ಬೆಂಗಳೂರು: ಮೇಘನಾ ರಾಜ್ ಸರ್ಜಾಗೆ ಗಂಡು ಮಗು ಜನಿಸಿರುವುದು ಇಡೀ ಸ್ಯಾಂಡಲ್‍ವುಡ್‍ನಲ್ಲಿ ಸಂತಸವನ್ನುಂಟು ಮಾಡಿದ್ದು, ಈ ಕುರಿತು ನಟಿ ತಾರಾ ಅನುರಾಧಾ ಸಹ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಚಿರು ಮತ್ತೆ ಹುಟ್ಟಿಬರ್ತಾನೆ ಎಂದು ಚಿರು ಸಾವಿನ ದಿನವೇ ನಾನು ಹೇಳಿದ್ದೆ. ಇವತ್ತು ಆ ಮಾತು ನಿಜವಾಗಿದೆ. ಚಿರು ಇದ್ದಿದ್ದರೆ ಅವನ ಖುಷಿಯನ್ನು ಹೇಳೋದಕ್ಕೆ ಸಾಧ್ಯವೇ ಇರುತ್ತಿರಲಿಲ್ಲ. ಆ ಮಟ್ಟಿಗೆ ಸಂತಸ ಪಡುತ್ತಿದ್ದ ಎಂದರು.
ಮೇಘನಾ ಧೈರ್ಯವಂತೆ, ಚಿರು ಇಲ್ಲದ ದಿನಗಳು ಆಕೆಗೆ ಅದೆಷ್ಟು ಕಷ್ಟವಾಗಿತ್ತು ಎನ್ನುವುದನ್ನು ಹೇಳಲು ಸಾಧ್ಯವೇ ಇಲ್ಲ. ಈಗ ಮತ್ತೆ ಚಿರು ಬಂದಿದ್ದಾನೆ, ಮತ್ತೆ ಅವರ ಕುಟುಂಬದಲ್ಲಿ ನಗು ಬಂದಿದೆ. ನನಗೂ ತುಂಬಾ ಖುಷಿಯಾಗಿದೆ ಎಂದು ತಿಳಿಸಿದರು.
ಚಿರು ಸ್ನೇಹಿತ ಪನ್ನಗಾಭರಣ ಮಾತನಾಡಿ, ಚಿರು ಮತ್ತೆ ಹುಟ್ಟಿ ಬರುತ್ತಾನೆ ಎಂಬ ನಿರೀಕ್ಷೆ ಇತ್ತು. ವಿಶೇಷ ಎಂದರೆ ಚಿರಂಜೀವಿ ಹಾಗೂ ಮೇಘನಾ ನಿಶ್ಚಿತಾರ್ಥದ ದಿನವೇ ಮಗು ಹುಟ್ಟಿರುವುದು ತುಂಬಾನೇ ಸಂತೋಷ ಆಯಿತು. ಚಿರು ಮತ್ತೆ ನಮಗೆಲ್ಲ ಸಿಕ್ಕ ಎಂದು ಖುಷಿಯಾಯಿತು. ಈ ತಿಂಗಳಲ್ಲೇ ಚಿರು ಸಹ ಹುಟ್ಟಿದ್ದು, ಅವನು ಅಂದುಕೊಂಡತೆಯೇ ಎಲ್ಲ ನೆರವೇರಿದೆ. ಮಗು ಮೇಲೆ ಅವನು ಏನೆಲ್ಲ ಕನಸು ಇಟ್ಟುಕೊಂಡಿದ್ದ ಅದನ್ನೆಲ್ಲ ನಾವು ಈಡೇರಿಸುತ್ತೇವೆ ಎಂದು ಖುಷಿಪಟ್ಟಿದ್ದಾರೆ.
ಬೆಂಗಳೂರು: ತುಂಬಾ ಸಂತೋಷವಾಗುತ್ತಿದೆ. ನನ್ನ ಮಗನನ್ನೇ ನೋಡಿದಂತೆ ಆಯ್ತು. ಈ ತಿಂಗಳಲ್ಲಿ ಹುಟ್ಟಿರೋದು ಖುಷಿಕೊಟ್ಟಿದೆ. ಚಿರು, ಧ್ರುವ ಸಹ ಇದೇ ತಿಂಗಳಲ್ಲಿ ಹುಟ್ಟಿದ್ದಾರೆ. ಇದೀಗ ಚಿರು ಮಗು ಸಹ ಅಕ್ಟೋಬರ್ ತಿಂಗಳಲ್ಲೇ ಜನನವಾಗಿದೆ ಎಂದು ಚಿರು ಸರ್ಜಾ ಅಜ್ಜಿ ಲಕ್ಷ್ಮಿ ಅಮ್ಮ ತಮ್ಮ ಮರಿ ಮೊಮ್ಮಗನ ಕುರಿತು ಸಂತಸ ಹಂಚಿಕೊಂಡಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿರು, ಧ್ರುವ ಹುಟ್ಟಿದ ತಿಂಗಳಲ್ಲೇ ಮಗು ಜನಿಸಿರುವುದು ತುಂಬಾ ಸಂತಸವನ್ನುಂಟು ಮಾಡಿದೆ. ಚಿರುವನ್ನೇ ನೋಡಿದಂತೆ ಆಗುತ್ತದೆ ಎಂದು ಅಮ್ಮಾಜಿ ಮಗುವಿನ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.
