Tag: Medical Report

  • ದರ್ಶನ್ ಪರ ವಕೀಲರಿಂದ ಹೈಕೋರ್ಟ್‌ಗೆ ಮೆಡಿಕಲ್ ರಿಪೋರ್ಟ್ ಸಲ್ಲಿಕೆ – ವರದಿಯಲ್ಲಿ ಏನಿದೆ?

    ದರ್ಶನ್ ಪರ ವಕೀಲರಿಂದ ಹೈಕೋರ್ಟ್‌ಗೆ ಮೆಡಿಕಲ್ ರಿಪೋರ್ಟ್ ಸಲ್ಲಿಕೆ – ವರದಿಯಲ್ಲಿ ಏನಿದೆ?

    ಬೆಂಗಳೂರು: ನಟ ದರ್ಶನ್‌ಗೆ (Actor Darshan) ಚಿಕಿತ್ಸೆ ಮುಂದುವರೆದಿದ್ದು, ಇಂದು (ನ.6) ದರ್ಶನ್ ಪರ ವಕೀಲರು ಒಂದು ವಾರದ ಮೆಡಿಕಲ್ ರಿಪೋರ್ಟ್‌ನ್ನು ಹೈಕೋರ್ಟ್‌ಗೆ ಸಲ್ಲಿಸಿದ್ದಾರೆ.

    ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Murder Case) ಹಿನ್ನೆಲೆ ಜೈಲಿನಲ್ಲಿದ್ದ ದರ್ಶನ್‌ಗೆ ವೈದ್ಯಕೀಯ ವಿಚಾರಕ್ಕೆ ಸಂಬಂಧಿಸಿದಂತೆ 6 ವಾರಗಳ ಕಾಲ ಹೈಕೋರ್ಟ್ ಮಧ್ಯಂತರ ಜಾಮೀನನ್ನು ನೀಡಿದೆ. ಇದೀಗ ಬೆನ್ನು ನೋವಿಗಾಗಿ ಕೆಂಗೇರಿಯ ಬಿಜಿಎಸ್ ಆಸ್ಪತ್ರೆಯಲ್ಲಿ (BGS Hospital) ನಟ ಚಿಕಿತ್ಸೆ ಪಡೆಯುತ್ತಿದ್ದಾರೆ. ಜೊತೆಗೆ ಒಂದು ವಾರದಲ್ಲಿ ದರ್ಶನ್‌ಗೆ ನೀಡಲಾಗುವ ಚಿಕಿತ್ಸೆಯ ವರದಿಯನ್ನು ದರ್ಶನ್ ಪರ ವಕೀಲರು ಹೈಕೋರ್ಟ್‌ಗೆ (High Court) ಸಲ್ಲಿಸಿದ್ದಾರೆ.ಇದನ್ನೂ ಓದಿ: ಶಿರೂರು ಗ್ರಾಮದ ವಸತಿ ಶಾಲೆ, 1,200 ಆಶ್ರಯ ಮನೆಗಳೆಲ್ಲವೂ ವಕ್ಫ್‌ ಆಸ್ತಿ – ಇಸ್ಲಾಮಿಯಾ ತಂಜೀಮ್ ಸಮಿತಿ ಪಟ್ಟು

    ಇನ್ನೂ ಬಿಜಿಎಸ್ ವೈದ್ಯರು ಆಪರೇಷನ್‌ಗೆ ಸಲಹೆ ನೀಡಿದ್ದರೂ ಅದಕ್ಕೆ ದರ್ಶನ್ ನಿರಾಕರಿಸಿದ್ದಾರೆ. ಈ ಹಿಂದೆ ಫ್ಯಾಕ್ಚರ್ ಆಗಿರೋದು ಒಂದು ಸಮಸ್ಯೆ ಇದೆ. ಆಪರೇಷನ್ ಮಾಡಬೇಕು ಎಂದು ವೈದ್ಯರು ಸಲಹೆ ನೀಡಿದ್ದಾರೆ. ಆದರೆ ದರ್ಶನ್ ಬೇಡ ಎಂದಿದ್ದು, ಕನ್ಸರ್ವೇಟಿವ್ ಟ್ರೀಟ್‌ಮೆಂಟ್ ಶುರು ಮಾಡಲಾಗಿದೆ.

    10 ರಿಂದ 15 ದಿನಗಳ ಕಾಲ ಕನ್ಸರ್ವೇಟಿವ್ ಚಿಕಿತ್ಸೆ ನೀಡಲಾಗುತ್ತದೆ. ಫಿಜಿಯೋಥೆರಪಿ, ವ್ಯಾಯಾಮ, ಔಷಧಿ, ಎಕ್ಸ್ಸೈಸ್ ಮೂಲಕ ಗುಣಮುಖ ಮಾಡುವ ಪ್ರಯತ್ನ ನಡೆಯುತ್ತದೆ. ಕನ್ಸರ್ವೇಟಿವ್ ಚಿಕಿತ್ಸೆಯಲ್ಲಿ ಗುಣಮುಖ ಆಗದಿದ್ದರೆ ಆಪರೇಷನ್ ಮಾಡಲು ನಿರ್ಧರಿಸಲಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

    ಹೈಕೋರ್ಟ್‌ಗೆ ಸಲ್ಲಿಸಿರುವ ವರದಿಯಲ್ಲಿ ಏನಿದೆ?
    ದರ್ಶನ್‌ಗೆ ಚಿಕಿತ್ಸೆ ನೀಡುವ ಬಗ್ಗೆಗಿನ ವರದಿಯನ್ನು ದರ್ಶನ್ ಪರ ವಕೀಲರು ಹೈಕೋರ್ಟ್ ಸಲ್ಲಿಸಿದ್ದಾರೆ. ಜೈಲಿನಿಂದ ಬಿಡುಗಡೆಯಾಗಿ ಮೊದಲ ವಾರದ ವರದಿಯನ್ನು ಸಲ್ಲಿಸುವಂತೆ ಹೈಕೋರ್ಟ್ ಸೂಚಿಸಿತ್ತು. ಅದರಂತೆ ಇಂದು ದರ್ಶನ್ ಪರ ವಕೀಲರು ಹೈಕೋರ್ಟ್‌ಗೆ ಮೆಡಿಕಲ್ ರಿಪೋರ್ಟ್ ಸಲ್ಲಿಸಿದ್ದಾರೆ.

    ಸದ್ಯ ದರ್ಶನ್‌ಗೆ ಫಿಜಿಯೋಥೆರಪಿ ಚಿಕಿತ್ಸೆ ನೀಡಲಾಗುತ್ತಿದೆ. ಫಿಸಿಯೋಥೆರಫಿಯೇ ಅಂತಿಮ ಅಲ್ಲ ಎನ್ನಿಸುತ್ತಿದೆ. ಫಿಸಿಯೋಥೆರಫಿಯಲ್ಲಿ ಗುಣಮುಖ ಆಗದಿದ್ದಲ್ಲಿ ಸರ್ಜರಿ ಮಾಡಲಾಗುವುದು. ರೋಗಿಗೆ ಶಸ್ತ್ರಚಿಕಿತ್ಸೆ ವಿಧಾನಗಳ ಬಗ್ಗೆ ಮಾಹಿತಿ ನೀಡಲಾಗಿದೆ. ಇನ್ನೂ ಶಸ್ತ್ರಚಿಕಿತ್ಸೆಗೆ ದರ್ಶನ್ ಒಪ್ಪಿಗೆ ಸೂಚಿಸಿಲ್ಲ. ದರ್ಶನ್ ಒಪ್ಪಿಕೊಂಡಲ್ಲಿ ಶಸ್ತ್ರಚಿಕಿತ್ಸೆಗೆ ನಿರ್ಧರಿಸಲಾಗುವುದು ಎಂಬ ವಿಚಾರ ವರದಿಯಲ್ಲಿದೆ ಎನ್ನಲಾಗುತ್ತಿದೆ.

    ಬೆನ್ನು ನೋವಿನ ಕಾರಣ ನಟ ದರ್ಶನ್ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೀತಿದ್ದಾರೆ. ಈವರೆಗಿನ ಚಿಕಿತ್ಸೆ ಮತ್ತು ಮುಂದಿನ ಪ್ರಕ್ರಿಯೆಗಳ ಬಗ್ಗೆ ದರ್ಶನ್ ಪರ ವಕೀಲರು ಇಂದು ಹೈಕೋರ್ಟ್ಗೆ ವೈದ್ಯಕೀಯ ವರದಿ ಸಲ್ಲಿಸಿದ್ದಾರೆ. ಇದರ ಪ್ರಕಾರ, ದರ್ಶನ್‌ಗೆ ಸರ್ಜರಿ ಮಾಡುವ ಬಗ್ಗೆ ವೈದ್ಯರು ಇನ್ನೂ ನಿರ್ಧಾರ ತೆಗೆದುಕೊಂಡಿಲ್ಲ. ಸದ್ಯಕ್ಕೆ ಫಿಸಿಯೋಥೆರಪಿ ಮಾಡಲಾಗ್ತಿದೆ. ಇದರಿಂದ ಗುಣಮುಖ ಆಗದಿದ್ರೆ ಸರ್ಜರಿ ಬಗ್ಗೆ ನಿರ್ಧಾರ ಮಾಡ್ತೀವಿ. ಒಂದೊಮ್ಮೆ ದರ್ಶನ್ ಒಪ್ಪಿಕೊಂಡ್ರೆ ಸರ್ಜರಿ ಮಾಡ್ತೀವಿ ಎಂದು ವೈದ್ಯರು ತಿಳಿಸಿದ್ದಾರೆ ಎನ್ನಲಾಗಿದೆ.ಇದನ್ನೂ ಓದಿ: ಚಲಾಯಿಸುತ್ತಿರುವಾಗಲೇ ಹೃದಯಾಘಾತ – ಬಿಎಂಟಿಸಿ ಚಾಲಕ ಸಾವು

  • ದರ್ಶನ್‌ಗೆ ಇವತ್ತೂ ಸಿಗಲಿಲ್ಲ ಜಾಮೀನು – ಮಂಗಳವಾರಕ್ಕೆ ವಿಚಾರಣೆ ಮುಂದೂಡಿಕೆ

    ದರ್ಶನ್‌ಗೆ ಇವತ್ತೂ ಸಿಗಲಿಲ್ಲ ಜಾಮೀನು – ಮಂಗಳವಾರಕ್ಕೆ ವಿಚಾರಣೆ ಮುಂದೂಡಿಕೆ

    ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder case) ಬೇಲ್ ಕೋರಿ ಹೈಕೋರ್ಟ್‌ಗೆ ದರ್ಶನ್ (Darshan) ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆ ಮಂಗಳವಾರಕ್ಕೆ (ಅ.29) ಮುಂದೂಡಿಕೆಯಾಗಿದೆ.

    ದರ್ಶನ್ ಬೆನ್ನು ನೋವಿನ ವೈದ್ಯಕೀಯ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಬಳ್ಳಾರಿ ಜೈಲಾಧಿಕಾರಿಗಳು ಸಲ್ಲಿಸಿದರು. ಆರೋಗ್ಯ ಕಾರಣವೊಡ್ಡಿ ದರ್ಶನ್ ಪರ ವಕೀಲರಾದ ಸಿವಿ ನಾಗೇಶ್ (CV Nagesh) ವಾದ ಮಂಡಿಸಿದರು. ಸಿಟಿ ಸ್ಕ್ಯಾನ್,‌ ಎಂಆರ್‌ಐ ರಿಪೋರ್ಟ್‌ಗಳನ್ನು ಮಾಡಿಸಲಾಗಿದೆ. ವರದಿಯಲ್ಲಿ ದರ್ಶನ್‌ಗೆ ಈ ಕೂಡಲೇ ಸರ್ಜರಿ ಮಾಡಬೇಕು ಅಂತಿದೆ. ಹಾಗಾಗಿ ಮಧ್ಯಂತರ ಜಾಮೀನು ನೀಡಬೇಕು ಅಂತ ನಾಗೇಶ್ ವಾದ ಮಂಡಿಸಿದರು. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಬಿಜೆಪಿಗೆ 160-170 ಸೀಟ್‌ ಖಚಿತ, ಬಹುಮತ ನಿಶ್ಚಿತ – ರಮೇಶ್ ಜಾರಕಿಹೊಳಿ

    ಇದಕ್ಕೆ ಜಡ್ಜ್ ಪ್ರತಿಕ್ರಿಯಿಸಿ, ಈಗಷ್ಟೇ ಮೆಡಿಕಲ್ ರಿಪೋರ್ಟ್ (Medical Report) ಸಿಕ್ಕಿದೆ. ಹಾಗಾಗಿ 2 ಕಡೆ ವಾದಕ್ಕೆ ಅವಕಾಶ ನೀಡಬೇಕಿದೆ. ಆದರೆ, ಬಳ್ಳಾರಿಯಲ್ಲಿ ಅಪರೇಷನ್ ಮಾಡಿಸಬೇಕಾ? ಬೆಂಗಳೂರಿನಲ್ಲಿ ಮಾಡಿಸಬೇಕಾ? ಅಂತ ಜಡ್ಜ್ ವಿಶ್ವಜೀತ್ ಶೆಟ್ಟಿ ಪ್ರಶ್ನಿಸಿದ್ರು. ವೈದ್ಯಕೀಯ ವರದಿ ಓದಿ.. ಬಳ್ಳಾರಿ ಮತ್ತು ಬೆಂಗಳೂರು ಎರಡು ಕಡೆಗಳಲ್ಲೂ ಚಿಕಿತ್ಸೆ ಕೊಡಿಸಬಹುದು ಅಂತಿದೆ ಅಂದ್ರು. ಆದರೆ, ಬಳ್ಳಾರಿ ಯಲ್ಲಿ ಸೂಕ್ತ ವ್ಯವಸ್ಥೆ ಇಲ್ಲ. ಹಾಗಾಗಿ ಬೆಂಗಳೂರಿನ ಖಾಸಗಿ ಚಿಕಿತ್ಸೆಗೆ ಅವಕಾಶ ಕೊಡಿ ಅಂತ ಸಿ.ವಿ ನಾಗೇಶ್ ಮನವಿ ಮಾಡಿದ್ರು. ಈ ವೇಳೆ ವಾದ-ಪ್ರತಿವಾದಕ್ಕೆ ಅವಕಾಶ ಕೊಡೋಣ ಅಂದ ಜಡ್ಜ್ ಮಂಗಳವಾರ ಬೆಳಗ್ಗೆಗೆ ವಿಚಾರಣೆ ಮುಂದೂಡಿದರು.

    ಈ ಮಧ್ಯೆ, ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯ ಪ್ರಕರಣದಲ್ಲಿ ಪ್ರಕರಣದ ತನಿಖಾಧಿಕಾ, ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಚಂದ್ರಗುಪ್ತ ಬಳ್ಳಾರಿ ಜೈಲಿನಲ್ಲಿ ದರ್ಶನ್ ವಿಚಾರಣೆ ನಡೆಸಿದ್ರು. ಸಿಗರೇಟ್, ಕಾಫಿ ಕೊಟ್ಟಿದ್ಯಾರು..? ಮೊಬೈಲ್ ಯಾರದ್ದು..? ಫೋಟೋ ಯಾರು ತೆಗೆದ್ರು..? ಅನ್ನೋ ಪ್ರಶ್ನೆಗೆ ನನಗೆ ಯಾವುದೂ ಗೊತ್ತಿಲ್ಲ ಅಂತ ದರ್ಶನ್ ಉತ್ತರ ಕೊಟ್ಟಿದ್ದಾರೆ ಅಂತ ತಿಳಿದು ಬಂದಿದೆ. ಇದನ್ನೂ ಓದಿ: `ಕರಿಮಣಿ ಮಾಲೀಕ ನೀನಲ್ಲ’ ಅಂತ ಆಸ್ತಿಗಾಗಿ ಗಂಡನ ಕೊಲೆ – ಇಬ್ಬರು ಪ್ರಿಯಕರರು ಸೇರಿ ಪತ್ನಿಯೂ ಅಂದರ್

  • ಬಳ್ಳಾರಿ ಜೈಲಧಿಕಾರಿಗಳ ಕೈ ಸೇರಿದ ದರ್ಶನ್ ಮೆಡಿಕಲ್ ರಿಪೋರ್ಟ್

    ಬಳ್ಳಾರಿ ಜೈಲಧಿಕಾರಿಗಳ ಕೈ ಸೇರಿದ ದರ್ಶನ್ ಮೆಡಿಕಲ್ ರಿಪೋರ್ಟ್

    -ಮೆಡಿಕಲ್ ಬೆಡ್, ಚೇರ್ ಬಗ್ಗೆಯೂ ವರದಿಯಲ್ಲಿ ಉಲ್ಲೇಖ

    ಬಳ್ಳಾರಿ: ತೀವ್ರ ಬೆನ್ನು ನೋವಿನಿಂದ ಬಳಲುತ್ತಿರುವ ಆರೋಪಿ ದರ್ಶನ್ (Actor Darshan) ಅವರ ಮೆಡಿಕಲ್ ರಿಪೋರ್ಟ್ ಬಳ್ಳಾರಿ (Ballary)  ಜೈಲಧಿಕಾರಿಗಳ ಕೈ ಸೇರಿದೆ.

    ಕಳೆದ ವಾರವಷ್ಟೇ ಬಳ್ಳಾರಿ ವಿಮ್ಸ್ ಆಸ್ಪತ್ರೆಯ (VIMS) ಆರ್ಥೋಪಿಡಿಷನ್ ಹಾಗೂ ನ್ಯೂರೋ ವೈದ್ಯರು ದರ್ಶನ್ ಅವರ ಆರೋಗ್ಯ ತಪಾಸಣೆ ನಡೆಸಿದ್ದರು. ಇದೀಗ ಮೆಡಿಕಲ್ ರಿಪೋರ್ಟ್ (Medical Report) ಸಲ್ಲಿಸಿರುವ ವೈದ್ಯರು ಒಂದಷ್ಟು ಸಲಹೆ ಕೊಟ್ಟಿದ್ದಾರೆ. ಬೆನ್ನು ನೋವು ನಿಯಂತ್ರಣಕ್ಕೆ ಫಿಜಿಯೋ ಜೊತೆಗೆ ಎರಡು ಬಾರಿ ಸ್ಕ್ಯಾನಿಂಗ್ ಮಾಡಿಸಿಕೊಳ್ಳಬೇಕು ಹಾಗೂ ಕೆಲವು ಮಾತ್ರೆ, ಮುಲಾಮು ನೀಡುವಂತೆ ಉಲ್ಲೇಖಿಸಿದ್ದಾರೆ.ಇದನ್ನೂ ಓದಿ: ದರ್ಶನ್‌, ಪವಿತ್ರಾಗೆ ನೋ ರಿಲೀಫ್‌ – ಕೋರ್ಟ್‌ ಜಾಮೀನು ನೀಡದ್ದು ಯಾಕೆ?

    ವಿಮ್ಸ್ನ ನರರೋಗ ತಜ್ಞ ವೈದ್ಯ ಡಾ.ವಿಶ್ವನಾಥ್ ಸಲ್ಲಿಕೆ ಮಾಡಿರುವ ಮೆಡಿಕಲ್ ರಿಪೋರ್ಟ್ನಲ್ಲಿ ಆರೋಪಿ ದರ್ಶನ್‌ಗೆ ನರಗಳಿಂದ ಬೆನ್ನು ನೋವಾಗುತ್ತಿದೆ ಹೌದು. ಹೀಗಾಗಿ ಇಂದಿನಿಂದಲೇ ಜೈಲಿನಲ್ಲಿ ಫಿಜಿಯೋಥೆರಪಿ ನೀಡಬೇಕು ಎಂದು ಜೈಲಧಿಕಾರಿಗಳಿಗೆ ಸೂಚಿಸಿದ್ದಾರೆ. ಮತ್ತೊಂದೆಡೆ ಮೆಡಿಕಲ್ ಬೆಡ್, ಚೇರ್ ಬಗ್ಗೆಯೂ ವರದಿಯಲ್ಲಿ ಉಲ್ಲೇಖ ಮಾಡಲಾಗಿದೆ.

    ಇನ್ನೂ ದರ್ಶನ್ ಮೆಡಿಕಲ್ ರಿಪೋರ್ಟ್‌ನ್ನು ಬಳ್ಳಾರಿ ಜೈಲಧಿಕಾರಿಗಳು ಮೇಲಧಿಕಾರಿಗಳಿಗೆ ಮೇಲ್ ಮಾಡಿದ್ದಾರೆ. ಜೊತೆಗೆ ಮುಂದಿನ ಚಿಕಿತ್ಸಾ ಕ್ರಮ, ಮೆಡಿಕಲ್ ಬೆಡ್, ಚೇರ್, ವೈದ್ಯಕೀಯ ಸಲಕರಣೆ ಹಾಗೂ ಕೆಲವು ಮಾತ್ರೆಗಳ ನೀಡಲು ಸಲಹೆ ಕೇಳಿದ್ದಾರೆ. ಜೈಲು ವಿಭಾಗದ ಹಿರಿಯ ಅಧಿಕಾರಿಗಳ ಅನುಮತಿ ಸಿಕ್ಕ ಬಳಿಕ ಬಳ್ಳಾರಿ ಜಿಲ್ಲಾಸ್ಪತ್ರೆಯಿಂದ ಮೆಡಿಕಲ್ ಬೆಡ್, ಚೇರ್ ನೀಡುವ ಸಾಧ್ಯತೆಯಿದೆ.ಇದನ್ನೂ ಓದಿ:ಕೊಲೆ ಆರೋಪಿ ದರ್ಶನ್‌, ಪವಿತ್ರಾಗೆ ಬಿಗ್ ಡೇ – ಜಾಮೀನು ಭವಿಷ್ಯ ಇಂದು ನಿರ್ಧಾರ

  • ಉಡುಪಿ ಡಿಸಿ ಕೈ ಸೇರಿದ ವೈದ್ಯಕೀಯ ವರದಿ – ಕೊರೊನಾ ದೃಢ

    ಉಡುಪಿ ಡಿಸಿ ಕೈ ಸೇರಿದ ವೈದ್ಯಕೀಯ ವರದಿ – ಕೊರೊನಾ ದೃಢ

    – ಟ್ರಾವೆಲ್ ಹಿಸ್ಟರಿ ವಿಚಾರಣೆ ಶುರು

    ಉಡುಪಿ: ಜಿಲ್ಲೆಯಲ್ಲಿ ಪ್ರಥಮ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಪ್ರಾಥಮಿಕ ಮಾಹಿತಿಯಲ್ಲಿ ಕೊರೊನಾ ಇರುವುದು ಸ್ಪಷ್ಟವಾಗಿದ್ದು, ಹಾಸನದಿಂದ ಬಂದ ವರದಿ ಕೂಡ ವ್ಯಕ್ತಿಯನ್ನು ಕೊರೊನಾ ಪಾಸಿಟಿವ್ ಎಂಬುದನ್ನು ದೃಢ ಮಾಡಿದೆ.

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಜಿಲ್ಲಾಧಿಕಾರಿ ಜಿ.ಜಗದೀಶ್, ರಾಜ್ಯದ ನೋಡೆಲ್ ಅಧಿಕಾರಿ ಜೊತೆ ನಾನು ಮಾತನಾಡಿದ್ದೇನೆ. ಡಾಕ್ಟರ್ ಅರುಂಧತಿ ಚಂದ್ರಶೇಖರ್ ಜೊತೆ ಸಂಪರ್ಕದಲ್ಲಿದ್ದೇನೆ. ಆ ವ್ಯಕ್ತಿಯ ಚಲನವಲನಗಳನ್ನು ಟ್ರ್ಯಾಕ್ ಮಾಡುತ್ತಿದ್ದೇವೆ. ಆತ ಬಂದ ವಿಮಾನದ ಬಗ್ಗೆ ಕೂಡ ಪರಿಶೀಲನೆ ನಡೆಸಲಾಗುತ್ತಿದೆ ಎಂದರು. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಜೊತೆ ಸಂಪರ್ಕದಲ್ಲಿದ್ದೇನೆ. ಆ ವ್ಯಕ್ತಿ ಏಳು ದಿನದಿಂದಲೂ ಕೂಡ ನಮ್ಮ ನಿಗಾದಲ್ಲೇ ಇದ್ದ ಎಂದರು.

    ಸೋಂಕಿತ ಕ್ವಾರಂಟೈನ್‍ನಲ್ಲಿ ಇರುವ ಸಂದರ್ಭ ಅನಾರೋಗ್ಯಕ್ಕೆ ಒಳಗಾಗಿದ್ದನು. ಈ ವ್ಯಕ್ತಿ ಕೆಎಂಸಿಯ ಸಿಬ್ಬಂದಿ ಎಂದು ತಿಳಿದುಬಂದಿದೆ. ದುಬೈನಿಂದ ಬಂದ ನಂತರ ಆತ ಕೆಲಸಕ್ಕೆ ಹೋಗಿಲ್ಲ. ಮಡದಿ ಮತ್ತು ಮಗುವಿನ ಜೊತೆ ಕೂಡ ಸಂಪರ್ಕದಲ್ಲಿ ಇರಲಿಲ್ಲ. ಮನೆಯಿಂದ ಜಿಲ್ಲಾಸ್ಪತ್ರೆಗೆ ಒಬ್ಬನೇ ಕಾರಿನಲ್ಲಿ ಬಂದಿದ್ದಾನೆ. ಸಂಪೂರ್ಣ ನಿಗಾದಲ್ಲಿ ಚಿಕಿತ್ಸೆ ಕೊಡಲಾಗಿತ್ತು. ಲಕ್ಷಣಗಳಿದ್ದ ಕಾರಣ ವೈದ್ಯರು ಬೇರೆಯೇ ಕೊಠಡಿಯಲ್ಲಿ ಚಿಕಿತ್ಸೆ ವ್ಯವಸ್ಥೆ ಮಾಡಿದ್ದರು ಎಂದು ತಿಳಿಸಿದರು.

    ಮೂಲತಃ ದಾವಣಗೆರೆಯವನಾಗಿರುವ ಈತ, ಮಣಿಪಾಲಕ್ಕೆ ಉದ್ಯೋಗದ ಕಾರಣ ಶಿಫ್ಟ್ ಆಗಿದ್ದ. ದುಬೈಗೆ ಪ್ರವಾಸಕ್ಕೆ ಎಂದು ತೆರಳಿದ್ದು, ಅಲ್ಲಿ ಕೊರೊನಾ ಸೋಂಕು ಅಂಟಿಕೊಂಡಿದೆ. ಭಾರತ ತಲುಪಿ ಏಳು ದಿನದ ನಂತರ ಕೊರೊನಾ ವೈರಸ್ ಜೀವ ಪಡೆದುಕೊಂಡಿದೆ ಎಂದು ತಜ್ಞ ವೈದ್ಯರು ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದರು.