Tag: Medical Check-up

  • ನಾನು ಆರೋಗ್ಯವಾಗಿದ್ದೇನೆ, ಆತಂಕ ಬೇಡ – ಅನಾರೋಗ್ಯದ ಬಗ್ಗೆ ರತನ್ ಟಾಟಾ ಸ್ಪಷ್ಟನೆ

    ನಾನು ಆರೋಗ್ಯವಾಗಿದ್ದೇನೆ, ಆತಂಕ ಬೇಡ – ಅನಾರೋಗ್ಯದ ಬಗ್ಗೆ ರತನ್ ಟಾಟಾ ಸ್ಪಷ್ಟನೆ

    ಮುಂಬೈ: ರಕ್ತದೊತ್ತಡ (BP) ಕುಸಿತದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ವರದಿಗಳನ್ನು ಟಾಟಾ ಸನ್ಸ್‌ನ ಮಾಜಿ ಅಧ್ಯಕ್ಷ ರತನ್ ಟಾಟಾ (Ratan Tata)ಅವರು ತಳ್ಳಿಹಾಕಿದ್ದಾರೆ.

    ಈ ಬಗ್ಗೆ ಸ್ಪಷ್ಟನೆ ನೀಡಿರುವ ಅವರು ನಾನು ಆರೋಗ್ಯವಾಗಿದ್ದೇನೆ ಯಾರು ಆತಂಕಪಡುವ ಅಗತ್ಯವಿಲ್ಲ ಎಂದು ತಮ್ಮ ಸೋಶಿಯಲ್ ಮೀಡಿಯಾಗಳಲ್ಲಿ (Social Media) ಹೇಳಿಕೊಂಡಿದ್ದಾರೆ.

    ರತನ್ ಟಾಟಾ ಅವರ ಬಿಪಿ ತೀವ್ರ ಪ್ರಮಾಣದಲ್ಲಿ ಕುಸಿದ ಕಾರಣ ಆರೋಗ್ಯ ಪರಿಸ್ಥಿತಿ ಏರುಪೇರಾಗಿದ್ದು ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಿದೆ. ಅವರನ್ನು ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿತ್ತು. ವರದಿ ಬೆನ್ನಲ್ಲೇ ತಮ್ಮ ಶೋಷಿಯಲ್ ಮಿಡಿಯಾಗಳಲ್ಲಿ ಸ್ಪಷ್ಟನೆ ನೀಡಿರುವ ಅವರು, ವಯೋಸಹಜ ಸಮಸ್ಯೆಗಳಿಂದ ವೈದ್ಯಕೀಯ ತಪಾಸಣೆಗೆ ಒಳಗಾಗಿದ್ದೇನೆ, ಯಾವುದೇ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಫೇಕ್ ಷೇರು ಮಾರ್ಕೆಟ್ ವೆಬ್‌ಸೈಟ್‌ ಮಾಡಿ ಕೊಟ್ಯಂತರ ರೂ. ವಂಚನೆ – 8 ಸೈಬರ್ ವಂಚಕರು ಅರೆಸ್ಟ್‌

    ಸಾಮಾನ್ಯ ವೈದ್ಯಕೀಯ ತಪಾಸಣೆಗೆ ಒಳಪಟ್ಟಿದ್ದೇನೆ, ನನ್ನ ಆರೋಗ್ಯದ ಬಗ್ಗೆ ವದಂತಿಗಳು ಹಬ್ಬಿವೆ ಆ ಬಗ್ಗೆ ನನಗೆ ಮಾಹಿತಿ ಇದೆ, ನಾನು ಹಿಂದಿನ ಉತ್ಸಾಹದಲ್ಲೇ ಇರುತ್ತೇನೆ ತಪ್ಪು ಮಾಹಿತಿ ಹರಡದಂತೆ ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮೈಕ್ರೋRNA ಆವಿಷ್ಕಾರ – ವಿಕ್ಟರ್‌, ಗ್ಯಾರಿಗೆ ನೊಬೆಲ್‌ ಪುರಸ್ಕಾರ

  • ಅರುಣ್ ಜೇಟ್ಲಿ ಆಸ್ಪತ್ರೆಗೆ ದಾಖಲು

    ಅರುಣ್ ಜೇಟ್ಲಿ ಆಸ್ಪತ್ರೆಗೆ ದಾಖಲು

    ನವದೆಹಲಿ: ಬಿಜೆಪಿಯ ಹಿರಿಯ ನಾಯಕ, ಕೇಂದ್ರ ಮಾಜಿ ಸಚಿವ ಅರುಣ್ ಜೇಟ್ಲಿ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

    ವೈದ್ಯಕೀಯ ತಪಾಸಣೆ ಹಿನ್ನಲೆಯಲ್ಲಿ ಅರುಣ್ ಜೇಟ್ಲಿ ಅವರನ್ನು ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. 66 ವರ್ಷದ ಅರುಣ್ ಜೇಟ್ಲಿ ಅವರನ್ನು ನೆಫ್ರಾಲಜಿಸ್ಟ್, ಹೃದ್ರೋಗ ತಜ್ಞರು ತಪಾಸಣೆ ಮಾಡುತ್ತಿದ್ದಾರೆ. ಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ಕೇಂದ್ರ ಆರೋಗ್ಯ ಸಚಿವ ಹರ್ಷವಧನ್, ಗೃಹ ಸಚಿವ ಅಮಿತ್ ಶಾ ಅವರು ಏಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

