Tag: megan hospital

  • ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ

    ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ

    ಶಿವಮೊಗ್ಗ: ಜಿಲ್ಲೆಯ ಮೆಗ್ಗಾನ್ ಆಸ್ಪತ್ರೆಯ ಮಕ್ಕಳ ವಾರ್ಡ್‍ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ರೋಗಿಗಳಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ.

    ಮೆಗ್ಗಾನ್ ಆಸ್ಪತ್ರೆಯ ಹೆರಿಗೆ ಮತ್ತು ಸ್ತ್ರೀರೋಗ ತುರ್ತು ಚಿಕಿತ್ಸಾ ಕೊಠಡಿ, ಐಸಿಯು ಮತ್ತು ಮಕ್ಕಳ ವಾರ್ಡ್‍ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಮಕ್ಕಳ ವಾರ್ಡ್‍ನಲ್ಲಿದ್ದ ಬಾಣಂತಿಯರ ಮಕ್ಕಳನ್ನು ಕರೆದುಕೊಂಡು ಹೊರಗೆ ಓಡಿ ಬಂದಿದ್ದಾರೆ. ಇದನ್ನೂ ಓದಿ: ಮೈಸೂರಲ್ಲಿ ಶಿಕ್ಷಕರಿಗೆ ಜೀನ್ಸ್ ಪ್ಯಾಂಟ್ ಬ್ಯಾನ್

    ಬೆಂಕಿ ಧಗಧಗನೆ ಹೊತ್ತಿ ಉರಿಯುತ್ತಿದ್ದಂತೆ ಆಸ್ಪತ್ರೆಯಲ್ಲಿದ್ದ ರೋಗಿಗಳು ಮತ್ತು ಸಂಬಂಧಿಕರು ಗಾಬರಿಗೊಂಡು ಹೊರಗೆ ಬಂದಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಮೆಗ್ಗಾನ್ ಆಸ್ಪತ್ರೆ ಸಿಬ್ಬಂದಿ, ವೈದ್ಯಾಧಿಕಾರಿಗಳು ಸ್ಥಳದಲ್ಲಿದ್ದು, ಘಟನೆಯಲ್ಲಿ ಯಾವುದೇ ಸಾವು, ನೋವು ಸಂಭವಿಸಿಲ್ಲ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಜಿಮ್ ಮಾಡೋವ್ರಿಗೆ ಅಪ್ಪು ಸಾವು ಬಿಗ್ ಶಾಕ್ – ಜಿಮ್‍ಗೆ ಹೋಗದಂತೆ ಮಕ್ಕಳಿಗೆ ಪೋಷಕರ ಆಕ್ಷೇಪ

  • ಗುಡುಗು, ಸಿಡಿಲು ಸಹಿತ ಮಳೆ- ಮೆಗ್ಗಾನ್ ಆಸ್ಪತ್ರೆಯಲ್ಲಿ ತಪ್ಪಿದ ಭಾರೀ ಅನಾಹುತ

    ಗುಡುಗು, ಸಿಡಿಲು ಸಹಿತ ಮಳೆ- ಮೆಗ್ಗಾನ್ ಆಸ್ಪತ್ರೆಯಲ್ಲಿ ತಪ್ಪಿದ ಭಾರೀ ಅನಾಹುತ

    – 33 ಕಂದಮ್ಮಗಳು, ಬಾಣಂತಿಯರು ಬಚಾವ್

    ಶಿವಮೊಗ್ಗ: ನಗರದಲ್ಲಿ ಇಂದು ಸಂಜೆ ಗುಡುಗು ಸಿಡಿಲು ಸಹಿತ ಭಾರೀ ಗಾಳಿ ಮಳೆಯಾಗಿದೆ. ವರುಣನ ಅಬ್ಬರದಿಂದಾಗಿ ಮೆಗ್ಗಾನ್ ಬೋಧನಾ ಆಸ್ಪತ್ರೆಯ ಮಕ್ಕಳ ವಾರ್ಡ್ ನಲ್ಲಿ ಶಾರ್ಟ್ ಸರ್ಕ್ಯೂಟ್‍ನಿಂದಾಗಿ ಬೆಂಕಿ ಅವಘಡ ಸಂಭವಿಸಿ ಭಾರೀ ಅನಾಹುತ ತಪ್ಪಿದೆ.

    ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಅವಘಡ ಸಂಭವಿಸಿಲ್ಲ. ಎಲ್ಲಾ 33 ಕಂದಮ್ಮಗಳು ಸುರಕ್ಷಿತವಾಗಿದ್ದಾರೆ. ಮಹಿಳೆಯ ಆರ್ಭಟಕ ಕಡಿಮೆಯಾಗುತ್ತಿದ್ದಂತೆ ಮಕ್ಕಳು ಹಾಗೂ ಬಾಣಂತಿಯರನ್ನು ನಗರದ ಸರ್ಜಿ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

    ಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ಯಶಸ್ವಿಯಾಗಿದ್ದಾರೆ. ಅದೃಷ್ಟವಶಾತ್ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ  ಕೆ.ಎಸ್.ಈಶ್ವರಪ್ಪ ಅವರು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಈ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು, ಎಲ್ಲಾ 33 ಮಕ್ಕಳು ಹಾಗೂ ಬಾಣಂತಿಯರು ಸುರಕ್ಷಿತರಾಗಿದ್ದಾರೆ. ಆದರೆ ಮೂವರು ಮಕ್ಕಳಿಗೆ ಸ್ವಲ್ಪ ಉಸಿರಾಟದ ತೊಂದರೆ ಆಗಿದ್ದು ವೈದ್ಯರ ಗಮನಕ್ಕೆ ಬಂದಿದೆ. ಅವರು ಚಿಕಿತ್ಸೆ ನಡೆಸಿದ್ದಾರೆ. ಅದೃಷ್ಟವಶಾತ್ ಭಾರೀ ದುರಂತ ತಪ್ಪಿದೆ ಎಂದು ತಿಳಿಸಿದರು.

  • ಅಮಾನವೀಯ ಘಟನೆ: ರೋಗಿಯ ಪತ್ನಿಯನ್ನೇ ಆರೋಪಿಯನ್ನಾಗಿಸಿದ ಮೆಗ್ಗಾನ್ ಆಸ್ಪತ್ರೆ

    ಅಮಾನವೀಯ ಘಟನೆ: ರೋಗಿಯ ಪತ್ನಿಯನ್ನೇ ಆರೋಪಿಯನ್ನಾಗಿಸಿದ ಮೆಗ್ಗಾನ್ ಆಸ್ಪತ್ರೆ

    ಶಿವಮೊಗ್ಗ: ಅಮಾನವೀಯ ಘಟನೆಗೆ ಸಂಬಂಧಿಸಿದಂತೆ ರೋಗಿಯ ಪತ್ನಿಯನ್ನೇ ಆರೋಪಿಯನ್ನಾಗಿಸಿ ಮೆಗ್ಗಾನ್ ಆಸ್ಪತ್ರೆ ರಾಜ್ಯ ಸರ್ಕಾರಕ್ಕೆ ವರದಿ ನೀಡಿದೆ.

    ಹೌದು. ಅಮೀರ್ ಸಾಬ್ ಮತ್ತು ಅವರ ಪತ್ನಿ ಫಾಮಿದಾ ಅವರನ್ನೇ ಈ ಪ್ರಕರಣದಲ್ಲಿ ಆರೋಪಿಯನ್ನಾಗಿಸಿ ಮೆಗ್ಗಾನ್ ಆಸ್ಪತ್ರೆ ನಿರ್ದೇಶಕ ಸುಶೀಲ್ ಕುಮಾರ್ ಅವರು ವೈದ್ಯಕೀಯ ಶಿಕ್ಷಣ ಇಲಾಖೆಗೆ ವರದಿ ನೀಡಿದ್ದಾರೆ.

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಟಾಫ್ ನರ್ಸ್‍ಗಳಾದ ಜ್ಯೋತಿ, ಚೈತ್ರಾ ಮತ್ತು ಡಿ ಗ್ರೂಪ್ ನೌಕರರಾದ ಸುವರ್ಣಮ್ಮ ಅವರನ್ನು ಅಮಾನತುಗೊಳಿಸಲಾಗಿದೆ. ಮೆಗ್ಗಾನ್ ಆಸ್ಪತ್ರೆ ಡೀನ್ ಸುಶೀಲ್ ಕುಮಾರ್ ಈ ಮೂವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿ, ಆಸ್ಪತ್ರೆಯ ಮ್ಯಾನ್ ಪವರ್ ಏಜನ್ಸಿ ಸ್ವಿಸ್ ಮತ್ತು ಡಿಟೆಕ್ಟ್ ಎರಡೂ ಏಜನ್ಸಿಗಳಿಗೆ ನೋಟಿಸ್ ಜಾರಿ ಮಾಡಿದ್ದಾರೆ.

    ವರದಿಯಲ್ಲಿ ಏನಿದೆ?
    75 ವರ್ಷದ ಅಮೀರ್ ಸಾಬ್ ಮೇ 25ರಂದು ಮೆಗ್ಗಾನ್ ಬೋಧನಾ ಜಿಲ್ಲಾ ಆಸ್ಪತ್ರೆಗೆ ಉಸಿರಾಟದ ತೊಂದರೆ ಮತ್ತು ನಿಶ್ಯಕ್ತಿಯಿಂದ ಒಳರೋಗಿಯಾಗಿಯಾಗಿ ದಾಖಲಾಗಿದ್ದರು. ಮೇ 30ರಂದು ರೋಗಿಗೆ ಅಬ್ಡೋಮಿನಲ್ ಆಲ್ಟ್ರಾಸೌಂಡ್ ಮಾಡಿಸಲು ವೈದ್ಯರು ಸೂಚಿಸಿದ್ದರು. ಮೇ 31ರಂದು ಮಧ್ಯಾಹ್ನ 12.30ಕ್ಕೆ ರೋಗಿಯ ಪತ್ನಿ ವೀಲ್ ಚಯರ್ ಇರುವುದಿಲ್ಲ ಎಂದು ಗಲಾಟೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ಆಸ್ಪತ್ರೆಯ ವಾರ್ಡ್ ನಿಂದ ಹೊರಗೆ ಸ್ಕ್ಯಾನಿಂಗ್ ಗೆ ಎಳೆದು ತಂದಿದ್ದಾರೆ. ಈ ದೃಶ್ಯವನ್ನು ಅಲ್ಲಿಯೇ ಇದ್ದ ವ್ಯಕ್ತಿಯೊಬ್ಬರು ವಾಟ್ಸಪ್ ಮಾಡಿ ಹರಿಬಿಟ್ಟಿದ್ದಾರೆ.

    ನಮ್ಮ ಆಸ್ಪತ್ರೆಯಲ್ಲಿ ವೀಲ್ ಚೇರ್, ಸ್ಟ್ರಚ್ಚರ್‍ಗಳು ಹಾಗೂ ರೋಗಿಗಳನ್ನು ಸಾಗಿಸುವ ಸಲಕರಣೆಗಳು ಸಾಕಷ್ಟಿದೆ. ರೋಗಿಗೆ ಚಿಕಿತ್ಸೆ ನೀಡುವುದರಲ್ಲಿ ಹಾಗೂ ಆರೈಕೆ ಮಾಡಿರುವುದಲ್ಲಿ ಆಸ್ಪತ್ರೆ ಸಿಬ್ಬಂದಿಯಿಂದ ಯಾವುದೇ ಕುಂದು ಕೊರತೆ ಆಗಿಲ್ಲ. ಈ ಘಟನೆ ವೇಳೆ ವಾರ್ಡ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಡಿ ದರ್ಜೆಯ ನೌಕರಳಾದ ಸುವರ್ಣಮ್ಮ, ಹಾಗೂ ಇಬ್ಬರು ನರ್ಸ್ ಗಳನ್ನು ಅಮಾನತುಗೊಳಿಸಿ ವಿಚಾರಣೆಯನ್ನು ಮುಂದುವರಿಸಲಾಗುತ್ತದೆ ಎಂದು ವರದಿ ನೀಡಿದ್ದಾರೆ.

    ಫಾಮಿದಾ ಹೇಳಿದ್ದು ಏನು?
    ಎರಡನೇ ಮಳಿಗೆಯಲ್ಲಿದ್ದ ಈ ಪತಿ ಅಮೀರ್ ಸಾಬ್ ಅವರನ್ನು ಕೆಳಗಡೆ ಕರೆದುಕೊಂಡು ಹೋಗಲು ಗಾಲಿ ಕುರ್ಚಿ ಕೇಳಿದ್ದೆ. ಅದರೆ ಅಲ್ಲಿದ್ದ ಸಿಬ್ಬಂದಿ ಗಾಲಿ ಕುರ್ಚಿ ನೀಡಲೇ ಇಲ್ಲ. ಒಂದು ವೇಳೆ ಇವತ್ತು ಎಕ್ಸ್ ರೇ ತೆಗೆಸದಿದ್ದರೆ ತೊಂದರೆ ಆದೀತು ಎಂದು ನಾನೇ ಗಂಡನನ್ನು ನೆಲದಲ್ಲಿ ಎಳೆದುಕೊಂಡು ಹೋಗಿದ್ದೆ ಎಂದು ತಿಳಿಸಿದ್ದರು.

    ಇದನ್ನೂ ಓದಿ: ಮೆಗ್ಗಾನ್ ಆಸ್ಪತ್ರೆಯಲ್ಲಿ ಅಮಾನವೀಯ ಘಟನೆ: ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಬಿಎಸ್‍ವೈ

    ಇದನ್ನೂ ಓದಿ: ಮೆಗ್ಗಾನ್ ಆಸ್ಪತ್ರೆಯಲ್ಲಿ ಅಮಾನವೀಯ ಘಟನೆ: ಪ್ರಶ್ನೆ ಕೇಳಿದ್ದಕ್ಕೆ ಗರಂ ಆಗಿ ಉಡಾಫೆಯ ಉತ್ತರ ನೀಡಿದ ಸಿಎಂ

     

    https://www.youtube.com/watch?v=FIfROhD1LVc

  • ಮೆಗ್ಗಾನ್ ಆಸ್ಪತ್ರೆಯಲ್ಲಿ ಅಮಾನವೀಯ ಘಟನೆ: ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಬಿಎಸ್‍ವೈ

    ಮೆಗ್ಗಾನ್ ಆಸ್ಪತ್ರೆಯಲ್ಲಿ ಅಮಾನವೀಯ ಘಟನೆ: ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಬಿಎಸ್‍ವೈ

    ಕಲಬುರಗಿ: ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಅಮಾನವೀಯ ಘಟನೆ ಕುರಿತು ಪ್ರತಿಕ್ರಿಯಿಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್.ಯಡಿಯೂರಪ್ಪ ನಿರಾಕರಿಸಿದ್ದಾರೆ.

    ಪ್ರಕರಣ ಸಂಬಂಧ ಕಲಬುರಗಿಯ ಐವಾನ್ ಎ ಶಾಹಿ ಅತಿಥಿ ಗೃಹಕ್ಕೆ ಮಾಧ್ಯಮದವರು ತೆರಳಿದ್ದರು. ಮೆಗ್ಗಾನ್ ಆಸ್ಪತ್ರೆಯ ಅಮಾನವೀಯ ಘಟನೆ ಬಗ್ಗೆ ಪ್ರತಿಕ್ರಿಯೆ ಕೇಳಿದ್ದಕ್ಕೆ ‘ನೋ ರಿಯಾಕ್ಟ್’ ಎಂದಷ್ಟೇ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

    ಮುಖ್ಯಮಂತ್ರಿ ಕನಸು ಕಾಣುತ್ತಿರುವ ಬಿಎಸ್ ಯಡಿಯೂರಪ್ಪ ಅವರು ತಮ್ಮ ಸ್ವಕ್ಷೇತ್ರದಲ್ಲಿ ನಡೆದ ಈ ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡದೇ ಇರುವುದಕ್ಕೆ ಜನಸಾಮಾನ್ಯರಿಂದ ಬೇಸರ ವ್ಯಕ್ತವಾಗಿದೆ.

    ಏನಿದು ಪ್ರಕರಣ?
    ಮೆಗ್ಗಾನ್ ಆಸ್ಪತ್ರೆಯ ಕಾರಿಡಾರ್‍ನಲ್ಲಿ ವಯೋವೃದ್ಧರೊಬ್ಬರನ್ನು ಅವರ ಪತ್ನಿ ನೆಲದ ಮೇಲೆ ಮಲಗಿಸಿ ಪ್ರಾಣಿಯಂತೆ ಎಳೆದುಕೊಂಡು ಹೋಗುತ್ತಿರುವ ದೃಶ್ಯ ಗುರುವಾರ ಮಧ್ಯಾಹ್ನ ಕಂಡು ಬಂದಿತ್ತು.

    ಎರಡನೇ ಮಳಿಗೆಯಿಂದ ಈ ವೃದ್ಧರನ್ನು ಕೆಳಗೆ ಕರೆದುಕೊಂಡು ಹೋಗಲು ಗಾಲಿ ಕುರ್ಚಿ ಕೇಳಿದರೂ ಆಸ್ಪತ್ರೆ ಸಿಬ್ಬಂದಿ ಕೊಟ್ಟಿಲ್ಲ. ಎಕ್ಸ್ ರೇ ತೆಗೆಸದಿದ್ದರೆ ತೊಂದರೆ ಆದೀತು ಎಂದು ಫಾಮಿದಾ ಗಂಡನನ್ನು ಎಳೆದುಕೊಂಡು ಎಕ್ಸ್ ರೇ ತೆಗೆಸಲು ಹೋಗಿದ್ದರು.

    ಈ ಬಗ್ಗೆ ಆರೋಗ್ಯ ಸಚಿವ ರಮೇಶ್ ಕುಮಾರ್ ಪ್ರತಿಕ್ರಿಯಿಸಿದ್ದು ರಾಜ್ಯದ ಜನತೆಯ ಕ್ಷಮೆ ಕೇಳಿದ್ದಾರೆ. ನಮಗೆ ಈ ಸ್ಥಾನದಲ್ಲಿ ಕುಳಿತುಕೊಳ್ಳೊದಕ್ಕೂ ನಾಚಿಕ ಆಗುತ್ತದೆ.ನಾನು ಈಗಾಗಲೇ ಶಿವಮೊಗ್ಗ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಆಸ್ಪತ್ರೆಗೆ ಭೇಟಿ ಮಾಡಲು ತಿಳಿಸಿದ್ದೇನೆ. ವೈದ್ಯಕೀಯ ಶಿಕ್ಷಣ ಸಚಿವರ ಜೊತೆ ಮಾತನಾಡಿ ಕೂಡಲೇ ಕ್ರಮ ಕೈಗೊಳ್ಳಲು ಮನವಿ ಮಾಡಿದ್ದೇನೆ ಅಂದ್ರು.

    ಇದನ್ನೂ ಓದಿ: ಮೆಗ್ಗಾನ್ ಆಸ್ಪತ್ರೆಯಲ್ಲಿ ಅಮಾನವೀಯ ಘಟನೆ: ಪ್ರಶ್ನೆ ಕೇಳಿದ್ದಕ್ಕೆ ಗರಂ ಆಗಿ ಉಡಾಫೆಯ ಉತ್ತರ ನೀಡಿದ ಸಿಎಂ