Tag: MC Sudhakar

  • ಸುಧಾಕರ್ ಹೆಸರು ಬರೆದಿಟ್ಟು ಚಾಲಕ ಆತ್ಮಹತ್ಯೆ – ರಾಜಕೀಯ ಒತ್ತಡ ಇಲ್ಲದೆ ತನಿಖೆ: ಎಂ.ಸಿ ಸುಧಾಕರ್

    ಸುಧಾಕರ್ ಹೆಸರು ಬರೆದಿಟ್ಟು ಚಾಲಕ ಆತ್ಮಹತ್ಯೆ – ರಾಜಕೀಯ ಒತ್ತಡ ಇಲ್ಲದೆ ತನಿಖೆ: ಎಂ.ಸಿ ಸುಧಾಕರ್

    ಬೆಂಗಳೂರು: ಚಿಕ್ಕಬಳ್ಳಾಪುರ ಸಂಸದ ಸುಧಾಕರ್ (K.Sudhakar) ಹೆಸರು ಬರೆದಿಟ್ಟು ಚಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣದಲ್ಲಿ ರಾಜಕೀಯ ಒತ್ತಡವಿಲ್ಲದೆ ತನಿಖೆ ಆಗಲಿದೆ ಎಂದು ಚಿಕ್ಕಬಳ್ಳಾಪುರ (Chikkaballapur) ಉಸ್ತುವಾರಿ ಸಚಿವ ಎಂ.ಸಿ ಸುಧಾಕರ್ (MC Sudhakar) ತಿಳಿಸಿದ್ದಾರೆ.ಇದನ್ನೂ ಓದಿ: ಕಾಂಗ್ರೆಸ್ ಯಾವತ್ತು ಹಿಟ್ ಅಂಡ್ ರನ್ ಮಾಡಲ್ಲ; ಕರ್ನಾಟಕದ ಮತಗಳ್ಳತನಕ್ಕೆ ಸಾಕ್ಷಿ ಇದೆ – ಪ್ರಿಯಾಂಕ್ ಖರ್ಗೆ

    ವಿಧಾನಸೌಧದಲ್ಲಿ ಮಾತನಾಡಿದ ಅವರು, ಚಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಬೆಳಿಗ್ಗೆ ಮಾಹಿತಿ ಬಂದಿದೆ. ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಗುತ್ತಿಗೆ ಚಾಲಕನಾಗಿ ಕೆಲಸ ಮಾಡುತ್ತಿದ್ದ ಬಾಬು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್‌ನೋಟ್‌ನಲ್ಲಿ ತನ್ನ ಸಾವಿಗೆ ಕಾರಣ ಏನು ಎನ್ನುವ ಬಗ್ಗೆ ಬರೆದಿದ್ದಾರೆ. ಅವುಗಳಲ್ಲಿ ಸಂಸದ ಸುಧಾಕರ್ ಮೇಲೆ ಆರೋಪ ಮಾಡಿದ್ದಾರೆ. ಎಂಪಿ ಅವರ ಅನುಯಾಯಿ ನಾಗೇಶ್, ಮಂಜುನಾಥ್ ಕಾರಣ ಅಂತ ಪತ್ರ ಬರೆದಿದ್ದಾರೆ. ಯಾರೇ ಆಗಲಿ ಕಾನೂನು ಕ್ರಮ ತೆಗೆದುಕೊಳ್ತೀವಿ ಎಂದಿದ್ದಾರೆ.

    ಇದು ಗಂಭೀರ ಆರೋಪ. ಕೆಲಸ ಕೊಡಿಸೋದಾಗಿ ಹಣ ಪಡೆದಿದ್ದಾರೆ. ಇದು ಸಂಪೂರ್ಣ ತನಿಖೆ ಆಗಬೇಕು. ಕಾನೂನು ರೀತಿ ಕ್ರಮ ತೆಗೆದುಕೊಳ್ತೀವಿ. ಡೆತ್‌ನೋಟ್‌ನಲ್ಲಿ ಎಂಪಿ ಸುಧಾಕರ್ ಅವರ ಹೆಸರು ಇದೆ. ತನಿಖೆ ಆಗಲಿ. ಅವರ ಕುಟುಂಬದವರು ಏನು ಹೇಳುತ್ತಾರೆ ಅದೆಲ್ಲದರ ತನಿಖೆ ಆಗಲಿ. ಪಾರದರ್ಶಕ ತನಿಖೆ ಆಗುತ್ತದೆ. ಚಾಲಕ ಬಾಬು ಎಸ್‌ಸಿ ಸಮುದಾಯಕ್ಕೆ ಸೇರಿದ ಯುವಕ. ಸಮಗ್ರ ತನಿಖೆ ಆಗುತ್ತದೆ. ರಾಜಕೀಯ ಒತ್ತಡ ಇಲ್ಲದೆ ತನಿಖೆ ಆಗುತ್ತದೆ ಎಂದು ಭರವಸೆ ನೀಡಿದ್ದಾರೆ.ಇದನ್ನೂ ಓದಿ: ಧರ್ಮಸ್ಥಳ ಕೇಸ್‌ಲ್ಲಿ ಜನರು ಕಾನೂನು ಕೈಗೆತ್ತಿಕೊಳ್ಳಬಾರದು – ಪ್ರಿಯಾಂಕ್ ಖರ್ಗೆ

  • ಕರ್ನಾಟಕ ಲೋಕಸಭೆ ಚುನಾವಣೆಯಲ್ಲಿ ಅಕ್ರಮವಾಗಿದೆ – ರಾಹುಲ್ ಗಾಂಧಿ ದಾಖಲೆ ಬಿಡುಗಡೆ ಮಾಡ್ತಾರೆ: ಸಚಿವ ಸುಧಾಕರ್

    ಕರ್ನಾಟಕ ಲೋಕಸಭೆ ಚುನಾವಣೆಯಲ್ಲಿ ಅಕ್ರಮವಾಗಿದೆ – ರಾಹುಲ್ ಗಾಂಧಿ ದಾಖಲೆ ಬಿಡುಗಡೆ ಮಾಡ್ತಾರೆ: ಸಚಿವ ಸುಧಾಕರ್

    – 8-10 ತಿಂಗಳಿಂದ ರಿಸರ್ಚ್ ಮಾಡಿದ್ದಾರೆ ಎಂದ ಸಚಿವ

    ಬೆಂಗಳೂರು: ಕರ್ನಾಟಕ ಲೋಕಸಭೆ ಚುನಾವಣೆಯಲ್ಲಿ (Karnataka LokSabha Election) ಅಕ್ರಮ ಆಗಿರೋದು, ಮತಗಳ್ಳತನ ಆಗಿರೋದರ ಬಗ್ಗೆ ರಾಹುಲ್ ಗಾಂಧಿ ಬಳಿ ದಾಖಲಾತಿ ಇದೆ. ಆಗಸ್ಟ್ 8ರ ಪ್ರತಿಭಟನೆ ದಿನ ಅದನ್ನ ಬಿಡುಗಡೆ ಮಾಡ್ತಾರೆ ಅಂತ ಉನ್ನತ ಶಿಕ್ಷಣ ‌ಸಚಿವ ಸುಧಾಕರ್ (MC Sudhakar) ತಿಳಿಸಿದ್ದಾರೆ.

    ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಪ್ರತಿಭಟನೆ (Rahul Gandhi Protest) ವಿಚಾರ ಮತ್ತು ಮೈಸೂರಿನಲ್ಲಿ ಮತಗಳ್ಳತನ ಆಗಿದೆ ಎಂಬ ಕಾಂಗ್ರೆಸ್ ಅಭ್ಯರ್ಥಿ ಆರೋಪ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದರು. ಇದನ್ನೂ ಓದಿ: ಇನ್ಮುಂದೆ ಅಲ್ಪಸಂಖ್ಯಾತರ ಸಾಮೂಹಿಕ ವಿವಾಹಕ್ಕೆ 50 ಸಾವಿರ ರೂ. ಗಿಫ್ಟ್‌ – ಜಮೀರ್ ಅಹ್ಮದ್

    ದೆಹಲಿ ಚುನಾವಣೆ (Delhi Election) ಸಮಯದಲ್ಲಿ ಪಕ್ಷದ ಅಭ್ಯರ್ಥಿ ಪರವಾಗಿ ನಾನು ಪ್ರಚಾರಕ್ಕೆ ಹೋಗಿದ್ದೆ. ಆಗ ನಮ್ಮ ಅಭ್ಯರ್ಥಿಯೇ ನಮಗೆ ತೋರಿಸಿದ್ರು. ಒಂದೇ ಅಡ್ರೆಸ್ ನಲ್ಲಿ ಎಷ್ಟು ಜನ ಇರೋಕೆ ಸಾಧ್ಯ? ಅಲ್ಲಿ ಅಂತಹ ಅಕ್ರಮವಾಗಿದೆ. ರಾಹುಲ್ ಗಾಂಧಿ ಜವಾಬ್ದಾರಿಯುತ ಸ್ಥಾನದಲ್ಲಿ ಇದ್ದಾರೆ. ಅವರು ಶ್ಯಾಡೋ ಪ್ರಧಾನ ಮಂತ್ರಿ ಆಗಿದ್ದಾರೆ. 8-10 ತಿಂಗಳಿಂದ ಈ ಬಗ್ಗೆ ರಿಸರ್ಚ್ ಮಾಡಿದ್ದಾರೆ. ಮಹಾರಾಷ್ಟ್ರ ಚುನಾವಣೆ ಆದ ಮೇಲೆ ರಾಹುಲ್ ಗಾಂಧಿಗೂ ಹೆಚ್ಚು ಸಂಶಯಕ್ಕೆ ಎಡೆ ಮಾಡಿಕೊಟ್ಟಿದೆ. ಈಗಾಗಿ ಅವರು ಎಲ್ಲಾ ದಾಖಲಾತಿ ಬಿಡುಗಡೆ ಮಾಡ್ತಾರೆ‌ ಅಂತ ತಿಳಿಸಿದರು. ಇದನ್ನೂ ಓದಿ: ಡಿಕೆಶಿ ಶ್ರಮ, ಹೋರಾಟಕ್ಕೆ ಪ್ರತಿಫಲ ಸಿಗಬೇಕು: ಇಕ್ಬಾಲ್ ಹುಸೇನ್

    ರಾಹುಲ್ ಗಾಂಧಿ ಅವರು ಚುನಾವಣೆ ಆಯೋಗಕ್ಕೆ ಡಿಜಿಟಲ್ ಓಟರ್ ಲೀಸ್ಟ್ ಕೊಡಿ ಅಂದರು ಆಯೋಗ ಯಾಕೆ ಕೊಡ್ತಿಲ್ಲ. ರಾಹುಲ್ ಗಾಂಧಿ ಬಳಿ ಎಲ್ಲಾ ದಾಖಲಾತಿ ಇವೆ. ದೆಹಲಿಯಲ್ಲಿ ಸುದ್ದಿಗೋಷ್ಟಿ ‌ಮಾಡಿ ರಿಲೀಸ್ ಮಾಡ್ತಾರೆ. ಕರ್ನಾಟಕಕ್ಕೆ ಬಂದಾಗ ದಾಖಲಾತಿ ಕೊಡ್ತಾರೆ. ಕರ್ನಾಟಕದಲ್ಲಿ ಅಕ್ರಮ ಆಗಿದೆ ಅಂತ ದಾಖಲಾತಿ ಸಮೇತ ಕೊಡೋದಾಗಿ ರಾಹುಲ್ ಹೇಳಿದ್ದಾರೆ. ಅವರ ಬಳಿ ಖಂಡಿತ ದಾಖಲಾತಿ ಇದೆ ಅನ್ನೋದು ನಮ್ಮ ನಂಬಿಕೆ. ರಾಹುಲ್ ಗಾಂಧಿ ದಾಖಲಾತಿ ಕೊಡ್ತಾರೆ ಅಂತ ತಿಳಿಸಿದರು. ಇದನ್ನೂ ಓದಿ: ಗುರುವಾರದಿಂದ ಲಾಲ್‌ಬಾಗ್‌ನಲ್ಲಿ 218ನೇ ಫಲಪುಷ್ಪ ಪ್ರದರ್ಶನ – ಹೂವಲ್ಲೇ ಕಿತ್ತೂರಿನ ಕೋಟೆ ಸೃಷ್ಟಿ

  • ಹೆಚ್‌ಎನ್ ವ್ಯಾಲಿ ನೀರನ್ನ ಸಂಪುಟ ಸದಸ್ಯರಿಗೆ ಕುಡಿಸಿ ಶುದ್ಧತೆ ಸಾಬೀತುಪಡಿಸಲಿ: ಸಚಿವ ಸುಧಾಕರ್‌ಗೆ ಸಂಸದ ಸುಧಾಕರ್‌ ಸವಾಲ್‌

    ಹೆಚ್‌ಎನ್ ವ್ಯಾಲಿ ನೀರನ್ನ ಸಂಪುಟ ಸದಸ್ಯರಿಗೆ ಕುಡಿಸಿ ಶುದ್ಧತೆ ಸಾಬೀತುಪಡಿಸಲಿ: ಸಚಿವ ಸುಧಾಕರ್‌ಗೆ ಸಂಸದ ಸುಧಾಕರ್‌ ಸವಾಲ್‌

    – ಕೆಸಿ ವ್ಯಾಲಿ ಮತ್ತು ಹೆಚ್ಎ‌ನ್‌ ವ್ಯಾಲಿ 3ನೇ ಹಂತದ ಶುದ್ಧೀಕರಣ ಅಗತ್ಯವಿಲ್ಲ ಎಂಬ ಕಾಂಗ್ರೆಸ್‌ ಧೋರಣೆಗೆ ಖಂಡನೆ

    ಚಿಕ್ಕಬಳ್ಳಾಪುರ: ಕೆ.ಸಿ.ವ್ಯಾಲಿ ಮತ್ತು ಹೆಚ್‌.ಎನ್‌ ವ್ಯಾಲಿ ಯೋಜನೆಗಳಡಿ (HN Valley Project) 3ನೇ ಹಂತದ ಶುದ್ಧೀಕರಣ ಅಗತ್ಯವಿಲ್ಲ ಎಂಬ ಕಾಂಗ್ರೆಸ್‌ ಸರ್ಕಾರದ ಧೋರಣೆಯನ್ನು ಸಂಸದ ಡಾ.ಕೆ ಸುಧಾಕರ್‌ (K Sudhakar) ಖಂಡಿಸಿದ್ದಾರೆ.

