Tag: MCA

  • ಎಂಬಿಎ, ಎಂಸಿಎ ಪ್ರವೇಶಕ್ಕೆ ಭಾನುವಾರ ಪರೀಕ್ಷೆ- ಸಿದ್ಧತೆ ಪೂರ್ಣ: ಕೆಇಎ

    ಎಂಬಿಎ, ಎಂಸಿಎ ಪ್ರವೇಶಕ್ಕೆ ಭಾನುವಾರ ಪರೀಕ್ಷೆ- ಸಿದ್ಧತೆ ಪೂರ್ಣ: ಕೆಇಎ

    ಬೆಂಗಳೂರು: ಎಂಬಿಎ (MBA) ಮತ್ತು ಎಂಸಿಎ (MCA) ಕೋರ್ಸ್‌ಗಳ ಪ್ರವೇಶಕ್ಕೆ ಭಾನುವಾರ (ಜೂನ್ 22) ರಾಜ್ಯದ 11 ಜಿಲ್ಲೆಗಳಲ್ಲಿ ಲಿಖಿತ ಪರೀಕ್ಷೆ (PGCET) ನಡೆಯಲಿದ್ದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಬಿಗಿ ಕ್ರಮಗಳನ್ನು ಕೈಗೊಂಡಿದೆ.

    ಬೆಂಗಳೂರು, ಬಾಗಲಕೋಟೆ, ಬಳ್ಳಾರಿ, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ ಮತ್ತು ತುಮಕೂರು ನಗರಗಳ ಒಟ್ಟು 68 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. ಇದನ್ನೂ ಓದಿ: ಹಣ ಪಡೆದಿದ್ದು ನಿಜ, ಅದು ಟ್ಯಾಕ್ಸ್, ಅಭಿವೃದ್ಧಿ ಹಣ: ಲಂಚ ಆರೋಪಕ್ಕೆ ಕಮಲನಗರ ಪಿಡಿಓ ಸ್ಪಷ್ಟನೆ

    ಬೆಳಗ್ಗೆ ಎಂಸಿಎ ಹಾಗೂ ಮಧ್ಯಾಹ್ನ ಎಂಬಿಎ ಪ್ರವೇಶಕ್ಕೆ ಪರೀಕ್ಷೆ ನಡೆಯಲಿದೆ. ಎಂಸಿಎ ಪ್ರವೇಶಕ್ಕೆ 18,738 ಹಾಗೂ ಎಂಬಿಎ ಪ್ರವೇಶಕ್ಕೆ 33,282 ಮಂದಿ ಪರೀಕ್ಷೆ ಬರೆಯಲಿದ್ದಾರೆ ಎಂದು ಅವರು ವಿವರಿಸಿದ್ದಾರೆ. ಇದನ್ನೂ ಓದಿ: ಹೆಲ್ಪ್‌ಲೈನ್‌ ಹೆಸರಲ್ಲಿ ವಂಚನೆ ಆರೋಪ – ಬೆಂಗಳೂರಿನ ಸಂಧ್ಯಾ ಪವಿತ್ರ ವಿರುದ್ಧ ಎಫ್‌ಐಆರ್

    ವಸ್ತ್ರ ಸಂಹಿತೆ ನಾಳಿನ ಪರೀಕ್ಷೆಗೂ ಅನ್ವಯ ಆಗಲಿದ್ದು, ಅಕ್ರಮಗಳಿಗೆ ಅವಕಾಶ ಇಲ್ಲದಂತೆ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕ್ಯಾಮೆರಾ ಕಣ್ಗಾವಲು ಕೂಡ ಇರುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬಂಕರ್‌ನಿಂದಲೇ ಸಂಭಾವ್ಯ ಉತ್ತರಾಧಿಕಾರಿಗಳ ಹೆಸರನ್ನು ಸೂಚಿಸಿದ ಖಮೇನಿ

  • MBA, MCA ಕೋರ್ಸ್‌ಗೆ ಅರ್ಜಿ ಸಲ್ಲಿಸಲು ಮೇ 19ರವರೆಗೆ ದಿನಾಂಕ ವಿಸ್ತರಣೆ – ಕೆಇಎ

    MBA, MCA ಕೋರ್ಸ್‌ಗೆ ಅರ್ಜಿ ಸಲ್ಲಿಸಲು ಮೇ 19ರವರೆಗೆ ದಿನಾಂಕ ವಿಸ್ತರಣೆ – ಕೆಇಎ

    ಬೆಂಗಳೂರು: ಎಂಬಿಎ, ಎಂಸಿಎ ಕೋರ್ಸ್‌ಗಳ ಪ್ರವೇಶಕ್ಕೆ ಜೂನ್ 22ರಂದು ಪಿಜಿಸಿಇಟಿ ನಡೆಯಲಿದೆ. ಇದಕ್ಕೆ ಅರ್ಜಿ ಸಲ್ಲಿಸಲು ಮೇ 19ರವರೆಗೆ ದಿನಾಂಕ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

    ಈ ದಿನಾಂಕ ವಿಸ್ತರಣೆ ಕೇವಲ ಎಂಬಿಎ, ಎಂಸಿಎ ಕೋರ್ಸ್‌ಗೆ ಮಾತ್ರ ಅನ್ವಯವಾಗುತ್ತದೆ. ಎಂ.ಟೆಕ್, ಎಂಇ ಕೋರ್ಸ್‌ಗಳಿಗೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಮುಗಿದಿದೆ. ಮೇ 31ರಂದು ಲಿಖಿತ ಪರೀಕ್ಷೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

  • ಮುಂಬೈನಲ್ಲಿ ದೇಶದ 2ನೇ ಅತಿದೊಡ್ಡ ಕ್ರಿಕೆಟ್‌ ಸ್ಟೇಡಿಯಂ ನಿರ್ಮಿಸಲು ಪ್ಲ್ಯಾನ್‌!

    ಮುಂಬೈನಲ್ಲಿ ದೇಶದ 2ನೇ ಅತಿದೊಡ್ಡ ಕ್ರಿಕೆಟ್‌ ಸ್ಟೇಡಿಯಂ ನಿರ್ಮಿಸಲು ಪ್ಲ್ಯಾನ್‌!

    ‌- ಐತಿಹಾಸಿಕ ವಾಂಖೆಡೆಗೆ ಸೆಡ್ಡು ಹೊಡೆಯುತ್ತಾ ಸ್ಟೇಡಿಯಂ

    ಮುಂಬೈ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಅಮಾನೆ ಗ್ರಾಮದಲ್ಲಿ ದೇಶದಲ್ಲೇ 2ನೇ ಅತಿದೊಡ್ಡ ಕ್ರಿಕೆಟ್‌ ಸ್ಟೇಡಿಯಂ (New Cricket Stadium) ನಿರ್ಮಿಸಲು ಮುಂಬೈ ಕ್ರಿಕೆಟ್ ಅಸೋಸಿಯೇಷನ್ ​​(MCA) ಯೋಜಿಸುತ್ತಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ರೋಹಿತ್‌ ನಾಯಕತ್ವದಲ್ಲಿ WTC ಫೈನಲ್‌, ಚಾಂಪಿಯನ್ಸ್‌ ಟ್ರೋಫಿ ಗೆಲ್ಲುತ್ತೇವೆ: ಜಯ್‌ ಶಾ ವಿಶ್ವಾಸ

    ಮುಂಬೈ ಕ್ರಿಕೆಟ್‌ ಅಸೋಸಿಯೇಷನ್‌ 1 ಲಕ್ಷ ಆಸನಗಳ ಸಾಮರ್ಥ್ಯದ ಕ್ರಿಕೆಟ್‌ ಸ್ಟೇಡಿಯಂ ನಿರ್ಮಿಸಲು ಎದುರುನೋಡುತ್ತಿದೆ. ಥಾಣೆ ಜಿಲ್ಲೆಯಿಂದ ಸುಮಾರು 26 ಕಿಮೀ ಹಾಗೂ ವಾಂಖೆಡೆ ಕ್ರೀಡಾಂಗಣದಿಂದ (Wankhede Stadium) 68 ಕಿಮೀ ದೂರದಲ್ಲಿರುವ ಅಮಾನೆ ಗ್ರಾಮದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಸಿದ್ಧತೆ ನಡೆದಿದೆ. ಈಗಾಗಲೇ ಸ್ಟೇಡಿಯಂ ನಿರ್ಮಾಣಕ್ಕೆ ಅಗತ್ಯವಿರುವ 50 ಎಕೆರೆ ಭೂಪ್ರದೇಶ ಸ್ವಾಧೀನಕ್ಕೆ ಮಹಾರಾಷ್ಟ್ರ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದಿಂದ ಟೆಂಡರ್‌ ಭರ್ತಿಯಾಗಿದ್ದು, ಸರ್ಕಾರದ ಅನುಮೋದನೆಗಾಗಿ ಕಾಯುತ್ತಿದೆ ಎಂದು ತಿಳಿದುಬಂದಿದೆ.

    ಶುಕ್ರವಾರ (ಜು.5) ಟಿ20 ವಿಶ್ವಕಪ್‌ ವಿಜೇತ ತಂಡದ ಭಾಗವಾಗಿರುವ ನಾಲ್ವರು ಆಟಗಾರರ ಅಭಿನಂದನಾ ಸಮಾರಂಭದಲ್ಲಿ ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವೀಸ್‌ ಈ ಬಗ್ಗೆ ಮಾತನಾಡಿದ್ದರು. ಅತ್ಯಾಧುನಿಕ ಹಾಗೂ ಬೃಹತ್‌ ಕ್ರಿಕೆಟ್‌ ಸ್ಟೇಡಿಯಂ ನಿರ್ಮಿಸಲು ಪರಿಗಣಿಸುವಂತೆ ಸಿಎಂ ಏಕನಾಥ್‌ ಶಿಂಧೆ (Eknath shinde) ಅವರಿಗೆ ಮನವಿ ಮಾಡಿದ್ದೇವೆ. ಮುಂಬೈನಲ್ಲಿ 1 ಆಸನಗಳ ಸಾಮರ್ಥ್ಯದ ಕ್ರೀಡಾಂಗಣ ಅವಶ್ಯಕತೆಯಿದೆ ಎಂದು ಹೇಳಿರುವುದಾಗಿ ತಿಳಿಸಿದ್ದಾರೆ.

    ಮುಂಬೈನಲ್ಲಿ ಬೃಹತ್‌ ಕ್ರೀಡಾಂಗಣ ನಿರ್ಮಿಸಬೇಕು ಎಂಬುದು ಎಂಸಿಎ ಮಾಜಿ ಅಧ್ಯಕ್ಷ ಅಮೋಲ್‌ ಕಾಳೆ ಅವರ ಕನಸಿನ ಯೋಜನೆಯಾಗಿತ್ತು. ಅವರ ನೆನಪಿನಾರ್ಥವಾಗಿ ಕ್ರೀಡಾಂಗಣ ನಿರ್ಮಾಣವಾಗಬೇಕು ಎಂದು ಹೇಳಿದ್ದರು. ಇದನ್ನೂ ಓದಿ: T20 ಏಷ್ಯಾಕಪ್‌ ಟೂರ್ನಿಗೆ ಭಾರತ ಮಹಿಳಾ ತಂಡ ಪ್ರಕಟ – ಕನ್ನಡತಿ ಶ್ರೇಯಾಂಕಾಗೆ ಸ್ಥಾನ!

    ಸದ್ಯ ಅಹಮದಾಬಾದ್‌ನ ಮೊಟೇರಾದಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣ 1.32 ಲಕ್ಷ ಆಸನಗಳ ಸಾಮರ್ಥ್ಯ ಹೊಂದಿದ್ದು, ದೇಶದ ಅತಿದೊಡ್ಡ ಕ್ರೀಡಾಂಗಣ ಎನಿಸಿಕೊಂಡಿದೆ. ಇದನ್ನೂ ಓದಿ: ಬಿಸಿಸಿಐ ಬಳಿಕ ಮಹಾರಾಷ್ಟ್ರ ಸರ್ಕಾರದಿಂದಲೂ ಟೀಂ ಇಂಡಿಯಾ ಆಟಗಾರರಿಗೆ ಬಂಪರ್‌ ಗಿ‌ಫ್ಟ್‌!

