ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಕಳ್ಳತನ ಪ್ರಕರಣವೊಂದರ ಆರೋಪಿಯಾಗಿದ್ದ ವ್ಯಕ್ತಿಯು ಕುಮಟಾ ಪೊಲೀಸರು ನ್ಯಾಯಾಲಯಕ್ಕೆ ಹಾಜುರುಪಡಿಸಲು ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವೇಳೆ ಪೊಲೀಸರನ್ನು ದೂಡಿ ಪರಾರಿಯಾಗಿದ್ದಾನೆ.
ಅಂಗಡಿಯೊಂದರ ಎಕ್ಸಿಟ್ ಬ್ಯಾಟರಿ ಕಳ್ಳತನ ಹಾಗೂ ಕಾರುಗಳ ಕಳ್ಳತನದಲ್ಲಿ ಆರೋಪಿಯಾಗಿರುವ ಭಟ್ಕಳದ ಫಾಸಾನ್ ಪರಾರಿಯಾದವನಾಗಿದ್ದು, ಹಲವು ಕಳ್ಳತನ ಪ್ರಕರಣದಲ್ಲಿ ಈತನನ್ನು ಬಂಧಿಸಿ ಕುಮಟಾ ಪೊಲೀಸರು ಭಟ್ಕಳದಿಂದ ಕುಮಟಾಕ್ಕೆ ವಿಚಾರಣೆಗೆ ಕರೆತಂದಿದ್ದರು.
ನ್ಯಾಯಾಲಯಕ್ಕೆ ಹಾಜುರುಪಡಿಸಿ ದೋಷಾರೋಪಣೆ ಪಟ್ಟಿ ಸಲ್ಲಿಸುವ ಸಲವಾಗಿ ಈತನ ವೈದ್ಯಕೀಯ ಪರೀಕ್ಷೆಗಾಗಿ ಕುಮಟಾ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಈವೇಳೆ ಇದನ್ನ ಅವಕಾಶ ಮಾಡಿಕೊಂಡ ಫಾಸಾನ್ ಪೂಲೀಸರನ್ನು ದೂಡಿ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಈತನ ಹುಡುಕಾಟ ನಡೆಸುತಿದ್ದಾರೆ.
ಇನ್ನು ಈತ ಮಧ್ಯಮ ಗಾತ್ರದ ಗಡ್ಡದಾರಿ ವ್ಯಕ್ತಿಯಾಗಿದ್ದು 5.4 ಅಡಿ ಎತ್ತರವಿದ್ದು ತಪ್ಪಿಸಿಕೊಳ್ಳುವಾಗ ಕಪ್ಪು ಅಂಗಿ ಹಾಕಿಕೊಂಡಿದ್ದನು.ಸದ್ಯ ಈತನ ಹುಡುಕಾಟ ನಡೆಯುತಿದ್ದಾರೆ.
ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ (Suraj Revanna) ಪರ ಇಂದು (ಸೋಮವಾರ) ಜಾಮೀನು ಅರ್ಜಿ ಸಲ್ಲಿಸುವುದಾಗಿ ಸೂರಜ್ ಪರ ವಕೀಲ (Advocate) ನಿಖಿಲ್ ಕಾಮತ್ ಮಾಹಿತಿ ನೀಡಿದ್ದಾರೆ.
ನ್ಯಾಯಾಧೀಶರು ಹೇಳಿದ್ದೇನು?
ಸೂರಜ್ ರೇವಣ್ಣ ಅವರನ್ನ ಬಂಧಿಸಿದ್ದ ಹಾಸನ ಹೊಳೆನರಸೀಪುರ ಪೊಲೀಸರು (Holenarasipura Police) ಕೋರಮಂಗಲದಲ್ಲಿರುವ 42ನೇ ಎಸಿಎಂಎಂ ನ್ಯಾಯಾಧೀಶರಾದ ಶಿವಕುಮಾರ್ ಮುಂದೆ ಹಾಜರು ಪಡಿಸಿದ್ದರು. ಈ ವೇಳೆ ರಾಜು ಸರ್ಕಾರದಿಂದ ಕೇಸ್ ಸಿಐಡಿಗೆ ವರ್ಗಾವಣೆ ಆಗಿರುವ ಆದೇಶವಾಗಿದೆ. ಆದ್ರೆ ಅಧಿಕೃತವಾಗಿ ಕೇಸ್ ದಾಖಲಾಗಿಲ್ಲ. ಆದ ಕಾರಣ ಸಿಐಡಿ ಅಧಿಕಾರಿಗಳು ಭಾನುವಾರ ನ್ಯಾಯಾಧೀಶರ ಮುಂದೆ ಹಾಜರಾಗಿಲ್ಲ. ಕಸ್ಟಡಿಗೆ ಬೇಕಿದ್ದರೆ ಓಪನ್ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿ ಪಡೆಯಿರಿ ಅಂತ ನ್ಯಾಯಾಧೀಶರು ಸೂಚಿಸಿ, ನ್ಯಾಯಾಧೀಶರು ಸೂರಜ್ ರೇವಣ್ಣರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಪ್ರಕಟಿಸಿದರು.
ಸಿಐಡಿ ತನಿಖೆಗೆ ಆದೇಶ:
ಇನ್ನೂ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಸಿಐಡಿಗೆ ವಹಿಸಿ ಆದೇಶಿಸಿದೆ. ಆದ್ರೆ ಅಧಿಕೃತವಾಗಿ ಸಿಐಡಿಗೆ ಪ್ರಕರಣ ವರ್ಗಾವಣೆ ಆಗಿಲ್ಲ. ಹೀಗಾಗಿ ಇಂದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಸೋಮವಾರ ಬಾಡಿವಾರೆಂಟ್ ಮೇಲೆ ಸಿಐಡಿ ವಶಕ್ಕೆ ಪಡೆಯುವ ಸಾಧ್ಯತೆಯಿದೆ. ಇದನ್ನೂ ಓದಿ: ರಾಮಮಂದಿರದಲ್ಲಿ ಭಕ್ತರೆಲ್ಲಾ ಸಮಾನರು – ಅರ್ಚಕರು ವಿಐಪಿಗಳಿಗೆ ತಿಲಕ ಇಡುವಂತಿಲ್ಲ
ಸಂತ್ರಸ್ತನ ವಿರುದ್ಧ ನೀಡಿದ್ದ ದೂರಿಗೆ ಸಾಕ್ಷಿ ನೀಡಲು ಸೂರಜ್ ರೇವಣ್ಣ ಶನಿವಾರ ಸಂಜೆ ಹಾಸನದ ಸೆನ್ ಠಾಣೆಗೆ ತೆರಳಿದ್ದರು. ಈ ವೇಳೆ ಸೂರಜ್ ರೇವಣ್ಣರನ್ನ ವಶಕ್ಕೆ ಪಡೆದ ಹಾಸನ ಪೊಲೀಸರು ಮುಂಜಾನೆಯವರೆಗೂ ಸುದೀರ್ಘ ವಿಚಾರಣೆಗೆ ಒಳಪಡಿಸಿದರು. ಭಾನುವಾರ ಬೆಳಗ್ಗಿನ ಜಾವ ಸೂರಜ್‌ರನ್ನ ಅಧಿಕೃತವಾಗಿ ಬಂಧಿಸಿದರು. ಇದನ್ನೂ ಓದಿ: NEET-UG ಮರು ಪರೀಕ್ಷೆ – 1,563 ಪೈಕಿ 750 ಗೈರು, 63 ವಿದ್ಯಾರ್ಥಿಗಳು ಡಿಬಾರ್
ಬೆಂಗಳೂರು: ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಬಂಧನಕ್ಕೆ ಒಳಗಾದ ರೇವಣ್ಣ ಅವರ ಹಿರಿಯ ಪುತ್ರ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ (Suraj Revanna) ಅವರನ್ನು ಕೋರ್ಟ್ (Court) 14 ದಿನಗಳ ನ್ಯಾಯಾಂಗ ಬಂಧನಕ್ಕೆ (Judicial Custody) ಒಪ್ಪಿಸಿ ಆದೇಶಿಸಿದೆ.
ಇಂದು ಹಾಸನ (Hassana) ಹಿಮ್ಸ್‌ನಲ್ಲಿ ಮೆಡಿಕಲ್ ಟೆಸ್ಟ್‌ಗೆ (Medical Test) ಒಳಪಡಿಸಿದ ನಂತರ ಸೂರಜ್ ರೇವಣ್ಣರನ್ನು ಬೆಂಗಳೂರಿನ (Bengaluru) ಕೋರಮಂಗಲದಲ್ಲಿರುವ 42ನೇ ಎಸಿಎಂಎಂ ನ್ಯಾಯಾಧೀಶರಾದ ಶಿವಕುಮಾರ್ ಮುಂದೆ ಹಾಜರು ಪಡಿಸಲಾಯಿತು. ನ್ಯಾಯಾಧೀಶರು ಸೂರಜ್ ರೇವಣ್ಣರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಪ್ರಕಟಿಸಿದರು.
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರ ಸಿಐಡಿಗೆ (CID) ವಹಿಸಿ ಆದೇಶಿಸಿದೆ. ಪ್ರಕರಣ ಇನ್ನೂ ಅಧಿಕೃತವಾಗಿ ಸಿಐಡಿಗೆ ವರ್ಗಾವಣೆ ಆಗಿಲ್ಲ. ಹೀಗಾಗಿ ಇಂದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಸೋಮವಾರ ಬಾಡಿವಾರೆಂಟ್ ಮೇಲೆ ಸಿಐಡಿ ವಶಕ್ಕೆ ಪಡೆಯುವ ಸಾಧ್ಯತೆಯಿದೆ.
ಸಂತ್ರಸ್ತನ ವಿರುದ್ದ ನೀಡಿದ್ದ ದೂರಿಗೆ ಸಾಕ್ಷಿ ನೀಡಲು ಸೂರಜ್ ರೇವಣ್ಣ ಶನಿವಾರ ಸಂಜೆ ಹಾಸನದ ಸೆನ್ ಠಾಣೆಗೆ ತೆರಳಿದ್ದರು. ಈ ವೇಳೆ ಸೂರಜ್ ರೇವಣ್ಣರನ್ನು ವಶಕ್ಕೆ ಪಡೆದ ಹಾಸನ ಪೊಲೀಸರು ಮುಂಜಾನೆಯವರೆಗೂ ಸುದೀರ್ಘ ವಿಚಾರಣೆಗೆ ಒಳಪಡಿಸಿದರು. ಬೆಳಗ್ಗೆ ಸೂರಜ್‌ರನ್ನು ಅಧಿಕೃತವಾಗಿ ಬಂಧಿಸಿದರು.
ಲೈಂಗಿಕ ದೌರ್ಜನ್ಯಕ್ಕೆಒಳಪಟ್ಟಿದ್ದಾರೆ ಎನ್ನಲಾದ ಸಂತ್ರಸ್ತನಿಗೆ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ.
ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ (Suraj Revanna) ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ದೂರು ದಾಖಲಿಸಿರುವ ಸಂತ್ರಸ್ತ ಯುವಕನಿಗೆ ಭಾನುವಾರ (ಇಂದು) ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ (Bowring Hospital) ವೈದ್ಯಕೀಯ ಪರೀಕ್ಷೆ ನಡೆಯಲಿದೆ.
ಶನಿವಾರ ತಡರಾತ್ರಿಯೇ ಸಂತ್ರಸ್ತನನ್ನು ಹಾಸನದಿಂದ ಬೌರಿಂಗ್ ಆಸ್ಪತ್ರೆಗೆ ಕರೆತಂದಿರುವ ಪೊಲೀಸರು ವೈದ್ಯಕೀಯ ಪರೀಕ್ಷೆಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಹಾಸನದಲ್ಲಿ ವೈದ್ಯಕೀಯ ಪರೀಕ್ಷೆಗೆ (Medical Test) ನಿರಾಕರಿಸಿದ ಹಿನ್ನೆಲೆ ಸಂತ್ರಸ್ತನ ಮನವಿ ಮೇರೆಗೆ ಬೆಂಗಳೂರಿನಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತಿದೆ. ಹೊಳೆನರಸೀಪುರ ಪೊಲೀಸರು ತಡರಾತ್ರಿ 2 ಗಂಟೆಗೆ ಸಂತ್ರಸ್ತ ಯುವಕನನ್ನು ಬೌರಿಂಗ್ ಆಸ್ಪತ್ರೆಗೆ ಕರೆತಂದಿದ್ದಾರೆ.
ಸದ್ಯಕ್ಕೆ ಕೌನ್ಸೆಲಿಂಗ್ ಮುಗಿಸಿರುವ ಕರ್ತವ್ಯ ನಿರತ ವೈದ್ಯರು, ಮುಂದಿನ ಪರೀಕ್ಷೆಗಳಿಗೆ ಹಿರಿಯ ವೈದ್ಯರ ಆಗಮನಕ್ಕೆ ಕಾಯುತ್ತಿದ್ದಾರೆ. ಭಾನುವಾರ (ಇಂದು) ಬೆಳಗ್ಗೆ 10 ಗಂಟೆ ನಂತರ ವೈದ್ಯಕೀಯ ಪರೀಕ್ಷೆಯ ಬೆಳವಣಿಗೆ ನಡೆಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಪರಪ್ಪನ ಅಗ್ರಹಾರದಲ್ಲಿ ಮೊದಲ ದಿನ ಕಳೆದ ದರ್ಶನ್ – ʻದಾಸʼನ ಜೈಲು ದಿನಚರಿ ಹೇಗಿದೆ?
ಸಂತ್ರಸ್ತ ಲೈಂಗಿಕ ಕ್ರಿಯೆಗೆ ಸಮರ್ಥನಾಗಿದ್ದಾನಾ ಅನ್ನೋ ಪರೀಕ್ಷೆ ಇದಾಗಿದೆ. ಸದ್ಯ ಸಂತ್ರಸ್ತನಿಗೆ ರಕ್ತದೊತ್ತಡ, ಶುಗರ್, ಇಸಿಜಿ, ದೇಹದ ಮೇಲೆ ಕಚ್ಚಿರುವ ಕಲೆಗಳ ಬಗ್ಗೆ ತಪಾಸಣೆ ನಡೆಸಲಾಗಿದೆ. ಹಿರಿಯ ವೈದ್ಯರ ಸಮ್ಮುಖದಲ್ಲಿ ಲೈಂಗಿಕ ಕ್ರಿಯೆ ಸಾಮರ್ಥ್ಯ ಪರೀಕ್ಷೆ ನಡೆಲಿದೆ. ಹೊಳೆನರಸೀಪುರ ಪೊಲೀಸರು ಸ್ಥಳದಲ್ಲಿ ಇದ್ದಾರೆ ಎಂದು ಬೌರಿಂಗ್ ಆಸ್ಪತ್ರೆ ಮೂಲಗಳು ಪಬ್ಲಿಕ್ ಟಿವಿಗೆ ತಿಳಿಸಿವೆ. ಇದನ್ನೂ ಓದಿ: Breaking: ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ಬಂಧನ
ರೇವಣ್ಣ ವಿರುದ್ಧ ಕೇಸ್:
ಶನಿವಾರ ಸಂತ್ರಸ್ತ ನೀಡಿದ್ದ ದೂರು ಆಧರಿಸಿ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 377 (ಅಸ್ವಾಭಾವಿಕ ಅಪರಾಧ), 342 (ತಪ್ಪಾದ ಬಂಧನಕ್ಕೆ ಶಿಕ್ಷೆ ) ಹಾಗೂ 506 (ಬೆದರಿಕೆ) ಅಡಿಯಲ್ಲಿ ಕೇಸ್ ದಾಖಲಾಗಿತ್ತು. ಡಿಜಿಪಿ ಕಚೇರಿಯಲ್ಲಿ ದೂರು ನೀಡಿದ್ದ ಸಂತ್ರಸ್ತ ಹಾಸನ ಎಸ್‌ಪಿಗೂ ದೂರಿನ ಪ್ರತಿಯನ್ನು ಇ-ಮೇಲ್ ಮಾಡಿದ್ದ. ಮೇಲ್ ಆಧರಿಸಿ ಸಂತ್ರಸ್ತನನ್ನ ಕರೆಸಿ ಮಾಹಿತಿ ಪಡೆದ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದರು.
ಸೂರಜ್ ಲಾಕ್ ಆಗಿದ್ದು ಹೇಗೆ?
ಶನಿವಾರ ರಾತ್ರಿ ತನ್ನ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಹೊರಿಸಿದ್ದ ಸಂತ್ರನ ವಿರುದ್ಧ ಪ್ರತಿದೂರು ನೀಡಲು ಸಂಜೆ 6 ಗಂಟೆ ವೇಳೆಗೆ ಹಾಸನದ ಸೆನ್ ಪೊಲೀಸ್ ಠಾಣೆಗೆ ತೆರಳಿದ್ದರು. ಅಲ್ಲಿಯೇ ಅವರನ್ನು ಬಂಧಿಸಿದ್ದ ಪೊಲೀಸರು ರಾತ್ರಿ ಸುಮಾರು 11:30ರ ವರೆಗೂ ವಿಚಾರಣೆ ನಡೆಸಿದ್ದರು. ಬಳಿಕ ಸೂರಜ್ ಜೊತೆಗೆ ನಿಗೂಢ ಸ್ಥಳಕ್ಕೆ ತೆರಳಿದ್ದ ಪೊಲೀಸರು ತಡರಾತ್ರಿ 1:30ರ ವರೆಗೂ ವಿಚಾರಣೆ ಮುಂದುವರಿಸಿದ್ದರು. ಪ್ರಕರಣದ ತನಿಖಾಧಿಕಾರಿ ಆಗಿರುವ ಸಕಲೇಶಪುರ ಡಿವೈಎಸ್‌ಪಿ ಪ್ರಮೋದ್ ಕುಮಾರ್ ಅವರು ಸೂರಜ್ ರೇವಣ್ಣ ಅವರನ್ನ ತೀವ್ರ ವಿಚಾರಣೆಗೆ ಒಳಪಡಿಸಿದ್ದರು.
ಬೆಂಗಳೂರು: ಅತ್ಯಾಚಾರಿ ಆರೋಪಿ ಪ್ರಜ್ವಲ್ ರೇವಣ್ಣಗೆ (Prajwal Revanna) ಇಂದು ಮೆಡಿಕಲ್ ಟೆಸ್ಟ್ ನಡೆಸಲಾಯಿತು.
ಎಸ್‍ಐಟಿ ಅಧಿಕಾರಿಗಳು ಅಂಬುಲೆನ್ಸ್ ನಲ್ಲಿ ಮೆಡಿಕಲ್ ಟೆಸ್ಟ್ ಗೆ (Medical Test) ಕರೆದೊಯ್ದರು. ಬಳಿಕ ಬೌರಿಂಗ್ ಆಸ್ಪತ್ರೆಯಲ್ಲಿ ಜನರಲ್ ಚೆಕಪ್ ಜೊತೆಗೆ ವಿಶೇಷ ಮೆಡಿಕಲ್ ಟೆಸ್ಟ್ ಗೆ ಪ್ರಜ್ವಲ್ ರೇವಣ್ಣ ಅವರನ್ನು ಒಳಪಡಿಸಲಾಯಿತು.
ಕೋರ್ಟಿಗೆ ಸಬ್ಮಿಟ್ ಮಾಡಲು ಮೂರ್ನಾಲ್ಕು ರೀತಿಯ ಟೆಸ್ಟ್ ಗಳಿಗೆ ಪೊಲೀಸರು ರಿಕ್ವೆಸ್ಟ್ ಮಾಡಿದ್ದರು. ಪೊಲೀಸರು ರಿಕ್ವೆಸ್ಟ್ ಕೊಟ್ಟಿರುವ ಟೆಸ್ಟ್ ಗಳನ್ನು ವೈದ್ಯರು ಮಾಡಿದ್ದಾರೆ. ಮೆಡಿಕಲ್ ಕಾಲೇಜಿನ ಡೀನ್, ಸೂಪರಿಂಡೆಂಟ್ ಸಮ್ಮುಖದಲ್ಲಿ ಈ ಟೆಸ್ಟ್ ನಡೆಸಲಾಯಿತು.
ಇದೇ ವೇಳೆ ಅತ್ಯಾಚಾರಕ್ಕೆ ಸಂಬಂಧಿಸಿದ ಟೆಸ್ಟ್ ಬಗ್ಗೆಯೂ ಪೊಲೀಸರು ಮನವಿ ಮಾಡಿಕೊಂಡರು. ಹೀಗಾಗಿ ಪೊಲೀಸರ ಮನವಿ ಮೇರೆಗೆ ವೈದ್ಯರು ಕೆಲವು ಸ್ಯಾಂಪಲ್‍ಗಳನ್ನು ಸಂಗ್ರಹಿಸಿದ್ದಾರೆ. ಈ ಮೂಲಕ ಸ್ಥಳ ಮಹಜರಿಗೂ ಮುನ್ನ ವಿವಿಧ ಟೆಸ್ಟ್ ಗಳನ್ನ ಮಾಡಿ ಸಾಕ್ಷ್ಯ ಸಂಗ್ರಹಿಸಲು ಎಸ್‍ಐಟಿ ಮುಂದಾಗಿದೆ.
ಬಳಿಕ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ವೈದ್ಯರು, ಕೋರ್ಟ್‍ಗೆ ನೀಡಬೇಕಾಗಿರುವ ಮೂರ್ನಾಲ್ಕು ರೀತಿಯ ಟೆಸ್ಟ್‍ಗಳನ್ನು ಮಾಡಿದ್ದೇವೆ. ಈ ಟೆಸ್ಟ್ ನ ರಿಪೋರ್ಟ್‍ಗಳನ್ನು ಎಸ್‍ಐಟಿ ಅಧಿಕಾರಿಗಳಿಗೆ ಕೊಡುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.
ಬೆಂಗಳೂರು: ಕಳೆದ 34 ದಿನಗಳ ಬಳಿಕ ಬೆಂಗಳೂರಿಗೆ ಬಂದಿರುವ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಇಂದು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿತ್ತು.
ನಗರದ ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಚೆಕಪ್‌ಗೆ ಎಸ್‌ಐಟಿ ಅಧಿಕಾರಿಗಳು ಕರೆದುಕೊಂಡು ಹೋಗಿದ್ದರು. ವೈದ್ಯಕೀಯ ತಪಾಸಣೆಯಲ್ಲಿ ಪ್ರಜ್ವಲ್ ಫಿಟ್ & ಫೈನ್ ಆಗಿದ್ದಾರೆ ಎಂಬುದಾಗಿ ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಜನರಲ್ ಚೆಕಪ್ ಮಾಡಿರೋ ಬೌರಿಂಗ್ ಆಸ್ಪತ್ರೆಯ (Bowring Hospital) ವೈದ್ಯರು, ಬಿಪಿ, ಶುಗರ್, ಹಾರ್ಟ್ ಬೀಟ್, ಪಲ್ಸ್ ರೇಟ್, ಬಾಡಿ ಟೆಂಪರೇಚರ್, ಆಕ್ಸಿಜನ್ ಲೆವಲ್ ಚೆಕ್ ಮಾಡಿದ್ದಾರೆ. ಎಲ್ಲವೂ ನಾರ್ಮಲ್ ಇರುವುದಾಗಿ ರಿಪೋರ್ಟ್ ಬಂದಿದೆ. ಒಟ್ಟಿನಲ್ಲಿ ಪ್ರಜ್ವಲ್ ರೇವಣ್ಣ ಅವರ ದೈಹಿಕ ಆರೋಗ್ಯ ನಾರ್ಮಲ್ ಆಗಿದ್ದು, ಯಾವುದೇ ಸಮಸ್ಯೆ ಇಲ್ಲ ಅಂತಾ ವೈದ್ಯರು ರಿಪೋರ್ಟ್ ಕೊಟ್ಟಿರುವುದಾಗಿ ಬೌರಿಂಗ್ ಆಸ್ಪತ್ರೆಯ ವೈದ್ಯರ ಮೂಲಗಳಿಂದ ಮಾಹಿತಿ ದೊರೆತಿದೆ. ಇದನ್ನೂ ಓದಿ: ಭವಾನಿ ರೇವಣ್ಣಗೆ ಎಸ್‌ಐಟಿಯಿಂದ ಮತ್ತೊಂದು ನೋಟಿಸ್
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋಗಳಿರುವ ಪೆನ್‌ಡ್ರೈವ್ ಪ್ರಕರಣವು ದೇಶಾದ್ಯಂತ ಭಾರೀ ಕೋಲಹಲ ಎಬ್ಬಿಸಿತ್ತು. ಈ ನಡುವೆ ಪ್ರಕರಣ ಹೊರ ಬರುತ್ತಿದ್ದಂತೆಯೇ ಅಂದರೆ ಲೋಕಸಭಾ ಚುನಾವಣೆಯ ಮರುದಿನವೇ ಸಂಸದರು ಜರ್ಮನಿಗೆ (Germany) ಹಾರಿದ್ದರು. ಇದಾದ ಬಳಿಕ ಎಸ್‌ಐಟಿ ನೋಟಿಸ್. ಲುಕೌಟ್ ನೋಟಿಸ್ ಜಾರಿ ಮಾಡಿದ್ದರೂ ಪ್ರಜ್ವಲ್ ರೇವಣ್ಣ ಸುಳಿವಿರಲಿಲ್ಲ.
ಇತ್ತ ಸೋಮವಾರ ಅಜ್ಞಾತ ಸ್ಥಳದಿಂದ ವೀಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದ ಪ್ರಜ್ವಲ್ ರೇವಣ್ಣ, ಶುಕ್ರವಾರ ಬೆಳಗ್ಗೆ ಎಸ್‌ಐಟಿ ಮುಂದೆ ಹಾಜರಾಗುವುದಾಗಿ ತಿಳಿಸಿದ್ದರು. ಅಂತೆಯೇ ನಿನ್ನೆ ಜರ್ಮನಿಯಿಂದ ಹೊರಟಿದ್ದ ಅವರು ಮಧ್ಯರಾತ್ರಿ ಬೆಂಗಳೂರಿಗೆ ಲ್ಯಾಂಡ್ ಆಗಿದ್ದಾರೆ. ಬೆಂಗಳೂರು ಏರ್‌ಪೋರ್ಟ್‌ಗೆ ಪ್ರಜ್ವಲ್ ರೇವಣ್ಣ ಅವರು ಬಂದು ಇಳಿಯುತ್ತಿದ್ದಂತೆಯೇ ಎಸ್‌ಐಟಿಯ ಮಹಿಳಾ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ.
ಬೆಂಗಳೂರು: ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆ ಇಂದು (ಶುಕ್ರವಾರ) ನಡೆಯಲಿದೆ.
ಲೈಂಗಿಕ ದೌರ್ಜನ್ಯ, ಅತ್ಯಾಚಾರ ಸೇರಿ ಎಫ್‌ಐಆರ್ ದಾಖಲಾಗಿರುವ ಮೂರು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿ ವಕೀಲರಾದ ಅರುಣ್ ಮೂಲಕ ಮೇ 29ರಂದು ಜನಪ್ರತಿನಿಧಿಗಳ ಕೋರ್ಟ್‌ಗೆ ಪ್ರಜ್ವಲ್ ರೇವಣ್ಣ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಮೇ 31ರಂದು ಅರ್ಜಿಯ ವಿಚಾರಣೆ ನಡೆಯಲಿದೆ.
ಭವಾನಿ ರೇವಣ್ಣ ಬೇಲ್ ಭವಿಷ್ಯವೂ ಇಂದೇ:
ಅಲ್ಲದೇ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರ ಪತ್ನಿ ಭವಾನಿ ಅವರು ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯ ಕುರಿತ ತೀರ್ಪು ಕೂಡ ಶುಕ್ರವಾರವೇ ಹೊರಬೀಳಲಿದೆ. ಇದರಿಂದಾಗಿ ಶುಕ್ರವಾರವು ಎಚ್.ಡಿ.ರೇವಣ್ಣ ಕುಟುಂಬಕ್ಕೆ ಬಿಗ್ ಡೇ ಆಗಿದೆ. ಇದನ್ನೂ ಓದಿ: ಕೊನೆಗೂ ಪ್ರಜ್ವಲ್ ರೇವಣ್ಣ ಬಂಧನ: ಎಸ್‌ಐಟಿ ಮುಂದಿನ ತನಿಖೆ ಪ್ರಕ್ರಿಯೆ ಏನು?
ಮೆಡಿಕಲ್ ಟೆಸ್ಟ್ ಬಳಿಕ ಕೋರ್ಟ್ ಮುಂದೆ ಹಾಜರ್:
ರಾತ್ರಿ ಎಸ್‌ಐಟಿ ಕಚೇರಿಯಲ್ಲೇ ವಾಸ್ತವ್ಯ ಹೂಡಿರುವ ಪ್ರಜ್ವಲ್ ರೇವಣ್ಣ ಅವರ ವಿಚಾರಣೆಯನ್ನು ಬೆಳಗ್ಗೆ 8 ಗಂಟೆಯಿಂದ ಎಸ್‌ಐಟಿ ಅಧಿಕಾರಿಗಳು ಆರಂಭಿಸಲಿದ್ದಾರೆ. ವಿವಿಧ ಆಯಾಮಗಳಲ್ಲಿ ಪರಿಶೀಲನೆ ನಡೆಸಿದ ಬಳಿಕ ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್‌ಗೆ ಒಳಪಡಿಸಲಿದ್ದಾರೆ. ಈಗಾಗಲೇ ಬೌರಿಂಗ್ ಆಸ್ಪತ್ರೆ ಬಳಿಯೂ ಬ್ಯಾರಿಕೇಡ್‌ಗಳನ್ನ ಅಳವಡಿಸಿದ್ದು, ಬಿಗಿ ಪೊಲೀಸ್ ಬಂದೋ ಬಸ್ತ್ ವ್ಯವಸ್ಥೆ ಮಾಡಲಾಗಿದೆ. ಮೆಡಿಕಲ್ ಟೆಸ್ಟ್ ಮುಗಿದ ಬಳಿಕ ಕೋರ್ಟ್ ಮುಂದೆ ಹಾಜರುಪಡಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮಧ್ಯರಾತ್ರಿ ಏರ್‌ಪೋರ್ಟ್‌ನಲ್ಲೇ ಅರೆಸ್ಟ್!
ವಿದೇಶಕ್ಕೆ ತೆರಳಿದ್ದ ಪ್ರಜ್ವಲ್ ರೇವಣ್ಣರನ್ನ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ತಡರಾತ್ರಿ ಬಂಧಿಸಲಾಗಿದೆ. ದೇವನಹಳ್ಳಿ ವಿಮಾನ ನಿಲ್ದಾಣದ ಟರ್ಮಿನಲ್ 2ಗೆ ಆಗಮಿಸುತ್ತಲೇ ಇಮಿಗ್ರೇಷನ್ ಅಧಿಕಾರಿಗಳು ವಿಚಾರಣೆ ನಡೆಸಿ, ಸಂಸದರನ್ನು ಎಸ್‌ಐಟಿ ಅಧಿಕಾರಿಗಳಿಗೆ ವಹಿಸಿದ್ದಾರೆ. ಬಳಿಕ ಎಸ್‌ಐಟಿ ಕಚೇರಿಗೆ ಕರೆದೊಯ್ದ ಎಸ್‌ಐಟಿ ಅಧಿಕಾರಿಗಳು ರಾತ್ರಿ ತಂದೆ ಹೆಚ್.ಡಿ ರೇವಣ್ಣ ಅವರಿಗೆ ನೀಡಿದ್ದ ಕೊಠಡಿಯಲ್ಲೇ ಪ್ರಜ್ವಲ್ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಿದ್ದರು. ಎಸ್‌ಐಟಿ ಅಧಿಕಾರಿಗಳು, ರೇವಣ್ಣ ಅವರಿಗೆ ನೀಡಿದ್ದ ಹಾಸಿಗೆಯನ್ನೇ ವಿತರಣೆ ಮಾಡಿದ್ದರು. ಕಚೇರಿ ಸುತ್ತಲೂ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಇದನ್ನೂ ಓದಿ: ಅರೆಸ್ಟ್ ಬಳಿಕ SIT ಕಚೇರಿಗೆ ಪ್ರಜ್ವಲ್ ರೇವಣ್ಣ; ಏರ್‌ಪೋರ್ಟ್‌ನಲ್ಲಿ ಏನೆಲ್ಲಾ ಬೆಳವಣಿಗೆ ಆಯ್ತು? – ಮುಂದೇನು ಕ್ರಮ?
ಬೆಂಗಳೂರು: ಮುರಘಾ ಮಠದ ಶ್ರೀಗಳಿಗೆ ಚಿಕಿತ್ಸೆ ನಿಡಿದ್ದ ವೈದ್ಯಾಧಿಕಾರಿ ಸೇರಿ ಮೂವರ ವಿರುದ್ಧ ಸಾಮಾಜಿಕ ಕಾರ್ಯಕರ್ತ ವೆಂಕಟೇಶ್ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.
ಚಿತ್ರದುರ್ಗ ಜಿಲ್ಲಾ ಆಸ್ಪತ್ರೆ ವೈದ್ಯಾಧಿಕಾರಿ ಡಾ.ರಂಗನಾಥ್, ಆಸ್ಪತ್ರೆಯ ಸರ್ಜನ್ ಡಾ.ಎಸ್.ಕೆ ಬಸವರಾಜ್, ಕಾರಾಗೃಹ ಅಧಿಕಾರಿ ಎಂ.ಎಂ ಮರಕಟ್ಟಿ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಈ ಮೂವರು ಜಮ್ಮ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದು, ಕರ್ತವ್ಯಲೋಪ ಎಸಗಿದ್ದಾರೆ, ಪ್ರಭಾವಿ ಆರೋಪಿಯ ರಕ್ಷಣೆ ಮಾಡುವ ಹುನ್ನಾರವನ್ನೂ ನಡೆಸಿದ್ದಾರೆ. ಹಾಗಾಗಿ ಇವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಅರ್ಶ್‌ದೀಪ್ ಟೀಕಿಸುವ ಬದಲು ಧೈರ್ಯ ತುಂಬಿ – ಮುಂದಿನ ಭಾನುವಾರಕ್ಕೆ ಸಜ್ಜಾಗಿ: ಮಾಜಿ ಆಟಗಾರರ ಸಲಹೆ
ದೂರಿನಲ್ಲಿ ಏನಿದೆ?
ಚಿತ್ರದುರ್ಗ ಜಿಲ್ಲೆಯ ಮುರಘಾ ಮಠದಲ್ಲಿನ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಮೊದಲನೇ ಆರೋಪಿ ನ್ಯಾಯಾಂಗ ಬಂಧನಲ್ಲಿದ್ದರು. ಈ ವೇಳೆ ತುಂಬಾ ಎದೆ ನೋವಿದೆ ಎಂದ ತಕ್ಷಣ ನ್ಯಾಯಾಲಯದ ಗಮನಕ್ಕೂ ತರದೆ ಚಿತ್ರದುರ್ಗ ಜಿಲ್ಲಾಸತ್ರೆಗೆ ಮುಂಜಾನೆ ದಾಖಲಿಸಿ ಚಿಕಿತ್ಸೆ ನಿಡಲು ಮುಂದಾಗಿದ್ದರು. ಚಿಕಿತ್ಸೆ ನೀಡುವ ಹಂತದಲ್ಲಿ ಅಲ್ಲಿನ ವೈದ್ಯಾಧಿಕಾರಿ ಇವರಿಗೆ ತೀವ್ರ ತರವಾದ ಹೃದಯ ಸಂಬಂಧಿ ಕಾಯಿಲೆ ಇದೆ ಎಂದು ಸುಳ್ಳು ಹೇಳಿ, ದಾಖಲೆಗಳನ್ನೂ ಸೃಷ್ಟಿಸಿ ದಾವಣಗೆರೆಯ ಖಾಸಗಿ ಹೃದಯ ತಜ್ಞರನ್ನು ಕರೆಸಿ ಆರೋಪಿಗೆ ತೀವ್ರತರವಾದ ಎದೆ ನೋವಿದೆ, ಹೃದಯಕ್ಕೆ ಘಾಸಿಯಾಗಿದೆ. ಈ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲು ಹೆಚ್ಚಿನ ವೈದ್ಯಕೀಯ ಸೌಲಭ್ಯವಿಲ್ಲ, ಇವರನ್ನು ಬೆಂಗಳೂರಿಗೆ ಕರೆದುಕೊಂಡು ಹೋಗಿ ವಿಶೇಷ ಚಿಕಿತ್ಸೆ ನೀಡಬೇಕೆಂದು ಹೇಳಿದ್ದಾರೆ. ತಕ್ಷಣ ಆರೋಪಿಯನ್ನು ಐಸಿಯುನಲ್ಲಿ ದಾಖಲಿಸಿ, ಹೆಲಿಕಾಪ್ಟರ್ ಮೂಲಕ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸುವ ಹುನ್ನಾರವನ್ನೂ ನಡೆಸಿದ್ದರು.
ಪ್ರಭಾವಿ ಸ್ಥಾನದಲ್ಲಿರುವ ಆರೋಪಿಯ ರಕ್ಷಣೆಗೆ ನಿಂತ ಈ ಸರ್ಕಾರದ ಅಧಿಕಾರಿಗಳಾದ ಜಿಲ್ಲಾ ಕಾರಾಗೃಹ ಅಧೀಕ್ಷಕಿ ಎಂ.ಎಂ ಮರಕಟ್ಟಿ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ರಂಗನಾಥ್, ಜಿಲ್ಲಾ ಆಸ್ಪತ್ರೆಯ ಸರ್ಜನ್ ಡಾ.ಎಸ್.ಕೆ ಬಸವರಾಜ್ ಕರ್ತವ್ಯ ಲೋಪವೆಸಗಿ ಆರೋಪಿಯ ಜೊತೆ ಶಾಮೀಲಾಗಿ ಬೃಹತ್ ನಾಟಕ ಆಡಿರುತ್ತಾರೆ. ಇಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಅವರು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ನಾನು ತಪ್ಪು ಮಾಡಿಲ್ಲ, ಯಾರನ್ನೂ ವಿಚಾರಣೆ ಮಾಡ್ಬೇಡಿ: ಮಡಿವಾಳೇಶ್ವರ ಸ್ವಾಮೀಜಿ ಡೆತ್‍ನೋಟ್
ಮುರುಘಾ ಶ್ರೀ ಜೈಲಿಗೆ:
ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮುರುಘಾ ಶ್ರೀ ಅವರನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಭಾನುವಾರ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಇಂದು ಪೊಲೀಸರು ಶ್ರೀಗಳನ್ನು ಜೆಎಂಎಫ್‌ಸಿ ಕೋರ್ಟ್‌ಗೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾ ಕೋಮಲಾ ವಿಚಾರಣೆ ಮುಗಿತಾ ಎಂದು ಪ್ರಶ್ನಿಸಿದರು. ಈ ವೇಳೆ ಪೊಲೀಸರು ಮತ್ತೆ ಕಸ್ಟಡಿಗೆ ತೆಗೆದುಕೊಳ್ಳದ ಕಾರಣ ನ್ಯಾಯಾಧೀಶರು ಸೆ.14ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದರು.
Live Tv
[brid partner=56869869 player=32851 video=960834 autoplay=true]
ಚಿತ್ರದುರ್ಗ: ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ಮುರುಘಾ ಮಠದ ಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು 3ನೇ ಆರೋಪಿ ಮಠದ ಮರಿಸ್ವಾಮಿ ಬಸವಾದಿತ್ಯರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮೂರುಘಾ ಮಠದ ಮರಿಸ್ವಾಮಿ ಬಸವಾದಿತ್ಯರನ್ನ ಪೊಲೀಸರು ಹೊಸಪೇಟೆಯಲ್ಲಿ ವಶಕ್ಕೆ ಪಡೆದಿದ್ದು, ಹೊಸಪೇಟೆಯಿಂದ ಚಿತ್ರದುರ್ಗಕ್ಕೆ ಕರೆತರಲಾಗುತ್ತಿದೆ. ಚಿತ್ರದುರ್ಗ ಗ್ರಾಮೀಣ ಠಾಣೆಗೆ ಕರೆತಂದ ನಂತರ ಬಂಧನದ ಪ್ರಕ್ರಿಯೆಯನ್ನು ಪೊಲೀಸರು ಪೂರ್ಣಗೊಳಿಸಲಿದ್ದಾರೆ. ಇದನ್ನೂ ಓದಿ: ತನಿಖೆಗೆ ಸಹಕರಿಸದೇ ಮುರುಘಾ ಶ್ರೀ ಮತ್ತೆ ಆಸ್ಪತ್ರೆ ಸುತ್ತಾಟ
ಪೋಕ್ಸೋ ಕೇಸ್‌ನಲ್ಲಿ ಶುಕ್ರವಾರದಿಂದ ಪೊಲೀಸ್ ಕಸ್ಟಡಿಯಲ್ಲಿರುವ ಮುರುಘಾ ಶ್ರೀಗಳನ್ನು ಇಂದು ತನಿಖಾ ತಂಡ ವಿಚಾರಣೆಗೆ ಒಳಪಡಿಸಿತ್ತು. ಆದರೆ ಶ್ರೀಗಳು ತನಿಖೆಗೆ ಸಹಕರಿಸದೇ ಮತ್ತೆ ಆಸ್ಪತ್ರೆ ಸೇರಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಮುರುಘಾ ಶ್ರೀಗಳಿಗೆ ಸೋಮವಾರ ಜೈಲಾ? ಬೇಲಾ?
ತಮ್ಮ ಮೇಲಿನ ಎಲ್ಲಾ ರೀತಿಯ ಆರೋಪಗಳನ್ನು ಸ್ವಾಮೀಜಿ ತಳ್ಳಿ ಹಾಕಿದ್ದು, ನನ್ನ ವಿರುದ್ಧ ಷಡ್ಯಂತ್ರ‍್ಯ ನಡೆದಿರುವುದಾಗಿ ಆರೋಪ ಮಾಡಿದ್ದಾರೆ.
Live Tv
[brid partner=56869869 player=32851 video=960834 autoplay=true]
ಬಿಗಿ ಪೊಲೀಸ್ ಬಂದೋಬಸ್ತ್‌ನೊಂದಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಶ್ರೀಗಳಿಗೆ ಫಿಜಿಷಿಯನ್ ಡಾ.ಸತೀಶ್, ಮಾನಸಿಕ ತಜ್ಞೆ ಶೋಭಾ ಹಾಗೂ ವೇಣುಗೋಪಾಲ್ ಸಮ್ಮುಖದಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಕೊಠಡಿ ಸಂಖ್ಯೆ 15ರಲ್ಲಿ ತಪಾಸಣೆ ನಡೆಸಲಾಗಿದ್ದು, ಶ್ರೀಗಳ ಉಗುರು, ಒಳ ಉಡುಪಿನ ತುಂಡು ಬಟ್ಟೆ, ಮರ್ಮಾಂಗದ ಬಳಿಯ ಕೂದಲನ್ನು ಪರೀಕ್ಷೆ ಮಾಡಲಾಗಿದೆ.
ಶ್ರೀಗಳಿಗೆ ಹೃದಯ ಸಂಬಂಧಿ ತೊಂದರೆಯಿರುವುದರಿಂದ ಮತ್ತೊಮ್ಮೆ ಇಸಿಜಿ ಪರೀಕ್ಷೆ ಮಾಡಲಾಗಿದೆ. ಜಿಲ್ಲಾ ಸರ್ಜನ್ ಬಸವರಾಜ್ ನೇತೃತ್ವದಲ್ಲಿ ಶ್ರೀಗಳಿಗೆ ತಪಾಸಣೆ ಮಾಡಲಾಗಿದೆ ಇಂದು ಅಧಿಕೃತ ವರದಿ ಹೊರಬೀಳಲಿದೆ. ಸದ್ಯ ಈಗಾಗಲೇ ಶ್ರೀಗಳ ವರದಿ ಪಾಸಿಟಿವ್ ಆಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಕ್ರಿಕೆಟ್ ಪ್ರಿಯರಿಗೆ ನಾಳೆ ಸೂಪರ್ ಸಂಡೇ – ಕದನ ಕುತೂಹಲ ಮೂಡಿಸಿದ ಇಂಡೋ-ಪಾಕ್ ಹೋರಾಟ
ವೈದ್ಯಕೀಯ ತಪಾಸಣೆ ಬಳಿಕ ಜಿಲ್ಲಾಸ್ಪತ್ರೆಯಿಂದ ಡಿವೈಎಸ್‌ಪಿ ಕಚೇರಿ ಶಿಫ್ಟ್ ಮಾಡಲಾಗಿದ್ದು, ಡಿವೈಎಸ್‌ಪಿ ಕಚೇರಿಯಲ್ಲಿ ವಿಚಾರಣೆ ಮುಂದುವರಿದಿದೆ. ಚಾರ್ಜ್ ಶೀಟ್ ಜೊತೆಯಲ್ಲೇ ವೈದ್ಯರ ರಿಪೋರ್ಟ್ ಸಹ ಸಲ್ಲಿಸಲಿರುವ ಪೊಲೀಸಲಿದ್ದಾರೆ. ಮುರುಘಾ ಮಠದ ಸ್ಥಳ ಮಹಜರು ಮಾಡಿಸುವ ಸಾಧ್ಯತೆ ಇದ್ದು, ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆಯಿದೆ.
Live Tv
[brid partner=56869869 player=32851 video=960834 autoplay=true]