ಮೇಘನಾ ಚಿಕ್ಕಮ್ಮನ ಮಗ ತೇಜ್ ಸಹ ಈ ಸಂತಸ ಸುದ್ದಿ ಕುರಿತು ಮಾತನಾಡಿದ್ದು, ಇದುವರೆಗೂ ಯಾರನ್ನೂ ಈ ರೀತಿ ಸ್ವಾಗತಿಸಿಲ್ಲ. ಅದೇ ರೀತಿ ನಮ್ಮ ಮನೆಗೆ ಜೂನಿಯರ್ ಚಿರು ಎಂಟ್ರಿ ಕೊಟ್ಟಿದ್ದಾನೆ. ನನ್ನ ತಂಗಿ ತುಂಬಾ ಖುಷಿಯಾಗಿದ್ದಾಳೆ. ಮಗು ತುಂಬಾ ಕ್ಯೂಟ್ ಆಗಿದೆ. ಕಿತ್ತೂರು ರಾಣಿ ಚೆನ್ನಮ್ಮನ ಧೈರ್ಯ ನನ್ನ ತಂಗಿಗಿದೆ. ಕಷ್ಟಗಳನ್ನು ಧೈರ್ಯವಾಗಿ ನಿಭಾಯಿಸಿದ್ದಾಳೆ ಎಂದು ಸಂತಸ ಹಂಚಿಕೊಂಡರು.
ಆಪರೇಷನ್ ಥಿಯೇಟರ್ ನಲ್ಲಿತ್ತು ಚಿರು ಫೋಟೋ
ಮಗು ಹುಟ್ಟಿದ ತಕ್ಷಣ ಅಪ್ಪನ ಫೋಟೋ ನೋಡಬೇಕು. ಮೊದಲು ಚಿರುಗೆ ಮಗುವನ್ನು ತೋರಿಸಬೇಕು ಎಂಬುದು ಮೇಘನಾ ಆಸೆ ಆಗಿತ್ತು. ಹೀಗಾಗಿ ಚಿರಂಜೀವಿ ಫೋಟೋವನ್ನು ಆಸ್ಪತ್ರೆಯ ಕೊಠಡಿಯಲ್ಲಿ ಇರಿಸಲಾಗಿತ್ತು. ಮೇಘನಾ ಆಸೆಯಂತೆ ಮಗು ಹುಟ್ಟಿದ ತಕ್ಷಣ ಚಿರು ಫೋಟೋಗೆ ತೋರಿಸಲಾಗಿದೆ.
ಬೆಂಗಳೂರು: ಅತ್ತಿಗೆಗೆ ಗಂಡು ಮಗು ಜನಿಸಿದ್ದು ತುಂಬಾ ಸಂತೋಷವಾಗಿದೆ. ಮಗುವನ್ನು ಮೊದಲು ಕೈಯಲ್ಲಿ ಹಿಡಿದಾಗ ನಮ್ಮಣ್ಣನ ಜೊತೆಗೆ ಇದ್ದ ಫೀಲ್ ಆಯ್ತು. ತುಂಬಾ ಖುಷಿಯಾಯಿತು ಎಂದು ನಟ ಧ್ರುವ ಸರ್ಜಾ ಜೂನಿಯರ್ ಚಿರಂಜೀವಿ ಸರ್ಜಾ ಕುರಿತು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಮೇಘನಾ ಗಂಡು ಮಗುವಿಗೆ ಜನ್ಮ ನೀಡಿದ ವಿಚಾರ ತಿಳಿದು ಕೂಡಲೇ ಧ್ರುವಾ ಸರ್ಜಾ ಪತ್ನಿ ಪ್ರೇರಣಾ ಜೊತೆ ಖಾಸಗಿ ಆಸ್ಪತ್ರೆಗೆ ಆಗಮಿಸಿದರು. ಮೇಘನಾ ಇದ್ದ ಕೊಠಡಿಗೆ ಆಗಮಿಸಿ ಮಗುವನ್ನು ಎತ್ತಿ ಸಂತಸ ಪಟ್ಟರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಣ್ಣನಿಗೆ ಅತ್ತಿಗೆಗೆ ಗಂಡು ಮಗುವಾಗಿದೆ. ಅತ್ತಿಗೆ ಸಹ ಆರಾಮವಾಗಿದ್ದಾರೆ. ಎಲ್ಲರೂ ಅವರಿಗೆ ಆಶೀರ್ವಾದ ಮಾಡಬೇಕೆಂದು ಕರ್ನಾಟಕದ ಜನತೆಯಲ್ಲಿ ಕೇಳಿಕೊಳ್ಳುತ್ತೇನೆ. ಖುಷಿ ಹೆಚ್ಚಾಗಿದ್ದರಿಂದ ತುಂಬಾ ರೋಮಾಂಚನವಾಗಿತ್ತು. ಹೀಗಾಗಿ ಮಗುವನ್ನು ಕೈಯಲ್ಲಿ ಹಿಡಿದ ತಕ್ಷಣದ ಅನುಭವನ್ನು ಅಂದಾಜಿಸಲು ಸಾಧ್ಯವಾಗಲಿಲ್ಲ. ಆ ಫೀಲ್ ಗೊತ್ತಾಗಲಿಲ್ಲ ಎಂದು ಮಗುವನ್ನು ಮೊದಲು ಕೈಯಲ್ಲಿ ಹಿಡಿದಾಗಿನ ಅನುಭವವನ್ನು ಹಂಚಿಕೊಂಡರು.
