Tag: Mega Star Chiranjeevi

  • ‘ಮೆಗಾ’ ಫ್ಯಾಮಿಲಿಯಲ್ಲಿ ಮತ್ತೊಂದು ಡಿವೋರ್ಸ್- ದಾಂಪತ್ಯಕ್ಕೆ ಅಂತ್ಯ ಹಾಡಿದ ನಿಹಾರಿಕಾ

    ‘ಮೆಗಾ’ ಫ್ಯಾಮಿಲಿಯಲ್ಲಿ ಮತ್ತೊಂದು ಡಿವೋರ್ಸ್- ದಾಂಪತ್ಯಕ್ಕೆ ಅಂತ್ಯ ಹಾಡಿದ ನಿಹಾರಿಕಾ

    ಮೆಗಾಸ್ಟಾರ್ ಚಿರಂಜೀವಿ (Megastar Chiranjeevi) ಕುಟುಂಬದಲ್ಲಿ ಮತ್ತೊಂದು ಡಿವೋರ್ಸ್ (Divorce) ಆಗಿದೆ. ಚಿರಂಜೀವಿ ಮನೆ ಮಗಳು ನಿಹಾರಿಕಾ ದಾಂಪತ್ಯಕ್ಕೆ ಬ್ರೇಕ್ ಬಿದ್ದಿದೆ. ಹಲವು ವರ್ಷಗಳ ಪ್ರೀತಿಗೆ ನಟಿ ಡಿವೋರ್ಸ್ ನೀಡುವ ಮೂಲಕ ಅಂತ್ಯ ಹಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಪುತ್ರಿ ಶ್ರೀಜಾ ದಾಂಪತ್ಯಕ್ಕೆ ಬ್ರೇಕ್ ಬಿದ್ದ ಬೆನ್ನಲ್ಲೇ ನಿಹಾರಿಕಾ (Niharika) ಕೂಡ ಡಿವೋರ್ಸ್ ಹಾದಿ ಹಿಡಿದಿದ್ದಾರೆ.

    ಟಾಲಿವುಡ್‌ನ ನಟ ಚಿರಂಜೀವಿ ಅವರ ಸಹೋದರ, ನಟ ನಾಗ ಬಾಬು ಪುತ್ರಿ ನಿಹಾರಿಕಾ ಕೊನಿಡೆಲಾ ಅವರ ದಾಂಪತ್ಯಕ್ಕೆ ಬ್ರೇಕ್ ಬಿದ್ದಿದೆ ಎಂಬ ಸುದ್ದಿ ಹಲವು ದಿನಗಳಿಂದ ಕೇಳಿಬರುತ್ತಲೇ ಇತ್ತು. ಆದರೆ ಈ ಬಗ್ಗೆ ಯಾರೊಬ್ಬರು ಅಧಿಕೃತವಾಗಿ ತಿಳಿಸಿರಲಿಲ್ಲ. ಇದೀಗ ಸಿಕ್ಕಿರುವ ಅಧಿಕೃತ ಮಾಹಿತಿ ಪ್ರಕಾರ, ನಿಹಾರಿಕಾ- ಚೈತನ್ಯ ಜೊನ್ನಲಗಡ್ಡ ದಾಂಪತ್ಯ ಬದುಕು ಅಂತ್ಯಗೊಂಡಿದ್ದು, ಈಗಾಗಲೇ ಇಬ್ಬರಿಗೂ ಕೌಟುಂಬಿಕ ನ್ಯಾಯಾಲಯವು ಡಿವೋರ್ಸ್‌ಗೆ ಮಂಜೂರು ನೀಡಿದೆ ಎನ್ನಲಾಗಿದೆ. ಆದರೆ ಈ ಡಿವೋರ್ಸ್‌ಗೆ ಕಾರಣವೇನು ಎಂಬುದು ಮಾತ್ರ ತಿಳಿದು ಬಂದಿಲ್ಲ.

