Tag: Mcgann Hospital

  • ಶಿವಮೊಗ್ಗ | ಮಗಳನ್ನು ಕೊಂದು ಶವದ ಮೇಲೆ ನಿಂತು ನೇಣಿಗೆ ಶರಣಾದ ತಾಯಿ

    ಶಿವಮೊಗ್ಗ | ಮಗಳನ್ನು ಕೊಂದು ಶವದ ಮೇಲೆ ನಿಂತು ನೇಣಿಗೆ ಶರಣಾದ ತಾಯಿ

    ಶಿವಮೊಗ್ಗ: ನಗರದ (Shivamogga) ಮೆಗ್ಗಾನ್​ ಆಸ್ಪತ್ರೆಯ (McGann Hospital) ನರ್ಸಿಂಗ್​​ ಕ್ವಾಟ್ರಸ್​ನಲ್ಲಿ ತಾಯಿಯೇ (Mother) ಮಗಳನ್ನು ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

    ಹತ್ಯೆಯಾದ ಬಾಲಕಿಯನ್ನು ಪೂರ್ವಿಕಾ ಎಂದು ಗುರುತಿಸಲಾಗಿದೆ. ಬಾಲಕಿ 6ನೇ ತರಗತಿ ಓದುತ್ತಿದ್ದಳು ಎಂದು ತಿಳಿದು ಬಂದಿದೆ. ನೇಣಿಗೆ ಶರಣಾದ ಮಹಿಳೆಯನ್ನು ಶೃತಿ (38) ಎಂದು ಗುರುತಿಸಲಾಗಿದೆ. ಮಹಿಳೆ ಆತ್ಮಹತ್ಯೆಗೂ ಮುನ್ನ ಮಗಳಿಗೆ ಮಚ್ಚಿನಿಂದ ಹೊಡೆದು ಕೊಂದಿದ್ದಾಳೆ. ಬಳಿಕ ಆಕೆಯ ಮೃತದೇಹದ ಮೇಲೆ ನಿಂತುಕೊಂಡ ಪ್ಯಾನ್​ಗೆ ನೇಣುಬಿಗಿದುಕೊಂಡು ಅತ್ಮಹತ್ಯೆ ಮಾಡಿಕೊಂಡಿದ್ದಾಳೆ. ಶೃತಿ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದಳು. ಇದಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದಳು ಎನ್ನಲಾಗಿದೆ. ಇದನ್ನೂ ಓದಿ: ಪತಿಯಿಂದ್ಲೇ ಬೆಡ್‌ರೂಂನಲ್ಲಿನ ಖಾಸಗಿ ಕ್ಷಣಗಳ ವಿಡಿಯೋ ಸೆರೆ – ವಿದೇಶಿ ಸ್ನೇಹಿತರೊಂದಿಗೆ ಮಲಗುವಂತೆ ಒತ್ತಾಯಿಸಿ ಪತ್ನಿಗೆ ಬ್ಲ್ಯಾಕ್‌ಮೇಲ್

    ಮಹಿಳೆಯ ಪತಿ ರಾಮಣ್ಣ ಮೆಗ್ಗಾನ್‌ ಆಸ್ಪತ್ರೆಯಲ್ಲಿ ನೈಟ್ ಶಿಫ್ಟ್ ಡ್ಯೂಟಿಯಲ್ಲಿದ್ದರು. ಬೆಳಗ್ಗೆ ಕೆಲಸ ಮುಗಿಸಿ ಕ್ವಾಟ್ರಸ್​​ಗೆ ಬಂದಾಗ ವಿಷಯ ತಿಳಿದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: 5.20 ಕೋಟಿ ಇನ್ಶೂರೆನ್ಸ್ ಹಣಕ್ಕಾಗಿ ಕೊಲೆ – ಅಪಘಾತವೆಂದು ಬಿಂಬಿಸಲು ಯತ್ನಿಸಿ ಸಿಕ್ಕಿಬಿದ್ದ ಗ್ಯಾಂಗ್

  • ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆಯಲ್ಲಿ ಹಸುಗೂಸನ್ನು ಹತ್ಯೆಗೈದಿದ್ದ ಪಾಪಿ ತಾಯಿ ಅರೆಸ್ಟ್‌

    ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆಯಲ್ಲಿ ಹಸುಗೂಸನ್ನು ಹತ್ಯೆಗೈದಿದ್ದ ಪಾಪಿ ತಾಯಿ ಅರೆಸ್ಟ್‌

    ಶಿವಮೊಗ್ಗ: ನಗರದ (Shivamogga) ಮೆಗ್ಗಾನ್ ಆಸ್ಪತ್ರೆ ಹೆರಿಗೆ ವಾರ್ಡ್ ( McGann Hospital) ಶೌಚಾಲಯ ಕೊಠಡಿಯಲ್ಲಿ, ನವಜಾತ ಗಂಡು ಶಿಶುವಿನ ಕತ್ತು ಸೀಳಿ ಕೊಲೆ ಮಾಡಿದ್ದ ತಾಯಿಯನ್ನು (Mother) ದೊಡ್ಡಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

    ಬಂಧಿತಳನ್ನು ದಾವಣಗೆರೆಯ (Davanagere) ಹೊನ್ನಾಳಿ ತಾಲೂಕಿನ ತಿಮ್ಲಾಪುರದ ಶೈಲಾ ಎಂದು ಗುರುತಿಸಲಾಗಿದೆ. ಆ.16 ರಂದು ಮೆಗ್ಗಾನ್ ಆಸ್ಪತ್ರೆ ಹೆರಿಗೆ ವಾರ್ಡ್‌ನ ಶೌಚಾಲಯದಲ್ಲಿ ಕತ್ತು ಸೀಳಿ ಹತ್ಯೆ ಮಾಡಿದ್ದ ಸ್ಥಿತಿಯಲ್ಲಿ ನವಜಾತ ಗಂಡು ಶಿಶುವಿನ ಶವ ಪತ್ತೆಯಾಗಿತ್ತು. ಆಸ್ಪತ್ರೆ ಸಿಬ್ಬಂದಿ ಹೆರಿಗೆ ವಾರ್ಡ್‌ನಲ್ಲಿ ದಾಖಲಾಗಿದ್ದ ಮಹಿಳೆಯರು ಹಾಗೂ ಶಿಶುಗಳ ವಿವರ ಕಲೆ ಹಾಕಿದ್ದರು. ಹೆರಿಗೆಯಾದ ಎಲ್ಲಾ ಶಿಶುಗಳು ವಾರ್ಡ್ ನಲ್ಲಿರುವುದು ಕಂಡುಬಂದಿತ್ತು. ಅದೇ ದಿನ ಮನೆಯಲ್ಲಿ ಅಬಾರ್ಷನ್ ಆಗಿದೆ ಹಾಗೂ ಹೊಟ್ಟೆ ನೋವೆಂದು ಹೇಳಿ, ಹೆರಿಗೆ ವಾರ್ಡ್‌ನಲ್ಲಿ ದಾಖಲಾಗಿದ್ದ ಶೈಲಾ ಬಳಿಯೂ ಆಸ್ಪತ್ರೆ ಸಿಬ್ಬಂದಿ ವಿಚಾರಿಸಿದ್ದರು. ಆದರೆ ಶಿಶು ತನ್ನದಲ್ಲವೆಂದು ನಿರಾಕರಿಸಿದ್ದಳು. ಇದನ್ನೂ ಓದಿ: ಹೇಮಾವತಿ ನದಿಗೆ ಬಿದ್ದ ಕಾರು – ಇಬ್ಬರ ಶವ ಪತ್ತೆ, ಮತ್ತಿಬ್ಬರು ಕೊಚ್ಚಿ ಹೋಗಿರೋ ಶಂಕೆ

    ಈ ಕುರಿತಂತೆ ಆಸ್ಪತ್ರೆ ಆಡಳಿತ ಮಂಡಳಿಯು, ದೊಡ್ಡಪೇಟೆ ಠಾಣೆಯಲ್ಲಿ ದೂರು ನೀಡಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದರು. ಶೈಲಾ ಮೇಲೆಯೇ ಅನುಮಾನ ವ್ಯಕ್ತಪಡಿಸಿ ಆಕೆಯ ಚಲನವಲನದ ಮೇಲೆ ನಿಗಾವಹಿಸಿದ್ದರು. ಆಕೆ ಗುಣಮುಖವಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುತ್ತಿದ್ದಂತೆ, ಪೊಲೀಸರು ಆಕೆಯನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದರು. ಈ ವೇಳೆ ಶೌಚಾಲಯದಲ್ಲಿ ಪತ್ತೆಯಾದ ಶಿಶು ತನ್ನದಾಗಿದ್ದು, ತಾನೇ ಕೊಲೆ ಮಾಡಿರುವ ಸಂಗತಿ ಬಾಯ್ಬಿಟ್ಟಿದ್ದಳು.

    ಕೊಲೆಗೆ ಕಾರಣವೇನು?
    ಈಗಾಗಲೇ ಶೈಲಾಗೆ ಇಬ್ಬರು ಮಕ್ಕಳಿದ್ದಾರೆ. ಮತ್ತೊಂದೆಡೆ, 4 ವರ್ಷಗಳ ಹಿಂದೆ ಸಂತಾನಹರಣ ಚಿಕಿತ್ಸೆಯೂ ಆಗಿತ್ತು. ಇದರ ನಡುವೆ ಆಕೆ ಗರ್ಭಿಣಿಯಾಗಿದ್ದಳು. ಇದನ್ನು ಕುಟುಂಬದವರಿಂದ ಆಕೆ ಮುಚ್ಚಿಟ್ಟಿದ್ದಳು. ಆ.16 ರಂದು ತನಗೆ ಮನೆಯಲ್ಲಿ ತನಗೆ ಅಬಾರ್ಷನ್ ಆಗಿದೆ ಹಾಗೂ ಹೊಟ್ಟೆ ನೋವೆಂದು ಹೇಳಿ, ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದಳು. ಈ ವೇಳೆ ಕೊಲೆ ಮಾಡಿದ ಶಿಶುವವನ್ನು ಶೌಚಾಲಯದಲ್ಲಿ ಹಾಕಿದ್ದಳು ಎಂದು ಹೇಳಲಾಗುತ್ತಿದೆ.

    ಕೆಲವು ಮೂಲಗಳ ಪ್ರಕಾರ, ಹೆರಿಗೆ ವಾರ್ಡ್‌ನಲ್ಲಿ ದಾಖಲಾಗಿದ್ದ ಮಹಿಳೆಯೋರ್ವರನ್ನು ನೋಡಲು ಆಗಮಿಸಿದ ವೇಳೆ ಆಕೆಗೆ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಶೌಚಾಲಯಕ್ಕೆ ತೆರಳಿದ ವೇಳೆ ನಾರ್ಮಲ್ ಹೆರಿಗೆಯಾಗಿದೆ. ಅಲ್ಲಿಯೇ ಶಸ್ತ್ರಚಿಕಿತ್ಸೆಗೆ ಬಳಸುವ ಬ್ಲೇಡ್ ನಿಂದ ಮಗುವಿನ ಕತ್ತು ಸೀಳಿ ಕೊಲೆ ಮಾಡಿದ್ದಳು ಎನ್ನಲಾಗುತ್ತಿದೆ. ಇದನ್ನೂ ಓದಿ: ಪ್ರೀತ್ಸೆ ಪ್ರೀತ್ಸೆ ಎಂದು ವಿದ್ಯಾರ್ಥಿನಿಯ ಹಿಂದೆ ಬಿದ್ದು, ಕೊಲೆ ಬೆದರಿಕೆ – ಪಾಗಲ್ ಪ್ರೇಮಿ ಅರೆಸ್ಟ್

  • ಒಂಟಿ ಮಹಿಳೆ ಕೊಲೆ ಪ್ರಕರಣ – ಆರೋಪಿಯ ತಾಯಿಯಿಂದ ಆತ್ಮಹತ್ಯೆ ಯತ್ನ

    ಒಂಟಿ ಮಹಿಳೆ ಕೊಲೆ ಪ್ರಕರಣ – ಆರೋಪಿಯ ತಾಯಿಯಿಂದ ಆತ್ಮಹತ್ಯೆ ಯತ್ನ

    ಶಿವಮೊಗ್ಗ: ಶಿವಮೊಗ್ಗದಲ್ಲಿ  (Shivamogga) ಇತ್ತೀಚೆಗೆ ನಡೆದಿದ್ದ ಒಂಟಿ ಮಹಿಳೆಯ ಕೊಲೆ ಪ್ರಕರಣದ ಪ್ರಮುಖ ಆರೋಪಿಯ ತಾಯಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಗುರುವಾರ ನಡೆದಿದೆ.

    ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ಸೀತಾಬಾಯಿ (50) ಎಂದು ಗುರುತಿಸಲಾಗಿದೆ. ನಗರದ ಹುಣಸೋಡು ನಿವಾಸಿಯಾದ ಮಹಿಳೆ ಅಬ್ಬಲಗೆರೆಯ ಸಂಬಂಧಿಕರ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಕೂಡಲೇ ಆಕೆಯನ್ನು ರಕ್ಷಿಸಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಕೋಲಾರದಲ್ಲಿ ಮಹಿಳೆಯರ ಶಕ್ತಿ ಪ್ರದರ್ಶನ – ಸಾಲ ವಸೂಲಿಗೆ ಬಂದಿದ್ದಕ್ಕೆ ಬೈಕ್‍ಗೆ ಬೆಂಕಿ ಹಚ್ಚಿ ಆಕ್ರೋಶ

    ಜೂನ್ 17ರಂದು ಶಿವಮೊಗ್ಗದ ವಿಜಯನಗರದಲ್ಲಿ ಎಂಜಿನಿಯರ್ ಒಬ್ಬರ ಪತ್ನಿ ಕಮಲಮ್ಮ ಎಂಬುವರ ಕೊಲೆ ನಡೆದಿತ್ತು. ಈ ಪ್ರಕರಣ ನಡೆದ ಮೇಲೆ ಕಾರು ಚಾಲಕ ಹನುಮಂತ ನಾಯ್ಕ ನಾಪತ್ತೆಯಾಗಿದ್ದ. ಕಮಲಮ್ಮ ಅವರನ್ನು ಕೊಲೆಗೈದು ಸುಮಾರು 35 ಲಕ್ಷ ರೂ. ಹಣವನ್ನು ದೋಚಿಕೊಂಡು ಹೋಗಿದ್ದಾನೆ ಎಂದು ಆತನ ವಿರುದ್ಧ ಎಫ್‍ಐಆರ್ ಕೂಡ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಕೊಲೆಗಾರನ ಸುಳಿವು ಪಡೆದ ಶಿವಮೊಗ್ಗ ತುಂಗಾನಗರ (Tunga Nagar) ಪೊಲೀಸರು ಆರೋಪಿ ಹನುಮಂತನಾಯ್ಕನ ಬೆನ್ನು ಬಿದ್ದಿದ್ದರು.

    ಅಲ್ಲದೇ ಆರೋಪಿಯ ತಂದೆ ರೂಪ್ಲಾ ನಾಯ್ಕ ಕೂಡ ಮನೆ ಬಿಟ್ಟು ಪರಾರಿಯಾಗಿದ್ದ. ಇದರಿಂದ ಮನನೊಂದ ಸೀತಾಬಾಯಿ ಸಂಬಂಧಿಕರ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಸದ್ಯಕ್ಕೆ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾಳೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಕೋಲಾರದಲ್ಲಿ ಮಹಿಳೆಯರ ಶಕ್ತಿ ಪ್ರದರ್ಶನ – ಸಾಲ ವಸೂಲಿಗೆ ಬಂದಿದ್ದಕ್ಕೆ ಬೈಕ್‍ಗೆ ಬೆಂಕಿ ಹಚ್ಚಿ ಆಕ್ರೋಶ

  • 5 ದಿನಗಳ ಹಿಂದಷ್ಟೇ ವಸತಿ ಶಾಲೆಗೆ ದಾಖಲಾಗಿದ್ದ ವಿದ್ಯಾರ್ಥಿನಿ ಸಾವು

    5 ದಿನಗಳ ಹಿಂದಷ್ಟೇ ವಸತಿ ಶಾಲೆಗೆ ದಾಖಲಾಗಿದ್ದ ವಿದ್ಯಾರ್ಥಿನಿ ಸಾವು

    – ಮಗಳ ಸಾವಿನ ಬಗ್ಗೆ ಪೋಷಕರು ಅನುಮಾನ

    ಶಿವಮೊಗ್ಗ: ಖಾಸಗಿ ವಸತಿ ಶಾಲೆಯಲ್ಲಿ 8 ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಮೃತಪಟ್ಟ ಪ್ರಕರಣ ಸಾಗರದಲ್ಲಿ (Sagar) ನಡೆದಿದೆ.

    ಮೃತ ವಿದ್ಯಾರ್ಥಿನಿಯನ್ನು ಸೊರಬ ತಾಲೂಕಿನ ಶಿವಪುರ ಗ್ರಾಮದ ತೇಜಸ್ವಿನಿ (13) ಎಂದು ಗುರುತಿಸಲಾಗಿದೆ. ಈಕೆ ಸಾಗರದ ವನಶ್ರೀ ವಸತಿ ಶಾಲೆಗೆ (Residential School) ಕಳೆದ ಐದು ದಿನಗಳ ಹಿಂದೆ ದಾಖಲಾಗಿದ್ದಳು. ಗುರುವಾರ ಪ್ರಜ್ಞಾ ಹೀನಾ ಸ್ಥಿತಿಯಲ್ಲಿದ್ದ ತೇಜಸ್ವಿಯನ್ನು ಶಾಲೆಯ ಶಿಕ್ಷಕರು ಸಾಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ವಿದ್ಯಾರ್ಥಿನಿ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಇದನ್ನೂ ಓದಿ: ಖಲಿಸ್ತಾನಿ ಬೆಂಬಲಿಗರಿಂದ ಇಂದಿರಾ ಗಾಂಧಿ ಹತ್ಯೆಯ ಸ್ತಬ್ಧಚಿತ್ರ ಮೆರವಣಿಗೆ

    ಇದೀಗ ಮಗಳ ಸಾವಿನ ಬಗ್ಗೆ ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದ (Shivamogga) ಮೆಗ್ಗಾನ್ ಆಸ್ಪತ್ರೆಯಲ್ಲಿ (McGann Hospital) ಮರಣೋತ್ತರ ಶವ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಅಲ್ಲದೇ ವಿದ್ಯಾರ್ಥಿನಿ ಸಾವಿನ ಬಗ್ಗೆ ತನಿಖೆ ನಡೆಸುವಂತೆ ವಿದ್ಯಾರ್ಥಿನಿ ಕುಟುಂಬಸ್ಥರು ಹಾಗೂ ಶಾಸಕ ಬೇಳೂರು ಗೋಪಾಲಕೃಷ್ಣ ಆಗ್ರಹಿಸಿದ್ದಾರೆ. ಇದನ್ನೂ ಓದಿ: 32 ವರ್ಷದ ಗೆಳತಿಯನ್ನು ಕೊಂದು ಪೀಸ್ ಪೀಸ್ ಮಾಡಿದ 56 ವರ್ಷದ ವ್ಯಕ್ತಿ ಅರೆಸ್ಟ್

  • ಹೃದಯದ ಸಮಸ್ಯೆ- ಮೆಗ್ಗಾನ್ ಆಸ್ಪತ್ರೆಗೆ ಮುರುಘಾ ಶ್ರೀ ಶಿಫ್ಟ್

    ಹೃದಯದ ಸಮಸ್ಯೆ- ಮೆಗ್ಗಾನ್ ಆಸ್ಪತ್ರೆಗೆ ಮುರುಘಾ ಶ್ರೀ ಶಿಫ್ಟ್

    ಚಿತ್ರದುರ್ಗ: ಪೋಕ್ಸೋ (POCSO) ಪ್ರಕರಣ ಸಂಬಂಧ ಸೆಪ್ಟೆಂಬರ್ 27ರವರೆಗೆ ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಶ್ರೀಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಆರೋಪಿ ಮುರುಘಾಶ್ರೀ (Murugha Shree) ಗೆ ಹೃದಯ ಸಮಸ್ಯೆ ಹಿನ್ನೆಲೆ ಅವರನ್ನು ಕೂಡಲೇ ಆಸ್ಪತ್ರೆಗೆ ರವಾನಿಸಲಾಗಿದೆ. ಕರೋನರಿ ಆಂಜಿಯೋಗ್ರಾಮ್ (Coronary angiogram) ನಿಂದ ಬಳಲುತ್ತಿದ್ದಾರೆ ಎಂದು ಮುರುಘಾಶ್ರೀ ಪರ ವಕೀಲ ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಚಿತ್ರದುರ್ಗ 2ನೇ ಅಪರ ಜಿಲ್ಲಾ & ಸತ್ರ ನ್ಯಾಯಾಲಯದ ನ್ಯಾಯಾಧೀಶರ ಸೂಚನೆ ಮೇರೆಗೆ ಶಿಫ್ಟ್ ಮಾಡಲಾಗಿದೆ. ಇದನ್ನೂ ಓದಿ: ಮುರುಘಾ ಶ್ರೀಗಳಿಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ

    ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ (McGann Hospital) ಗೆ ಕರೆದೊಯ್ಯಲು ಕೋರ್ಟ್ ಸೂಚನೆ ನೀಡಿದಂತೆ ಅವರನ್ನು ಚಿತ್ರದುರ್ಗ ಜಿಲ್ಲಾ ಕಾರಾಗೃಹದಿಂದ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದುಕೊಮಡು ಹೋಗಲಾಗಿದೆ. ಬಿಗಿ ಭದ್ರತೆಯಲ್ಲಿಯೇ ಪೊಲೀಸ್ ವ್ಯಾನ್ ನಲ್ಲಿ ಮುರುಘಾಶ್ರೀಯನ್ನು ಶಿವಮೊಗ್ಗಕ್ಕೆ ಕರೆದೊಯ್ಯಲಾಗಿದೆ. ಮುರುಘಾಮಠದ ಮುಂಭಾಗದಿಂದಲೇ ಶಿವಮೊಗ್ಗಕ್ಕೆ ಪೊಲೀಸ್ ವ್ಯಾನ್ ತೆರಳಿದೆ.

    Live Tv
    [brid partner=56869869 player=32851 video=960834 autoplay=true]

  • ಸಾವರ್ಕರ್ ಪೋಸ್ಟರ್ ವಿವಾದ – ನಾಲ್ವರು ಅರೆಸ್ಟ್

    ಸಾವರ್ಕರ್ ಪೋಸ್ಟರ್ ವಿವಾದ – ನಾಲ್ವರು ಅರೆಸ್ಟ್

    ಶಿವಮೊಗ್ಗ: ವೀರ ಸಾವರ್ಕರ್ ಭಾವಚಿತ್ರ ಇಡುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ನಡೆದ ಕಿತ್ತಾಟದಿಂದ ಯುವಕನೋರ್ವನಿಗೆ ದುಷ್ಕರ್ಮಿಗಳು ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಿರುವುದಾಗಿ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.

    ಇಂದು ಮೆಗ್ಗನ್ ಆಸ್ಪತ್ರೆಗೆ ಭೇಟಿ ನೀಡಿ ಐಸಿಯುನಲ್ಲಿರುವ ಪ್ರೇಮ್ ಸಿಂಗ್ ಅವರನ್ನು ವಿಚಾರಿಸಿ ನಂತರ ಘಟನೆ ಬಗ್ಗೆ ಮಾಹಿತಿ ಪಡೆದರು. ನಂತರ ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಲ್ಲೆಗೊಳಗಾದ ಪ್ರೇಮ್‍ಸಿಂಗ್, ಹಾಗೂ ಗುಂಡೇಟು ತಿಂದ ಮಹಮ್ಮದ್ ಜಭೀಯಿಂದ ಮಾಹಿತಿ ಪಡೆದಿದ್ದೇನೆ. ಪ್ರೇಮ್ ಸಿಂಗ್ ಅಣ್ಣ ಆತನ ಜೊತೆ ಇದ್ದು ನೋಡಿಕೊಳ್ಳುತ್ತಿದ್ದಾರೆ. ರಾಜಸ್ಥಾನದಲ್ಲಿರುವ ಅವರ ತಂದೆ, ತಾಯಿಗೆ ಮಾಹಿತಿ ನೀಡಲಾಗಿದೆ. ಅವರು ಶಿವಮೊಗ್ಗಕ್ಕೆ ಬರಲಿದ್ದಾರೆ. ಇಬ್ಬರ ಆರೋಗ್ಯವೂ ಸ್ಥಿರವಾಗಿದ್ದು, ಇಲ್ಲೇ ಚಿಕಿತ್ಸೆ ಮುಂದುವರೆಯಲಿದೆ. ಆರೋಪಿ ಮೊಹಮ್ಮದ್ ಜಭೀಯಿಂದಲೂ ಮಾಹಿತಿ ಪಡೆದಿದ್ದೇನೆ. ಎಎ ಸರ್ಕಲ್‍ನಲ್ಲಿ ಫ್ಲೆಕ್ಸ್ ತೆರವು ವೇಳೆ ನಡೆದ ಗಲಭೆಯಲ್ಲಿ ಜಭೀ ಪಾಲ್ಗೊಂಡಿದ್ದರು. ಇದೀಗ ಘಟನೆ ಸಂಬಂಧ ನಾಲ್ವರನ್ನು ಬಂಧಿಸಲಾಗಿದೆ. ಉಳಿದವರವನ್ನು ಪತ್ತೆಹಚ್ಚಿ ಬಂಧಿಸಲಾಗುವುದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು- ಪೊಲೀಸರಿಗೂ ಚಾಕು ಇರಿಯಲು ಮುಂದಾದ ಕಿಡಿಗೇಡಿ

    ಶಿವಮೊಗ್ಗದ ಅಮೀರ್ ಅಹಮದ್ ವೃತ್ತದಲ್ಲಿ ಸೋಮವಾರ ಎರಡು ಕೋಮಿನ ನಡುವೆ ಜಟಾಪಟಿ ನಡೆದಿತ್ತು. ಒಂದು ಗುಂಪು ಸಾವರ್ಕರ್ ಫೋಟೋ ತೆಗೆದು ಟಿಪ್ಪು ಫೋಟೋ ಇಡಲು ಹೊರಟಿತ್ತು. ಈ ವೇಳೆ ಎರಡು ಕೋಮಿನ ನಡುವೆ ಜಟಾಪಟಿ ನಡೆದಿತ್ತು. ಈ ವೇಳೆ ಸಾವರ್ಕರ್ ಫೋಟೊವನ್ನು ಬೀಳಿಸುವುರ ಜೊತೆಗೆ ಅಲ್ಲೇ ಪಕ್ಕದಲ್ಲಿದ್ದ ರಾಷ್ಟ್ರಧ್ವಜವನ್ನು ನೆಲಕ್ಕೆ ಬೀಳಿಸುವುದರ ಮೂಲಕ ರಾಷ್ಟ್ರಧ್ವಜಕ್ಕೂ ಅವಮಾನ ಮಾಡಿದ್ದರು. ಇದನ್ನೂ ಓದಿ: ಧ್ವಜಾರೋಹಣವಾದ ಕೆಲವೇ ಗಂಟೆಗಳಲ್ಲಿ ಟಿಆರ್‌ಎಸ್ ಮುಖಂಡನ ಬರ್ಬರ ಹತ್ಯೆ

    ಇದೇ ವಿಚಾರವಾಗಿ ಪ್ರೇಮ್ ಸಿಂಗ್ (26) ಚಾಕು ಇರಿದ ಘಟನೆ ಶಿವಮೊಗ್ಗದ ಗಾಂಧಿ ಬಜಾರಿನಲ್ಲಿ ನಡೆದಿದೆ. ಬೈಕ್‍ನಲ್ಲಿ ಬಂದ ದುಷ್ಕರ್ಮಿಗಳು ಮನೆ ಮುಂದೆ ನಿಂತಿದ್ದ ಪ್ರೇಮ್ ಸಿಂಗ್ ಮೇಲೆ ದಾಳಿ ನಡೆಸಿ ಚಾಕು ಇರಿದಿದ್ದರು. ಚಾಕು ಇರಿತಕ್ಕೊಳಗಾದ ಯುವಕ ಪ್ರೇಮ್ ಸಿಂಗ್‍ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

    Live Tv
    [brid partner=56869869 player=32851 video=960834 autoplay=true]

  • ಆಸ್ಪತ್ರೆಗೆ ಅಮ್ಮನನ್ನ ನೋಡಲು ಬಂದ ಬಾಲಕಿಯ ಮೇಲೆ ಗ್ಯಾಂಗ್‍ರೇಪ್

    ಆಸ್ಪತ್ರೆಗೆ ಅಮ್ಮನನ್ನ ನೋಡಲು ಬಂದ ಬಾಲಕಿಯ ಮೇಲೆ ಗ್ಯಾಂಗ್‍ರೇಪ್

    – ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ವಾರ್ಡ್ ಬಾಯ್‍ನಿಂದ ಕೃತ್ಯ

    ಶಿವಮೊಗ್ಗ: ಆಸ್ಪತ್ರೆಗೆ ದಾಖಲಾಗಿದ್ದ ತಾಯಿಯನ್ನ ನೋಡಲು ಬಂದ ಬಾಲಕಿಯ ವಾರ್ಡ್ ಬಾಯ್ ತನ್ನ ಗೆಳೆಯರ ಜೊತೆ ಸೇರಿ ಅತ್ಯಾಚಾರಗೈದಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

    ಅಪ್ರಾಪ್ತೆ ತಾಯಿ ಅನಾರೋಗ್ಯ ಹಿನ್ನೆಲೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ತಾಯಿಯನ್ನ ನೋಡಲು ಬರುತ್ತಿದ್ದ ಬಾಲಕಿಯನ್ನ ಆಸ್ಪತ್ರೆಯ ವಾರ್ಡ್ ಬಾಯ್ ಪರಿಚಯ ಮಾಡಿಕೊಂಡಿದ್ದಾನೆ. ಬಜರಂಗದಳದ ಕಾರ್ಯಕರ್ತನ ಮೇಲೆ ಹಲ್ಲೆ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಜಾರಿ ಹಿನ್ನೆಲೆ ಬಹುತೇಕ ಹೋಟೆಲ್ ಗಳು ಮುಚ್ಚಿವೆ. ಇದನ್ನೇ ಲಾಭವಾಗಿ ಬಳಸಿಕೊಂಡ ಆಸ್ಪತ್ರೆಯ ವಾರ್ಡ್ ಬಾಯ್ ಊಟ ಕೊಡಿಸುವದಾಗಿ ಹೇಳಿ ಬಾಲಕಿಯನ್ನ ಕಾರಿನಲ್ಲಿ ಕರೆದುಕೊಂಡು ಹೋಗಿದ್ದಾನೆ.

    ಶಿವಮೊಗ್ಗದ ಸಾಗರ ರಸ್ತೆಯಲ್ಲಿ ತನ್ನ ಮೂವರು ಸ್ನೇಹಿತರ ಜೊತೆ ಸೇರಿ ಅತ್ಯಾಚಾರ ಎಸಗಿದ್ದಾನೆ. ಸದ್ಯ ಬಾಲಕಿಯನ್ನ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆಸ್ಪತ್ರೆಯ ವಾರ್ಡ್ ಬಾಯ್ ನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ವಾರ್ಡ್ ಬಾಯ್ ಮೂವರು ಗೆಳೆಯರು ನಾಪತ್ತೆಯಾಗಿದ್ದು, ಬಂಧನಕ್ಕಾಗಿ ಪೊಲೀಸರು ವಿಶೇಷ ತಂಡ ರಚಿಸಿ ಬಲೆ ಬೀಸಿದ್ದಾರೆ.

  • ಮೆಗ್ಗಾನ್ ಆಸ್ಪತ್ರೆಯ ಕೊರೊನಾ ವಾರ್ಡ್‌ನಲ್ಲಿ ಕಾಣಿಸಿಕೊಂಡ ಹೊಗೆ

    ಮೆಗ್ಗಾನ್ ಆಸ್ಪತ್ರೆಯ ಕೊರೊನಾ ವಾರ್ಡ್‌ನಲ್ಲಿ ಕಾಣಿಸಿಕೊಂಡ ಹೊಗೆ

    – ರೋಗಿಗಳು ಇಲ್ಲದ್ದರಿಂದ ತಪ್ಪಿತು ಅನಾಹುತ

    ಶಿವಮೊಗ್ಗ: ನಗರದ ಮೆಗ್ಗಾನ್ ಭೋಧನಾ ಆಸ್ಪತ್ರೆಯ ಕೋವಿಡ್-19 ವಾರ್ಡ್ ನಲ್ಲಿ ಹೊಗೆ ಕಾಣಿಸಿಕೊಂಡ ಪರಿಣಾಮ ಕೆಲ ಕಾಲ ಆಸ್ಪತ್ರೆ ಆವರಣದಲ್ಲಿ ಆತಂಕ ಉಂಟಾಗಿತ್ತು.

    ಕೋವಿಡ್ ವಾರ್ಡ್ ಗೆ ಆಕ್ಸಿಜನ್ ಪೂರೈಕೆ ಮಾಡುವ ಹೆಚ್‍ಎಫ್‍ಎನ್‍ಸಿ ಯಂತ್ರ 24 ಗಂಟೆಗಳ ಕಾಲ ಸತತವಾಗಿ ಕಾರ್ಯ ನಿರ್ವಹಿಸುತ್ತದೆ. ಹೀಗಾಗಿ ಯಂತ್ರದಲ್ಲಿ ಹೆಚ್ಚು ಶಾಖ ಉಂಟಾದ ಪರಿಣಾಮ ಹೊಗೆ ಕಾಣಿಸಿಕೊಂಡಿದೆ ಎಂದು ಅಂದಾಜಿಸಲಾಗಿದೆ. ಆದರೆ ಈ ವೇಳೆ ವಾರ್ಡ್ ನಲ್ಲಿ ಯಾವುದೇ ರೋಗಿಗಳು ಇಲ್ಲದಿದ್ದ ಕಾರಣ ಯಾವುದೇ ಅನಾಹುತ ಸಂಭವಿಸಿಲ್ಲ.

    ಆತಂಕಪಡುವ ಅಗತ್ಯವಿಲ್ಲ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಇನ್ನು ಆಸ್ಪತ್ರೆಯಲ್ಲಿ ಹೊಗೆ ಕಾಣಿಸಿಕೊಂಡ ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ವಾರ್ಡ್ ನಲ್ಲಿ ಆವರಿಸಿಕೊಂಡಿದ್ದ ಹೊಗೆಯನ್ನು ಮುಕ್ತಗೊಳಿಸಿದರು. ಇದೀಗ ಪರಿಣಿತರ ತಂಡ ಈ ಕುರಿತು ಪರಿಶೀಲನೆ ನಡೆಸುತ್ತಿದೆ.

  • ಮೆಗ್ಗಾನ್ ಆಸ್ಪತ್ರೆ ಮಕ್ಕಳ ವಾರ್ಡಿನಲ್ಲಿ ಬೆಂಕಿ ಅವಘಡ ಪ್ರಕರಣ – ತನಿಖೆಗೆ ಈಶ್ವರಪ್ಪ ಸೂಚನೆ

    ಮೆಗ್ಗಾನ್ ಆಸ್ಪತ್ರೆ ಮಕ್ಕಳ ವಾರ್ಡಿನಲ್ಲಿ ಬೆಂಕಿ ಅವಘಡ ಪ್ರಕರಣ – ತನಿಖೆಗೆ ಈಶ್ವರಪ್ಪ ಸೂಚನೆ

    ಶಿವಮೊಗ್ಗ: ಜಿಲ್ಲೆಯ ಮೆಗ್ಗಾನ್ ಆಸ್ಪತ್ರೆಯ ಮಕ್ಕಳ ವಾರ್ಡಿನಲ್ಲಿ ಕಾಣಿಸಿಕೊಂಡ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿ ಅವರಿಗೆ ಸೂಚಿಸಿರುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ತಿಳಿಸಿದ್ದಾರೆ.

    ಸರ್ಜಿ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳು ಹಾಗೂ ತಾಯಂದಿರ ಆರೋಗ್ಯ ವಿಚಾರಿಸಿದ ಬಳಿಕ ಮಾತನಾಡಿದ ಸಚಿವರು, ಭಾನುವಾರ ಅನಾಮಿಕ ವ್ಯಕ್ತಿಯೊಬ್ಬರು ನನಗೆ ದೂರವಾಣಿ ಕರೆ ಮಾಡಿದ್ದರು. ಮೆಗ್ಗಾನ್ ಆಸ್ಪತ್ರೆಯಲ್ಲಿ ಈ ಹಿಂದೆಯೇ ಎಲೆಕ್ಟ್ರಿಕ್ ಸಮಸ್ಯೆ ಇದೆ ಸರಿಪಡಿಸಿ ಎಂದು ಅಧಿಕಾರಿಗಳಿಗೆ ತಿಳಿಸಿದ್ದೇವು. ಆದರೆ ಈ ಬಗ್ಗೆ ಯಾವೊಬ್ಬ ಅಧಿಕಾರಿಗಳು ಕ್ರಮ ತೆಗೆದುಕೊಳ್ಳದೇ ಇಂತಹ ಅವಘಡ ಸಂಭವಿಸಲು ಕಾರಣವಾಗಿದೆ ಎಂದು ದೂರು ನೀಡಿದ್ದರು ಎಂದು ಹೇಳಿದರು.

    ಹೀಗಾಗಿ ಆಸ್ಪತ್ರೆಯಲ್ಲಿ ವಿದ್ಯುತ್‍ಗೆ ಸಂಬಂಧಿಸಿದಂತೆ ಏನು ಸಮಸ್ಯೆ ಇತ್ತು? ಸಮಸ್ಯೆ ಇದ್ದರೂ ಅಧಿಕಾರಿಗಳು ಯಾಕೆ ದುರಸ್ಥಿಗೊಳಿಸಲು ಕ್ರಮ ಕೈಗೊಳ್ಳಲಿಲ್ಲ? ಭಾನುವಾರ ಏನಾದರೂ ದೊಡ್ಡ ಅವಘಡ ಸಂಭವಿಸಿದ್ದರೇ ಯಾರು ಹೊಣೆ ಆಗುತ್ತಿದ್ದರು ಎಂದು ಕಿಡಿಕಾರಿದರು. ಹೀಗಾಗಿ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿರುವುದಾಗಿ ಈಶ್ವರಪ್ಪ ತಿಳಿಸಿದರು.

    ಏನಿದು ಪ್ರಕರಣ?
    ಶಿವಮೊಗ್ಗದಲ್ಲಿ ಭಾನುವಾರ ಸಂಜೆ ಗುಡುಗು ಸಿಡಿಲು ಸಹಿತ ಭಾರೀ ಗಾಳಿ ಮಳೆಯಾಗಿತ್ತು. ವರುಣನ ಅಬ್ಬರದಿಂದಾಗಿ ಮೆಗ್ಗಾನ್ ಬೋಧನಾ ಆಸ್ಪತ್ರೆಯ ಮಕ್ಕಳ ವಾರ್ಡ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಅವಘಡ ಸಂಭವಿಸಿತ್ತು.

    ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಅವಘಡ ಸಂಭವಿಸಿಲ್ಲ. ಎಲ್ಲಾ 33 ಕಂದಮ್ಮಗಳು ಸುರಕ್ಷಿತವಾಗಿದ್ದು, ಮಹಿಳೆಯ ಆರ್ಭಟಕ ಕಡಿಮೆಯಾಗುತ್ತಿದ್ದಂತೆ ಮಕ್ಕಳು ಹಾಗೂ ಬಾಣಂತಿಯರನ್ನು ನಗರದ ಸರ್ಜಿ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಯಿತು.

    ಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ಯಶಸ್ವಿಯಾಗಿದ್ದರು. ಅದೃಷ್ಟವಶಾತ್ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ಅವರು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.