ಲಕ್ನೋ: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು ತಮ್ಮ ಹಿಂದಿನ ಲೋಕಸಭಾ ಕ್ಷೇತ್ರವಾದ ಅಮೆಥಿಯಲ್ಲಿ ಹೋಂ ಐಸೋಲೇಷನ್‍ನಲ್ಲಿರುವ ಕೋವಿಡ್-19 ಸೋಂಕಿತರಿಗೆ ಅಗತ್ಯವಿರುವ ಮೆಡಿಕಲ್ ಕಿಟ್‍ನನ್ನು ಕಳುಹಿಸಿಕೊಟ್ಟಿದ್ದಾರೆ ಎಂದು ಪಕ್ಷದ ಮುಖಂಡರೊಬ್ಬರು ಶನಿವಾರ ತಿಳಿಸಿದ್ದಾರೆ.
ಪಕ್ಷದ ಸೇವಾ ಸತ್ಯಾಗ್ರಹ ಕಾರ್ಯಕ್ರಮದಡಿ ಸುಮಾರು 10,000 ಮೆಡಿಕಲ್ ಕಿಟ್‍ಗಳು ಬಂದಿದ್ದು, ಅವುಗಳನ್ನು ಅಗತ್ಯವಿರುವ ಜನರಿಗೆ ನೀಡಲಾಗುತ್ತದೆ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಮುಖ್ಯಸ್ಥ ಪ್ರದೀಪ್ ಸಿಂಘಾಲ್ ತಿಳಿಸಿದ್ದಾರೆ.
ಅಮೆಥಿಯ ಮಾಜಿ ಲೋಕಸಭಾ ಸಂಸದರಾಗಿರುವ ರಾಹುಲ್ ಗಾಂಧಿಯವರು ಈ ಮುನ್ನ 20 ಆಮ್ಲಜನಕ ಸಾಂದ್ರಕ ಮತ್ತು ಆಕ್ಸಿಜನ್ ಸಿಲಿಂಡರ್‌ಗಳನ್ನು ಕಳುಹಿಸಿಕೊಟ್ಟಿದ್ದರು. ಸದ್ಯ ರಾಹುಲ್ ಗಾಂಧಿಯವರು ಕೇರಳದ ವಯನಾಡುವಿನ ಲೋಕಸಭಾ ಸಂಸದರಾಗಿದ್ದಾರೆ. ಇದನ್ನು ಓದಿ: ಪತಿಯ ಸಮ್ಮುಖದಲ್ಲಿಯೇ ಪ್ರೇಮಿಯ ಜೊತೆ ಪತ್ನಿಯ ಮದುವೆ
ಬೆಂಗಳೂರು: ಕೊರೊನಾ ಸಾಂಕ್ರಾಮಿಕ ರೋಗದಿಂದ ಬಳಲುತ್ತಿರುವ ಜನರಿಗೆ ಅನೇಕ ಸೆಲೆಬ್ರಿಟಿಗಳು ತಮ್ಮ ಕೈಲಾದಷ್ಟು ಸಹಾಯ ಮಾಡುತ್ತಿದ್ದಾರೆ. ಸದ್ಯ ಸ್ಯಾಂಡಲ್‍ವುಡ್ ನಟ ಜಯರಾಮ್ ಕಾರ್ತಿಕ್ ಕೂಡ ಇದೀಗ ಕೊರೊನಾ ಸಂಕಷ್ಟದಲ್ಲಿರುವವರಿಗೆ ನೆರವು ನೀಡುತ್ತಿದ್ದಾರೆ.
ಹೌದು, ನಟ ಜೆಕೆ ಹಾಗೂ ಅದ್ವಿತಿ ಶೆಟ್ಟಿ ಅಭಿನಯಿಸುತ್ತಿರುವ ‘ಐರಾವನ್’ ಚಿತ್ರತಂಡ ಆಕ್ಸಿಜನ್ ವ್ಯವಸ್ಥೆಯುಳ್ಳ ಅಂಬುಲೆನ್ಸ್ ನೀಡಿದ್ದಾರೆ. ಚಿತ್ರ ನಿರ್ಮಾಪಕ ಡಾ. ನಿರಂತರ್ ಗಣೇಶ್, ನಟ ಕಾರ್ತಿಕ್, ಮತ್ತು ನಟ ವಿವೇಕ್ ಭಾನುವಾರ ಬ್ಯಾಟರಾಯಪುರದಲ್ಲಿ 10 ಸಾವಿರ ಕೋವಿಡ್ ಮೆಡಿಕಲ್ ಕಿಟ್ ಮತ್ತು ಔಷಧಿಯನ್ನು ವಿತರಣೆ ಮಾಡಿದ್ದಾರೆ.
