Tag: Mediators

  • ಮಧ್ಯವರ್ತಿಗಳ ಹಾವಳಿ ತಡೆಗೆ ಸಚಿವ ಶಿವರಾಜ್ ತಂಗಡಗಿ ಸೂಚನೆ

    ಮಧ್ಯವರ್ತಿಗಳ ಹಾವಳಿ ತಡೆಗೆ ಸಚಿವ ಶಿವರಾಜ್ ತಂಗಡಗಿ ಸೂಚನೆ

    – ವೈಯಕ್ತಿಕ ಸಾಲ ಫಲಾನುಭವಿಗೆ ನೇರವಾಗಿ ಸಿಗಲಿ
    – ಯೋಜನೆಗೆ ಹೊಸ ರೂಪ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ

    ಬೆಂಗಳೂರು: ಡಿ. ದೇವರಾಜ ಅರಸು ಅಭಿವೃದ್ಧಿ ನಿಗಮದಿಂದ ನೀಡುವ ‘ಸ್ವಯಂ ಉದ್ಯೋಗ ವೈಯಕ್ತಿಕ ಸಾಲ’ ಯೋಜನೆಗೆ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದ್ದು, ಇದಕ್ಕೆ ಕೂಡಲೇ ಕಡಿವಾಣ ಹಾಕುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ (Shivaraj Tangadagi) ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

    ವಿಧಾನಸೌಧದ ತಮ್ಮ ಕೊಠಡಿಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಶುಕ್ರವಾರ ಸಚಿವರು ಸಭೆ ನಡೆಸಿ ಸೂಚನೆ ನೀಡಿದರು. ಪ್ರತಿ ಜಿಲ್ಲೆಯಲ್ಲಿ ನೇರ ಸಾಲ ಯೋಜನೆಗೆ ಮಧ್ಯವರ್ತಿಗಳು ಹುಟ್ಟುಕೊಂಡಿದ್ದಾರೆ. ಫಲಾನುಭವಿಗಳಿಗಿಂತ ಮೊದಲೇ ಮಧ್ಯವರ್ತಿಗಳು ಫಲಾನುಭವಿಗಳ ಬಳಿ ಹೋಗುತ್ತಾರೆ. ಈ ಮಧ್ಯವರ್ತಿಗಳ ಹಾವಳಿಗೆ ಮೊದಲು ಕಡಿವಾಣ ಹಾಕಬೇಕು. ನೇರ ಸಾಲದಲ್ಲಿ ನೀಡಲಾಗುವ 50 ಸಾವಿರ ರೂ. ಹಣವನ್ನು ಒಬ್ಬ ಫಲಾನುಭವಿಗೆ ನೀಡಿದರೂ ಆ ಹಣ ಫಲಾನುಭವಿಗೆ ನೇರ ಉಪಯೋಗಕ್ಕೆ ಬರಬೇಕು. ಈ ಯೋಜನೆಗೆ ಹೊಸ ರೂಪ ನೀಡಿ. ಕಂತಿನ ರೂಪದಲ್ಲಾದರೂ ಫಲಾನುಭವಿಗಳಿಗೆ ಹಣ ತಲುಪುವಂತೆ ಆಗಬೇಕು ಎಂದು ಹೇಳಿದರು.

    ರೈತರಿಗೆ ಅನುಕೂಲ ಮಾಡಿಕೊಡಿ:
    ಗಂಗಾ ಕಲ್ಯಾಣ ಯೋಜನೆಯಡಿ 3 ವರ್ಷದಲ್ಲಿ 19,862 ಕೊಳವೆ ಬಾವಿ ಕೊರೆಯಲು ಗುರಿ ಹಾಕಿಕೊಳ್ಳಲಾಗಿದ್ದು, ಕೇವಲ ಒಂದು ಸಾವಿರ ಕೊಳವೆ ಬಾವಿ ಕೊರೆದಿರುವುದಕ್ಕೆ ಸಚಿವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಗಂಗಾ ಕಲ್ಯಾಣ ಯೋಜನೆಯಿಂದ ಸಾವಿರಾರು ರೈತರಿಗೆ ಉಪಯೋಗವಾಗಲಿದೆ. ಮೊದಲ ಹಂತದಲ್ಲಿ ಗಂಗಾ ಕಲ್ಯಾಣ ಯೋಜನೆಗೆ ಆದ್ಯತೆ ನೀಡಿ, ಹಾಕಿಕೊಂಡಿರುವ ಯೋಜನೆಯಂತೆ ಕೊಳವೆ ಬಾವಿ ಕೊರೆದು ಪೂರ್ಣಗೊಳಿಸುವಂತೆ ಸಭೆಯಲ್ಲಿದ್ದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಇದನ್ನೂ ಓದಿ: ಕಾಮಗಾರಿ ಮುಗಿಯುವವರೆಗೆ ಎಕ್ಸ್‌ಪ್ರೆಸ್‌ವೇ ಟೋಲ್ ಸಂಗ್ರಹ ತಡೆಯಿರಿ – ಸಿಎಂಗೆ ಮಂಡ್ಯ ಶಾಸಕರ ಮನವಿ

    ದುಂದು ವೆಚ್ಚಕ್ಕೆ ಕಡಿವಾಣ ಹಾಕಿ:
    ಕೆಲವೊಂದು ನಿಗಮಗಳು ಸ್ವಂತ ಕಟ್ಟಡ ಇಲ್ಲದೇ, ಖಾಸಗಿ ನಿವೇಶನಕ್ಕೆ ಲಕ್ಷಾಂತರ ರೂ. ಬಾಡಿಗೆ ಕಟ್ಟುವುದನ್ನು ಅಧಿಕಾರಿಗಳು ಸಚಿವರ ಗಮನಕ್ಕೆ ತಂದರು. ಇದರಿಂದ ಅಸಮಾಧಾನಗೊಂಡ ಸಚಿವ ಶಿವರಾಜ್ ತಂಗಡಗಿ ಅನವಶ್ಯಕವಾಗಿ ಇಂತಹದ್ದಕ್ಕೆ ದುಂದು ವೆಚ್ಚ ಮಾಡುವುದು ಸರಿಯಲ್ಲ. ಸ್ವಂತ ಕಟ್ಟಡದಲ್ಲೇ ನಿಗಮಗಳಿಗೆ ಸ್ಥಳ ಒದಗಿಸಿ ಬಾಡಿಗೆಗೆ ಒದಗಿಸುವ ಇಂತಹ ಹಣವನ್ನು ಇತರ ಯೋಜನೆಗಳಿಗೆ ಬಳಕೆ ಮಾಡಿಕೊಳ್ಳುವುದರಿಂದ ಉಪಯುಕ್ತವಾಗಲಿದೆ ಎಂದು ಅಧಿಕಾರಿಗಳಿಗೆ ತಿಳಿಸಿದರು.

    ಸಭೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಾರ್ಯದರ್ಶಿ ತುಳಸಿ ಮದಿನೇನಿ, ಆಯುಕ್ತ ಕೆ ದಯಾನಂದ್, ದೇವರಾಜ ಅರಸು ನಿಗಮದ ವ್ಯವಸ್ಥಾಪಕ ನಿರ್ದೇಶಕ ಕಾಂತರಾಜು, ಉಪ್ಪಾರ ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ.ಸಿಕೆ ಜಗದೀಶ್ ಕುಮಾರ್, ಅಧಿಕಾರಿಗಳಾದ ಮಧುಸೂದನ್ ರೆಡ್ಡಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಇದನ್ನೂ ಓದಿ: ಅಲ್ಪಸಂಖ್ಯಾತರಿಗೆ ರೂಪಿಸಿದ್ದ ಕಾರ್ಯಕ್ರಮಗಳು ಪುನರಾರಂಭ: ಸಿದ್ದರಾಮಯ್ಯ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಆರ್‌ಟಿಓ ಕಚೇರಿ ಮೇಲೆ ಎಸಿಬಿ ದಾಳಿ – ಮಧ್ಯವರ್ತಿಗಳಿಂದ 1.76 ಲಕ್ಷ ವಶ

    ಆರ್‌ಟಿಓ ಕಚೇರಿ ಮೇಲೆ ಎಸಿಬಿ ದಾಳಿ – ಮಧ್ಯವರ್ತಿಗಳಿಂದ 1.76 ಲಕ್ಷ ವಶ

    ದಾವಣಗೆರೆ: ಇಂದು ನಗರದ ಆರ್‌ಟಿಓ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳ ದಾಳಿ ನಡೆದಿದ್ದು, 15ಕ್ಕೂ ಹೆಚ್ಚು ಮಧ್ಯವರ್ತಿಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

    ಸಾರ್ವಜನಿಕರಿಂದ ಡಿಎಲ್, ಎಲ್‍ಎಲ್‍ಆರ್ ಮಾಡಿಸಲು ದುಪ್ಪಟ್ಟು ದರ ಹಾಗೂ ಮತ್ತಿತರ ಕೆಲಸ ಮಾಡಿಸಲು ಸಾವಿರಾರು ರೂಪಾಯಿ ವಸೂಲು ಮಾಡುತ್ತಿದ್ದ ಮಧ್ಯವರ್ತಿಗಳನ್ನು ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲದೆ ಮಧ್ಯವರ್ತಿಗಳ ಬಳಿ ಇದ್ದ ಅಪಾರ ಪ್ರಮಾಣದ ದಾಖಲೆಗಳನ್ನು ಮತ್ತು ಹಣವನ್ನು ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ. ಈ ಮೂಲಕ ಸಾರ್ವಜನಿಕರ ಜೇಬಿಗೆ ಕತ್ತರಿ ಹಾಕುತ್ತಿದ್ದ ಏಜೆಂಟ್‍ಗಳ ಹಾವಳಿಗೆ ಎಸಿಬಿ ಅಧಿಕಾರಿಗಳು ಬ್ರೇಕ್ ಹಾಕಿದ್ದಾರೆ.

    ವಶಕ್ಕೆ ಪಡೆದುಕೊಂಡ ಮಧ್ಯವರ್ತಿಗಳ ಮೇಲೆ ಪ್ರಕರಣ ದಾಖಲು ಮಾಡಿದ್ದು, 15 ಜನ ಮಧ್ಯವರ್ತಿಗಳಿಂದ 1,76,855 ರೂಪಾಯಿ ನಗದು ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲದೆ ಆರ್‌ಟಿಓ ಅಧಿಕಾರಿಗಳನ್ನು ವಿಚಾರಣೆ ನಡೆಸುತ್ತಿದ್ದಾರೆ. ಎಸಿಬಿ ಡಿವೈಎಸ್‍ಪಿ ಪರಮೇಶ್ವರಪ್ಪ ನೇತೃತ್ವದ ತಂಡ ಈ ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.