  • Karnataka PGCET 2023: ಸೆಪ್ಟೆಂಬರ್ 23 & 24ರಂದು ಪಿಜಿ ಸಿಇಟಿ ಪರೀಕ್ಷೆ- ಕೆಇಎ

    Karnataka PGCET 2023: ಸೆಪ್ಟೆಂಬರ್ 23 & 24ರಂದು ಪಿಜಿ ಸಿಇಟಿ ಪರೀಕ್ಷೆ- ಕೆಇಎ

    ಬೆಂಗಳೂರು: ಎಂಬಿಎ, ಎಂಸಿಎ, ಎಂ.ಇ, ಎಂ.ಟೆಕ್‌, ಎಂ.ಆರ್ಕಿಟೆಕ್ಚರ್ ಕೋರ್ಸ್‌ಗಳ ಪ್ರವೇಶಕ್ಕೆ ಸೆಪ್ಟೆಂಬರ್ 23 ಮತ್ತು 24ರಂದು ಪಿಜಿ ಸಿಇಟಿ ಪರೀಕ್ಷೆ (PGCET Exam) ನಡೆಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

    ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯ ನಿರ್ವಾಹಕ ನಿರ್ದೇಶಕರಾದ ಎಸ್.ರಮ್ಯಾ (S Ramya) ಅವರಿಂದು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಸೆ.23ರ ಶನಿವಾರ ಮಧ್ಯಾಹ್ನ 2.30ರಿಂದ 4.30ರ ವರೆಗೆ ಎಂ.ಇ, ಎಂ.ಟೆಕ್ ಮತ್ತು ಎಂ.ಆರ್ಕ್ ಕೋರ್ಸ್‌ಗಳಿಗೆ, ಸೆ.24ರ ಭಾನುವಾರ ಬೆಳಿಗ್ಗೆ 10.30 ರಿಂದ 12.30ರ ವರೆಗೆ ಎಂಸಿಎ ಕೋರ್ಸ್‌ಗೆ (MCA Course) ಮತ್ತು ಅಂದು ಮಧ್ಯಾಹ್ನ 2.30ರಿಂದ 4.30ರ ವರೆಗೆ MBA ಕೋರ್ಸ್‌ಗೆ ಗರಿಷ್ಠ 100 ಅಂಕಗಳಿಗೆ ಪರೀಕ್ಷೆಗಳು ನಡೆಯಲಿವೆ ಎಂದಿದ್ದಾರೆ.

    ಸಾಂದರ್ಭಿಕ ಚಿತ್ರ

    ಈ ಮೊದಲು ಸೆಪ್ಟೆಂಬರ್ 9 ಮತ್ತು 10ರಂದು ಈ ಪರೀಕ್ಷೆಯನ್ನ ನಡೆಸಲು ನಿರ್ಧರಿಸಲಾಗಿತ್ತು. ಆದರೆ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳ ವ್ಯಾಪ್ತಿಯಲ್ಲಿ ಪದವಿ ಕೋರ್ಸುಗಳ ಅಂತಿಮ ಸೆಮಿಸ್ಟರ್‌ ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಇದನ್ನೂ ಓದಿ: ಬಿಬಿಎಂಪಿ ಮುಖ್ಯ ಕಚೇರಿಯಲ್ಲಿ ಬೆಂಕಿ ಪ್ರಕರಣ; ಗಂಭೀರ ಸ್ಥಿತಿಯಲ್ಲಿದ್ದ ಚೀಫ್‌ ಎಂಜಿನಿಯರ್‌ ಶಿವಕುಮಾರ್‌ ನಿಧನ

    ಹೆಚ್ಚಿನ ಮಾಹಿತಿಗೆ ಪ್ರಾಧಿಕಾರದ ವೆಬ್‌ಸೈಟ್‌ http://kea.kar.nic.in ನೋಡಬಹುದು ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: 7,000 ರಾಖಿ ಕಟ್ಟಿಸಿಕೊಂಡು ವಿಶ್ವ ದಾಖಲೆ ಬರೆದ ಜನಪ್ರಿಯ ಆನ್‌ಲೈನ್ ಬೋಧಕ ಖಾನ್ ಸರ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]