    ಕಳೆದ ಎನ್‍ಡಿಎ ಸರ್ಕಾರದ ಅವಧಿಯ ಅಂತಿಮ ಬಜೆಟ್ ವೇಳೆಯೂ ಅರುಣ್ ಜೇಟ್ಲಿ ಅವರು ಆರೋಗ್ಯ ಸಮಸ್ಯೆ ಎದುರಿಸಿದ್ದ ಪರಿಣಾಮ ರೈಲ್ವೇ ಸಚಿವರಾಗಿದ್ದ ಪಿಯೂಷ್ ಗೋಯೆಲ್ ಅವರು ಬಜೆಟ್ ಮಂಡನೆ ಮಾಡಿದ್ದರು. ಇದಕ್ಕೂ ಮುನ್ನ ಮೂತ್ರಪಿಂಡ ಸಮಸ್ಯೆಯಿಂದಾಗಿ ಮೂರು ತಿಂಗಳ ಕಾಲ ಸುದೀರ್ಘ ರಜೆ ಪಡೆದಿದ್ದ ಅರುಣ್ ಜೇಟ್ಲಿ ಅವರು ಆ ಬಳಿಕ ಮತ್ತೆ ಕರ್ತವ್ಯಕ್ಕೆ ಹಾಜರಾಗಿದ್ದರು. ಈ ಅವಧಿಯಲ್ಲೂ ಸಚಿವ ಪಿಯೂಷ್ ಗೋಯಲ್ ಅವರು ಇಲಾಖೆಯ ಉಸ್ತುವಾರಿ ವಹಿಸಿಕೊಂಡಿದ್ದರು.

    2019ರ ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ಟ್ವೀಟ್ ಮಾಡಿ, ಎರಡನೇ ಅವಧಿ ನಿಮ್ಮ ಸರ್ಕಾರದಲ್ಲಿ ನನಗೆ ಯಾವುದೇ ಜವಾಬ್ದಾರಿ ನೀಡಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾಡಿಕೊಂಡಿದ್ದರು.

    ನಿಮ್ಮ ಸರ್ಕಾರದ ಅವಧಿಯಲ್ಲಿ 5 ವರ್ಷ ಸಚಿವನಾಗಿ ಕಾರ್ಯನಿರ್ವಹಿಸಿದ್ದು ನನಗೆ ಹೆಮ್ಮೆಯ ಸಂಗತಿಯಾಗಿದೆ. ಈ ಹಿಂದೆಯೂ ಎನ್‍ಡಿಎ ಸರ್ಕಾರದ ಅವಧಿಯಲ್ಲಿ ಸಚಿವನಾಗಿದ್ದೆ. ಸದ್ಯ ಇದಕ್ಕಿಂತ ಹೆಚ್ಚು ನಿರೀಕ್ಷೆ ಮಾಡುತ್ತಿಲ್ಲ. ಕಳೆದ 9 ತಿಂಗಳಿನಿಂದ ಅನಾರೋಗ್ಯದ ಸಮಸ್ಯೆ ಎದುರಿಸಿದ್ದೇನೆ. ಚುನಾವಣಾ ಪ್ರಚಾರ ಮುಗಿದ ಬಳಿಕ ನಾನು ಮೌಖಿಕವಾಗಿ ತನ್ನ ನಿರ್ಧಾರವನ್ನು ನಿಮಗೆ ತಿಳಿಸಿದ್ದೆ. ಅನಾರೋಗ್ಯದ ಸಮಸ್ಯೆಯಿಂದ ಸರ್ಕಾರದಲ್ಲಿ ಯಾವುದೇ ಜವಾಬ್ದಾರಿ ನಿರ್ವಹಿಸಲು ಕಷ್ಟ. ಆದ್ದರಿಂದ ಅಧಿಕೃತವಾಗಿ ಈ ಬಗ್ಗೆ ಸ್ಪಷ್ಟಪಡಿಸುತ್ತಿದ್ದೇನೆ. ಈ ಬಾರಿಯ ಸಂಪುಟ ಸೇರದಿರಲು ನಿರ್ಧರಿಸಿದ್ದು, ನನ್ನ ಸಹಕಾರ ಸದಾ ಪಕ್ಷಕ್ಕೆ ಹಾಗೂ ಸರ್ಕಾರಕ್ಕೆ ಇರುತ್ತದೆ ಎಂದು ಸ್ಪಷ್ಟಪಡಿಸಿದ್ದರು.

  • 8 ಕೋಟಿ ರೂ. ದಾನ – ವ್ಯಕ್ತಿಯ ಮಾನಸಿಕ ಪರೀಕ್ಷೆಗೆ ಕೋರ್ಟ್ ಆದೇಶ

    8 ಕೋಟಿ ರೂ. ದಾನ – ವ್ಯಕ್ತಿಯ ಮಾನಸಿಕ ಪರೀಕ್ಷೆಗೆ ಕೋರ್ಟ್ ಆದೇಶ

    ಇಸ್ಲಾಮಾಬಾದ್: ಆಣೆಕಟ್ಟು ನಿರ್ಮಾಣ ನಿಧಿಗೆ 8 ಕೋಟಿ ರೂ. ನೀಡಿದ್ದ ವ್ಯಕ್ತಿಯೊಬ್ಬನನ್ನು ಮಾನಸಿಕ ಪರೀಕ್ಷೆಗೆ ಒಳಪಡಿಸುವಂತೆ ಪಾಕಿಸ್ತಾನ ಕೋರ್ಟ್ ಆದೇಶ ನೀಡಿದೆ.

    ಪಾಕಿಸ್ತಾನದ ಶೇಖ್ ಶಾಹಿದ್ ಎಂಬವರು ತಮ್ಮ 8 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಆಣೆಕಟ್ಟು ನಿರ್ಮಾಣಕ್ಕಾಗಿ ನೀಡಿದ್ದರು. ಆದರೆ ಅವರ ಮನೆಯಿಂದ ಇದಕ್ಕೆ ವಿರೋಧ ವ್ಯಕ್ತವಾಗಿತ್ತು. ಅಷ್ಟೇ ಅಲ್ಲದೆ ಶಾಹಿದ್ ಮಾನಸಿಕವಾಗಿ ಅಸ್ವಸ್ಥರಾಗಿದ್ದು, ಅವರ ಹೇಳಿಕೆಯನ್ನು ಪರಿಗಣಿಸಬೇಡಿ ಎಂದು ಕುಟುಂಬಸ್ಥರು ಕೋರ್ಟ್ ಮೆಟ್ಟಿಲು ಏರಿದ್ದರು.

    ಈ ಕುರಿತು ಕೋರ್ಟ್‍ನಲ್ಲಿ ವಿಚಾರಣೆ ನಡೆಸಿದ್ದ ಮುಖ್ಯ ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಿದ ಶಾಹಿದ್ ಪತ್ನಿ, ನನ್ನ ಪತಿ ರೈತನಾಗಿದ್ದು, ಮಾನಸಿಕ ಅಸ್ವಸ್ಥರಾಗಿದ್ದಾರೆ. ನಾನು ಅವರೊಂದಿಗೆ ಉತ್ತಮ ಸಂಬಂಧ ಹೊಂದಿರುವೆ ಎಂದು ತಿಳಿಸಿದ್ದಾಳೆ. ಆಕೆಯ ಹೇಳಿಕೆಯನ್ನು ಆಲಿಸಿ ನ್ಯಾಯಾಧೀಶರು, ಶಾಹಿದ್ ಅವರು ಕುಟುಂಬಸ್ಥರ ಒಪ್ಪಿಗೆ ಇಲ್ಲದೆ ಆಸ್ತಿಯನ್ನು ದಾನ ಮಾಡಿದ್ದಾರೆ. ಜೊತೆಗೆ ಇದು ಪಿತ್ರಾರ್ಜಿತ ಆಸ್ತಿಯಾಗಿದ್ದರಿಂದ ಆನುವಶೀಕವಾಗಿ ಶಾಹಿದ್ ಕುಟುಂಬಸ್ಥರಿಗೆ ಸಲ್ಲುತ್ತದೆ ಎಂದು ಆದೇಶ ನೀಡಿದ್ದಾರೆ.

    ಶಾಹಿದ್‍ನನ್ನು ಮಾನಸಿಕ ಪರೀಕ್ಷೆಗೆ ಒಳಪಡಿಸಿ, ಅದರ ವರದಿಯನ್ನು ಕೋರ್ಟ್ ಗೆ ಸಲ್ಲಿಸಬೇಕು ಅಂತಾ ನ್ಯಾಯಾಧೀಶರು, ಪೊಲೀಸರಿಗೆ ಸೂಚನೆ ನೀಡಿದ್ದಾರೆ. ವಿಚಾರಣೆ ವೇಳೆ ಶಾಹಿನ್ ಅವರ ಮೂರು ಮಕ್ಕಳು ಕೋರ್ಟ್ ಗೆ ಹಾಜರಾಗಿದ್ದರು.

    ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ನೇತೃತ್ವದ ಸರ್ಕಾರವು ನೀರಿನ ಸಮಸ್ಯೆ ನಿವಾರಿಸಲು ಡ್ಯಾಮ್ ನಿರ್ಮಾಣಕ್ಕೆ ಮುಂದಾಗಿದೆ. ಇದಕ್ಕೆ ದಾನ ನೀಡುವಂತೆ ಸರ್ಕಾರ ಸಾರ್ವಜನಿಕರಲ್ಲಿ ಮನವಿ ಇಟ್ಟಿತ್ತು. ಹೀಗಾಗಿ ಅನೇಕ ಜನ ಡ್ಯಾಮ್ ನಿರ್ಮಾಣಕ್ಕೆ ದೇಣಿಗೆ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews