Tag: medical student

  • ದುರ್ಗಾಪುರ ಗ್ಯಾಂಗ್‌ ರೇಪ್‌ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್‌ – ಜೊತೆಗಿದ್ದ ಸ್ನೇಹಿತನೇ 6ನೇ ಆರೋಪಿ

    ದುರ್ಗಾಪುರ ಗ್ಯಾಂಗ್‌ ರೇಪ್‌ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್‌ – ಜೊತೆಗಿದ್ದ ಸ್ನೇಹಿತನೇ 6ನೇ ಆರೋಪಿ

    – ಮ್ಯಾಜಿಸ್ಟ್ರೇಟ್‌ ಮುಂದೆ ಸಂತ್ರಸ್ತೆ ಹೇಳಿಕೆ ಬಳಿಕ ಅರೆಸ್ಟ್‌

    ಕೋಲ್ಕತ್ತಾ: ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜಿನ ಬಳಿ ಒಡಿಶಾದ (Odisha) ಜಲೇಶ್ವರ ಮೂಲದ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಈಗ ಸ್ಫೋಟಕ ತಿರುವು ಸಿಕ್ಕಿದೆ. ಸಂತ್ರಸ್ತೆ ಮ್ಯಾಜಿಸ್ಟ್ರೇಟ್‌ ಎದುರು ನೀಡಿದ ಹೇಳಿಕೆಯನ್ನಧಾರಿಸಿ ಆಕೆ ಜೊತೆಗೆ ಊಟಕ್ಕೆ ಬಂದಿದ್ದ ಸ್ನೇಹಿತನನ್ನ ಪಶ್ಚಿಮ ಬಂಗಾಳ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ಬಂಧಿತರ ಸಂಖ್ಯೆ 6ಕ್ಕೆ ತಲುಪಿದೆ.

    West Bengal Police

    ನನ್ನ ಮೇಲೆ ಬಲವಂತವಾಗಿ ಹಲ್ಲೆಗೆ ಯತ್ನ
    ವರದಿಗಳ ಪ್ರಕಾರ, ಸಂತ್ರಸ್ತೆ ಮ್ಯಾಜಿಸ್ಟ್ರೇಟ್‌ ಮುಂದೆ ನೀಡಿದ ಹೇಳಿಕೆಯಲ್ಲಿ, ಜೊತೆಗಿದ್ದ ಸಹಪಾಠಿ ತನ್ನ ಮೇಲೆ ಬಲವಂತವಾಗಿ ಹಲ್ಲೆಗೆ ಯತ್ನಿಸಿದ್ದಾನೆ ಎಂದು ಹೇಳಿದ್ದಾರೆ. ಈ ಹೇಳಿಕೆಯನ್ನಾಧರಿಸಿ ಊಟದ ಸಮಯದಲ್ಲಿ ಜೊತೆಗಿದ್ದ ಸಹಪಾಠಿಯನ್ನ 6ನೇ ಆರೋಪಿಯಾಗಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ – ಮೂವರು ಅರೆಸ್ಟ್‌

    Stop Rape Crime 2

    ಕಳೆದ ಶುಕ್ರವಾರ ಜಲೇಶ್ವರದ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಆಕೆ ತನ್ನ ಸ್ನೇಹಿತನೊಂದಿಗೆ ತೆರಳಿದ್ದಾಗ ಕೆಲವರು ಅವರನ್ನು ತಡೆದು ಅವರನ್ನು 1 ಕಿ.ಮೀ ದೂರದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದರು. ಬಳಿಕ ಆರೋಪಿಗಳು ಅಲ್ಲಿಂದ ಪರಾರಿಯಾಗಿದ್ದರು.

    ಘಟನೆ ಬಳಿಕ ಆಕೆಯ ಸ್ನೇಹಿತ ಕೂಡ ಈ ಅಪರಾಧ ಕೃತ್ಯದಲ್ಲಿ ಭಾಗಿಯಾಗಿದ್ದಾನೆ ಎಂದು ಸಂತ್ರಸ್ತೆಯ ಕುಟುಂಬ ಆರೋಪಿಸಿತ್ತು. ಯುವತಿಗೆ ಸುಳ್ಳು ಹೇಳಿ ಆಕೆಯನ್ನು ದಾರಿ ತಪ್ಪಿಸಿ ನಿರ್ಜನ ಸ್ಥಳಕ್ಕೆ ಕರೆದೊಯ್ದಿದ್ದಾನೆ. ಅಲ್ಲದೇ ಆಕೆಯ ಫೋನ್ ಕಸಿದುಕೊಂಡು 5,000 ರೂ. ಹಣ ಕಿತ್ತುಕೊಂಡು ಪರಾರಿಯಾಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿತ್ತು. ಇದನ್ನೂ ಓದಿ: ರಾತ್ರಿ ವೇಳೆ ಹೆಣ್ಣುಮಕ್ಕಳನ್ನ ಹೊರಗೆ ಬಿಡಬಾರದು – ಗ್ಯಾಂಗ್‌ರೇಪ್‌ ಕೇಸ್‌ ಬಗ್ಗೆ ದೀದಿ ಶಾಕಿಂಗ್‌ ಹೇಳಿಕೆ

  • ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ – ಮೂವರು ಅರೆಸ್ಟ್‌

    ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ – ಮೂವರು ಅರೆಸ್ಟ್‌

    ಕೋಲ್ಕತ್ತಾ: ಪಶ್ಚಿಮ ಬಂಗಾಳದ (West Bengal) ದುರ್ಗಾಪುರದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ (Medical Student) ಮೇಲೆ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಸ್ಥಳೀಯರಾಗಿದ್ದು, ಪೊಲೀಸರು ಅವರ ಗುರುತನ್ನು ಇನ್ನೂ ಬಹಿರಂಗಪಡಿಸಿಲ್ಲ.

    ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜಿನ ಬಳಿ ಒಡಿಶಾದ (Odisha) ಜಲೇಶ್ವರ ಮೂಲದ ವಿದ್ಯಾರ್ಥಿನಿಯ ಮೇಲೆ ಶುಕ್ರವಾರ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಆಕೆ ತನ್ನ ಸ್ನೇಹಿತನೊಂದಿಗೆ ತೆರಳಿದ್ದಾಗ ಕೆಲವರು ಅವರನ್ನು ತಡೆದು ಅವರನ್ನು 1 ಕಿ.ಮೀ ದೂರದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದರು. ಬಳಿಕ ಆರೋಪಿಗಳು ಅಲ್ಲಿಂದ ಪರಾರಿಯಾಗಿದ್ದರು. ಇದನ್ನೂ ಓದಿ: ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್‌ ರೇಪ್‌; ಬಂಗಾಳದಲ್ಲಿ ಮತ್ತೊಂದು ಕ್ರೂರ ಘಟನೆ

    ಆಕೆಯ ಸ್ನೇಹಿತ ಕೂಡ ಈ ಅಪರಾಧ ಕೃತ್ಯದಲ್ಲಿ ಭಾಗಿಯಾಗಿದ್ದಾನೆ ಎಂದು ಸಂತ್ರಸ್ತೆಯ ಕುಟುಂಬ ಆರೋಪಿಸಿದೆ. ಯುವತಿಗೆ ಸುಳ್ಳು ಹೇಳಿ ಆಕೆಯನ್ನು ದಾರಿ ತಪ್ಪಿಸಿ ನಿರ್ಜನ ಸ್ಥಳಕ್ಕೆ ಕರೆದೊಯ್ದಿದ್ದಾನೆ. ಅಲ್ಲದೇ ಆಕೆಯ ಫೋನ್ ಕಸಿದುಕೊಂಡು 5,000 ರೂ. ಹಣ ಕಿತ್ತುಕೊಂಡು ಪರಾರಿಯಾಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

    ಯುವತಿಗೆ ದುರ್ಗಾಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವಳು ಗುಣಮುಖಳಾಗುತ್ತಿದ್ದಾಳೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂಧಿತ ಮೂವರು ಆರೋಪಿಗಳ ವಿರುದ್ಧ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಮನೆಗೆ ಊಟಕ್ಕೆ ಅಂತ ಕರೆಸಿ ಬಿಸಿಎ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ – ಪ್ರೊಫೆಸರ್ ಅರೆಸ್ಟ್

  • ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್‌ ರೇಪ್‌; ಬಂಗಾಳದಲ್ಲಿ ಮತ್ತೊಂದು ಕ್ರೂರ ಘಟನೆ

    ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್‌ ರೇಪ್‌; ಬಂಗಾಳದಲ್ಲಿ ಮತ್ತೊಂದು ಕ್ರೂರ ಘಟನೆ

    ಕೋಲ್ಕತ್ತಾ: ಆರ್‌ಜಿಕರ್ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ (Medical College Student) ಮೇಲೆ ನಡೆದ ಅತ್ಯಚಾರ ಪ್ರಕರಣ ಇಡೀ ದೇಶವನ್ನು ಬೆಚ್ಚಿ ಬೀಳಿಸಿತ್ತು, ಇದರ ಬೆನ್ನಲೆ ಪಶ್ಚಿಮ ಬಂಗಾಳದಲ್ಲಿ (West Bengal) ಮತ್ತೊಂದು ಘೋರ ಘಟನೆ ನಡೆದಿದೆ. ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ.

    ಒಡಿಶಾದ ಜಲೇಶ್ವರ ನಿವಾಸಿಯಾಗಿರುವ ಯುವತಿ, ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ (Private Medical College) ದ್ವೀತಿಯ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಳು. ಶುಕ್ರವಾರ ರಾತ್ರಿ ಸ್ನೇಹಿತನೊಂದಿಗೆ ಊಟಕ್ಕೆ ಹೋಗಿ ಮರಳುವ ವೇಳೆ ಘಟನೆ ನಡೆದಿದೆ. ಇದನ್ನೂ ಓದಿ: ಹನಿಟ್ರ್ಯಾಪ್‌ಗೆ ಸಿಲುಕಿ ಪಾಕ್ ಪರ ಬೇಹುಗಾರಿಕೆ – ರಾಜಸ್ಥಾನದಲ್ಲಿ ಆರೋಪಿ ಅರೆಸ್ಟ್‌

    ಸಂತ್ರಸ್ಥ ಯುವತಿ ಹತ್ತಿರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ವೈದ್ಯಕೀಯ ವಿದ್ಯಾರ್ಥಿನಿಯ ಕುಟುಂಬ ಸದಸ್ಯರು ಸಲ್ಲಿಸಿದ ದೂರಿನ ಆಧಾರದ ಮೇಲೆ ತನಿಖೆ ಆರಂಭಿಸಲಾಗಿದೆ. ಇಲ್ಲಿಯವರೆಗೆ ಈ ಸಂಪೂರ್ಣ ಪ್ರಕರಣದಲ್ಲಿ ಯಾರನ್ನೂ ಬಂಧಿಸಲಾಗಿಲ್ಲ.

    ಸುದ್ದಿಗಾರರೊಂದಿಗೆ ಮಾತನಾಡಿದ ವಿದ್ಯಾರ್ಥಿನಿಯ ಪೋಷಕರು, ತಮ್ಮ ಮಗಳ ಸ್ನೇಹಿತರಿಂದ ಕರೆ ಬಂದ ನಂತರ ಇಂದು ಬೆಳಗ್ಗೆ ದುರ್ಗಾಪುರ ತಲುಪಿದ್ದೇವೆ ಎಂದು ಹೇಳಿದರು. ವಿದ್ಯಾರ್ಥಿನಿಯ ತಂದೆ ಮಾತನಾಡಿ, ನಮಗೆ ಅವಳ ಸ್ನೇಹಿತರಿಂದ ಕರೆ ಬಂತು ಮತ್ತು ಅವರು ಘಟನೆಯ ಬಗ್ಗೆ ಮಾಹಿತಿ ನೀಡಿದರು. ಇದನ್ನೂ ಓದಿ: ಪಾಕ್ ಪೊಲೀಸ್ ತರಬೇತಿ ಕೇಂದ್ರದ ಮೇಲೆ ಆತ್ಮಾಹುತಿ ದಾಳಿ – 7 ಪೊಲೀಸರು, 6 ಉಗ್ರರು ಸಾವು

    ನಾವು ಇಂದು ಬೆಳಗ್ಗೆ ಇಲ್ಲಿಗೆ ಬಂದು ಪೊಲೀಸ್ ದೂರು ದಾಖಲಿಸಿದ್ದೇವೆ. ಪ್ರಸ್ತುತ, ಪೊಲೀಸರು ಎಲ್ಲಾ ಸಂಭಾವ್ಯ ಕೋನಗಳಿಂದಲೂ ತನಿಖೆ ನಡೆಸುತ್ತಿದ್ದಾರೆ. ತನಿಖಾ ಅಧಿಕಾರಿಗಳು ಎಲ್ಲಾ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದಾರೆ ಮತ್ತು ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸುತ್ತಿದ್ದಾರೆ. ಇದನ್ನೂ ಓದಿ: ಮೈಸೂರು | ಬಾಲಕಿಯ ರೇಪ್‌ ಬಳಿಕ ಎದೆ, ಹೊಟ್ಟೆ, ಮರ್ಮಾಂಗಕ್ಕೆ 19 ಬಾರಿ ಚಾಕು ಇರಿದು ಕೊಂದಿದ್ದ ಕಾಮುಕ 

  • ಉದಯಪುರದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ – ಶಿಕ್ಷಕರಿಂದ ಕಿರುಕುಳ ಆರೋಪ

    ಉದಯಪುರದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ – ಶಿಕ್ಷಕರಿಂದ ಕಿರುಕುಳ ಆರೋಪ

    ಜೈಪುರ: ಖಾಸಗಿ ವೈದ್ಯಕೀಯ ಕಾಲೇಜಿನ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯೊಬ್ಬಳು (Medical Student) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಸ್ಥಾನದ ಉದಯಪುರದಲ್ಲಿ (Udaipur) ನಡೆದಿದೆ.

    ಗುರುವಾರ ರಾತ್ರಿ ಘಟನೆ ನಡೆದಿದೆ. ಜಮ್ಮು ಮತ್ತು ಕಾಶ್ಮೀರದ ಅಂತಿಮ ವರ್ಷದ ಬಿಡಿಎಸ್ ವಿದ್ಯಾರ್ಥಿನಿ ಶ್ವೇತಾ ಸಿಂಗ್ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆಕೆಯ ರೂಮ್‌ಮೇಟ್ ಶ್ವೇತಾ ಸಿಂಗ್ ಆತ್ಮಹತ್ಯೆ ಮಾಡಿಕೊಂಡಿರುವುದನ್ನು ಕಂಡು ಹಾಸ್ಟೆಲ್ ಅಧಿಕಾರಿಗಳಿಗೆ ತಿಳಿಸಿದ್ದಾಳೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಇದನ್ನೂ ಓದಿ: ತೆಲಂಗಾಣ | ಡಿವೈಡರ್‌ಗೆ ಪೊಲೀಸ್ ವಾಹನ ಡಿಕ್ಕಿ – ಇಬ್ಬರು ಡಿಎಸ್ಪಿ ಸಾವು

    ಹಾಸ್ಟೆಲ್ ರೂಂನಲ್ಲಿ ಶ್ವೇತಾ ಸಿಂಗ್ ಬರೆದ ಡೆತ್ ನೋಟ್ ಪತ್ತೆಯಾಗಿದ್ದು, ಅಧ್ಯಾಪಕರು ವಿದ್ಯಾರ್ಥಿಗಳಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಮತ್ತು ಸಮಯಕ್ಕೆ ಸರಿಯಾಗಿ ಪರೀಕ್ಷೆಗಳನ್ನು ನಡೆಸುತ್ತಿಲ್ಲ ಎಂದು ಆರೋಪಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಗವಿ ಮಠದ ಆವರಣದಲ್ಲಿ ನಾಗದೇವರ ಮುಂದೆ ಧ್ಯಾನಕ್ಕೆ ಕುಳಿತ ಮುಸ್ಲಿಂ ಮಹಿಳೆ

    ವಿದ್ಯಾರ್ಥಿನಿಯ ಆತ್ಮಹತ್ಯೆ ಬಳಿಕ ವಿದ್ಯಾರ್ಥಿಗಳು ಕಾಲೇಜಿನಲ್ಲಿ ಪ್ರತಿಭಟನೆ ನಡೆಸಿ, ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿರುವ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ರಸ್ತೆಯನ್ನು ತಡೆದಿದ್ದಾರೆ. ಕಾಲೇಜು ನಿರ್ದೇಶಕರು ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಿ ಅಧ್ಯಾಪಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಇದನ್ನೂ ಓದಿ: ಅಂಗಡಿ ಬಳಿ ಕುಳಿತವನ ಮೇಲೆ ಡೆಡ್ಲಿ ಅಟ್ಯಾಕ್ – ಚಿಕಿತ್ಸೆ ಫಲಿಸದೇ ಯುವಕ ಸಾವು

    ಘಟನೆ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದು, ಸೂಕ್ತ ಕ್ರಮ ಕೈಗೊಳ್ಳುತ್ತಾರೆ. ಕಾಲೇಜು ಆಡಳಿತ ಮಂಡಳಿ ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿರುವ ಅಧ್ಯಾಪಕರನ್ನು ವಜಾಗೊಳಿಸಲಾಗುವುದು ಎಂದು ಕಾಲೇಜು ನಿರ್ದೇಶಕರು ತಿಳಿಸಿದ್ದಾರೆ. ಇದನ್ನೂ ಓದಿ: ರಾಧಾನಗರಿ ಜಲಾಶಯದಿಂದ 4 ಗೇಟ್‌ಗಳ ಮೂಲಕ ನೀರು ಬಿಡುಗಡೆ – ದೂದ್‌ಗಂಗಾ ನದಿ ತೀರದಲ್ಲಿ ಹೈಅಲರ್ಟ್

    ಸದ್ಯ ವಿದ್ಯಾರ್ಥಿನಿಯ ಮೃತದೇಹವನ್ನು ಶವಾಗಾರಕ್ಕೆ ರವಾನಿಸಿದ್ದು, ಆಕೆಯ ಕುಟುಂಬಸ್ಥರು ಬಂದ ನಂತರ ಮರಣೋತ್ತರ ಪರೀಕ್ಷೆ ನಡೆಸಲಾಗುವುದು ಎಂದು ಸುಖೇರ್ ಪೊಲೀಸ್ ಠಾಣೆಯ ಠಾಣಾಧಿಕಾರಿ ರವೀಂದ್ರ ಚರಣ್ ತಿಳಿಸಿದ್ದಾರೆ. ಇದನ್ನೂ ಓದಿ: ಕರ್ನಾಟಕದ ಅಸಲಿ ಮುಖ್ಯಮಂತ್ರಿ ನೋಡಲು ಸ್ಕ್ಯಾನ್‌ ಮಾಡಿ: ನಿಖಿಲ್‌ ಕುಮಾರಸ್ವಾಮಿ ಸ್ಕ್ಯಾನರ್‌ನಲ್ಲಿರೋ ಫೋಟೊ ಯಾರದ್ದು?

  • Mandya | ಕಾಲೇಜು ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿ ನೇಣಿಗೆ ಶರಣು

    Mandya | ಕಾಲೇಜು ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿ ನೇಣಿಗೆ ಶರಣು

    ಮಂಡ್ಯ: ವೈದ್ಯಕೀಯ ವಿದ್ಯಾರ್ಥಿ (Medical Student) ಹಾಸ್ಟೆಲ್‌ನಲ್ಲಿ (Hostel) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ (Mandya) ಜಿಲ್ಲೆಯಲ್ಲಿ ನಡೆದಿದೆ.

    ಕೊಪ್ಪಳ (Koppal) ಮೂಲದ ಭರತ್ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ. ಓದಿನ ಬಗ್ಗೆ ನಿರಾಸಕ್ತಿ ಹೊಂದಿದ್ದ ಭರತ್ ಮೊದಲ ವರ್ಷದ ಪರೀಕ್ಷೆಗಳಿಗೆ ಗೈರಾಗಿದ್ದ. ಅಲ್ಲದೇ ಕಾಲೇಜಿಗೂ ಸಹ ಭರತ್ ಸರಿಯಾಗಿ ಹೋಗುತ್ತಿರಲಿಲ್ಲ. ಇದನ್ನೂ ಓದಿ: ಬಿಕ್ಲು ಶಿವ ಕೊಲೆ ಕೇಸ್‌ಗೆ ಟ್ವಿಸ್ಟ್‌ – ಪ್ರಮುಖ ಆರೋಪಿಯಿಂದ ನಟಿ ರಚಿತಾ ರಾಮ್‌ಗೆ ಭರ್ಜರಿ ಗಿಫ್ಟ್

    ಫುಟ್ಬಾಲ್ ಆಟದಲ್ಲಿ ಭರತ್ ಹೆಚ್ಚಿನ ಆಸಕ್ತಿ ಹೊಂದಿದ್ದ. ಮೊದಲ ವರ್ಷ ಗೈರು ಆಗಿದ್ದ ಪರೀಕ್ಷೆಗಳನ್ನು ಈ ಬಾರಿ ಪಾಸ್ ಮಾಡಿಕೊಳ್ಳಬೇಕೆಂದು ಪರೀಕ್ಷಾ ಶುಲ್ಕವನ್ನು ಕಟ್ಟಲು ಭರತ್ ಮುಂದಾಗಿದ್ದ. ಭಾನುವಾರ ರಾತ್ರಿ 12 ಗಂಟೆವರೆಗೆ ಹಾಸ್ಟೆಲ್‌ನ ವಿದ್ಯಾರ್ಥಿಗಳೊಂದಿಗೆ ಮಾತನಾಡಿದ್ದಾನೆ. ಬಳಿಕ ತನ್ನ ಕೊಠಡಿಗೆ ಬಂದು ನೇಣು ಬಿಗಿದುಕೊಂಡು ಭರತ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದನ್ನೂ ಓದಿ: ಮುಡಾ ಕೇಸ್ | ಇಡಿ-ಬಿಜೆಪಿ ಪಾಲುದಾರಿಕೆಯ ಪ್ರಚಾರವನ್ನು ಸುಪ್ರೀಂ ರದ್ದುಗೊಳಿಸಿದೆ: ಸುರ್ಜೇವಾಲಾ

    ಇಂದು ಬೆಳಗ್ಗೆ ಸಹಪಾಠಿಗಳು ನೋಡಿದ ವೇಳೆ ಪ್ರಕರಣ ಬೆಳಕಿಗೆ ಬಂದಿದೆ. ಮಂಡ್ಯ ಪೂರ್ವ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಸುಳ್ಳು ಸುದ್ದಿ ಹರಿಬಿಟ್ಟ ಆರೋಪ – ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ರದ್ದುಗೊಳಿಸಿದ ಸುಪ್ರೀಂ

  • ಇರಾನ್‌ನಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳ ರಕ್ಷಣೆ – ದೆಹಲಿಗೆ ಬಂದ ನಂತ್ರ ಕಳಪೆ ಬಸ್ಸು ನೀಡಿದ್ದಕ್ಕೆ ಆಕ್ರೋಶ

    ಇರಾನ್‌ನಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳ ರಕ್ಷಣೆ – ದೆಹಲಿಗೆ ಬಂದ ನಂತ್ರ ಕಳಪೆ ಬಸ್ಸು ನೀಡಿದ್ದಕ್ಕೆ ಆಕ್ರೋಶ

    ನವದೆಹಲಿ: ಇರಾನ್‌ನಲ್ಲಿ (Iran) ಸಿಲುಕಿದ್ದ ಕಾಶ್ಮೀರದ ವಿದ್ಯಾರ್ಥಿಗಳು (Jammu Kashmir) ದೆಹಲಿಯಲ್ಲಿ ಇಳಿದ ಬೆನ್ನಲ್ಲೇ ಜಮ್ಮು ಕಾಶ್ಮೀರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

    ಇರಾನ್‌ನ ಉರ್ಮಿಯಾ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಓದುತ್ತಿದ್ದ 110 ವಿದ್ಯಾರ್ಥಿಗಳು ಆಪರೇಷನ್ ಸಿಂಧು (Operation Sindhu) ಕಾರ್ಯಾಚರಣೆಯ ಮೂಲಕ ಗುರುವಾರ ಬೆಳಿಗ್ಗೆ ದೆಹಲಿಗೆ ಬಂದಿಳಿದರು.

    ದೆಹಲಿಗೆ ಆಗಮಿಸಿದ ವಿದ್ಯಾರ್ಥಿಗಳನ್ನು ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಕೀರ್ತಿ ವರ್ಧನ್‌ ಸಿಂಗ್‌ ಆತ್ಮೀಯವಾಗಿ ಬರಮಾಡಿಕೊಂಡರು. ಸಂಘರ್ಷ ಪೀಡಿತ ಇರಾನ್‌ನಿಂದ ಸುರಕ್ಷಿತವಾಗಿ ಭಾರತಕ್ಕೆ ಕರೆ ತಂದಿದ್ದಕ್ಕೆ ಕೇಂದ್ರ ಸರ್ಕಾರಕ್ಕೆ ವಿದ್ಯಾರ್ಥಿಗಳು ಧನ್ಯವಾದ ಅರ್ಪಿಸಿದರು.

    ಈಗ ಈ ವಿದ್ಯಾರ್ಥಿಗಳು ಕಳಪೆ ಬಸ್ಸುಗಳನ್ನು ನೀಡಿದ್ದಕ್ಕೆ ಜಮ್ಮು ಕಾಶ್ಮೀರ ಸರ್ಕಾರವನ್ನು ದೂರಿದ್ದಾರೆ. ನಾವು ಬಹಳ ದೂರದಿಂದ ಬಂದಿದ್ದೇವೆ. ಆದರೆ ಸರ್ಕಾರ ಡಿಲಕ್ಸ್‌ ಬಸ್ಸು ನೀಡದೇ ಕಳಪೆ ಬಸ್ಸು ನೀಡಿದೆ. ವಿಮಾನ ವ್ಯವಸ್ಥೆಯನ್ನು ಸಹ ಮಾಡಿಲ್ಲ ಎಂದು ಆಕ್ರೋಶ ಹೊರ ಹಾಕಿದ್ದಾರೆ. ಇದನ್ನೂ ಓದಿ: ವಿದೇಶದಿಂದ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರಿಗೆ ವಾಪಸ್ – ಬರ್ತಿದ್ದಂತೆ ಕೇಂದ್ರದ ವಿರುದ್ಧ ವಾಗ್ದಾಳಿ

    ನಾಲ್ಕು ದಿನದಿಂದ ಪ್ರಯಾಣ ಮಾಡಿ ಸಾಕಷ್ಟು ಸುಸ್ತಾಗಿದ್ದೇವೆ. ಈಗ ಎಸ್‌ಆರ್‌ಟಿಸಿ ಬಸ್ಸಿನಲ್ಲಿ ಹೋಗಿ ಅಂದರೆ ಹೇಗೆ? ಅಷ್ಟೇ ಅಲ್ಲದೇ ಇಲ್ಲಿ ಜಮ್ಮು ಕಾಶ್ಮೀರ ಸರ್ಕಾರದ ಯಾವೊಬ್ಬ ಅಧಿಕಾರಿಯನ್ನು ಸಹ ನಿಯೋಜನೆ ಮಾಡಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

    ಇಸ್ರೇಲ್‌ ಜೊತೆಗಿನ ಸಂಘರ್ಷದ ಕಾರಣದಿಂದ ಇರಾನ್‌ ತನ್ನ ವಾಯುನೆಲೆಯನ್ನು ಬಂದ್‌ ಮಾಡಿದೆ. ಹೀಗಾಗಿ ಭಾರತದ ವಿದ್ಯಾರ್ಥಿಗಳು ಇರಾನ್‌ನಿಂದ ಅರ್ಮೇನಿಯಾ ಮತ್ತು ದೋಹಾ ಪ್ರವೇಶಿಸಿ ಇಂಡಿಗೋ ವಿಶೇಷ ವಿಮಾನದ ಮೂಲಕ ದೆಹಲಿಗೆ ಬಂದಿದ್ದಾರೆ. ಇದನ್ನೂ ಓದಿ: ‌ಇರಾನ್‌ನಿಂದ ಖಂಡಾಂತರ ಕ್ಷಿಪಣಿ ದಾಳಿ – ದಕ್ಷಿಣ ಇಸ್ರೇಲ್‌ನ ಅತಿದೊಡ್ಡ ಆಸ್ಪತ್ರೆ ಉಡೀಸ್‌

    ವಿದ್ಯಾರ್ಥಿಗಳ ಆಕ್ರೋಶದ ಬೆನ್ನಲ್ಲೇ ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಒಮರ್‌ ಅಬ್ದುಲ್ಲಾ ಡಿಲಕ್ಸ್‌ ಬಸ್ಸು ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.


    ಸಾಮಾಜಿಕ ಜಾಲತಾಣದಲ್ಲಿ ಕಾಶ್ಮೀರ ವಿದ್ಯಾರ್ಥಿಗಳ ವಿರುದ್ಧ ನೆಟ್ಟಿಗರು  ಕಿಡಿಕಾರುತ್ತಿದ್ದಾರೆ. ನಿಮ್ಮನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆ ತಂದಿದ್ದೆ ದೊಡ್ಡ ಸಾಧನೆ. ಭಾರತಕ್ಕೆ ಬಂದ ನಂತರವೂ ನಿಮಗೆ ಡಿಲಕ್ಸ್‌ ಬಸ್ಸು ಬೇಕು, ವಿಮಾನ ವ್ಯವಸ್ಥೆ ಮಾಡಬೇಕು ಎಂದು ಕೇಳುವುದು ಎಷ್ಟು ಸರಿ ಎಂದು ಆಕ್ರೋಶ ಹೊರ ಹಾಕುತ್ತಿದ್ದಾರೆ.

  • ಹಾಸ್ಟೆಲ್‍ನಲ್ಲೇ ನೇಣು ಬಿಗಿದುಕೊಂಡು ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ!

    ಹಾಸ್ಟೆಲ್‍ನಲ್ಲೇ ನೇಣು ಬಿಗಿದುಕೊಂಡು ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ!

    ಬೆಂಗಳೂರು: ಬೌರಿಂಗ್ ಆಸ್ಪತ್ರೆ ವೈದ್ಯಕೀಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವೈದ್ಯಕೀಯ ವಿದ್ಯಾರ್ಥಿಯೊಬ್ಬ (Medical Student) ಹಾಸ್ಟೆಲ್‍ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

    ರಾಜಸ್ಥಾನ (Rajasthan) ಮೂಲದ ಲೋಕೇಂದ್ರನಾಥ್ ಕುಮಾರ್ ಸಿಂಗ್ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಆತ ಮೊದಲನೇ ವರ್ಷದ ವೈದ್ಯಕೀಯ ಶಿಕ್ಷಣ ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.

    ಸೋಮವಾರ ಬೆಳಗ್ಗೆ ಪ್ರಾಯೋಗಿಕ ಪರೀಕ್ಷೆ ಮುಗಿಸಿ, ಮಧ್ಯಾಹ್ನ ಹಾಸ್ಟೆಲ್‍ಗೆ ಬಂದು ತನ್ನ ಕೊಠಡಿಯ ಬಾಗಿಲು ಹಾಕಿಕೊಂಡು ನೇಣಿಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

    ಸ್ಥಳಕ್ಕೆ ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬಳಿಕ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಿದ್ದಾರೆ.

  • ಖಾಸಗಿ ಅಂಗವನ್ನೇ ಕತ್ತರಿಸಿಕೊಂಡು ಆತ್ಮಹತ್ಯೆಗೆ ಶರಣಾದ ವೈದ್ಯಕೀಯ ವಿದ್ಯಾರ್ಥಿ

    ಖಾಸಗಿ ಅಂಗವನ್ನೇ ಕತ್ತರಿಸಿಕೊಂಡು ಆತ್ಮಹತ್ಯೆಗೆ ಶರಣಾದ ವೈದ್ಯಕೀಯ ವಿದ್ಯಾರ್ಥಿ

    ಹೈದರಾಬಾದ್: ಖಿನ್ನತೆಯಿಂದ ಬಳಲುತ್ತಿದ್ದ ಎಂಬಿಬಿಎಸ್ ವಿದ್ಯಾರ್ಥಿಯೊಬ್ಬ (Medical Student) ತನ್ನ ಖಾಸಗಿ ಅಂಗವನ್ನೇ (Private Part) ಕತ್ತರಿಸಿಕೊಂಡು ತನ್ನ ಜೀವನವನ್ನೇ ಅಂತ್ಯಗೊಳಿಸಿರುವ ಆಘಾತಕಾರಿ ಘಟನೆ ತೆಲಂಗಾಣದ (Telangana) ಸಿಕಂದರಾಬಾದ್‌ನಲ್ಲಿ ನಡೆದಿದೆ.

    ಮೃತ ವೈದ್ಯಕೀಯ ವಿದ್ಯಾರ್ಥಿಯನ್ನು ದೀಕ್ಷಿತ್ ರೆಡ್ಡಿ (21) ಎಂದು ಗುರುತಿಸಲಾಗಿದೆ. ಆತ ಕಳೆದ 4 ವರ್ಷಗಳಿಂದ ಖಿನ್ನತೆಯಿಂದ ಬಳಲುತ್ತಿದ್ದು, ಇದಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದ. ಆದರೆ ಭಾನುವಾರ ಲೇಸರ್ ಬ್ಲೇಡ್ ಬಳಸಿ ತನ್ನ ಖಾಸಗಿ ಅಂಗವನ್ನೇ ಕತ್ತರಿಸಿಕೊಳ್ಳುವ ಮೂಲಕ ಆತ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

    ದೀಕ್ಷಿತ್ ರೆಡ್ಡಿ ಖಿನ್ನತೆಗೆ ಚಿಕಿತ್ಸೆ ಪಡೆಯುತ್ತಿದ್ದರೂ ಕಳೆದ 2-3 ತಿಂಗಳಿನಿಂದ ಔಷಧ ಸೇವಿಸುವುದನ್ನು ನಿಲ್ಲಿಸಿದ್ದ ಎನ್ನಲಾಗಿದೆ. ಆದರೆ ವಿದ್ಯಾರ್ಥಿ ಆತ್ಮಹತ್ಯೆಯ ಹಿಂದಿನ ಉದ್ದೇಶ ಇನ್ನೂ ತಿಳಿದುಬಂದಿಲ್ಲ. ಇದನ್ನೂ ಓದಿ: ಮನಾಲಿ ಪ್ರವಾಸಕ್ಕೆಂದು ತೆರಳಿದ್ದ ಮೈಸೂರಿನ ಪ್ರವಾಸಿಗರು ನಾಪತ್ತೆ

    ಈ ಬಗ್ಗೆ ಪೊಲೀಸರು ಪ್ರಸ್ತುತ ತನಿಖೆ ನಡೆಸುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಇದನ್ನೂ ಓದಿ: ಜ್ಯುವೆಲರಿ ಶಾಪ್‌ನಲ್ಲಿ ಕೈಚಳಕ – ಆಭರಣ ಖರೀದಿ ನೆಪದಲ್ಲಿ ನೆಕ್ಲೇಸ್ ಎಗರಿಸಿದ ಮಹಿಳೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಾರು, ಲಾರಿ ಮುಖಾಮುಖಿ ಡಿಕ್ಕಿ – ವೈದ್ಯಕೀಯ ವಿದ್ಯಾರ್ಥಿ ಸ್ಥಳದಲ್ಲೇ ಸಾವು

    ಕಾರು, ಲಾರಿ ಮುಖಾಮುಖಿ ಡಿಕ್ಕಿ – ವೈದ್ಯಕೀಯ ವಿದ್ಯಾರ್ಥಿ ಸ್ಥಳದಲ್ಲೇ ಸಾವು

    ಹಾವೇರಿ: ಕಾರು (Car) ಮತ್ತು ಲಾರಿ (Lorry) ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲನೆ ಮಾಡುತ್ತಿದ್ದ ವೈದ್ಯಕೀಯ ವಿದ್ಯಾರ್ಥಿ (Medical Student) ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾವೇರಿ (Haveri) ಜಿಲ್ಲೆಯಲ್ಲಿ ನಡೆದಿದೆ.

    ಜಿಲ್ಲೆಯ ಶಿಗ್ಗಾಂವಿ (Shiggavi) ತಾಲೂಕಿನ ಬಂಕಾಪುರ (Bankapura) ಗ್ರಾಮದ ಬಳಿಯಿರುವ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಘಟನೆ ನಡೆದಿದ್ದು, ಅಖಿಲ್ ಕುಂಬಾರ (27) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ವಿದ್ಯಾರ್ಥಿ ಅಖಿಲ್ ಮೂಲತಃ ಬೆಂಗಳೂರು ನಿವಾಸಿಯಾಗಿದ್ದು, ಬೆಳಗಾವಿಯಲ್ಲಿ ಎಂಬಿಬಿಎಸ್ ಮುಗಿಸಿದ್ದು, ಎಂ.ಡಿ ವಿದ್ಯಾಭ್ಯಾಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಫ್ಲೈಓವರ್‌ನಿಂದ ರೈಲ್ವೇ ಹಳಿಗೆ ಬಿದ್ದ ಕಾರು – ಐವರಿಗೆ ಗಂಭೀರ ಗಾಯ

    ಭಾನುವಾರ ಬೆಳಗಾವಿಯಿಂದ (Belagavi) ದಾವಣಗೆರೆಗೆ (Davanagere) ಹೋಗುತ್ತಿದ್ದ ಸಂದರ್ಭ ಈ ದುರ್ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಬಂಕಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಂಕಾಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು – ಹೊರಬರಲಾರದೆ ಚಾಲಕ ಸಜೀವದಹನ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮೆಡಿಕಲ್ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ – ಹಿರಿಯ ವೈದ್ಯರ ಕಿರುಕುಳವೇ ಕಾರಣ: ಸಂಬಂಧಿಕರ ಆಕ್ರೋಶ

    ಮೆಡಿಕಲ್ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ – ಹಿರಿಯ ವೈದ್ಯರ ಕಿರುಕುಳವೇ ಕಾರಣ: ಸಂಬಂಧಿಕರ ಆಕ್ರೋಶ

    ಕೋಲಾರ: ಆಕೆ ಮಕ್ಕಳ ವೈದ್ಯೆಯಾಗುವ ಕನಸು ಹೊತ್ತು ದೂರದ ಬಳ್ಳಾರಿಯಿಂದ ಬೆಂಗಳೂರಿಗೆ ಬಂದಿದ್ದಳು. ತಂದೆಯನ್ನು ಕಳೆದುಕೊಂಡಿದ್ದ ಆಕೆ ಕೆಲಸದ ಒತ್ತಡ, ಹಿರಿಯ ವೈದ್ಯರ ಕಿರಕುಳದಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದಳು. ಅಲ್ಲದೆ ತನ್ನ ಸ್ನೇಹಿತನ ಬಳಿ ಆತ್ಮಹತ್ಯೆ (Suicide) ಮಾಡಿಕೊಳ್ಳುವ ಬಗ್ಗೆ ಹೇಳಿ ಕೊನೆಗೆ ಆಕೆ ಆತ್ಮಹತ್ಯೆಗೆ ಶರಣಾಗಿದ್ದಾಳೆ.

    ಭಾನುವಾರ ಹೊಸಕೋಟೆಯ ಎಂವಿಜೆ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ (Medical Student) ದರ್ಶಿನಿ (24) ಕೋಲಾರ ತಾಲೂಕಿನ ಕೆಂದಟ್ಟಿ ಬಳಿಯ ಕ್ವಾರಿಯಲ್ಲಿರುವ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಲೇಜು ಆಡಳಿತ ಮಂಡಳಿಯರವ ಕಿರುಕುಳದ ಆರೋಪ ಕೇಳಿ ಬರುತ್ತಿದೆ.

    ಪ್ರಕರಣಕ್ಕೆ ಸಬಂಧಿಸಿದಂತೆ ಕಾಲೇಜು ಆಡಳಿತ ಮಂಡಳಿಯವರ ಕಿರುಕುಳ ಎಂದು ವಿದ್ಯಾರ್ಥಿನಿಯ ಪೋಷಕರು ಆರೋಪಿಸಿದ್ದಾರೆ. ಕೊಪ್ಪಳದಲ್ಲಿ ಎಂಬಿಬಿಎಸ್ ಮುಗಿಸಿ, ಕಳೆದ 7 ತಿಂಗಳ ಹಿಂದೆ ಹೊಸಕೋಟೆ ಬಳಿ ಇರುವ ಎಂವಿಜೆ ಮೆಡಿಕಲ್ ಕಾಲೇಜಿನಲ್ಲಿ ಎಂಡಿ ವಿದ್ಯಾಭ್ಯಾಸಕ್ಕೆ ಆಗಮಿಸಿದ್ದಳು. ಕಳೆದ 2 ವರ್ಷಗಳ ಹಿಂದೆ ತಂದೆಯನ್ನು ಕಳೆದುಕೊಂಡಿದ್ದ ವಿದ್ಯಾರ್ಥಿನಿ ತಾಯಿಯ ಆಶ್ರಯದಲ್ಲಿ ಬೆಳೆಯುತ್ತಿದ್ದು ವೈದ್ಯಳಾಗಬೇಕೆಂಬ ಕನಸು ಹೊತ್ತಿದ್ದಳು. ಆದರೆ ಭಾನುವಾರ ಕೋಲಾರದ ಬಳಿ ಇರುವ ಕ್ವಾರಿಯಲ್ಲಿ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದನ್ನೂ ಓದಿ: ಚುನಾವಣೆ ವೇಳೆ ಸೌಲಭ್ಯ ನೀಡಿ ಬಳಿಕ ಸ್ಥಗಿತ – ಗ್ರಾ.ಪಂ. ಕಚೇರಿಗೆ ಮುತ್ತಿಗೆ ಹಾಕಿ ಸಿಬ್ಬಂದಿಯನ್ನು ಕೂಡಿ ಹಾಕಿದ ಗ್ರಾಮಸ್ಥರು

    ಮಕ್ಕಳ ತಜ್ಞೆಯಾಗಿ ಉಚಿತ ಪ್ರವೇಶವನ್ನು ಪಡೆದಿದ್ದ ದರ್ಶಿನಿಗೆ ಕಾಲೇಜು ಆಡಳಿತ ಮಂಡಳಿಯವರು ಕಿರುಕುಳ ಕೊಡುತ್ತಿದ್ದರು ಎನ್ನಲಾಗಿದೆ. ದಿನದ 24 ಗಂಟೆಗಳ ಕಾಲ ವಿಶ್ರಾಂತಿ ಇಲ್ಲದೆ ಕೆಲಸ ಮಾಡಬೇಕಾಗಿದ್ದು ಊಟಕ್ಕೂ ಸಹ ಬಿಡುತ್ತಿರಲಿಲ್ಲ ಎನ್ನಲಾಗಿದೆ. ಜೊತೆಗೆ ಹಿರಿಯ ವೈದ್ಯ ಮಹೇಶ್ ಎಂಬಾತನ ಕಿರುಕುಳ ಹೆಚ್ಚಾಗಿದ್ದು, ಕಾಫಿ ಹೆಸರಿನಲ್ಲಿ ದರ್ಶಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ಎಂದು ಪೋಷಕರು ಆರೋಪಿಸಿದ್ದಾರೆ. ಹೀಗಾಗಿ ಆಡಳಿತ ಮಂಡಳಿಯವರ ಕಿರುಕುಳವನ್ನು ಪ್ರಶ್ನೆ ಮಾಡಿದರೆ ಇಂಟರ್ನಲ್ ಮಾರ್ಕ್ ಕೊಡುವುದಿಲ್ಲ ಎಂಬ ಭಯದಿಂದ, ಮನೆಯವರಿಗೆ ಕಿರುಕುಳದ ಕುರಿತು ತಿಳಿಸದೆ, ಸ್ನೇಹಿತ ಮಣಿ ಎಂಬುವರ ಬಳಿ ತನ್ನ ಅಳಲನ್ನು ತೋಡಿಕೊಂಡಿದ್ದಳು.

    ಆತ್ಮಹತ್ಯೆಗೂ ಮುನ್ನ ಸ್ನೇಹಿತ ಮಣಿಗೆ ಕರೆ ಮಾಡಿ ಘಟನೆಯನ್ನು ತಿಳಿಸಿ ಫೋನ್ ಕಟ್ ಮಾಡಿದ್ದಾಳೆ. ನಂತರ ಮಣಿಯ ಕರೆಗೂ ಸ್ಪಂದಿಸದೇ ಕ್ವಾರಿಯಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ದರ್ಶಿನಿ ಕಾಲೇಜಿನಿಂದ ಇಷ್ಟು ದೂರು ಬಂದು ಆತ್ಮಹತ್ಯೆ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ವಿದ್ಯಾರ್ಥಿನಿಯ ತಮ್ಮ ಅನುಮಾನ ವ್ಯಕ್ತಪಡಿಸಿದ್ದಾನೆ. ಘಟನೆ ಸಂಬಂಧ ಆಡಳಿತ ಮಂಡಳಿ ಹಾಗೂ ಹಿರಿಯ ವೈದ್ಯನ ವಿರುದ್ಧ ಪೋಷಕರು ದೂರು ನೀಡಿದ್ದಾರೆ. ಕೋಲಾರ ಗ್ರಾಮಾಂತರ ಪೊಲೀಸರು ಐಪಿಸಿ ಸೆಕ್ಷನ್ 306 ಹಾಗೂ 345 ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಟಿ. ನರಸೀಪುರದ ದೇಗುಲದಲ್ಲಿ ಕಾಣಿಸಿಕೊಂಡ ಚಿರತೆ