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಕಾಂಗ್ರೆಸ್ ಸರ್ಕಾರವು (Congress Government) ಜನರು ಸುರಕ್ಷಿತವಲ್ಲದ ನೀರನ್ನ ಕುಡಿಯಬೇಕೆಂದು ಬಯಸುತ್ತಿದೆಯಾ? ಸಾರ್ವಜನಿಕ ಆರೋಗ್ಯ ಸುರಕ್ಷತೆ ಬಗ್ಗೆ ಕಾಂಗ್ರೆಸ್ ಸರ್ಕಾರಕ್ಕೆ ಕಾಳಜಿ ಇಲ್ಲವಾ? ಕೆ.ಸಿ ವ್ಯಾಲಿ (KC Valley Project) ಮತ್ತು ಹೆಚ್.ಎನ್ ವ್ಯಾಲಿ ಯೋಜನೆ ಕುಡಿತು ನೀಡಿದ ಹೇಳಿಕೆಗಳು ಕಳವಳ ಕಾರಿ ಮತ್ತು ಖಂಡನೀಯವಾಗಿದೆ. ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ ಸುಧಾಕರ್ ಅವರೇ, 3ನೇ ಹಂತದ ಶುದ್ಧೀಕರಣ ಇಲ್ಲದೇ ಈ ನೀರನ್ನ ಕುಡಿಯಲು ಬಳಸಬಹುದು ಎಂದು ಹೇಳಿದ್ದಾರೆ. ಈ ನೀರನ್ನು ಮೊದಲು ಸಚಿವರೇ ಕುಡಿದು ಹಾಗೂ ತಮ್ಮ ಮನೆಗಳಲ್ಲಿ ಉಪಯೋಗಿಸಿ ತೋರಿಸಲಿ. ಹಾಗೆಯೇ ಕಾಂಗ್ರೆಸ್‌ ಶಾಸಕರಿಗೆ ಮತ್ತು ಸಂಪುಟ ಸಹೋದ್ಯೋಗಿಗಳಿಗೆ ಕುಡಿಯಲು ಕೊಡಲಿ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಕಾಂಗ್ರೆಸ್‌ ಸರ್ಕಾರ ದಿವಾಳಿ ಆಗಿದೆ ಅಥವಾ 3ನೇ ಹಂತದ ಶುದ್ಧೀಕರಣ ಮಾಡಲು ಸರ್ಕಾರಕ್ಕೆ ರಾಜಕೀಯ ಇಚ್ಛಾಶಕ್ತಿ ಇಲ್ಲ ಎಂದು ಪ್ರಾಮಾಣಿಕತೆಯಿಂದ ಒಪ್ಪಿಕೊಳ್ಳಲಿ. ಅದು ಬಿಟ್ಟು 3ನೇ ಹಂತದ ಶುದ್ಧೀಕರಣವೇ ಅಗತ್ಯವಿಲ್ಲ ಎಂದು ಬೇಜವಾಬ್ದಾರಿ ಹೇಳಿಕೆ ನೀಡುವುದು ಯಾವ ಸೀಮೆ ನ್ಯಾಯ? ಎಂದು ಅವರು ಪ್ರಶ್ನೆ ಮಾಡಿದ್ದಾರೆ.

    ಕಾಂಗ್ರೆಸ್‌ನ ದಿವಾಳಿ ಸರ್ಕಾರದ ಪಾಪಕ್ಕೆ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಹಾಗೂ ಕೋಲಾರ ಜನತೆ ತಮ್ಮ ಆರೋಗ್ಯ ಹಾಳು ಮಾಡಿಕೊಳ್ಳಬೇಕಾ? ತಮ್ಮ ಪಾಪರ್ ಸರ್ಕಾರದ ಅಯೋಗ್ಯತೆಗೆ ಅಮಾಯಕ ಜನರು ಬಲಿಯಾಗಬೇಕಾ? ಕಾಂಗ್ರೆಸ್ ಸರ್ಕಾರಕ್ಕೆ ಯೋಗ್ಯತೆ ಇದ್ದರೆ 3ನೇ ಹಂತದ ಶುದ್ಧೀಕರಣ ಮಾಡಿಸಲಿ. ಇಲ್ಲವಾದ್ರೆ 2028 ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ 3ನೇ ಹಂತದ ಶುದ್ಧೀಕರಣ ಯೋಜನೆ ಜಾರಿ ಮಾಡಲಿದೆ ಎಂದು ಅವರು ಹೇಳಿದ್ದಾರೆ.

  • ಚಿಕ್ಕಬಳ್ಳಾಪುರ | 70 ಕೋಟಿ ರೂ. ವೆಚ್ಚದಲ್ಲಿ ಜಿಲ್ಲಾ ಕ್ರೀಡಾಂಗಣ ಹೈಟೆಕ್ ಮಾಡಲು ಕ್ರಮ: ಎಂ.ಸಿ ಸುಧಾಕರ್

    ಚಿಕ್ಕಬಳ್ಳಾಪುರ | 70 ಕೋಟಿ ರೂ. ವೆಚ್ಚದಲ್ಲಿ ಜಿಲ್ಲಾ ಕ್ರೀಡಾಂಗಣ ಹೈಟೆಕ್ ಮಾಡಲು ಕ್ರಮ: ಎಂ.ಸಿ ಸುಧಾಕರ್

    ಚಿಕ್ಕಬಳ್ಳಾಪುರ: ಇಲ್ಲಿನ ಸರ್ ಎಂ.ವಿ ಕ್ರೀಡಾಂಗಣವನ್ನು (Sir M.V. Stadium) ಸುಮಾರು 70 ಕೋಟಿ ರೂಪಾಯಿ ವೆಚ್ಚದಲ್ಲಿ ಅತ್ಯಾಧುನಿಕ‌ ಕ್ರೀಡಾ ವ್ಯವಸ್ಥೆಗಳೊಂದಿಗೆ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ. ಈಗಾಗಲೇ ನೀಲಿನಕ್ಷೆಯನ್ನೂ ಸಿದ್ಧಪಡಿಸಿ ಸಂಪನ್ಮೂಲ ಕ್ರೋಢೀಕರಣದತ್ತ ಚಿಂತನೆ ನಡೆಸಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಸಿ ಸುಧಾಕರ್ (MC Sudhakar) ಅವರು ತಿಳಿಸಿದರು.

    ಇಂದು ಬೆಳಗ್ಗೆ ಜಿಲ್ಲಾ ಕೇಂದ್ರದಲ್ಲಿನ ಸರ್.ಎಂ.ವಿ ಕ್ರೀಡಾಂಗಣಕ್ಕೆ ಭೇಟಿ ನೀಡಿದ್ದ ಸಚಿವರು, ಯುವಜನ ಸೇವೆ ಮತ್ತು ಯುವ ಸಬಲೀಕರಣ ಇಲಾಖೆ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಇದನ್ನೂ ಓದಿ: Photo Gallery | IPL ಉದ್ಘಾಟನಾ ವೇದಿಕೆಯಲ್ಲಿ ಬೆಡಗು ಬಿನ್ನಾಣ; ಬಳ್ಳಿಯಂತೆ ಬಳುಕಿದ ದಿಶಾ!

    ಜಿಲ್ಲಾ ಕ್ರೀಡಾಂಗಣವನ್ನು ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳೊಂದಿಗೆ ಸುಮಾರು 70 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ. ವಿವಿಧ ಮೂಲಗಳಿಂದ ಸಂಪನ್ಮೂಲ ಕ್ರೋಢೀಕರಣ ಸಾಧ್ಯತೆಗಳತ್ತ ಚಿಂತನೆ ನಡೆಸಲಾಗುತ್ತಿದೆ. ಸರ್ಕಾರಿ ಮತ್ತು ಸರ್ಕಾರೇತರ ಸಂಸ್ಥೆಗಳ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಬೇಕೇ? ಅಥವಾ ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ ನಂತಹ ಸಂಸ್ಥೆಗಳಿಗೇ ಜವಾಬ್ದಾರಿ ನೀಡಿ ಅಭಿವೃದ್ಧಿಪಡಿಸಬೇಕೇ? ಇಲ್ಲವೇ ಸರ್ಕಾರದ ಅನುದಾನದಲ್ಲೇ ಅಭಿವೃದ್ಧಿಪಡಿಸಬೇಕೇ? ಎಂಬೆಲ್ಲಾ ದೃಷ್ಟಿಕೋನಗಳಲ್ಲಿ ಚರ್ಚೆ ನಡೆಸಲಾಗುತ್ತಿದೆ.

