Tag: Meat Sale

  • ಏ.10 ರಂದು ಬೆಂಗಳೂರಲ್ಲಿ ಮಾಂಸ ಮಾರಾಟ ನಿಷೇಧ

    ಏ.10 ರಂದು ಬೆಂಗಳೂರಲ್ಲಿ ಮಾಂಸ ಮಾರಾಟ ನಿಷೇಧ

    ಬೆಂಗಳೂರು: ಇದೇ ಏಪ್ರಿಲ್‌ 10ರಂದು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯಲ್ಲಿ ಮಾಂಸ ಮಾರಾಟಕ್ಕೆ ನಿಷೇಧ ಹೇರಲಾಗಿದೆ.

    ಅಂದು ʻಮಹಾವೀರ ಜಯಂತಿʼ (MahavirJ ayanti) ಇರುವ ಕಾರಣ ಕಸಾಯಿಖಾನೆಯಲ್ಲಿ ಹಾಗೂ ಮಾಂಸ ಮಾರಾಟ ಮಳಿಗೆಗಳಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟ (Meat Sale) ನಿಷೇಧಿಸಿ ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: 2024ರಲ್ಲಿ ಕೆಂಪೇಗೌಡ ಏರ್‌ಪೋರ್ಟ್‌ನಿಂದ ಹೊಸ ಮೈಲಿಗಲ್ಲು – 41 ದಶಲಕ್ಷ ಮಂದಿ ಪ್ರಯಾಣ

    ಏಪ್ರಿಲ್‌ 10ರಂದು ಮಹಾವೀರ ಜಯಂತಿ
    ಜೈನ ಧರ್ಮದ ಅನುಯಾಯಿಗಳಿಗೆ ಮಹಾವೀರ ಜಯಂತಿ ಬಹಳ ವಿಶೇಷವಾದ ಹಬ್ಬ. ಪ್ರತಿ ವರ್ಷ ಚೈತ್ರ ಮಾಸದ ಶುಕ್ಲಪಕ್ಷದ ತ್ರಯೋದಶಿ ದಿನದಂದು ಮಹಾವೀರ ಜಯಂತಿಯನ್ನು ಆಚರಿಸಲಾಗುತ್ತದೆ. ಈ ವರ್ಷ ಏ.10 ರಂದು ಆಚರಣೆ ಮಾಡಲಾಗುತ್ತದೆ. ಆಚರಣೆ ಹೇಗೆ? ಆಚರಣೆಯ ಮಹತ್ವ ಏನು ಎಂಬುದರ ಬಗ್ಗೆ ಇಲ್ಲಿ ವಿವರಿಸಲಾಗಿದೆ.  ಇದನ್ನೂ ಓದಿ: ಚನ್ನಪಟ್ಟಣ ಬೊಂಬೆ ಉದ್ಯಮಕ್ಕೆ ಮರುಜೀವ ನೀಡುವಂತೆ ಡಾ. ಮಂಜುನಾಥ್ ಮನವಿಗೆ ಸ್ಮಂದಿಸಿದ ಕೇಂದ್ರ

    ಹಿಂದೂ ಕ್ಯಾಲೆಂಡರ್ ಪ್ರಕಾರ, ಮಹಾವೀರ ಸ್ವಾಮಿಯು ಕ್ರಿ.ಪೂ 599 ರಲ್ಲಿ ಚೈತ್ರ ಮಾಸದ 13ನೇ ದಿನ ಬಿಹಾರದ ಕುಂದಾಗ್ರಾಮದಲ್ಲಿ ರಾಜಮನೆತನದಲ್ಲಿ ಜನಿಸಿದರು ಎಂದು ಹೇಳಲಾಗುತ್ತದೆ. ಅವರ ಬಾಲ್ಯದ ಹೆಸರು ವರ್ಧಮಾನ್. ಅವರು 30ನೇ ವಯಸ್ಸಿನಲ್ಲಿ, ಸಿಂಹಾಸನವನ್ನು ತ್ಯಜಿಸಿ ಆಧ್ಯಾತ್ಮಿಕತೆಯ ಮಾರ್ಗವನ್ನು ಆರಿಸಿಕೊಂಡರು. ಇನ್ನೂ ಮಹಾವೀರ ಜಯಂತಿಯನ್ನು ಭಾರತದಲ್ಲಿ ಮಾತ್ರವಲ್ಲದೇ ಪ್ರಪಂಚದಾದ್ಯಂತ ಇರುವ ಜೈನ ಸಮುದಾಯವರು ಆಚರಿಸುತ್ತಾರೆ.  ಇದನ್ನೂ ಓದಿ: ತನ್ನ ಚೊಚ್ಚಲ ಐಪಿಎಲ್‌ನಲ್ಲೇ ಸ್ಫೋಟಕ ಶತಕ – ಎಬಿಡಿ, ಕೊಹ್ಲಿ ದಾಖಲೆ ಪುಡಿಗಟ್ಟಿದ 24ರ ಯುವಕ

