Tag: medical

  • ವೈದ್ಯಕೀಯ 3ನೇ ಸುತ್ತಿನ ತಾತ್ಕಾಲಿಕ ಸೀಟು ಹಂಚಿಕೆ ಫಲಿತಾಂಶ ಪ್ರಕಟ – ಕೆಇಎ

    ವೈದ್ಯಕೀಯ 3ನೇ ಸುತ್ತಿನ ತಾತ್ಕಾಲಿಕ ಸೀಟು ಹಂಚಿಕೆ ಫಲಿತಾಂಶ ಪ್ರಕಟ – ಕೆಇಎ

    ಬೆಂಗಳೂರು: ಪ್ರಸಕ್ತ 2025ನೇ ಸಾಲಿನ ವೈದ್ಯಕೀಯ (Medical) ಮತ್ತು ದಂತವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕೆ ಮೂರನೇ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಶುಕ್ರವಾರ (ಅ.24) ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಇದಕ್ಕೆ ಯಾವುದೇ ಆಕ್ಷೇಪಣೆಯಿದ್ದಲ್ಲಿ ಅ.25ರ ಬೆಳಿಗ್ಗೆ 10ರೊಳಗೆ ಇಲ್ಲಿನ ಮಲ್ಲೇಶ್ವರದಲ್ಲಿರುವ ಕೆಇಎ ಕಚೇರಿಗೆ ಖುದ್ದು ಬಂದು ಬರೆದು ತಿಳಿಸಬಹುದು ಅಥವಾ keauthority-ka@nic.inಗೆ ಇ-ಮೇಲ್ ಕಳಿಸಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸೂಚಿಸಿದೆ.

    ಅಖಿಲ ಭಾರತ ಕೋಟಾ ಅಡಿಯ ಮೂರನೇ ಸುತ್ತಿನಲ್ಲಿ ಪಾಲ್ಗೊಂಡು ಸೀಟು ಪಡೆಯುವ ಜೊತೆಗೆ ಕೆಇಎ ಮೂರನೇ ಸುತ್ತಿನಲ್ಲಿಯೂ ಸೀಟು ಪಡೆದಿರುವ ಅಭ್ಯರ್ಥಿಗಳು ಕೆಇಎ ಸೀಟು ಉಳಿಸಿಕೊಳ್ಳಲು ಇಚ್ಛಿಸಿದಲ್ಲಿ ಅ.25ರ ಮಧ್ಯಾಹ್ನ 12:30ರೊಳಗೆ ಕೆಇಎ ಕಚೇರಿಗೆ ಬಂದು ಖುದ್ದು ಮನವಿ ನೀಡಬೇಕು ಅಥವಾ ತಾವು ಅರ್ಜಿಯಲ್ಲಿ ನಮೂದಿಸಿದ್ದ ಇ-ಮೇಲ್ ಐ.ಡಿ.ಯಿಂದ keauthority-ka@nic.iಗೆ ಇ-ಮೇಲ್ ಕಳಿಸಬೇಕು. ಇಲ್ಲದಿದ್ದರೆ ಅಂತಹ ಅಭ್ಯರ್ಥಿಗಳನ್ನು 3ನೇ ಸುತ್ತಿನ ಅಂತಿಮ ಸೀಟು ಹಂಚಿಕೆಗೆ ಪರಿಗಣಿಸುವುದಿಲ್ಲ ಹಾಗೂ ಪಾವತಿಸಿರುವ ವೈದ್ಯಕೀಯ ಕೋರ್ಸ್ ಶುಲ್ಕ ಠೇವಣಿಯನ್ನು ಹಿಂದಿರುಗಿಸುವುದಿಲ್ಲ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಮಾಧ್ಯಮ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.ಇದನ್ನೂ ಓದಿ: ಕಾಂಗ್ರೆಸ್‌ನಲ್ಲಿ ಜೋರಾದ ಉತ್ತರಾಧಿಕಾರಿ ಕದನ – ಯತೀಂದ್ರ ವಿರುದ್ಧ ಶಿಸ್ತುಕ್ರಮವೋ? ಸಿಎಂ ಪುತ್ರ ಅಂತ ಎಚ್ಚರಿಕೆಯೋ?

    ಮೂರನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಅ.27ರ ಮಧ್ಯಾಹ್ನ 12ರ ನಂತರ ಪ್ರಕಟಿಸಲಾಗುತ್ತದೆ. ಸೀಟು ಪಡೆದವರು ಅ.30ರೊಳಗೆ ಉಳಿದ ಶುಲ್ಕವನ್ನು ಕಡ್ಡಾಯವಾಗಿ ಪಾವತಿಸಿ, ಸೀಟು ಖಾತರಿ ಚೀಟಿಯನ್ನು ಡೌನ್ ಲೋಡ್ ಮಾಡಿಕೊಂಡು ಆಯಾ ಕಾಲೇಜಿಗೆ ಎಲ್ಲ ಮೂಲದಾಖಲೆಗಳೊಂದಿಗೆ ತೆರಳಿ ಪ್ರವೇಶ ಪಡೆಯಬೇಕು ಎಂದು ತಿಳಿಸಲಾಗಿದೆ.

    ಈ ಸುತ್ತಿನಲ್ಲಿ ಅಂತಿಮ ಸೀಟು ಹಂಚಿಕೆಯಾದ ನಂತರ ಅದರ ರದ್ದತಿಗಾಗಿ ಮನವಿ ಸಲ್ಲಿಸಲು ಅವಕಾಶವಿರುವುದಿಲ್ಲ. ಹೀಗಾಗಿ, ಕಾಲೇಜಿಗೆ ಪ್ರವೇಶ ಪಡೆಯದಿದ್ದರೆ ಅಥವಾ ಸೀಟು ರದ್ದುಪಡಿಸಲು ಇಚ್ಛೆಪಟ್ಟರೆ ಅಥವಾ ಕಾಲೇಜಿಗೆ ಪ್ರವೇಶ ಪಡೆಯದಿದ್ದರೆ ಅಭ್ಯರ್ಥಿ ಪಾವತಿಸಿರುವ ವೈದ್ಯಕೀಯ ಕೋರ್ಸ್ ಶುಲ್ಕ ಠೇವಣಿಯನ್ನು ನಿಯಮದ ಪ್ರಕಾರ ಮುಟ್ಟುಗೋಲು ಹಾಕಿಕೊಳ್ಳಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಇದನ್ನೂ ಓದಿ: ಆಳಂದದಲ್ಲಿ 80 ರೂ.ಗೆ ವೋಟ್ ಡಿಲೀಟ್ ಸಾಕ್ಷಿ ಸಿಕ್ಕಿದೆ, ಚುನಾವಣಾ ಆಯೋಗ ಉತ್ತರಿಸಲಿ: ಪ್ರಿಯಾಂಕ್ ಖರ್ಗೆ, ಎಂ.ಬಿ ಪಾಟೀಲ್ ಆಗ್ರಹ

     

  • ವೈದ್ಯಕೀಯ: ಛಾಯ್ಸ್‌-2 ಅಭ್ಯರ್ಥಿಗಳಿಗೆ ಮುಂಗಡ ಶುಲ್ಕ ಪಾವತಿಯಲ್ಲಿ ಬದಲಾವಣೆ: ಕೆಇಎ

    ವೈದ್ಯಕೀಯ: ಛಾಯ್ಸ್‌-2 ಅಭ್ಯರ್ಥಿಗಳಿಗೆ ಮುಂಗಡ ಶುಲ್ಕ ಪಾವತಿಯಲ್ಲಿ ಬದಲಾವಣೆ: ಕೆಇಎ

    ಬೆಂಗಳೂರು: ವೈದ್ಯಕೀಯ(Medical), ದಂತ ವೈದ್ಯಕೀಯ (Dental) ಮತ್ತು ಹೋಮಿಯೋಪಥಿ (Homeopathy) ಕೋರ್ಸ್‌ನ ಮೊದಲ ಸುತ್ತಿನ ಸೀಟು ಹಂಚಿಕೆಗೆ ಛಾಯ್ಸ್‌ ದಾಖಲಿಸುವ ಪ್ರಕ್ರಿಯೆ ಇಂದಿನಿಂದ ಆರಂಭವಾಗಿದ್ದು, 12 ಲಕ್ಷಕ್ಕಿಂತ ಹೆಚ್ಚಿನ ಕೋರ್ಸ್‌ ಶುಲ್ಕದ ಸೀಟು ಸಿಕ್ಕಿ, ಛಾಯ್ಸ್‌-2 ಆಯ್ಕೆ ಮಾಡಿಕೊಳ್ಳುವ ಅಭ್ಯರ್ಥಿಗಳಿಗೆ ಪೂರ್ಣ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯನಿರ್ವಾಹಕ ನಿರ್ದೇಶಕ ಎಚ್‌. ಪ್ರಸನ್ನ ಗುರುವಾರ ತಿಳಿಸಿದ್ದಾರೆ.

    ಇದುವರೆಗೂ ಛಾಯ್ಸ್‌-2 ದಾಖಲಿಸುವ ವೈದ್ಯಕೀಯ ಅಭ್ಯರ್ಥಿಗಳು ಪೂರ್ಣ ಕೋರ್ಸ್‌ ಶುಲ್ಕ ಕಟ್ಟಬೇಕಿತ್ತು. ಆದರೆ, ಈ ಬಾರಿ ಇದನ್ನು ಬದಲಿಸಲಾಗಿದೆ. 12 ಲಕ್ಷ ರೂ.ಗಿಂತ ಹೆಚ್ಚಿನ ಕೋರ್ಸ್‌ ಶುಲ್ಕದ ವೈದ್ಯಕೀಯ ಸೀಟು ಹಂಚಿಕೆಯಾಗಿದ್ದಲ್ಲಿ ಮತ್ತು ಛಾಯ್ಸ್‌-2 ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳು 12,00,117 ರೂಪಾಯಿಯನ್ನು ಮುಂಗಡ ಕೋರ್ಸ್‌ ಶುಲ್ಕವಾಗಿ ಪಾವತಿಸಬೇಕು. ಎಸ್‌ಸಿ/ಎಸ್‌ಟಿ, ಪ್ರವರ್ಗ-1 ಅಭ್ಯರ್ಥಿಗಳು ಎರಡು ಲಕ್ಷ ರೂಪಾಯಿ ಕಟ್ಟಬೇಕು. ಬಾಕಿ ಶುಲ್ಕವನ್ನು 2ನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶ ಪ್ರಕಟಣೆ ನಂತರ ಪಾವತಿಸಬೇಕು ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.  ಇದನ್ನೂ ಓದಿ: ಧರ್ಮಸ್ಥಳ ಅಲ್ಲ ಈಗ ಕನ್ಯಾಡಿಯ ಕಾಡಿನಲ್ಲೂ ಸಿಗಲಿಲ್ಲ ಯಾವುದೇ ಮೂಳೆ!

    ಮೊದಲ ಸುತ್ತಿನಲ್ಲಿ ʼಜಿʼ ವರ್ಗದಲ್ಲಿ ವೈದ್ಯಕೀಯ ಸೀಟು ಪಡೆದು, ಛಾಯ್ಸ್‌-2 ಆಯ್ಕೆ ಮಾಡಿಕೊಂಡವರು ಸೂಚನೆಗಳನ್ವಯ ಕೋರ್ಸ್‌ ಶುಲ್ಕವನ್ನು ಕಟ್ಟಬೇಕು ಎಂದು ಅವರು ವಿವರಿಸಿದ್ದಾರೆ.

    ಅಖಿಲ ಭಾರತ ಕೋಟಾ ಅಥವಾ ಇತರೆ ಯಾವುದೇ ರಾಜ್ಯಗಳ ಕೌನ್ಸೆಲಿಂಗ್‌ ನಲ್ಲಿ ವೈದ್ಯಕೀಯ ಸೀಟು ಹಂಚಿಕೆಯಾದರೆ, ಅಂತಹವರು ಎರಡನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶ ಪ್ರಕಟಿಸುವ ಮೊದಲೇ ಕೆಇಎ ಸೀಟ್‌ ಅನ್ನು ರದ್ದುಪಡಿಸಿಕೊಳ್ಳಬಹುದು. ಅಂತಹವರ ಮುಂಗಡ ಶುಲ್ಕವನ್ನು ಸೀಟು ಹಂಚಿಕೆಯಾದ ಕಾಲೇಜುಗಳಿಗೆ ವರ್ಗಾಯಿಸಲಾಗುವುದು. ಪರಿಶಿಷ್ಟ ಜಾತಿ/ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ ಶುಲ್ಕ ಮರುಪಾವತಿಸಲಾಗುವುದು ಎಂದು ವಿವರಿಸಿದ್ದಾರೆ.

    ಅಖಿಲ ಭಾರತ ಕೋಟಾ ಅಥವಾ ಇತರೆ ಯಾವುದೇ ರಾಜ್ಯಗಳ ಕೌನ್ಸೆಲಿಂಗ್‌ನಲ್ಲಿ ವೈದ್ಯಕೀಯ ಸೀಟು ಸಿಗದಿದ್ದರೂ ಕೆಇಎ ಮೂಲಕ ಹಂಚಿಕೆಯಾದ ಸೀಟು ರದ್ದುಪಡಿಸಿಕೊಳ್ಳಲು ಬಯಸಿದರೆ, ಅಂತಹವರ ಮುಂಗಡ ಶುಲ್ಕವನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು. ಪರಿಶಿಷ್ಟ ಜಾತಿ/ಪಂಗಡ, ಪ್ರವರ್ಗ-1ರ ಅಭ್ಯರ್ಥಿಗಳ ಎರಡು ಲಕ್ಷ ರೂಪಾಯಿ ಕೂಡ ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದು ಅವರು ಹೇಳಿದರು.

    ಛಾಯ್ಸ್‌ ಆಯ್ಕೆಗೆ ಆ.16ರವರೆಗೆ ಅವಕಾಶ ನೀಡಿದ್ದು, ಎಚ್ಚರಿಕೆಯಿಂದ ದಾಖಲಿಸಲು ಸಲಹೆ ನೀಡಿದ್ದಾರೆ. ರಾಜ್ಯದಲ್ಲಿ ವೈದ್ಯಕೀಯ ಸೇರಿದಂತೆ ಇತರ ಕೋರ್ಸ್‌ಗಳಲ್ಲಿ ಸೀಟು ಪಡೆದ 1,400 ಮಂದಿಗೆ ಅಖಿಲ ಭಾರತ ಕೋಟಾದಲ್ಲಿ ವೈದ್ಯಕೀಯ ಸೀಟು ಹಂಚಿಕೆಯಾಗಿದ್ದು, ಅಂತಹವರು ಅದೇ ಕೋಟಾದಲ್ಲೇ ಪ್ರವೇಶ ಪಡೆಯುವುದರಿಂದ ರಾಜ್ಯದ ಇತರರಿಗೆ ಅನುಕೂಲ ಆಗಲಿದೆ. ಈ ಬಗ್ಗೆ ಪೋಷಕರ ಜತೆ ಚರ್ಚಿಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳಿ ಎಂದು ಅವರು ಸಲಹೆ ನೀಡಿದ್ದಾರೆ.  ಇದನ್ನೂ ಓದಿ: ಮುಸ್ಲಿಂ ಯುವತಿಯರ ಮದುವೆಯಾದ್ರೆ 5 ಲಕ್ಷ ಘೋಷಣೆ ಹೇಳಿಕೆ ಯತ್ನಾಳ್ ವಿರುದ್ಧ ಎಫ್‌ಐಆರ್

    ಛಾಯ್ಸ್‌-1 ಆಯ್ಕೆ ಮಾಡಿದವರು ಆ.18ರೊಳಗೆ ಶುಲ್ಕ ಪಾವತಿಸಿ, ಸೀಟು ಖಾತರಿ ಚೀಟಿ ಡೌನ್‌ಲೋಡ್‌ ಮಾಡಿಕೊಂಡು, ಆ.19ರೊಳಗೆ ಕಾಲೇಜಿಗೆ ವರದಿ ಮಾಡಿಕೊಳ್ಳಬೇಕು. ಸ್ವಾತಂತ್ರ್ಯ ದಿನಾಚರಣೆ ದಿನ ಸೇರಿದಂತೆ ಎಲ್ಲ ರಜಾ ದಿನಗಳಲ್ಲೂ ಕಾರ್ಯನಿರ್ವಹಿಸಲು ಕಾಲೇಜುಗಳಿಗೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದರು.

  • ಪುತ್ತೂರಿಗೆ ಮೆಡಿಕಲ್ ಕಾಲೇಜು: ಬಜೆಟ್‌ನಲ್ಲಿ ವೈದ್ಯಕೀಯ, ಶಿಕ್ಷಣ ಕ್ಷೇತ್ರಕ್ಕೆ ಸಿಕ್ಕ ಕೊಡುಗೆಗಳೇನು?

    ಪುತ್ತೂರಿಗೆ ಮೆಡಿಕಲ್ ಕಾಲೇಜು: ಬಜೆಟ್‌ನಲ್ಲಿ ವೈದ್ಯಕೀಯ, ಶಿಕ್ಷಣ ಕ್ಷೇತ್ರಕ್ಕೆ ಸಿಕ್ಕ ಕೊಡುಗೆಗಳೇನು?

    ಬೆಂಗಳೂರು: ದಾಖಲೆಯ ಬಜೆಟ್ ಮಂಡಿಸಿದ 16 ನೇ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಅವರು ಶಿಕ್ಷಣ ಹಾಗೂ ವೈದ್ಯಕೀಯ ಕ್ಷೇತ್ರಕ್ಕೆ ಅನೇಕ ಕೊಡುಗೆಯನ್ನು ನೀಡಿದ್ದಾರೆ. ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪನೆ ಹಾಗೂ 100 ಹಾಸಿಗೆ ಸಾಮರ್ಥ್ಯದ ತಾಲ್ಲೂಕು ಆಸ್ಪತ್ರೆಯನ್ನು ಉನ್ನತೀಕರಿಸಲು ಕ್ರಮವಹಿಸಲಾಗುವುದು. ಚಿತ್ರದುರ್ಗದ ಮೊಳಕಾಲ್ಮೂರಿನಲ್ಲಿ 200 ಹಾಗೂ ಕೊಡಗಿಗೆ 400 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಗಳನ್ನು ಸ್ಥಾಪನೆ ಬಗ್ಗೆ ಘೋಷಿಸಿದ್ದಾರೆ.

    ವೈದ್ಯಕ್ಷೀಯ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಏನೆಲ್ಲಾ ಸಿಕ್ಕಿವೆ?
    ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಈಗಿರುವ 100 ಹಾಸಿಗೆ ಸಾಮರ್ಥ್ಯದ ತಾಲ್ಲೂಕು ಆಸ್ಪತ್ರೆಯನ್ನು ಉನ್ನತೀಕರಿಸಲು ಪ್ರಸಕ್ತ ವರ್ಷದಲ್ಲಿ ಕ್ರಮವಹಿಸಲಾಗುವುದು. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರಿನಲ್ಲಿ 200 ಹಾಸಿಗೆ ಹಾಗೂ ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ 400 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಗಳನ್ನು ಸ್ಥಾಪಿಸಲಾಗುವುದು. ಮೈಸೂರು ಜಿಲ್ಲೆಯ ತಗಡೂರು ಸಮುದಾಯ ಆರೋಗ್ಯ ಕೇಂದ್ರವನ್ನು 100 ಹಾಸಿಗೆ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲಾಗುತ್ತದೆ. ಇದನ್ನೂ ಓದಿ: ಚಿತ್ರರಂಗ ಕೇಳಿದ್ದೆಲ್ಲಾ ಸಿಎಂ ಕೊಡುತ್ತಲೇ ಬಂದಿದ್ದಾರೆ: ನರಸಿಂಹಲು

    ಹೆಚ್ಚಿನ ದುರಸ್ತಿ ಅಗತ್ಯವಿರುವ ಜಿಲ್ಲಾ ಆಸ್ಪತ್ರೆ ಮತ್ತು ತಾಲ್ಲೂಕು ಆಸ್ಪತ್ರೆಗಳನ್ನು 183 ಕೋಟಿ ರೂ. ವೆಚ್ಚದಲ್ಲಿ ಹಂತ ಹಂತವಾಗಿ ದುರಸ್ತಿಗೊಳಿಸಲಾಗುವುದು. ಕಲ್ಯಾಣ ಕರ್ನಾಟಕ ಸಂಪೂರ್ಣ ಆರೋಗ್ಯ ಅಭಿವೃದ್ಧಿ ಯೋಜನೆಯಡಿ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಒದಗಿಸಲು ಹಾಗೂ ಕಲ್ಯಾಣ ಕರ್ನಾಟಕ ಭಾಗದ ಆರೋಗ್ಯ ಸೂಚ್ಯಂಕವನ್ನು ವೃದ್ಧಿಸಲು ಒಟ್ಟು 873 ಕೋಟಿ ರೂ. ವೆಚ್ಚದಲ್ಲಿ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಲು ವಿವಿಧ ಕಾರ್ಯಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗುವುದು. ಇದನ್ನೂ ಓದಿ: ಹಾಲಿನ ದರ 5 ರೂ. ಹೆಚ್ಚಳಕ್ಕೆ ಚಿಂತನೆ: ಭೀಮಾನಾಯ್ಕ್

    ಶಿಕ್ಷಣ ಕ್ಷೇತ್ರ:
    ಪೂರ್ವ ಪ್ರಾಥಮಿಕದಿಂದ ಪದವಿ ಪೂರ್ವ ಹಂತದವರೆಗೂ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣ ನೀಡಲು ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಪ್ರಾರಂಭಿಸಲಾಗಿರುವ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ವಿಸ್ತರಿಸಲು ಉದ್ದೇಶಿಸಿದೆ. ಏಷಿಯನ್ ಡೆವಲಪ್‌ಮೆಂಟ್ ಬ್ಯಾಂಕ್ ನೆರವಿನೊಂದಿಗೆ 2,500 ಕೋಟಿ ರೂ. ವೆಚ್ಚದಲ್ಲಿ 500 ಹೊಸ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಲಾಗುವುದು. ಶಾಲಾ ಮಕ್ಕಳ ಅಪೌಷ್ಟಿಕತೆ ನಿವಾರಿಸುವ ನಿಟ್ಟಿನಲ್ಲಿ ಪ್ರಸ್ತುತ 53 ಲಕ್ಷ ಮಕ್ಕಳಿಗೆ ವಾರದಲ್ಲಿ ಎರಡು ದಿನ ವಿತರಿಸಲಾಗುತ್ತಿರುವ ಮೊಟ್ಟೆ, ಬಾಳೆಹಣ್ಣನ್ನು ಅಜೀಮ್ ಪ್ರೇಮ್‌ಜಿ ಫೌಂಡೇಶನ್ ಸಹಯೋಗದೊಂದಿಗೆ 1,500 ಕೋಟಿ ರೂ. ವೆಚ್ಚದಲ್ಲಿ ವಾರದಲ್ಲಿ ಆರು ದಿನಕ್ಕೆ ವಿಸ್ತರಿಸಲಾಗಿದೆ. ಇದನ್ನೂ ಓದಿ: ಮೈಸೂರಲ್ಲಿ ವಿಶ್ವದರ್ಜೆಯ ಫಿಲ್ಮ್ ಸಿಟಿ ನಿರ್ಮಾಣಕ್ಕೆ 500 ಕೋಟಿ ಮೀಸಲು – ತವರು ಜಿಲ್ಲೆಗೆ ಸಿಎಂ ಭರ್ಜರಿ ಗಿಫ್ಟ್

    ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರು ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಪ್ರಸ್ತುತ ನೀಡಲಾಗುತ್ತಿರುವ ಮಾಸಿಕ ಗೌರವಧನವನ್ನು ತಲಾ 2,000 ರೂ. ಹೆಚ್ಚಿಸಲಾಗುವುದು. ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟ ತಯಾರಿಸುವ ಸಿಬ್ಬಂದಿಗೆ ನೀಡುತ್ತಿರುವ ಮಾಸಿಕ ಗೌರವಧನವನ್ನು ತಲಾ 1,000 ರೂ. ಹೆಚ್ಚಿಸಲಾಗುವುದು. ಇದನ್ನೂ ಓದಿ: ಸರ್ಕಾರಿ ಗುತ್ತಿಗೆ, ಖರೀದಿಯಲ್ಲಿ ಮುಸ್ಲಿಮರಿಗೆ ಮೀಸಲಾತಿ – ಇದು ಹಣಕಾಸು ತಜ್ಞರ ಒಡೆದಾಳುವ ಆರ್ಥಿಕತೆ: ಸುನಿಲ್‌ ಕುಮಾರ್‌ ಕಿಡಿ

    ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಇಂಜಿನಿಯರಿಂಗ್ ಕಾಲೇಜುಗಳು ಮತ್ತು ಪಾಲಿಟೆಕ್ನಿಕ್‌ಗಳಲ್ಲಿ ಖಾಲಿಯಿರುವ 2,000 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮವಹಿಸಲಾಗುವುದು. ರಾಜ್ಯದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಸಂಸ್ಥೆಗಳು ಹಾಗೂ ಪದವಿ ಕಾಲೇಜುಗಳಿಗೆ ಒಟ್ಟಾರೆ 275 ಕೋಟಿ ರೂ. ವೆಚ್ಚದಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲಾಗುವುದು. ಇದನ್ನೂ ಓದಿ: ಪತ್ರಕರ್ತರಿಗೆ ‘ಮಾಧ್ಯಮ ಸಂಜೀವಿನಿ’ ಯೋಜನೆ – 5 ಲಕ್ಷ ರೂ. ನಗದು ರಹಿತ ಚಿಕಿತ್ಸೆ

    ಹೊಸದಾಗಿ ಪ್ರಾರಂಭಿಸಲಾದ ಪಾಲಿಟೆಕ್ನಿಕ್ ಹಾಗೂ ಇಂಜಿನಿಯರಿಂಗ್ ಕಾಲೇಜುಗಳಿಗೆ 10 ಕೋಟಿ ರೂ. ವೆಚ್ಚದಲ್ಲಿ ಪೀಠೋಪಕರಣಗಳು, ಉಪಕರಣಗಳು, ಕಂಪ್ಯೂಟರ್‌ಗಳು ಹಾಗೂ ಪುಸ್ತಕಗಳನ್ನು ಒದಗಿಸಲಾಗುವುದು. ಕೆಕೆಆರ್‌ಡಿಬಿ ವತಿಯಿಂದ 23,000 ವಿದ್ಯಾರ್ಥಿಗಳಿಗೆ ವಿಶೇಷ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳನ್ನು 10 ಕೋಟಿ ರೂ. ವೆಚ್ಚದಲ್ಲಿ ಹಮ್ಮಿಕೊಳ್ಳಲಾಗುವುದು. ಪ್ರೊ. ನಂಜುಂಡ ಸ್ವಾಮಿ ಸಂಶೋಧನಾ ಪೀಠವನ್ನು ಮೈಸೂರು ವಿಶ್ವವಿದ್ಯಾಲಯದಲ್ಲಿ ಪ್ರಾರಂಭಿಸಲಾಗುವುದು ಎಂದು ಬಜೆಟ್‌ನಲ್ಲಿ ಘೋಷಿಸಿದ್ದಾರೆ.

  • ವೈದ್ಯಕೀಯ, ಎಂಜಿನಿಯರಿಂಗ್ ಸೇರಿ ಎಲ್ಲಾ ಕೋರ್ಸ್‌ಗಳಿಗೂ ಒಟ್ಟಿಗೆ ಸಿಇಟಿ ಸೀಟು ಹಂಚಿಕೆ – ಹೊಸ ವ್ಯವಸ್ಥೆ ಹೇಗೆ ಕೆಲಸ ಮಾಡುತ್ತೆ?

    ವೈದ್ಯಕೀಯ, ಎಂಜಿನಿಯರಿಂಗ್ ಸೇರಿ ಎಲ್ಲಾ ಕೋರ್ಸ್‌ಗಳಿಗೂ ಒಟ್ಟಿಗೆ ಸಿಇಟಿ ಸೀಟು ಹಂಚಿಕೆ – ಹೊಸ ವ್ಯವಸ್ಥೆ ಹೇಗೆ ಕೆಲಸ ಮಾಡುತ್ತೆ?

    ಬೆಂಗಳೂರು: ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಇದುವರೆಗೂ ಪ್ರತ್ಯಕವಾಗಿಯೇ ಸೀಟು ಹಂಚಿಕೆ ಪ್ರಕ್ರಿಯೆ ನಡೆಸುತ್ತಿದ್ದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಪ್ರಸಕ್ತ ಸಾಲಿನಿಂದ (2023-24) ಎಲ್ಲವನ್ನೂ ಒಟ್ಟಿಗೆ ನಡೆಸಲು ತೀರ್ಮಾನಿಸಿದೆ.

    ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮತ್ತು ಅನಗತ್ಯ ವಿಳಂಬವನ್ನು ತಪ್ಪಿಸುವ ಉದ್ದೇಶದಿಂದ ಈ ಸುಧಾರಣಾ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ತಿಳಿಸಿದ್ದಾರೆ. ವೈದ್ಯಕೀಯ, ದಂತ ವೈದ್ಯಕೀಯ, ಎಂಜಿನಿಯರಿಂಗ್, ಪಶುವೈದ್ಯ, ಕೃಷಿ, ನರ್ಸಿಂಗ್, ಆರ್ಕಿಟೆಕ್ಟ್ ಹಾಗೂ ಫಾರ್ಮಸಿ ಕೋರ್ಸ್‌ಗಳ ಪ್ರವೇಶಕ್ಕೆ ಸಂಯೋಜಿತ ಸೀಟು ಹಂಚಿಕೆ (Combined Seat Allotment) ಪ್ರಕ್ರಿಯೆಯನ್ನು ನಡೆಸಲಾಗುತ್ತದೆ. ಹೀಗೆ ಮಾಡುತ್ತಿರುವುದು ಇದೇ ಮೊದಲು ಎಂದು ರಮ್ಯಾ ವಿವರಿಸಿದ್ದಾರೆ. ಇದನ್ನೂ ಓದಿ: ಮಂಗಳವಾರ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಲಾ, ಕಾಲೇಜುಗಳಿಗೆ ರಜೆ

    ಪ್ರತ್ಯೇಕ ಸೀಟು ಹಂಚಿಕೆ ಪ್ರಕ್ರಿಯೆಯಿಂದಾಗಿ ಸಾಕಷ್ಟು ಅನಾನುಕೂಲಗಳು ಇದ್ದವು. ಒಬ್ಬ ಅಭ್ಯರ್ಥಿ ಒಮ್ಮೆಗೆ ಒಂದಕ್ಕಿಂತ ಹೆಚ್ಚು ಕೋರ್ಸ್‌ಗಳಲ್ಲಿ ಸೀಟು ಪಡೆದು, ನಂತರ ಆತ ಯಾವುದಾದರು ಒಂದಕ್ಕೆ ಪ್ರವೇಶ ಪಡೆಯುವವರೆಗೂ ಉಳಿದ ಕೋರ್ಸ್‌ಗಳಲ್ಲಿನ ಸೀಟು ಬೇರೆಯ ಅಭ್ಯರ್ಥಿಗಳಿಗೆ ಲಭ್ಯವಾಗುತ್ತಿರಲಿಲ್ಲ. ಇದರಿಂದ ಪ್ರತಿಭಾವಂತರಿಗೆ ಆಯ್ಕೆ ಸುತ್ತಿನಲ್ಲಿ ಸೀಟು ಕೈತಪ್ಪುತ್ತಿತ್ತು ಎಂದು ನಿರ್ದೇಶಕಿ ರಮ್ಯಾ ಹೇಳಿದ್ದಾರೆ. ಅಲ್ಲದೇ ಅಭ್ಯರ್ಥಿಗಳು ಯಾವುದೇ ಕೋರ್ಸ್‌ಗಳಿಗೆ ಪ್ರವೇಶ ಬಯಸಿದ್ದಲ್ಲಿ ಸೀಟ್ ಮ್ಯಾಟ್ರಿಕ್ಸ್ ಪ್ರಕಾರ ಶುಲ್ಕ ಮತ್ತು ಲಭ್ಯವಿರುವ ಸೀಟುಗಳನ್ನು ಪರಿಶೀಲಿಸಿ, ನಂತರ ತಮ್ಮ ಆದ್ಯತೆಯನುಸಾರ ಸೀಟುಗಳ ಆಯ್ಕೆಯನ್ನು ನಮೂದಿಸಬೇಕು ಎಂದು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಆ.10 ಡೆಡ್‌ಲೈನ್ – ಬಂದ್ ಹಿಂಪಡೆದ ಖಾಸಗಿ ಸಾರಿಗೆ ಸಂಘಟನೆಗಳು

    ಹೊಸ ವ್ಯವಸ್ಥೆ ಹೇಗೆ ಕೆಲಸ ಮಾಡುತ್ತೆ?
    ಅಭ್ಯರ್ಥಿಯು ಆಯ್ಕೆಯನ್ನು ನಮೂದಿಸುವಾಗ ತನ್ನ ಮೊದಲ ಆದ್ಯತೆಯ ಕೋರ್ಸ್‌ಗಳನ್ನು ಮೊದಲು ದಾಖಲಿಸಬೇಕು. ಒಂದು ವೇಳೆ ಮೊದಲ ಆದ್ಯತೆಯ ಕೋರ್ಸ್ ಸಿಗದಿದ್ದರೆ ಅದರ ನಂತರದ ಆಯ್ಕೆಯ ಕೋರ್ಸ್ ಯಾವುದು ಎನ್ನುವುದನ್ನು ಎರಡನೇ ಆದ್ಯತೆಯಾಗಿ ದಾಖಲಿಸಬೇಕು. ಉದಾಹರಣೆಗೆ ವೈದ್ಯಕೀಯ (Medical) ಕೋರ್ಸ್ ಬೇಕೆಂದು ಮೊದಲ ಆದ್ಯತೆ ನೀಡುವ ಅಭ್ಯರ್ಥಿ, ಒಂದು ವೇಳೆ ಅದು ಸಿಗದಿದ್ದಾಗ ತನ್ನ ಆದ್ಯತೆ ಎಂಜಿನಿಯರಿಂಗ್ (Engineering) ಎನ್ನುವುದನ್ನು ದಾಖಲಿಸಬೇಕು. ಆಗ ವೈದ್ಯಕೀಯ ಸೀಟು ಸಿಗದಿದ್ದಾಗ ನಂತರದ ಆದ್ಯತೆಯಾದ ಎಂಜಿನಿಯರಿಂಗ್‌ನಲ್ಲಿ ಸೀಟು ಹಂಚಿಕೆ ಆಗುತ್ತದೆ. ಇದೇ ರೀತಿ ಸೀಟ್ ಮ್ಯಾಟ್ರಿಕ್ಸ್ ಪ್ರಕಾರ ಎಷ್ಟು ಕೋರ್ಸ್‌ಗಳು ಇವೆಯೋ ಅಷ್ಟೂ ಕೋರ್ಸ್‌ಗಳಿಗೆ ಆದ್ಯತೆಯನುಸಾರ ತನ್ನ ಆಯ್ಕೆಯನ್ನು ನಮೂದಿಸುವ ಮೂಲಕ ಸೀಟು ಪಡೆಯಬಹುದು.

    ಅಭ್ಯರ್ಥಿಯ ಮೆರಿಟ್, ಮೀಸಲಾತಿ ಹಾಗೂ ಆಯ್ಕೆಯ ನಮೂದಿನ ಆಧಾರದ ಮೇಲೆ ಮೊದಲ ಸುತ್ತಿನ ಸೀಟು ಹಂಚಿಕೆ ನಡೆಯುತ್ತದೆ. ಕೆಲ ಅಭ್ಯರ್ಥಿಗಳಿಗೆ ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಎರಡೂ ಕೋರ್ಸ್‌ಗಳಲ್ಲಿ ಸೀಟು ದೊರೆಯುವ ಸಾಧ್ಯತೆ ಇರುತ್ತದೆ. ಅಂತಹವರು ಚಾಯ್ಸ್ ಎಂಟ್ರಿ ಸ್ಕ್ರೀನ್‌ನಲ್ಲಿ ವೈದ್ಯಕೀಯ ಅಥವಾ ಎಂಜಿನಿಯರಿಂಗ್ ಒಂದನ್ನು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ. ನಂತರ ಚಲನ್ ಮೂಲಕ ಶುಲ್ಕ ಪಾವತಿಸಿ ಅಡ್ಮಿಷನ್ ಆರ್ಡರ್ ಅನ್ನು ಆನ್‌ಲೈನ್ ಮೂಲಕ ಪಡೆದು ಸಂಬಂಧಪಟ್ಟ ಕಾಲೇಜಿಗೆ ವರದಿ ಮಾಡಿಕೊಳ್ಳಬೇಕಾಗುತ್ತದೆ. ಬಳಿಕ ಅದನ್ನು ಕಾಲೇಜಿನ ಪೋರ್ಟಲ್‌ನಲ್ಲಿ ತಪ್ಪದೇ ಅಪ್‌ಡೇಟ್ ಮಾಡಿಸಬೇಕು. ಒಂದು ವೇಳೆ ಹಾಗೆ ಮಾಡದಿದ್ದರೆ ಸದರಿ ಸೀಟು ಖಾಲಿ ಇದೆ ಎಂದು ಭಾವಿಸಿ ಅದನ್ನು ಮುಂದಿನ ಸುತ್ತಿನ ಹಂಚಿಕೆಗೂ ಬಳಸಿಕೊಳ್ಳುವ ಸಾಧ್ಯತೆಯಿರುತ್ತದೆ.

    ಎರಡನೇ ಸುತ್ತಿನ ಸೀಟು ಹಂಚಿಕೆಯಲ್ಲಿ ಅಭ್ಯರ್ಥಿ ನಮೂದಿಸಿರುವ ಆಯ್ಕೆಯ ಪ್ರಕಾರ ಯಾವುದಾದರೊಂದು ಕೋರ್ಸ್‌ನಲ್ಲಿ (ವೈದ್ಯಕೀಯ, ಎಂಜಿನಿಯರಿಂಗ್, ಪಶುವೈದ್ಯ ಇತ್ಯಾದಿ) ಸೀಟು ಪಡೆಯಬೇಕು. ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್‌ಗಳಲ್ಲಿ ಎರಡನೇ ಸುತ್ತಿನ ಸೀಟು ಹಂಚಿಕೆಯ ನಂತರ ಕಡ್ಡಾಯವಾಗಿ ತಮಗೆ ಹಂಚಿಕೆಯಾದ ಸೀಟಿಗೆ ಶುಲ್ಕ ಪಾವತಿಸಿ ಪ್ರವೇಶ ಪಡೆಯಬೇಕು. ಇಲ್ಲದಿದ್ದರೆ ಸದರಿ ಸೀಟುಗಳನ್ನು ದಂಡದ ಮೊತ್ತ ಪಾವತಿಸಿ ರದ್ದುಪಡಿಸಬೇಕು. ಎರಡನೇ ಸುತ್ತಿನಲ್ಲಿ ವೈದ್ಯಕೀಯ ಸೀಟು ಹಂಚಿಕೆಯಾದ ಅಭ್ಯರ್ಥಿಗಳಿಗೆ ಮಾಪ್‌ಅಪ್ ಸುತ್ತಿನಲ್ಲಿ ಭಾಗವಹಿಸಲು ಅರ್ಹತೆ ಇರುವುದಿಲ್ಲ. ಆದರೆ ಎರಡನೇ ಸುತ್ತಿನಲ್ಲಿ ದಂತ ವೈದ್ಯಕೀಯ ಸೀಟು ದೊರೆತ ಅಭ್ಯರ್ಥಿಗಳು ಸೀಟನ್ನು ರದ್ದುಪಡಿಸದೇ ವೈದ್ಯಕೀಯ ಕೋರ್ಸ್‌ನ ಮಾಪ್‌ಅಪ್ ಸುತ್ತಿನಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದೆ.

    ಎಂಜಿನಿಯರಿಂಗ್ ಸೀಟುಗಳಿಗೆ ಮೂರನೇ ಸುತ್ತಿನವರೆಗೂ ಭಾಗವಹಿಸಬಹುದು. ಆದರೆ ಎರಡನೇ ಸುತ್ತಿನಲ್ಲಿ ಸೀಟು ಹಂಚಿಕೆಯಾದಲ್ಲಿ ಶುಲ್ಕ ಪಾವತಿಸುವುದು ಕಡ್ಡಾಯವಾಗಿರುತ್ತದೆ. ಮೂರನೇ ಸುತ್ತಿನ ಸೀಟು ಹಂಚಿಕೆಯಲ್ಲಿ ಚಾಯ್ಸ್-3 ಕೊಟ್ಟಿರುವ ಅಭ್ಯರ್ಥಿಗಳು ಹಾಗೂ ಯಾವುದೇ ಸೀಟು ಹಂಚಿಕೆಯಾಗದ ಅಭ್ಯರ್ಥಿಗಳ ಮೊದಲೆರಡು ಸುತ್ತಿನಲ್ಲಿ ನಮೂದಿಸಿದ್ದ ಆಯ್ಕೆಗಳನ್ನು ಡಿಲೀಟ್ ಮಾಡಲಾಗಿರುತ್ತದೆ. ಅಭ್ಯರ್ಥಿಯು ಮೂರನೇ ಸುತ್ತಿಗೆ ಹೊಸದಾಗಿ ಆಯ್ಕೆಯನ್ನು ನಮೂದಿಸಬೇಕು. ಮೂರನೇ ಸುತ್ತಿನಲ್ಲಿ ಹಂಚಿಕೆಯಾದ ಸೀಟನ್ನು ರದ್ದುಪಡಿಸಲು ಎಲ್ಲಾ ವರ್ಗದ ಅಭ್ಯರ್ಥಿಗಳು ಶುಲ್ಕದ ಐದು ಪಟ್ಟು ದಂಡ ಕಟ್ಟಬೇಕಾಗುತ್ತದೆ. ಹೀಗಾಗಿ ಅಭ್ಯರ್ಥಿಗಳು ಎಚ್ಚರಿಕೆಯಿಂದಲೇ ಮೂರನೇ ಸುತ್ತಿನ ಆಯ್ಕೆಯನ್ನು ನಮೂದಿಸಬೇಕು.

    ಮಾಪ್‌ಅಪ್ ಸುತ್ತು:
    ಎರಡನೇ ಸುತ್ತಿನಲ್ಲಿ ಎಂಜಿನಿಯರಿಂಗ್, ನರ್ಸಿಂಗ್, ಆರ್ಕಿಟೆಕ್ಚರ್, ಪಶುವೈದ್ಯಕೀಯ, ಕೃಷಿ ಸೀಟು ದೊರೆತ ಅಭ್ಯರ್ಥಿಗಳು ದಂಡ ಪಾವತಿಸಿ, ತಮ್ಮ ಸೀಟನ್ನು ರದ್ದುಪಡಿಸಿದ ನಂತರವೇ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ನ ಮಾಪ್‌ಅಪ್ ಸುತ್ತಿನಲ್ಲಿ ಭಾಗವಹಿಸಬಹದು. ಅದೇ ರೀತಿ ಎರಡನೇ ಸುತ್ತಿನಲ್ಲಿ ವೈದ್ಯಕೀಯ, ದಂತ ವೈದ್ಯಕೀಯ ಸೀಟುಗಳು ಹಂಚಿಕೆಯಾದ ಅಭ್ಯರ್ಥಿಗಳು ಸದರಿ ಸೀಟುಗಳನ್ನು ದಂಡ ಪಾವತಿಸಿ ರದ್ದುಪಡಿಸಿದ ನಂತರ ಎಂಜಿನಿಯರಿಂಗ್ ಮಾಪ್‌ಅಪ್ ಸುತ್ತಿನಲ್ಲಿ ಭಾಗವಹಿಸಬಹುದು. ಇದನ್ನೂ ಓದಿ: ಗೃಹಲಕ್ಷ್ಮಿ ನೋಂದಣಿಗೆ ಹಣ ವಸೂಲಿ – ಸೈಬರ್ ಕೇಂದ್ರಗಳಿಗೆ ಬೀಗ ಜಡಿದ ಅಧಿಕಾರಿಗಳು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಂಡ ಕಂಡಲ್ಲಿ ಉಗೀಬೇಡಿ – ಎಂಜಲು ರಸ ಮಾರಿಯೇ ತಿಂಗಳಿಗೆ 40 ಲಕ್ಷ ಸಂಪಾದಿಸ್ತಾಳೆ ಈ ಮಹಿಳೆ

    ಕಂಡ ಕಂಡಲ್ಲಿ ಉಗೀಬೇಡಿ – ಎಂಜಲು ರಸ ಮಾರಿಯೇ ತಿಂಗಳಿಗೆ 40 ಲಕ್ಷ ಸಂಪಾದಿಸ್ತಾಳೆ ಈ ಮಹಿಳೆ

    ಲಂಡನ್‌: ಸಾಮಾನ್ಯವಾಗಿ ಕಂಡ ಕಂಡಲ್ಲಿ ಉಗಿಯುವುದು ಕೆಲವರಿಗೆ ಅಭ್ಯಾಸವಾಗಿಬಿಟ್ಟಿರುತ್ತೆ. ಇದನ್ನ ನೋಡಿದ್ರೆ ಕೆಲವರಿಗೆ ಅಸಹ್ಯ ಎನಿಸಬಹುದು. ಆದ್ರೆ ಇಲ್ಲೊಬ್ಬಳು ಮಹಿಳೆ ತನ್ನ ಎಂಜಲು ರಸವನ್ನೇ (ಲಾಲಾ ರಸ) ಮಾರಾಟ (Spit Selling) ಮಾಡಿ ತಿಂಗಳಿಗೆ ಬರೋಬ್ಬರಿ 40 ಲಕ್ಷ ರೂ. ಸಂಪಾದಿಸುತ್ತಿದ್ದಾಳೆ. ಅಸಾಧ್ಯವೆನಿಸಿದರೂ ನೀವು ಇದನ್ನ ನಂಬಲೇಬೇಕು.

    ಹೌದು.. ವೈದ್ಯೆ ಆಗಬೇಕೆಂದುಕೊಂಡಿದ್ದ UKನ ಮ್ಯಾಂಚೆಸ್ಟರ್‌ನ ನಿವಾಸಿ ಲತೀಶಾ ಜೋನ್ಸ್‌ (Latiesha Jones) ಇದೀಗ ತನ್ನ ಎಂಜಲು ರಸವನ್ನ ಮಾರಾಟ ಮಾಡಿ ತಿಂಗಳಿಗೆ 40 ಲಕ್ಷ ಸಂಪಾದಿಸುತ್ತಿದ್ದಾಳೆ. ಅದು ಹೇಗೆ ಅಂತೀರಾ ಮುಂದೆ ನೋಡಿ…

    ವೈದ್ಯೆ (Doctor) ಆಗಬೇಕೆಂದು ಬಯಸಿದ್ದ ಲತೀಶಾ ಜೋನ್ಸ್‌ಗೆ ಆರ್ಥಿಕ ಸಂಕಷ್ಟ ಎದುರಾಗಿತ್ತು. ಆಗ ಟೆಸ್ಕೊ ಎಂಬ ಕಿರಾಣಿ ಅಂಗಡಿಯಲ್ಲಿ ಪಾರ್ಟ್‌ಟೈಮ್‌ ಕೆಲಸಕ್ಕೆ ಹೋಗುತ್ತಿದ್ದಳು. ಅದೂ ಸಾಕಾಗದೇ ಇದ್ದಾಗ, ಆಕೆ ಜಾಲತಾಣದಲ್ಲಿ ಓನ್ಲಿ ಫ್ಯಾನ್ಸ್‌ ಖಾತೆಯೊಂದನ್ನ ತೆರೆದು ವೀಡಿಯೋ ಮಾಡಲು ಪ್ರಾರಂಭಿಸಿದ್ದಳು. ಆಗ ವೀಕ್ಷಕರು ಆಕೆಗೆ ವಿಚಿತ್ರವಾದ ಬೇಡಿಕೆಗಳನ್ನ ಮುಂದಿಟ್ಟರು. ಇದೇ ಅವಳನ್ನು ಉಗುಳು ಮಾರಾಟ ಮಾಡಲು ದಾರಿ ಮಾಡಿಕೊಟ್ಟಿತು. ಇದನ್ನೂ ಓದಿ: ಕಾಮೋತ್ತೇಜಕ ಮಾತ್ರೆ ಸೇವಿಸಿ 24 ಗಂಟೆ ನಿರಂತರ ಸೆಕ್ಸ್‌, 50ರ ವೃದ್ಧ ಸೀದಾ ಆಸ್ಪತ್ರೆಗೆ – ಆಮೇಲೆ ಏನಾಯ್ತು?

    ಈ ಬಗ್ಗೆ ಇಂಟರೆಸ್ಟಿಂಗ್‌ ಸಂಗತಿಯೊಂದನ್ನ ಹೇಳಿಕೊಡಿರುವ ಲತೀಶಾ ಅದು ಹೇಗೆ ಪ್ರಾರಂಭವಾಯಿತು ಎಂಬುದನ್ನ ತಿಳಿಸಿದ್ದಾರೆ. ಒಮ್ಮೆ ಯಾರೋ ಒಬ್ಬರು ತನ್ನ ಉಗುಳನ್ನು ಕಳುಹಿಸಿಕೊಡುವಂತೆ ಕೇಳಿದ್ದರು. ತಕ್ಷಣಕ್ಕೆ ನಾನು ಇದು ಜೋಕ್‌ ಇರಬೇಕು ಅಂದುಕೊಂಡು 30 ಸಾವಿರ ರೂ. (372 ಡಾಲರ್‌) ಕಳುಹಿಸುವಂತೆ ಕೇಳಿದೆ. ನನ್ನ ಬ್ಯಾಂಕ್‌ ಡಿಟೇಲ್ಸ್‌ ಪಡೆದ ಆ ವ್ಯಕ್ತಿ ತಕ್ಷಣವೇ ಹಣ ಹಾಕಿಬಿಟ್ಟ. ನನಗೆ ಒಂದು ಕ್ಷಣ ನಂಬೋದಕ್ಕೆ ಸಾಧ್ಯವಾಲಿಲ್ಲ ಎಂದು ಲತೀಶಾ ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಕೋವಿಡ್‌ಗಿಂತಲೂ ಭಯಾನಕ – ಮುಂದಿನ ಸಾಂಕ್ರಾಮಿಕ ಎದುರಿಸಲು ಸಿದ್ಧರಾಗಿ: WHO ಎಚ್ಚರಿಕೆ



    ಆ ನಂತರ ಅದೇ ವೃತ್ತಿಯನ್ನ ಲತೀಶಾ ಮುಂದುವರಿಸಿದ್ದಾಳೆ. ಕಳೆದ 4 ವರ್ಷಗಳಿಂದಲೂ ಎಂಜಲು ರಸ ಮಾರಾಟ ಮಾಡುತ್ತಿದ್ದು, ತನಗಿದ್ದ 9.10 ಲಕ್ಷ ರೂ. (11,000 ಸಾವಿರ ಡಾಲರ್‌) ಸಾಲವನ್ನೂ ಮರುಪಾವತಿ ಮಾಡಿದ್ದಾಳೆ. ಜೊತೆಗೆ ಪಾರ್ಟ್‌ಟೈಮ್‌ ಕೆಲಸವನ್ನೂ ತೊರೆದಿದ್ದಾಳೆ. ಅಂದು ಹಣವಿಲ್ಲದೇ ಪಾರ್ಟ್‌ಟೈಮ್‌ ಕೆಲಸ ಮಾಡುತ್ತಿದ್ದ ಈಕೆ ಎಂಜಲು ರಸ ಮಾರಾಟದಿಂದಲೇ ಆಸ್ತಿಯನ್ನೂ ಖರೀದಿ ಮಾಡಿದ್ದು, ಪೂರ್ಣ ಹಣವನ್ನೂ ನಗದು ರೂಪದಲ್ಲೇ ಪಾವತಿಸಿದ್ದಾಳೆ. ಲತೀಶಾ ತನ್ನ ಉಗುಳು ಮಾತ್ರವಲ್ಲ, ತನ್ನ ವಾರದ ಬೆಡ್‌ಶೀಟ್‌ಗಳು, ಬೆವರು ಒರೆಸಿದ ಜಿಮ್ ಬಟ್ಟೆಗಳು, ಕೊಳಕು ಟೂತ್ ಬ್ರಷ್‌ಗಳು ಮತ್ತು ಕಾಲ್ಬೆರಳ ಉಗುರುಗಳನ್ನೂ ಅಭಿಮಾನಿ ಗ್ರಾಹಕರಿಗೆ ಮಾರಾಟ ಮಾಡುತ್ತಾ, ಸಿಕ್ಕಾಪಟ್ಟೆ ಹಣ ಗಳಿಸುತ್ತಿದ್ದಾಳೆ.

    ಎರಡೇ ವರ್ಷದಲ್ಲಿ ವೈದ್ಯಕೀಯ ಶಿಕ್ಷಣ ತೊರೆದು ಈಗ ರಾಣಿಯಂತೆ ಮೆರೆಯುತ್ತಿದ್ದಾಳೆ. ಮೊದಲು ದಿನಕ್ಕೆ 30 ಸಾವಿರ ರೂ. ಪಡೆಯುತ್ತಿದ್ದ ಲತೀಶಾ ಈಗ ಒಂದು ಸಣ್ಣ ಬಾಟಲಿಯಷ್ಟು ಎಂಜಲು ರಸಕ್ಕೆ 1.50 ಲಕ್ಷ ರೂ.ಗಳಿಗಿಂತ ಕಡಿಮೆ ಮುಟ್ಟೋದೇ ಇಲ್ಲ ಅಂತಿದ್ದಾಳೆ. ಈಕೆಯ ಎಂಜಲು ರಸಕ್ಕೆ ಇಷ್ಟೊಂಡು ಡಿಮ್ಯಾಂಡ್‌ ಇದೆಯಾ ಅಂತಾ ನೆಟ್ಟಿಗರು ಮೂಗಿನ ಮೇಲೆ ಬೆರಳಿಟ್ಟಿದ್ದಾರೆ.

  • ವೈದ್ಯಕೀಯ ತಪಾಸಣೆಗೆ ವಿದೇಶಕ್ಕೆ ಸೋನಿಯಾ – ಸಾಥ್‌ ನೀಡಲಿದ್ದಾರೆ ರಾಹುಲ್‌, ಪ್ರಿಯಾಂಕಾ

    ವೈದ್ಯಕೀಯ ತಪಾಸಣೆಗೆ ವಿದೇಶಕ್ಕೆ ಸೋನಿಯಾ – ಸಾಥ್‌ ನೀಡಲಿದ್ದಾರೆ ರಾಹುಲ್‌, ಪ್ರಿಯಾಂಕಾ

    ನವದೆಹಲಿ: ವೈದ್ಯಕೀಯ ತಪಾಸಣೆಗಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿದೇಶಕ್ಕೆ ತೆರಳಲಿದ್ದಾರೆ. ತಾಯಿಯ ಜೊತೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ  ವಿಮಾನ ಹತ್ತಲಿದ್ದಾರೆ.

    “ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವೈದ್ಯಕೀಯ ತಪಾಸಣೆಗಾಗಿ ವಿದೇಶಕ್ಕೆ ತೆರಳಲಿದ್ದಾರೆ. ಅವರು ದೆಹಲಿಗೆ ಹಿಂದಿರುಗುವ ಮೊದಲು ಅನಾರೋಗ್ಯದಿಂದ ಬಳಲುತ್ತಿರುವ ತಮ್ಮ ತಾಯಿಯನ್ನು ಸಹ ಭೇಟಿ ಮಾಡಲಿದ್ದಾರೆ” ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಮುಂಬೈನ ಗಣಪತಿಗೆ 316.40 ಕೋಟಿ ರೂ. ವಿಮೆ

    ಯಾವುದೇ ನಿರ್ದಿಷ್ಟ ಪ್ರಯಾಣದ ದಿನಾಂಕ ಅಥವಾ ಅವರ ಭೇಟಿಯ ಸ್ಥಳಗಳನ್ನು ಅವರು ತಿಳಿಸಿಲ್ಲ. ಆದರೆ ಸೆಪ್ಟೆಂಬರ್ 4 ರಂದು ದೆಹಲಿಯಲ್ಲಿ ನಡೆಯಲಿರುವ ಕಾಂಗ್ರೆಸ್‌ನ ‘ಮೆಹಂಗೈ ಪರ್ ಹಲ್ಲಾ ಬೋಲ್’ ರ್‍ಯಾಲಿಯನ್ನು ಉದ್ದೇಶಿಸಿ ರಾಹುಲ್ ಗಾಂಧಿ ಮಾತನಾಡಲಿದ್ದಾರೆ ಎಂದು ಹೇಳಿದ್ದಾರೆ.

    ಕನ್ಯಾಕುಮಾರಿಯಿಂದ ಕಾಶ್ಮೀರಕ್ಕೆ ‘ಭಾರತ್ ಜೋಡೋ ಯಾತ್ರೆ’ಗೆ ಕಾಂಗ್ರೆಸ್‌ ತಯಾರಿ ನಡೆಸುತ್ತಿದ್ದು, ಸೆಪ್ಟೆಂಬರ್ 7 ರಿಂದ ಆರಂಭವಾಗಲಿದೆ. ಈ ದೊಡ್ಡ ಕಾರ್ಯಕ್ರಮಕ್ಕೆ ಪಕ್ಷ ತಯಾರಿ ನಡೆಸುತ್ತಿವಾಗಲೇ ತಾಯಿಯ ಜೊತೆ ರಾಹುಲ್‌, ಪ್ರಿಯಾಂಕಾ ಗಾಂಧಿ ವಿದೇಶ ಪ್ರವಾಸ ಕೈಗೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • 16 ಕೋಟಿ ಇಂಜೆಕ್ಷನ್ ಕೊಟ್ರೆ ಉಳಿಯುತ್ತಂತೆ ಮಗು – ಕಂದನನ್ನು ಉಳಿಸಿಕೊಡುವಂತೆ ಅಂಗಲಾಚಿದ ದಂಪತಿ

    16 ಕೋಟಿ ಇಂಜೆಕ್ಷನ್ ಕೊಟ್ರೆ ಉಳಿಯುತ್ತಂತೆ ಮಗು – ಕಂದನನ್ನು ಉಳಿಸಿಕೊಡುವಂತೆ ಅಂಗಲಾಚಿದ ದಂಪತಿ

    – ಮಗುವನ್ನ ಉಳಿಸಲು ಸಹಾಯ ಬೇಡುತ್ತಿರುವ ಪೋಷಕರು

    ರಾಯಚೂರು: ಇಲ್ಲಿನ ವಿರೇಶ್- ಶ್ವೇತಾ ದಂಪತಿಯ ಒಂದು ವರ್ಷದ ಮಗು ಸಾತ್ವಿಕ್ ನಂದನ್ ಸ್ಪೈನಲ್‌ ಮಸ್ಕೂಲರ್ ಆಟ್ರೋಪಿ ಟೈಪ್-1 ಕಾಯಿಲೆಯಿಂದ ಬಳಲುತ್ತಿದ್ದು, ಸಹಾಯಕ್ಕಾಗಿ ಪೋಷಕರು ಅಂಗಲಾಚುತ್ತಿದ್ದಾರೆ.

    ಮಗು ಒಂದು ತಿಂಗಳು ಇದ್ದಾಗಲೇ ಸ್ಪೈನಲ್‌ ಮಸ್ಕೂಲರ್ ಆಟ್ರೋಪಿ ಟೈಪ್-1 ಮಾರಣಾಂತಿಕ ಕಾಯಿಲೆ ಕಾಣಿಸಿಕೊಂಡಿದೆ. ಮೊದಲು ನ್ಯುಮೋನಿಯಾ ಅಂದುಕೊಂಡಿದ್ದ ಇವರು ಹತ್ತಾರು ಆಸ್ಪತ್ರೆಗಳಿಗೆ ಅಲೆದಾಡಿದ್ದಾರೆ. ಇದೀಗ ಈ ಕಾಯಿಲೆಯಿಂದ ಗುಣಪಡಿಸಲು ವೈದ್ಯರು ಔಷಧ ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಪ್ರತಿಭಟನೆ ವೇಳೆ ಕಾಂಗ್ರೆಸ್‌ ಮುಖಂಡನ ಕೂದಲು ಹಿಡಿದು ಜೀಪಿನೊಳಗೆ ದಬ್ಬಿದ ಪೊಲೀಸರು

    16 ಕೋಟಿ ರೂ. ಮೌಲ್ಯದ ಜೋಲ್ಗಸ್ಮಾ ಎಂಬ ಇಂಜೆಕ್ಷನ್ ಕೊಡಿಸಬೇಕು. ಇದೊಂದೆ ಮಗುವಿನ ಕಾಯಿಲೆಗೆ ಚಿಕಿತ್ಸೆ. ಇಲ್ಲದಿದ್ದರೆ ಮಗು ಬದುಕುಳಿಯುವುದಿಲ್ಲ ಎಂದು ಹೇಳಿದ್ದಾರೆ. ಆದರೆ ಈ ಚುಚ್ಚುಮದ್ದು ಭಾರತದಲ್ಲಿ ಸಿಗೋದಿಲ್ಲ, ಅಮೆರಿಕದಿಂದ ತರಿಸಬೇಕು. ಆದರೆ ತಿಂಗಳಿಗೆ 8 ಸಾವಿರ ವೇತನ ಪಡೆಯುವ ತಂದೆ ವಿರೇಶ್ ಕಳೆದ ಒಂದು ತಿಂಗಳಿನಿಂದ ಬೆಂಗಳೂರಿನ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಮಗುವನ್ನು ದಾಖಲಿಸಿ, ಸಾಲ ಮಾಡಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಕಳೆದ ಒಂದು ತಿಂಗಳಿನಿಂದ ಈಗಾಗಲೇ ಸುಮಾರು 5 ಲಕ್ಷ ರೂ. ಖರ್ಚಾಗಿದೆ ಎಂದು ಪೋಷಕರು ತಿಳಿಸಿದ್ದಾರೆ.

    ಇದೇ ಜುಲೈ 26ಕ್ಕೆ ಮಗುವಿನ ಮೊದಲ ವರ್ಷದ ಹುಟ್ಟುಹಬ್ಬ ಬರುತ್ತಿದ್ದು, ಮಗುವನ್ನು ಉಳಿಸಿಕೊಡುವಂತೆ ಬೇಡಿಕೊಳ್ಳುತ್ತಿದ್ದಾರೆ. ಚುಚ್ಚುಮದ್ದಿನ ಬೆಲೆ 16 ಕೋಟಿ ರೂ. ಇದ್ದು, ಹೆಚ್ಚುವರಿ ತೆರಿಗೆ ಸೇರಿ 18 ಕೋಟಿ ರೂ. ಆಗಲಿದೆ. ಸಹೃದಯರಾದ ಕನ್ನಡಿಗರು ಹಾಗೂ ಸರ್ಕಾರ ಕೂಡಲೇ ನಮ್ಮ ನೆರವಿಗೆ ಬಂದು ಈ ಔಷಧ ಕೊಡಿಸಿ ಎಂದು ಪೋಷಕರು ಬೇಡಿಕೊಳ್ಳುತ್ತಿದ್ದಾರೆ ಎಂದು ಕೋರಿದ್ದಾರೆ.

    Name – Veeresh
    A/c- 18132200114731
    IFSC – CNRB0011813
    Canara Bank. Deosugur 584170. Dist Raichur. Tq Raichur
    PH no – 9036695059

    Live Tv
    [brid partner=56869869 player=32851 video=960834 autoplay=true]

  • ಆರ್ಥಿಕವಾಗಿ ಸ್ಥಿತಿವಂತರಾಗಿದ್ರೆ ಅನುಕಂಪದ ನೌಕರಿಯಿಲ್ಲ – ಹೊಸ ಮಾರ್ಗಸೂಚಿಯಲ್ಲಿ ಏನಿದೆ?

    ಆರ್ಥಿಕವಾಗಿ ಸ್ಥಿತಿವಂತರಾಗಿದ್ರೆ ಅನುಕಂಪದ ನೌಕರಿಯಿಲ್ಲ – ಹೊಸ ಮಾರ್ಗಸೂಚಿಯಲ್ಲಿ ಏನಿದೆ?

    ನವದೆಹಲಿ: ಸರ್ಕಾರಿ ಉದ್ಯೋಗದಲ್ಲಿದ್ದು ಸೇವೆಯಲ್ಲಿರುವಾಗ ಆಕಸ್ಮಿಕವಾಗಿ ಮೃತಪಟ್ಟರೆ ಅಥವಾ ವೈದ್ಯಕೀಯ ಕಾರಣಗಳಿಂದ ನಿವೃತ್ತಿ ಹೊಂದುವ ತನ್ನ ಉದ್ಯೋಗಿಗಳನ್ನು ಅವಲಂಬಿಸಿದ ಕುಟುಂಬದವರಿಗೆ ಅನುಕಂಪದ ನೌಕರಿ ನೀಡುವ ನೀತಿಯಲ್ಲಿ ಕೇಂದ್ರ ಗೃಹ ಸಚಿವಾಲಯವು ಹೊಸ ಮಾರ್ಪಾಡುಗಳನ್ನು ತಂದಿದ್ದು, ನೀತಿಯನ್ನು ಅನುಷ್ಠಾನಗೊಳಿಸಿದೆ.

    ಕೇಂದ್ರ ಗೃಹ ಸಚಿವಾಲಯದ ಅಡಿಯಲ್ಲಿ ಕಾರ್ಯ ನಿರ್ವಹಿಸುವ ಉದ್ಯೋಗಿಗಳಿಗೆ ಮಾತ್ರ ಈ ನೀತಿಯ ನಿಯಮಗಳು ಅನ್ವಯವಾಗಲಿದೆ. ಈ ಹೊಸ ನೀತಿಯು ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಹೊರಡಿಸಿದ ಮಾರ್ಗಸೂಚಿಗಳಿಗೆ ಅನುಗುಣವಾಗಿದೆ. ಇದನ್ನೂ ಓದಿ: ಸಾರ್ವಜನಿಕರಿಗೆ ಪಾನಿಪುರಿ ಬಡಿಸಿದ ಮಮತಾ

    ಹೊಸ ಮಾರ್ಗಸೂಚಿಗಳು ನೌಕರಿಯ ನೇಮಕಾತಿಯಲ್ಲಿ ಪಾರದರ್ಶಕತೆ ಮತ್ತು ವಸ್ತುನಿಷ್ಠತೆ ಹೊಂದಿದೆ. ಹಾಗಾಗಿ ಗೃಹ ಸಚಿವಾಲಯದ ಮಾರ್ಗಸೂಚಿಗಳ ಪ್ರಕಾರ, ಆರ್ಥಿಕವಾಗಿ ಹಿಂದುಳಿದ ನೌಕರನ ಕುಟುಂಬಕ್ಕೆ ತುರ್ತು ನೆರವು ನೀಡಲು ಅನುಕಂಪ ಆಧಾರಿತ ನೌಕರಿ ನೀಡಲಾಗುತ್ತದೆ ಒಂದು ವೇಳೆ ಕುಟುಂಬದಲ್ಲಿ ಆರ್ಥಿಕ ಸ್ಥಿತಿವಂತರಿದ್ದರೆ ಅವರಿಗೆ ಅನುಕಂಪದ ನೌಕರಿ ಸಿಗುವ ಸಾಧ್ಯತೆಗಳಿರುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಹೊಸ ಮಾರ್ಗಸೂಚಿಗಳು ಕುಟುಂಬದ ಆರ್ಥಿಕ ಸ್ಥಿತಿಯ ಸಮಗ್ರ ಮೌಲ್ಯಮಾಪನ, ಆ ಕುಟುಂಬದಲ್ಲಿ ಉದ್ಯೋಗ ಮಾಡುತ್ತಿರುವವರ ಸಂಖ್ಯೆ, ಕುಟುಂಬದ ಗಾತ್ರ, ಮಕ್ಕಳ ವಯಸ್ಸು ಮತ್ತು ಕುಟುಂಬದ ಆರ್ಥಿಕ ಸ್ಥಿತಿಯ ಅಗತ್ಯತೆಗಳನ್ನು ಒಟ್ಟಾರೆಯಾಗಿ ಪರಿಗಣಿಸುವ ಅಂಶಗಳನ್ನು ಒಳಗೊಂಡಿದೆ. ಇದನ್ನೂ ಓದಿ: RSS ನಿಮ್ಮ ಜೊತೆ ಇದೆ: ದಲಿತ, ಹಿಂದುಳಿದ ವರ್ಗಗಳ ಮಠಾಧೀಶರೊಂದಿಗೆ ಮೋಹನ್‌ ಭಾಗವತ್‌ ಸಂವಾದ

    ನೌಕರಿಗೆ ಪರಿಗಣಿಸುವುದು ಹೇಗೆ?
    ಈ ಯೋಜನೆಯಲ್ಲಿ ಅನುಕಂಪದ ಆಧರಿತ ಉದ್ಯೋಗದ ಅರ್ಜಿಯನ್ನು ಮೌಲ್ಯಮಾಪನ ಮಾಡಲು ಗ್ರೇಡ್ ಆಧಾರಿತ ಮೆರಿಟ್ ಸ್ಕೀಂ ಅನ್ನು ಅಳವಡಿಸಲಾಗಿರುತ್ತದೆ. ಅರ್ಜಿದಾರರಿಗೆ ಮೊದಲ ಹಂತದಲ್ಲಿ ವೈಯಕ್ತಿಕವಾಗಿ ಪೂರ್ಣಗೊಳಿಸಬೇಕಾದ ಅವಶ್ಯಕತೆಗಳು ಮತ್ತು ಔಪಚಾರಿಕತೆಗಳ ಬಗ್ಗೆ ಸಲಹೆ ನಿಡಲಾಗುತ್ತದೆ. ನಂತರ ಮೂರು ಅಧಿಕಾರಿಗಳನ್ನೊಳಗೊಂಡ ಸಮಿತಿಯು ಅರ್ಜಿಯನ್ನು ಪರಿಗಣಿಸುತ್ತದೆ. ಒಬ್ಬರು ಅಧ್ಯಕ್ಷರು, ಇಬ್ಬರು ಸದಸ್ಯರು ಸಮಿತಿಯಲ್ಲಿ ಇರುತ್ತಾರೆ. ನಂತರ ಉಪ ಕಾರ್ಯದರ್ಶಿಗಳು ಸಮಿತಿಯ ಶಿಫಾರಸ್ಸಿನ ನಿರ್ಧಾರಕ್ಕಾಗಿ ಅರ್ಜಿಯನ್ನು ಸಕ್ಷಮ ಪ್ರಾಧಿಕಾರ ಮುಂದೆ ಇಡುತ್ತಾರೆ. ಇದನ್ನೂ ಓದಿ: ಪೋಷಕರಿಲ್ಲದ ಸಮಯ ನೋಡ್ಕೊಂಡು 12ರ ಬಾಲಕಿಯರ ಮೇಲೆ 59ರ ವೃದ್ಧನಿಂದ ಅತ್ಯಾಚಾರ

    ಕುಟುಂಬದ ವಾರ್ಷಿಕ ಆದಾಯ, ಅವಲಂಬಿತ ಅಪ್ರಾಪ್ತ ಮಕ್ಕಳ ಸಂಖ್ಯೆ, ಅವಲಂಬಿತ ಕುಟುಂಬದ ಸದಸ್ಯರ ಸಂಖ್ಯೆ ಮತ್ತು ವಿಶೇಷ ಚೇತನರು ಎಷ್ಟಿದ್ದಾರೆ? ಅವಿವಾಹಿತ ಹೆಣ್ಣುಮಕ್ಕಳ ಸಂಖ್ಯೆ, ಉಳಿದ ಸೇವೆ ಮುಂತಾದ ಅಂಶಗಳನ್ನು ಪರಿಗಣಿಸಿ ಸಕ್ಷಮ ಪ್ರಾಧಿಕಾರವು ಉದ್ಯೋಗ ನೀಡುವ ಬಗ್ಗೆ ನಿರ್ಣಯ ಕೈಗೊಳ್ಳುತ್ತದೆ.

    Live Tv
    [brid partner=56869869 player=32851 video=960834 autoplay=true]

  • ಏಷ್ಯಾದಲ್ಲೇ ಮೊದಲು – ಈ ದೇಶದಲ್ಲಿ ಗಾಂಜಾ ಬೆಳೆಯೋದು ಅಪರಾಧವಲ್ಲ

    ಏಷ್ಯಾದಲ್ಲೇ ಮೊದಲು – ಈ ದೇಶದಲ್ಲಿ ಗಾಂಜಾ ಬೆಳೆಯೋದು ಅಪರಾಧವಲ್ಲ

    ಬ್ಯಾಂಕಾಕ್: ಇದೇ ಮೊದಲ ಬಾರಿಗೆ ದಕ್ಷಿಣ ಏಷ್ಯಾದ ದೇಶದಲ್ಲಿ ಗಾಂಜಾ ಬೆಳೆಯುವುದಕ್ಕೆ ಅನುಮತಿ ನೀಡಲಾಗಿದೆ.

    ಗಾಂಜಾ ಬೆಳೆಯುವುದು ಅಪರಾಧವಲ್ಲ ಎಂದು ಥೈಲ್ಯಾಂಡ್‌ನಲ್ಲಿ ಘೋಷಿಸಿದೆ. ಗಾಂಜಾವನ್ನು ತೋಟಗಾರಿಕೆ, ವ್ಯಾಪಾರ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಬಳಸಬಹುದು. ಇದು ಅಪರಾಧವಲ್ಲ ಎಂದು ಥೈಲ್ಯಾಂಡ್ ಆರೋಗ್ಯ ಸಚಿವ ಅನುಟಿನ್ ಚಾರ್ನ್ವಿರಾಕುಲ್ ಹೇಳಿದ್ದಾರೆ.

    ಗಾಂಜಾ ಬೆಳೆಯುವುದು ಇನ್ನು ಕಾನೂನು ಬಾಹಿರವಲ್ಲ. ಆರ್ಥಿಕತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಆದರೆ ವೈದ್ಯಕೀಯ ಬಳಕೆಗೆ ಮಾತ್ರವೇ ಅದಕ್ಕೆ ಅನುಮತಿ ನೀಡಲಾಗಿದ್ದು, ಮಾದಕದ್ರವ್ಯ ಬಳಕೆಗೆ ಇನ್ನೂ ಕಾನೂನುಬಾಹಿರವಿದೆ ಎಂದು ಚಾರ್ನ್ವಿರಾಕುಲ್ ಎಚ್ಚರಿಸಿದ್ದಾರೆ. ಇದನ್ನೂ ಓದಿ: ಅಮೆರಿಕದಲ್ಲಿ ಮತ್ತೆ ಗುಂಡಿನ ದಾಳಿ – ದುಷ್ಕರ್ಮಿ ಗುಂಡಿಗೆ ಮೂವರು ಬಲಿ


    ರೆಸ್ಟೋರೆಂಟ್‌ಗಳಲ್ಲಿ ಆಹಾರ ಹಾಗೂ ಪಾನೀಯಗಳಲ್ಲಿ ಗಾಂಜಾದ ಬಳಕೆ ಮಾಡಬಹುದು. ಆದರೆ ಸಸ್ಯದ ಮುಖ್ಯ ಸೈಕೋಆಕ್ಟಿವ್ ಸಂಯುಕ್ತದ ಟೆಟ್ರಾಹೈಡ್ರೊಕಾನ್ನಬಿನಾಲ್(ಟಿಹೆಚ್‌ಸಿ) ಅನ್ನು ಶೇ.0.2 ಕ್ಕಿಂತ ಕಡಿಮೆ ಬಳಸಬೇಕು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕೊನೆಯ ಓವರ್‌ನಲ್ಲಿ ಕ್ರೀಸ್ ಬಿಟ್ಟು ಕೊಡದ ಪಾಂಡ್ಯ ನಡೆಗೆ ಟೀಕೆ

    ಥೈಲ್ಯಾಂಡ್‌ನಲ್ಲಿ ಗಾಂಜಾ ಬಳಕೆಗೆ ಅನುಮತಿ ನೀಡಿದ್ದರೂ ಅಲ್ಲಿ ಸಾರ್ವಜನಿಕವಾಗಿ ಧೂಮಪಾನ ಮಾಡುವುದು ಇನ್ನೂ ಕಾನೂನು ಬಾಹಿರವಿದೆ.

  • ಇದೇ ಮೊದಲ ಬಾರಿಗೆ ಜೀವಂತ 3ಡಿ ಮುದ್ರಿತ ಕಿವಿಯ ಯಶಸ್ವೀ ಕಸಿ

    ಇದೇ ಮೊದಲ ಬಾರಿಗೆ ಜೀವಂತ 3ಡಿ ಮುದ್ರಿತ ಕಿವಿಯ ಯಶಸ್ವೀ ಕಸಿ

    ವಾಷಿಂಗ್ಟನ್: ವೈದ್ಯಕೀಯ ಲೋಕ ದಿನೇ ದಿನೇ ಹೆಚ್ಚುತ್ತಿರುವ ಪ್ರಗತಿಯಿಂದಾಗಿ ರೋಗಿಗಳನ್ನು ಹಾಗೂ ಜನರ ಜೀವನವನ್ನು ಸರಾಗಗೊಳಿಸುತ್ತಿದೆ. ಇದೀಗ ವೈದ್ಯಕೀಯ ರಂಗದಲ್ಲಿ ಹೊಸ ಪ್ರಯತ್ನ ಮಾಡಲಾಗಿದೆ. ವಿಶ್ವದಲ್ಲೇ ಮೊದಲ ಬಾರಿಗೆ 3ಡಿ ಮುದ್ರಿತ ಜೀವಂತ ಕಿವಿಯನ್ನು ವ್ಯಕ್ತಿಯೊಬ್ಬರಿಗೆ ಕಸಿ ಮಾಡಲಾಗಿದೆ.

    ಹೌದು, ಜನಿಸುವಾಗಲೇ ಅಲ್ಪ ಸ್ವಲ್ಪ ಕಿವಿಯೊಂದಿಗೆ ಹುಟ್ಟಿದ ಯುವತಿಗೆ ತಮ್ಮ ಸ್ವಂತ ಜೀವಕೋಶಗಳಿಂದ 3ಡಿ ಕಿವಿಯನ್ನು ರಚಿಸಿ, ಅದನ್ನು ಯಶಸ್ವಿಯಾಗಿ ಕಸಿ ಮಾಡಲಾಗಿದೆ. ಈ ಮೂಲಕ ವೈದ್ಯಕೀಯ ಲೋಕದಲ್ಲೊಂದು ಮೈಲಿಗಲ್ಲು ಸ್ಥಾಪನೆಯಾಗಿದೆ.

    ಮೆಕ್ಸಿಕೋ ಮೂಲದ ಯುವತಿ ಅಲೆಕ್ಸಾ ಹುಟ್ಟುವಾಗಲೇ ತಮ್ಮ ಬಲಭಾಗದ ಕಿವಿಯನ್ನು ಅಲ್ಪ ಸ್ವಲ್ಪವಾಗಿ ಹೊಂದಿದ್ದರು. ಇದೀಗ ವೈದ್ಯಕೀಯ ಲೋಕದ ಹೊಸ ಪ್ರಯತ್ನದ ಮೂಲಕ ಅವರ ಇನ್ನೊಂದು ಕಿವಿಯನ್ನು ಅನುಕರಿಸಿ 3ಡಿ ಮುದ್ರಣದ ಇನ್ನೊಂದು ಕಿವಿಯನ್ನು ರಚಿಸಿ ಕಸಿ ಮಾಡಲಾಗಿದೆ. ಇದನ್ನೂ ಓದಿ: ಜೂಮ್ ಕ್ಲಾಸ್ ಮಿಸ್ ಮಾಡ್ದೆ ಹಾಜರಾಗಿದ್ದ ಬೆಕ್ಕು – ಹ್ಯಾಟ್ ಕೊಟ್ಟ ವಿಶ್ವವಿದ್ಯಾಲಯ

    ವೈದ್ಯಕೀಯ ಲೋಕದ ಈ ಹೊಸ ಕ್ರಾಂತಿ ಸದ್ಯ 3ಡಿ ಮುದ್ರಿತ ಅಂಗಗಳನ್ನು ಜನರಿಗೆ ಜೋಡಿಸುವ ಪ್ರಯೋಗದ ಒಂದು ಭಾಗವಾಗಿದೆ. ಇದನ್ನು ಸಾಮಾನ್ಯ ವೈದ್ಯಕೀಯ ಲೋಕಕ್ಕೆ ತರುವುದಕ್ಕೂ ಮೊದಲು ಹಲವಾರು ಸುರಕ್ಷತಾ ತಪಾಸಣೆ ನಡೆಸಬೇಕಿದೆ. ಇದನ್ನೂ ಓದಿ: ಕರಾವಳಿ, ಮಲೆನಾಡಿನಲ್ಲಿ ಮತ್ತೆ ಸ್ಯಾಟಲೈಟ್ ಫೋನ್ ಆಕ್ಟೀವ್ – 10 ದಿನಗಳಲ್ಲಿ 4 ಕಡೆ ರಿಂಗಣಿಸಿದ ಲೊಕೇಷನ್ ಟ್ರೇಸ್

    ಜನರು ಹುಟ್ಟುವಾಗಲೇ ಅಥವಾ ಅಪಘಾತದಲ್ಲಿ ದೇಹದ ಅಂಗಗಳನ್ನು ಕಳೆದುಕೊಂಡರೆ, 3ಡಿ ಮುದ್ರಿತ ಜೀವಂತ ಅಂಗಗಳ ಕಸಿ ಮಾಡಬಹುದು ಎಂಬುದು ಇದೀಗ ಸಾಬೀತಾಗಿದೆ.