ಈ ಕುರಿರತಂತೆ ಜೆಕೆ ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಫೋಟೋವನ್ನು ಹಂಚಿಕೊಂಡಿದ್ದು, ಆರೋಗ್ಯ ಭಾರತಿ ಮತ್ತು ಸೇವಾ ಭಾರತಿ ಪರವಾಗಿ ಐರಾವನ್ ಚಿತ್ರ ನಿರ್ಮಾಪಕ ಡಾ. ನಿರಂತರಾ ಗಣೇಶ್ ಅವರೊಂದಿಗೆ ಬ್ಯಾಟರಾಯನಪುರದ ಗ್ರಾಮೀಣ ಜನರ ಸೇವೆಗಾಗಿ ಆಕ್ಸಿಜನ್ ಸಹಿತ ಅಂಬ್ಯುಲೆನ್ಸ್ ದಾನ ಮಾಡಲಾಗಿದೆ. ಹಾಗೂ 10,000 ಕೋವಿಡ್ ಮೆಡಿಕಲ್ ಕಿಟ್‍ನನ್ನು, ಕೋವಿಡ್-19 ಚಿಕಿತ್ಸೆ ನೀಡಲು ಅಗತ್ಯವಿರುವ ಎಲ್ಲಾ ಔಷಧಿಗಳನ್ನು ನೀಡಲಾಗಿದೆ. ಈ ಸಂದರ್ಭದಲ್ಲಿ ಆರ್‍ಎಸ್‍ಎಸ್ ದಕ್ಷಿಣ ವಲಯದ ಪ್ರಧಾನ ಕಾರ್ಯದರ್ಶಿ ಎನ್. ತಿಪ್ಪೇಸ್ವಾಮಿ, ಆರೋಗ್ಯ ಭಾರತಿ ಕರ್ನಾಟಕ ರಾಜ್ಯ ಜೆ.ಟಿ ಕಾರ್ಯದರ್ಶಿ ಗಂಗಾಧರನ್, ಐರಾವನ್ ಚಲನಚಿತ್ರ ನಟ ವಿವೇಕ್ ಧ್ವಜಾರೋಹಣ ಮಾಡಿದ ನಂತರ ಕೋವಿಡ್-19 ವೈದ್ಯಕೀಯ ಕಿಟ್‍ಗಳನ್ನು ಸಾರ್ವಜನಿಕರಿಗೆ ವಿತರಿಸಿದರು ಎಂದು ಕ್ಯಾಪ್ಷನ್‍ನಲ್ಲಿ ಬರೆದುಕೊಂಡಿದ್ದಾರೆ.
ಇತ್ತೀಚೆಗಷ್ಟೇ ನಟ ರಿಯಲ್ ಸ್ಟಾರ್ ಉಪೇಂದ್ರ ಸಿನಿ ಕಾರ್ಮಿಕರಿಗೆ ಅಗತ್ಯ ವಸ್ತು ಹಾಗೂ ಆಹಾರ ಕಿಟ್ ವಿತರಿಸಿದರು. ನಟ ಶ್ರೀಮುರುಳಿ ಆಸ್ಪತ್ರೆಯಲ್ಲಿರುವ ಕೊರೊನಾ ವಾರಿಯರ್ಸ್‍ಗೆ ಊಟವನ್ನು ಕಳುಹಿಸಿಕೊಟ್ಟಿದ್ದರು. ಬಿಗ್‍ಬಾಸ್ ಕಾರ್ಯಕ್ರಮ ಮುಕ್ತಾಯದ ನಂತರ ನಟಿ ಶುಭಾ ಪೂಂಜಾ ಕೂಡ ಆಹಾರದ ಕಿಟ್ ವಿತರಿಸಿದರು.
ಹಿರಿಯ ನಟಿ ಲೀಲಾವತಿ, ಪುತ್ರ ವಿನೋದ್ ರಾಜ್ ಸೇರಿದಂತೆ ನಟ ಜಗ್ಗೇಶ್, ಸುದೀಪ್, ಭುವನ್ ಪೊನ್ನಣ್ಣ, ಹರ್ಷಿಕಾ ಪೂಣಚ್ಛ ಹೀಗೆ ಹಲವಾರು ಸೆಲೆಬ್ರಿಟಿಗಳು ಕಷ್ಟದಲ್ಲಿರುವವರಿಗೆ ನೆರವು ನೀಡುತ್ತಿದ್ದಾರೆ.
ಮಡಿಕೇರಿ: ಮೆಡಿಕಲ್ ಕಿಟ್‍ಗಳ ಖರೀದಿಯಲ್ಲಿ ನಡೆದಿರುವ ಭ್ರಷ್ಟಾಚಾರವನ್ನು ರಾಜ್ಯ ಸರ್ಕಾರ ನ್ಯಾಯಾಂಗ ತನಿಖೆಗೆ ವಹಿಸಬೇಕು ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಒತ್ತಾಯಿಸಿದ್ದಾರೆ.
ಮಡಿಕೇರಿ ನಗರದ ಪಕ್ಷದ ಕಚೇರಿಯಲ್ಲಿ ಮಾತನಾಡಿದ ಅವರು, ಸರ್ಕಾರ ಕೊರೊನಾ ಮತ್ತು ರೋಗಿಯ ಹೆಸರಲ್ಲಿ ಹಣ ಮಾಡುತ್ತಿದೆ. ಇತರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ದುಪ್ಪಟ್ಟು ಹಣ ಕೊಟ್ಟು ಉಪಕರಣಗಳನ್ನು ಖರೀಸಿದಿಸಿದೆ. ಇದರ ಬಗ್ಗೆ ಧ್ವನಿ ಎತ್ತಿದ ಬಳಿಕ ದ್ವಂದ್ವ ಹೇಳಿಕೆಗಳನ್ನು ಕೊಡುತ್ತಿದ್ದಾರೆ.
ಭ್ರಷ್ಟಾಚಾರದ ಬಗ್ಗೆ ಸುಪ್ರಿಂ ಕೋರ್ಟ್ ಛೀಮಾರಿ ಹಾಕಿದೆ. ಕೇಂದ್ರದಲ್ಲಿರುವುದು ಒಂದು ಮೊಂಡ ಹಾಗೂ ಭಂಡ ಸರ್ಕಾರ. ಅವರು ಅಧಿಕಾರಕ್ಕಾಗಿ ಏನನ್ನು ಬೇಕಾದರೂ ಮಾಡುತ್ತಾರೆ. ಇವರಿಗೆ ಜನತೆಯ ಹಿತ ಬೇಕಾಗಿಲ್ಲ. ಭಾವನಾತ್ಮಕವಾಗಿ ಜನರನ್ನು ಹಿಡಿದಿಟ್ಟುಕೊಳ್ಳುವ ತಂತ್ರಗಾರಿಕೆಯನ್ನು ಬಿಜೆಪಿ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ನಡೆದಿರುವ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸುವಂತೆ ವಿರೋಧ ಪಕ್ಷದವರು ಒತ್ತಾಯಿಸಿದರೂ ಸದನ ಸಮಿತಿಯಲ್ಲಿ ಸ್ಪೀಕರ್ ತನಿಖೆಗೆ ಅವಕಾಶ ಕೊಟ್ಟಿಲ್ಲ. ಈ ಹಿಂದೆ ಆಡಳಿತದಲ್ಲಿದ್ದ ಕಾಂಗ್ರೆಸ್ ಪಕ್ಷದ ವಿರುದ್ಧ ಆರೋಪಗಳು ಕೇಳಿ ಬಂದಾಗ ಕೇಂದ್ರದಲ್ಲಿ ಎನ್‍ಡಿಎ ಸರ್ಕಾರ ಇದ್ದಾಗಲೂ ಕಾಂಗ್ರೆಸ್ 7 ಪ್ರಕರಣಗಳನ್ನು ಸಿಬಿಐ ತನಿಖೆಗೆ ಕೊಟ್ಟಿದ್ದೇವೆ. ಆಡಳಿತ ಸರ್ಕಾರದ ಮೇಲೆ ಜನತೆಗೆ ಅಪ ನಂಬಿಕೆಗಳು ಬರಬಾರದು. ಆದ್ದರಿಂದ ಹೈ ಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳಿಂದ ನ್ಯಾಯಾಂಗ ತನಿಖೆಗೆ ವಹಿಸಬೇಕು. ಸತ್ಯ-ಅಸತ್ಯತೆಗಳು ರಾಜ್ಯದ ಜನತೆಗೆ ಗೊತ್ತಾಗಬೇಕು. ಒಂದು ವೇಳೆ ತನಿಖೆಗೆ ವಹಿಸದಿದ್ದರೆ ಬೀದಿಗೆ ಇಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಮಡಿಕೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ನಳಿನ್ ಕುಮಾರ್, ಅವರ ಸರ್ಕಾರ ಇದ್ದಾಗ ಇಂದಿರಾ ಕ್ಯಾಂಟಿನ್ ಹೆಸರಿನಲ್ಲಿ ಎಷ್ಟು ಅವ್ಯವಹಾರ ನಡೆಸಿದರು ಎನ್ನೋದು ಗೊತ್ತಿದೆ. ಮೊದಲು ಅದರ ಲೆಕ್ಕವನ್ನು ಕೊಡಲಿ. ಈಶ್ವರ ಕಂಡ್ರೆ ಅವರು ಮನೆ ನಿರ್ಮಿಸುವಾಗ ಎಷ್ಟು ಲೂಟಿ ಹೊಡೆದರು ಎನ್ನೋದು ಗೊತ್ತಿದೆ. ಅದೆಲ್ಲವನ್ನೂ ಮೊದಲು ರಾಜ್ಯದ ಜನತೆ ಮುಂದಿಡಲಿ. ಆ ಮೇಲೆ ರಾಜ್ಯ ಬಿಜೆಪಿ ಸರ್ಕಾರದ ಅವ್ಯವಹಾರದ ಬಗ್ಗೆ ಮಾತನಾಡಲಿ ಎಂದು ಆಗ್ರಹಿಸಿದರು.
ಅವ್ಯವಹಾರ ನಡೆದಿದ್ದರೆ ಅದರ ಬಗ್ಗೆ ದಾಖಲೆ ಕೊಡಿ ಎಂದು ಸಿಎಂ ಕೇಳಿ ಅವರನ್ನು ಒಂದು ಸಭೆಗೂ ಆಹ್ವಾನಿಸಿದರು. ಆದರೆ ಸಿದ್ದರಾಮಯ್ಯ ಮಾತ್ರ ಸಭೆಗೆ ಬರಲಿಲ್ಲ ಏಕೆ ಎಂದು ಪ್ರಶ್ನಿಸಿದರು. ಸಿದ್ದರಾಮಯ್ಯ ಬೇರೆಯವರ ಬಗ್ಗೆ ಮಾತನಾಡುವ ಮೊದಲು ತಮ್ಮ ಮುಖವನ್ನು ಕನ್ನಡಿಯಲ್ಲಿ ನೋಡಿಕೊಳ್ಳಲಿ ಎಂದು ನಳಿನ್ ಕುಮಾರ್ ಕಟೀಲ್ ತಿರುಗೇಟು ನೀಡಿದರು.
ಗದಗ: ಅವಧಿ ಮೀರಿದ ಚಿಕಿತ್ಸೆ ಕಿಟ್‍ನ್ನು ಚಾಲಕರಿಗೆ ನೀಡಿ ಗದಗದಲ್ಲಿ ಕಾರ್ಮಿಕ ಇಲಾಖೆ ಪ್ರಮಾದ ಎಸಗಿದೆ. ಅವಧಿ ಮೀರಿದ ಕಿಟ್‍ಗಳನ್ನ ನೀಡಿದ ಗದಗ ಜಿಲ್ಲಾ ಕಾರ್ಮಿಕ ಇಲಾಖೆ ವಿರುದ್ಧ ಚಾಲಕರು ಗರಂ ಆಗಿದ್ದಾರೆ.
ಕಾರ್ಮಿಕ ಇಲಾಖೆಯಿಂದ ವಾಹನ ಚಾಲಕರಿಗೆ ನೀಡಿರೋ ಪ್ರಥಮ ಚಿಕಿತ್ಸಾ ಪೆಟ್ಟಿಗೆಯ ಎಡವಟ್ಟಿನ ಕೆಲಸವಿದು. ಸಂಚರಿಸುವ ವೇಳೆ ಅಪಘಾತವಾದರೆ ಕೂಡಲೇ ಪ್ರಥಮ ಚಿಕಿತ್ಸೆ ನೀಡುವುದಕ್ಕಾಗಿ ಸರ್ಕಾರದಿಂದ ಎಲ್ಲಾ ವಾಹನ ಚಾಲಕರಿಗೆ ಮೆಡಿಕಲ್ ಕಿಟ್ ನೀಡಲಾಗುತ್ತದೆ. ಆದರೆ ಈ ಬಾಕ್ಸ್ ಮೇಲೆ ಇನ್ನೂ ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಕಾರ್ಮಿಕ ಸಚಿವ ಸಂತೋಷ ಲಾಡ್ ಪೋಸ್ಟರ್‌ಗಳು ರಾರಾಜಿಸುತ್ತಿವೆ. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ನೀಡಿದ ಕಿಟ್‍ಗಳನ್ನ ಈಗ ವಿತರಿಸಿ ಅಧಿಕಾರಿಗಳು ಪೇಚಿಗೆ ಸಿಲುಕಿದ್ದಾರೆ. ಇದಕ್ಕೆ ಟ್ಯಾಕ್ಸಿ ಚಾಲಕರು ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಕಾರ್ಮಿಕ ಇಲಾಖೆ ಪ್ರಕಾರ ಈಗಲೂ ಸಿದ್ದರಾಮಯ್ಯ ಮುಖ್ಯಮಂತ್ರಿ, ಕಾರ್ಮಿಕ ಹಾಗೂ ಕೌಶಲ್ಯಭಿವೃದ್ದಿ ಇಲಾಖೆಯ ಸಚಿವ ಸಂತೋಷ ಲಾಡ್ ಆಗಿದ್ದಾರೆ. ಇಷ್ಟು ದಿನ ಬಚ್ಚಿಟ್ಟಿದ್ದ ಕಿಟ್ ಈಗ ಟ್ಯಾಕ್ಸಿ ಚಾಲಕರಿಗೆ ನೀಡಿದ್ದಾರೆ. ಅಷ್ಟೇ ಅಲ್ಲದೆ ಈ ಕಿಟ್‍ಗಳಲ್ಲಿ ಅವಧಿ ಮುಗಿದ ಔಷಧ ಇರುವುದು ವಿಪರ್ಯಾಸ. ಈ ಬಗ್ಗೆ ಕಾರ್ಮಿಕ ಇಲಾಖೆ ಅಧಿಕಾರಿಯನ್ನು ಕೇಳಿದರೆ, ನಾನು ಹೊಸದಾಗಿ ಬಂದಿದ್ದೇನೆ. ನಾನು ಬರುವಾಗಲೇ ಈ ವಿತರಣಾ ಕಾರ್ಯಕ್ರಮ ಅವಧಿ ಫಿಕ್ಸ್ ಆಗಿತ್ತು. ಈಗ ಅವಧಿ ಮೀರಿದ ಕಿಟ್‍ಗಳನ್ನು ವಾಪಾಸ್ ತರೆಸಿಕೊಂಡು ಹೊಸಕಿಟ್ ನೀಡುತ್ತೇನೆ. ದಯವಿಟ್ಟು ಕ್ಷಮಿಸಿ ಎಂದು ಕಾರ್ಮಿಕ ಇಲಾಖೆ ಅಧಿಕಾರಿ ಸುಧಾ ಗರಗ ಅವರು ಕ್ಷಮೆಯಾಚಿಸಿದ್ದಾರೆ.
ಅದೇನೇ ಇರಲಿ ಕಾರ್ಮಿಕರ ಹಿತ ಕಾಪಾಡಬೇಕಾದ ಅಧಿಕಾರಿಗಳು ಅವಧಿ ಮುಗಿದ ಮೆಡಿಕಲ್ ಕಿಟ್ ನೀಡಿದರೆ ಹೇಗೆ ಎನ್ನುವುದೆ ಕಾರ್ಮಿಕರ ಪ್ರಶ್ನೆಯಾಗಿದೆ. ಬೇಜವಾಬ್ದಾರಿ ವರ್ತನೆ ತೋರಿದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಚಾಲಕರು ಒತ್ತಾಯಿಸಿದ್ದಾರೆ.