  • ಪಿತೃಪಕ್ಷದಂದು ಧರ್ಮ ಸಂಕಟ – ಗಾಂಧಿ ಜಯಂತಿಯಂದು ಮಾಂಸ ಮಾರಾಟಕ್ಕೆ ಅನುಮತಿ ನೀಡುವಂತೆ ಮನವಿ

    ಪಿತೃಪಕ್ಷದಂದು ಧರ್ಮ ಸಂಕಟ – ಗಾಂಧಿ ಜಯಂತಿಯಂದು ಮಾಂಸ ಮಾರಾಟಕ್ಕೆ ಅನುಮತಿ ನೀಡುವಂತೆ ಮನವಿ

    – ಮಾಂಸ ಮಾರಾಟಕ್ಕೆ ಅವಕಾಶ ಕೋರಿ ಸಿಎಂಗೆ ಸಂಘಟನೆಗಳ ಮನವಿ

    ಬೆಂಗಳೂರು: ಈ ಬಾರಿ ಪಿತೃಪಕ್ಷ (Pitrupaksha) ಮಾಡಿ ಎಡೆ ಇಡುವವರಿಗೆ ಧರ್ಮ ಸಂಕಟ ಎದುರಾಗಿದೆ. ಗಾಂಧಿ ಜಯಂತಿ (Gandhi Jayanthi) ಮತ್ತು ಮಹಾಲಯ ಅಮಾವಾಸ್ಯೆ (Mahalaya Amavasya) ಒಂದೇ ದಿನ ಬಂದಿದೆ. ಗಾಂಧಿಜಯಂತಿ ದಿನ ಮಾಂಸ ಮಾರಾಟ (Meat Sale) ನಿಷೇಧ ಇರಲಿದೆ. ಹೀಗಾಗಿ ಮಹಾಲಯ ಅಮಾವಾಸ್ಯೆ ಇರುವುದರಿಂದ ಪಿತೃಪಕ್ಷ ಮಾಡೋರಿಗೆ ಮಾಂಸದ ಕೊರತೆ ಎದುರಾಗಲಿದೆ.

    ಮಾಂಸ ಮಾರಾಟ ನಿಷೇಧ ಮಾಡಿದರೆ ಮಾಂಸ ಸಿಗಲ್ಲ. ಅದಕ್ಕಾಗಿ ಗಾಂಧಿ ಜಯಂತಿ ದಿನ ಮಾಂಸ ಮಾರಾಟಕ್ಕೆ ಅವಕಾಶ ಕೊಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಸಂಘಟನೆಗಳು, ಸಮಿತಿಗಳು ಮನವಿ ಮಾಡಿಕೊಂಡಿದೆ. ಈ ಸಂಬಂಧ ಬಿಬಿಎಂಪಿಯ ಮಾಜಿ ಕಾರ್ಪೊರೇಟರ್ ವಿ.ವಿ ಸತ್ಯನಾರಾಯಣ ಹಾಗೂ ಜಯಪ್ರಕಾಶ್ ನಾರಾಯಣ್ ವಿಚಾರ ವೇದಿಕಯ ಅಧ್ಯಕ್ಷ ಬಿ.ಎಂ ಶಿವಕುಮಾರ್ ಅವರು ಸಿಎಂಗೆ ಪತ್ರ ಬರೆದಿದ್ದಾರೆ. ಕಾಕತಾಳಿಯವಾಗಿ ಒಂದೇ ದಿನ ಎರಡು ಆಚರಣೆ ಬಂದಿರುವುದರಿಂದ ಸಾರ್ವಜನಿಕರಿಗೆ ಸಮಸ್ಯೆ ಆಗದಂತೆ ಪಿತೃಪಕ್ಷ ಆಚರಿಸಲು ಅವಕಾಶ ಮಾಡಿಕೊಡಬೇಕು ಎಂದು ಮನವಿ ಪತ್ರ ಸಲ್ಲಿಸಲಾಗಿದೆ. ಇದನ್ನೂ ಓದಿ: ದೆಹಲಿಯಲ್ಲಿ ಪಟಾಕಿ ಬ್ಯಾನ್‌ ಯಾಕೆ?

    ಹಳ್ಳಿಗಳ ಕಡೆ ಏನಾಗಲಿದೆಯೋ ಗೊತ್ತಿಲ್ಲ. ಹಲವು ಮಂದಿ ಮಾಂಸಾಹಾರವನ್ನು ಸಿದ್ಧಪಡಿಸಿ ತಮ್ಮ ಹಿರಿಯರಿಗೆ ಎಡೆ ಇಟ್ಟು ಪೂಜೆ ಸಲ್ಲಿಸುತ್ತಾರೆ. ಈ ಹಿನ್ನೆಲೆ ಬೆಂಗಳೂರಿನಂತಹ ಸಿಟಿಗಳಲ್ಲಿ ಮಾಂಸ ಮಾರಾಟ ನಿಷೇಧ ಆದರೆ ಸಮಸ್ಯೆ ಆಗುತ್ತೆ. ತಲಾತಲಾಂತರದಿಂದ ಪಿತೃಪಕ್ಷದ ದಿನ ಎಡೆ ಇಟ್ಟುಕೊಂಡು ಬರುತ್ತಿದ್ದೇವೆ. ಈ ಬಾರಿಯು ಸಂಪ್ರದಾಯ ಪಾಲಿಸಬೇಕು. ಮಾಂಸ ಮಾರಾಟಕ್ಕೆ ಅವಕಾಶ ಕೊಡಿ ಎಂದು ಮನವಿ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಅಕ್ರಮ ಮದ್ಯ ನಾಶದ ವೇಳೆ ಬಾಟಲಿ ದೋಚಿ ಓಡಿದ್ರು!

  • ಗಣೇಶ ಚತುರ್ಥಿ ಪ್ರಯುಕ್ತ ಸೆ.7ರಂದು ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ

    ಗಣೇಶ ಚತುರ್ಥಿ ಪ್ರಯುಕ್ತ ಸೆ.7ರಂದು ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ

    ಬೆಂಗಳೂರು: ಗಣೇಶ ಚತುರ್ಥಿ (Ganesh Chaturthi) ಹಬ್ಬದ ಪ್ರಯುಕ್ತ ಪ್ರಾಣಿವಧೆ (Animal Slaughter) ಹಾಗೂ ಮಾಂಸ ಮಾರಾಟ (Meat Sale) ನಿಷೇಧಿಸಿದೆ ಎಂದು ಬಿಬಿಎಂಪಿ (BBMP) ಆದೇಶ ಹೊರಡಿಸಿದೆ. ಅಲ್ಲದೇ ನಿಯಮ ಉಲ್ಲಂಘಿಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ.

    ಸೆ.7ರಂದು ಗಣೇಶ ಚತುರ್ಥಿ ಹಬ್ಬದ ದಿನವಾಗಿದ್ದರಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ, ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರುವಂತಿಲ್ಲ. ಈ ಕುರಿತು ಬಿಬಿಎಂಪಿ ಜಂಟಿ ನಿರ್ದೇಶಕರು (ಪಶುಪಾಲನೆ) ಸುತ್ತೋಲೆ ಹೊರಡಿಸಿದ್ದಾರೆ. ನಿಯಮ ಮೀರಿದಲ್ಲಿ ಕ್ರಮದ ಎಚ್ಚರಿಕೆ ಕೂಡ ನೀಡಲಾಗಿದೆ. ಇದನ್ನೂ ಓದಿ: Punjab Economic Crisis | ವಿದ್ಯುತ್‌ ಸಬ್ಸಿಡಿ ರದ್ದುಗೊಳಿಸಿ ಪೆಟ್ರೋಲ್‌, ಡೀಸೆಲ್‌ ಜೊತೆ ಬಸ್‌ ಟಿಕೆಟ್‌ ದರ ಏರಿಸಿದ ಪಂಜಾಬ್‌

    ಇನ್ನು ನಗರದಾದ್ಯಂತ ಗಣೇಶ ಉತ್ಸವವನ್ನು ಆಯೋಜಿಸುವವರಿಗೆ ಈಗಾಗಲೇ ಬಿಬಿಎಂಪಿ ಕಡ್ಡಾಯವಾಗಿ ಪಾಲಿಸುವಂತೆ ಕೆಲ ನಿಯಮಗಳ ಪಟ್ಟಿ ಪ್ರಕಟಿಸಿತ್ತು. ನಗರದ ವಿವಿಧೆಡೆ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗುತ್ತಿದ್ದು, ರಸ್ತೆಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಬೇಕು. ಅಹಿತಕರ ಘಟನೆ ನಡೆದರೆ ಗಣೇಶ ಉತ್ಸವದ ಆಯೋಜಕರನ್ನೇ ಹೊಣೆ ಮಾಡುವ ಬಗ್ಗೆ ಬಿಬಿಎಂಪಿ ಎಚ್ಚರಿಕೆ ನೀಡಿತ್ತು. ಇದನ್ನೂ ಓದಿ: ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದಾಳಿ ರಾಜಕೀಯ ಪ್ರೇರಿತ: ಭಾರತದ ವಿರುದ್ಧವೇ ಪ್ರಶ್ನೆ ಎತ್ತಿದ ಯೂನಸ್