Tag: Meghana Gaonkar

  • ಮುಂಬೈ ಯೂನಿವರ್ಸಿಟಿಯಲ್ಲಿ ಡಾಕ್ಟರೇಟ್ ಪದವಿ ಪಡೆದ ‘ಚಾರ್‌ಮಿನಾರ್‌’ ನಟಿ ಮೇಘನಾ

    ಮುಂಬೈ ಯೂನಿವರ್ಸಿಟಿಯಲ್ಲಿ ಡಾಕ್ಟರೇಟ್ ಪದವಿ ಪಡೆದ ‘ಚಾರ್‌ಮಿನಾರ್‌’ ನಟಿ ಮೇಘನಾ

    ‘ಚಾರ್‌ಮಿನಾರ್’ ನಟಿ ಮೇಘನಾ ಗಾಂವ್ಕರ್ (Meghana Gaonkar) ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. 6 ವರ್ಷಗಳ ಸತತ ಶ್ರಮಕ್ಕೆ ಇದೀಗ ಫಲ ಸಿಕ್ಕಿದೆ. ಮುಂಬೈ ವಿಶ್ವವಿದ್ಯಾಲಯದಲ್ಲಿ ಸಿನಿಮಾ ಮತ್ತು ಸಾಹಿತ್ಯ ವಿಷಯದಲ್ಲಿ ನಟಿ ಡಾಕ್ಟರೇಟ್ ಪದವಿ ಪಡೆದಿದ್ದಾರೆ. ಈ ಸಂಭ್ರಮವನ್ನು ಮೇಘನಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗಳಾದ ವಿನಯ್‌, ರಜತ್‌ ಬಂಧನ ಕೇಸ್‌ಗೆ ಟ್ವಿಸ್ಟ್‌ – ಮಧ್ಯರಾತ್ರಿಯೇ ಇಬ್ಬರೂ ರಿಲೀಸ್‌

    ತಾವು ಪಿಎಚ್‌ಡಿ ಮಾಡಿದ ಜರ್ನಿ ಬಗ್ಗೆ ಮೇಘನಾ ಮಾತನಾಡಿ, ಇವತ್ತು ನಾನು ನಿಮ್ಮೆಲ್ಲರ ಜೊತೆ ಹೆಮ್ಮೆಯ ವಿಚಾರವನ್ನು ಹಂಚಿಕೊಳ್ಳುತ್ತಿದ್ದೇನೆ. ನಿಮಗೆಲ್ಲರಿಗೂ ಗೊತ್ತಿರುವ ಹಾಗೆ ಕಳೆದ 6 ವರ್ಷಗಳಿಂದ ನಾನು ನನ್ನ ಪಿಎಚ್‌ಡಿ ಮಾಡುತ್ತಿದ್ದೆ. 2024ರ ಅಕ್ಟೋಬರ್‌ನಲ್ಲಿ ನಾನು ನನ್ನ ಪಿಎಚ್‌ಡಿ ವರದಿಯನ್ನು ಯಶಸ್ವಿಯಾಗಿ ಸಲ್ಲಿಸಿದ್ದೆ. ಕಳೆದ ವಾರ ನನ್ನ ವೈವಾ ಕೂಡ ಆಯ್ತು. ಇವತ್ತು ನಾನು ನನ್ನ ಡಾಕ್ಟರೇಟ್ ಪದವಿಯನ್ನು ಹೆಮ್ಮೆಯಿಂದ ಸ್ವೀಕರಿಸಿದ್ದೇನೆ. ಇದು ತುಂಬಾ ವಿಶೇಷವಾದದ್ದು. ಯಾಕೆಂದರೆ ಈ ಪಿಎಚ್‌ಡಿ ಪಯಣ ಅಷ್ಟು ಸುಲಭ ಆಗಿರಲಿಲ್ಲ ಎಂದಿದ್ದಾರೆ.

     

    View this post on Instagram

     

    A post shared by Meghana Gaonkar (@meghanagaonkar)

    ನಾನು ನನ್ನ ಈ ಪಿಎಚ್‌ಡಿ ಡಾಕ್ಟರೇಟ್ ಪದವಿಯನ್ನು ನನ್ನ ತಂದೆಗೆ ಅರ್ಪಿಸುತ್ತೇನೆ. ಯಾಕೆಂದರೆ ನಾನು ಪಿಎಚ್‌ಡಿ ಮಾಡಬೇಕು ಎನ್ನುವುದು ನನ್ನ ತಂದೆಯ ಕನಸಾಗಿತ್ತು. ನನ್ನ ಪಿಎಚ್‌ಡಿ ವಿಷಯ ಸಿನಿಮಾ ಮತ್ತು ಸಾಹಿತ್ಯ ಆಗಿತ್ತು. ಈ ವಿಷಯ ನನಗೆ ತುಂಬಾ ಹತ್ತಿರವಾಗಿತ್ತು. ಈ ವಿಡಿಯೋ ಮೂಲಕ ನಾನು ನಿಮಗೆಲ್ಲರಿಗೂ ಧನ್ಯವಾದ ಹೇಳುತ್ತೇನೆ. ಯಾಕೆಂದರೆ ನಾನು ಮೊದಲು ಪಿಎಚ್‌ಡಿ ಬಗ್ಗೆ ಹೇಳಿಕೊಂಡ ದಿನದಿಂದ ಈವರೆಗೆ ನೀವೆಲ್ಲರೂ ನನಗೆ ತುಂಬಾ ಬೆಂಬಲಿಸಿದ್ದೀರಿ. ಈ ಪಯಣದಲ್ಲಿ ನನ್ನ ಜೊತೆಯಲ್ಲಿ ನಿಂತಿರುವುದಕ್ಕಾಗಿ ನಿಮಗೆ ತುಂಬಾ ಧನ್ಯವಾದಗಳು ಎಂದಿದ್ದಾರೆ. ನಟಿಯ ಸಾಧನೆಗೆ ಅಭಿಮಾನಿಗಳು, ಸ್ಯಾಂಡಲ್‌ವುಡ್ ಕಲಾವಿದರು ಮೆಚ್ಚುಗೆ ಸೂಚಿಸಿದ್ದಾರೆ.

     

    View this post on Instagram

     

    A post shared by Meghana Gaonkar (@meghanagaonkar)

    ಅಂದಹಾಗೆ, ಚಾರ್‌ಮಿನಾರ್, ಛೂ ಮಂತರ್, ದಿ ಜಡ್ಜ್‌ಮೆಂಟ್‌, ಶಿವಾಜಿ ಸುರತ್ಕಲ್ 2 ಸೇರಿದಂತೆ ಹಲವು ಸಿನಿಮಾಗಳಲ್ಲಿ ಮೇಘನಾ ನಾಯಕಿಯಾಗಿ ನಟಿಸಿದ್ದಾರೆ.

  • ‘ಶಿವಾಜಿ ಸುರತ್ಕಲ್ 2’ ಆಗಿ ಪ್ರೇಕ್ಷಕರ ಮುಂದೆ ನಿಂತಿದ್ದಾರೆ ರಮೇಶ್ ಅರವಿಂದ್

    ‘ಶಿವಾಜಿ ಸುರತ್ಕಲ್ 2’ ಆಗಿ ಪ್ರೇಕ್ಷಕರ ಮುಂದೆ ನಿಂತಿದ್ದಾರೆ ರಮೇಶ್ ಅರವಿಂದ್

    ಮೂರು ವರ್ಷಗಳ ಹಿಂದೆ ಬಿಡುಗಡೆಯಾಗಿ ಸೂಪರ್ ಹಿಟ್ ಆಗಿದ್ದ ರಮೇಶ್ ಅರವಿಂದ್ (Ramesh Aravind) ಅಭಿನಯದ ಪತ್ತೇದಾರಿ ಚಿತ್ರ ‘ಶಿವಾಜಿ ಸುರತ್ಕಲ್’ ಮುಂದುವರೆದ ಭಾಗ ‘ಶಿವಾಜಿ ಸುರತ್ಕಲ್ – ದಿ ಮಿಸ್ಟೀರಿಯಸ್ ಕೇಸ್ ಆಫ್ ಮಾಯಾವಿ’  (Shivaji Suratkal 2) ಇದೇ ಶುಕ್ರವಾರ (ಏಪ್ರಿಲ್ 14) ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

    ‘ಶಿವಾಜಿ ಸುರತ್ಕಲ್ 2’ ಚಿತ್ರವನ್ನು ಅಂಜನಾದ್ರಿ ಸಿನಿ ಕ್ರಿಯೇಷನ್ಸ್ ಮೂಲಕ ರೇಖಾ ಕೆ.ಎನ್ ಮತ್ತು ಅನೂಪ್ ಗೌಡ ನಿರ್ಮಿಸಿದ್ದಾರೆ. ಆಕಾಶ್ ಶ್ರೀವತ್ಸ (Akash Srivatsa) ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಮೊದಲ ಭಾಗದಂತೆಯೇ ಈ ಚಿತ್ರವು ಸಹ ಒಂದು ಮರ್ಡರ್ ಮಿಸ್ಟ್ರಿಯಾಗಿದ್ದು, ಚಿತ್ರದಲ್ಲಿ ನಡೆಯುವ ಕೊಲೆಗಳಿಗೂ, ನಾಯಕ ಶಿವಾಜಿಗೂ ಒಂದು ನಂಟಿರುತ್ತದೆ. ಆ ನಂಟೇನು? ಕೊಲೆಗಳ ಹಿಂದಿರುವ ರಹಸ್ಯವೇನು? ಮತ್ತು ಕೊಲೆಗಾರ ಯಾರು? ಎಂಬುದೇ ಈ ಚಿತ್ರದ ಹೂರಣ.