ಬೆಳ್ಳಿ ತೊಟ್ಟಿಲು ಖರೀದಿಸಿರುವುದು ಯಾರಿಗೂ ಗೊತ್ತಾಗಬಾರದು ಎಂದುಕೊಂಡಿದೆ. ಆದರೆ ಮಾಧ್ಯಮಗಳ ಮೂಲಕ ಬಹಿರಂಗವಾಯಿತು. ಮಗುವನ್ನು ಮೊದಲು ಕೈಯಲ್ಲಿ ಹಿಡಿದಾಗ ನಮ್ಮಣ್ಣನ ಜೊತೆಗೆ ಇದ್ದ ಫೀಲ್ ಆಯ್ತು. ಅಲ್ಲದೆ ಖುಷಿಯಾಯಿತು ಎಂದರು ಸಂತಸ ವ್ಯಕ್ತಪಡಿಸಿದರು.
ನಾನು ಅಣ್ಣನಿಗೆ ರೇಗಿಸುತ್ತಿದ್ದೆ. ಮಕ್ಕಳಾಗುತ್ತವೆ ಎಲ್ಲಾ ಓಕೆ, ನಿನ್ನನ್ನು ಪೇರೆಂಟ್ಸ್ ಮೀಟಿಂಗ್ ಕರೆಯುತ್ತಾರಲ್ಲ. ಶಾಲೆಯಲ್ಲಿ ನಿನ್ನ ಮೇಲೆ ಹೆಚ್ಚು ದೂರುಗಳಿದ್ದವು. ಇನ್ನು ನಿನ್ನ ಮಕ್ಕಳದು ಬೇಜಾನ್ ಇರುತ್ತೆ ಮಚಾ ಎಂದಿದ್ದೆ. ಅವನು ನನಗೆ ಮಗಾನೇ ಆಗೋದು. ಅವನದ್ದು ಸಹ ಶಾಲೆಯಲ್ಲಿ ಬೇಜಾನ್ ದೂರುಗಳಿರುತ್ತವೆ ಎಂದು ಹೇಳಿದ್ದ. ಹಿಂದೆ ನಾವಿಬ್ಬರು ಮಾತನಾಡಿದ ವಿಚಾರ ಈ ಸಂದರ್ಭದಲ್ಲಿ ನೆನಪಾಗುತ್ತಿದೆ. ಮಗುವಿಗೆ ಹೆಸರಿಡುವ ಕುರಿತು ಇನ್ನೂ ಯಾವುದೇ ಮಾತುಕತೆ ನಡೆದಿಲ್ಲ. ಹೆಚ್ಚಿನ ಮಾಹಿತಿಯನ್ನು ಮುಂದಿನ ದಿನಗಳಲ್ಲಿ ಹಂಚಿಕೊಳ್ಳುತ್ತೇನೆ ಎಂದು ಹೇಳಿದರು.
ಬೆಂಗಳೂರು: ಚಿರಂಜೀವಿ ಸಂರ್ಜಾ ಪತ್ನಿ, ನಟಿ ಮೇಘನಾ ರಾಜ್ ಅವರಿಗೆ ಹೆರಿಗೆಯಾಗಿದ್ದು, ಗಂಡು ಮಗುವಿಗೆ ಜನ್ಮ ನೀಡಿಸಿದ್ದಾರೆ. ಇದರಿಂದಾಗಿ ಸರ್ಜಾ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ನಿಶ್ಚಿತಾರ್ಥದ ದಿನವೇ ಮಗುವಿಗೆ ಜನ್ಮ ನೀಡಿರುವುದು ಇನ್ನೂ ವಿಶೇಷವಾಗಿದೆ.
ಜೂನಿಯರ್ ಚಿರು ಕುರಿತು ಅಕ್ಟೋಬರ್ 16ರಂದು ಧ್ರುವ ಸರ್ಜಾ ವಿಡಿಯೋ ಮಾಡುವ ವೆಲ್ ಕಮ್ ಹೇಳಿದ್ದರು. ಅವರ ನಿರೀಕ್ಷೆಯಂತೆ ಚಿರಂಜೀವಿ ಸರ್ಜಾ ಪತ್ನಿ ಮೇಘನಾ ರಾಜ್ ಗಂಡು ಮಗುವಿಗೆ ಜನ್ಮ ನೀಡಿದ್ದು, ಈ ಮೂಲಕ ಜೂನಿಯರ್ ಚಿರು ಆಗಮಿಸಿದಂತಾಗಿದೆ. ಇನ್ನೂ ವಿಶೇಷ ಎಂಬಂತೆ ಚಿರು, ಮೆಘನಾ ನಿಶ್ಚಿತಾರ್ಥದ ದಿನವೇ ಮರಿ ಚಿರು ಆಗಮನ ಸರ್ಜಾ ಕುಟುಂಬಸ್ಥರಲ್ಲಿ ತುಂಬಾ ಸಂತಸವನ್ನುಂಟು ಮಾಡಿದೆ. ಕುಟುಂಬ ಎಲ್ಲ ಸದಸ್ಯರು ಸಂಭ್ರಮಿಸುತ್ತಿದ್ದಾರೆ.
ಚಿರಂಜೀವಿ ಸರ್ಜಾ ಜೂನ್ 7 ರಂದು ಹೃದಯಾಘಾತವಾಗಿ ವಿಧಿವಶರಾಗಿದ್ದಾರೆ. ಅವರು ಸಾವನ್ನಪ್ಪಿದ ದಿನವೇ ಮೇಘನಾ ರಾಜ್ ಸರ್ಜಾ ಗರ್ಭಿಣಿಯಾಗಿರುವ ಕುರಿತ ಸುದ್ದಿ ಹೊರ ಬಿದ್ದಿತ್ತು. ಅದಾದ ಬಳಿಕ ಅವರು ಮನೆಯಲ್ಲೇ ಕಾಲ ಕಳೆಯುವ ಮೂಲಕ ಕಾಳಜಿ ವಹಿಸಿದ್ದರು. ಈ ವೇಳೆ ಸ್ಯಾಂಡಲ್‍ವುಡ್‍ನ ಹಲವು ನಟ, ನಟಿಯರು ಗಣ್ಯರು ಹಾಗೂ ಸ್ನೇಹಿತರು ಮೇಘನಾ ಅವರನ್ನು ಭೇಟಿ ನೀಡಿ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದ್ದರು. ಇದೀಗ ಮೇಘನಾ ಅವರಿಗೆ ಮಗು ಹುಟ್ಟಿರುವುದರಿಂದ ಇಡೀ ಸ್ಯಾಂಡಲ್‍ವುಡ್‍ನಲ್ಲೇ ಸಂತಸ ಮನೆ ಮಾಡಿದೆ.
ಈ ಹಿಂದೆ ನಟ ಧ್ರುವ ಸರ್ಜಾ ವಿಡಿಯೋ ಮೂಲಕ ಈ ಬಗ್ಗೆ ಸುಳಿವು ನೀಡಿದ್ದರು. ಜೂನಿಯರ್ ಚಿರು ಆಗಮನದ ಕುರಿತು ತಿಳಿಸಿ, ಸ್ವಾಗತಕ್ಕಾಗಿ ವಿಡಿಯೋವನ್ನು ಸಹ ಮಾಡಿದ್ದರು. ವಿಡಿಯೋದಲ್ಲಿ ಸರ್ಜಾ ಕುಟುಂಬದ ವಿವಿಧ ಹಿರಿಯರು ಹಾಗೂ ಗಣ್ಯರನ್ನು ಸಹ ತೋರಿಸಲಾಗಿತ್ತು. ಹ್ಯಾಪಿ ವೆಲ್ ಕಮ್ ಚಿರು ಎಂದು ಅರ್ಜುನ್ ಸರ್ಜಾ ಸಹ ಸ್ವಾಗತಿಸಿದ್ದರು. ಈ ವೀಡಿಯೋ ಕುರಿತು ಸಾಕಷ್ಟು ಚರ್ಚೆ ಸಹ ನಡೆದಿತ್ತು.
ಅಕ್ಟೋಬರ್ 17 ಚಿರು ಹುಟ್ಟುಬ್ಬದ ದಿನವಾಗಿದ್ದು, ಇದೇ ದಿನ ಮೇಘನಾ ಜೂನಿಯರ್ ಚಿರುಗೆ ಜನ್ಮ ನೀಡಲಿದ್ದಾರಾ ಎಂಬ ಸುದ್ದಿ ಧ್ರುವ ಹಂಚಿಕೊಂಡ ವಿಡಿಯೋ ಬಳಿಕ ಹರಿದಾಡಿತ್ತು. ವಿಡಿಯೋ ಪೋಸ್ಟ್ ಮಾಡಿ ಸಾಲುಗಳನ್ನು ಬರೆದಿದ್ದ ಧ್ರುವ, ಹ್ಯಾಪಿ ಬರ್ತ್ ಡೇ ಚಿರು ಎಂದು ಹಾರ್ಟ್ ಸಿಂಬಲ್ ಹಾಕಿದ್ದರು. ಮೈ ಲವ್ ಫಾರ್ ಎವರ್, ಜೂನಿಯರ್ ಚಿರು ಕಮಿಂಗ್ ಸೂನ್ ಎಂದು ಬರೆದು ತೋಳುಗಳ ಎಮೋಜಿ ಹಾಕಿದ್ದರು. ಈ ಪೋಸ್ಟ್ ನ್ನು ಸರ್ಜಾ ಕುಟುಂಬದ ಬಹುತೇಕರಿಗೆ ಟ್ಯಾಗ್ ಮಾಡಲಾಗಿತ್ತು. ಕೊನೆಗೆ ಜೈ ಹನುಮಾನ್ ಎಂದಿದ್ದರು.
https://www.youtube.com/watch?v=tQSph0Iav0A
ಅಕ್ಟೋಬರ್ 4ರಂದು ಮೇಘನಾ ರಾಜ್ ಅವರ ಸೀಮಂತ ಶಾಸ್ತ್ರ ನೆರವೇರಿದೆ. ಮನೆಯಲ್ಲಿಯೇ ಸರಳವಾಗಿ ಸೀಮಂತ ಕಾರ್ಯಕ್ರಮವನ್ನು ಮಾಡಲಾಗಿದೆ. ಕುಟುಂಬದವರು ಮತ್ತು ಕೆಲ ಆಪ್ತರು ಮಾತ್ರ ಸೀಮಂತ ಶಾಸ್ತ್ರಕ್ಕೆ ಆಗಮಿಸಿದ್ದರು. ಜೊತೆಗೆ ಚಿರು ಇಲ್ಲ ಎಂಬ ನೋವು ಮೇಘನಾಗೆ ಕಾಡದಿರಲಿ ಎಂದು ಚಿರು ಅವರ ದೊಡ್ಡ ಫೋಟೋವನ್ನು ಪಕ್ಕದಲ್ಲೇ ಇಟ್ಟು ಸೀಮಂತ ಮಾಡಿದ್ದು ವಿಶೇಷವಾಗಿತ್ತು.
ಬೆಂಗಳೂರು: ನಟ ಚಿರಂಜೀವಿ ಸರ್ಜಾ ಸಾವನ್ನಪ್ಪಿದ ಬಳಿಕ ಸರ್ಜಾ ಕುಟುಂಬದವರಿಗೆ ಇದು ಮೊದಲನೇ ಹುಟ್ಟುಹಬ್ಬವಾಗಿದ್ದು, ಅವರ ನೆನಪಿನಲ್ಲೇ 36ನೇ ಹುಟ್ಟುಹಬ್ಬ ಆಚರಿಸುತ್ತಿದ್ದಾರೆ. ಪತ್ನಿ ಮೇಘನಾ ರಾಜ್ ಸ್ಪೆಷಲ್ ವಿಡಿಯೋ ಹಂಚಿಕೊಂಡು ವಿಶ್ ಮಾಡಿದರೆ, ಧ್ರುವ ಚಿಕ್ಕ ವಯಸ್ಸಿನಲ್ಲಿ ಅಣ್ಣನೊಂದಿಗೆ ಕಾಲ ಕಳೆದ ಚಿತ್ರಗಳನ್ನು ಹಂಚಿಕೊಂಡು ಶುಭಾಶಯ ತಿಳಿಸಿದ್ದಾರೆ.
ಚಿಕ್ಕ ವಯಸ್ಸಿನಲ್ಲಿ ಅಣ್ಣನೊಂದಿಗೆ ಇದ್ದ ಫೋಟೋಗಳನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಸ್ಟೇಟಸ್ ಹಾಕಿಕೊಂಡು ಧ್ರುವ ಸರ್ಜಾ ಅಣ್ಣನ ಹುಟ್ಟುಹಬ್ಬಕ್ಕೆ ಶುಭ ಕೋರಿದ್ದಾರೆ. ಹ್ಯಾಪಿ ಬರ್ಥ್ ಡೇ ಲವ್ ಯು ಫಾರ್ ಎವರ್ ಎಂದು ಬರೆದುಕೊಂಡಿದ್ದಾರೆ. ಚಿಕ್ಕ ವಯಸ್ಸಿನ ಮೂರು ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಎರಡನೇ ಸ್ಟೇಟಸ್‍ನಲ್ಲಿ 3 ಫೋಟೋಗಳನ್ನು ಸೇರಿಸಿ ಸಣ್ಣವರಿದ್ದಾಗಿನ ಹಾಗೂ ಹಳೆಯ, ಇನ್ನೊಂದು ಇತ್ತೀಚಿನ ಫೋಟೋ ಪೋಸ್ಟ್ ಮಾಡಿದ್ದಾರೆ.
ಮತ್ತೊಂದು ಚಿರಂಜೀವಿ ಸರ್ಜಾ ಅವರ ರಾಜಮಾರ್ತಾಂಡ ಸಿನಿಮಾದ ಟೈಟಲ್ ಟ್ರ್ಯಾಕ್ ಹಂಚಿಕೊಂಡಿದ್ದಾರೆ. ಈ ಮೂಲಕ ಅಣ್ಣನಿಗೆ ವಿಶೇಷವಾಗಿ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. ನಿನ್ನೆಯೂ ವಿಡಿಯೋ ಪೋಸ್ಟ್ ಮಾಡಿದ್ದ ಧ್ರುವ ಜೂನಿಯರ್ ಚಿರು ಕಮಿಂಗ್ ಸೂನ್ ಎಂದು ಹೇಳಿದ್ದರು. ಈ ಮೂಲಕ ಅವರ ಹುಟ್ಟುಹಬ್ಬದಂತೆ ಜೂನಿಯರ್ ಚಿರು ಬರಲಿದ್ದಾರೆ ಎಂಬ ಸುಳಿವು ನೀಡಿದ್ದರು.
ಚಿರು ಪತ್ನಿ ಮೆಘನಾ ರಾಜ್ ಸಹ ಫೋಟೋ ಹಂಚಿಕೊಂಡು ಸಾಲುಗಳನ್ನು ಬರೆದಿದ್ದು, ಹ್ಯಾಪಿ ಬರ್ತ್ ಡೇ ಮೈ ವಲ್ರ್ಡ್ ಐ ಲವ್ ಯು ಫಾರ್ ಎವರ್ ಆ್ಯಂಡ್ ಆಲ್‍ವೇಸ್ ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ಭಾವನಾತ್ಮಕವಾಗಿ ಶುಭಾಶಯ ಕೋರಿದ್ದಾರೆ.
ನಿನ್ನೆ ವಿಡಿಯೋವನ್ನು ಸಹ ಮೇಘನಾ ಹಂಚಿಕೊಂಡಿದ್ದರು. ನಿನ್ನ ತಂದೆ ಸದಾ ಸಂಭ್ರಮ ನೀಡುವವರು ಪುಟಾಣಿ ಎಂದು ಬರೆದುಕೊಂಡಿದ್ದರು. ಇದಕ್ಕೂ ಮೊದಲು ಜೂ. ಚಿರುವಿಗೆ ಸ್ವಾಗತ ಕೋರಿ ಕುಟುಂಬಸ್ಥರು ಮಾಡಿರುವ ವೀಡಿಯೋವನ್ನು ಕೂಡ ಮೇಘನಾ ಹಾಗೂ ಧ್ರುವ ಸರ್ಜಾ ಶೇರ್ ಮಾಡಿಕೊಂಡಿದ್ದರು. ಈ ಕುರಿತು ಸಾಕಷ್ಟು ಚರ್ಚೆ ಸಹ ನಡೆದಿತ್ತು.
ಚಿರು ಹುಟ್ಟುಹಬ್ಬದ ವಿಶೇಷವಾಗಿ ಕುಟುಂಬಸ್ಥರು ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ನೆಲಗುಳಿ ಗ್ರಾಮದ ಬೃಂದಾವನ ಫಾರ್ಮ್ ಹೌಸ್ ನಲ್ಲಿ ಕುಟುಂಬಸ್ಥರು ಚಿರು ಸಮಾಧಿಗೆ ಪೂಜೆ ಸಲ್ಲಿಸುತ್ತಿದ್ದಾರೆ. ಚಿರಂಜೀವಿ ಸಮಾಧಿ ಬಳಿ ಧ್ರುವ ಸರ್ಜಾ ಅಜ್ಜಿ ಲಕ್ಷ್ಮಿ ದೇವಿ ಆಗಮಿಸಿ, ಮೊಮ್ಮಗನ ಸ್ಮಾರಕಕ್ಕೆ ಹೂವು ಹಾಕಿದ್ದಾರೆ.
ಸಮಾಧಿ ಬಳಿ ಪೂಜೆ ಹಾಗೂ ಅನ್ನದಾನ ಕಾರ್ಯಕ್ರಮ ನಡೆಸಲಿದ್ದಾರೆ. ಇನ್ನು ನೋವಿನಲ್ಲೇ ಖುಷಿಯನ್ನ ಕೂಡ ಬರಮಾಡಿಕೊಳ್ಳಲು ಸರ್ಜಾ ಫ್ಯಾಮಿಲಿ ಸಜ್ಜಾಗಿದೆ. ಚಿರು ಬರ್ತ್ ಡೇಗೆ ರಾಜಮಾರ್ತಾಂಡ ಚಿತ್ರತಂಡ ಗಿಫ್ಟ್ ನೀಡಿದೆ. ಹಿರೋ ಇಂಟ್ರೊಡಕ್ಷನ್ ಸಾಂಗ್ ರಿಲೀಸ್ ಆಗಿದೆ. ಜೊತೆಗೆ ಕ್ಷತ್ರಿಯ ಚಿತ್ರ ಟೀಸರ್ ಕೂಡ ಇಂದೇ ಬಿಡುಗಡೆಯಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಚಿರಂಜೀವಿ ಸರ್ಜಾ(39) ಅವರು ಜೂನ್ 7ರಂದು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಚಿರಂಜೀವಿ ಸರ್ಜಾ ಅವರಿಗೆ ಶನಿವಾರ ರಾತ್ರಿಯಿಂದ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಈ ಹಿನ್ನೆಲೆ ಭಾನುವಾರ ಮಧ್ಯಾಹ್ನ 3:30ರ ಸುಮಾರಿಗೆ ಅಶೋಕಾ ಪಿಲ್ಲರ್ ಬಳಿ ಇರುವ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.
ಬೆಂಗಳೂರು: ನಟ ದಿವಂಗತ ಚಿರಂಜೀವಿ ಸರ್ಜಾ ಪತ್ನಿ ಮೇಘನಾ ರಾಜ್ ಸರ್ಜಾ ತುಂಬು ಗರ್ಭಿಣಿ ಎಂಬುದು ತಿಳಿದಿರುವ ವಿಚಾರ, ಇನ್ನೇನು ಕೆಲವೇ ದಿನಗಳಲ್ಲಿ ಜೂನಿಯರ್ ಚಿರುಗೆ ಜನ್ಮವನ್ನು ಸಹ ನೀಡಲಿದ್ದಾರೆ. ಆದರೆ ಇದೇ ಸಂದರ್ಭದಲ್ಲಿ ಮತ್ತೊಂದು ಸರ್ಪ್ರೈಸ್ ಸಿಕ್ಕಿದ್ದು, ಚಿರು ಹುಟ್ಟಿದ ದಿನವೇ ಜೂನಿಯರ್ ಚಿರುವಿನ ಆಗಮನವಾಗಲಿದೆ ಎಂಬ ಕುರಿತು ಸುಳಿವು ಸಿಕ್ಕಿದೆ.
ನಟ ಧ್ರುವ ಸರ್ಜಾ ವಿಡಿಯೋ ಮೂಲಕ ಈ ಬಗ್ಗೆ ಸುಳಿವು ನೀಡಿದ್ದು, ಜೂನಿಯರ್ ಚಿರು ಆಗಮನದ ಕುರಿತು ತಿಳಿಸಿದ್ದು, ಸ್ವಾಗತಕ್ಕಾಗಿ ವಿಡಿಯೋವನ್ನು ಸಹ ಮಾಡಿದ್ದಾರೆ. ಇದರಲ್ಲಿ ಸರ್ಜಾ ಕುಟುಂಬದ ವಿವಿಧ ಹಿರಿಯರು ಹಾಗೂ ಗಣ್ಯರನ್ನು ಸಹ ತೋರಿಸಲಾಗಿದ್ದು, ಹ್ಯಾಪಿ ವೆಲ್ ಕಮ್ ಚಿರು ಎಂದು ಅರ್ಜುನ್ ಸರ್ಜಾ ಹೇಳುತ್ತಿರುವುದನ್ನು ಗಮನಿಸಬಹುದಾಗಿದೆ. ಮಾತ್ರವಲ್ಲ ಮೇಘನಾರಾಜ್ ಸೀಮಂತ ಕಾರ್ಯದ ಕೆಲ ಚಿತ್ರಣವನ್ನು ಸಹ ನೀಡಲಾಗಿದೆ. ಧ್ರುವ ಜನ್ಮದಿಂದ ಮಾಡಿರುವ ವೀಡಿಯೋವನ್ನು ಹಂಚಿಕೊಂಡಿರುವ ಕುರಿತು ಇದೀಗ ಸಾಕಷ್ಟು ಚರ್ಚೆ ನಡೆಯುತ್ತಿದೆ. ಇದನ್ನೂ ಓದಿ: ಚಿರು ಮತ್ತೆ ಉದಯಿಸ್ತಿದ್ದಾರೆ – ಅಭಿಮಾನಿಗಳಿಗೆ ಮೇಘನಾರಿಂದ ಗುಡ್‍ನ್ಯೂಸ್
ಅಕ್ಟೋಬರ್ 17 ರಂದು ಚಿರು ಹುಟ್ಟುಬ್ಬದ ದಿನವಾಗಿದ್ದು, ಹೀಗಾಗಿ ನಾಳೆಯೇ ಮೆಘನಾ ಜೂನಿಯರ್ ಚಿರುಗೆ ಜನ್ಮ ನೀಡಲಿದ್ದಾರಾ ಎಂಬ ಪ್ರಶ್ನೆ ಧ್ರುವ ಹಂಚಿಕೊಂಡ ವಿಡಿಯೋ ಬಳಿಕ ಮೂಡಿದೆ. ವಿಡಿಯೋ ಪೋಸ್ಟ್ ಮಾಡಿ ಸಾಲುಗಳನ್ನು ಬರೆದಿರುವ ಧ್ರುವ, ಹ್ಯಾಪಿ ಬರ್ತ್ ಡೇ ಚಿರು ಎಂದು ಹಾರ್ಟ್ ಸಿಂಬಲ್ ಹಾಕಿದ್ದಾರೆ. ಮೈ ಲವ್ ಫಾರ್ ಎವರ್, ಜೂನಿಯರ್ ಚಿರು ಕಮಿಂಗ್ ಸೂನ್ ಎಂದು ಬರೆದು ತೋಳುಗಳ ಎಮೋಜಿ ಹಾಕಿದ್ದಾರೆ. ಈ ಪೋಸ್ಟ್ ನ್ನು ಸರ್ಜಾ ಕುಟುಂಬದ ಬಹುತೇಕರಿಗೆ ಟ್ಯಾಗ್ ಮಾಡಲಾಗಿದ್ದು, ಕೊನೆಗೆ ಜೈ ಹನುಮಾನ್ ಎಂದಿದ್ದಾರೆ. ಇದನ್ನೂ ಓದಿ: ಕಷ್ಟದಲ್ಲಿ ನನ್ನ ಜೊತೆ ನಿಂತಂತೆ ನಾನು ಎಂದಿಗೂ ನಿನ್ನ ಪಕ್ಕದಲ್ಲೇ ನಿಲ್ಲುವೆ – ಮೇಘನಾ
ಇತ್ತೀಚೆಗೆ ಧ್ರುವ ಸರ್ಜಾ ಹುಟ್ಟುಹಬ್ಬಕ್ಕೆ ಮೇಘನಾ ರಾಜ್ ಸರ್ಜಾ ವಿಶೇಷವಾಗಿ ಶುಭ ಕೋರಿದ್ದರು. ಭಾವನಾತ್ಮಕ ಸಾಲುಗಳನ್ನು ಹಂಚಿಕೊಂಡಿದ್ದರು. ಇನ್‍ಸ್ಟಾಗ್ರಾಮ್‍ನಲ್ಲಿ ಫೋಟೋ ಹಂಚಿಕೊಂಡಿದ್ದ ಮೇಘನಾ, `ನನ್ನ ಕಷ್ಟದ ಸಮಯದಲ್ಲಿ ನೀನು ಹೇಗೆ ನನ್ನ ಜೊತೆಯಲ್ಲಿ ಗಟ್ಟಿಯಾಗಿ ನಿಂತಿದ್ದೆ. ಹಾಗೆಯೇ ನಾನು ಕೂಡ ಶಾಶ್ವತವಾಗಿ ನಿನ್ನ ಪಕ್ಕ ನಿಲ್ಲುತ್ತೇನೆ. ಪ್ರಾಮಿಸ್ ಬರ್ತ್ ಡೇ ಬಾಯ್. ಸದಾ ನೀನು ಖುಷಿಯಾಗಿರು ಎಂದು ಆಶೀಸುತ್ತೇನೆ. ನಮ್ಮ ಚಿರು ನಕ್ಕಂತೆ ನೀನು ನಗುತ್ತಿರು. ಹ್ಯಾಪಿಯೆಸ್ಟ್ ಬರ್ತ್ ಡೇ ಬಿಲ್ ಎಂದು ಬರೆದುಕೊಂಡಿದ್ದರು.
ಅಕ್ಟೋಬರ್ 4ರಂದು ಧ್ರುವ ಸರ್ಜಾ ಅತ್ತಿಗೆ ಮೇಘನಾ ರಾಜ್ ಅವರ ಸೀಮಂತ ಶಾಸ್ತ್ರ ನೆರವೇರಿದೆ. ಮನೆಯಲ್ಲಿಯೇ ಸರಳವಾಗಿ ಸೀಮಂತ ಕಾರ್ಯಕ್ರಮವನ್ನು ಮಾಡಲಾಗಿದೆ. ಕುಟುಂಬದವರು ಮತ್ತು ಕೆಲ ಆಪ್ತರು ಮಾತ್ರ ಸೀಮಂತ ಶಾಸ್ತ್ರಕ್ಕೆ ಆಗಮಿಸಿದ್ದರು. ಜೊತೆಗೆ ಚಿರು ಇಲ್ಲ ಎಂಬ ನೋವು ಮೇಘನಾಗೆ ಕಾಡದಿರಲಿ ಎಂದು ಚಿರು ಅವರ ದೊಡ್ಡ ಫೋಟೋವನ್ನು ಪಕ್ಕದಲ್ಲೇ ಇಟ್ಟು ಸೀಮಂತ ಮಾಡಿದ್ದು ವಿಶೇಷವಾಗಿತ್ತು.
