Tag: medical college

  • ಪ್ರತಿ ಜಿಲ್ಲೆಗೆ ಒಂದು ಸರ್ಕಾರಿ ಮೆಡಿಕಲ್ ಕಾಲೇಜು, ಒಂದು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವುದು ನನ್ನ ಗುರಿ: ಸಿಎಂ

    ಪ್ರತಿ ಜಿಲ್ಲೆಗೆ ಒಂದು ಸರ್ಕಾರಿ ಮೆಡಿಕಲ್ ಕಾಲೇಜು, ಒಂದು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವುದು ನನ್ನ ಗುರಿ: ಸಿಎಂ

    ಬೆಂಗಳೂರು: ಸರ್ಕಾರಿ ಆಸ್ಪತ್ರೆಗೆ ಬರುವವರೆಲ್ಲಾ ಬಡ-ಮಧ್ಯಮ ವರ್ಗದವರು. ಇವರಿಗೂ ಅತ್ಯುತ್ತಮ ಆರೋಗ್ಯ ಸೇವೆ ಒದಗಿಸಲು ಪ್ರತಿ ಜಿಲ್ಲೆಗೆ ಒಂದು ಸರ್ಕಾರಿ ಮೆಡಿಕಲ್ ಕಾಲೇಜು (Medical College), ಒಂದು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ (Multi Speciality Hospital) ನಿರ್ಮಿಸುವುದು ನನ್ನ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು.

    ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ನಿರ್ಮಿಸಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡದ ಉದ್ಘಾಟನೆ ಹಾಗೂ ಗೃಹ ವೈದ್ಯರ ವಸತಿ ನಿಲಯ ಕಟ್ಟಡ ನಿರ್ಮಾಣ ಕಾಮಗಾರಿಯ ಉದ್ಘಾಟನೆ, ಬೆಳಗಾವಿ ಸ್ಮಾರ್ಟ್ ಸಿಟಿ ಅನುದಾನದಲ್ಲಿ ನಿರ್ಮಾಣಗೊಂಡ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬೆಳಗಾವಿ ಬಸ್ ನಿಲ್ದಾಣದ ಉದ್ಘಾಟನೆ, ರಾಣಿ ಚನ್ನಮ್ಮ ವಿವಿಯ ಹಿರೇಬಾಗೇವಾಡಿ ಹೊಸ ಆವರಣದಲ್ಲಿ ಪಿ.ಎಂ ಉಷಾ ವಿವಿಧ ಕಟ್ಟಡಗಳ ಹಾಗೂ ರಾಷ್ಟ್ರೀಯ ಹೆದ್ದಾರಿಯಿಂದ ವಿವಿಯ ನೂತನ ಆವರಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಇದನ್ನೂ ಓದಿ: ಸಿಎಂ ಜೊತೆ ತೆರೆದ ಜೀಪ್‌ನಲ್ಲಿ ಮೊಮ್ಮೊಗ ಪ್ರಯಾಣ; ಪ್ರೋಟೋಕಾಲ್ ವ್ಯಾಪ್ತಿಗೆ ಬರಲ್ಲ ಎಂದ ಹೆಚ್‌ಸಿಎಂ

    ಬರೀ ಆಸ್ಪತ್ರೆ ಕಟ್ಟಡ ಕಟ್ಟಿದರೆ ಸಾಲದು. ಅದಕ್ಕೆ ತಕ್ಕಂತೆ ತಜ್ಞ ವೈದ್ಯರನ್ನೂ ನೇಮಿಸುತ್ತೇವೆ. ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ತೀರ್ಮಾನಿಸಿದ್ದೇವೆ ಎಂದರು. ಇದನ್ನೂ ಓದಿ: ಅಂಕಲಗಿ ದುರ್ಗಾದೇವಿ ಜಾತ್ರೆಯಲ್ಲಿ ಗಲಾಟೆ ವೇಳೆ ಏರ್‌ಫೈರ್ – ಎರಡು ಗುಂಪುಗಳ 14 ಮಂದಿ ಅರೆಸ್ಟ್

    ಸದ್ಯ ಪ್ರಭಾಕರ್ ಕೋರೆ ಅವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರು ಸರ್ಕಾರಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದಕ್ಕಾಗಿ ಕೋರೆ ಅವರಿಗೆ ಅಭಿನಂದಿಸುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಬೆಂಗ್ಳೂರಿನ ನಿರ್ಮಾಣ ಹಂತದ ಕಟ್ಟಡದಲ್ಲಿ ಅಸ್ಥಿಪಂಜರ ಪತ್ತೆ – 6 ತಿಂಗಳ ಹಿಂದೆ ಮೃತಪಟ್ಟ ಶಂಕೆ

    ನಮ್ಮ ಸರ್ಕಾರ ಅಸಮಾನತೆಯನ್ನು ಅಳಿಸುವ ದಿಕ್ಕಿನಲ್ಲಿ ತಳ ಸಮುದಾಯಗಳಿಗೆ ಅವಕಾಶ ಮತ್ತು ಅನುಕೂಲಗಳನ್ನು ಕಲ್ಪಿಸುತ್ತಿದೆ. ಅಸಮಾನತೆ ಇರುವವರೆಗೆ ತಳ ಸಮುದಾಯಗಳ ಜನ ಮುಖ್ಯವಾಹಿನಿಗೆ ಬರಲು ಸಾಧ್ಯವಿಲ್ಲ ಎನ್ನುವ ಮಾತುಗಳನ್ನು ನೆನಪಿನಲ್ಲಿ ಇಟ್ಟುಕೊಂಡು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ನುಡಿದರು. ಇದನ್ನೂ ಓದಿ: ನೆಲಮಂಗಲ | ಬೆಳ್ಳಂಬೆಳಗ್ಗೆ ಈರುಳ್ಳಿ ತುಂಬಿದ್ದ ಲಾರಿ ಬೆಂಕಿಗಾಹುತಿ

  • ಒಳಮೀಸಲಾತಿ ನಿರ್ಧಾರವಾಗುವವರೆಗೂ ಹುದ್ದೆ ಭರ್ತಿ ಇಲ್ಲ: ಡಾ. ಶರಣಪ್ರಕಾಶ್ ಪಾಟೀಲ್

    ಒಳಮೀಸಲಾತಿ ನಿರ್ಧಾರವಾಗುವವರೆಗೂ ಹುದ್ದೆ ಭರ್ತಿ ಇಲ್ಲ: ಡಾ. ಶರಣಪ್ರಕಾಶ್ ಪಾಟೀಲ್

    – ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಸಿಬ್ಬಂದಿ ಕೊರತೆ ಇಲ್ಲ
    – ಅಗತ್ಯವಿರುವ ಕಡೆ ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ
    – ಮೀಸಲಾತಿ ವಿವಾದ ಮುಗಿದ ತಕ್ಷಣವೇ ಹುದ್ದೆಗಳ ಭರ್ತಿ

    ಬೆಂಗಳೂರು: ಒಳಮೀಸಲಾತಿ (Internal Reservation) ಸಂಬಂಧ ರಾಜ್ಯಸರ್ಕಾರ ಸ್ಪಷ್ಟವಾದ ತೀರ್ಮಾನ ತೆಗೆದುಕೊಂಡ ಮೇಲೆ ವೈದ್ಯಕೀಯ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ (Sharan Prakash Patil) ವಿಧಾನ ಪರಿಷತ್‌ನಲ್ಲಿ ಆಶ್ವಾಸನೆ ನೀಡಿದರು.

    ಸೋಮವಾರ ಪ್ರಶ್ನೋತ್ತರ ಅವಧಿಯಲ್ಲಿ ಸದಸ್ಯ ಮಂಜೇಗೌಡ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನದಾಸ್ ಅವರು ಒಳಮೀಸಲಾತಿ ಕಲ್ಪಿಸುವ ಸಂಬಂಧ ಸರ್ಕಾರಕ್ಕೆ ವರದಿಯನ್ನು ನೀಡಿದ್ದಾರೆ. ಈ ವರದಿಯ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗಿದ್ದು, ಮುಂದಿನ ವಿಶೇಷ ಸಂಪುಟ ಸಭೆಯಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ ಎಂದರು. ಇದನ್ನೂ ಓದಿ: ರಾಯರ ಮಧ್ಯಾರಾಧನೆಯಲ್ಲಿ ನಟ ಜಗ್ಗೇಶ್ ಭಾಗಿ

    ಒಳಮೀಸಲಾತಿ ಕುರಿತು ಸರ್ಕಾರ ಅಂತಿಮ ನಿರ್ಧಾರ ತೆಗೆದುಕೊಳ್ಳುವವರೆಗೂ ಯಾವುದೇ ಇಲಾಖೆಯಲ್ಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳದಂತೆ ಮುಖ್ಯಮಂತ್ರಿಯವರು ಸೂಚನೆ ಕೊಟ್ಟಿದ್ದಾರೆ. ಅಲ್ಲಿಯವರೆಗೂ ನಾವು ಏನು ಮಾಡಲೂ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಧರ್ಮಸ್ಥಳ ಕೇಸ್‌ ಬಗ್ಗೆ ಎಸ್‌ಐಟಿ ತನಿಖೆ ಮುಗಿಯೋವರೆಗೂ ನಾನು ಮಾತನಾಡಲ್ಲ: ಜಿ.ಪರಮೇಶ್ವರ್‌

    ವೈದ್ಯಕೀಯ ಕಾಲೇಜುಗಳಲ್ಲಿ (Medical College) ಒಟ್ಟು 21,860 ಹುದ್ದೆಗಳಿವೆ. ಇದರಲ್ಲಿ 9,413 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗಿದೆ. 12,447 ಹುದ್ದೆಗಳು ಖಾಲಿ ಇವೆ ಎಂದು ಅಂಕಿ ಅಂಶಗಳ ವಿವರ ನೀಡಿದರು. ಹುದ್ದೆಗಳು ಖಾಲಿ ಇದ್ದರೂ ವೈದ್ಯಕೀಯ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಬೋಧನೆ ಇಲ್ಲವೇ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡಲು ಯಾವುದೇ ರೀತಿಯ ಸಮಸ್ಯೆಯಾಗಿಲ್ಲ. ಸರ್ಕಾರ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಹೇಳಿದರು. ಇದನ್ನೂ ಓದಿ: ಕೆಎನ್‌ ರಾಜಣ್ಣ ಏನು ತಪ್ಪು ಹೇಳಿದ್ದಾರೆ – ಪುತ್ರ ರಾಜೇಂದ್ರ ಪಶ್ನೆ

    ಅಗತ್ಯವಿರುವ ಕಡೆ ಸಿಬ್ಬಂದಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ವೈದ್ಯಕೀಯ ಕಾಲೇಜುಗಳ ನಿರ್ದೇಶಕರಿಗೆ ಮತ್ತು ಸಂಬಂಧಪಟ್ಟ ಆಸ್ಪತ್ರೆಯ ಮುಖ್ಯಸ್ಥರಿಗೂ ನಿರ್ದೇಶನ ನೀಡಲಾಗಿದೆ. ಯಾದಗಿರಿ, ರಾಯಚೂರು, ಕಲಬುರಗಿ ಸೇರಿದಂತೆ ಮತ್ತಿತರ ಕೆಲವು ವೈದ್ಯಕೀಯ ಕಾಲೇಜುಗಳಲ್ಲಿ ಸಿಬ್ಬಂದಿಗಳ ಕೊರತೆ ಇತ್ತು. ಈಗಾಗಲೇ ಅದನ್ನು ಭರ್ತಿ ಮಾಡಿದ್ದೇವೆ. ಯಾವುದೇ ಕಾಲೇಜು ಇಲ್ಲವೇ ಆಸ್ಪತ್ರೆಗಳಲ್ಲಿ ಸಮಸ್ಯೆ ಎದುರಾಗಿಲ್ಲ. ಹಾಗೊಂದು ವೇಳೆ ಸಮಸ್ಯೆ ಇರುವುದನ್ನು ನಮ್ಮ ಗಮನಕ್ಕೆ ತಂದರೆ ತಕ್ಷಣವೇ ಪರಿಹರಿಸುವುದಾಗಿ ಆಶ್ವಾಸನೆ ನೀಡಿದರು. ಇದನ್ನೂ ಓದಿ: ಕಾಶ್ಮೀರದಲ್ಲಿ 11ನೇ ದಿನಕ್ಕೆ ಕಾಲಿಟ್ಟ ಸೇನಾ ಕಾರ್ಯಾಚರಣೆ – ಉಗ್ರರ ಗುಹೆಗಳು ಉಡೀಸ್‌

  • ಕನಕಪುರದ 250ಕ್ಕೂ ಹೆಚ್ಚು ಹಳ್ಳಿಗಳಿಗೆ ಕಾವೇರಿ ಕುಡಿಯುವ ನೀರು ಪೂರೈಕೆ: ಡಿಕೆಶಿ

    ಕನಕಪುರದ 250ಕ್ಕೂ ಹೆಚ್ಚು ಹಳ್ಳಿಗಳಿಗೆ ಕಾವೇರಿ ಕುಡಿಯುವ ನೀರು ಪೂರೈಕೆ: ಡಿಕೆಶಿ

    – ನಮ್ಮ ಅವಧಿಯಲ್ಲಿಯೇ ಮೆಡಿಕಲ್ ಕಾಲೇಜು ಬರಲಿದೆ: ಡಿಸಿಎಂ

    ರಾಮನಗರ: ಬೆಂಗಳೂರು (Bengaluru) ಮಾದರಿಯಲ್ಲಿ ಸಂಗಮದ ಬಳಿ ಕಾವೇರಿ ನೀರನ್ನು (Cauvery Water) ಪಂಪ್ ಮಾಡಿ ಕ್ಷೇತ್ರದ 250ಕ್ಕೂ ಹೆಚ್ಚು ಹಳ್ಳಿಗಳಿಗೆ ಶುದ್ಧ ಕುಡಿಯುವ ನೀರನ್ನು ತಲುಪಿಸುವ ಯೋಜನೆ ರೂಪಿಸಲಾಗುತ್ತಿದೆ. ಜೊತೆಗೆ ಕ್ಷೇತ್ರದ ಕೆರೆಗಳಿಗೂ ನೀರನ್ನು ತುಂಬಿಸುವ ಕೆಲಸಕ್ಕೆ ಚಾಲನೆ ನೀಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಹೇಳಿದರು.

    ಕನಕಪುರದ (Kanakapura) ಕೋಡಿಹಳ್ಳಿ ಹೋಬಳಿಯಲ್ಲಿ ಸೋಮವಾರ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನೀರಾವರಿ ಸಚಿವನಾದ ನಾನು ನನ್ನ ಕ್ಷೇತ್ರದ ಕೆರೆಗಳನ್ನು ತುಂಬಿಸುವ ಕೆಲಸ ಮಾಡುತ್ತಿದ್ದೇನೆ. ಶಿಂಷಾದಿಂದ ಸಾತನೂರು ಹೋಬಳಿಗೆ ನೀರು ತರಲಾಗುತ್ತಿದೆ. ಅರ್ಕಾವತಿಯಿಂದ ಕಸಬಾ ಹೋಬಳಿ ಕೆರೆಗಳನ್ನು ತುಂಬಿಸುವ ಕೆಲಸ ಮಾಡಲಾಗುತ್ತಿದೆ. ಹೊಸದುರ್ಗ ಭಾಗದ ಕೆರೆಗಳನ್ನು ಕಾವೇರಿ ನದಿ ನೀರಿನಿಂದ ತುಂಬಿಸಲಾಗುವುದು. ಈ ಅವಧಿಯಲ್ಲೇ ಮೆಡಿಕಲ್ ಕಾಲೇಜಿಗೆ ಮುಕ್ತಿ ನೀಡಲಾಗುವುದು. ಕ್ಷೇತ್ರದಲ್ಲಿ ಎರಡು ಮೆಡಿಕಲ್ ಕಾಲೇಜು ಇರಲಿದೆ. ಕನಕಪುರದಲ್ಲಿ ಇನ್ಫೋಸಿಸ್ ಸಹಾಯದಲ್ಲಿ ತಾಯಿ ಮಗು ಆಸ್ಪತ್ರೆ ತೆರೆಯಲಾಗಿದೆ. ಇಂತಹ ಸರ್ಕಾರಿ ಆಸ್ಪತ್ರೆ ಬೇರೆ ಎಲ್ಲಾದರೂ ಇದೆಯೇ? ನಾವು ಮಾಡುತ್ತಿರುವ ಕೆಲಸ ದೇಶಕ್ಕೆ ಮಾದರಿ. ನಾವು ಶುದ್ಧ ಕುಡಿಯುವ ನೀರಿನ ಘಟಕ, ಸೋಲಾರ್ ಪಾರ್ಕ್ ಮಾಡಿದೆವು. ನಂತರ ಈ ಯೋಜನೆಗಳು ದೇಶಕ್ಕೆ ಮಾದರಿಯಾಗಿವೆ. ನಮ್ಮ ಮೆಡಿಕಲ್ ಕಾಲೇಜನ್ನು ಯಡಿಯೂರಪ್ಪ ಅವರು ಚಿಕ್ಕಬಳ್ಳಾಪುರಕ್ಕೆ ಹಾಕಿಬಿಟ್ಟರು. ಇಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣವಾದರೆ ನೀವುಗಳು ಯಾರೂ ಬೆಂಗಳೂರಿಗೆ ಹೋಗಬೇಕಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: CBSE ಯಿಂದ ಸೇಫ್ಟಿ ಗೈಡ್‌ಲೈನ್ಸ್ ‌- ಶೌಚಾಲಯ ಹೊರತುಪಡಿಸಿ ಶಾಲೆಯ ಉಳಿದೆಲ್ಲಕಡೆ ಆಡಿಯೋವಿಶುವಲ್ ಸಿಸಿಟಿವಿ ಕಡ್ಡಾಯ

    ಆನೆಗಳ ಹಾವಳಿ ತಡೆಯಲು ಸುಮಾರು 50 ಕಿ.ಮೀ ಉದ್ದ ತಡೆಗೋಡೆ ನಿರ್ಮಾಣ ಮಾಡಲಾಗಿದೆ. ಮಿಕ್ಕ 50 ಕಿಮೀ ಅನ್ನು ಶೀಘ್ರವೇ ಪೂರ್ಣಗೊಳಿಸಿ ರೈತರ ಪರವಾಗಿ ಕೆಲಸ ಮಾಡುತ್ತೇವೆ. ನಮ್ಮ ಕ್ಷೇತ್ರದಲ್ಲಿ ಇಬ್ಬರು ರೈತರಂತೆ ಟ್ರಾನ್ಸ್ಫಾರ್ಮರ್ ನೀಡಿ ವಿದ್ಯುತ್ ಕ್ರಾಂತಿ ಮಾಡಿದ್ದೇವೆ. 25 ಸಾವಿರ ರೈತರಿಗೆ ಇದರಿಂದ ಉಪಯೋಗವಾಗಿದೆ. ಪಕ್ಕದ ಯಾವುದೇ ಕ್ಷೇತ್ರದಲ್ಲಿಯೂ ಈ ಸೌಲಭ್ಯವಿಲ್ಲ. ಹುಣಸನಹಳ್ಳಿ ಸೇರಿದಂತೆ ದೊಡ್ಡಾಲಹಳ್ಳಿಯಲ್ಲಿ ಸೋಲರ್ ವಿದ್ಯುತ್ ಘಟಕಗಳನ್ನು ಸ್ಥಾಪಿಸಲಾಗುತ್ತಿದೆ. ಹಗಲು ಹೊತ್ತಿನಲ್ಲಿಯೇ ರೈತರಿಗೆ ವಿದ್ಯುತ್ ನೀಡಲಾಗುವುದು. ಕ್ಷೇತ್ರದ 60-70 ಸಾವಿರ ಜನ ವಿದ್ಯಾಭ್ಯಾಸ, ಕೆಲಸದ ನಿಮಿತ್ತ ನಗರ ಪ್ರದೇಶ ಸೇರಿದ್ದಾರೆ. ನನ್ನನ್ನು ನಮ್ಮ ತಂದೆ ಬೆಂಗಳೂರು ಸೇರಿಸಿದ್ದರು. ಆದರೆ ನಮ್ಮ ಜನರು ಪಾನಿಪುರಿ, ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಊರಿಗೆ ಒಂದೆರಡು ಜನ ಉದ್ಧಾರವಾಗಿದ್ದಾರೆ. ಆದರೆ ಹೆಚ್ಚಿನ ಜನರಿಗೆ ಉತ್ತಮ ಜೀವನ ನೀಡಬೇಕು ಎಂದು ನಾನು ಪಣತೊಟ್ಟಿದ್ದೇನೆ. ಅದಕ್ಕೆ ಕೆಪಿಎಸ್ ಶಾಲೆಗಳನ್ನು ಪ್ರಾರಂಭ ಮಾಡಲಾಗುತ್ತಿದೆ. ಕೋಡಿಹಳ್ಳಿಯಲ್ಲಿ 10 ಎಕರೆ, ದೊಡ್ಡ ಆಲಹಳ್ಳಿಯಲ್ಲಿ ಶಾಲೆಗಾಗಿ ನಮ್ಮ ಸ್ವಂತ ಭೂಮಿಯನ್ನು ನೀಡಿದ್ದೇನೆ ಎಂದರು. ಇದನ್ನೂ ಓದಿ: ಸೋಪ್ ಬಾಕ್ಸ್‌ಲ್ಲಿ 14.69 ಕೋಟಿ ಮೌಲ್ಯದ ಕೊಕೇನ್ ಸ್ಮಗ್ಲಿಂಗ್ – ಇಬ್ಬರು ಮಹಿಳೆಯರು ಅರೆಸ್ಟ್

    ಸುರೇಶ್ ವಿರುದ್ಧ ದೇವೇಗೌಡರು ಅವರ ಅಳಿಯನನ್ನು ಬಿಜೆಪಿಯಿಂದ ನಿಲ್ಲಿಸಿದರು. ಅನಂತರ ಕುಮಾರಸ್ವಾಮಿ ಮಗನ ವಿರುದ್ಧ ಸುರೇಶ್ ಅವರನ್ನು ನಿಲ್ಲಿಸಬೇಕು ಎಂದು ಒತ್ತಡ ತರಲಾಯಿತು. ಅನಂತರ ಬೆಳವಣಿಗೆಯಲ್ಲಿ ಯೋಗೇಶ್ವರ್ ಅವರು ಕಾಂಗ್ರೆಸ್ ಸೇರಿದರು. ಅವರು ಜನರ ಆಶೀರ್ವಾದಿಂದ 22 ಸಾವಿರ ಮತಗಳ ಅಂತರದಿಂದ ಗೆದ್ದರು. ಬೆಂಗಳೂರು ದಕ್ಷಿಣ ಜಿಲ್ಲೆಯಿಂದ 4 ಜನ ಶಾಸಕರು ವಿಧಾನಸಭೆಯಲ್ಲಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ನಮ್ಮ ಜನ ಮೋಸ ಮಾಡಿಲ್ಲ. ನಮಗೆ ಬೆಂಗಳೂರಿನಲ್ಲಿ ಮೋಸ ಆಗಿದೆ. ನಮ್ಮ ಗ್ರಾಮೀಣ ಭಾಗದಲ್ಲಿ ನಮಗೆ ಮೋಸ ಆಗಿಲ್ಲ. ಬೇರೆ ಕಡೆ ವಾಲಿರುವವರಿಗೆ ಬುದ್ಧಿ ಹೇಳಿ. ಚುನಾವಣೆ ಸಮಯದಲ್ಲಿ ಅನೇಕರು ಬಂದು ತಲೆ ಕೆಡಿಸುವ ಪ್ರಯತ್ನ ಮಾಡುತ್ತಾರೆ. ನೀವು ಯಾವುದಕ್ಕೂ ಮಣಿಯಬಾರದು. ನಿಮ್ಮ ಹೆಣ ಹಾಗೂ ಪಲ್ಲಕ್ಕಿ ಹೊರುವವನು ನಾನು. ನನ್ನ ಹೆಣ, ಪಲ್ಲಕ್ಕಿ ಹೊರುವವರು ನೀವು. ನಿಮ್ಮ ಹಾಗೂ ನಮ್ಮ ಸಂಬಂಧ ಭಕ್ತ ಹಾಗೂ ಭಗವಂತನ ನಡುವಿನ ಸಂಬಂಧ. ಚನ್ನಪಟ್ಟಣದಲ್ಲಿ ಒಂಬತ್ತು ಜಿಲ್ಲಾ ಪಂಚಾಯತಿಗಳಿಗೆ ತೆರಳಿ ಜನಸಂಪರ್ಕ ಸಭೆ ಮೂಲಕ ಜನರ ಬಳಿಗೆ ಹೋಗಿ ನೂತನ ಪ್ರಯೋಗ ಮಾಡಲಾಯಿತು. ಸುರೇಶ್ ಅವರನ್ನು ಸೋಲಿಸಲು ಅವರು ಹೇಗೆ ತಂತ್ರ ಮಾಡಿದರೋ ಅದೇ ರೀತಿ ನಾವು ಸಹ ತಂತ್ರ ನಡೆಸಲಾಯಿತು. ಅಲ್ಲಿನ ಜನರಿಂದ 22 ಸಾವಿರ ಅರ್ಜಿಗಳನ್ನು ಸ್ವೀಕಾರ ಮಾಡಲಾಯಿತು. ಸುಮಾರು 500 ಕೋಟಿಗೂ ಹೆಚ್ಚು ಅನುದಾನ ನೀಡಲಾಯಿತು. 5 ಸಾವಿರಕ್ಕೂ ಹೆಚ್ಚು ಮನೆಗಳನ್ನು ಮಂಜೂರು ಮಾಡಲಾಯಿತು. ನೂರಾರು ಎಕರೆ ಜಮೀನು ಗುರುತಿಸಿ ಬಡವರಿಗೆ ನಿವೇಶನ ಹಂಚಲಾಯಿತು ಎಂದು ಹೇಳಿದರು. ಇದನ್ನೂ ಓದಿ: ಆಪರೇಷನ್ ಸಿಂಧೂರ ವೇಳೆ ಭಾರತದ ಸೇನಾ ಶಕ್ತಿಯನ್ನ ಇಡೀ ವಿಶ್ವವೇ ನೋಡಿದೆ; ಸಂಸತ್ ಅಧಿವೇಶನಕ್ಕೂ ಮುನ್ನ ಮೋದಿ ಮಾತು

  • ಹಾಸ್ಟೆಲ್‌ ಫ್ಯಾನ್‌ಗೆ ನೇಣು ಬಿಗಿದುಕೊಂಡು ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ

    ಹಾಸ್ಟೆಲ್‌ ಫ್ಯಾನ್‌ಗೆ ನೇಣು ಬಿಗಿದುಕೊಂಡು ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ

    ತಿರುವನಂತಪುರಂ: ಕೇರಳದ (Kerala) ಎರ್ನಾಕುಲಂ (Ernakulam) ಸರ್ಕಾರಿ ವೈದ್ಯಕೀಯ ಕಾಲೇಜಿನ (Medical College) ಹಾಸ್ಟೆಲ್ ರೂಮ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿನಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

    ಮೃತ ಯುವತಿಯನ್ನು ಕಾಸರಗೋಡು (Kasaragod) ಮೂಲದ ಅಂಬಿಲಿ (25) ಎಂದು ಗುರುತಿಸಲಾಗಿದೆ. ಆಕೆ ಕಲಮಸ್ಸೇರಿಯಲ್ಲಿ ಮೂರನೇ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಳು. ಶನಿವಾರ ಹಾಸ್ಟೆಲ್ ಕೋಣೆಯ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಆಕೆಯ ಶವ ಪತ್ತೆಯಾಗಿದ್ದು, ಇದನ್ನು ಗಮನಿಸಿದ ಆಕೆಯ ಸ್ನೇಹಿತೆಯರು ಹಾಸ್ಟೆಲ್‌ ಸಿಬ್ಬಂದಿಗೆ ಮಾಹಿತಿ ನೀಡಿದ್ದರು. ಇದನ್ನೂ ಓದಿ: Bengaluru | ಕುಟುಂಬ ಕಲಹದಿಂದ ಮಾನಸಿಕವಾಗಿ ನೊಂದು ಟೆಕ್ಕಿ ಆತ್ಮಹತ್ಯೆ

    ಇದು ಆತ್ಮಹತ್ಯೆಯಾಗಿರಬಹುದು ಪೊಲೀಸರು ಶಂಕಿಸಿದ್ದಾರೆ. ಆಕೆ ಮಾನಸಿಕ ತೊಂದರೆ ಮತ್ತು ಕಲಿಕಾ ನ್ಯೂನತೆ ಸಮಸ್ಯೆಗಳಿಂದ ಬಳಲುತ್ತಿದ್ದಳು. ಆದರೂ ಈ ಅಂಶಗಳು ದೃಢಪಟ್ಟಿಲ್ಲ. ಇನ್ನೂ ಕಳೆದ ಕೆಲವು ದಿನಗಳಿಂದ ಆಕೆ ಮೌನವಾಗಿರುತ್ತಿದ್ದಳು ಎಂದು ಆಕೆಯ ಸ್ನೇಹಿತೆಯರು ತಿಳಿಸಿದ್ದಾರೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.

    ಮರಣೋತ್ತರ ಪರೀಕ್ಷೆಯ ನಂತರ ಯುವತಿಯ ಶವವನ್ನು ಆಕೆಯ ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ. ಯುವತಿಯ ಸಾವಿನ ಹಿಂದಿನ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಈ ಸಂಬಂಧ ಪೊಲೀಸರು ಅಸ್ವಾಭಾವಿಕ ಸಾವಿನ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಡಿವೋರ್ಸ್‌ ಬಳಿಕ ಪತ್ನಿಗೆ ಜೀವನಾಂಶ ಹೊಂದಿಸಲು ದರೋಡೆಗೆ ಯತ್ನ – ಮಾಜಿ ಪತಿ ಸೇರಿ ಮೂವರು ಅರೆಸ್ಟ್‌

  • ಕೋಲಾರ ಜಿಲ್ಲೆಗೆ ಮೆಡಿಕಲ್ ಕಾಲೇಜು – `ಕೈ’ ಮುಖಂಡರ ಸಂಭ್ರಮಾಚರಣೆ

    ಕೋಲಾರ ಜಿಲ್ಲೆಗೆ ಮೆಡಿಕಲ್ ಕಾಲೇಜು – `ಕೈ’ ಮುಖಂಡರ ಸಂಭ್ರಮಾಚರಣೆ

    ಕೋಲಾರ: ದಾಖಲೆಯ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ (Siddaramaiah) ಅವರು ಜಿಲ್ಲೆಗೆ ಬಂಪರ್ ಕೊಡುಗೆಗಳನ್ನು ನೀಡಿದ್ದಾರೆ ಎಂದು ಕೋಲಾರದಲ್ಲಿ (Kolar) ಕಾಂಗ್ರೆಸ್ (Congress) ಮುಖಂಡರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

    ನಗರದ ಹೊಸ ಬಸ್ ನಿಲ್ದಾಣ ವೃತ್ತದಲ್ಲಿ ನೂರಾರು ಕಾಂಗ್ರೆಸ್ ಮುಖಂಡರು ಸಂಭ್ರಮಾಚರಣೆ ಮಾಡಿದರು. ಬಜೆಟ್‌ನಲ್ಲಿ ಕೋಲಾರಕ್ಕೆ ಮೆಡಿಕಲ್ ಕಾಲೇಜು, ಕೆಜಿಎಫ್‌ನಲ್ಲಿ ಹೈಟೆಕ್ ಕೃಷಿ ಮಾರುಕಟ್ಟೆ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. ಅಲ್ಲದೇ ರಸ್ತೆ ಅಭಿವೃದ್ದಿಗೆ 300 ಕೋಟಿ ರೂ., ಎತ್ತಿನಹೊಳೆ ಯೋಜನೆಗೆ 556 ಕೋಟಿ ರೂ. ನೀಡಿರುವ ಸಿಎಂಗೆ ಅಭಿನಂದನೆ ಸಲ್ಲಿಸಿದರು. ಇದನ್ನೂ ಓದಿ: ‘ಭಗವಂತ ಕೇಸರಿ’ ನಿರ್ದೇಶಕನ ಸಿನಿಮಾಗೆ ಮೆಗಾಸ್ಟಾರ್ ಚಿರಂಜೀವಿ ಗ್ರೀನ್ ಸಿಗ್ನಲ್

    ಕೋಲಾರಕ್ಕೆ ಯಾವುದೇ ಅನುದಾನ ನೀಡಿಲ್ಲ, ಯಾವುದೇ ಅಭಿವೃದ್ಧಿ ಮಾಡಿಲ್ಲ ಎನ್ನುವ ವಿರೋಧಿಗಳೇ ಇತ್ತ ನೋಡಿ ಎಂದು ವಿರೋಧ ಪಕ್ಷಗಳಿಗೆ ಕಾಂಗ್ರೆಸ್ ನಾಯಕರು ಸಂಭ್ರಮಾಚರಣೆ ಮಾಡುವ ಮೂಲಕ ಟಾಂಗ್ ನೀಡಿದರು. ಸಿದ್ದರಾಮಯ್ಯ ಅವರಿಗೆ ಜಯವಾಗಲಿ ಎಂದು ಘೋಷಣೆ ಕೂಗಿ, ಬಜೆಟ್‌ನಲ್ಲಿ ಹೆಚ್ಚು ಯೋಜನೆಗಳನ್ನ ತಂದುಕೊಟ್ಟ ಜಿಲ್ಲೆಯ ಸಚಿವರಿಗೆ, ಶಾಸಕರಿಗೆ ಕೃತಜ್ಞತೆ ಸಲ್ಲಿಸಿದರು. ಇದನ್ನೂ ಓದಿ: ಏಪ್ರಿಲ್‌ನಲ್ಲಿ ಪ್ರಧಾನಿ ಮೋದಿ ಶ್ರೀಲಂಕಾ ಭೇಟಿ ಸಾಧ್ಯತೆ

  • ಶೀಘ್ರದಲ್ಲೇ ವೈದ್ಯಕೀಯ ಕಾಲೇಜುಗಳಿಗೆ 650 ಸಹಾಯಕ ಪ್ರಾಧ್ಯಾಪಕರು, 1,200 ದಾದಿಯರ ನೇಮಕ: ಶರಣಪ್ರಕಾಶ್‌ ಪಾಟೀಲ್

    ಶೀಘ್ರದಲ್ಲೇ ವೈದ್ಯಕೀಯ ಕಾಲೇಜುಗಳಿಗೆ 650 ಸಹಾಯಕ ಪ್ರಾಧ್ಯಾಪಕರು, 1,200 ದಾದಿಯರ ನೇಮಕ: ಶರಣಪ್ರಕಾಶ್‌ ಪಾಟೀಲ್

    ಬೆಂಗಳೂರು: ವೈದ್ಯಕೀಯ ಶಿಕ್ಷಣ ಇಲಾಖೆಯಡಿ (Medical Education Department) ಬರುವ ಗ್ರೂಪ್‌-ಎ ನ 650 ಸಹಾಯಕ ಪ್ರಾಧ್ಯಾಪಕರು ಮತ್ತು 1,200 ನರ್ಸ್‌ಗಳನ್ನು (ದಾದಿಯರು) ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನೇಮಕ ಮಾಡಿಕೊಳ್ಳುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್ (Sharan Prakash Patil) ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

    ಈ ಸಂಬಂಧ ವೈದ್ಯಕೀಯ ಶಿಕ್ಷಣ ಇಲಾಖೆಯ ಅಧಿಕಾರಿಗಳ ಜೊತೆ ವಿಕಾಸಸೌಧದಲ್ಲಿ ಬುಧವಾರ ಮಹತ್ವದ ಸಭೆಯ ಅಧ್ಯಕ್ಷತೆ ವಹಿಸಿದ ಅವರು, ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳುವ ಉದ್ದೇಶದಿಂದ ಸ್ಪರ್ಧಾತಕ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕವೇ ಭರ್ತಿ ಮಾಡಿಕೊಳ್ಳಬೇಕೆಂದು ವೈದ್ಯಕೀಯ ಶಿಕ್ಷಣ ಇಲಾಖೆಗೆ ಸ್ಪಷ್ಟ ನಿರ್ದೇಶನ ನೀಡಿದ್ದಾರೆ.

    ಸಹಾಯಕ ಪ್ರಾಧ್ಯಾಪಕರು ಹಾಗೂ ನರ್ಸ್‌ಗಳ (Nurse) ನೇಮಕಾತಿ ಸಂದರ್ಭದಲ್ಲಿ ಭ್ರಷ್ಟಾಚಾರ ಮತ್ತು ಸ್ವಜನಪಕ್ಷಪಾತದ ಆರೋಪದ ನಡುವೆ ವೈದ್ಯಕೀಯ ಕಾಲೇಜು ಸಂಸ್ಥೆಗಳ ಮುಖ್ಯಸ್ಥರು ನೇಮಕಾತಿ ನಡೆಸುತ್ತಿದ್ದ ಪ್ರಸ್ತುತ ನೇಮಕಾತಿ ಪ್ರಕ್ರಿಯೆಯಿಂದ ತೃಪ್ತರಾಗದ ಸಚಿವರು, ಮುಂಬರುವ ಗ್ರೂಪ್‌-ಎ ಮತ್ತು ದಾದಿಯರ ನೇಮಕಾತಿಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕವೇ ಭರ್ತಿ ಮಾಡಿಕೊಳ್ಳಬೇಕೆಂದು ಪಾಟೀಲ್‌ ನಿರ್ದೇಶನ ನೀಡಿದರು. ಇದನ್ನೂ ಓದಿ: ತಲೆಗೂದಲು ಕಟ್‌, ರಕ್ತ ಹೊರತೆಗೆತ, ಕಠಿಣ ವ್ಯಾಯಾಮ, ಆಹಾರದಿಂದ ದೂರ – ತೂಕ ಇಳಿಸಲು ಏನೆಲ್ಲಾ ಮಾಡಿದ್ರು ವಿನೇಶ್‌?

    ರಾಜ್ಯಾದ್ಯಂತ 22 ವೈದ್ಯಕೀಯ ಕಾಲೇಜುಗಳು ಮತ್ತು 11 ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳು ಸೇರಿದಂತೆ ವೈದ್ಯಕೀಯ ಶಿಕ್ಷಣ ಇಲಾಖೆ ಅಡಿಯಲ್ಲಿ ಬರುತ್ತಿವೆ. ಈ ಹುದ್ದೆಗಳನ್ನು ನಿಯಮದಂತೆ ಯಾವುದೇ ಮುಲಾಜಿಗೊಳಗಾಗದೇ ಭರ್ತಿ ಮಾಡಬೇಕೆಂದು ಸಚಿವರು ತಾಕೀತು ಮಾಡಿದರು.

    ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆಯನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು. ಖಾಲಿ ಇರುವ ಹುದ್ದೆಗಳಿಗೆ ಪರೀಕ್ಷೆಗಳನ್ನು ನಡೆಸಲು ಕೆಇಎಗೆ ಅಗತ್ಯವಾದ ಸಹಕಾರ ನೀಡಬೇಕು ಜೊತೆಗೆ ಇಲಾಖೆಯ ನೇಮಕಾತಿ ಬೈಲಾಗಳನ್ನು ತಿದ್ದುಪಡಿ ಮಾಡಲಾಗುವುದು ಎಂದು ಪಾಟೀಲ್‌ ಹೇಳಿದರು. ಇದನ್ನೂ ಓದಿ: 20 ಲಕ್ಷ ಕೋಟಿ ಮಾರುಕಟ್ಟೆ ಬಂಡವಾಳ ಮೌಲ್ಯ ತಲುಪಿದ ಭಾರತದ ಮೊದಲ ಕಂಪನಿ ರಿಲಯನ್ಸ್ ಇಂಡಸ್ಟ್ರೀಸ್ 

    ಕೆಇಎ ಮೂಲಕ ಶುಶ್ರೂಷಕರನ್ನು ನೇಮಕ ಮಾಡಿಕೊಳ್ಳುವ ಪ್ರಸ್ತಾವನೆಯನ್ನು ಸರ್ಕಾರ ಕಳೆದೆರಡು ವರ್ಷಗಳ ಹಿಂದೆಯೇ ಕಳುಹಿಸಿತ್ತು. ಆದಾಗ್ಯೂ, ಸರಿಯಾದ ಸಿ ಅಂಡ್‌ ಆರ್‌ ನಿಯಮಗಳು, ರೋಸ್ಟರ್‌ ಸಿಸ್ಟಮ್‌ ಇಲ್ಲದಿದ್ದಲ್ಲಿ ಪರೀಕ್ಷೆಯನ್ನು ನಡೆಸುವುದು ಕಷ್ಟ ಎಂದು ಕೆಇಎ ಉತ್ತರಿಸಿದೆ ಎಂಬ ಮಾಹಿತಿಯನ್ನು ಸಭೆಯಲ್ಲಿ ಅಧಿಕಾರಿಗಳು ಸಚಿವರ ಗಮನಕ್ಕೆ ತಂದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ ದಾದಿಯರ ನೇಮಕಾತಿಗೆ ಅನ್ವಯವಾಗುವ ಸಿ ಮತ್ತು ಆರ್‌ ನಿಯಮಗಳನ್ನು ಅನುಸರಿಸುವಂತೆ ಸಚಿವರು ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕರು ಮತ್ತು ಜಂಟಿ ಕಾರ್ಯದರ್ಶಿಗೆ ಸೂಚಿಸಿದರು.

    ನೇಮಕಾತಿ ನಿಲುವಳಿಯನ್ನು ಕೆಇಎಗೆ ಹಸ್ತಾಂತರಿಸುವ ಸುಗಮ ಪ್ರಕ್ರಿಯೆಗಾಗಿ, ಪರೀಕ್ಷೆಗಳನ್ನು ನಡೆಸಲು ಕೆಇಎಗೆ ಪಠ್ಯಕ್ರಮಕ್ಕಾಗಿ ತಜ್ಞರ ಸಮಿತಿಯನ್ನು ರಚಿಸುವಂತೆ ಸಚಿವರು ವೈದ್ಯಕೀಯ ಶಿಕ್ಷಣ ನಿರ್ದೇಶಕಿ ಡಾ.ಸುಜಾತಾ ರಾಥೋಡ್‌ ಅವರಿಗೆ ಸೂಚಿಸಿದರು.

  • ಕನಕಪುರ, ರಾಮನಗರದಲ್ಲಿ ಮೆಡಿಕಲ್‌ ಕಾಲೇಜ್‌ ಇಲ್ಲ – ಮೂರು ಪ್ರಸ್ತಾಪಕ್ಕೆ ಒಪ್ಪಿಗೆ

    ಕನಕಪುರ, ರಾಮನಗರದಲ್ಲಿ ಮೆಡಿಕಲ್‌ ಕಾಲೇಜ್‌ ಇಲ್ಲ – ಮೂರು ಪ್ರಸ್ತಾಪಕ್ಕೆ ಒಪ್ಪಿಗೆ

    ಬೆಂಗಳೂರು: ಕನಕಪುರ (Kanakpura) ಹಾಗೂ ರಾಮನಗರದಲ್ಲಿ (Ramangara) ಮೆಡಿಕಲ್ ಕಾಲೇಜು (Medical College) ಸ್ಥಾಪಿಸಲು ಮುಂದಾಗಿದ್ದ ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಯತ್ನಕ್ಕೆ ಹಿನ್ನಡೆಯಾಗಿದೆ. ಎರಡು ಕಾಲೇಜುಗಳ ಪ್ರಸ್ತಾವನೆಯನ್ನು ರಾಷ್ಟ್ರೀಯ ವೈದ್ಯಕೀಯ ಆಯೋಗ (NMC) ತಿರಸ್ಕರಿಸಿದೆ.

    ಪ್ರಸ್ತಾವಿತ ಐದು ಕಾಲೇಜುಗಳ ಪೈಕಿ ಮೂರಕ್ಕೆ ಮಾತ್ರ ಎನ್‌ಎಂಸಿ ಒಪ್ಪಿಗೆ ಕೊಟ್ಟಿದೆ. ಎನ್‌ಎಂಸಿ ನಿರ್ಧಾರವನ್ನು ಕೇಂದ್ರ ಸಚಿವ ಕುಮಾರಸ್ವಾಮಿ (HD Kumaraswamy) ಸಮರ್ಥಿಸಿಕೊಂಡಿದ್ದಾರೆ. ಬಿಲ್ಡಿಂಗ್ ಇಲ್ಲದೇ ಕಾಲೇಜು ಹೇಗೆ ಆಗಲಿದೆ ಅಂತ ಪ್ರಶ್ನಿಸಿದ್ದಾರೆ. ಈ ವಿಚಾರದಲ್ಲಿ ತಾವು ರಾಜಕೀಯ ಮಾಡುವುದಿಲ್ಲ ಎಂದಿದ್ದಾರೆ.

     

    ಸಿಬ್ಬಂದಿ ಕೊರತೆ ಮತ್ತು ತಾಂತ್ರಿಕ ಸಮಸ್ಯೆಗಳ ಕಾರಣ ನೀಡಿ ರಾಮನಗರ ಮತ್ತು ಕನಕಪುರದಲ್ಲಿ ವೈದ್ಯಕೀಯ ಕಾಲೇಜ್ ಸ್ಥಾಪನೆ ಪ್ರಸ್ತಾವನೆಯನ್ನು ತಿರಸ್ಕರಿಸಲಾಗಿದೆ. ಇದನ್ನೂ ಓದಿ: ಗ್ಯಾರಂಟಿಗಳ ಭಾರದಿಂದ ಕಂಗೆಟ್ಟ ಸರ್ಕಾರ -ಆಪರೇಷನ್ ಬಿಪಿಎಲ್ ಕಾರ್ಡ್‌ಗೆ ಪ್ಲಾನ್!

    ಬೆಂಗಳೂರು ಉತ್ತರದ ವ್ಯಾಪ್ತಿಯ ಬಿಜಿಎಸ್​​ ವೈದ್ಯಕೀಯ ಕಾಲೇಜು, ಪಿಇಎಸ್ ಇನ್‌ಸ್ಟಿಟ್ಯೂಟ್ ಆಫ್ ಹೆಲ್ತ್ ಸೈನ್ಸಸ್ ಆಂಡ್‌ ರಿಸರ್ಚ್‌ ಸೆಂಟರ್ ಹಾಗೂ ಬಾಗಲಕೋಟೆಯ ಎಸ್‌ಆರ್ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಎನ್‌ಎಂಸಿ ಒಪ್ಪಿಗೆ ನೀಡಿದೆ.

    ವಿಧಾನಸೌಧದಲ್ಲಿ ಈ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್ ಅವರು, ರಾಮನಗರ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ತರಬೇಕು ಎನ್ನುವುದು ನಮ್ಮೆಲ್ಲರ ಬೇಡಿಕೆಯಾಗಿತ್ತು. ಈ ಪ್ರಸ್ತಾಪವನ್ನು ಬಜೆಟ್‌ನಲ್ಲೂ ಸೇರಿಸಲಾಗಿತ್ತು. ಆದರೆ ಸಿಬ್ಬಂದಿ ಕೊರತೆ ಎಂದು ಅನುಮತಿ ನೀಡಿಲ್ಲ ಎಂಬ ವಿಚಾರ ತಿಳಿಸಿದ್ದು, ಈ ಬಗ್ಗೆ ಗಮನಹರಿಸುತ್ತೇವೆ ಎಂದು ಹೇಳಿದರು.

     

  • ಮೇ ತಿಂಗಳಿನಲ್ಲಿ 65 ಸಾವು – ಮೃತ್ಯು ಕೂಪವಾಗಿದೆ ಕೊಪ್ಪಳ ಜಿಲ್ಲಾಸ್ಪತ್ರೆ

    ಮೇ ತಿಂಗಳಿನಲ್ಲಿ 65 ಸಾವು – ಮೃತ್ಯು ಕೂಪವಾಗಿದೆ ಕೊಪ್ಪಳ ಜಿಲ್ಲಾಸ್ಪತ್ರೆ

    ಕೊಪ್ಪಳ: ಜೀವ ಉಳಿಸಬೇಕಾದ ಸರ್ಕಾರಿ ಆಸ್ಪತ್ರೆ ಈಗ ಜೀವ ತೆಗೆಯುವ ಆಸ್ಪತ್ರೆಯಾಗಿ ಬದಲಾಗಿದೆ. ಕೊಪ್ಪಳ ಜಿಲ್ಲಾ ಆಸ್ಪತ್ರೆಯಲ್ಲಿ (Koppal District Hospital) ಮೇ ಒಂದೇ ತಿಂಗಳಿನಲ್ಲಿ 65 ಮಂದಿ ಮೃತಪಟ್ಟಿದ್ದಾರೆ.

    ಈ ವರ್ಷದ ಜನವರಿಯಿಂದ ಇಲ್ಲಿಯವರೆಗೂ ಈ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ರೋಗಿಗಳ ಸಂಖ್ಯೆ 354. ಕೊಪ್ಪಳದ ಕಿಮ್ಸ್ ಆಡಳಿತ ಮಂಡಳಿಯೇ ಈ ಅಂಕಿ ಅಂಶಗಳನ್ನು ನೀಡಿದೆ. ಇಲ್ಲಿಗೆ ಬರುವ ರೋಗಿಗಳಿಗೆ ಸರಿಯಾಗಿ ಚಿಕಿತ್ಸೆ ಸಿಗುತ್ತಿಲ್ಲ. ಐಸಿಯು ಬೆಡ್‌ ಇಲ್ಲ. ಸರಿಯಾದ ವೈದ್ಯರಿಲ್ಲ ಎಂಬ ಹಲವು ದೂರುಗಳು ಈ ಆಸ್ಪತ್ರೆಯ ಮೇಲಿದೆ. ಇದನ್ನೂ ಓದಿ:  ಟೀಂ ಇಂಡಿಯಾದ ಉಪನಾಯಕ ಹಾರ್ದಿಕ್‌ ಪಾಂಡ್ಯ ಈಗ ಎಲ್ಲಿದ್ದಾರೆ?

    ಸದ್ಯ ಈ ಆಸ್ಪತ್ರೆಯಲ್ಲಿಸಾವು ಹೆಚ್ಚಾಗುತ್ತಿದ್ದರೂ ಕಿಮ್ಸ್ ಆಡಳಿತ ಮಂಡಳಿ ಇಲ್ಲಿ ಏನು ನಡೆದಿಲ್ಲ ಎಂಬಂತೆ ವರ್ತನೆ ಮಾಡುತ್ತಿದೆ. ಸಾವಿನ ಸಂಖ್ಯೆಯ ಬಗ್ಗೆ ಕಿಮ್ಸ್ ನಿರ್ದೇಶಕ ವಿಜಯ ಇಟಗಿ ಅವರನ್ನ ಕೇಳಿದರೆ ಅವರು ಬೇರೆಯೇ ಉತ್ತರ ನೀಡುತ್ತಾರೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳು ನಮ್ಮಲ್ಲಿ ಬಂದು ಒಂದೇ ದಿನದಲ್ಲಿ ಸಾವನ್ನಪ್ಪುತ್ತಾರೆ. ಹೀಗಾಗಿ ನಮ್ಮಲ್ಲಿ ಸಾವಿನ ಸಂಖ್ಯೆ ಹೆಚ್ಚಾಗ್ತಿದೆ ಎಂದು ಹೇಳುವ ಮೂಲಕ ಜಾರಿಕೊಂಡಿದ್ದಾರೆ.

    ಕೂಡಲೇ ಸರ್ಕಾರ ಹಾಗೂ ಆಡಳಿತ ಮಂಡಳಿ ಜನರಿಗೆ ಉತ್ತಮ ಸೇವೆ ನೀಡುವತ್ತ ಗಮನ ಹರಿಸಬೇಕಿದೆ.

     

  • `ನೀಟ್ʼ ಅಭ್ಯರ್ಥಿಗಳ ಸಿಇಟಿ ನೋಂದಣಿ – ವದಂತಿಗೆ ಕೆಇಎ ಸ್ಪಷ್ಟನೆ

    `ನೀಟ್ʼ ಅಭ್ಯರ್ಥಿಗಳ ಸಿಇಟಿ ನೋಂದಣಿ – ವದಂತಿಗೆ ಕೆಇಎ ಸ್ಪಷ್ಟನೆ

    – ವದಂತಿ ಹಬ್ಬಿಸುವವರ ವಿರುದ್ಧ ಕಾನೂನು ಕ್ರಮ – ಕೆಇಎ ಎಚ್ಚರಿಕೆ

    ಬೆಂಗಳೂರು: ‘ನೀಟ್’ ಪರೀಕ್ಷೆ (NEET Exam) ಬರೆದವರು ಕೂಡ ರಾಜ್ಯದ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಸೀಟು ಪಡೆಯಲು ಸಿಇಟಿಗೆ ನೋಂದಣಿ ಮಾಡಿಸಬೇಕು ಎಂಬ ನಿಯಮ ಹಿಂದಿನಿಂದಲೂ ಜಾರಿಯಲ್ಲಿದೆ. ಇದು ಹೊಸದಾಗಿ ಜಾರಿಯಾಗಿರುವ ನಿಯಮವೇನೂ ಅಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸ್ಪಷ್ಟಪಡಿಸಿದೆ.

    ಈ ಸಂಬಂಧವಾಗಿ ಕೆಇಎ ಹೊಸ ನಿಯಮ (KEA New Rules) ಜಾರಿಗೊಳಿಸಿರುವುದರಿಂದ ಹಲವಾರು ವಿದ್ಯಾರ್ಥಿಗಳಿಗೆ ಅನಾನುಕೂಲವಾಗಿದೆ ಎಂದು ಕೆಲವರು ಅನಗತ್ಯವಾಗಿ ಗುಲ್ಲೆಬ್ಬಿಸುತ್ತಿರುವ ಕಾರಣಕ್ಕೆ ಕೆಇಎ ಈ ಸ್ಪಷ್ಟನೆ ನೀಡಿದೆ. ಪ್ರಸಕ್ತ ಸಾಲಿನಲ್ಲಿ ‘ನೀಟ್’ ಬರೆದಿರುವ ಸುಮಾರು 2 ಲಕ್ಷ ಅಭ್ಯರ್ಥಿಗಳು (NEET Candidates) ಸಿಇಟಿಗೆ ನೋಂದಣಿ ಮಾಡಿಸಿದ್ದಾರೆ. ಇದರಲ್ಲಿ 50,000 ವಿದ್ಯಾರ್ಥಿಗಳು ಹೊರ ರಾಜ್ಯಗಳಿಗೆ ಸೇರಿದವರಾಗಿದ್ದಾರೆ. ಇದನ್ನೂ ಓದಿ: ಮೋದಿಗೆ 75 ವರ್ಷವಾದ್ರೂ ಪ್ರಧಾನಿ ಆಗಿಯೇ ಆಗ್ತಾರೆ- ಕೇಜ್ರಿವಾಲ್‌ಗೆ ಅಮಿತ್ ಶಾ ಟಕ್ಕರ್

    ರಾಜ್ಯದಲ್ಲಿ ವೈದ್ಯಕೀಯ ಸೀಟು (Medical Seats) ಹಂಚಿಕೆಯನ್ನು ಕೆಇಎ ನಿರ್ವಹಿಸುತ್ತಾ ಬಂದಿದ್ದು, ನೀಟ್ ಬರೆದವರು ಸಿಇಟಿಗೆ ನೋಂದಣಿ ಮಾಡಿಸಬೇಕೆಂಬುದು ಈ ಹಿಂದಿನ ವರ್ಷಗಳಲ್ಲಿಯೂ ಜಾರಿಯಲ್ಲಿತ್ತು. ಅದೇ ವ್ಯವಸ್ಥೆ ಈ ವರ್ಷವೂ ಯಾವುದೇ ಬದಲಾವಣೆ ಇಲ್ಲದೆ ಮುಂದುವರಿದಿದೆ. ಎಷ್ಟು ಬಾರಿ ನೀಟ್ ಪರೀಕ್ಷೆ ತೆಗೆದುಕೊಂಡಿದ್ದರೂ ಕೂಡ ಆಯಾ ವರ್ಷದ ಸೀಟು ಹಂಚಿಕೆ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕಾದರೆ ಸಿಇಟಿಗೆ ನೋಂದಣಿ (CET Registration) ಮಾಡಿಸಿಕೊಳ್ಳುವುದು ಕಡ್ಡಾಯ. ರಾಜ್ಯದಲ್ಲಿ ವೈದ್ಯಕೀಯ ಸೀಟು ಹಂಚಿಕೆಗೆ ಕೆಇಎ ನೋಡಲ್ ಸಂಸ್ಥೆ ಎಂದೂ ಕೆಇಎ ಸ್ಪಷ್ಟಪಡಿಸಿದೆ. ಇದನ್ನೂ ಓದಿ: ಆರ್​ಸಿಬಿ ವಿರುದ್ಧದ ಪಂದ್ಯಕ್ಕೆ ಪಂತ್‌ ಔಟ್‌; ಡೆಲ್ಲಿ ತಂಡಕ್ಕೆ ಹೊಸ ನಾಯಕ – ಬೆಂಗಳೂರು ಬಾಯ್ಸ್‌ ಕೈಹಿಡಿಯುತ್ತಾ ಲಕ್‌?

    ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಕೋರ್ಸ್ ಗಳ ಕೌನ್ಸೆಲಿಂಗ್ ಪ್ರಕ್ರಿಯೆಯನ್ನು ಏಕಕಾಲದಲ್ಲಿ ನಡೆಸುತ್ತಿದ್ದು ಇದಕ್ಕಾಗಿ ಒಂದೇ ಅರ್ಜಿಯನ್ನು ಸ್ವೀಕರಿಸಲಾಗಿದೆ. ಈ ಸಂಬಂಧ ರಾಜ್ಯ‌ ಮತ್ತು ರಾಷ್ಟಮಟ್ಟದಲ್ಲೂ ಮಾಧ್ಯಮಗಳಲ್ಲಿ ಸಾಕಷ್ಟು ಪ್ರಚಾರ ಕೊಡಲಾಗಿದೆ ಎಂದೂ ಕೆಇಎ ತಿಳಿಸಿದೆ. ಕೆಇಎ ನಿಯಮಗಳನ್ನು ಈ ರೀತಿ ತಪ್ಪಾಗಿ ಅರ್ಥೈಸಿ, ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಗೊಂದಲ ಉಂಟು ಮಾಡುವವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕೆಇಎ ಎಚ್ಚರಿಸಿದೆ.

  • ರಾಮನಗರ, ಕನಕಪುರ ಎರಡೂ ಕಡೆಯೂ ಮೆಡಿಕಲ್ ಕಾಲೇಜು ಆಗುತ್ತೆ, ರಾಜಕೀಯಕ್ಕಾಗಿ ಗೊಂದಲ ಮಾಡಲಾಗ್ತಿದೆ: ಡಿಕೆ ಸುರೇಶ್

    ರಾಮನಗರ, ಕನಕಪುರ ಎರಡೂ ಕಡೆಯೂ ಮೆಡಿಕಲ್ ಕಾಲೇಜು ಆಗುತ್ತೆ, ರಾಜಕೀಯಕ್ಕಾಗಿ ಗೊಂದಲ ಮಾಡಲಾಗ್ತಿದೆ: ಡಿಕೆ ಸುರೇಶ್

    ರಾಮನಗರ: ರಾಜೀವ್ ಗಾಂಧಿ ಮೆಡಿಕಲ್ ಕಾಲೇಜು ಸ್ಥಳಾಂತರ ವಿಚಾರಕ್ಕೆ ದಿನೇ ದಿನೇ ಹೋರಾಟ ಹೆಚ್ಚಾಗುತ್ತಿರುವ ಕುರಿತು ಚನ್ನಪಟ್ಟಣದ ವಂದಾರಗುಪ್ಪೆ ಗ್ರಾಮದಲ್ಲಿ ಸಂಸದ ಡಿಕೆ ಸುರೇಶ್ (DK Suresh) ಪ್ರತಿಕ್ರಿಯೆ ನೀಡಿದ್ದಾರೆ.

    ರಾಮನಗರದ (Ramanagara) ಮೆಡಿಕಲ್ ಕಾಲೇಜು ಎಲ್ಲೂ ಹೋಗಲ್ಲ. ರಾಜಕೀಯ ಉದ್ದೇಶದಿಂದ ಬಂದ್ ಮಾಡುವವರಿಗೆ ನಮ್ಮದೇನು ತಕರಾರಿಲ್ಲ. ಜಿಲ್ಲೆಯ ಜನರ ಹಿತ ಕಾಪಾಡುವುದು ನಮ್ಮ ಕರ್ತವ್ಯ. ಯಾರು ಗೊಂದಲ ಹುಟ್ಟುಹಾಕುತ್ತಿದ್ದಾರೋ ಗೊತ್ತಿಲ್ಲ. ಕನಕಪುರದ (Kanakapura) ಮೆಡಿಕಲ್ ಕಾಲೇಜು ಕನಕಪುರದಲ್ಲೇ ಆಗುತ್ತದೆ. ರಾಮನಗರದ ಮೆಡಿಕಲ್ ಕಾಲೇಜು ರಾಮನಗರದಲ್ಲೇ ಆಗುತ್ತದೆ. ಐದು ವರ್ಷದಲ್ಲಿ ನಮ್ಮ ಕೆಲಸ ಪೂರ್ಣ ಮಾಡುತ್ತೇವೆ. ರಾಜಕೀಯಕ್ಕಾಗಿ ಗೊಂದಲ ಮಾಡುವವರು ಮಾಡಲಿ. 20 ವರ್ಷದಿಂದ ಮಲಗಿದ್ದವರು ಈಗ ಎದ್ದಿದ್ದಾರೆ. ಅವರ ಪಾಡಿಗೆ ಅವರು ಆರೋಪ ಮಾಡಲಿ ಎಂದು ಪರೋಕ್ಷವಾಗಿ ಜೆಡಿಎಸ್‌ಗೆ ಟಾಂಗ್ ನೀಡಿದರು. ಇದನ್ನೂ ಓದಿ: ಸಮಾನತೆ ಇಲ್ಲದ ಧರ್ಮ ಧರ್ಮವೇ ಅಲ್ಲ – ಪ್ರಿಯಾಂಕ್ ಖರ್ಗೆ

    ದಿನೇ ದಿನೇ ಕಾವೇರಿ (Kaveri Water) ಹೋರಾಟ ಹೆಚ್ಚಾಗುತ್ತಿರುವ ವಿಚಾರದ ಕುರಿತು ಮಾತನಾಡಿದ ಅವರು, ರೈತರಿಗೆ ನೀರು ಉಳಿಸಬೇಕು. ರಾಜ್ಯದ ಹಿತ ಕಾಯಬೇಕೆಂಬುದು ನಮ್ಮ ಉದ್ದೇಶ. ಈ ನಿಟ್ಟಿನಲ್ಲಿ ನಾನು ಸರ್ಕಾರಕ್ಕೆ ಮನವಿ ಮಾಡಿದ್ದೇನೆ. ಆದಷ್ಟು ಬೇಗ ಸುಪ್ರೀಂ ಕೋರ್ಟ್‌ನಲ್ಲಿ ಮತ್ತೆ ಮನವಿ ಮಾಡಿ ರಾಜ್ಯದ ವಸ್ತುಸ್ಥಿತಿಯನ್ನು ಕೋರ್ಟ್‌ಗೆ ಅರ್ಥ ಮಾಡಿಸುವ ಕೆಲಸ ಮಾಡಬೇಕು. ಈ ನಿಟ್ಟಿನಲ್ಲಿ ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ವಿದ್ಯುತ್ ಕ್ಷಾಮ ತಂದಿರಿಸಿದೆ: ಬೊಮ್ಮಾಯಿ

    ರಾಜ್ಯದಲ್ಲಿ ಬರಪೀಡಿತ ಪ್ರದೇಶ ಘೋಷಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈ ಬಾರಿ ನಿರೀಕ್ಷಿತ ಮಟ್ಟದಲ್ಲಿ ಮಳೆ ಆಗಿಲ್ಲ. 46% ರಷ್ಟು ಮಳೆ ಕಡಿಮೆ ಆಗಿದೆ. ರಾಮನಗರದಲ್ಲೂ ಮಳೆ ಇಲ್ಲದೆ ಬಿತ್ತನೆ ಕಾರ್ಯ ನಡೆದಿಲ್ಲ. ಕುಡಿಯುವ ನೀರು ಹಾಗೂ ಜಾನುವಾರುಗಳ ಮೇವಿಗೆ ಆದ್ಯತೆ ನೀಡಬೇಕು. ಈ ನಿಟ್ಟಿನಲ್ಲಿ ಸರ್ಕಾರ ಕಾರ್ಯಪ್ರವೃತ್ತವಾಗಲಿದೆ ಎಂದರು. ಇದನ್ನೂ ಓದಿ: ರಾಜಕೀಯ ಲಾಭಕ್ಕೆ ಮಾಡುವ ಉಚಿತ ಯೋಜನೆಗಳ ಆಯಸ್ಸು ಸ್ವಲ್ಪ ದಿನ ಮಾತ್ರ: ಬೊಮ್ಮಾಯಿ

    ಬಿಎಲ್ ಸಂತೋಷ್ (B.L.Santhosh) ಸಂಪರ್ಕದಲ್ಲಿ ಕಾಂಗ್ರೆಸ್‌ನ (Congress) 45 ಶಾಸಕರಿದ್ದಾರೆ ಎಂಬ ವಿಚಾರದ ಕುರಿತು, ಅವರ ಹೇಳಿಕೆಯನ್ನು ಉಲ್ಟಾ ಮಾಡಿಕೊಳ್ಳಿ ಎಂದಿದ್ದಾರೆ. ಬಿಜೆಪಿಯವರೇ (BJP) 45 ಜನ ನಮ್ಮ ಹತ್ತಿರ ಬರುತ್ತಾರೆ ಅಂದುಕೊಳ್ಳಿ ಎಂದು ಪರೋಕ್ಷವಾಗಿ ಆಪರೇಷನ್ ಹಸ್ತದ ಬಗ್ಗೆ ಸುಳಿವು ನೀಡಿದ್ದಾರೆ. ಇದನ್ನೂ ಓದಿ: ಉದಯ್ ಸ್ಟಾಲಿನ್‌ದು ಹಿಟ್ಲರ್ ಮನಸ್ಥಿತಿ: ಬೊಮ್ಮಾಯಿ ವಾಗ್ದಾಳಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]