     ‘ಮೊದಲ ಭಾಗ ನೋಡಿದವರಿಗೆ ಈ ಚಿತ್ರವು ಖಂಡಿತಾ ಇಷ್ಟವಾಗುತ್ತದೆ. ಇಲ್ಲಿ ಕೊಲೆಗಳ ಜೊತೆಗೆ ಮನರಂಜನೆ ಮತ್ತು ಭಾವನಾತ್ಮಕ ಸನ್ನಿವೇಶಗಳು ಸಹ ಇದೆ. ಚಿತ್ರ ನೋಡುತ್ತಿದ್ದಂತೆ ಇಲ್ಲಿ ಎರಡು ಪಾತ್ರಗಳಿವೆಯೋ ಅಥವಾ ನಾಯಕನ ಮನಸ್ಸಿನಲ್ಲಿ ಆಗುವ ತಳಮಳಗಳೋ ಎಂಬ ಪ್ರಶ್ನೆ ಪ್ರೇಕ್ಷಕರಿಗೆ ಕಾಡುತ್ತದೆ. ಕನ್ನಡದಲ್ಲಿ ಇದೊಂದು ವಿಭಿನ್ನವಾದ ಪ್ರಯತ್ನ ಎಂಬ ನಂಬಿಕೆ ಇದೆ’ ಎನ್ನುತ್ತಾರೆ ನಿರ್ದೇಶಕ ಆಕಾಶ್ ಶ್ರೀವತ್ಸ.

    ‘ಶಿವಾಜಿ ಸುರತ್ಕಲ್ 2’ ಚಿತ್ರದಲ್ಲಿ ರಮೇಶ್ ಅರವಿಂದ್, ರಾಧಿಕಾ ನಾರಾಯಣ್ (Radhika Narayan) , ಮೇಘನಾ ಗಾಂವ್ಕರ್ (Meghana Gaonkar), ಸಂಗೀತ ಶೃಂಗೇರಿ, ರಘು ರಮಣಕೊಪ್ಪ, ನಾಜರ್, ರಮೇಶ್ ಭಟ್, ವೀಣಾ ಸುಂದರ್, ವಿನಾಯಕ್ ಜೋಶಿ, ಶೋಭರಾಜ್ ಮುಂತಾದ ಪ್ರತಿಭಾವಂತ ಕಲಾವಿದರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

    ಚಿತ್ರಕ್ಕೆ ಬೆಂಗಳೂರು, ಮೈಸೂರು, ಹೈದರಾಬಾದ್, ಸುರತ್ಕಲ್, ಕಾಪು, ಹೊನ್ನಾವರ ಮುಂತಾದ ಕಡೆ ಚಿತ್ರೀಕರಣ ಮಾಡಲಾಗಿದೆ. ಗುರುಪ್ರಸಾದ್ ಮತ್ತು ಮಧು ಅಂಬಟ್ ಅವರ ಛಾಯಾಗ್ರಹಣ ಹಾಗೂ ಜೂಡಾ ಸ್ಯಾಂಡಿ ಸಂಗೀತವಿದೆ. ನಿರ್ದೇಶಕ ಆಕಾಶ್ ಶ್ರೀವತ್ಸ ಅವರೇ ಚಿತ್ರದ ಸಂಕಲನದ ಜವಾಬ್ದಾರಿಯನ್ನೂ ಹೊತ್ತಿದ್ದಾರೆ.

  • ರಮೇಶ್ ಅರವಿಂದ್ ನಟನೆಯ ‘ಶಿವಾಜಿ ಸುರತ್ಕಲ್ 2’ ಟ್ರೈಲರ್ ರಿಲೀಸ್

    ರಮೇಶ್ ಅರವಿಂದ್ ನಟನೆಯ ‘ಶಿವಾಜಿ ಸುರತ್ಕಲ್ 2’ ಟ್ರೈಲರ್ ರಿಲೀಸ್

    ಮೇಶ್ ಅರವಿಂದ್ (Ramesh Aravind) ನಾಯಕರಾಗಿ  ನಟಿಸಿರುವ ‘ಶಿವಾಜಿ ಸುರತ್ಕಲ್ 2’ (Shivaji Suratkal 2) ಚಿತ್ರದ ಟ್ರೇಲರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಟ್ರೈಲರ್‌ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಆಕಾಶ್ ಶ್ರೀವತ್ಸ ನಿರ್ದೇಶಿಸಿರುವ ಈ ಚಿತ್ರವನ್ನು ರೇಖಾ ಕೆ.ಎನ್ ಹಾಗೂ ಅನೂಪ್ ಗೌಡ ನಿರ್ಮಿಸಿದ್ದಾರೆ.

    ಶಿವಾಜಿ ಸುರತ್ಕಲ್ 2 ಲಾಕ್ ಡೌನ್ ಸಮಯದಲ್ಲಿ ಹುಟ್ಟಿದ ಕಥೆ. ನಾನು ಹಾಗೂ ರಮೇಶ್ ಸರ್ ವಾಟ್ಸಪ್ ಮೂಲಕ ಎರಡನೇ ಭಾಗದ ಕಥೆಯನ್ನು ಚರ್ಚಿಸಿದೆವು. ಎಲ್ಲರಿಗೂ ಲಾಕ್ ಡೌನ್ ನಿಂದ ತೊಂದರೆ ಆದರೆ, ನಮಗೆ ಮಾತ್ರ ಈ ಚಿತ್ರದ ಕಥೆ ಬರೆಯಲು ಅನುಕೂಲವಾಯಿತು. ನಮ್ಮ‌ ತಂಡದ ಸಹಕಾರದಿಂದ ಚಿತ್ರ ಉತ್ತಮವಾಗಿ ಮೂಡಿಬಂದಿದೆ. ಈಗ ಟ್ರೈಲರ್ ಬಿಡುಗಡೆಯಾಗಿದೆ. ಎಲ್ಲರಲ್ಲೂ ಮನೆ ಮಾಡಿರುವ ‘ಮಾಯಾವಿ ಯಾರು?’ ಎಂಬ ಪ್ರಶ್ನೆಗೆ ಅಂದೆ ಉತ್ತರ ಸಿಗಲಿದೆ ಎಂದು ನಿರ್ದೇಶಕ ಆಕಾಶ್ ಶ್ರೀವತ್ಸ (Akash Srivatsa) ತಿಳಿಸಿದರು.

    “ಒಂದೊಳ್ಳೆ ತಂಡದ ಜೊತೆಗೆ ಕೆಲಸ ಮಾಡಿದ ಖುಷಿಯಿದೆ. ಶಿವಾಜಿ ಸುರತ್ಕಲ್ 2 ಚಿತ್ರದ ಟ್ರೈಲರ್ ಚೆನ್ನಾಗಿದೆ. ಇದೇ ಏಪ್ರಿಲ್ ನಮ್ಮ ಚಿತ್ರ ಬಿಡುಗಡೆಯಾಗಲಿದೆ. ನಾನು ಪ್ರತಿ ವೀಕೆಂಡ್ ನಿಮ್ಮ ಮನೆಗೆ ಬರುತ್ತೇನೆ. ನೀವು ಕುಟುಂಬ ಸಮೇತ ನಮ್ಮ ಚಿತ್ರ ನೋಡಲು ಚಿತ್ರಮಂದಿರಕ್ಕೆ ಬನ್ನಿ’ ಎಂದರು ನಟ ರಮೇಶ್ ಅರವಿಂದ್. ಇದನ್ನೂ ಓದಿ: ಅವಳಿ ಮಕ್ಕಳ ಮುದ್ದಾದ ಫೋಟೋ ಹಂಚಿಕೊಂಡ ಅಮೂಲ್ಯ

    ನನ್ನ ಮಿತ್ರರ ಸಹಕಾರದಿಂದ ಈ ಚಿತ್ರವನ್ನು ನಿರ್ಮಿಸಿದ್ದೇನೆ. ಸದಭಿರುಚಿಯ ಚಿತ್ರ ನಿರ್ಮಿಸಿರುವ ಹೆಮ್ಮೆಯಿದೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ಅನೂಪ್ ಗೌಡ. ಚಿತ್ರದಲ್ಲಿ ನಟಿಸಿರುವ ರಾಧಿಕಾ ಚೇತನ್ (Radhika Chetan), ಮೇಘನಾ ಗಾಂವ್ಕರ್ (Meghana Gaonkar), ಸಂಗೀತ ಶೃಂಗೇರಿ, ರಘು ರಮಣಕೊಪ್ಪ, ವಿನಾಯಕ ಜೋಶಿ, ವಿದ್ಯಾಮೂರ್ತಿ ಮುಂತಾದವರು ತಮ್ಮ ಪಾತ್ರ ಹಾಗೂ ಚಿತ್ರದ ಬಗ್ಗೆ ಮಾತನಾಡಿದರು.