ಬೆಂಗಳೂರು: ಸ್ಯಾಂಡಲ್ ವುಡ್ ನಟ ಚಿರಂಜೀವಿ ಸರ್ಜಾ ಅವರು ನಮ್ಮನ್ನಗಲಿ 40 ದಿನಗಳು ಕಳೆದರೂ ಅಭಿಮಾನಿಗಳ ಹೃದಯದಲ್ಲಿ ಅವರು ಇನ್ನೂ ಜೀವಂತವಾಗಿದ್ದಾರೆ. ಇದೀಗ ಅಭಿಮಾನಿಯೊಬ್ಬರು ಬಿಡಿಸಿದ ಪೆನ್ಸಿಲ್ ಸ್ಕೆಚ್ ಫೋಟೋವೊಂದನ್ನು ಪತ್ನಿ ಮೇಘನಾ ರಾಜ್ ಶೇರ್ ಮಾಡಿಕೊಂಡಿದ್ದಾರೆ.
ಮೇಘನಾ ಅವರು ಶುಕ್ರವಾರ ತಮ್ಮ ಇನ್ಸ್ ಸ್ಟಾಗ್ರಾಮ್ ಸ್ಟೇಟಸ್ ನಲ್ಲಿ ಚಿರು ಫೊಟೊವನ್ನು ಶೇರ್ ಮಾಡಿಕೊಂಡಿದ್ದು, ಯಾವುದೇ ಕ್ಯಾಪ್ಷನ್ ನೀಡಿಲ್ಲ. ಚಿರು ಅವರು ಪೆನ್ಸಿಲ್ ಕಟ್ ನಲ್ಲಿ ತುಂಬಾನೇ ನೈಜವಾಗಿ ಕಾಣಿಸುತ್ತಿದ್ದಾರೆ. ಸದ್ಯ ಈ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅವರ ಅಭಿಮಾನಿಗಳು ಶೇರ್ ಮಾಡಿಕೊಳ್ಳುತ್ತಿದ್ದು, ವೈರಲ್ ಆಗುತ್ತಿದೆ.
ಕಳೆದ ಜೂನ್ 7 ರಂದು ನಟ ಚಿರಂಜೀವಿ ಸರ್ಜಾ ಅವರು ಅಕಾಲಿಕವಾಗಿ ಮರಣ ಹೊಂದಿದ್ದರು. ಆ ಬಳಿಕ ಅಂದರೆ 1 ತಿಂಗಳ ನಂತರ ಕುಟುಂಬದವರು, ಆಪ್ತ ಸ್ನೇಹಿತರು ವಿಶೇಷವಾಗಿ ಚಿರುವನ್ನು ಸ್ಮರಿಸಿಕೊಳ್ಳುವ ಮೂಲಕ ವಂದನೆ ಸಲ್ಲಿಸಿದ್ದರು. ನಗುಮೊಗದ ಯುವ ಪ್ರತಿಭೆ ಚಿರು, ಇವರು ಸದಾ ನಗುತ್ತಿದ್ದರು. ಹೀಗಾಗಿ ಅವರ ಕುಟುಂಬಸ್ಥರು ಮತ್ತು ಆಪ್ತರು ಚಿರುವಿನ ನಗುವನ್ನು ಚಿರಾಯುವಾಗಿಡಲು ಪ್ರಯತ್ನಿಸಿದ್ದು, ಎಲ್ಲರೂ ಅವರಿಗೆ ನಗುವಿನ ಮೂಲಕ ಗೌರವ ಸಲ್ಲಿಸಿದ್ದರು. ಇದನ್ನೂ ಓದಿ: ‘ನಾನು ನಗಲು ಕಾರಣ ಚಿರು’- ಮೇಘನಾರ ಭಾವನಾತ್ಮಕ ಮಾತು
ಈ ವೇಳೆ ಅವರೆಲ್ಲರೂ ಚಿರಂಜೀವಿ ಫೋಟೋ ಮುಂದೆ ಕುಳಿತು ಫೋಟೋ ತೆಗೆಸಿಕೊಂಡಿದ್ದಾರೆ. ಚಿರು ಪತ್ನಿ ಮೇಘನಾ ರಾಜ್ ಚಿರುವಿನ ಫೋಟೋ ಮತ್ತು ಸ್ನೇಹಿತರು, ಆಪ್ತರು ನಗು ಮುಖದಿಂದ ತೆಗೆಸಿಕೊಂಡಿರುವ ಫೋಟೋಗಳನ್ನು ಇನ್‍ಸ್ಟಾಗ್ರಾಂನಲ್ಲಿ ಅಪ್ಲೋಡ್ ಮಾಡಿದ್ದರು. ಜೊತೆಗೆ “ನನ್ನ ಪ್ರೀತಿಯ ಚಿರು.. ಚಿರು ಒಂದು ತಿಂಗಳ ಸೆಲೆಬ್ರೇಷನ್ ಆಗಿದೆ. ಈ ಆಚರಣೆ ಯಾವಾಗಲೂ ಇರುತ್ತದೆ. ಈಗಲೂ ಮತ್ತು ಮುಂದೆಯೂ ಇರುತ್ತದೆ. ಬೇರೆ ಯಾವ ರೀತಿಯನ್ನು ನೀನು ಇಷ್ಟಪಡುವುದಿಲ್ಲ ಎಂಬುದು ನನಗೆ ತಿಳಿದಿದೆ. ಆದರೆ ನಾನು ನಗಲು ಕಾರಣ ಚಿರು” ಎಂದು ಚಿರುವಿನ ನಗುವಿನ ಬಗ್ಗೆ ನೋವಿನಿಂದ ಬರೆದುಕೊಂಡಿದ್ದರು.