    ಸಿಂಥೆಟಿಕ್ ಟ್ರಾಕ್ ಸೇರಿದಂತೆ ಕ್ರೀಡಾಂಗಣದಲ್ಲಿ ವಿವಿಧ ಸೌಲಭ್ಯಗಳನ್ನು ಒದಗಿಸಿ ಹಂತ-ಹಂತವಾಗಿ ಅಭಿವೃದ್ಧಿಪಡಿಸಲಾಗುವುದು. ಸದ್ಯದಲ್ಲೇ ಕ್ರೀಡಾ ವಸತಿ ನಿಲಯವನ್ನು ಉದ್ಘಾಟಿಸಲಾಗುವುದು ಎಂದರು. ಇದನ್ನೂ ಓದಿ: IPL 2025: ಕೊಹ್ಲಿ, ಸಾಲ್ಟ್‌ ಫಿಫ್ಟಿ ಆಟ – 7 ವಿಕೆಟ್‌ ಜಯದೊಂದಿಗೆ ಆರ್‌ಸಿಬಿಗೆ ಶುಭಾರಂಭ; ತವರಲ್ಲಿ ಕೆಕೆಆರ್‌ಗೆ ಮುಖಭಂಗ

  • ರಾಷ್ಟ್ರೀಯಮಟ್ಟದ ಉನ್ನತ ಶಿಕ್ಷಣ ಸಚಿವರ ಸಮಾವೇಶ – ಏಳು ರಾಜ್ಯಗಳು ಭಾಗಿ

    ರಾಷ್ಟ್ರೀಯಮಟ್ಟದ ಉನ್ನತ ಶಿಕ್ಷಣ ಸಚಿವರ ಸಮಾವೇಶ – ಏಳು ರಾಜ್ಯಗಳು ಭಾಗಿ

    ಬೆಂಗಳೂರು: ವಿಶ್ವವಿದ್ಯಾಲಯ ಅನುದಾನ ಆಯೋಗವು (UGC) ಕುಲಪತಿಗಳ ನೇಮಕ ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಸಂಬಂಧಪಟ್ಟಂತೆ ಹೊರಡಿಸಿರುವ ಕರಡು ನಿಯಮಾವಳಿಗಳ ಕುರಿತು ಚರ್ಚಿಸಲು ಫೆಬ್ರವರಿ 05ರಂದು ಬೆಂಗಳೂರಿನಲ್ಲಿ (Bengaluru) ಕರೆಯಲಾಗಿರುವ ಒಂದು ದಿನದ ಉನ್ನತ ಶಿಕ್ಷಣ ಸಚಿವರ ರಾಷ್ಟ್ರೀಯ ಮಟ್ಟದ ಸಮಾವೇಶದಲ್ಲಿ ಏಳು ರಾಜ್ಯಗಳ ಸಚಿವರು ಪಾಲ್ಗೊಳ್ಳುತ್ತಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ (MC Sudhakar) ತಿಳಿಸಿದ್ದಾರೆ.

    ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ದೇಶದ ಕೆಲವು ರಾಜ್ಯಗಳ ಪ್ರಾದೇಶಿಕ ಪಕ್ಷಗಳು ಎನ್.ಡಿ.ಎ ಜೊತೆ ಹೊಂದಾಣಿಕೆ ಮಾಡಿಕೊಂಡಿರುವುದರಿಂದ ಬಹಿರಂಗವಾಗಿ ತಮ್ಮ ವಿರೋಧವನ್ನು ವ್ಯಕ್ತಪಡಿಸಲಾರದಂತ ಸ್ಥಿತಿಯಲ್ಲಿವೆ. ಎನ್‌ಡಿಎ ಮೈತ್ರಿಕೂಟದಲ್ಲಿರುವ ಜೆಡಿಯು, ಟಿಡಿಪಿ ಹಾಗೂ ಎಲ್‌ಜೆಪಿ (ರಾಮ್ ವಿಲಾಸ್) ಪಕ್ಷಗಳು ಈಗಾಗಲೇ ಈ ಸಂಬಂಧ ಅತೃಪ್ತಿ ವ್ಯಕ್ತಪಡಿಸಿ ಪತ್ರಿಕಾ ಹೇಳಿಕೆ ನೀಡಿರುವುದು ಬಹಿರಂಗಗೊಂಡಿದೆ. ಇದನ್ನೂ ಓದಿ: ಯೋಧರ ಪಿಂಚಣಿ ಬಾಕಿ ಉಳಿಸಿಕೊಂಡ ಕೇಂದ್ರ ಸರ್ಕಾರ – ಪಂಜಾಬ್ ಹೈಕೋರ್ಟ್ ಕೆಂಡಾಮಂಡಲ

    ದೆಹಲಿಯಲ್ಲಿ ಚುನಾವಣೆ ಇರುವುದರಿಂದ ದೆಹಲಿಯ ಉನ್ನತ ಶಿಕ್ಷಣ ಸಚಿವರು ಪಾಲ್ಗೊಳ್ಳುತ್ತಿಲ್ಲ. ಉಳಿದಂತೆ ಆತಿಥ್ಯ ವಹಿಸಿರುವ ಕರ್ನಾಟಕವೂ ಸೇರಿದಂತೆ ಜಮ್ಮು ಕಾಶ್ಮೀರ, ಹಿಮಾಚಲ್ ಪ್ರದೇಶ, ಜಾರ್ಖಂಡ್, ತೆಲಂಗಾಣ, ತಮಿಳುನಾಡು ಹಾಗೂ ಕೇರಳದ ಉನ್ನತ ಶಿಕ್ಷಣ ಸಚಿವರು ಈ ಸಮಾವೇಶದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಇದನ್ನೂ ಓದಿ: ಏರೋ ಇಂಡಿಯಾ ಶೋ ವಿಪತ್ತು ನಿರ್ವಹಣೆಗೆ ಸಜ್ಜಾಗಲು ಡಿಸಿ ಕರೆ

    ಫೆಬ್ರವರಿ 5 ರಂದು ಬೆಳಗ್ಗೆ 10:30ಕ್ಕೆ ಈ ಸಮಾವೇಶವನ್ನು ರಾಜ್ಯ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉದ್ಘಾಟಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುತ್ತಿದ್ದಾರೆ ಎಂದು ಸುಧಾಕರ್ ತಿಳಿಸಿದ್ದಾರೆ. ಯುಜಿಸಿ ಕರಡು ನಿಯಮಾವಳಿಗಳಿಂದ ದೇಶದ ಉನ್ನತ ಶಿಕ್ಷಣ ವ್ಯವಸ್ಥೆ ಮೇಲೆ ಕೇಂದ್ರ ಸರ್ಕಾರ ರಾಜ್ಯಗಳಿಗಿದ್ದ ಅಧಿಕಾರವನ್ನು ಮೊಟಕು ಗೊಳಿಸುವುದು ಮಾತ್ರವಲ್ಲದೆ ರಾಜ್ಯ ಸರ್ಕಾರಗಳ ಸಂವಿಧಾನಾತ್ಮಕ ಕರ್ತವ್ಯ ಮತ್ತು ಜವಾಬ್ದಾರಿಯನ್ನು ನಿಗ್ರಹಿಸ ಹೊರಟಿರುವುದು ಒಕ್ಕೂಟ ವ್ಯವಸ್ಥೆಯಲ್ಲಿ ಸರಿಯಲ್ಲ. ಇಷ್ಟೇ ಅಲ್ಲದೆ ಉನ್ನತ ಶಿಕ್ಷಣದ ಹಲವಾರು ಹಂತಗಳಲ್ಲಿ ಒತ್ತಾಯಪೂರ್ವಕವಾಗಿ ಕೆಲವು ನಿಯಮಾವಳಿಗಳನ್ನು ಹೇರಲಾಗುತ್ತಿದೆ. ಹಾಗಾಗಿ ಎಲ್ಲಾ ರಾಜ್ಯಗಳ ಒಕ್ಕೊರಲಿನ ಧ್ವನಿಯಾಗಿ ಕೇಂದ್ರಕ್ಕೆ ತಿಳಿಸಲು ಈ ಸಮಾವೇಶ ನಡೆಯುತ್ತಿದೆ ಎಂದರು. ಇದನ್ನೂ ಓದಿ: Microfinance Bill | ರಾಜ್ಯಪಾಲರ ಅಂಕಿತಕ್ಕೆ ಸುಗ್ರೀವಾಜ್ಞೆ ಬಿಲ್ – ಅನಧಿಕೃತವಾಗಿ ಕೊಟ್ಟಿದ್ದರೆ ಸಾಲ ಮನ್ನಾ

    ಸಮಾವೇಶದಲ್ಲಿ ಉನ್ನತ ಶಿಕ್ಷಣಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸರ್ಕಾರದ ಧೋರಣೆಯ ಬಗ್ಗೆ ಸಮಗ್ರವಾಗಿ ಚರ್ಚಿಸಲಾಗುವುದು. ಸಮಾವೇಶದ ನಿರ್ಣಯಗಳನ್ನು ಕೇಂದ್ರ ಸರ್ಕಾರ ಹಾಗೂ ಯು.ಜಿ.ಸಿ ಗೆ ಕಳುಹಿಸಿ ಕೊಡಲಾಗುವುದು. ದೇಶದ ಒಕ್ಕೂಟ ವ್ಯವಸ್ಥೆಯನ್ನು ಬಲಗೊಳಿಸುವುದು ಅತಿ ಮುಖ್ಯವಾಗಿದೆ. ಭಾರತದ ಶೈಕ್ಷಣಿಕ ವ್ಯವಸ್ಥೆ ಅತ್ಯಂತ ಸುಭದ್ರವಾದಂತದ್ದು, ಅದನ್ನು ಯಾವುದೇ ರಾಜ್ಯಗಳೊಂದಿಗೆ ಸಮಾಲೋಚಿಸದೆ ಏಕಾಏಕಿ ಕೇಂದ್ರ ಸರ್ಕಾರ ತನ್ನ ನಿಲುವುಗಳನ್ನು ಬಲವಂತವಾಗಿ ಹೇರುತ್ತಿರುವುದು ಒಕ್ಕೂಟ ವ್ಯವಸ್ಥೆಯಲ್ಲಿ ಸೂಕ್ತವಲ್ಲ. ಇದೊಂದು ಸಂವಿಧಾನ ವಿರೋಧಿ ಧೋರಣೆ ಎಂದು ಕಿಡಿಕಾರಿದರು. ಇದನ್ನೂ ಓದಿ:  ಮೈಕ್ರೋ ಫೈನಾನ್ಸ್‌ನವರು ರೌಡಿಗಳನ್ನಿಟ್ಟುಕೊಂಡು ಹಣ ವಸೂಲಿ ಮಾಡ್ತಿದ್ದಾರೆ: ಡಿಕೆಶಿ

    ಸಮಾವೇಶದಲ್ಲಿ ಉನ್ನತ ಶಿಕ್ಷಣ ಸಚಿವರ ಅಭಿಪ್ರಾಯವನ್ನು ಕ್ರೂಡೀಕರಿಸಿ ನಿರ್ಣಯಗಳನ್ನು ಕೈಗೊಳ್ಳಲಾಗುವುದು. ಕೇಂದ್ರ ಸರ್ಕಾರ ಯು.ಜಿ.ಸಿ ಮಾಡಿರುವ ಮಾರ್ಪಾಡುಗಳನ್ನು ಪುನರ್ ಪರಿಶೀಲಿಸದಿದ್ದರೆ ಮುಂದೆ ಯಾವ ನಿರ್ಧಾರ ಕೈಗೊಳ್ಳಬೇಕು ಎಂಬುದರ ಬಗ್ಗೆಯೂ ಚರ್ಚಿಸಲಾಗುವುದು ಎಂದು ಸುಧಾಕರ್ ತಿಳಿಸಿದರು. ಇದನ್ನೂ ಓದಿ: ಮೈಕ್ರೋ ಫೈನಾನ್ಸ್ ಸೇರಿ ಕೈ ಸಾಲಭಾದೆ – ವ್ಯಕ್ತಿ ಮನೆಯಲ್ಲೇ ನೇಣಿಗೆ ಶರಣು

  • ಏ.16, 17ರಂದು ಸಿಇಟಿ ಪರೀಕ್ಷೆ: ಕೆಇಎ

    ಏ.16, 17ರಂದು ಸಿಇಟಿ ಪರೀಕ್ಷೆ: ಕೆಇಎ

    ಬೆಂಗಳೂರು: ಏ.16 ಮತ್ತು 17ಕ್ಕೆ ಸಿಇಟಿ ಪರೀಕ್ಷೆ (CET Exam) ನಡೆಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಅಧಿಕೃತ ಘೋಷಣೆ ಮಾಡಿದೆ.

    ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ (MC Sudhakar) ದಿನಾಂಕ ಘೋಷಣೆ ಮಾಡಿದ್ದಾರೆ. ಸಿಇಟಿ ಪರೀಕ್ಷೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜ.23 ರಿಂದ ಫೆ.21ರವರೆಗೆ ಅವಕಾಶವಿದೆ ಎಂದು ಕೆಇಎ ತಿಳಿಸಿದೆ. ಇದನ್ನೂ ಓದಿ: ಬೀದರ್ ದರೋಡೆಯ ಸುತ್ತ ಅನುಮಾನದ ಹುತ್ತ – ಇದು ಇದು ಪ್ರೀ ಪ್ಲಾನ್ ಎಂದ ಮೃತನ ಸಹೋದರಿ

     

    ಸಿಇಟಿ ವೇಳಾಪಟ್ಟಿ:
    ಏಪ್ರಿಲ್ 16:
    ಬೆಳಿಗ್ಗೆ 10:30- ಭೌತಶಾಸ್ತ್ರ
    ಮಧ್ಯಾಹ್ನ 2:30- ರಸಾಯನಶಾಸ್ತ್ರ

    ಏಪ್ರಿಲ್ 17:
    ಬೆಳಿಗ್ಗೆ 10:30 -ಗಣಿತ
    ಮಧ್ಯಾಹ್ನ 2:30- ಜೀವಶಾಸ್ತ್ರ

    ಏಪ್ರಿಲ್ 18:
    ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ.

  • ಹಾಸನ ಸಮಾವೇಶ ಪಕ್ಷದ ಸಮಾವೇಶ, ಕಾಂಗ್ರೆಸ್‌ನಲ್ಲಿ ಯಾವುದೇ ಗೊಂದಲ ಇಲ್ಲ: ಸುಧಾಕರ್

    ಹಾಸನ ಸಮಾವೇಶ ಪಕ್ಷದ ಸಮಾವೇಶ, ಕಾಂಗ್ರೆಸ್‌ನಲ್ಲಿ ಯಾವುದೇ ಗೊಂದಲ ಇಲ್ಲ: ಸುಧಾಕರ್

    ಬೆಂಗಳೂರು: ಹಾಸನದಲ್ಲಿ (Hassan) ನಡೆಯುತ್ತಿರುವ ಸಮಾವೇಶ ಪಕ್ಷದ ಸಮಾವೇಶ. ಕಾಂಗ್ರೆಸ್‌ನಲ್ಲಿ (Congress) ಯಾವುದೇ ಗೊಂದಲ ಇಲ್ಲ ಎಂದು ಉನ್ನತ ಸಚಿವ ಡಾ.ಎಂ.ಸಿ ಸುಧಾಕರ್ (MC Sudhakar) ತಿಳಿಸಿದ್ದಾರೆ.ಇದನ್ನೂ ಓದಿ: ಅಪರಿಚಿತ ವಾಹನ ಹಿಟ್ ಅಂಡ್ ರನ್ – ತಾಯಿ ಸಾವು, ಮಗು ಸ್ಥಿತಿ ಗಂಭೀರ

    ಹಾಸನ ಸಮಾವೇಶ ಗೊಂದಲ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಹಾಸನ ಅಹಿಂದ ಸಮಾವೇಶ ಅಲ್ಲ. ಏನೇನೋ ಕಲ್ಪನೆ ಮಾಡಿಕೊಳ್ಳುವುದನ್ನು ಬಿಡಬೇಕು. ಹಾಸನ ಕಾರ್ಯಕ್ರಮ ಪಕ್ಷದ ಕಾರ್ಯಕ್ರಮ. ಹಿತೈಷಿಗಳು ಸೇರಿ ವೇದಿಕೆಯಲ್ಲಿ ಇದು ಪಕ್ಷದ ಕಾರ್ಯಕ್ರಮ ಎಂದು ಮಾಡುತ್ತಿದ್ದಾರೆ. ಯಾವ ಊಹಾಪೋಹಗಳಿಗೆ ಬೆಲೆ ಕೊಡಬೇಡಿ ಎಂದರು.

    ಕಾಂಗ್ರೆಸ್ ಹೈಕಮಾಂಡ್ ನಿರ್ದೇಶನದಂತೆ ಸಿಎಂ ಸಿದ್ದರಾಮಯ್ಯ(CM Siddaramaiah), ಡಿಕೆ ಶಿವಕುಮಾರ್ (DK Shivakumar) ಪಕ್ಷ ಸಂಘಟನೆಗಾಗಿ ಸಮಾವೇಶ ಮಾಡುತ್ತಿದ್ದಾರೆ. ಬಿಜೆಪಿಯವರು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಮಾತಾಡಿದರೆ ಸರ್ಕಾರದಲ್ಲಿ ಹಣ ಇಲ್ಲ, ಸರ್ಕಾರ ದಿವಾಳಿ ಆಗಿದೆ ಎಂದು ಹೇಳುತ್ತಾರೆ. ಇಲಾಖೆಯಲ್ಲಿ ಹಣ ಇದೆ. ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ. ನಾವೆಲ್ಲರೂ ಒಟ್ಟಾಗಿ ಇದ್ದೇವೆ. ಜನ ಕೊಟ್ಟಿರುವ ಅಧಿಕಾರವನ್ನು ಜವಾಬ್ದಾರಿಯುತವಾಗಿ ನಿರ್ವಹಣೆ ಮಾಡುವ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದರು.ಇದನ್ನೂ ಓದಿ: ಕೆಇಎನಲ್ಲಿ ಸೀಟ್ ಬ್ಲಾಕಿಂಗ್ ಅಕ್ರಮ – ಸರ್ಕಾರವೇ ತನಿಖೆಗೆ ಸೂಚನೆ ನೀಡಿದೆ: ಸುಧಾಕರ್

  • ಕೆಇಎನಲ್ಲಿ ಸೀಟ್ ಬ್ಲಾಕಿಂಗ್ ಅಕ್ರಮ – ಸರ್ಕಾರವೇ ತನಿಖೆಗೆ ಸೂಚನೆ ನೀಡಿದೆ: ಸುಧಾಕರ್

    ಕೆಇಎನಲ್ಲಿ ಸೀಟ್ ಬ್ಲಾಕಿಂಗ್ ಅಕ್ರಮ – ಸರ್ಕಾರವೇ ತನಿಖೆಗೆ ಸೂಚನೆ ನೀಡಿದೆ: ಸುಧಾಕರ್

    ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ (Karnataka Examination Authority) ಸೀಟ್ ಬ್ಲಾಕಿಂಗ್ ಅಕ್ರಮ (Seat Blocking) ಆಗಿರುವುದು ಸತ್ಯ. ಅಕ್ರಮ ತನಿಖೆಗೆ ಸರ್ಕಾರವೇ ಕೆಇಎಗೆ (KEA) ಸೂಚನೆ ನೀಡಿ ಪೊಲೀಸರಿಗೆ ದೂರು ನೀಡುವಂತೆ ತಿಳಿಸಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ.

    ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಸೀಟ್ ಬ್ಲಾಕ್ ಅಕ್ರಮ ಆಗಿರುವ ಬಗ್ಗೆ ಬೆಂಗಳೂರಿನಲ್ಲಿ (Bengaluru) ಪ್ರತಿಕ್ರಿಯೆ ನೀಡಿದ ಅವರು, ಸೀಟ್ ಬ್ಲಾಕ್ ಬಗ್ಗೆ ನಮ್ಮ ಗಮನಕ್ಕೆ ಬಂದ ಕೂಡಲೇ ಅಧಿಕಾರಿಗಳಿಂದ ಮಾಹಿತಿ ಪಡೆದು ದೂರು ನೀಡಿದ್ದೇವೆ. ಯಾವ ರೀತಿ ಅಕ್ರಮ ಆಗಿದೆ? ಈ ವರ್ಷ ಆಗಿದೆಯಾ? ಕಳೆದ ವರ್ಷ ಆಗಿದೆಯಾ? ಎಲ್ಲದರ ಬಗ್ಗೆ ತನಿಖೆಗೆ ಸೂಚನೆ ನೀಡಿದ್ದೇವೆ ಎಂದು ಹೇಳಿದ್ದಾರೆ.ಇದನ್ನೂ ಓದಿ: ನಾನಿ ನಿರ್ಮಾಣದ ಸಿನಿಮಾಗೆ ಗ್ರೀನ್ ಸಿಗ್ನಲ್ ಕೊಟ್ಟ ಮೆಗಾಸ್ಟಾರ್

    ಕಳೆದ ಎರಡು ವರ್ಷಗಳ ಐಪಿ ಅಡ್ರೆಸ್‌ನಲ್ಲಿ ಹೇಗೆ ಆಪ್ಶನ್ ಎಂಟ್ರಿ ಮಾಡಿದ್ದಾರೆ ಎಂದು ತನಿಖೆ ಆಗುತ್ತಿದೆ. ಸೀಟು ಪಡೆಯದ ವಿದ್ಯಾರ್ಥಿಗಳಿಗೆ ನೋಟಿಸ್ ನೀಡಲಾಗಿದೆ. ಕೆಲವು ಕಾಲೇಜುಗಳಲ್ಲಿ ಒಂದೇ ಐಪಿ ಅಡ್ರೆಸ್‌ನಿಂದ ಆಪ್ಶನ್ ಎಂಟ್ರಿ ಆಗಿರುವುದು ಗಮನಕ್ಕೆ ಬಂದಿದೆ. ನಾವೇ ಪ್ರಾಥಮಿಕ ತನಿಖೆ ಮಾಡಿ, ಮಾಹಿತಿ ಸಂಗ್ರಹ ಮಾಡಿ ಪೊಲೀಸರಿಗೆ ತನಿಖೆ ಮಾಡಲು ದೂರು ಕೊಟ್ಟಿದ್ದೇವೆ ಎಂದಿದ್ದಾರೆ.

    ಈ ಅಕ್ರಮ ಜಾಲದ ಪತ್ತೆಗೆ ದೂರು ನೀಡಲಾಗಿದ್ದು, ಪೊಲೀಸರು 10 ಜನರನ್ನು ಬಂಧಿಸಿದ್ದಾರೆ. ಇದಕ್ಕೆ ಯಾರು ಕಿಂಗ್ ಪಿನ್ ಎಂದು ಪತ್ತೆ ಹಚ್ಚಬೇಕು? ಹೆಚ್ಚಿನ ತನಿಖೆ ಆಗುತ್ತಿದೆ. ವರದಿ ಬಂದ ಬಳಿಕ ಮುಂದಿನ ಕ್ರಮ ತೆಗೆದುಕೊಳ್ಳುತ್ತೀವಿ. ಕೆಇಎ ಬೋರ್ಡ್ ಇದರಲ್ಲಿ ಶಾಮೀಲು ಆಗಿಲ್ಲ. ಅಲ್ಲಿ ಕೆಲಸ ಮಾಡುತ್ತಿರುವ ಅವಿನಾಶ್ ಎಂಬ ಹುಡುಗ ಮಾಹಿತಿ ಕೊಟ್ಟಿದ್ದಾನೆ. ಇದರ ಬಗ್ಗೆ ತನಿಖೆ ಆಗಬೇಕು. ಪೊಲೀಸರು ಕೊಡುವ ವರದಿ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸೀಟ್ ಬ್ಲಾಕ್‌ನಿಂದ ಅನ್ಯಾಯವಾಗಿದೆ. ಇದನ್ನು ನಿಷ್ಪಕ್ಷಪಾತವಾಗಿ ತನಿಖೆ ಮಾಡುತ್ತೇವೆ. ಕಾಲೇಜುಗಳ ಮೇಲೆ ಕ್ರಮಕ್ಕೆ ಪೊಲೀಸರು ವರದಿ ಕೊಡಲಿ. ಪೊಲೀಸರು ವರದಿ ಕೊಟ್ಟ ಬಳಿಕ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಅಪರಿಚಿತ ವಾಹನ ಹಿಟ್ ಅಂಡ್ ರನ್ – ತಾಯಿ ಸಾವು, ಮಗು ಸ್ಥಿತಿ ಗಂಭೀರ

  • ಮುಡಾ ಕೇಸ್‌ನಲ್ಲಿ ಇಡಿ ಎಂಟ್ರಿಯೇ ದುರುದ್ದೇಶ – ಸುಧಾಕರ್

    ಮುಡಾ ಕೇಸ್‌ನಲ್ಲಿ ಇಡಿ ಎಂಟ್ರಿಯೇ ದುರುದ್ದೇಶ – ಸುಧಾಕರ್

    ಬೆಂಗಳೂರು: ಮುಡಾ ಕೇಸ್‌ನಲ್ಲಿ (MUDA Scam) ಅಕ್ರಮ ಆಗಿರುವುದು ನಿಜ ಎಂದು ಲೋಕಾಯುಕ್ತಕ್ಕೆ ಇಡಿ ಪತ್ರ ಬರೆದಿರುವುದು ದುರುದ್ದೇಶದಿಂದ ಕೂಡಿದೆ ಎಂದು ಸಚಿವ ಡಾ.ಎಂ.ಸಿ ಸುಧಾಕರ್ (MC Sudhakar) ವಾಗ್ದಾಳಿ ನಡೆಸಿದ್ದಾರೆ.

    ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು, ಇಡಿ ಯಾರು? ದೇಶದಲ್ಲಿ ಎಲ್ಲಾ ಕಡೆ ಹೀಗೆ ಇಡಿ ತನಿಖೆ ಮಾಡ್ತಿದೆಯಾ? ತನಿಖೆ ಪ್ರಾರಂಭ ಮಾಡಿ ಯರ‍್ಯಾರು ಬಿಜೆಪಿಗೆ ಸೇರುತ್ತಾರೊ? ಅವರ ಮೇಲಿನ ತನಿಖೆ ಪ್ರಗತಿ ಯಾವ ರೀತಿ ಆಗುತ್ತಿದೆ? ಇಡಿ ವರ್ತನೆ ದುರುದ್ದೇಶದಿಂದ ಕೂಡಿದೆ. ಇಡಿ ಅವರು ಮುಡಾ ಕೇಸ್‌ನಲ್ಲಿ ಬಂದಿರುವುದೇ ದುರುದ್ದೇಶ ಎಂದು ಕಿರಿಕಾರಿದ್ದಾರೆ.ಇದನ್ನೂ ಓದಿ: ಸಿಎಂ ಹೇಳಿದ್ದೇ ಫೈನಲ್‌, ಯಾವುದೇ ತಕರಾರು ಇಲ್ಲ: ಡಿಕೆಶಿ

    ಬಿಜೆಪಿಯವರಿಗೆ (BJP) ಮುಡಾದಲ್ಲಿ ಹಿಂದೆ ಏನಾಗಿತ್ತು ಎಂದು ಗೊತ್ತಿರಲಿಲ್ಲವಾ? ಬಿಜೆಪಿ, ಜೆಡಿಎಸ್ ಶಾಸಕರು ಇದರಲ್ಲಿ ಭಾಗಿಯಾಗಿರಲಿಲ್ವಾ? ಮುಡಾ ಕೇಸ್ ಇಂದಿನದಾ? ಸಿದ್ದರಾಮಯ್ಯರ ಪ್ರಕರಣಕ್ಕೆ ಜೋಡಣೆ ಮಾಡಲು ಇಡಿ ಬಂದಿದೆ. ಇಡಿ ಅವರಿಗೆ ಲೋಕಾಯುಕ್ತದವರು ವರದಿ ಕೊಡಿ ಎಂದು ಕೇಳಿದ್ದರಾ? ಲೋಕಾಯುಕ್ತ ತನಿಖೆ ಮಾಡಿ ಎಂದು ಕೋರ್ಟ್ ಹೇಳಿದೆ. ಲೋಕಾಯುಕ್ತವೇ ಒಂದು ತನಿಖಾ ಸಂಸ್ಥೆ. ಲೋಕಾಯುಕ್ತದವರು ಅವರ ತನಿಖೆ ನಿಷ್ಪಕ್ಷಪಾತವಾಗಿ ಮಾಡಿ, ವರದಿ ಕೊಡಬೇಕು. ನಮ್ಮ ಸರ್ಕಾರದ ಮೇಲೆ ಪ್ರತ್ಯೇಕವಾಗಿ ಇಡಿಯವರು ತನಿಖೆ ಮಾಡಿ ಗೂಬೆ ಕೂರಿಸಲು ಕೇಂದ್ರ ಸರ್ಕಾರ, ಬಿಜೆಪಿ-ಜೆಡಿಎಸ್ ಅವರೆಲ್ಲ ಸೇರಿ ಇದನ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

    ಇಡಿ ಅವರು ಪ್ರತ್ಯೇಕವಾಗಿ ತನಿಖೆ ಮಾಡಲಿ ನಾವೇನು ಬೇಡ ಎನ್ನುವುದಿಲ್ಲ. ಇಡಿ ಅವರು ನ್ಯಾಯಾಲಯದ ಮುಂದೆ ಸಾಕ್ಷಿ ಕೊಡಲಿ. 3 ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದ ಹಿನ್ನೆಲೆ ವಿಪಕ್ಷದವರು ಹತಾಶೆಯಾಗಿದ್ದಾರೆ. ಜನರ ಗಮನ ಬೇರೆಡೆಗೆ ಸೆಳೆಯಲು ಇಡಿ ಅವರು ಪತ್ರ ಬರೆದಿದ್ದಾರೆ. ಇಡಿ ಯಾಕೆ ಲೋಕಾಯುಕ್ತಗೆ ಪತ್ರ ಬರೆಯಬೇಕು. ಲೋಕಾಯುಕ್ತದವರು ಅವರ ಕೆಲಸ ಅವರು ಮಾಡುತ್ತಾರೆ. ಇಡಿ ಅವರು ನಿಮ್ಮ ಕೆಲಸ ನೀವು ಮಾಡಿ ಎಂದಿದ್ದಾರೆ.

    ಇಡಿ ಅವರು ಯಡಿಯೂರಪ್ಪ, ಬೊಮ್ಮಾಯಿ, ಕುಮಾರಸ್ವಾಮಿ ಅವರನ್ನು ಬಿಟ್ಟು ಬಿಡಿ. ದೇವೇಗೌಡ ಕುಟುಂಬದವರು 48 ಸೈಟ್ ತೆಗೆದುಕೊಂಡಿರುವುದನ್ನ ಬಿಟ್ಟು ಬಿಡಿ. ನಿಮಗೆ ಯಾವುದು ಬೇಕೋ ಅದನ್ನು ಆಯ್ಕೆ ಮಾಡಿಕೊಂಡು ಅದರ ಬಗ್ಗೆ ಮಾತ್ರ ನೀವು ಮಾತಾಡಿ. ದೇಶದ ನ್ಯಾಯಾಲಯದ ಮೇಲೆ ನಮಗೆ ನಂಬಿಕೆ ಇದೆ. ರಾಜಕೀಯ ದುರುದ್ದೇಶದಿಂದ ಇಡಿ ಹೀಗೆ ಮಾಡುತ್ತಿದೆ. ಇದನ್ನು ನಾವು ಒಪ್ಪುವುದಿಲ್ಲ. ನಮ್ಮ ಲೀಗಲ್ ಟೀಂ ಇದನ್ನು ನೋಡುತ್ತದೆ. ಜನರ ಗಮನ ಬೇರೆಡೆಗೆ ಸೆಳೆಯಲು ಹೀಗೆ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

    ಬಿಜೆಪಿ ಅವರು ವಕ್ಫ್ ವಿಚಾರ ತಂದರು ಅದರಲ್ಲಿ ಯಶಸ್ವಿಯಾಗಲಿಲ್ಲ. ಅವರಲ್ಲಿಯೇ ಕಿತ್ತಾಟ ಶುರುವಾಗಿದೆ. ಅವರಲ್ಲಿಯೇ ಮನೆಯೊಂದು ಮೂರು ಬಾಗಿಲು ಆಗಿದೆ. ಅವರ ಗಾಯಕ್ಕೆ ಔಷಧಿ ಹಾಕಿಕೊಳ್ಳಲು ಆಗುತ್ತಿಲ್ಲ. ಬಿಜೆಪಿ ಒಡಕಿನ ಚರ್ಚೆ ಆಗುವುದನ್ನು ದಾರಿ ತಪ್ಪಿಸಲು ಇಡಿ ಹೀಗೆ ಮಾಡಿದೆ. ಲೋಕಾಯುಕ್ತ ಮೇಲೆ ಇಡಿ ಯಾಕೆ ಪ್ರಭಾವ ಬೀರುತ್ತದೆ? ಲೋಕಾಯುಕ್ತ ಸ್ವತಂತ್ರ ಸಂಸ್ಥೆ ನೀವು ಯಾಕೆ ಪ್ರಭಾವ ಬೀರುತ್ತೀರಾ? ಇಡಿ ಅವರು ನಿಮ್ಮ ಕೆಲಸ ನೀವು ಮಾಡಿ. ಲೋಕಾಯುಕ್ತ ವರದಿ ಕೇಳಿಲ್ಲ ನೀವು ಯಾಕೆ ವರದಿ ಕೊಟ್ಟಿದ್ದೀರಾ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಇದನ್ನೂ ಓದಿ: ಪವರ್ ಶೇರಿಂಗ್: ಡಿಕೆಶಿ, ನಮ್ಮ ನಡುವೆ ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸ್ಪಷ್ಟನೆ

  • ಬೆಂಗಳೂರಿಗೆ ಆಗಮಿಸಿದ ಮಾಲ್ಡೀವ್ಸ್‌ ಅಧ್ಯಕ್ಷರಿಗೆ ಆತ್ಮೀಯ ಸ್ವಾಗತ

    ಬೆಂಗಳೂರಿಗೆ ಆಗಮಿಸಿದ ಮಾಲ್ಡೀವ್ಸ್‌ ಅಧ್ಯಕ್ಷರಿಗೆ ಆತ್ಮೀಯ ಸ್ವಾಗತ

    ಬೆಂಗಳೂರು: ಸದ್ಯ ಭಾರತದಲ್ಲಿರುವ ಮಾಲ್ಡೀವ್ಸ್‌ ಅಧ್ಯಕ್ಷ ಡಾ. ಮೊಹಮ್ಮದ್ ಮುಯಿಝು (Mohamed Muizzu) ಮತ್ತು ಪ್ರಥಮ ಮಹಿಳೆ ಸಾಜಿದಾ ಮೊಹಮ್ಮದ್ ಅವರಿಂದು ಬೆಂಗಳೂರಿಗೆ ಆಗಮಿಸಿದ್ದಾರೆ. ನವದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಆಗಮಿಸಿದ್ದಾರೆ.

    ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ (Bengaluru Airport) ಅವರನ್ನ ಸಚಿವ ಡಾ.ಎಂ.ಸಿ ಸುಧಾಕರ್ (MC Sudhakar) ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಉಮಾ ಮಹದೇವನ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ. ದಯಾನಂದ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

    ಬಳಿಕ ಖಾಸಗಿ ಹೊಟೇಲಿನಲ್ಲಿ ವಿಶ್ರಾಂತಿಗೆ ತೆರಳಿದ ಮಾಲ್ಡೀವ್ಸ್ ಅಧ್ಯಕ್ಷರು, ರಾಜ್ಯಪಾಲರ ಆಹ್ವಾನ ಮೇರೆಗೆ ರಾಜಭವನ ಭೇಟಿ ನೀಡಲಿದ್ದಾರೆ.

    ಕಳೆದ ನವೆಂಬರ್‌ನಲ್ಲಿ ಅಧಿಕಾರ ವಹಿಸಿಕೊಂಡ ನಂತರ ಮಾಲ್ಡೀವ್ಸ್ ಅಧ್ಯಕ್ಷ ಮೊಹ್ಮದ್ ಮುಯಿಝು ಭಾರತಕ್ಕೆ ಮೊದಲ ಬಾರಿಗೆ ಭೇಟಿ ನೀಡಿದ್ದಾರೆ. ಇದೇ ಅಕ್ಟೋಬರ್‌ 7ರಂದು ಅವರನ್ನ ದೆಹಲಿಯ ಹೈದರಾಬಾದ್ ಹೌಸ್‌ನಲ್ಲಿ ಭೇಟಿಯಾಗಿ ದ್ವಿಪಕ್ಷೀಯ ಮಾತುಕತೆ ನಡೆಸಿದ್ದರು. ಈ ವೇಳೆ ಮಾತನಾಡಿದ ಪ್ರಧಾನಿ ಮೋದಿ, ಭಾರತವು ಯಾವಾಗಲೂ ಮಾಲ್ಡೀವ್ಸ್‌ಗೆ ಮೊದಲ ಆದ್ಯತೆ ನೀಡುತ್ತದೆ ಎಂದು ಭರವಸೆ ನೀಡಿದ್ದರು. ಇದೇ ವೇಳೆ ಮಾಲ್ಡೀವ್ಸ್‌ಗೆ ಭೇಟಿ ನೀಡುವಂತೆ ಮುಯಿಝು ಪ್ರಧಾನಿ ಮೋದಿಗೆ ಆಹ್ವಾನ ನೀಡಿದರು. ನಿನ್ನೆ ತಾಜ್‌ ಮಹಲ್‌ಗೆ ಭೇಟಿ ನೀಡಿದ್ದರು.