Tag: Medical aid

  • ಉಕ್ರೇನ್‍ಗೆ ಭಾರತದಿಂದ ವೈದ್ಯಕೀಯ ನೆರವು: ಅರಿಂದಮ್ ಬಾಗ್ಚಿ

    ಉಕ್ರೇನ್‍ಗೆ ಭಾರತದಿಂದ ವೈದ್ಯಕೀಯ ನೆರವು: ಅರಿಂದಮ್ ಬಾಗ್ಚಿ

    ನವದೆಹಲಿ: ಉಕ್ರೇನ್‍ಗೆ ಭಾರತದಿಂದ ವೈದ್ಯಕೀಯ ನೆರವನ್ನು ಕಳುಹಿಸಲಿದ್ದೇವೆ ಎಂದು ವಿದೇಶಾಂಗ ಸಚಿವಾಲಯ ವಕ್ತಾರ ಅರಿಂದಮ್ ಬಾಗ್ಚಿ ಸೋಮವಾರ ತಿಳಿಸಿದ್ದಾರೆ.

    ರಷ್ಯಾ ದಾಳಿಯಿಂದಾಗಿ ಉಕ್ರೇನ್ ತತ್ತರಿಸಿ ಹೋಗಿದೆ. ಸೈನಿಕರು ಮಾತ್ರವಲ್ಲದೇ ದೇಶವನ್ನು ರಕ್ಷಿಸಲು ಬಯಸುವ ನಾಗರಿಕರಿಗೂ ಉಕ್ರೇನ್ ಶಸ್ತ್ರಾಸ್ತ್ರ ನೀಡುತ್ತಿದೆ. ಇದೀಗ ಯುದ್ಧದಿಂದ ನಲುಗಿರುವ ದೇಶಕ್ಕೆ ಸಹಾಯ ಮಾಡಲು ಭಾರತ ವೈದ್ಯಕೀಯ ಹಾಗೂ ಮಾನವೀಯ ನೆರವನ್ನು ನೀಡಲು ಮುಂದಾಗಿದೆ. ಇದನ್ನೂ ಓದಿ: ಫಸ್ಟ್‌ ಟೈಂ ಸೆಬಿಗೆ ಮಹಿಳೆ ಬಾಸ್‌

    ಮಾಧ್ಯಮಗಳೊಂದಿಗೆ ಮಾತನಾಡಿದ ಬಾಗ್ಚಿ ಆಪರೇಷನ್ ಗಂಗಾ ಯೋಜನೆ ಅಡಿಯಲ್ಲಿ ಈಗಾಗಲೇ 6 ವಿಮಾನಗಳನ್ನು ಕಳುಹಿಸಿ 1,400 ಭಾರತೀಯರನ್ನು ಕರೆತರಲಾಗಿದೆ. ಭಾರತೀಯ ರಾಯಭಾರಿಯ ಆದೇಶ ಬರುತ್ತಿದ್ದಂತೆ ಸುಮಾರು 8,000 ಭಾರತೀಯರು ಉಕ್ರೇನ್ ತೊರೆದಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ದಿಢೀರ್‌ ಭಾರೀ ಪ್ರಮಾಣದಲ್ಲಿ ಬಡ್ಡಿದರ ಏರಿಸಿದ ರಷ್ಯನ್‌ ಬ್ಯಾಕ್‌

    ಉಕ್ರೇನ್ ಗಡಿಯಲ್ಲಿರುವ 4 ದೇಶಗಳಿಗೆ ವಿಶೇಷ ರಾಯಭಾರಿಗಳನ್ನು ಕಳುಹಿಸಲಾಗುವುದು. ಇಂದು ರಾತ್ರಿ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಉಕ್ರೇನ್, ಕಿರಣ್ ರಿಜಿಜು ಸ್ಲೋವೆಕಿಯಾ ಗಣರಾಜ್ಯ, ಹರ್ದೀಪ್ ಸಿಂಗ್ ಪುರಿ ಹಂಗೇರಿ ಹಾಗೂ ಜನರಲ್ ವಿಕೆ ಸಿಂಗ್ ಪೋಲೆಂಡ್‍ಗೆ ಪ್ರಯಾಣಿಸಲಿದ್ದಾರೆ ಎಂದು ಬಾಗ್ಚಿ ತಿಳಿಸಿದರು.