Tag: MDMK

  • ಆತ್ಮಹತ್ಯೆಗೆ ಯತ್ನಿಸಿದ್ದ ತಮಿಳುನಾಡು ಸಂಸದ ಹೃದಯಾಘಾತದಿಂದ ನಿಧನ

    ಆತ್ಮಹತ್ಯೆಗೆ ಯತ್ನಿಸಿದ್ದ ತಮಿಳುನಾಡು ಸಂಸದ ಹೃದಯಾಘಾತದಿಂದ ನಿಧನ

    ಚೆನ್ನೈ: ತಮಿಳುನಾಡಿನ ಈರೋಡ್‌ನ ಹಾಲಿ ಲೋಕಸಭಾ ಸಂಸದ ಮರುಮಲಾರ್ಚಿ ದ್ರಾವಿಡ ಮುನ್ನೇತ್ರ ಕಳಗಂ (MDMK) ಎ.ಗಣೇಶಮೂರ್ತಿ (Ganeshamurthi) ಗುರುವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

    ಎಂಡಿಎಂಕೆ ನಾಯಕ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಮಾ.24 ರಂದು ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಈರೋಡ್‌ನ ಆಸ್ಪತ್ರೆಗೆ ಸಾಗಿಸಲಾಗಿತ್ತು. ಪ್ರಾಥಮಿಕ ತಪಾಸಣೆಯ ನಂತರ ಅವರನ್ನು ಐಸಿಯುಗೆ ದಾಖಲಿಸಲಾಗಿತ್ತು. ಇದನ್ನೂ ಓದಿ: ನನ್ನಲ್ಲಿ ಸಾಕಷ್ಟು ಹಣವಿಲ್ಲ.. ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ: ಕೇಂದ್ರ ಹಣಕಾಸು ಸಚಿವೆ

    ವೆಂಟಿಲೇಟರ್‌ನಲ್ಲಿ ಇರಿಸಲಾಗಿತ್ತು. ಬಳಿಕ ಅವರನ್ನು ಸಮೀಪದ ಕೊಯಮತ್ತೂರಿನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಇಂದು ಮುಂಜಾನೆ 5:05 ರ ಹೊತ್ತಿಗೆ ಹೃದಯಾಘಾತವಾಗಿ ಕೊನೆಯುಸಿರೆಳೆದಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

    ಮೂರು ಬಾರಿ ಸಂಸದರಾಗಿದ್ದ ಗಣೇಶಮೂರ್ತಿ ಅವರು ಎಂಡಿಎಂಕೆ ಶ್ರೇಣಿಯಲ್ಲಿ ಪ್ರಮುಖ ಸ್ಥಾನಗಳನ್ನು ಅಲಂಕರಿಸಿದ್ದರು. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಈರೋಡ್ ಕ್ಷೇತ್ರದಿಂದ ಸ್ಪರ್ಧಿಸಲು ಪಕ್ಷವು ಟಿಕೆಟ್ ನೀಡಲು ನಿರಾಕರಿಸಿದ್ದಕ್ಕಾಗಿ ಅವರು ಅಸಮಾಧಾನಗೊಂಡಿದ್ದರು. ಡಿಎಂಕೆ ಈರೋಡ್‌ನಲ್ಲಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದು, ತಿರುಚ್ಚಿ ಕ್ಷೇತ್ರವನ್ನು ಎಂಡಿಎಂಕೆಗೆ ನೀಡಲು ನಿರ್ಧರಿಸಿದೆ. ಎಂಡಿಎಂಕೆ ಪ್ರಧಾನ ಕಾರ್ಯದರ್ಶಿ ವೈಕೋ ಅವರ ಪುತ್ರ ದುರೈ ವೈಕೋ ಅವರನ್ನು ತಿರುಚ್ಚಿಯಿಂದ ಪಕ್ಷದ ಅಭ್ಯರ್ಥಿಯಾಗಿ ಹೆಸರಿಸಲಾಗಿದೆ. ಇದನ್ನೂ ಓದಿ: ‘ಲೋಕ’ಸಮರಕ್ಕೆ ಕೋಲಾರ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಬಿಕ್ಕಟ್ಟು – ಸಿಎಂ, ಡಿಸಿಎಂ ನೇತೃತ್ವದಲ್ಲಿ ಸಂಧಾನ ಸಭೆ

  • ಕೈತಪ್ಪಿದ ಟಿಕೆಟ್ – ಕೀಟನಾಶಕ ಸೇವಿಸಿ ತಮಿಳುನಾಡಿನ ಸಂಸದ ಆತ್ಮಹತ್ಯೆಗೆ ಯತ್ನ

    ಕೈತಪ್ಪಿದ ಟಿಕೆಟ್ – ಕೀಟನಾಶಕ ಸೇವಿಸಿ ತಮಿಳುನಾಡಿನ ಸಂಸದ ಆತ್ಮಹತ್ಯೆಗೆ ಯತ್ನ

    ಈರೋಡ್: ತಮಿಳುನಾಡಿನ (Tamil Nadu) ಈರೋಡ್ ಕ್ಷೇತ್ರದ ಹಾಲಿ ಎಂಡಿಎಂಕೆ (MDMK) ಸಂಸದ ಎ.ಗಣೇಶಮೂರ್ತಿ (76) (Ganeshamoorthy) ಮುಂಬರುವ ಲೋಕಸಭಾ ಚುನಾವಣೆಗೆ (Lok Sabha Election 2024 )ಟಿಕೆಟ್ ಕೈತಪ್ಪಿದ್ದಕ್ಕೆ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಕೊಯಮತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

    ಭಾನುವಾರ ಬೆಳಿಗ್ಗೆ ಗಣೇಶಮೂರ್ತಿಯವರ ಆರೋಗ್ಯದಲ್ಲಿ ಏರುಪೇರಾಗಿ, ವಾಂತಿ ಮಾಡಿಕೊಂಡಿದ್ದಾರೆ. ಆಗ ಕೀಟನಾಶಕ ಸೇವನೆ ಮಾಡಿರುವುದಾಗಿ ನಮಗೆ ತಿಳಿಸಿದ್ದರು ಎಂದು ಕುಟುಂಬಸ್ಥರು ಹೇಳಿದ್ದಾರೆ. ಇದನ್ನೂ ಓದಿ: ಐಸಿಸ್ ಸೇರಿ ಉಗ್ರನಾಗಲು ಬಯಸಿದ್ದ ಐಐಟಿ ವಿದ್ಯಾರ್ಥಿ ಅರೆಸ್ಟ್ – ಕರ್ನಾಟಕಕ್ಕಿದೆಯಾ ಲಿಂಕ್?

    ತಕ್ಷಣ ಅವರನ್ನು ಚಿಕಿತ್ಸೆಗಾಗಿ ಈರೋಡ್ ಪಟ್ಟಣದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ತಪಾಸಣೆಗೆ ಒಳಪಡಿಸಿದ ಬಳಿಕ ಐಸಿಯುಗೆ ದಾಖಲಿಸಿ, ವೆಂಟಿಲೇಟರ್‍ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಕೊಯಮತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಅವರ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

    ವೈಕೋ ನಾಯಕತ್ವದ ಎಂಡಿಎಂಕೆ ಪಕ್ಷವು ಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡಿದೆ. ಕಳೆದ ಚುನಾವಣೆಯಲ್ಲಿ ಡಿಎಂಕೆ ತನ್ನ ಮಿತ್ರಪಕ್ಷಕ್ಕೆ ಈರೋಡ್ ಕ್ಷೇತ್ರವನ್ನು ಬಿಟ್ಟುಕೊಟ್ಟಿತ್ತು. ಅಲ್ಲಿಂದ ಎಂಡಿಎಂಕೆ ಅಭ್ಯರ್ಥಿ ಗಣೇಶಮೂರ್ತಿ ಸ್ಪರ್ಧೆ ಮಾಡಿ ಗೆದ್ದಿದ್ದರು. ಈ ಬಾರಿ ಈರೋಡ್ ಲೋಕಸಭೆ ಕ್ಷೇತ್ರದಿಂದ ಡಿಎಂಕೆ ತನ್ನದೇ ಅಭ್ಯರ್ಥಿ ಕೆ.ಇ ಪ್ರಕಾಶ್ ಅವರಿಗೆ ಟಿಕೆಟ್ ನೀಡಿದೆ. ಎಂಡಿಎಂಕೆಗೆ ತಿರುಚಿರಾಪಳ್ಳಿ ಕ್ಷೇತ್ರವನ್ನು ಬಿಟ್ಟುಕೊಟ್ಟಿದೆ. ಇದನ್ನೂ ಓದಿ: ವಿಜಯಪುರ ಕೋಲ್ಡ್ ಬ್ಲಡ್ ಮರ್ಡರ್ ಕೇಸ್ – 1 ವರ್ಷದ ಬಳಿಕ ಪ್ರಕರಣ ಭೇದಿಸಿದ ಪೊಲೀಸರು