  • ‘ಟ್ವಿಂಕಲ್’ ಹಾಡು ಹೇಳುತ್ತಾ ಬಂದ ಶಿವಾಜಿ ಸುರತ್ಕಲ್ 2

    ‘ಟ್ವಿಂಕಲ್’ ಹಾಡು ಹೇಳುತ್ತಾ ಬಂದ ಶಿವಾಜಿ ಸುರತ್ಕಲ್ 2

    ರೇಖಾ ಕೆ.ಎನ್ ಹಾಗೂ ಅನೂಪ್ ಗೌಡ ನಿರ್ಮಿಸಿರುವ, ಆಕಾಶ್ ಶ್ರೀವತ್ಸ (Akash Srivatsa) ನಿರ್ದೇಶನದಲ್ಲಿ ರಮೇಶ್ ಅರವಿಂದ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ ‘ಶಿವಾಜಿ ಸುರತ್ಕಲ್ 2’ (Shivaji Suratkal 2) ಚಿತ್ರದ ‘ಟ್ವಿಂಕಲ್’ ಹಾಡು ಬಿಡುಗಡೆಯಾಗಿದೆ. ಆಕಾಶ್ ಶ್ರೀವತ್ಸ ಬರೆದಿರುವ ಈ ಹಾಡಿಗೆ ಜೂಡಾ ಸ್ಯಾಂಡಿ ಸಂಗೀತ ನೀಡಿದ್ದಾರೆ. ಇಶಾ ಸುಚಿ ಹಾಗೂ ಜೂಡಾ ಸ್ಯಾಂಡಿ ಹಾಡಿದ್ದಾರೆ.

    ‘ಶಿವಾಜಿ ಸುರತ್ಕಲ್ 1’ ಚಿತ್ರವನ್ನು ನಮ್ಮ ಹಾಗೂ ರಾಹುಲ್ ದ್ರಾವಿಡ್ ಕುಟುಂಬದವರು ಇದೇ ಜಾಗದಲ್ಲಿ ಒಟ್ಟಿಗೆ ನೋಡಿದ್ದೆವು. ಈಗ ‘ಶಿವಾಜಿ ಸುರತ್ಕಲ್ 2’ ತೆರೆಗೆ ಬರಲು ಸಿದ್ದಾವಾಗಿದೆ. ಶಿವಾಜಿ ಯಾವುದಾದರೂ ಕೇಸ್ ತೆಗೆದುಕೊಂಡರೆ ‘ಒಂದಾ ಜೈಲಿಗೆ, ಇಲ್ಲವಾ ಸ್ಮಶಾನಕ್ಕೆ’ ಎಂದು ಪ್ರಸಿದ್ದಿ. ‘ಶಿವಾಜಿ ಸುರತ್ಕಲ್ ೨’ ಚಿತ್ರದಲ್ಲಿ ಶಿವಾಜಿ ಯಾವ ಕೇಸ್? ತೆಗದುಕೊಳ್ಳುತ್ತಾನೆ ಎಂಬ ಕುತೂಹಲಕ್ಕೆ ಸದ್ಯದಲ್ಲೇ ಉತ್ತರ ಸಿಗಲಿದೆ. ಎಲ್ಲಾ ಕಲಾವಿದರ ಅಭಿನಯ ಹಾಗೂ ತಂತ್ರಜ್ಞರ ಕಾರ್ಯವೈಖರಿ ಉತ್ತಮವಾಗಿದೆ. ಇಂದು ಬಿಡುಗಡೆಯಾಗಿರುವ ಹಾಡು ಚೆನ್ನಾಗಿದೆ ಎಂದರು ನಟ ರಮೇಶ್ ಅರವಿಂದ್ (Ramesh Aravind).

    ಇಂದು ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ. ನಟಿ ಸಂಗೀತ ಶೃಂಗೇರಿ ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಜೂಡ ಸ್ಯಾಂಡಿ ಅದ್ಭುತವಾಗಿ ಸಂಗೀತ ನೀಡಿದ್ದಾರೆ. ಈ ಹಾಡಿನಲ್ಲಿ ಕಾಣಿಸಿಕೊಂಡಿರುವ ರಮೇಶ್ ಅವರು, ಜೀಪ್ ನಲ್ಲೂ ಸಹ ಕಾಣಿಸಿಕೊಳ್ಳುತ್ತಾರೆ. ಈ ಕುತೂಹಲ ಸದ್ಯಕ್ಕೆ ಹಾಗೆ ಇರಲಿ. ಏಪ್ರಿಲ್ 14 ಚಿತ್ರ ಬಿಡುಗಡೆಯಾಗುತ್ತಿದೆ ಅಂದು ಆ ಕುತೂಹಲಕ್ಕೆ ಉತ್ತರ ಸಿಗಲಿದೆ. ಸಹಕಾರ ನೀಡಿದ್ದ ಇಡೀ ನನ್ನ ತಂಡಕ್ಕೆ ಧನ್ಯವಾದ ಎಂದರು ನಿರ್ದೇಶಕ ಆಕಾಶ್ ಶ್ರೀವತ್ಸ. ಇದನ್ನೂ ಓದಿ: ದೀಪಿಕಾ ಪಡುಕೋಣೆ ನಮ್ಮ ಭಾರತದ ಹೆಮ್ಮೆ ಎಂದು ಹಾಡಿ ಹೊಗಳಿದ ಕಂಗನಾ

    ಈ ಚಿತ್ರದಲ್ಲಿ ರಮೇಶ್ ಅವರ ಪಾತ್ರ ನೋಡಿದರೆ, ನನಗೆ “ಅಮೃತ ವರ್ಷಿಣಿ” ಚಿತ್ರದ ಪಾತ್ರ ನೆನಪಾಗುತ್ತದೆ. ನಾನು ಈಗಾಗಲೇ ಸಿನಿಮಾ ನೋಡಿದ್ದೇನೆ. ಜನ ಮೆಚ್ಚಿಕೊಳ್ಳುವ ಭರವಸೆಯಿದೆ ಎನ್ನುತ್ತಾರೆ ನಿರ್ಮಾಪಕ ಅನೂಪ್ ಗೌಡ. ಚಿತ್ರದಲ್ಲಿ ಐದು ಹಾಡುಗಳಿದೆ. ಇಂದು ಮೊದಲ ಹಾಡು ಬಿಡುಗಡೆಯಾಗಿದೆ ಎಂದ ಸಂಗೀತ ನಿರ್ದೇಶಕ ಜೂಡಾ ಸ್ಯಾಂಡಿ, ಹಾಡುಗಳನ್ನು ಬರೆದಿರುವವರ ಹಾಗೂ ಹಾಡಿರುವವರ ಹೆಸರುಗಳನ್ನು ಪರಿಚಯಿಸಿದರು.

    ಚಿತ್ರದಲ್ಲಿ ಅಭಿನಯಿಸಿರುವ ರಾಧಿಕಾ ನಾರಾಯಣ್, ಮೇಘನಾ ಗಾಂವ್ಕರ್ (Meghana Gaonkar), ಹಾಡಿನಲ್ಲಿ ನಟಿಸಿರುವ ಸಂಗೀತ ಶೃಂಗೇರಿ, ನಟರಾದ ರಘು ರಮಣಕೊಪ್ಪ, ವಿನಾಯಕ್ ಜೋಶಿ ಮುಂತಾದವರು ತಮ್ಮ ಪಾತ್ರ ಹಾಗೂ ಹಾಡಿನ ಬಗ್ಗೆ ಮಾತನಾಡಿದರು.

  • `ಛೂ ಮಂತರ್’ ಟೀಸರ್‌ ಔಟ್:‌ ಮಾರ್ಗನ್‌ ಹೌಸ್‌ ರಹಸ್ಯ ಭೇದಿಸಲು ಬಂದ ನಟ ಶರಣ್‌

    `ಛೂ ಮಂತರ್’ ಟೀಸರ್‌ ಔಟ್:‌ ಮಾರ್ಗನ್‌ ಹೌಸ್‌ ರಹಸ್ಯ ಭೇದಿಸಲು ಬಂದ ನಟ ಶರಣ್‌

    `ಗುರು ಶಿಷ್ಯರು’ (Guru Shishyaru) ಸಿನಿಮಾದಲ್ಲಿ ಪಿಟಿ ಮಾಸ್ಟರ್ ಆಗಿ ಗೆದ್ದಿದ್ದ ನಟ ಶರಣ್ `ಛೂ ಮಂತರ್’ (Choo Mantar Film) ಮಾಡಲು ಬರುತ್ತಿದ್ದಾರೆ. ಶರಣ್ ಹುಟ್ಟುಹಬ್ಬದಂದು ಟೀಸರ್ ರಿಲೀಸ್ ಮಾಡುವ ಮೂಲಕ ಅಭಿಮಾನಿಗಳಿಗೆ ಬಿಗ್ ಗಿಫ್ಟ್ ನೀಡಿದ್ದಾರೆ. `ಛೂ ಮಂತರ್’ ಟೀಸರ್‌ನಿಂದ ಶರಣ್ ಸದ್ದು ಮಾಡ್ತಿದ್ದಾರೆ.

     

    View this post on Instagram

     

    A post shared by Tarun Talkies (@taruntalkies)

    ನಟ ಶರಣ್‌ ನಗಿಸಿ, ಹೆದರಿಸೋಕೆ ಬರುತ್ತಿದ್ದಾರೆ. ನಟ ಶರಣ್ ಈಗ `ಛೂ ಮಂತರ್’ ಚಿತ್ರದ ಟೀಸರ್ ಮೂಲಕ ಕಮಾಲ್ ಮಾಡ್ತಿದ್ದಾರೆ. ಮಾನಸ ತರುಣ್, ತರುಣ್ ಶಿವಪ್ಪ ನಿರ್ಮಾಣದಲ್ಲಿ `ಛೂ ಮಂತರ್’ ಸಿನಿಮಾ ಮೂಡಿ ಬಂದಿದೆ. ಸದ್ಯ `ಛೂ ಮಂತರ್’ ಟೀಸರ್ ಹಾರರ್ ಝಲಕ್ ಪ್ರೇಕ್ಷಕರನ್ನ ಬಡಿದೆಬ್ಬಿಸಿದೆ. ಮೊದಲ ಬಾರಿಗೆ ಹಾರರ್ ಸಿನಿಮಾದಲ್ಲಿ ನಟಿಸಿರುವ ಶರಣ್ ಅವರ ಹೊಸ ಅವತಾರ ಅಭಿಮಾನಿಗಳಿಗೆ ಇಷ್ಟವಾಗಿದೆ. ಇದನ್ನೂ ಓದಿ: `ಆರ್‌ಆರ್‌ಆರ್’ ಸಕ್ಸಸ್ ನಂತರ ಮುಂದಿನ ಚಿತ್ರದ ಬಗ್ಗೆ ಜ್ಯೂ.ಎನ್‌ಟಿಆರ್ ಪ್ರತಿಕ್ರಿಯೆ

     

    View this post on Instagram

     

    A post shared by Tarun Talkies (@taruntalkies)

    ಹಾಲಿವುಡ್ (Hollywood) ಸಿನಿಮಾಗಳನ್ನು ನೆನಪಿಸುವ ವಿಷ್ಯುವಲ್ಸ್ `ಛೂ ಮಂತರ್’ ಸಿನಿಮಾದಲ್ಲಿದೆ ಎನ್ನುವುದು ಟೀಸರ್ ನೋಡಿದ್ರೆ ಅರ್ಥವಾಗುತ್ತದೆ. ಪಾಳು ಬಿದ್ದ ಉತ್ತರಾಕಾಂಡದ ಮಾರ್ಗನ್ ಹೌಸ್ ಪ್ಯಾಲೇಸ್‌ನಲ್ಲಿ ಚಿತ್ರವಿಚಿತ್ರ ಘಟನೆಗಳು ನಡೆಯುತ್ತಿರುತ್ತದೆ. ಭೂತ ಪ್ರೇತ ಇರುವ ಆತಂಕ ಮನೆಯಲ್ಲಿರುವವರನ್ನು ಕಾಡುತ್ತಿರುತ್ತದೆ. ಆ ಪ್ರಶ್ನೆಗಳಿಗೆ ಉತ್ತರ ಹುಡುಕುವ ನಾಯಕನಾಗಿ ಶರಣ್ ಎಂಟ್ರಿ ಕೊಡುತ್ತಾರೆ. ಟೀಸರ್ ನೋಡುಗರನ್ನು ಕಥೆಯ ಒಳಗೆ ಕರೆದುಕೊಂಡು ಹೋಗುತ್ತದೆ.

    ನಟ ಶರಣ್ ಈ ಸಿನಿಮಾದಲ್ಲಿ ಒಬ್ಬ ಮಂತ್ರವಾದಿ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರದಲ್ಲಿ ಮೇಘನಾ ಗಾಂವ್ಕರ್, ಅದಿತಿ, ನಟ ಚಿಕ್ಕಣ್ಣ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. `ಕರ್ವ’ (Karva) ಖ್ಯಾತಿಯ ನವನೀತ್ (Navaneeth) `ಛೂ ಮಂತರ್’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಭಿನ್ನ ಕಥೆಯನ್ನ ತೆರೆಯ ಮೇಲೆ ತೋರಿಸಲು ಹೊರಟಿದ್ದಾರೆ.

    ಸದ್ಯ ಸಿನಿಮಾದ ಪೋಸ್ಟರ್, ಟೀಸರ್ ಮೂಲಕ `ಛೂ ಮಂತರ್’ ಚಿತ್ರ ಸಂಚಲನ ಸೃಷ್ಟಿಸಿದೆ. ಸಿನಿಮಾ ಚಿತ್ರೀಕರಣ ಕೂಡ ಕಂಪ್ಲಿಟ್ ಆಗಿದ್ದು, ಸದ್ಯದಲ್ಲಿಯೇ ತೆರೆಯ ಮೇಲೆ ಅಬ್ಬರಿಸಲಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ‘ಛೂ ಮಂತರ್’ ಎಂದು ನಗಿಸಿ, ಹೆದರಿಸೋಕೆ ಬರುತ್ತಿದ್ದಾರೆ ಶರಣ್

    ‘ಛೂ ಮಂತರ್’ ಎಂದು ನಗಿಸಿ, ಹೆದರಿಸೋಕೆ ಬರುತ್ತಿದ್ದಾರೆ ಶರಣ್

    ಮ್ಮ ಸಹಜ ನಟನೆಯ ಮೂಲಕ ಮನೆಮಾತಾಗಿರುವ ಶರಣ್ ನಾಯಕರಾಗಿ ನಟಿಸಿರುವ “ಛೂ ಮಂತರ್” ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. ಕುತೂಹಲ ಮೂಡಿಸಿರುವ ಈ ಚಿತ್ರದ ಮೋಷನ್ ಪೋಸ್ಟರ್ ಎಲ್ಲರ ಗಮನ ಸೆಳೆಯುತ್ತಿದೆ. ಈ ಚಿತ್ರದ ಕುರಿತು ಚಿತ್ರತಂಡದ ಸದಸ್ಯರು ಮಾಹಿತಿ ನೀಡಿದರು.

