Tag: Medical Course

  • 2ನೇ ಸುತ್ತಿನ ವೈದ್ಯಕೀಯ ಕೋರ್ಸ್ ಕೌನ್ಸೆಲಿಂಗ್, ಸಿಇಟಿ 3ನೇ ಸುತ್ತಿಗೆ ಆಪ್ಷನ್ ದಾಖಲು ಆರಂಭ: ಕೆಇಎ

    2ನೇ ಸುತ್ತಿನ ವೈದ್ಯಕೀಯ ಕೋರ್ಸ್ ಕೌನ್ಸೆಲಿಂಗ್, ಸಿಇಟಿ 3ನೇ ಸುತ್ತಿಗೆ ಆಪ್ಷನ್ ದಾಖಲು ಆರಂಭ: ಕೆಇಎ

    ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್‌ಗಳ (Medical Course) ಎರಡನೇ ಮುಂದುವರಿದ ಸುತ್ತು ಹಾಗೂ ಎಂಜಿನಿಯರಿಂಗ್ ಇತ್ಯಾದಿ ಯುಜಿಸಿಇಟಿ ಕೋರ್ಸ್‌ಗಳ 3ನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಶನಿವಾರದಿಂದ ಆರಂಭವಾಗಿದ್ದು, ಕಾಷನ್ ಡೆಪಾಸಿಟ್ ಪಾವತಿಸಿ, ಇಚ್ಛೆ/ಆಯ್ಕೆಗಳನ್ನು ಅದಲು/ಬದಲು ಮಾಡಿಕೊಳ್ಳಲು ಹಾಗೂ ಹೊಸದಾಗಿ ಸೇರಿಸುವುದಕ್ಕೆ ಸೆ.8ರವರೆಗೆ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ (H Prasanna) ತಿಳಿಸಿದ್ದಾರೆ.

    ಸಮಯದ ಅಭಾವ ಇರುವ ಕಾರಣ, ನಿಗದಿತ ಕಾಲ ಮಿತಿಯಲ್ಲೇ ಎಲ್ಲ ಪೋಷಕರು/ವಿದ್ಯಾರ್ಥಿಗಳು ಮುಂಗಡ ಹಣ ಪಾವತಿಸಿ, ಇಚ್ಛೆ/ಆಯ್ಕೆಗಳನ್ನು ದಾಖಲಿಸುವ/ಅದಲು-ಬದಲು ಮಾಡುವ ಕೆಲಸವನ್ನು ಮಾಡಬೇಕು ಎಂದು ಪತ್ರಿಕಾ ಹೇಳಿಕೆಯಲ್ಲಿ ಸಲಹೆ ನೀಡಿದ್ದಾರೆ.

    ಸೀಟ್ ಮ್ಯಾಟ್ರಿಕ್ಸ್‌ಗೆ ಹೊಸದಾಗಿ ಸೇರ್ಪಡೆಯಾದ ಬೆಳಗಾವಿಯ ಜೆಎನ್‌ಎಂಸಿ ಕಾಲೇಜಿನ 12 ವೈದ್ಯಕೀಯ ಸೀಟು ಹಾಗೂ ಮೈಸೂರಿನ ಫರೂಕಿಯ ದಂತ ವೈದ್ಯಕೀಯ ಕಾಲೇಜಿನ 40 ಸೀಟು ಹಾಗೂ ಬಿಜಿಎಸ್ ಗ್ಲೋಬಲ್ ದಂತ ವೈದ್ಯಕೀಯ ಕಾಲೇಜಿನ 50 ಸೀಟುಗಳನ್ನು ಆಸಕ್ತರು ತಮ್ಮ ಇಚ್ಛೆ/ಆಯ್ಕೆಗಳ ಪಟ್ಟಿಗೆ ಹೊಸದಾಗಿ ಸೇರಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಇದಲ್ಲದೆ, ಹಾಲಿ ಇರುವ ಇಚ್ಛೆ/ಆಯ್ಕೆಗಳನ್ನು ಬದಲಿಸಿಕೊಳ್ಳುವುದಕ್ಕೂ ಅವಕಾಶ ನೀಡಲಾಗಿದೆ ಎಂದು ವಿವರಿಸಿದ್ದಾರೆ.

