕದೇ ಇರುವುದು ತುಂಬಾ ನೋವು ಕೊಟ್ಟಿದೆ. ಮುಂದಿನ ದಿನಗಳಲ್ಲಿ ಸಂಬಂಧಪಟ್ಟ ಇಲಾಖೆಗೆ ಪತ್ರ ಬರೆದು ಕಲ್ಲಿನಲ್ಲಿ ಅವರ ಹೆಸರು ಕೆತ್ತನೆ ಮಾಡುವಂತೆ ಮವಿ ಮಾಡುತ್ತೇನೆ ಎಂದು ತಿಳಿಸಿದರು.

  • ಎಂಪಿ ಚುನಾವಣೆಗೆ ಬಿಜೆಪಿಯಿಂದ ಟಿಪ್ಪು ಜಯಂತಿ ಅಸ್ತ್ರ: ನಾಣಯ್ಯ ವ್ಯಂಗ್ಯ

    ಎಂಪಿ ಚುನಾವಣೆಗೆ ಬಿಜೆಪಿಯಿಂದ ಟಿಪ್ಪು ಜಯಂತಿ ಅಸ್ತ್ರ: ನಾಣಯ್ಯ ವ್ಯಂಗ್ಯ

    ಮಡಿಕೇರಿ: ಚುನಾವಣೆ ಉದ್ದೇಶದಿಂದ ಟಿಪ್ಪು ಜಯಂತಿಯನ್ನು ವಿರೋಧಿಸಿ, ಸಮಾಜದ ಸ್ವಾಸ್ಥ್ಯ ಹಾಳುಮಾಡುವವರ ವಿರುದ್ಧ ಕಠಿಣ ಕ್ರಮಗೊಳ್ಳಬೇಕು ಎಂದು ಹಿರಿಯ ರಾಜಕಾರಣಿ ಎಂ.ಸಿ ನಾಣಯ್ಯ ಹೇಳಿದ್ದಾರೆ.

    ಮಾಧ್ಯಮಗಳ ಜೊತೆಗೆ ಇಂದು ಮಾತನಾಡಿದ ಅವರು, ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಇರುವಾಗ ಟಿಪ್ಪು ಜಯಂತಿಯನ್ನು ಬಿಜೆಪಿ ಸಂಘ ಪರಿವಾರ ದಾಳವಾಗಿ ಬಳಸಿಕೊಳ್ಳುತ್ತಿದೆ. ಮತ ಗಿಟ್ಟಿಸಿಕೊಳ್ಳಲು ಟಿಪ್ಪು ಜಯಂತಿಗೆ ವಿರೋಧ ವ್ಯಕ್ತಪಡಿಸಿ, ಪ್ರತಿಭಟನೆ ಮಾಡಲಾಗುತ್ತಿದೆ ಎಂದು ಆರೋಪಿಸಿದರು. ಇದನ್ನು ಓದಿ: ಸಿಎಂ ಹೊಗಳಿ ವೇದಿಕೆಯಲ್ಲೇ ಎರಡು ಮನವಿ ಇಟ್ಟ ಪ್ರತಾಪ್ ಸಿಂಹ

    ಅಮಾಯಕ ಜನರನ್ನು ಬಳಸಿಕೊಂಡು ಪ್ರತಿಭಟನೆ ಮಾಡುವುದನ್ನು ಬಿಟ್ಟು, ವಿಧಾನಸಭೆ ಮತ್ತು ಪರಿಷತ್‍ನಲ್ಲಿ ಚರ್ಚಿಸಿ ಬಹುಮತದ ಆಧಾರದಲ್ಲಿ ನಿರ್ಣಯ ಕೈಗೊಳ್ಳಬೇಕು. ಆಗ ಬಹುಮತ ಹೇಗಿರುತ್ತದೆಯೋ ಹಾಗೇ ನಿರ್ಣಯ ಬರುತ್ತದೆ. ಒಂದು ವೇಳೆ ಬೇಡ ಅಂತಾ ನಿರ್ಣಯವಾದಲ್ಲಿ ಜಯಂತಿ ಆಚರಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಹೇಳಿದರು. ಇದನ್ನು ಓದಿ: ಸಿದ್ದರಾಮಯ್ಯ ಜಾರಿಗೆ ತಂದ ಟಿಪ್ಪು ಜಯಂತಿ ಕೈಬಿಡುತ್ತಾರಾ ಎಚ್‍ಡಿಕೆ?

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಜೆಡಿಎಸ್ ಮುಖಂಡ ಎಂಸಿ ನಾಣಯ್ಯ ಕಾಂಗ್ರೆಸ್ ಸೇರ್ತಾರಾ? – ಸಿಎಂ ಭೇಟಿ ವೇಳೆ ಆಗಿದ್ದೇನು?

    ಜೆಡಿಎಸ್ ಮುಖಂಡ ಎಂಸಿ ನಾಣಯ್ಯ ಕಾಂಗ್ರೆಸ್ ಸೇರ್ತಾರಾ? – ಸಿಎಂ ಭೇಟಿ ವೇಳೆ ಆಗಿದ್ದೇನು?

    ಮಡಿಕೇರಿ: ಜೆಡಿಎಸ್ ಮುಖಂಡ, ಮಾಜಿ ಸಚಿವ ಎಂಸಿ ನಾಣಯ್ಯ ಕಾಂಗ್ರೆಸ್ ಪಕ್ಷ ಸೇರ್ತಾರಾ…? ಸಿದ್ದರಾಮಯ್ಯ ಅವರು ಕೊಡಗು ಜಿಲ್ಲಾ ಪ್ರವಾಸಕ್ಕೆ ಬರುತ್ತಾರೆ ಎಂಬ ಸುದ್ದಿ ಹೊರ ಬೀಳುತ್ತಿದ್ದಂತೆಯೇ ಅವರು ನಾಣಯ್ಯ ಅವರನ್ನು ಭೇಟಿಯಾಗುತ್ತಾರೆ ಎಂಬ ಸುದ್ದಿಯಿತ್ತು. ಆದರೆ ಇಂದು ಸಿಎಂ ಸಿದ್ದರಾಮಯ್ಯ ಉಡುಪಿಯಿಂದ ಮಡಿಕೇರಿಗೆ ಆಗಮಿಸಿದವರೇ ನೇರವಾಗಿ ನಾಣಯ್ಯ ಅವರ ಮನೆಗೆ ಭೇಟಿ ನೀಡಿದ್ದಾರೆ. ಈ ಭೇಟಿ ಬಳಿಕ ನಾಣಯ್ಯ ಅವರು ಹೇಳಿದ ಮಾತಿನ ಧಾಟಿ ನೋಡಿದರೆ ಅವರು ಪಕ್ಷ ಬಿಡುವ ಸಾಧ್ಯತೆ ಬಹುತೇಕ ಹೆಚ್ಚಾದಂತಿದೆ.

    ಉಡುಪಿಯ ಉಪ್ಪೂರಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದ ಬಳಿಕ ನೇರವಾಗಿ ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಮೂಲಕ ಕೊಡಗಿಗೆ ಆಗಮಿಸಿದರು. ಬಳಿಕ ಎಂಸಿ ನಾಣಯ್ಯ ಅವರ ಮನೆಗೆ ಭೇಟಿ ನೀಡಿ ಸುಮಾರು 20 ನಿಮಿಷಗಳ ಕಾಲ ಚರ್ಚೆ ನಡೆಸಿದರು.

    ಭೇಟಿ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಎಂಸಿ ನಾಣಯ್ಯ ನನಗೆ ತುಂಬಾ ಆಪ್ತರು, ಅವರ ಆರೋಗ್ಯ ವಿಚಾರಿಸಲು ಬಂದಿದ್ದೇನೆ ಅಷ್ಟೇ. ಅವರನ್ನು ಜೆಡಿಎಸ್ ಸರಿಯಾಗಿ ಬಳಸಿಕೊಂಡಿಲ್ಲ, ಇದು ರಾಜಕೀಯ ಭೇಟಿ ಅಲ್ಲ. ಅವರನ್ನು ನಾನು ಕಾಂಗ್ರೆಸ್ ಪಕ್ಷಕ್ಕೆ ಆಹ್ವಾನ ನೀಡಿಲ್ಲ ಎಂದರು.

    ಆದರೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಎಂಸಿ ನಾಣಯ್ಯ, ನನ್ನ ಆರೋಗ್ಯ ವಿಚಾರಿಸಲು ಸಿದ್ದರಾಮಯ್ಯ ಬಂದಿದ್ದಕ್ಕೆ ನಾನು ಅವರಿಗೆ ಆಭಾರಿಯಾಗಿದ್ದೇನೆ. ರಾಜಕೀಯ ನಿಂತ ನೀರಲ್ಲ, ಅದು ಹರಿಯುತ್ತದೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಜೆಡಿಎಸ್ ಪಕ್ಷ ತೊರೆಯುವ ಸೂಚನೆ ನೀಡಿದರು.

    ಇತ್ತೀಚೆಗೆ ಮಡಿಕೇರಿಯಲ್ಲಿ ಎಂಸಿ ನಾಣಯ್ಯ ಅವರು ಜೆಡಿಎಸ್ ಅತೃಪ್ತರ ಸಭೆ ನಡೆಸಿದ್ದು, ರಾಜ್ಯ ಜೆಡಿಎಸ್ ನಾಯಕರ ಮೇಲಿನ ತಮ್ಮ ಅತೃಪ್ತಿಯನ್ನು ಪ್ರದರ್ಶಿಸಿದರು. ಅಲ್ಲದೆ ಪಕ್ಷದ ಸಕ್ರಿಯ ಚಟುವಟಿಕೆಗಳಿಂದ ದೂರ ಉಳಿದಿದ್ದರು. ಜನತಾದಳ ಸರ್ಕಾರ ಅಧಿಕಾರದಲ್ಲಿದ್ದಾಗ ಸಿದ್ದರಾಮಯ್ಯ ಹಣಕಾಸು ಸಚಿವರಾಗಿದ್ದರು. ಇದೇ ವೇಳೆ ಎಂಸಿ ನಾಣಯ್ಯ ಅವರು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿದ್ದರು. ಅಂದಿನಿಂದಲೂ ಇಬ್ಬರ ನಡುವೆ ಉತ್ತಮ ಬಾಂಧವ್ಯವಿದೆ.