    ಇದು ನಮ್ಮ ಸಂಸ್ಥೆಯಿಂದ ನಿರ್ಮಾಣವಾಗಿರುವ ಐದನೇ ಸಿನಿಮಾ. ನಾನು ಹಾಗೂ ಮಾನಸ ತರುಣ್ ಈ ಚಿತ್ರದ ನಿರ್ಮಾಪಕರು. ನಿರ್ದೇಶಕ ನವನೀತ್ ಹಾಗೂ ನಾನು, ಉಪೇಂದ್ರ ಅವರ ಸಿನಿಮಾ ಮಾಡಬೇಕಿತ್ತು. ಕಾರಣಾಂತರದಿಂದ ಆ ಚಿತ್ರ ಸ್ವಲ್ಪ ಮುಂದೆ ಹೋಯಿತು. ಅಷ್ಟರಲ್ಲಿ ನವನೀತ್ ಹಾರಾರ್ ಜಾನರ್ ನ ಈ ಚಿತ್ರದ ಕಥೆ ಸಿದ್ಧಮಾಡಿಕೊಂಡಿದ್ದರು. ಶರಣ್ ಹಾಗೂ ತರುಣ್ ಸುಧೀರ್ ಅವರ ಬಳಿ ಕಥೆ ಹೇಳಿದ್ದರು. ಇಬ್ಬರಿಗೂ ಕಥೆ ಹಿಡಿಸಿತು. ಚಿತ್ರ ಆರಂಭವಾಯಿತು. ಬೆಂಗಳೂರು, ಮೈಸೂರು, ಉತ್ತರಾಖಂಡದಲ್ಲಿ ಚಿತ್ರೀಕರಣ ಮಾಡಿದ್ದೇವೆ. ಶರಣ್ ಅವರೊಟ್ಟಿಗೆ ಚಿಕ್ಕಣ್ಣ, ಅದಿತಿ, ಪ್ರಭುದೇವ, ಪ್ರಭು ಮುಂಡ್ಕರ್, ಮೇಘನಾ ಗಾಂವ್ಕರ್, ಧರ್ಮ, ರಜನಿ ಭಾರದ್ವಾಜ್ ಮುಂತಾದವರು ಅಭಿನಯಿಸಿದ್ದಾರೆ. ಅವಿನಾಶ್ ಹಿನ್ನೆಲೆ ಸಂಗೀತ ನೀಡಿದ್ದಾರೆ. ಚಿತ್ರದಲ್ಲಿ ಎರಡು ಹಾಡುಗಳಿದ್ದು, ಚಂದನ್ ಶೆಟ್ಟಿ ಸಂಗೀತ ನೀಡಿದ್ದಾರೆ ಎಂದು ನಿರ್ಮಾಪಕ ತರುಣ್ ಶಿವಪ್ಪ ತಿಳಿಸಿದರು‌.

    ಶರಣ್ ಸರ್ ಜೊತೆ ಕೆಲಸ ಮಾಡಿದ್ದು ಖುಷಿಯಿದೆ‌. “ಛೂ ಮಂತರ್” ಎಂದರೆ ಫ್ಯಾನ್ಸಿ ವರ್ಡ್. ಈ ಪದ ತುಂಬಾ ಕಡೆ ಬಳಸುತ್ತಾರೆ. ಚಿತ್ರದಲ್ಲಿ ಮೂರು ಕಥೆಗಳಿರುತ್ತದೆ. ಎಲ್ಲಾ ಕಥೆಗಳಿಗೂ ಮೂಲ ನಾಯಕ ಆಗಿರುತ್ತಾರೆ. ನನ್ನ ಕಥೆ ಕೇಳಿ ಶರಣ್ ಹಾಗೂ ತರುಣ್ ಸುಧೀರ್ ಇಷ್ಟಪಟ್ಟರು. ಕಂಪ್ಲೀಟ್ ಹಾರರ್ ಸಿನಿಮಾದಲ್ಲಿ ಶರಣ್ ಅವರು ಅಭಿನಯಿಸಿರಲಿಲ್ಲ. ಇದೇ ಮೊದಲು ಎನ್ನಬಹುದು. ‌ನಮ್ಮ ಚಿತ್ರದಲ್ಲಿ ಹಾರಾರ್ ಜೊತೆ ಕಾಮಿಡಿ ಹಾಗೂ ಥ್ರಿಲ್ಲರ್ ಕೂಡ ಇದೆ ಎಂದರು “ಕರ್ವ” ಖ್ಯಾತಿಯ ನಿರ್ದೇಶಕ ನವನೀತ್. ಇದನ್ನೂ ಓದಿ: ರೂಪೇಶ್ ಗೆ ಬಿಗ್ ಬಾಸ್ ಕೊಟ್ಟಿದ್ದು 60 ಲಕ್ಷ: ನಿಜವಾಗಿಯೂ ಅವರ ಕೈಗೆ ಬರೋದೆಷ್ಟು?

    ನಾನು ಚಿಕ್ಕವಯಸ್ಸಿನಿಂದಲೂ ಹಾರಾರ್ ಚಿತ್ರಗಳ ಅಭಿಮಾನಿ. ಸಾಕಷ್ಟು ಹಾರಾರ್ ಚಿತ್ರ ನೋಡಿದ್ದೇನೆ. ಈ ಚಿತ್ರದ ಕಥೆಯನ್ನು ನವನೀತ್ ಅದ್ಭುತವಾಗಿ ಮಾಡಿಕೊಂಡಿದ್ದಾರೆ. ಅವರ ಜೊತೆ ಕೆಲಸ ಮಾಡಿರುವುದು ಸಂತೋಷವಾಗಿದೆ. ನನ್ನ ಮಿತ್ರ ತರುಣ್ ಸುಧೀರ್ ಈ ಚಿತ್ರದ ಕಥೆ ಕೇಳಿ ಮೆಚ್ಚುಗೆ ಸೂಚಿಸಿದ್ದಾರೆ. ನನ್ನ ಹಾಗೂ ಚಿಕ್ಕಣ್ಣ ಅವರ ಕಾಂಬಿನೇಶನ್ ಎಂದರೆ‌ ಪ್ರೇಕ್ಷಕರಿಗೆ ಸಾಕಷ್ಟು ನಿರೀಕ್ಷೆ ಇರುತ್ತದೆ‌. ಈ ಚಿತ್ರದಲ್ಲೂ ನಮ್ಮ ಜೋಡಿ ಮೋಡಿ ಮಾಡಲಿದೆ. ಈ ಚಿತ್ರದ ಮತ್ತೊಂದು ಹೈಲೈಟ್ ಎಂದರೆ ಅನೂಪ್ ಅವರ ಛಾಯಾಗ್ರಹಣ ಎನ್ನುತ್ತಾರೆ ಶರಣ್.

    ತರುಣ್ ಶಿವಪ್ಪ ನಿರ್ಮಾಣದ ಹಿಂದಿನ ಚಿತ್ರದಲ್ಲೇ ಅಭಿನಯಿಸಬೇಕಿತ್ತು‌, ಆದ್ರೆ ಆಗಿರಲಿಲ್ಲ. ಈ ಚಿತ್ರದಲ್ಲಿ ಅಭಿನಯಿಸಿದ್ದೇನೆ. ನನ್ನ ಪಾತ್ರ ಚೆನ್ನಾಗಿದೆ ಎಂದರು ಮೇಘನಾ ಗಾಂವ್ಕರ್. ನನಗೂ ಹಾರಾರ್ ಚಿತ್ರಗಳೆಂದರೆ ಪ್ರಾಣ. ನವನೀತ್ ಅವರ “ಕರ್ವ” ಚಿತ್ರವನ್ನು ಸಾಕಷ್ಟು ಸಲ ನೋಡಿದ್ದೇನೆ. ಶರಣ್ ಸರ್ ಜೊತೆ ನಟಿಸಿರುವ ಸಂತಸವಿದೆ‌. ಒಳ್ಳೆಯ ಪಾತ್ರ ನೀಡಿರುವ ನಿರ್ದೇಶಕ ಹಾಗೂ ನಿರ್ಮಾಪಕರಿಗೆ ಧನ್ಯವಾದ ಎಂದರು ಅದಿತಿ ಪ್ರಭುದೇವ. ಫಾರಿನ್ ರಿಟರ್ನ್ ಪಾತ್ರದಲ್ಲಿ ಅಭಿನಯಿಸಿರುವುದಾಗಿ ಪ್ರಭು ಮುಂಡ್ಕರ್, ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಂಡಿರುವುದಾಗಿ ಧರ್ಮ ಹೇಳಿದರು. ರಜನಿ ಭಾರದ್ವಾಜ್ ಸಹ “ಛೂ ಮಂತರ್” ಬಗ್ಗೆ ಮಾತನಾಡಿದರು.

    Live Tv
    [brid partner=56869869 player=32851 video=960834 autoplay=true]

  • ಹಾರರ್ ಕಾಮಿಡಿ ಸಿನಿಮಾದಲ್ಲಿ ಇಬ್ಬರು ನಾಯಕಿಯರ ಜೊತೆ ಶರಣ್ ಡುಯೆಟ್

    ಹಾರರ್ ಕಾಮಿಡಿ ಸಿನಿಮಾದಲ್ಲಿ ಇಬ್ಬರು ನಾಯಕಿಯರ ಜೊತೆ ಶರಣ್ ಡುಯೆಟ್

    ಟ ಶರಣ್ ಇದೀಗ ಮತ್ತೊಂದು ಸಿನಿಮಾದಲ್ಲಿ ಸದ್ದಿಲ್ಲದೇ ನಟಿಸಿದ್ದಾರೆ. ಈ ಚಿತ್ರಕ್ಕೆ ‘ಛೂ ಮಂತರ್’ ಎಂದು ಹೆಸರಿಡಲಾಗಿದ್ದು, ಈ ಸಿನಿಮಾದ ನಾಯಕರಾಗಿ ಶರಣ್ ನಟಿಸಿದ್ದರೆ, ಮೇಘನಾ ಗಾಂವ್ಕರ್, ಚಿಕ್ಕಣ್ಣ, ಅದಿತಿ ಪ್ರಭುದೇವ ಹಾಗೂ ಪ್ರಭು ಮುಂಡ್ಕರ್ ಚಿತ್ರದ ಪ್ರಮುಖಪಾತ್ರದಲ್ಲಿದ್ದಾರೆ. ಶರಣ್ ಹಾಗೂ ಚಿಕ್ಕಣ್ಣ ಕಾಂಬಿನೇಷನ್ ನಲ್ಲಿ ಬರುತ್ತಿರುವ ಚಿತ್ರ ಎಂದಮೇಲೆ ಪ್ರೇಕ್ಷಕರಿಗೆ ಮನೋರಂಜನೆಯ ರಸದೌತಣ ನೀಡುವುದಂತು ಖಚಿತ.

    ಸದಭಿರುಚಿ ಚಿತ್ರಗಳನ್ನು ಕನ್ನಡ ಚಿತ್ರರಂಗಕ್ಕೆ ನೀಡುತ್ತಾ ಬಂದಿರುವ, ತರುಣ್ ಸ್ಟುಡಿಯೋಸ್  ಲಾಂಛನದಲ್ಲಿ ಮಾನಸ ತರುಣ್ ಹಾಗೂ ತರುಣ್ ಶಿವಪ್ಪ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಇದು ಈ ಸಂಸ್ಥೆಯಿಂದ ನಿರ್ಮಾಣವಾಗಿರುವ ಐದನೇ ಚಿತ್ರ. “ಕರ್ವ” ಚಿತ್ರದ‌ ಮೂಲಕ ಕನ್ನಡಿಗರ ಮನಗೆದ್ದಿರುವ ನವನೀತ್, ಕಥೆ, ಚಿತ್ರಕಥೆ ಬರೆದು ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.

    ಹಾರರ್ ಕಾಮಿಡಿ ಕಥಾಹಂದರ ಹೊಂದಿರುವ ಈ ಚಿತ್ರದ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯವಾಗಿದ್ದು, ಬಿಡುಗಡೆಗೆ ಸಿದ್ದವಾಗುತ್ತಿದೆ. ಬೆಂಗಳೂರು, ಮೈಸೂರು, ಉತ್ತರಾಖಂಡ ಹಾಗೂ ಲಂಡನ್ ನಲ್ಲಿ ಚಿತ್ರೀಕರಣ ನಡೆದಿದೆ. ಇದನ್ನೂ ಓದಿ: ಭಾರತದಲ್ಲಿ 150 ಕೋಟಿಗೂ ಅಧಿಕ ಗಳಿಕೆ ಮಾಡಿದ ‘ಅವತಾರ್ 2’ ಸಿನಿಮಾ

    ಅನೂಪ್ ಕಟ್ಟುಕರನ್ ಮೊದಲ ಬಾರಿಗೆ ಈ ಚಿತ್ರದ ಮೂಲಕ ಛಾಯಾಗ್ರಾಹಕರಾಗಿದ್ದಾರೆ. ವೆಂಕಿ ಸಂಕಲನ, ರವಿವರ್ಮ ಸಾಹಸ ನಿರ್ದೇಶನ ಹಾಗೂ ಶಿವಕುಮಾರ್(ಕೆ.ಜಿ.ಎಫ್ ಖ್ಯಾತಿ) ಹಾಗೂ ಮೋಹನ್ ಬಿ ಕೆರೆ ಅವರ ಕಲಾ ನಿರ್ದೇಶನ “ಛೂ ಮಂತರ್” ಚಿತ್ರಕ್ಕಿದೆ.

    Live Tv
    [brid partner=56869869 player=32851 video=960834 autoplay=true]

  • ಬ್ಯೂಟಿಫುಲ್ ಹುಡುಗಿಯರ ನಡುವೆ ‘ಶಿವಾಜಿ ಸುರತ್ಕಲ್ 2’ ಸಿನಿಮಾ ಒಲವಿನ ಟೀಸರ್

    ಬ್ಯೂಟಿಫುಲ್ ಹುಡುಗಿಯರ ನಡುವೆ ‘ಶಿವಾಜಿ ಸುರತ್ಕಲ್ 2’ ಸಿನಿಮಾ ಒಲವಿನ ಟೀಸರ್

    ನ್ನಡ ಚಿತ್ರರಂಗದ ಸುರದ್ರೂಪಿ ಹಾಗೂ ಪ್ರತಿಭಾವಂತ ನಟ ರಮೇಶ್ ಅರವಿಂದ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಸಂತಸದ ಸಂದರ್ಭದಲ್ಲಿ ಅವರು ನಾಯಕರಾಗಿ ನಟಿಸಿರುವ “ಶಿವಾಜಿ ಸುರತ್ಕಲ್ 2” (Shivaji Suratkal 2 )ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಅಪಾರ ಅಭಿಮಾನಿಗಳ ಸಮ್ಮುಖದಲ್ಲಿ ಅದ್ದೂರಿಯಾಗಿ ಟೀಸರ್ (Teaser) ಬಿಡುಗಡೆ ಸಮಾರಂಭ ನಡೆಯಿತು. ಇದನ್ನೂ ಓದಿ:ಕಾಫಿನಾಡು ಚಂದು ಇನ್ಸ್ಟಾಗ್ರಾಂ ಅಕೌಂಟ್ ಹ್ಯಾಕ್ ಆಗಿದ್ದಕ್ಕೆ ಫ್ಯಾನ್ಸ್ ಬೇಸರ

    ಎರಡು ವರ್ಷಗಳ ಹಿಂದೆ ಬಿಡುಗಡೆಯಾದ ” ಶಿವಾಜಿ ಸುರತ್ಕಲ್” ಚಿತ್ರಕ್ಕೆ ಸಿಕ್ಕ ಪ್ರಶಂಸೆಯೇ ಭಾಗ 2 ಮಾಡಲು ಸ್ಪೂರ್ತಿ. ಥಿಯೇಟರ್ ನಲ್ಲಿ ನಮ್ಮ ಚಿತ್ರ ಚೆನ್ನಾಗಿ ಓಡುತ್ತಿರುವ ಸಂದರ್ಭದಲ್ಲೇ ಲಾಕ್ ಡೌನ್ ಆಯಿತು..ಆನಂತರದ ವಿಷಯ ಎಲ್ಲರಿಗೂ ಗೊತ್ತು. ಆಮೇಲೆ ರಮೇಶ್ ಅರವಿಂದ್ (Ramesh Aravind) ಅವರ ಜೊತೆಗೆ ಸಾಕಷ್ಟು ಚರ್ಚೆ ನಡೆಸಿದ ನಂತರ “ಶಿವಾಜಿ ಸುರತ್ಕಲ್ 2” ಚಿತ್ರಕ್ಕೆ ಚಾಲನೆ ದೊರೆಯಿತು.  ಎರಡನೇ ಭಾಗ ಮಾಡುವುದು ಅಷ್ಟು ಸುಲಭವಲ್ಲ. ಈಗ ಮೊದಲ ಹಾಗಲ್ಲ. ಎಲ್ಲರ ಬಳಿ ಮೊಬೈಲ್ ಇರುವುದರಿಂದ ಸಣ್ಣಸಣ್ಣ ವಿಷಯಗಳನ್ನು ಪ್ರೇಕ್ಷಕ ಗಮನಿಸುತ್ತಿರುತ್ತಾನೆ. ಈ ರೀತಿಯ ತಪ್ಪಾಗಿದೆ ಎಂದು ಆ ತಕ್ಷಣವೇ ತಿಳಿಸುತ್ತಾನೆ. ಅದನೆಲ್ಲಾ ಗಮನಿಸಿ ಚಿತ್ರ ಮಾಡುವ ಜವಾಬ್ದಾರಿ ನಿರ್ದೇಶಕನ ಮೇಲಿರುತ್ತದೆ. “ಶಿವಾಜಿ ಸುರತ್ಕಲ್ 2” ಕಥೆ ಸಹ ಚೆನ್ನಾಗಿದೆ. ಎಲ್ಲರಿಗೂ ಮೆಚ್ಚುಗೆಯಾಗಲಿದೆ. ರಮೇಶ್ ಅರವಿಂದ್ ಸರ್ ಹುಟ್ಟುಹಬ್ಬಕ್ಕೆ ಈ ಟೀಸರ್ ಬಿಡುಗಡೆ ಮಾಡಿದ್ದೀವಿ. ಇದು ನನ್ನೊಬ್ಬನ ಚಿತ್ರವಲ್ಲ. ತಂಡದ ಚಿತ್ರ ಎನ್ನುತ್ತಾರೆ ನಿರ್ದೇಶಕ ಆಕಾಶ್ ಶ್ರೀವತ್ಸ.

    “ಶಿವಾಜಿ ಸುರತ್ಕಲ್” ಸಿಕ್ಕ ಗೆಲುವಿನಿಂದ ಭಾಗ 2  ಮಾಡಲು ಮುಂದಾದ್ದೆವು. ಅದರಲ್ಲೂ ರಮೇಶ್ ಅರವಿಂದ್ ಅವರ ಸಹಕಾರ ಅಪಾರ ಎಂದ ನಿರ್ಮಾಪಕ ಅನೂಪ್ ಗೌಡ, ನಿರ್ದೇಶಕರು ಸೇರಿದಂತೆ ಎಲ್ಲಾ ತಂತ್ರಜ್ಞರಿಗೆ ಹಾಗೂ ಕಲಾವಿದರಿಗೆ  ಧನ್ಯವಾದ ತಿಳಿಸಿದರು. ನನ್ನ ನಿಮ್ಮ ಸ್ನೇಹಕ್ಕೆ ಮೂರು ದಶಕಗಳಾಗಿದೆ. ಈ ಮೂವತ್ತು ವರ್ಷಗಳಲ್ಲಿ ಸಾಕಷ್ಟು ಪಾತ್ರಗಳನ್ನು ಮಾಡಿದ್ದೇನೆ. ಆದರೆ ಒಂದೇ ಪಾತ್ರವನ್ನು ಎರಡನೇ ಬಾರಿ ಮಾಡುತ್ತಿರುವುದು “ಶಿವಾಜಿ ಸುರತ್ಕಲ್ 2” ಚಿತ್ರದಲ್ಲಿ ಮಾತ್ರ. ನನಗೆ ನಿರ್ದೇಶಕ ಆಕಾಶ್ ಶ್ರೀವತ್ಸ ಹದಿನೈದು ವರ್ಷಗಳಿಂದ ಪರಿಚಯ. “ಆಕ್ಸಿಡೆಂಟ್” ಚಿತ್ರದಲ್ಲಿ ನನ್ನೊಟ್ಟಿಗೆ ಕೆಲಸವನ್ನೂ ಮಾಡಿದ್ದಾರೆ. ಅದ್ಭುತ ನಿರ್ದೇಶಕ. ಒಳ್ಳೆಯ ತಂಡ. “ಶಿವಾಜಿ ಸುರತ್ಕಲ್ 2” ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು‌ ನಾಯಕ ರಮೇಶ್ ಅರವಿಂದ್.

    ನಾನು “ಶಿವಾಜಿ ಸುರತ್ಕಲ್” ಚಿತ್ರದಲ್ಲಿ ರಮೇಶ್ ಸರ್ ಪತ್ನಿ ಪಾತ್ರದಲ್ಲಿ ಅಭಿನಯಿಸಿದ್ದೇನೆ. ಹಾಗಾಗಿ ನಿರ್ದೇಶಕ ಆಕಾಶ್ ಶ್ರೀವತ್ಸ ಅವರಿಗೆ ಭಾಗ ಎರಡು, ಮೂರು ಹೀಗೆ ಮಾಡುತ್ತಿರಿ ಎಂದು ಹೇಳಿದ್ದೀನಿ ಎನ್ನುತ್ತಾರೆ  ನಟಿ ರಾಧಿಕಾ ನಾರಾಯಣ್ (Radhika Narayan). ನನಗೆ ಕೊರೋನ ನಂತರ ಇದು ಮೊದಲ ಪತ್ರಿಕಾಗೋಷ್ಠಿ. ರಮೇಶ್ ಸರ್ ಜೊತೆ ಅಭಿನಯ ಮಾಡುವುದು ನನ್ನ ಬಹು ದಿನಗಳ ಕನಸು. ಅದು ಈಗ ಈಡೇರಿದೆ. ಚಿತ್ರದಲ್ಲಿ ಪೊಲೀಸ್ ಅಧಿಕಾರಿಯಾಗಿ ಅಭಿನಯಿಸಿದ್ದೇನೆ ಎಂದರು ನಟಿ ಮೇಫನ ಗಾಂವ್ಕರ್ (Meghana Gaonkar). ಇದೇ ಸಂದರ್ಭದಲ್ಲಿ ಚಿತ್ರತಂಡದಿಂದ ರಮೇಶ್ ಅರವಿಂದ್ ಅವರ ಹುಟ್ಟುಹಬ್ಬದ ಆಚರಣೆ ಸಹ ನಡೆಯಿತು.

    ಅಂಜನಾದ್ರಿ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ರೇಖಾ ಕೆ.ಎನ್ ಹಾಗೂ ಅನೂಪ್ ಗೌಡ ನಿರ್ಮಿಸಿದ್ದಾರೆ. ಜ್ಯೂಡಾ ಸ್ಯಾಂಡಿ ಸಂಗೀತ ನೀಡಿದ್ದಾರೆ. ದರ್ಶನ್ – ಗುರುಪ್ರಸಾದ್ ಛಾಯಾಗ್ರಹಣ ಹಾಗೂ ಆಕಾಶ್ ಶ್ರೀವತ್ಸ (Akash Srivatsa)ಸಂಕಲನ ಈ ಚಿತ್ರಕ್ಕಿದೆ. ರಮೇಶ್ ಅರವಿಂದ್, ರಾಧಿಕಾ ನಾರಾಯಣ್, ಮೇಘನಾ ಗಾಂವ್ಕರ್, ನಾಜರ್, ಆರಾಧ್ಯ, ರಮೇಶ್ ಭಟ್, ಶ್ರೀನಿವಾಸ್ ಪ್ರಭು, ಶೋಭ್ ರಾಜ್, ವಿದ್ಯಾಮೂರ್ತಿ, ವೀಣಾ ಸುಂದರ್, ರಘು ರಮಣಕೊಪ್ಪ, ಮಧುರ ಗೌಡ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮಧ್ಯರಾತ್ರಿಯಲ್ಲಿ ಸಿಕ್ಕ ರಿಯಲ್ ಲೈಫ್ ಹೀರೋನನ್ನು ಪರಿಚಯಿಸಿದ ನಟಿ ಮೇಘನಾ

    ಮಧ್ಯರಾತ್ರಿಯಲ್ಲಿ ಸಿಕ್ಕ ರಿಯಲ್ ಲೈಫ್ ಹೀರೋನನ್ನು ಪರಿಚಯಿಸಿದ ನಟಿ ಮೇಘನಾ

    ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಮೇಘನಾ ಗಾಂವ್ಕರ್ ಮಧ್ಯರಾತ್ರಿ ಸಿಕ್ಕ ತಮ್ಮ ರಿಯಲ್ ಲೈಫ್ ಹೀರೋನನ್ನು ಪರಿಚಯಿಸಿದ್ದಾರೆ. ಮೇಘನಾ ಆ ವ್ಯಕ್ತಿಯ ಫೋಟೋವನ್ನು ತಮ್ಮ ಫೇಸ್‍ಬುಕ್‍ನಲ್ಲಿ ಹಂಚಿಕೊಂಡು ನಿಜ ಜೀವನದ ಹೀರೋ ಎಂದು ಬರೆದುಕೊಂಡಿದ್ದಾರೆ.

    ಪೋಸ್ಟ್ ನಲ್ಲಿ ಏನಿದೆ?
    ಅಣ್ಣನನ್ನು ಮೀಟ್ ಮಾಡಿ. (ಇದು ಅವರ ನಿಜವಾದ ಹೆಸರು). ಅಣ್ಣ ನಿಜ ಜೀವನದ ಹೀರೋ.

    ಒಂದು ರಾತ್ರಿ ನಾನು ನನ್ನ ಕಾರನ್ನು ಪಾರ್ಕ್ ಮಾಡಿ ಚಿತ್ರ ನೋಡಲು ಥಿಯೇಟರ್ ಗೆ ಹೋಗಿದೆ. ನಾನು ಹಿಂತಿರುಗಿ ಬಂದಾಗ ತುಂಬ ಕತ್ತಲಾಗಿತ್ತು. ಅಲ್ಲದೆ ಅಣ್ಣ ನನ್ನ ಕಾರಿನ ಬಳಿ ನನಗಾಗಿ ಕಾಯುತ್ತಿದ್ದರು. ನಾನು ಪಾರ್ಕಿಂಗ್ ಶುಲ್ಕ ಕಟ್ಟಿದ್ದೇನೆ ಆದರೂ ಇವರು ಯಾಕೆ ಇಲ್ಲಿ ನಿಂತಿದ್ದಾರೆ ಎಂದು ಯೋಚಿಸುತ್ತಿದ್ದೆ. ಬಳಿಕ ನಾನು ನನ್ನ ಕಾರಿನ ಕಿಟಕಿಯನ್ನು ಅರ್ಧ ತೆರೆದಿರುವುದನ್ನು ಗಮನಿಸಿದೆ. ನಾನು ಕಾರಿನ ಕಿಟಕಿ ಅರ್ಧ ತೆರೆದಿದ್ದಾಗ ಕೆಲವರು ಆ ಸಮಯವನ್ನು ಯಾರೂ ಲಾಭ ಪಡೆಯಬಾರದು ಎಂದು ಈ ವ್ಯಕ್ತಿ ನನಗಾಗಿ ನನ್ನ ಕಾರಿನ ಬಳಿ ಸುಮಾರು 3-4 ಗಂಟೆಯವರೆಗೂ ಕಾಯುತ್ತಿದ್ದರು.

    ನಾನು ಈ ವ್ಯಕ್ತಿಗೆ ಧನ್ಯವಾದ ತಿಳಿಸಿ ಅವರು ಮಾಡಿದ ಕೆಲಸಕ್ಕೆ ಹಣ ನೀಡಲು ಮುಂದಾದೆ. ಆದರೆ ಅವರು ಹಣ ತೆಗೆದುಕೊಳ್ಳಲು ನಿರಾಕರಿಸಿದರು. ನನ್ನ ದೇಶ ಇಂತಹ ವ್ಯಕ್ತಿಗಳಿಂದ ಕೂಡಿದೆ. ಇವರಲ್ಲಿ ಮಾನವಿಯತೆ, ಘನತೆ ಹಾಗೂ ಒಳ್ಳೆತನ ಇದೆ. ಈ ಘಟನೆ ನಡೆದು ಈಗ ಮೂರು ವರ್ಷವಾಗಿದೆ. ನಾನು ಈಗಲೂ ಆ ಸ್ಥಳಕ್ಕೆ ಹೋದಾಗ ಅದೇ ಜಾಗದಲ್ಲೇ ಕಾರು ಪಾರ್ಕ್ ಮಾಡುತ್ತೇನೆ. ಕಾರು ಪಾರ್ಕ್ ಮಾಡಿದ್ದಾಗ ಕಿಟಕಿ ಕ್ಲೋಸ್ ಇದೆಯಾ ಎಂಬುದನ್ನು ಚೆಕ್ ಮಾಡುತ್ತೇನೆ.

    ಇದು ಸಣ್ಣ ವಿಷಯ ಎಂದು ಎಲ್ಲರಿಗೂ ಅನಿಸುತ್ತದೆ. ಆದರೆ ಈ ವ್ಯಕ್ತಿಯ ಒಳ್ಳೆಯ ಹೃದಯ ನೋಡಿದರೆ, ಈ ಜಗತ್ತಿನಲ್ಲಿ ಏನೂ ಬಯಸದೇ ಒಳ್ಳೆಯ ಜನರು ಇದ್ದಾರೆ ಎಂದು ಅನಿಸುತ್ತದೆ. ನಾವಿಬ್ಬರು ಈಗ ಸ್ನೇಹಿತರಾಗಿದ್ದೇವೆ. ಇಬ್ಬರು ಚಹಾ ಕುಡಿಯಲು ಹೋಗುತ್ತೇವೆ ಹಾಗೂ ಪಾರ್ಕಿಂಗ್‍ಗಾಗಿ ಅಲ್ಲಿ ನಿಗದಿ ಪಡಿಸಿದ ಬೆಲೆಯನ್ನು ನಾನು ನೀಡುತ್ತೇನೆ. ನನಗೆ ಈ ವ್ಯಕ್ತಿ ಪರಿಚಯವಿದೆ ಎಂಬುದು ನನಗೆ ಹೆಮ್ಮೆ ವಿಷಯ.

    ಕಳೆದ ವಾರ ಆ ವ್ಯಕ್ತಿ ಜೊತೆ ಫೋಟೋ ತೆಗೆದುಕೊಳ್ಳೋಣ ಎಂದು ಕೇಳಿದೆ. ಆಗ ಅವರು ಸರಿ ಎಂದು ಹೇಳಿದರು. ನಾನು ಮೊದಲ ಬಾರಿಗೆ ಒಬ್ಬ ವ್ಯಕ್ತಿ ಜೊತೆ ಫೋಟೋ ಕೇಳಿದರೆ ಅದು ಇವರ ಜೊತೆಗೆ ಎಂದು ಮೇಘನಾ ತಮ್ಮ ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿದ್ದಾರೆ.

  • ಕಾಳಿದಾಸನ ಸಂಗಾತಿ ಮೇಘನಾ ಗಾಂವ್ಕರ್!

    ಕಾಳಿದಾಸನ ಸಂಗಾತಿ ಮೇಘನಾ ಗಾಂವ್ಕರ್!

    ಬೆಂಗಳೂರು: ನಟಿ ಮೇಘನಾ ಗಾಂವ್ಕರ್ ಎರಡು ವರ್ಷದಿಂದೀಚೆಗೆ ಚಿತ್ರರಂಗದಿಂದ ನಾಪತ್ತೆಯಾದಂತಿದ್ದರು. ಇದೀಗ ಈ ಸುದೀರ್ಘಾವಧಿಯ ನಂತರ ವಿಶಿಷ್ಟವಾದೊಂದು ಚಿತ್ರದ ಮೂಲಕ ಅವರು ವಾಪಾಸಾಗಿದ್ದಾರೆ. ಈ ಚಿತ್ರದಲ್ಲಿ ಇದೇ ಮೊದಲ ಬಾರಿಗೆ ಮೇಘನಾ ನವರಸ ನಾಯಕ ಜಗ್ಗೇಶ್ ಅವರಿಗೆ ನಾಯಕಿಯಾಗಿದ್ದಾರೆ!

    ಈ ಚಿತ್ರದ ಹೆಸರು ಕಾಳಿದಾಸ ಕನ್ನಡ ಮೇಷ್ಟ್ರು. ಇದನ್ನು ಖ್ಯಾತ ಗೀತ ಸಾಹಿತಿ ಕವಿರಾಜ್ ನಿರ್ದೇಶನ ಮಾಡಲಿದ್ದಾರೆ. ಬದುಕಿಗೆ ಹತ್ತಿರಾದ ಕಥೆಯೊಂದಕ್ಕೆ ಕವಿರಾಜ್ ಕಮರ್ಶಿಯಲ್ ಚೌಕಟ್ಟು ನೀಡಲು ಅಣಿಯಾಗಿದ್ದಾರೆ. ಈ ಚಿತ್ರಕ್ಕೆ ಮೇಘನಾ ಗಾಂವ್ಕರ್ ಅವರನ್ನು ನಾಯಕಿಯಾಗಿ ಆಯ್ಕೆ ಮಾಡಿದ್ದಾರೆ.

    ಈ ಹಿಂದೆ 8 ಎಂಎಂ ಚಿತ್ರದ ಮೂಲಕ ಜಗ್ಗೇಶ್ ಭಿನ್ನವಾದ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈ ಚಿತ್ರದಲ್ಲಿಯೂ ಕೂಡಾ ವಿಶೇಷವಾದ ಪಾತ್ರವನ್ನು ಕವಿರಾಜ್ ಸೃಷ್ಟಿ ಮಾಡಿದ್ದಾರಂತೆ. ಮದುವೆಯ ಮಮತೆಯ ಕರೆಯೋಲೆ ಚಿತ್ರದ ನಂತರ ಈ ಕಥೆ ರಚನೆಯಲ್ಲಿ ತೊಡಗಿಕೊಂಡಿದ್ದ ಕವಿರಾಜ್ ಇದೀಗ ಹೊಸಾ ಹುರುಪಿನೊಂದಿಗೆ ಮತ್ತೆ ಆಗಮಿಸಿದ್ದಾರೆ.

    ಮೇಘನಾ ಗಾಂವ್ಕರ್ ಕೂಡಾ ಎರಡು ವರ್ಷದಿಂದ ಯಾವ ಚಿತ್ರದಲ್ಲಿಯೂ ನಟಿಸಿರಲಿಲ್ಲ. ಅವರ ಪಾತ್ರವೂ ಈ ಚಿತ್ರದಲ್ಲಿ ವಿಶೇಷವಾಗಿದೆಯಂತೆ. ಈ ಮೂಲಕ ಮತ್ತೆ ವಾಪಾಸಾಗುತ್ತಿರೋದರ ಬಗ್ಗೆ ಮೇಘನಾ ಕೂಡಾ ಖುಷಿಗೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv