Tag: Medha Patkar

  • ಮಾನನಷ್ಟ ಕೇಸ್- ಹೋರಾಟಗಾರ್ತಿ ಮೇಧಾ ಪಾಟ್ಕರ್‌ಗೆ 5 ತಿಂಗಳು ಜೈಲು

    ಮಾನನಷ್ಟ ಕೇಸ್- ಹೋರಾಟಗಾರ್ತಿ ಮೇಧಾ ಪಾಟ್ಕರ್‌ಗೆ 5 ತಿಂಗಳು ಜೈಲು

    ನವದೆಹಲಿ: ಪ್ರಸ್ತುತ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಆಗಿರುವ ವಿನಯ್ ಕುಮಾರ್ ಸಕ್ಸೇನಾ (VK Saxena) 2001ರಲ್ಲಿ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಪ್ರಕರಣದಲ್ಲಿ ನರ್ಮದಾ ಬಚಾವೋ ಆಂದೋಲನದ ನಾಯಕಿ ಹಾಗೂ ಹೋರಾಟಗಾರ್ತಿ (Narmada Bachao Andolan) ಮೇಧಾ ಪಾಟ್ಕರ್ (Medha Patkar) ಅವರಿಗೆ ದೆಹಲಿ ಕೋರ್ಟ್ 5 ತಿಂಗಳ ಜೈಲು ಶಿಕ್ಷೆ ವಿಧಿಸಿದೆ.

    ತೀರ್ಪಿನಲ್ಲಿ ವಿ.ಕೆ ಸಕ್ಸೇನಾ ಅವರಿಗೆ 10 ಲಕ್ಷ ರೂ. ಪಾವತಿಸುವಂತೆಯೂ ನ್ಯಾಯಾಲಯ ಸೂಚಿಸಿದೆ. ಅಲ್ಲದೇ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ಮೇಧಾ ಪಾಟ್ಕರ್ ಅವರ ಶಿಕ್ಷೆಯನ್ನು ಆಗಸ್ಟ್ 1 ರವರೆಗೆ ತಡೆ ಹಿಡಿಯಲಾಗಿದೆ. ಇದನ್ನೂ ಓದಿ: ಮಾನನಷ್ಟ ಕೇಸ್‌- ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ದೋಷಿ

    ಷರತ್ತಿನ ಮೇಲೆ ತನ್ನನ್ನು ಬಿಡುಗಡೆ ಮಾಡಬೇಕೆಂಬ ಪಾಟ್ಕರ್ ಅವರ ಮನವಿಯನ್ನು ತಿರಸ್ಕರಿಸಿದ ನ್ಯಾಯಾಲಯ, `ವಯಸ್ಸು ಮತ್ತು ಅನಾರೋಗ್ಯವನ್ನು ಪರಿಗಣಿಸಿ, ಹೆಚ್ಚಿನ ಶಿಕ್ಷೆ ನೀಡಲು ಭಯಸುವುದಿಲ್ಲ’ ಎಂದಿದೆ. ಕಳೆದ ಮೇ.24ರಂದು ಸಾಕೇತ್ ನ್ಯಾಯಾಲಯ ಮಾನನಷ್ಟದ ಅಪರಾಧಕ್ಕಾಗಿ ಪಾಟ್ಕರ್ ಅವರನ್ನು ದೋಷಿ ಘೋಷಿಸಿತ್ತು.

    ನ್ಯಾಯಾಲಯದ ಆದೇಶದ ಕುರಿತು ಪ್ರತಿಕ್ರಿಯಿಸಿದ ಪಾಟ್ಕರ್, `ಸತ್ಯವನ್ನು ಎಂದಿಗೂ ಸೋಲಿಸಲು ಸಾಧ್ಯವಿಲ್ಲ. ನಾವು ಯಾರನ್ನೂ ದೂಷಿಸಲು ಪ್ರಯತ್ನಿಸಿಲ್ಲ. ನಾವು ನಮ್ಮ ಕೆಲಸವನ್ನು ಮಾತ್ರ ಮಾಡುತ್ತೇವೆ. ನಾನು ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸುತ್ತೇನೆ’ ಎಂದು ಹೇಳಿದ್ದಾರೆ.

    2000ರ ನವೆಂಬರ್ 25 ರಂದು ಪಾಟ್ಕರ್ ಅವರು ನೀಡಿದ್ದ ಪತ್ರಿಕಾ ಪ್ರಕಟಣೆಯ ವಿರುದ್ಧ 2001ರಲ್ಲಿ ಸಕ್ಸೇನಾ ಮಾನನಷ್ಟ ಪ್ರಕರಣ ದಾಖಲಿಸಿದ್ದರು. ಆಗ ಅವರು ಅಹಮದಾಬಾದ್ ಮೂಲದ ಎನ್‍ಜಿಒ ನ್ಯಾಷನಲ್ ಕೌನ್ಸಿಲ್ ಫಾರ್ ಸಿವಿಲ್ ಲಿಬರ್ಟೀಸ್‍ನ ಮುಖ್ಯಸ್ಥರಾಗಿದ್ದರು. ಇದನ್ನೂ ಓದಿ: ಮುಡಾ ಹಗರಣದಲ್ಲಿ ಸಿಎಂ ಪುತ್ರ ಯತೀಂದ್ರ ಪಾತ್ರ ಇದೆಯಾ? – ಸಚಿವ ಬೈರತಿ ಸುರೇಶ್ ಹೇಳಿದ್ದೇನು?

  • ಮಾನನಷ್ಟ ಕೇಸ್‌- ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ದೋಷಿ

    ಮಾನನಷ್ಟ ಕೇಸ್‌- ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ದೋಷಿ

    ನವದೆಹಲಿ: ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ (VK Saxena) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಸಾಮಾಜಿಕ ಕಾರ್ಯಕರ್ತೆ, ನರ್ಮದಾ ಬಚಾವೋ ಆಂದೋಲನದ (Narmada Bachao Andolan) ನಾಯಕಿ ಮೇಧಾ ಪಾಟ್ಕರ್ (Medha Patkar) ದೋಷಿ ಎಂದು ಕೋರ್ಟ್‌ ತೀರ್ಪು ನೀಡಿದೆ.

    ದೆಹಲಿಯ ಸಾಕೇತ್ ನ್ಯಾಯಾಲಯ ಆದೇಶ ಪ್ರಕಟಿಸಿದ್ದು, ಆದೇಶದಿಂದಾಗಿ ಎರಡು ವರ್ಷ ಜೈಲು ಶಿಕ್ಷೆ, ದಂಡ ಅಥವಾ ಎರಡನ್ನೂ ಶಿಕ್ಷೆಯಾಗಿ ವಿಧಿಸುವ ಸಾಧ್ಯತೆಯಿದೆ.

    ಅಹಮದಾಬಾದ್ ಮೂಲದ ಸರ್ಕಾರೇತರ ಸಂಸ್ಥೆ ನ್ಯಾಷನಲ್ ಕೌನ್ಸಿಲ್ ಫಾರ್ ಸಿವಿಲ್ ಲಿಬರ್ಟೀಸ್ ಮುಖ್ಯಸ್ಥರಾಗಿದ್ದ ವಿ.ಕೆ ಸಕ್ಸೆನಾ ನರ್ಮದಾ ಬಚಾವೋ ಆಂದೋಲನ ವಿರುದ್ಧ ಜಾಹೀರಾತುಗಳನ್ನು ಪ್ರಕಟಿಸಿದ್ದರು.

    ಈ ವೇಳೆ ಮಾಧ್ಯಮಗಳಲ್ಲಿ ವಿ.ಕೆ ಸಕ್ಸೆನಾ ವಿರುದ್ಧ ಮೇಧಾ ಪಾಟ್ಕರ್ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಹೇಳಿಕೆ ಸಂಬಂಧ ಸಕ್ಸೆನಾ ಮಾನನಷ್ಟ ಪ್ರಕರಣ ಹೂಡಿದ್ದರು. ವಿಕೆ ಸಕ್ಸೇನಾ ಮತ್ತು ಮೇಧಾ ಪಾಟ್ಕರ್ 2000 ನೇ ಇಸ್ವಿಯಿಂದ ಕಾನೂನು ಸಮರ ನಡೆಸುತ್ತಿದ್ದಾರೆ.

     

  • 3 ದಶಕಗಳ ಕಾಲ ನರ್ಮದಾ ಅಣೆಕಟ್ಟು ಯೋಜನೆ ಸ್ಥಗಿತಗೊಳಿಸಿದ ಮಹಿಳೆಯೊಂದಿಗೆ ಯಾತ್ರೆ ಮಾಡ್ತಿದ್ದೀರಾ: ರಾಗಾ ವಿರುದ್ಧ ಮೋದಿ ಕಿಡಿ

    3 ದಶಕಗಳ ಕಾಲ ನರ್ಮದಾ ಅಣೆಕಟ್ಟು ಯೋಜನೆ ಸ್ಥಗಿತಗೊಳಿಸಿದ ಮಹಿಳೆಯೊಂದಿಗೆ ಯಾತ್ರೆ ಮಾಡ್ತಿದ್ದೀರಾ: ರಾಗಾ ವಿರುದ್ಧ ಮೋದಿ ಕಿಡಿ

    ಗಾಂಧಿನಗರ: ನರ್ಮದಾ ಅಣೆಕಟ್ಟು ಯೋಜನೆಯನ್ನು (Narmada dam project) 3 ದಶಕಗಳವರೆಗೆ ಸ್ಥಗಿತಗೊಳಸಿದ ಮಹಿಳೆಯೊಂದಿಗೆ ನೀವು ಯಾತ್ರೆಯನ್ನು ಮಾಡುತ್ತಿದ್ದೀರಾ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು, ನರ್ಮದಾ ಬಚಾವೋ ಆಂದೊಲನದ (Narmada Bachao Andolan) ಕಾರ್ಯಕರ್ತೆ ಮೇಧಾ ಪಾಟ್ಕರ್ (Medha Patkar) ಅವರೊಂದಿಗೆ ಭಾರತ್ ಜೋಡೋ ಯಾತ್ರೆ (Bharat Jodo Yatra) ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ವಿರುದ್ಧ ಕಿಡಿಕಾರಿದ್ದಾರೆ.

    ಗುಜರಾತ್‌ನ (Gujarat) ರಾಜ್‌ಕೋಟ್ ಜಿಲ್ಲೆಯ ಧೋರಾಜಿ ಪಟ್ಟಣದಲ್ಲಿ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ, ನರ್ಮದಾ ನದಿಗೆ ಸರ್ದಾರ್ ಸರೋವರ ಅಣೆಕಟ್ಟು ನಿರ್ಮಿಸುವ ಮಹತ್ವಾಕಾಂಕ್ಷೆಯ ಯೋಜನೆ ವಿಳಂಬವಾಯಿತು. ಏಕೆಂದರೆ ಅನೇಕರು ಅದನ್ನು ಸ್ಥಗಿತಗೊಳಿಸಲು ಯತ್ನಿಸಿದರು ಎಂದು ಹೇಳಿದರು.

    ಬರಪೀಡಿತ ಪ್ರದೇಶವಾದ ಕಚ್ ಹಾಗೂ ಕಥಿಯವಾಡ (ಸೌರಾಷ್ಟ್ರ ಪ್ರದೇಶ)ದ ದಾಹ ನೀಗಿಸಲು ನರ್ಮದಾ ಯೋಜನೆ ಒಂದೇ ಪರಿಹಾರವಾಗಿದೆ. ನರ್ಮದಾ ವಿರೋಧಿ ಹೋರಾಟಗಾರ್ತಿ ಮಹಿಳೆಯೊಂದಿಗೆ ಕಾಂಗ್ರೆಸ್ ಮುಖಂಡರೊಬ್ಬರು ಹೇಗೆ ಪಾದಯಾತ್ರೆ ನಡೆಸಲು ಸಾಧ್ಯ? ಇವರು ಕಾನೂನು ಅಡೆತಡೆಗಳನ್ನು ಸೃಷ್ಟಿಸಿ 3 ದಶಕಗಳಿಂದ ಯೋಜನೆಯನ್ನು ಸ್ಥಗಿತಗೊಳಿಸಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ತಾಯಿ, ಮಗಳ ವ್ಯತ್ಯಾಸ ಗೊತ್ತಿಲ್ಲದವರು ಹಿಂದೂ ಧರ್ಮದ ಬಗ್ಗೆ ಮಾತಾಡ್ತಾರೆ: ಭೀಮಾಶಂಕರ್

    ಕಾಂಗ್ರೆಸ್ ನಾಯಕರು ನಿಮ್ಮ ಬಳಿ ಮತ ಕೇಳಲು ಬಂದಾಗ ನರ್ಮದಾ ಯೋಜನೆಯನ್ನು ವಿರೋಧಿಸಿದ ಮಹಿಳೆಯೊಂದಿಗೆ ಪಾದಯಾತ್ರೆ ಮಾಡಿ ಯಾವ ನೈತಿಕತೆಯ ಆಧಾರದ ಮೇಲೆ ಮತ ಕೇಳುತ್ತಿದ್ದೀರಿ ಎಂದು ಅವರ ಬಳಿ ಪ್ರಶ್ನೆ ಮಾಡಿ ಎಂದು ಗುಜರಾತ್ ಜನರೊಂದಿಗೆ ಮೋದಿ ಕೇಳಿಕೊಂಡರು.

    ಗುಜರಾತ್‌ನ ಬಿಜೆಪಿ ಸರ್ಕಾರ ಚೆಕ್‌ಡ್ಯಾಮ್‌ಗಳ ನಿರ್ಮಾಣ, ಹೊಸ ಬಾವಿಗಳು ಮತ್ತು ಕೆರೆಗಳನ್ನು ಕೊರೆಸುವುದು ಮತ್ತು ಪೈಪ್‌ಲೈನ್‌ಗಳ ಮೂಲಕ ನೀರು ಒದಗಿಸುವಂತಹ ವಿವಿಧ ಯೋಜನೆಗಳ ಮೂಲಕ ನೀರಿನ ಕೊರತೆಯನ್ನು ಪರಿಹರಿಸಲು 20 ವರ್ಷಗಳ ಕಾಲ ಶ್ರಮಿಸಿದೆ. ಇದೀಗ ಇಡೀ ಕಚ್ ಹಾಗೂ ಕಥಿಯವಾಡ ಪ್ರದೇಶ ಈ ಪೈಪ್‌ಲೈನ್‌ಗಳ ಜಾಲದ ಮೂಲಕ ನೀರನ್ನು ಪಡೆಯುತ್ತಿವೆ. ಈ ಸಮಸ್ಯೆಗಳಿಗೆ ಶಾಶ್ವತ ಪರಿಹಾರವನ್ನು ತರುವಲ್ಲಿ ನಾವು ಕೆಲಸ ಮಾಡುತ್ತೇವೆ. ಅಭಿವೃದ್ಧಿಗೆ ನೀರು ಮತ್ತು ವಿದ್ಯುತ್ ಅಗತ್ಯ ಎಂಬುದು ನಮಗೆ ತಿಳಿದಿದೆ ಎಂದರು.