    ಎಂಟು ಸರ್ಕಾರಿ ವೈದ್ಯಕೀಯ ಕಾಲೇಜುಗಳಿಗೆ ಹೆಚ್ಚುವರಿಯಾಗಿ 400 ವೈದ್ಯಕೀಯ ಸೀಟುಗಳು ಸೇರ್ಪಡೆಯಾಗಿದ್ದು, ಅವುಗಳನ್ನು ಕೂಡ ಈ ಸುತ್ತಿಗೆ ಪರಿಗಣಿಸಲಾಗುತ್ತದೆ. ಅಲ್ಲದೆ, ಈ ಸರ್ಕಾರಿ ಕಾಲೇಜುಗಳಲ್ಲಿ 25 ಲಕ್ಷ ರೂಪಾಯಿಗೆ ಎನ್‌ಆರ್‌ಐ ಸೀಟುಗಳನ್ನು ಸರ್ಕಾರ ಕೊಟ್ಟಿದ್ದು, ಅರ್ಹ ಎನ್‌ಆರ್‌ಐ ಅಭ್ಯರ್ಥಿಗಳು ಹೊಸದಾಗಿ ಸದರಿ ಕಾಲೇಜುಗಳ ಸೀಟುಗಳಿಗೆ ಇಚ್ಛೆ/ಆಯ್ಕೆಗಳನ್ನು ನಮೂದಿಸಬಹುದು. ಎನ್‌ಆರ್‌ಐ ಅಲ್ಲದ ಅಭ್ಯರ್ಥಿಗಳು ಕೂಡ ಈ ಕಾಲೇಜುಗಳಲ್ಲಿ ‘ಕ್ಯೂ’ ಸೀಟುಗಳಿಗೆ ಇಚ್ಛೆ/ಆಯ್ಕೆಗಳನ್ನು ದಾಖಲಿಸಬಹುದು. ಭರ್ತಿಯಾಗದೆ ಉಳಿಯುವ ಎನ್‌ಆರ್‌ಐ ಸೀಟುಗಳನ್ನು ‘ಕ್ಯೂ’ ಸೀಟುಗಳನ್ನಾಗಿ ಪರಿವರ್ತಿಸಿ, ಹಂಚಿಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

    ಯುಜಿಸಿಇಟಿ – ಕಾಷನ್ ಡೆಪಾಸಿಟ್:
    ಯುಜಿಸಿಇಟಿ (UGCET) ಕೋರ್ಸ್‌ಗಳ ಪ್ರವೇಶಕ್ಕೆ ಸಂಬಂಧಿಸಿದಂತೆ 3ನೇ ಸುತ್ತಿನಲ್ಲಿ ಭಾಗವಹಿಸಲು ಆಸಕ್ತಿ ಇರುವ ಎಲ್ಲ ವರ್ಗದ ಅರ್ಹ ಅಭ್ಯರ್ಥಿಗಳು 10 ಸಾವಿರ ರೂಪಾಯಿ ಕಾಷನ್ ಡೆಪಾಸಿಟ್ ಪಾವತಿಸಬೇಕು. ಬಳಿಕ ಇಚ್ಛೆ/ಆಯ್ಕೆಗಳನ್ನು ಅದಲು/ಬದಲು ಮಾಡಿಕೊಳ್ಳುವುದಲ್ಲದೆ, ಹೊಸದಾಗಿಯೂ ಕೋರ್ಸ್‌ಗಳನ್ನು ದಾಖಲಿಸಲು ಅವಕಾಶ ನೀಡಲಾಗುವುದು ಎಂದಿದ್ದಾರೆ.

    ಮೊದಲ ಮತ್ತು ಎರಡನೇ ಸುತ್ತಿನಲ್ಲಿ ಯಾವುದೇ ಸೀಟು ಹಂಚಿಕೆಯಾಗದವರು, 2ನೇ ಸುತ್ತಿನಲ್ಲಿ ಹಂಚಿಕೆಯಾದ ಸೀಟಿಗೆ ಯಾವುದೇ ಛಾಯ್ಸ್ ನೀಡದಿರುವ, 2ನೇ ಸುತ್ತಿನಲ್ಲಿ ಛಾಯ್ಸ್-1 ಅಥವಾ ಛಾಯ್ಸ್-2 ಆಯ್ಕೆ ಮಾಡಿ ಶುಲ್ಕ ಪಾವತಿ ಮಾಡದಿರುವ ಹಾಗೂ ಛಾಯ್ಸ್-3 ದಾಖಲಿಸಿ, ಕಾಷನ್ ಡೆಪಾಸಿಟ್ ಪಾವತಿಸದೇ ಇರುವ ಅಭ್ಯರ್ಥಿಗಳಿಗೆ 3ನೇ ಸುತ್ತಿನಲ್ಲಿ ಕಾಷನ್ ಡೆಪಾಸಿಟ್ ಪಾವತಿಸಿ, ಆಪ್ಷನ್ಸ್ ದಾಖಲಿಸಲು ಅವಕಾಶ ನೀಡಲಾಗಿದೆ ಎಂದು ವಿವರಿಸಿದ್ದಾರೆ.

    ಸೀಟು ರದ್ದಿಗೂ ಸೆ.8 ಕೊನೆ ದಿನ:
    ಅಭ್ಯರ್ಥಿಗಳು ತಮಗೆ ಹಂಚಿಕೆಯಾಗಿರುವ ಕಾಲೇಜುಗಳಿಗೆ ಸೇರಿಕೊಂಡಿದ್ದು, ಆ ನಂತರ ಬೇಡ ಎನ್ನುವವರೂ ಸೆ.8ರೊಳಗೆ ಕೆಇಎಗೆ ಖುದ್ದು ಬಂದು ಸೀಟು ರದ್ದುಪಡಿಸಿಕೊಳ್ಳಬೇಕು. ಹಾಗೆ ಮಾಡುವುದರಿಂದ ಸದರಿ ಸೀಟುಗಳನ್ನು ನಂತರದ ಸುತ್ತಿನಲ್ಲಿ ಇತರರಿಗೆ ಹಂಚಿಕೆ ಮಾಡಲು ಅನುಕೂಲವಾಗುತ್ತದೆ ಎಂದು ಅವರು ಸಲಹೆ ನೀಡಿದ್ದಾರೆ.

    ಮೂರನೇ ಸುತ್ತಿನಲ್ಲಿ ಸೀಟು ಹಂಚಿಕೆಯಾದ ನಂತರ ಕಾಲೇಜಿಗೆ ಸೇರುವುದು ಕಡ್ಡಾಯವಾಗಿರುತ್ತದೆ. ಹೀಗಾಗಿ ಅಭ್ಯರ್ಥಿಗಳು ಎಚ್ಚರವಹಿಸಿ, ಕೋರ್ಸ್/ಕಾಲೇಜುಗಳನ್ನು ಆಯ್ಕೆ ಮಾಡಿಕೊಳ್ಳಬೇಕು. ಒಂದು ವೇಳೆ ಈ ಸುತ್ತಿನಲ್ಲಿ ಹಂಚಿಕೆಯಾದ ಕಾಲೇಜಿಗೆ ಪ್ರವೇಶ ಪಡೆಯದೇ ಇದ್ದಲ್ಲಿ ಪೂರ್ಣ ಶುಲ್ಕವನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುತ್ತದೆ. ಅಲ್ಲದೇ ಕಾನೂನು ಕ್ರಮ ಕೂಡ ಜರುಗಿಸಲಾಗುತ್ತದೆ ಎಂದು ಎಚ್ಚರಿಸಿದ್ದಾರೆ.