    ನಟಿ ನಿಹಾರಿಕಾ ಅವರ ಮದುವೆಯು ಪ್ರಭಾಕರ್ ರಾವ್ ಅವರ ಪುತ್ರ ಚೈತನ್ಯ ಜೊನ್ನಲಗಡ್ಡ ಅವರ ಜೊತೆ 2020ರ ಡಿಸೆಂಬರ್ 9ರಂದು ನಡೆದಿತ್ತು. ರಾಜಸ್ಥಾನದ ಉದಯಪುರದಲ್ಲಿನ ಒಬೆರಾಯ್ ಉದಯ್ ವಿಲಾಸ್‌ನಲ್ಲಿ ಅದ್ದೂರಿಯಾಗಿ ನಡೆದಿತ್ತು. ಇಡೀ ಮೆಗಾ ಸ್ಟಾರ್ ಕುಟುಂಬವು ಮದುವೆಗೆ ಹಾಜರಾಗಿತ್ತು. ವೈಭವದಿಂದ ನಡೆದಿಂದ ಮದುವೆಯಲ್ಲಿ ಇಡೀ ಕುಟುಂಬವು ಹಾಡಿ ಕುಣಿದಿತ್ತು. ಆದರೆ ನಿಹಾರಿಕಾ ಅವರ ಮದುವೆ ಕೇವಲ ಎರಡೂವರೆ ವರ್ಷಗಳಲ್ಲಿ ಮುರಿದುಬಿದ್ದಿರುವುದು ಬೇಸರದ ವಿಷ್ಯವಾಗಿದೆ. ಇದನ್ನೂ ಓದಿ:3ನೇ ಪತ್ನಿಯಿಂದಲೂ ದೂರಾವಾದ್ರಾ ನಟ ಪವನ್ ಕಲ್ಯಾಣ್?

    ನಿಹಾರಿಕಾ ಮತ್ತು ಚೈತನ್ಯ ಪರಸ್ಪರ ಒಪ್ಪಿಗೆಯೊಂದಿಗೆ ನ್ಯಾಯಾಲಯದಲ್ಲಿ ಡಿವೋರ್ಸ್ಗೆ ಅರ್ಜಿ ಸಲ್ಲಿಸಿದ್ದರು. ನಿಹಾರಿಕಾ ಡಿವೋರ್ಸ್ ವಿಷಯವು ಸಾಕಷ್ಟು ಚರ್ಚೆ ಆಗಿತ್ತು. ನಿಹಾರಿಕಾ- ಚೈತನ್ಯ ಇನ್ಸ್ಟಾಗ್ರಾಂನಲ್ಲಿ ಒಬ್ಬರನ್ನೊಬ್ಬರು ಅನ್‌ಫಾಲೋ ಮಾಡಿದ್ದಾರೆ. ನಿಹಾರಿಕಾ ಅವರು ಮದುವೆಯ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಡಿಲೀಟ್ ಮಾಡಿದ್ರು. ಅತ್ತ ಚೈತನ್ಯ ಅವರ ಕೂಡ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ನಿಹಾರಿಕಾ ಜೊತೆಗಿದ್ದ ಎಲ್ಲ ಫೋಟೋಗಳನ್ನು ಡಿಲೀಟ್ ಮಾಡಿದ್ದರು. ಇದು ವಿಚ್ಛೇದನದ ಬಗ್ಗೆ ಮೊದಲ ಬಾರಿಗೆ ಅನುಮಾನವನ್ನು ಹುಟ್ಟುಹಾಕಿತ್ತು. ಇಬ್ಬರು ವಿಚ್ಛೇದನ ಪಡೆಯುತ್ತಿದ್ದಾರೆ ಎಂಬ ವದಂತಿಯು ಎಲ್ಲ ಕಡೆ ಹಬ್ಬಿಕೊಂಡಿತ್ತು. ಇದೀಗ ವದಂತಿ ನಿಜವಾಗಿದೆ.