    ಶನಿವಾರ ನರ್ಮದಾ ಬಚಾವೋ ಆಂದೋಲನದ ಕಾರ್ಯಕರ್ತೆ ಮೇಧಾ ಪಾಟ್ಕರ್ ಅವರು ಮಹಾರಾಷ್ಟ್ರದಲ್ಲಿ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ಇದನ್ನೂ ಓದಿ: ಗುಜರಾತ್‌ನಲ್ಲಿ ಬಿಜೆಪಿಯಿಂದ 7 ಬಂಡಾಯ ಶಾಸಕರು ಅಮಾನತು

    Live Tv
    [brid partner=56869869 player=32851 video=960834 autoplay=true]

  • ನರ್ಮದಾ ಬಚಾವೋ ಆಂದೋಲನದ ನಾಯಕಿ ಮೇಧಾ ಪಾಟ್ಕರ್ ವಿರುದ್ಧ FIR ದಾಖಲು

    ನರ್ಮದಾ ಬಚಾವೋ ಆಂದೋಲನದ ನಾಯಕಿ ಮೇಧಾ ಪಾಟ್ಕರ್ ವಿರುದ್ಧ FIR ದಾಖಲು

    ಭೋಪಾಲ್: ವಿದ್ಯಾರ್ಥಿಗಳ ಶೈಕ್ಷಣಿಕ ಸೌಲಭ್ಯಗಳ ನಿರ್ವಹಣೆಗಾಗಿ ಸಂಗ್ರಹಿಸಿದ ಹಣವನ್ನು ದುರುಪಯೋಗವಾಗಿದೆ ಎಂದು ಆರೋಪಿಸಿ ಮೇಧಾ ಪಾಟ್ಕರ್ ಸೇರಿದಂತೆ 11 ಜನರ ವಿರುದ್ಧ ಎಫ್‍ಐಆರ್ ದಾಖಲಾದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

    ಮಧ್ಯಪ್ರದೇಶದ ಬರ್ವಾನಿ ಜಿಲ್ಲೆಯ ಬುಡಕಟ್ಟು ಜನರ ಶೈಕ್ಷಣಿಕ ಸೌಲಭ್ಯಗಳ ನಿರ್ವಹಣೆಗಾಗಿ ಸಂಗ್ರಹಿಸಿದ ಹಣವನ್ನು ನರ್ಮದಾ ಬಚಾವೊ ಆಂದೋಲನದ ನಾಯಕಿ ಮೇಧಾ ಪಾಟ್ಕರ್ ಸೇರಿದಂತೆ 11 ಜನರು ರಾಜಕೀಯ ಹಾಗೂ ದೇಶ ವಿರೋಧಿ ಕಾರ್ಯಕ್ಕಾಗಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಅಲ್ಲಿನ ಗ್ರಾಮಸ್ಥರು ಆರೋಪಿಸಿದ್ದಾರೆ.

    ಮುಂಬೈನಲ್ಲಿ ನೋಂದಣಿಯಾಗಿರುವ ನರ್ಮದಾ ನವನಿರ್ಮಾಣ ಅಭಿಯಾನ (ಎನ್‍ಎನ್‍ಎ) ಟ್ರಸ್ಟ್, ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರದ ನರ್ಮದಾ ಕಣಿವೆಯ ಬುಡಕಟ್ಟು ವಿದ್ಯಾರ್ಥಿಗಳಿಗೆ ವಸತಿ ಶೈಕ್ಷಣಿಕ ಸೌಲಭ್ಯಗಳನ್ನು ನಡೆಸಲು ಸಂಗ್ರಹಿಸಿದ ಹಣವನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಎಫ್‍ಐಆರ್‌ನಲ್ಲಿ ತಿಳಿಸಿಲಾಗಿದೆ. ಇದನ್ನೂ ಓದಿ: ಪೌರ ಕಾರ್ಮಿಕರು ರಜೆ ಹಾಕಿದ್ರೆ ಸಂಬಳವೇ ಕಟ್- ರೆಸ್ಟ್‌ಲೆಸ್ ವರ್ಕರ್ಸ್‍ಗೆ ಇದೆಂಥಾ ಅನ್ಯಾಯ..?

    ಖಾಸಗಿ ದೂರಿನ ಮೇರೆಗೆ ಮೇಧಾ ಪಾಟ್ಕರ್ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಾಗಿದ್ದು, ದೂರುದಾರರು ಕೆಲವು ದಾಖಲೆಗಳನ್ನು ಒದಗಿಸಿದ್ದಾರೆ. ಹಳೆಯ ವಹಿವಾಟಿಗೆ ಸಂಬಂಧಿಸಿದ ಪ್ರಕರಣವಾಗಿರುವುದರಿಂದ ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುವುದು ಎಂದು ಬರ್ವಾನಿ ಪೊಲೀಸ್ ವರಿಷ್ಠಾಧಿಕಾರಿ ದೀಪಕ್ ಕುಮಾರ್ ಶುಕ್ಲಾ ತಿಳಿಸಿದ್ದಾರೆ. ಇದನ್ನೂ ಓದಿ: ಮೇಘಸ್ಫೋಟದಿಂದ ತಾತ್ಕಾಲಿಕ ಬಂದ್ ಆಗಿದ್ದ ಅಮರನಾಥ ಯಾತ್ರೆ ಪುನಾರಂಭ

    ನರ್ಮದಾ ಬಚಾವೊ ಆಂದೋಲನದ ನಾಯಕಿ ಮೇಧಾ ಪಾಟ್ಕರ್ ಈ ಬಗ್ಗೆ ಮಾತನಾಡಿ, ಎಲ್ಲಾ ಆರೋಪಗಳನ್ನು ತಳ್ಳಿ ಹಾಕಿದ್ದಾರೆ. ಈ ಆರೋಪಗಳ ಹಿಂದೆ ರಾಜಕೀಯವಿದೆ ಎಂದು ತಿಳಿಸಿದರು.

    Live Tv
    [brid partner=56869869 player=32851 video=960834 autoplay=true]

  • ಮೇಧಾ ಪಾಟ್ಕರ್‌ಗೆ ನಾನು ಯಾಕೆ ಉತ್ತರ ಕೊಡಲಿ: ಪರಿಸರವಾದಿಗಳಿಗೆ ಡಿಕೆಶಿ ತಿರುಗೇಟು

    ಮೇಧಾ ಪಾಟ್ಕರ್‌ಗೆ ನಾನು ಯಾಕೆ ಉತ್ತರ ಕೊಡಲಿ: ಪರಿಸರವಾದಿಗಳಿಗೆ ಡಿಕೆಶಿ ತಿರುಗೇಟು

    ಬೆಂಗಳೂರು: ನಮ್ಮದು ವ್ಯಕ್ತಿ ಚಿಂತನೆ ಅಲ್ಲ. ನಮ್ಮದು ಜನರ ಚಿಂತನೆ, ಜನರ ಬದುಕಿಗಾಗಿ ಹೋರಾಟ ಮಾಡುತ್ತೇನೆ. ಜೀವ ಇದ್ದರೆ ಜೀವನ ಎಂದು ಪರಿಸರವಾದಿಗಳಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿರಗೇಟು ನೀಡಿದರು.

    ಗುರುವಾರ ನರ್ಮದಾ ಬಚಾವ್ ಆಂದೋಲನದ ಹೋರಾಟಗಾರ್ತಿ ಮೇಧಾ ಪಾಟ್ಕರ್, ನಟ ಚೇತನ್ ಸೇರಿದಂತೆ ಇನ್ನಿತರ ಪರಿಸರವಾದಿಗಳು ಮೇಕೆದಾಟು ಆಣೆಕಟ್ಟು ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದ್ದರು.

    ಈ ವಿಚಾರಕ್ಕೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್ ಅವರು, ಮೇಧಾ ಪಾಟ್ಕರ್ ಅವರು ಅವರದ್ದೇ ಆದ ಚಿಂತನೆಯಲ್ಲಿ ಹೋರಾಟವನ್ನು ಮಾಡುತ್ತಿದ್ದಾರೆ. ಆದರೆ ನಮ್ಮದು ಜನರ ಚಿಂತನೆಯಾಗಿದೆ. ಮೇಧಾ ಪಾಟ್ಕರ್‌ಗೆ ನಾನು ಯಾಕೆ ಉತ್ತರ ಕೊಡಲಿ? ಅದಕ್ಕೆ ಸಿಎಂ ಸರ್ಕಾರ ಉತ್ತರ ಕೊಡುತ್ತಾರೆ ಎಂದು ಪ್ರತಿಕ್ರಿಯಿಸಿದರು. ಇದನ್ನೂ ಓದಿ: ಎಸ್‌ಪಿ ಕಚೇರಿಯಲ್ಲಿ ಕೋವಿಡ್‌ ರೂಲ್ಸ್‌ ಬ್ರೇಕ್‌ – 2,500 ಮಂದಿ ವಿರುದ್ಧ ಎಫ್‌ಐಆರ್‌

    ಮೇಕೆದಾಟು ಯೋಜನೆ ಜಾರಿ ಸಂಬಂಧ ಕಾಂಗ್ರೆಸ್ ಆಯೋಜಿಸಿದ್ದ ಪಾದಯಾತ್ರೆಗೆ ಕಲಾವಿದರಾದ ದುನಿಯಾ ವಿಜಯ್, ಸಾಧುಕೋಕಿಲಾ, ಉಮಾಶ್ರೀ ಬೆಂಬಲ ನೀಡಿದ್ದರು. ಇದನ್ನೂ ಓದಿ: ಇನ್ಫಿ ನಾರಾಯಣ ಮೂರ್ತಿ ಅಳಿಯ ಮುಂದಿನ ಬ್ರಿಟನ್ ಪ್ರಧಾನಿ?

    ಮಾಧ್ಯಮಗಳ ಜೊತೆ ಮಾತನಾಡಿದ್ದ ಮೇಧಾ ಪಾಟ್ಕರ್, ಬಿಜೆಪಿ-ಕಾಂಗ್ರೆಸ್-ಜೆಡಿಎಸ್ ಮೂರು ಪಕ್ಷಗಳು ಮೇಕೆದಾಟು ಯೋಜನೆ ನೆಪದಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದೆ. ಕರ್ನಾಟಕ ಜನತೆಯನ್ನು ದಾರಿ ತಪ್ಪಿಸಿ ನೂರಾರು ಎಕರೆ ನಾಶವಾಗಿ ಕೋಟಿ ಕಾಂಟ್ರಾರ್ಕ್ಟರ್‌ ಮತ್ತು ರಾಜಕೀಯ ವ್ಯಕ್ತಿಗಳ ಜೋಬು ತುಂಬಲಿದೆ. ಈ ಯೋಜನೆಯಿಂದ ಯಾರಿಗೂ ಅನುಕೂಲವಾಗುವುದಿಲ್ಲ ಎಂದು ಕಿಡಿಕಾರಿದ್ದರು.

  • ಮದ್ಯ ಮಾರಾಟದ ಹಣದಿಂದ ಸರ್ಕಾರ ಶಾಲೆಗಳನ್ನ ನಡೆಸುತ್ತಿದೆ: ಮೇಧಾ ಪಾಟ್ಕರ್

    ಮದ್ಯ ಮಾರಾಟದ ಹಣದಿಂದ ಸರ್ಕಾರ ಶಾಲೆಗಳನ್ನ ನಡೆಸುತ್ತಿದೆ: ಮೇಧಾ ಪಾಟ್ಕರ್

    ರಾಯಚೂರು: ಮದ್ಯ ಮಾರಾಟದ ಹಣದಿಂದ ಸರ್ಕಾರಗಳು ಶಾಲೆಗಳನ್ನ ನಡೆಸುತ್ತಿರುವುದು ನಮ್ಮ ದುರಂತ ಅಂತ ಸಾಮಾಜಿಕ ಹೋರಾಟಗಾರ್ತಿ ಮೇಧಾ ಪಾಟ್ಕರ್ ಬೇಸರ ವ್ಯಕ್ತಪಡಿಸಿದ್ದಾರೆ.

    ರಾಯಚೂರಿನ ರಾಜೆಂದ್ರ ಗಂಜ್ ನಲ್ಲಿ ಆಯೋಜಿಸಿರುವ ಮದ್ಯ ನಿಷೇಧ ಆಂದೋಲನ ರಾಜ್ಯ ಮಟ್ಟದ ಸಮಾವೇಶಕ್ಕೆ ಆಗಮಿಸಿದ ವೇಳೆ ಮಾತನಾಡಿದ ಅವರು, ಮಧ್ಯ ಮಾರಾಟದಿಂದ ರಾಜ್ಯ ಸರ್ಕಾರ 16 ಸಾವಿರ ಕೋಟಿಗೂ ಹೆಚ್ಚು ಆದಾಯ ಪಡೆಯುತ್ತಿದೆ. ಈ ಮದ್ಯದ ಹಣದಿಂದ ಶಾಲೆ ನಡೆಸುವುದು ದುರ್ದೈವದ ಸಂಗತಿ ಎಂದು ಹೇಳಿದರು.

    ವಿವಿಧ ರಾಜ್ಯಗಳಲ್ಲಿ ಮದ್ಯ ನಿಷೇಧದ ಚಿಂತನೆ ನಡೆದಿದೆ, ನಮ್ಮ ರಾಜ್ಯದಲ್ಲಿಯೂ ಮದ್ಯ ನಿಷೇಧಿಸಲು ಸಿಎಂ ಸಿದ್ದರಾಮಯ್ಯ ಕೂಡ ಚಿಂತನೆ ನಡೆಸಬೇಕು. ಇಲ್ಲದಿದ್ದರೇ ಮುಂದಿನ ದಿನಗಳಲ್ಲಿ ರಾಷ್ಟ್ರವ್ಯಾಪಿ ಪ್ರತಿಭಟನೆ ಪ್ರಾರಂಭಿಸುತ್ತೇವೆ ಅಂತ ಮೇಧಾಪಾಟ್ಕರ್ ಎಚ್ಚರಿಸಿದರು.

    ಇದೇ ವೇಳೆ ಸಿರಿಗೆರೆ ತರಳಬಾಳು ಮಠದ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಮೂವತ್ತು ವರ್ಷಗಳಿಂದ ನಮ್ಮ ಮಠ ಮದ್ಯ ನಿಷೇಧ ಮಾಡುವಂತೆ ಹೋರಾಡುತ್ತಿದೆ. ರಾಜ್ಯದಲ್ಲಿ ಸಂಪೂರ್ಣ ಮದ್ಯ ನಿಷೇಧ ಜಾರಿಗೊಳಿಸಬೇಕು. ಟಿಪ್ಪು ಸುಲ್ತಾನನ ಆಡಳಿತದಲ್ಲೇ ಮದ್ಯ ನಿಷೇಧ ಮಾಡಲಾಗಿತ್ತು. ರಾಜ ಪ್ರಭುತ್ವದಲ್ಲೇ ಆದಾಯ ಮುಖ್ಯವಾಗಿರಲಿಲ್ಲ. ಈಗ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ಹಿತಕ್ಕಾಗಿ ಮದ್ಯ ನಿಷೇಧ ಜಾರಿಗೊಳಿಸಲೇಬೇಕು. ಎಲ್ಲಾ ರಾಜಕೀಯ ಪಕ್ಷಗಳು ಮದ್ಯ ನಿಷೇಧವನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಬೇಕು ಅಂತ ಶ್ರೀಗಳು ಹೇಳಿದರು.

    ಕಾರ್ಯಕ್ರಮದಲ್ಲಿ ಮೂರು ಸಾವಿರಕ್ಕೂ ಹೆಚ್ಚು ಮಹಿಳೆಯರು ಭಾಗವಹಿಸಿದ್ದರು. ಗಿಡಕ್ಕೆ ನೀರೆರೆದು, ಬೀಯರ್ ಬಾಟಲ್ ಗಳನ್ನ ಹೊಡೆದು ರಾಜ್ಯಮಟ್ಟದ ಸಮಾವೇಶಕ್ಕೆ ಚಾಲನೆ ನೀಡಿದರು.