    ಸರ್ಕಾರಿ ಕಾಲೇಜುಗಳಲ್ಲಿನ ಕೆಲವು ಕೋರ್ಸ್‌ಗಳಿಗೆ ಶುಲ್ಕ ರಿಯಾಯಿತಿ ಕೂಡ ಇದ್ದು, ಅಭ್ಯರ್ಥಿಗಳು ಇಚ್ಛೆ/ಆಯ್ಕೆಗಳನ್ನು ದಾಖಲಿಸುವ ಸಂದರ್ಭದಲ್ಲಿ ಈ ಕುರಿತು ಯೋಚಿಸಬೇಕು ಎಂದು ಅವರು ವಿವರಿಸಿದ್ದಾರೆ.

  • ಪಿಜಿ ಮೆಡಿಕಲ್: ಸ್ಟ್ರೇ ವೇಕೆನ್ಸಿ ಸುತ್ತಿಗೆ ಅರ್ಜಿ ಸಲ್ಲಿಸಲು ಫೆ.19ರವರೆಗೆ ಅವಕಾಶ: ಕೆಇಎ

    ಪಿಜಿ ಮೆಡಿಕಲ್: ಸ್ಟ್ರೇ ವೇಕೆನ್ಸಿ ಸುತ್ತಿಗೆ ಅರ್ಜಿ ಸಲ್ಲಿಸಲು ಫೆ.19ರವರೆಗೆ ಅವಕಾಶ: ಕೆಇಎ

    ಬೆಂಗಳೂರು: 2024ನೇ ಸಾಲಿನ ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳ (PG Medical Course) ಪ್ರವೇಶ ಸಲುವಾಗಿ ಸ್ಟ್ರೇ ವೇಕೆನ್ಸಿ (Stray Vacancy) ಸುತ್ತಿನಲ್ಲಿ ಭಾಗವಹಿಸಲು ಇಚ್ಚಿಸುವ ಹಾಗೂ ಇದುವರೆಗೂ ನೋಂದಣಿ ಮಾಡದಿರುವ ಅರ್ಹರು ಫೆ.19ರೊಳಗೆ ಅರ್ಜಿ ಸಲ್ಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮತ್ತೊಮ್ಮೆ ಅವಕಾಶ ನೀಡಿದೆ.

    ಹೊಸದಾಗಿ ಅರ್ಜಿ ಸಲ್ಲಿಸಿದವರು ಹಾಗೂ ಇದುವರೆಗೂ ಮೂಲ ದಾಖಲೆಗಳ ಪರಿಶೀಲನೆ ಮಾಡಿಸಿಕೊಳ್ಳದಿರುವವರು ಫೆ.19 ಅಥವಾ 20ರಂದು ಕೆಇಎ ಕಚೇರಿಗೆ ಬಂದು ಪರಿಶೀಲನೆ ಮಾಡಿಸಿಕೊಳ್ಳಬಹುದು. ಬಳಿಕ ದಾಖಲೆಗಳನ್ನು ಕೂಡ ಸಲ್ಲಿಸಬಹುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. ಇದನ್ನೂ ಓದಿ: ಅಟಲ್‌ಜೀ ಜನ್ಮ ಶತಾಬ್ಧಿ – ವಾಜಪೇಯಿ ಜತೆ ಕೆಲಸ ಮಾಡಿದ ಸಮಕಾಲೀನ ಕಾರ್ಯಕರ್ತರಿಗೆ ಬಿಜೆಪಿ ಗೌರವ

    ಮಾಪ್ ಅಪ್ ಸುತ್ತಿನ ಸೀಟು ಹಂಚಿಕೆ ನಂತರ 460 ಪಿಜಿ ವೈದ್ಯಕೀಯ ಹಾಗೂ 37 ಡಿಎನ್ ಬಿ ಸೀಟುಗಳು ಹಂಚಿಕೆಯಾಗದೆ ಉಳಿದಿವೆ. ಈ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಮನವಿ ಮೇರೆಗೆ ಹೊಸದಾಗಿ ಅರ್ಜಿ ಸಲ್ಲಿಸುವುದಕ್ಕೂ ಅವಕಾಶ ನೀಡಲಾಗಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಡಿ.ಕೆ.ಶಿವಕುಮಾರ್‌ಗೆ ಒಳ್ಳೆಯದಾಗಲಿ ಅಂತ ರಾಜಣ್ಣ ಮಾತಾಡ್ತಿದ್ದಾರೆ: ಡಿ.ಕೆ.ಸುರೇಶ್

  • ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆ – ಫೆ.18, 19ರಂದು ದಾಖಲೆ ಸಲ್ಲಿಸಿ: ಕೆಇಎ

    ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆ – ಫೆ.18, 19ರಂದು ದಾಖಲೆ ಸಲ್ಲಿಸಿ: ಕೆಇಎ

    ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳ (Medical Course) ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆಯಲ್ಲಿ ಪಾಲ್ಗೊಳ್ಳ ಬಯಸುವ ಅಭ್ಯರ್ಥಿಗಳು ಫೆ.18 ಮತ್ತು 19ರಂದು ಇಲ್ಲಿನ ಕೆಇಎ ಕಚೇರಿಗೆ ಮೂಲ ದಾಖಲೆಗಳನ್ನು ಸಲ್ಲಿಸಬೇಕು ಎಂದು ಕೆಇಎ ಸೋಮವಾರ ಪ್ರಕಟಣೆಯಲ್ಲಿ ತಿಳಿಸಿದೆ.

    ಈಗಾಗಲೇ ದಾಖಲೆಗಳನ್ನು ಪರಿಶೀಲನೆಗೆ ಒಳಪಡಿಸಿ ವೆರಿಫಿಕೇಷನ್ ಸ್ಲಿಪ್ ಹೊಂದಿರುವ ಅಭ್ಯರ್ಥಿಗಳು ಈ ಅವಕಾಶ ಬಳಸಿಕೊಳ್ಳಬಹುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಅವರು ಹೇಳಿದ್ದಾರೆ. ಇದನ್ನೂ ಓದಿ: ಗ್ಯಾರಂಟಿ ಕೊಡಕ್ಕಾಗ್ತಿಲ್ಲ – ರಾಜ್ಯ ಸರ್ಕಾರದ ಖಜಾನೆ ಸಂಪೂರ್ಣ ಖಾಲಿ: ಎನ್.ರವಿಕುಮಾರ್ ಆರೋಪ

    ಈ ಸುತ್ತಿನ ಸೀಟು ಹಂಚಿಕೆಯ ವೇಳಾಪಟ್ಟಿ ಹಾಗೂ ಮಾರ್ಗಸೂಚಿಯನ್ನು ಶೀಘ್ರವೇ ಪ್ರಕಟಿಸಲಾಗುವುದು ಎಂದೂ ಹೇಳಲಾಗಿದೆ. ಇದನ್ನೂ ಓದಿ: ಬೆಮುಲ್‌ನಿಂದ ಬೆಳಗಾವಿ ರೈತರಿಗೆ ಗುಡ್‌ನ್ಯೂಸ್‌ – ಹಸು, ಎಮ್ಮೆ ಹಾಲಿನ ಪ್ರೋತ್ಸಾಹ ಧನ ಹೆಚ್ಚಳ

  • ವೈದ್ಯಕೀಯ ಕೋರ್ಸುಗಳ ನೋಂದಣಿಗೆ ಅಂತಿಮ ಅವಕಾಶ: ಕೆಇಎ

    ವೈದ್ಯಕೀಯ ಕೋರ್ಸುಗಳ ನೋಂದಣಿಗೆ ಅಂತಿಮ ಅವಕಾಶ: ಕೆಇಎ

    ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸುಗಳಿಗೆ (Medical Courses) ಅರ್ಹರಾಗಿರುವ ಅಭ್ಯರ್ಥಿಗಳು ನೋಂದಣಿ ಮಾಡಿಸಿಕೊಳ್ಳಲು ಮತ್ತು ಯುಜಿ ನೀಟ್ (NEET-UG) ರೋಲ್ ನಂಬರನ್ನು ನಮೂದಿಸಲು ಆ.16ರ ಬೆಳಗ್ಗೆ 6 ಗಂಟೆಯಿಂದ ಆ.19ರ ಬೆಳಗ್ಗೆ 10 ಗಂಟೆಯವರೆಗೆ ಮತ್ತೊಮ್ಮೆ ಅವಕಾಶ ನೀಡಲಾಗಿದೆ. ಇದು ಅಂತಿಮ ಅವಕಾಶವಾಗಿದ್ದು, ಅರ್ಹರು ಈ ಅವಕಾಶವನ್ನು ಬಳಸಿಕೊಳ್ಳಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಶುಕ್ರವಾರ ತಿಳಿಸಿದೆ.

    ಇದುವರೆಗೂ ನೀಡಿದ್ದ ಅವಕಾಶಗಳನ್ನು ಬಳಸಿಕೊಳ್ಳದೇ ಇರುವವರು ಆನ್‌ಲೈನ್ ಮೂಲಕ ನೋಂದಾಯಿಸಿ, ಶುಲ್ಕವನ್ನು ಪಾವತಿಸಬಹುದು. ಹೆಚ್ಚಿನ ಮಾಹಿತಿಗೆ ಪ್ರಾಧಿಕಾರದ ಜಾಲತಾಣವನ್ನು ನೋಡಬಹುದು ಎಂದು ಪ್ರಕಟಣೆ ಹೇಳಿದೆ. ಇದನ್ನೂ ಓದಿ: ಜವಾಹರಲಾಲ್ ನೆಹರು ತಾರಾಲಯ ಆಧುನಿಕರಣಕ್ಕೆ ಅಗತ್ಯ ಪ್ರಸ್ತಾವನೆ ಸಲ್ಲಿಸಿ: ಬೋಸರಾಜು ಸೂಚನೆ

    ಇದೇ ರೀತಿಯಲ್ಲಿ ಈಗಾಗಲೇ ಎರಡು ಹಂತಗಳಲ್ಲಿ ನಡೆದಿರುವ ಮೂಲ ದಾಖಲೆಗಳ ಪರಿಶೀಲನೆಗೆ ಹಾಜರಾಗದಿದ್ದ ಎನ್‌ಆರ್‌ಐ/ವಿದೇಶಿ ವಿದ್ಯಾರ್ಥಿಗಳು ಮತ್ತು ಬೆಂಗಳೂರಿನ ಸೆಂಟ್ ಜಾನ್ಸ್ ಮೆಡಿಕಲ್ ಕಾಲೇಜಿನ ಕೆಟಗರಿ-2ರಿಂದ ಕೆಟಗರಿ-8ರ ವ್ಯಾಪ್ತಿಯ ವಿದ್ಯಾರ್ಥಿಗಳು ಆ.19ರ ಬೆಳಗ್ಗೆ 11 ಗಂಟೆಗೆ ಮೂಲ ಪ್ರಮಾಣಪತ್ರಗಳೊಂದಿಗೆ ಪ್ರಾಧಿಕಾರದ ಕಚೇರಿಗೆ ಖುದ್ದಾಗಿ ಹಾಜರಾಗಬೇಕು ಎಂದು ಮಾಹಿತಿ ನೀಡಿದೆ. ಇದನ್ನೂ ಓದಿ: Tungabhadra Dam |ಈವರೆಗೂ ಸಾಧ್ಯವಾಗಿಲ್ಲ ತಾತ್ಕಾಲಿಕ ಗೇಟ್- ಮಾಧ್ಯಮಗಳ ಚಿತ್ರೀಕರಣಕ್ಕೆ ನಿರ್ಬಂಧ