    ಇದರ ಜೊತೆ ಮೆಗಾ ಫ್ಯಾಮಿಲಿ ನಟ ಪವನ್ ಕಲ್ಯಾಣ್ (Pawan Kalyan) ಮೂರನೇ ಮದುವೆಯೂ ಮುರಿದುಬಿತ್ತಾ? ಹೀಗೊಂದು ಅನುಮಾನ ಕಾಡುತ್ತಿದೆ. ಟಾಲಿವುಡ್ ಸ್ಟಾರ್ ಪವನ್ ಈಗಾಗಲೇ ಎರಡು ಮದುವೆಗಳನ್ನು ಮುರಿದುಕೊಂಡಿದ್ದು, ಮೂರನೇ ಮದುವೆ ಆಗಿದ್ದು ಎಲ್ಲರಿಗೂ ಗೊತ್ತಿದೆ. ಆದರೆ ಈಗ ನೋಡಿದರೆ ಮೂರನೇ ಪತ್ನಿಗೂ ಡಿವೋರ್ಸ್ ನೀಡಿದ್ದಾರಾ ಎನ್ನುವ ಗುಮಾನಿ ಎದ್ದಿದೆ. ಒಟ್ನಲ್ಲಿ ಪವನ್ ಕಲ್ಯಾಣ್, ಶ್ರೀಜಾರಂತೆಯೇ ನಿಹಾರಿಕಾ ಕೂಡ ದಾಂಪತ್ಯದ ವಿಚಾರವಾಗಿ ಸುದ್ದಿಯಲ್ಲಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸದ್ಯಕ್ಕೆ ನಮಗೆ ಮಕ್ಕಳು ಬೇಡ ಎಂದ ರಾಮ್‌ ಚರಣ್‌ ದಂಪತಿ

    ಸದ್ಯಕ್ಕೆ ನಮಗೆ ಮಕ್ಕಳು ಬೇಡ ಎಂದ ರಾಮ್‌ ಚರಣ್‌ ದಂಪತಿ

    ಟಾಲಿವುಡ್‌ನ ಬೆಸ್ಟ್ ಜೋಡಿಗಳಲ್ಲಿ ರಾಮ್ ಚರಣ್ ಮತ್ತು ಉಪಾಸನಾ ಜೋಡಿ ಕೂಡ ಒಂದು. ಈ ಮದುವೆ ಆಗಿ ಹತ್ತು ವರ್ಷಗಳು ಕಳೆದಿದ್ದರು ಮಗು ಹೊಂದಿರದ ಬಗ್ಗೆ ಆಗಾಗ ಸುದ್ದಿಯಾಗುತ್ತಲೇ ಬಂದಿದ್ದಾರೆ. ಇದೀಗ ರಾಮ್ ಚರಣ್ ದಂಪತಿ ಮಕ್ಕಳನ್ನು ಹೊಂದುವ ಕುರಿತು ಸ್ಪಷ್ಟನೆ ನೀಡಿದ್ದಾರೆ.

    ಮೆಗಾಸ್ಟಾರ್ ಚಿರಂಜೀವಿ ಪುತ್ರ ರಾಮ್‌ಚರಣ್ ಕೂಡ ತಮ್ಮ ಸ್ವಂತ ಪ್ರತಿಭೆಯಿಂದ ಟಾಲಿವುಡ್‌ನಲ್ಲಿ ಗಟ್ಟಿ ನೆಲೆ ಗಿಟ್ಟಿಸಿಕೊಂಡವರು. ಆರ್‌ಆರ್‌ಆರ್ ಸೂಪರ್ ಸಕ್ಸಸ್‌ನಲ್ಲಿರುವ ನಟ ರಾಮ್ ಚರಣ್ ಸದ್ಯ ಎದುರಾಗುತ್ತಿರುವ ಏಕೈಕ ಪ್ರಶ್ನೆ ಮಕ್ಕಳನ್ನ ಹೊಂದುವ ಕುರಿತು ಸಾಕಷ್ಟು ಕಡೆ ಕೇಳಲಾಗುತ್ತಿದೆ. ಇನ್ನು ಉಪಾಸನಾ ಅವರನ್ನ ಕೂಡ ಇದೇ ರೀತಿ ಪ್ರಶ್ನೀಸಲಾಗುತ್ತಿದೆ. ಇದನ್ನೂ ಓದಿ:ಕರಣ್‌ ಜೋಹರ್‌ ನಿರ್ಮಾಣದಲ್ಲಿ ಈ ಸ್ಟಾರ್‌ ನಟನಿಗೆ ನಾಯಕಿಯಾದ ರಶ್ಮಿಕಾ ಮಂದಣ್ಣ

    ರಾಮ್‌ಚರಣ್ ಈಗ ಸಾಕಷ್ಟು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಪತ್ನಿ ಉಪಾಸನಾ ಕೂಡ ಸಾಮಾಜಿಕ ಕಾರ್ಯಗಳ ಮೂಲಕ ಜನಸೇವೆ ಮಾಡ್ತಿದ್ದಾರೆ. ಮೆಗಾಸ್ಟಾರ್ ಪುತ್ರನಾಗಿ ನನ್ನ ಮೇಲು ಸಾಕಷ್ಟು ಜವಾಬ್ದಾರಿಯಿದೆ. ತನ್ನ ಅಭಿಮಾನಿಗಳಿಗೆ ನನ್ನ ಸಿನಿಮಾಗಳಿಂದ ರಂಜಿಸೋದೇ ನನ್ನ ಸದ್ಯದ ಗುರಿ ಅಂತಾ ತಿಳಿಸಿದ್ದಾರೆ. ಪತ್ನಿ ಉಪಾಸನಾ ಇತ್ತೀಚೆಗಷ್ಟೇ ಸದ್ಗುರು ಅವರನ್ನ ಭೇಟಿ ಮಾಡಿದ್ದ ವೇಳೆ ಜನಸಂಖ್ಯೆ ನಿಯಂತ್ರಣಕ್ಕೆ ಮಕ್ಕಳು ಬೇಡ ಅಂದಿದ್ದರು. ಈ ಮೂಲಕ ದಂಪತಿಗಳಿಬ್ಬರು ಸದ್ಯಕ್ಕೆ ಮಕ್ಕಳನ್ನ ಹೊಂದುವ ಕುರಿತು ನಮಗೆ ಯೋಚನೆ ಇಲ್ಲ ಎಂಬುದನ್ನ ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮೂರನೇ ಮದುವೆಗೆ ರೆಡಿಯಾದ ಮೆಗಾಸ್ಟಾರ್ ಚಿರಂಜೀವಿ ಪುತ್ರಿ!

    ಮೂರನೇ ಮದುವೆಗೆ ರೆಡಿಯಾದ ಮೆಗಾಸ್ಟಾರ್ ಚಿರಂಜೀವಿ ಪುತ್ರಿ!

    ಮೆಗಾಸ್ಟಾರ್ ಚಿರಂಜೀವಿ ಮಗಳು ಶ್ರೀಜಾ ಟಾಲಿವುಡ್‌ನ ಗಲ್ಲಿಯಲ್ಲಿ ಮತ್ತೆ ಸುದ್ದಿಯಲ್ಲಿದ್ದಾರೆ. ಕಲ್ಯಾಣ್ ಜತೆಗಿನ ಶ್ರೀಜಾ ವಿಚ್ಛೇದನದ ಬಗ್ಗೆ ನಾನಾ ರೀತಿಯ ಸುದ್ದಿಗಳು ಹರಿದಾಡುತ್ತಿವೆ. ಈ ಬೆನ್ನಲ್ಲೇ ಮೂರನೇ ಮದುವೆಗೆ ಚಿರಂಜೀವಿ ಪುತ್ರಿ ರೆಡಿಯಾಗಿದ್ದಾರೆ ಎಂಬ ಸುದ್ದಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ.

    ಚಿರಂಜೀವಿ ಪುತ್ರಿ ಶ್ರೀಜಾ ಈ ಹಿಂದೆ ಶ್ರೀಜಾ ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹೆಸರು ಬದಲಿಸಿಕೊಂಡಿದ್ದರು. ತಮ್ಮ ಹೆಸರಿನಿಂದ ಪತಿಯ ಹೆಸರನ್ನು ತೆಗೆದು ಹಾಕಿದ್ದರು. ಆಗಲೇ ಒಂದಷ್ಟು ಊಹಾ ಪೋಹಗಳು ಹಬ್ಬಿದ್ದವು. ಆದರೆ ಇವರೆಗೂ ಶ್ರೀಜಾ ಮತ್ತು ಕಲ್ಯಾಣ್ ಜತೆಗಿನ ಡಿವೋರ್ಸ್ ಕುರಿತು ಯಾವುದೇ ಅಧಿಕೃತ ಮಾಹಿತಿ ಮೆಗಾಸ್ಟಾರ್ ಕುಟುಂಬ ಕೊಟ್ಟಿಲ್ಲ. ಇದನ್ನೂ ಓದಿ:ಬಹುಭಾಷಾ ನಟಿ ಮೀನಾ ಪತಿ ವಿದ್ಯಾಸಾಗರ್ ನಿಧನ

    ಶ್ರೀಜಾ 2007ರಲ್ಲಿ ಮನೆಯವರ ವಿರುದ್ಧ ನಿಂತು ಸಿರೀಶ್ ಎಂಬುವವರನ್ನು ಪ್ರೀತಿಸಿ ಮದುವೆಯಾಗಿದ್ದರು. ಕಾರಣಾಂತರಗಳಿಂದ ಅವರಿಂದ ಡಿವೋರ್ಸ್ ಪಡೆದು, 2016ರಲ್ಲಿ ತಂದೆ ನೋಡಿರುವ ಹುಡುಗ ಕಲ್ಯಾಣ್ ದೇವ್ ಅವರನ್ನು ಮದುವೆಯಾದರು. ಈಗ ಈ ಜೋಡಿಯ ಕುರಿತು ವಿಚ್ಛೇದನದ ವಿಚಾರ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದೆ. ಈ ಬೆನ್ನಲ್ಲೇ ಮೆಗಾಸ್ಟಾರ್ ಪುತ್ರಿ ಮೂರನೇ ಮದುವೆಗೆ ಸಜ್ಜಾಗಿದ್ದಾರೆ ಎನ್ನಲಾಗುತ್ತಿದೆ. ಅಷ್ಟಕ್ಕೂ ಈ ವಿಚಾರ ನಿಜಾನಾ ಮೆಗಾಸ್ಟಾರ್ ಕುಟುಂಬದ ಪ್ರತಿಕ್ರಿಯೆ ಸಿಗುವವರೆಗೂ ಕಾದುನೋಡಬೇಕಿದೆ.

    Live Tv

  • ಚಿರಂಜೀವಿ-ಶೃತಿ ಹಾಸನ್ ಕಾಂಬಿನೇಷನ್ ಚಿತ್ರದ ರಿಲೀಸ್ ಡೇಟ್ ಅನೌನ್ಸ್

    ಚಿರಂಜೀವಿ-ಶೃತಿ ಹಾಸನ್ ಕಾಂಬಿನೇಷನ್ ಚಿತ್ರದ ರಿಲೀಸ್ ಡೇಟ್ ಅನೌನ್ಸ್

    ಟಾಲಿವುಡ್ ಸೂಪರ್ ಸ್ಟಾರ್ ಚಿರಂಜೀವಿ ನಟನೆಯ `ಚಿರು 154′ ಸಿನಿಮಾಗೆ ಶೃತಿ ಹಾಸನ್ ನಾಯಕಿಯಾಗಿ ಕಾಣಿಸಿಕೊಳ್ತಿದ್ದಾರೆ. ಇದೀಗ ಚಿತ್ರದ ಡೇಟ್ ಕೂಡ ಅನೌನ್ಸ್ ಆಗಿದ್ದು, ಸಂಕ್ರಾಂತಿ ಹಬ್ಬಕ್ಕೆ ತೆರೆಯ ಮೇಲೆ ಕ್ರಾಂತಿ ಏಬ್ಬಿಸಲು ರೆಡಿಯಾಗಿದ್ದಾರೆ.

    ತೆರೆಯ ಮೇಲೆ ಮೊದಲ ಬಾರಿಗೆ ಒಂದಾಗುತ್ತಿರುವ ಜೋಡಿ ಚಿರಂಜೀವಿ ಮತ್ತು ಶೃತಿ ಹಾಸನ್ ಈ ಚಿತ್ರದ ಕುರಿತು ಅಭಿಮಾನಿಗಳಿಗೆ ಸಿಕ್ಕಾಪಟ್ಟೆ ನಿರೀಕ್ಷೆಯಿದೆ. ತೆರೆಯ ಮರೆಯಲ್ಲಿ ಸಿನಿಮಾಗಾಗಿ ಸಖತ್ ಕರಸತ್ತು ನಡೆಯುತ್ತಿದೆ. ಹೀಗಿರುವಾಗ ತಮ್ಮ ಅಭಿಮಾನಿಗಳಿಗೆ ಚಿರು ಗುಡ್ ನ್ಯೂಸ್ ಕೊಟ್ಟಿದ್ದಾರೆ. `ಚಿರು 154′ ಸಿನಿಮಾ ಮುಂದಿನ ವರ್ಷ ಸಂಕ್ರಾಂತಿಗೆ ಬರಲು ರೆಡಿಯಾಗಿದ್ದಾರೆ. ಇದನ್ನೂ ಓದಿ: ಲೈಂಗಿಕ ಕಿರುಕುಳ ಪ್ರಕರಣ:ನೃತ್ಯ ನಿರ್ದೇಶಕ ಗಣೇಶ್ ಆಚಾರ್ಯಗೆ ಜಾಮೀನು

    ಮೈತ್ರಿ ಮೂವಿ ಮೇಕರ್ಸ್ ನಿರ್ಮಾಣದ ನಿರೀಕ್ಷಿತ ಚಿತ್ರ `ಚಿರು 154′ ಚಿತ್ರಕ್ಕೆ ಕೆ.ಎಸ್ ರವೀಂದ್ರ ಆ್ಯಕ್ಷನ್ ಕಟ್ ಹೇಳಿದ್ದಾರೆ. ಮೆಗಾಸ್ಟಾರ್ ಚಿರಂಜೀವಿ ಖಡಕ್ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಮಿಂಚಲಿದ್ದಾರೆ. ಎಂದೂ ಮಾಡಿರದ ಪಾತ್ರದಲ್ಲಿ ಮೆಗಾಸ್ಟಾರ್ ಸಜ್ಜಾಗಿದ್ದಾರೆ.ಮುಂದಿನ ಸಂಕ್ರಾಂತಿ 2023ಕ್ಕೆ ಬೆಳ್ಳಿಪರದೆ ಮಿಂಚಲಿದ್ದಾರೆ. ಚಿತ್ರದ ಟೈಟಲ್ ಮತ್ತು ಚಿತ್ರ ಇನ್ನುಳಿದ ಪಾತ್ರ ವರ್ಗದ ಬಗ್ಗೆ ಸದ್ಯದಲ್ಲೇ ರಿವೀಲ್ ಮಾಡಲಿದೆ ಚಿತ್ರತಂಡ.

    ನಟಿ ಶೃತಿ ಹಾಸನ್ ಕೈಯಲ್ಲಿ ಸಾಲು ಸಾಲು ಸಿನಿಮಾಗಳಿವೆ. ಚಿರಂಜೀವಿ ನಟನೆಯ ಈ ಚಿತ್ರದಲ್ಲಿ ಪವರ್‌ಫುಲ್ ಪಾತ್ರದಲ್ಲಿ ಮಿಂಚಲಿದ್ದಾರೆ. ರಿಲೀಸ್‌ಗೂ ಮುನ್ನವೇ ಸಿಕ್ಕಾಪಟ್ಟೆ ಹೈಪ್ ಕ್ರಿಯೆಟ್ ಮಾಡಿರುವ ಈ ಚಿತ್ರಕ್ಕಾಗಿ ಫ್ಯಾನ್ಸ್ ಕಾಯ್ತಿದ್ದಾರೆ.

    Live Tv

  • ಮಾರ್ಚ್ ನಲ್ಲಿ ರಿಲೀಸ್ ಆಗಲಿರುವ ಬಿಗ್ ಬಜೆಟ್ ಸಿನಿಮಾಗಳಿಗೆ ಮತ್ತೆ ಸಂಕಷ್ಟ

    ಮಾರ್ಚ್ ನಲ್ಲಿ ರಿಲೀಸ್ ಆಗಲಿರುವ ಬಿಗ್ ಬಜೆಟ್ ಸಿನಿಮಾಗಳಿಗೆ ಮತ್ತೆ ಸಂಕಷ್ಟ

    ರಡೂವರೆ ವರ್ಷಗಳಿಂದ ಕೊರೋನಾ ಹಾವಳಿಗೆ ತತ್ತರಿಸಿರುವ ಭಾರತೀಯ ಸಿನಿಮಾ ರಂಗ, ಚೇತರಿಸಿಕೊಳ್ಳಲು ಇನ್ನೂ ಹರಸಾಹಸ ಪಡುತ್ತಿದೆ. ಅಷ್ಟರಲ್ಲಿ ಚಿತ್ರರಂಗಕ್ಕೆ ಕ್ರಿಕೆಟ್ ಎಂಬ ಗುಮ್ಮ ಎದುರಾಗಿದೆ. ಇದನ್ನೂ ಓದಿ : ವಿಕ್ರಾಂತ್ ರೋಣ 2 ಮುನ್ಸೂಚನೆ ಕೊಟ್ಟರಾ ಸುದೀಪ್?

    ಕೋವಿಡ್  ಕಾರಣದಿಂದಾಗಿ ಬಿಗ್ ಬಜೆಟ್ ನ ಸಾಕಷ್ಟು ಚಿತ್ರಗಳು ಮಾರ್ಚ್ ನಲ್ಲಿ ರಿಲೀಸ್ ಆಗಲು ಪ್ಲ್ಯಾನ್ ಆಗಿದ್ದವು. ಅದರಲ್ಲೂ ಮಾರ್ಚ್ ಎರಡನೇ ವಾರದ ನಂತರ ಕನ್ನಡದ ಪುನೀತ್ ರಾಜ್ ಕುಮಾರ್ ನಟನೆಯ ‘ಜೇಮ್ಸ್’ ನಿಂದ ಶುರುವಾಗುತ್ತಿದ್ದ ಈ ಬಿಡುಗಡೆಯ ಜೈತ್ರ ಯಾತ್ರೆ ಕೆಜಿಎಫ್ 2, ತೆಲುಗಿನ ಆರ್.ಆರ್.ಆರ್, ರಾಧೆ ಶ್ಯಾಮ್, ದಳಪತಿ ವಿಜಯ್ ಅವರ ‘ಬೀಸ್ಟ್’, ಮೆಗಾ ಸ್ಟಾರ್ ಚಿರಂಜೀವಿ ಅವರ ‘ಆಚಾರ್ಯ’ ಸೇರಿದಂತೆ ಸಾಕಷ್ಟು ಚಿತ್ರಗಳು ಬಿಡುಗಡೆಗೆ ಸಜ್ಜಾಗಿದ್ದು. ಈಗ ಸರಿಯಾಗಿ ಥಿಯೇಟರ್ ಗೆ ಪೆಟ್ಟುಕೊಡುವಂತೆ ಮಾರ್ಚ್ 27 ರಿಂದ ಮೇ 28 ರವರೆಗೆ. ಬರೋಬ್ಬರು ಒಂದು ತಿಂಗಳ ಕಾಲ ಭಾರತದ ಹೆಸರಾಂತ ಐಪಿಎಲ್ ಪಂದ್ಯಾವಳಿ ಆರಂಭವಾಗಲಿವೆ. ಇದನ್ನೂ ಓದಿ : ಏನಾಯ್ತು ಅಮಿತಾಭ್ ಬಚ್ಚನ್ ಗೆ? ಆತಂಕದಲ್ಲಿ ಅಭಿಮಾನಿಗಳು

    ಒಂದು ತಿಂಗಳ ಕಾಲ ನಿರಂತರವಾಗಿ, ಅದರಲ್ಲೂ ವೀಕೆಂಡ್ ನಲ್ಲೂ ಈ ಕ್ರಿಕೆಟ್ ಹಾವಳಿ ಇರುವುದರಿಂದ, ಜನರು ಚಿತ್ರಮಂದಿರಗಳತ್ತ ಬರುವುದು ಅನುಮಾನ. ಈ ಹಿಂದೆಯೂ ಐಪಿಎಲ್ ಮತ್ತು ಸಾಕಷ್ಟು ಕ್ರಿಕೆಟ್ ಪಂದ್ಯಾವಳಿಗಳು ಸಿನಿಮಾಗಳ ಬಾಕ್ಸ್ ಆಫೀಸಿಗೆ ಭಾರೀ ಹೊಡೆತ ಕೊಟ್ಟಿವೆ. ಹಾಗಾಗಿ ಭಾರೀ ಬಜೆಟ್ ಚಿತ್ರಗಳನ್ನು ನಿರ್ಮಾಣ ಮಾಡಿರುವ ನಿರ್ಮಾಪಕರು, ಐಪಿಎಲ್ ಗೆ ಹಿಡಿಶಾಪ ಹಾಕುವಂತಹ ವಾತಾವರಣ ನಿರ್ಮಾಣವಾಗಿದೆ. ಇದನ್ನೂ ಓದಿ : ಕಂಠೀರವ ಸ್ಟುಡಿಯೋ ಆವರಣದಲ್ಲಿ 14 ಅಡಿ ಎತ್ತರದ ಅಂಬರೀಶ್ ಪ್ರತಿಮೆ

    ಕೇವಲ ಸಿನಿಮಾಗಳಿಗೆ ಮಾತ್ರವಲ್ಲ, ಮನರಂಜನಾ ಮಾಧ್ಯಮಕ್ಕೂ ಐಪಿಎಲ್ ಸಾಕಷ್ಟು ತೊಂದರೆ ಮಾಡಿದೆ. ಹಾಗಾಗಿ ಈ ವೇಳೆಯಲ್ಲಿ ಹೊಸ ಧಾರಾವಾಹಿಗಳಾಗಲಿ, ಹೊಸ ಹೊಸ ಶೋಗಳಾಗಲಿ ಪ್ರಾರಂಭವಾಗುತ್ತಿಲ್ಲ. ಐಪಿಎಲ್ ನಂತರವೇ ಹೊಸ ಹೊಸ ಕಾರ್ಯಕ್ರಮಗಳಿಗೆ ಪ್ಲ್ಯಾನ್ ಮಾಡಲಿವೆಯಂತೆ ಮನರಂಜನಾ ವಾಹಿನಿಗಳು.

    ಅದ್ಧೂರಿ ಬಜೆಟ್ ನಲ್ಲಿ ನಿರ್ಮಾಣವಾಗಿರುವ ಚಿತ್ರಗಳ ನಿರ್ಮಾಪಕರು ಐಪಿಎಲ್ ಎದುರು ಹಾಕಿಕೊಂಡು ಸಿನಿಮಾ ಬಿಡುಗಡೆ ಮಾಡಬಹುದಾ? ಅಥವಾ ಐಪಿಎಲ್ ನಂತರ ರಿಲೀಸ್ ಮಾಡಬೇಕಾ ಎನ್ನುವ ಗೊಂದಲದಲ್ಲಿದ್ದಾರೆ. ಒಂದು ವೇಳೆ ಸಿನಿಮಾಗಳನ್ನು ಮುಂದು ಹಾಕಿದರೆ, ಅದರಿಂದ ಬೇರೆ ಬೇರೆ ರೀತಿಯಲ್ಲಿ ನಿರ್ಮಾಪಕರಿಗೆ ತೊಂದರೆ ಆಗಲಿದೆ. ಹಾಗಾಗಿ ಬಹುತೇಕ ಭಾರತೀಯ ಸಿನಿಮಾ ರಂಗಕ್ಕೆ ಆಘಾತಕ್ಕೆ ಒಳಗಾಗಿದೆ.