  • ಹಳ್ಳಿಯಲ್ಲಿ ವೈದ್ಯರಾಗಲಿರುವ ವಿದ್ಯಾರ್ಥಿಗಳಿಗೆ ಶೇ.10 ಮೀಸಲಾತಿ

    ಹಳ್ಳಿಯಲ್ಲಿ ವೈದ್ಯರಾಗಲಿರುವ ವಿದ್ಯಾರ್ಥಿಗಳಿಗೆ ಶೇ.10 ಮೀಸಲಾತಿ

    ಮುಂಬೈ: ವೈದ್ಯರಾದ ಬಳಿಕ ಗ್ರಾಮೀಣ ಪ್ರದೇಶಗಳಲ್ಲಿ ಸೇವೆ ಸಲ್ಲಿಸಲು ಇಚ್ಛಿಸುವ ವೈದ್ಯಕೀಯ ವಿದ್ಯಾರ್ಥಿಗಳಿಗೆ ಸ್ನಾತಕೋತ್ತರ ಕೋರ್ಸ್‍ಗಳಲ್ಲಿ ಶೇ.10ರಷ್ಟು ಮೀಸಲಾತಿ ನೀಡುವ ಕಾಯ್ದೆ ತರಲು ಮಹಾರಾಷ್ಟ್ರ ಸರ್ಕಾರ ಮುಂದಾಗಿದೆ.

    ಮಸೂದೆ ಅಂಗೀಕಾರವಾಗಿ ಕಾಯ್ದೆಯಾದ ಬಳಿಕ ಮಹಾರಾಷ್ಟ್ರದ ಸರ್ಕಾರಿ ಆಸ್ಪತ್ರೆಗಳಲ್ಲಿ, ದೀರ್ಘಾವಧಿಯ ಆಧಾರದ ಮೇಲೆ ಸ್ವಯಂಪ್ರೇರಣೆಯಿಂದ ತಮ್ಮ ಸೇವೆ ಸಲ್ಲಿಸಲು ಸಿದ್ಧರಿರುವ ಅಭ್ಯರ್ಥಿಗಳಿಗೆ ವೈದ್ಯಕೀಯ ಸ್ಥಾನಗಳನ್ನು ಕಾಯ್ದಿರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

    ವಿದ್ಯಾರ್ಥಿಗಳು ಮುಂದೆ ವೈದ್ಯರಾದ ಬಳಿಕ ಗ್ರಾಮೀಣ ಭಾಗದಲ್ಲಿ ಸೇವೆ ಸಲ್ಲಿಸಲು ಸಿದ್ಧರಿದ್ದರೆ ಅವರಿಗೆ ಈ ಹೊಸ ಮೀಸಲಾತಿ ದೊರಕುತ್ತದೆ. ಸರ್ಕಾರಿ ಆಸ್ಪತ್ರೆಗಳು, ವಿಶೇಷವಾಗಿ ಗ್ರಾಮೀಣ ಪ್ರದೇಶ, ಬುಡಕಟ್ಟು ಪ್ರದೇಶಗಳಲ್ಲಿ ವೈದ್ಯರ ಕೊರತೆಯಿದೆ. ಹೀಗಾಗಿ ಈ ಕೊರತೆಯನ್ನು ನೀಗಿಸಲು ವೈದ್ಯಕೀಯ ಕಾಲೇಜುಗಳಿಗೆ ಈ ಹೊಸ ಮೀಸಲಾತಿ ವ್ಯವಸ್ಥೆಯನ್ನು ಪರಿಚಯಿಸಲು ಮಹಾರಾಷ್ಟ್ರ ಸರ್ಕಾರ ಪ್ಲಾನ್ ಮಾಡಿದೆ.

    ಈ ಮೀಸಲಾತಿ ಪಡೆಯುವ ವಿದ್ಯಾರ್ಥಿಗಳು ಕೋರ್ಸ್ ಮುಗಿದ ನಂತರ ಸರ್ಕಾರಿ ಆಸ್ಪತ್ರೆಗಳಲ್ಲಿ ಕನಿಷ್ಠ 5 ವರ್ಷಗಳ ಕಾಲ ಕಡ್ಡಾಯವಾಗಿ ಕರ್ತವ್ಯ ನಿರ್ವಹಿಸಬೇಕಾಗುತ್ತದೆ ಎನ್ನುವ ಅಂಶ ಈ ಮಸೂದೆಯಲ್ಲಿ ಇರಲಿದೆ.