Tag: Mehul Choksi

  • ಮೆಹುಲ್ ಚೋಕ್ಸಿಗೆ ಮುಂಬೈನ ಆರ್ಥರ್ ರೋಡ್‌ನಲ್ಲಿ ಸಿದ್ಧವಾಗಿರೋ ಜೈಲು ಕೋಣೆ ಹೇಗಿದೆ ಗೊತ್ತಾ?

    ಮೆಹುಲ್ ಚೋಕ್ಸಿಗೆ ಮುಂಬೈನ ಆರ್ಥರ್ ರೋಡ್‌ನಲ್ಲಿ ಸಿದ್ಧವಾಗಿರೋ ಜೈಲು ಕೋಣೆ ಹೇಗಿದೆ ಗೊತ್ತಾ?

    – ಟಿವಿ, ವೆಸ್ಟರ್ನ್ ಟಾಯ್ಲೆಟ್ ಸೇರಿ ಹಲವು ಹೈಟೆಕ್‌ ಸೌಲಭ್ಯ

    ಮುಂಬೈ: ಪಂಜಾಬ್ ನ್ಯಾಷನಲ್ ಬ್ಯಾಂಕ್ ಸಾಲ ಹಗರಣದಲ್ಲಿ (PNB Loan Scam) ಪ್ರಮುಖ ಆರೋಪಿಯಾದ ದೇಶ ಭ್ರಷ್ಟ ವಜ್ರೋದ್ಯಮಿ ಮೆಹುಲ್ ಚೋಕ್ಸಿ (Mehul Choksi)ಯನ್ನು ಭಾರತಕ್ಕೆ ಹಸ್ತಾಂತರಿಸಲು ಬೆಲ್ಜಿಯಂ ಕೋರ್ಟ್ ಸಮ್ಮತಿಸಿದೆ. ಭಾರತಕ್ಕೆ ಹಸ್ತಾಂತರಿಸಲು ಯಾವುದೇ ಕಾನೂನು ಅಡ್ಡಿಯಿಲ್ಲ ಎಂದು ಆಂಟ್ವೆರ್ಪ್ ಕೋರ್ಟ್ ಹೇಳಿದೆ.

    ಇನ್ನು ಭಾರತಕ್ಕ ಹಸ್ತಾಂತರ ಬೆನ್ನಲ್ಲೇ ಮೆಹುಲ್ ಚೋಕ್ಸಿಗಾಗಿ ಮುಂಬೈನ ಆರ್ಥರ್ ರೋಡ್ ಜೈಲು (Mumbai’s Arthur Road Jail) ಸಜ್ಜಾಗಿದೆ. ಭಾರತಕ್ಕೆ ಬಂದ್ಮೇಲೆ ಆತನನ್ನ ಬ್ಯಾರಕ್ ನಂ.12ರಲ್ಲಿ ಇರಿಸಲಾಗುತ್ತೆ. ಅದರ ಒಳಾಂಗಣ ಫೋಟೋಗಳು ವೈರಲ್ ಆಗಿವೆ. ಇದನ್ನೂ ಓದಿ: PNB Fraud Case | ದೇಶ ಭ್ರಷ್ಟ ವಜ್ರೋದ್ಯಮಿ ಮೆಹುಲ್ ಚೋಕ್ಸಿ ಬೆಲ್ಜಿಯಂನಲ್ಲಿ ಅರೆಸ್ಟ್‌

    500 ಚದರ ಅಡಿ ಬ್ಯಾರಕ್ ಇದಾಗಿದ್ದು, 2 ಕೋಣೆಗಳಿವೆ. ಟಿವಿ, ವೆಸ್ಟರ್ನ್ ಟಾಯ್ಲೆಟ್, ವಾಶ್‌ರೂಮ್, ಪ್ಯಾಸೇಜ್, ಸೊಳ್ಳೆ ಪರದೆ, ಟ್ಯೂಬ್‌ಲೈಟ್, ಸೀಲಿಂಗ್ ಫ್ಯಾನ್ ಸೌಲಭ್ಯಗಳೊಂದಿಗೆ ಸಿಸಿಟಿವಿ ಕಣ್ಗಾವಲು ಇರಿಸಲಾಗಿದೆ.

    ಇನ್ನೂ ವೈದ್ಯಕೀಯ ತಪಾಸಣೆ, ನ್ಯಾಯಾಲಯದ ವಿಚಾರಣೆ ಸಂದರ್ಭದಲ್ಲಿ ಹೊರತುಪಡಿಸಿ ಉಳಿದ ಸಮಯದಲ್ಲಿ ಚೋಕ್ಸಿ ಜೈಲಿನ ಒಳಾಂಗಣದಲ್ಲೇ ಇರಲಿದ್ದಾರೆ. ಸದ್ಯ ಚೋಕ್ಸಿ ಬ್ಲಡ್‌ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ ಎಂದು ಹೇಳಲಾಗಿದೆ. ಇದನ್ನೂ ಓದಿ: ಸಾಲ ಮಾಡಿ ವಿದೇಶಕ್ಕೆ ಪರಾರಿ – ಫೆಬ್ರವರಿಯಲ್ಲಿ ನೀರವ್‌ ಮೋದಿ ಆಸ್ತಿ ಹರಾಜು

    13 ಸಾವಿರ ಕೋಟಿ ವಂಚನೆ
    ಸರ್ಕಾರಿ ಸ್ವಾಮ್ಯದ ಪಂಜಾಬ್ ನ್ಯಾಷನಲ್‌ ಬ್ಯಾಂಕ್‌ನಿಂದ 13,850 ಕೋಟಿ ರೂ. ಸಾಲ ಪಡೆದಿದ್ದ ವಜ್ರದ ವ್ಯಾಪಾರಿಗಳಾದ ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿ, ಸಾಲ ಮರುಪಾವತಿಸದೇ ವಂಚಿಸಿ ವಿದೇಶಕ್ಕೆ ಪರಾರಿಯಾಗಿದ್ದರು. ಇವರಿಬ್ಬರಿಗಾಗಿ ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ಹುಡುಕಾಟ ನಡೆಸಿತ್ತು. 2018ರಲ್ಲಿ ದೇಶದಿಂದ ಪರಾರಿಯಾಗಿದ್ದ ಚೋಕ್ಸಿ, ಮೊದಲು ಆಂಟಿಗುವಾ ಮತ್ತು ಬಾರ್ಬುಡಾದಲ್ಲಿ ವಾಸಿಸುತ್ತಿದ್ದರು. ಬಳಿಕ ಬೆಲ್ಜಿಯಂನ ಆಂಟ್ವೆರ್ಪ್‌ನಲ್ಲಿ ನೆಲೆಸಿದ್ದರು. ಕೆಲ ದಿನಗಳ ಹಿಂದೆ ಚೋಕ್ಸಿಯನ್ನ ಬೆಲ್ಜಿಯಂನಲ್ಲಿ ಬಂಧಿಸಲಾಗಿತ್ತು.

    1,271 ಕೋಟಿ ಮೌಲ್ಯದ ಆಸ್ತಿ ಜಪ್ತಿ
    2018 ರಲ್ಲಿ ಇಡಿ 1,217 ಕೋಟಿ ಮೌಲ್ಯದ ಚೋಕ್ಸಿಯ 41 ಸ್ಥಿರ ಆಸ್ತಿಗಳನ್ನು ತಾತ್ಕಾಲಿಕವಾಗಿ ಜಪ್ತಿ ಮಾಡಿತ್ತು. ಮುಂಬೈನ ಐಷಾರಾಮಿ ಪ್ರದೇಶದಲ್ಲಿರುವ ಅವರ 2 ಫ್ಲಾಟ್‌ಗಳು, ಕೋಲ್ಕತ್ತಾದ ಮಾಲ್, ಮುಂಬೈ-ಗೋವಾ ಹೆದ್ದಾರಿಯಲ್ಲಿ 27 ಎಕ್ರೆ ಭೂಮಿ, ತಮಿಳುನಾಡಿನಲ್ಲಿ 101 ಎಕರೆ ಜಮೀನು, ಆಂಧ್ರಪ್ರದೇಶದ ನಾಸಿಕ್, ನಾಗ್ಪುರದಲ್ಲಿನ ಜಮೀನುಗಳು, ಅಲ್ಲಾಬಾಗ್‌ನಲ್ಲಿರುವ 2 ಬಂಗಲೆಗಳು ಮತ್ತು ಸೂರತ್‌ನಲ್ಲಿರುವ ಕಚೇರಿಯನ್ನು ಇಡಿ ವಶಪಡಿಸಿಕೊಂಡಿತ್ತು. ಈವರೆಗೆ ಇಡಿ ಚೋಕ್ಸಿ ವಿರುದ್ಧ ಮೂರು ಆರೋಪಪಟ್ಟಿಗಳನ್ನು ಸಲ್ಲಿಸಿದೆ. 2019ರಲ್ಲಿ ಚೋಕ್ಸಿ ದೇಶದಿಂದ ಪರಾರಿಯಾಗಿದ್ದಾನೆ ಎಂದು ಹೇಳಿತ್ತು.

  • ಬೆಲ್ಜಿಯಂನಲ್ಲಿ ಮೆಹುಲ್ ಚೋಕ್ಸಿ ಅರೆಸ್ಟ್ – ಭಾರತಕ್ಕೆ ಹಸ್ತಾಂತರಿಸಲು ಸಿಬಿಐ ಮನವಿ

    ಬೆಲ್ಜಿಯಂನಲ್ಲಿ ಮೆಹುಲ್ ಚೋಕ್ಸಿ ಅರೆಸ್ಟ್ – ಭಾರತಕ್ಕೆ ಹಸ್ತಾಂತರಿಸಲು ಸಿಬಿಐ ಮನವಿ

    ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್ (Punjab National Bank) ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣದಲ್ಲಿ ಭಾರತದಿಂದ ಪರಾರಿಯಾಗಿದ್ದ ವಜ್ರೋದ್ಯಮಿ ಮೆಹುಲ್ ಚೋಕ್ಸಿಯನ್ನು (Mehul Choksi) ಬೆಲ್ಜಿಯಂನ (Belgium) ಅಧಿಕಾರಿಗಳು ಬಂಧಿಸಿದ್ದಾರೆ. ಭಾರತದ ಕೇಂದ್ರೀಯ ತನಿಖಾ ಸಂಸ್ಥೆ (CBI) ಮತ್ತು ಜಾರಿ ನಿರ್ದೇಶನಾಲಯ (ED) ಮಾಡಿದ ಕೋರಿಕೆಯ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

    65 ವರ್ಷದ ಮೆಹುಲ್ ಚೋಕ್ಸಿ, 2018ರಿಂದ ಭಾರತದಿಂದ ಪರಾರಿಯಾಗಿದ್ದರು. ಈ ವರ್ಷದ ಏ.12 ರಿಂದ ಬೆಲ್ಜಿಯಂನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಅವರನ್ನು ಬಂಧಿಸಲಾಗಿದೆ. ಚೋಕ್ಸಿ ಆರೋಗ್ಯ ಕಾರಣಗಳಿಗಾಗಿ ಆಂಟಿಗುವಾದಿಂದ ಬೆಲ್ಜಿಯಂಗೆ ತೆರಳಿದ್ದರು ಎನ್ನಲಾಗಿದೆ.ಇದನ್ನೂ ಓದಿ: ಜಾತಿ ಸಮೀಕ್ಷೆ | 1 ಕೋಟಿ ಜನರನ್ನು ಸಮುದ್ರಕ್ಕೆ ಬಿಡಬೇಕಾ? – ಅಶೋಕ್ ಕಿಡಿ

    ಭಾರತೀಯ ತನಿಖಾ ಸಂಸ್ಥೆಗಳು ಅವರ ವಿರುದ್ಧ ಜಾರಿಯಲ್ಲಿರುವ ಎರಡು ಬೇಲ್ ರಹಿತ ವಾರಂಟ್‌ಗಳನ್ನು ಆಧರಿಸಿ 2024ರ ಸೆಪ್ಟೆಂಬರ್‌ನಲ್ಲಿ ಬೆಲ್ಜಿಯಂ ಸರ್ಕಾರಕ್ಕೆ ಹಸ್ತಾಂತರ ಕೋರಿ ಅರ್ಜಿ ಸಲ್ಲಿಸಿದ್ದವು. ಈ ಮನವಿಯ ಆಧಾರದ ಮೇಲೆ ಮೆಹುಲ್ ಚೋಕ್ಸಿಯನ್ನು ಬಂಧಿಸಲಾಗಿದೆ.

    ಪ್ರಸ್ತುತ ಚೋಕ್ಸಿಯನ್ನು ಬೆಲ್ಜಿಯಂನ ಬಂಧನ ಕೇಂದ್ರದಲ್ಲಿ ಇರಿಸಲ್ಪಟ್ಟಿದ್ದು, ಕಳೆದ ಆರು ತಿಂಗಳಿನಿಂದ ಬೆಲ್ಜಿಯಂನಲ್ಲಿ ವಾಸಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅವರ ಆರೋಗ್ಯ ಸ್ಥಿತಿ ಹದಗೆಡುತ್ತಿದೆ ಎಂದು ಹೇಳಲಾಗುತ್ತಿದ್ದು, ಅವರು ರಕ್ತದ ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಗಳು ಸೂಚಿಸಿವೆ.

    ಚೋಕ್ಸಿಗೆ ಪೌರತ್ವ ಸಿಕ್ಕಿದ್ದು ಹೇಗೆ?
    65 ವರ್ಷದ ಚೋಕ್ಸಿ 2023ರ ನವೆಂಬರ್ 15ರಿಂದ ಎಫ್-ರೆಸಿಡೆನ್ಸಿ ಪೌರತ್ವ ಕಾರ್ಡ್ ಪಡೆದು ಬೆಲ್ಜಿಯಂನಲ್ಲಿ ಕಾನೂನುಬದ್ಧವಾಗಿ ವಾಸಿಸುತ್ತಿದ್ದರು. ಅವನ ಪತ್ನಿ ಬೆಲ್ಜಿಯಂನವರೇ ಆದ್ದರಿಂದ ಪೌರತ್ವ ಕಾರ್ಡ್ ಪಡೆಯಲು ಚೋಕ್ಸಿಗೆ ಸಹಕಾರ ನೀಡಿದ್ದಾರೆ. ಈ ನಡುವೆ ಭಾರತಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಯಿಂದ ತಪ್ಪಿಸಿಕೊಳ್ಳೋದಕ್ಕೆ ಚೋಕ್ಸಿ ನಕಲಿ ದಾಖಲೆಗಳನ್ನ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

    2024ರ ಸೆಪ್ಟೆಂಬರ್‌ನಲ್ಲಿ ಚೋಕ್ಸಿಯನ್ನು ಭಾರತಕ್ಕೆ ಹಸ್ತಾಂತರಿಸುವಂತೆ ತನಿಖಾ ಸಂಸ್ಥೆಗಳು ಬೆಲ್ಜಿಯಂಗೆ ಮನವಿ ಮಾಡಿದ್ದವು. ಆದ್ರೆ ಅಂದು ಚೋಕ್ಸಿ ಪರ ವಕೀಲರು, ನನ್ನ ಕಕ್ಷಿಗಾರನ ಆರೋಗ್ಯ ಸರಿಯಿಲ್ಲ, ಬ್ಲಡ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ. ಆದ್ದರಿಂದ ಅವರನ್ನು ಹಸ್ತಾಂತರಿಸಲು ಸಾಧ್ಯವಿಲ್ಲ ಎಂದು ಹೇಳಿದ್ದರು. ಇದಕ್ಕೆ ಪ್ರತ್ಯುತ್ತರ ನೀಡಿದ್ದ ಭಾರತೀಯ ಅಧಿಕಾರಿಗಳು, ಚೋಕ್ಸಿ ಭಾರತದಲ್ಲೂ ಚಿಕಿತ್ಸೆ ಪಡೆಯಬಹುದು ಎಂದು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಟ್ಟಿದ್ದರು. ಇಡಿ ಮತ್ತು ಸಿಬಿಐನಿಂದ ಹಸ್ತಾಂತರ ಕೋರಿಕೆಯ ಮೇರೆಗೆ ಬೆಲ್ಜಿಯಂ ಪೊಲೀಸರು ಅವರನ್ನು ಬಂಧಿಸಿದ್ದಾರೆ.

    ಮೆಹುಲ್ ಚೋಕ್ಸಿ ಮತ್ತು ಅವರ ಸೋದರಳಿಯ ನೀರವ್ ಮೋದಿ, ಪಿಎನ್‌ಬಿ ಬ್ಯಾಂಕ್‌ನ 13,500 ಕೋಟಿ ರೂ.ಗೂ ಅಧಿಕ ಮೊತ್ತದ ವಂಚನೆಯ ಆರೋಪದಲ್ಲಿದ್ದಾರೆ. ಚೋಕ್ಸಿಯ ಕಂಪನಿಯಾದ ಗೀತಾಂಜಲಿ ಜೆಮ್ಸ್, ಬ್ಯಾಂಕ್‌ನ ಕೆಲವು ಅಧಿಕಾರಿಗಳ ಸಹಕಾರದೊಂದಿಗೆ ಲೆಟರ್ ಆಫ್ ಅಂಡರ್‌ಟೇಕಿಂಗ್ (ಎಲ್‌ಒಯು) ಮತ್ತು ಫಾರಿನ್ ಲೆಟರ್ ಆಫ್ ಕ್ರೆಡಿಟ್ (ಎಫ್‌ಎಲ್‌ಸಿ)ಗಳನ್ನು ಕಾನೂನುಬಾಹಿರವಾಗಿ ಬಳಸಿಕೊಂಡು ಈ ವಂಚನೆ ನಡೆಸಿರುವುದಾಗಿ ಆರೋಪಿಸಲಾಗಿದೆ. ಈ ಪ್ರಕರಣದಲ್ಲಿ ಸಿಬಿಐ ಮತ್ತು ಇಡಿ ಈಗಾಗಲೇ ಹಲವು ಚಾರ್ಜ್ಶೀಟ್‌ಗಳನ್ನು ಸಲ್ಲಿಸಿವೆ.ಇದನ್ನೂ ಓದಿ: ಇಂದು ಮಧ್ಯರಾತ್ರಿಯಿಂದಲೇ ಅನಿರ್ದಿಷ್ಟಾವಧಿ ಲಾರಿ ಮುಷ್ಕರ – ರಸ್ತೆಗಿಳಿಯಲ್ಲ 6 ಲಕ್ಷ ಲಾರಿಗಳು

  • PNB Fraud Case | ದೇಶ ಭ್ರಷ್ಟ ವಜ್ರೋದ್ಯಮಿ ಮೆಹುಲ್ ಚೋಕ್ಸಿ ಬೆಲ್ಜಿಯಂನಲ್ಲಿ ಅರೆಸ್ಟ್‌

    PNB Fraud Case | ದೇಶ ಭ್ರಷ್ಟ ವಜ್ರೋದ್ಯಮಿ ಮೆಹುಲ್ ಚೋಕ್ಸಿ ಬೆಲ್ಜಿಯಂನಲ್ಲಿ ಅರೆಸ್ಟ್‌

    ಮುಂಬೈ: ಪಂಜಾಬ್ ನ್ಯಾಷನಲ್ ಬ್ಯಾಂಕ್ ಸಾಲ ಹಗರಣದಲ್ಲಿ ಪ್ರಮುಖ ಆರೋಪಿಯಾದ ದೇಶ ಭ್ರಷ್ಟ ವಜ್ರೋದ್ಯಮಿ ಮೆಹುಲ್ ಚೋಕ್ಸಿ (Mehul Choksi)ಯನ್ನು ಬೆಲ್ಜಿಯಂನಲ್ಲಿ ಬಂಧಿಸಲಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.

    ಸರ್ಕಾರಿ ಸ್ವಾಮ್ಯದ ಪಂಜಾಬ್ ನ್ಯಾಷನಲ್‌ ಬ್ಯಾಂಕ್‌ನಿಂದ 13,850 ಕೋಟಿ ರೂ. ಸಾಲ ಪಡೆದಿದ್ದ ವಜ್ರದ ವ್ಯಾಪಾರಿಗಳಾದ ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿ, ಸಾಲ ಮರುಪಾವತಿಸದೇ ವಂಚಿಸಿ ವಿದೇಶಕ್ಕೆ ಪರಾರಿಯಾಗಿದ್ದರು. ಇವರಿಬ್ಬರಿಗಾಗಿ ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ಹುಡುಕಾಟ ನಡೆಸುತ್ತಿದೆ. ಭಾರತ ಸರ್ಕಾರದ ಕೋರಿಕೆಯ ಮೇರೆಗೆ ಚೋಕ್ಸಿ ಅವರನ್ನು ಬೆಲ್ಜಿಯಂನಲ್ಲಿ ಶನಿವಾರ ಬಂಧಿಸಲಾಗಿದೆ. ಸದ್ಯ ಚೋಕ್ಸಿ ಜೈಲಿನಲ್ಲಿದ್ದಾರೆ ಎಂದು ತಿಳಿದುಬಂದಿದೆ.

    2018ರಲ್ಲಿ ದೇಶದಿಂದ ಪರಾರಿಯಾಗಿದ್ದ ಚೋಕ್ಸಿ, ಆರಂಭದಲ್ಲಿ ಆಂಟಿಗುವಾ ಮತ್ತು ಬಾರ್ಬುಡಾದಲ್ಲಿ ವಾಸಿಸುತ್ತಿದ್ದರು ಎಂದು ಹೇಳಾಗುತ್ತಿತ್ತು. ಆದರೆ, ಇತ್ತೀಚೆಗೆ ಅವರು ಬೆಲ್ಜಿಯಂನ ಆಂಟ್ವೆರ್ಪ್‌ನಲ್ಲಿ ಇದ್ದಾರೆ ಎಂಬ ಮಾಹಿತಿ ಲಭ್ಯವಾಗಿತ್ತು. ಅವರನ್ನು ಭಾರತಕ್ಕೆ ಹಸ್ತಾಂತರಿಸುವಂತೆ ಸಿಬಿಐ ಬೆಲ್ಡಿಯಂ ಸರ್ಕಾರಕ್ಕೆ ಮನವಿ ಮಾಡಿತ್ತು. ಇನ್ನೂ ನೀರವ್‌ ಮೋದಿ ಗಡೀಪಾರು ಪ್ರಕ್ರಿಯೆಗಳು ನಡೆಯುತ್ತಿವೆ ಎಂದು ತಿಳಿದುಬಂದಿದೆ.

    ಸದ್ಯ ಚೋಕ್ಸಿ ಬೆಲ್ಜಿಯಂ ಕೋರ್ಟ್‌ನಲ್ಲಿ ತನ್ನನ್ನು ಭಾರತಕ್ಕೆ ಹಸ್ತಾಂತರಿಸದಂತೆ ಮನವಿ ಮಾಡಬಹುದು. ಹೀಗಾಗಿ ಆರೋಪಿಯನ್ನ ಭಾರತಕ್ಕೆ ಕರೆತರಲು ಸಂಬಂಧಪಟ್ಟ ತನಿಖಾ ಸಂಸ್ಥೆಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿವೆ. ಕಾನೂನು ಹೋರಾಟ ಸ್ವಲ್ಪ ಸಮಯ ತೆಗೆದುಕೊಳ್ಳಬಹುದು ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ದೇಶ ಭ್ರಷ್ಟ ವಜ್ರೋದ್ಯಮಿ ಮೆಹುಲ್ ಚೋಕ್ಸಿ ಬೆಲ್ಜಿಯಂನಲ್ಲಿ ವಾಸ್ತವ್ಯ – ಶೀಘ್ರದಲ್ಲೇ ಭಾರತಕ್ಕೆ ಕರೆತರಲು ಪ್ಲ್ಯಾನ್‌

    ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ (ಪಿಎನ್‌ಬಿ) 13,850 ಕೋಟಿ ರೂಪಾಯಿ ವಂಚಿಸಿದ ಆರೋಪದ ಮೇಲೆ ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇಡಿ)ಕ್ಕೆ ಪ್ರಮುಖವಾಗಿ ಬೇಕಾಗಿರುವ ಚೋಕ್ಸಿ ಸದ್ಯ ಕೆರಿಬಿಯನ್ ದ್ವೀಪ ರಾಷ್ಟ್ರವಾದ ಆಂಟಿಗುವಾ ಮತ್ತು ಬಾರ್ಬುಡಾದಲ್ಲಿ ವಾಸಿಸುತ್ತಿದ್ದ. ಇದನ್ನೂ ಓದಿ: ದೇಶ ಭ್ರಷ್ಟ ವಜ್ರೋದ್ಯಮಿ ಮೆಹುಲ್ ಚೋಕ್ಸಿ ಬೆಲ್ಜಿಯಂನಲ್ಲಿರುವುದು ದೃಢ

    1,271 ಕೋಟಿ ಮೌಲ್ಯದ ಆಸ್ತಿ ಜಪ್ತಿ
    2018 ರಲ್ಲಿ ಇಡಿ 1,217 ಕೋಟಿ ಮೌಲ್ಯದ ಚೋಕ್ಸಿಯ 41 ಸ್ಥಿರ ಆಸ್ತಿಗಳನ್ನು ತಾತ್ಕಾಲಿಕವಾಗಿ ಜಪ್ತಿ ಮಾಡಿತ್ತು. ಮುಂಬೈನ ಐಷಾರಾಮಿ ಪ್ರದೇಶದಲ್ಲಿರುವ ಅವರ 2 ಫ್ಲಾಟ್‌ಗಳು, ಕೋಲ್ಕತ್ತಾದ ಮಾಲ್, ಮುಂಬೈ-ಗೋವಾ ಹೆದ್ದಾರಿಯಲ್ಲಿ 27 ಎಕ್ರೆ ಭೂಮಿ, ತಮಿಳುನಾಡಿನಲ್ಲಿ 101 ಎಕರೆ ಜಮೀನು, ಆಂಧ್ರಪ್ರದೇಶದ ನಾಸಿಕ್, ನಾಗ್ಪುರದಲ್ಲಿನ ಜಮೀನುಗಳು, ಅಲ್ಲಾಬಾಗ್‌ನಲ್ಲಿರುವ 2 ಬಂಗಲೆಗಳು ಮತ್ತು ಸೂರತ್‌ನಲ್ಲಿರುವ ಕಚೇರಿಯನ್ನು ಇಡಿ ವಶಪಡಿಸಿಕೊಂಡಿತ್ತು. ಈವರೆಗೆ ಇಡಿ ಚೋಕ್ಸಿ ವಿರುದ್ಧ ಮೂರು ಆರೋಪಪಟ್ಟಿಗಳನ್ನು ಸಲ್ಲಿಸಿದೆ. 2019ರಲ್ಲಿ ಚೋಕ್ಸಿ ದೇಶದಿಂದ ಪರಾರಿಯಾಗಿದ್ದಾನೆ ಎಂದು ಹೇಳಿತ್ತು.

    ಚೋಕ್ಸಿಗೆ ಪೌರತ್ವ ಸಿಕ್ಕಿದ್ದು ಹೇಗೆ?
    65 ವರ್ಷದ ಚೋಕ್ಸಿ 2023ರ ನವೆಂಬರ್‌ 15ರಿಂದ ʻಎಫ್‌- ರೆಸಿಡೆನ್ಸಿʼ ಪೌರತ್ವ ಕಾರ್ಡ್‌ ಪಡೆದು ಬೆಲ್ಜಿಯಂನಲ್ಲಿ ಕಾನೂನುಬದ್ಧವಾಗಿ ವಾಸಿಸುತ್ತಿದ್ದ. ಅವನ ಪತ್ನಿ ಬೆಲ್ಜಿಯಂ ನವರೇ ಆದ್ದರಿಂದ ಪೌರತ್ವ ಕಾರ್ಡ್‌ ಪಡೆಯಲು ಚೋಕ್ಸಿಗೆ ಸಹಕಾರ ನೀಡಿದ್ದಾರೆ. ಈ ನಡುವೆ ಭಾರತಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಯಿಂದ ತಪ್ಪಿಸಿಕೊಳ್ಳೋದಕ್ಕೆ ಚೋಕ್ಸಿ ನಕಲಿ ದಾಖಲೆಗಳನ್ನ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ರೆಡ್‌ ಕಾರ್ನರ್‌ ನೋಟಿಸ್‌ ಪಟ್ಟಿಯಿಂದ ಔಟ್‌- ಇನ್ನು ಮುಂದೆ ವಿಶ್ವದೆಲ್ಲೆಡೆ ವಂಚಕ ಮೆಹುಲ್‌ ಚೋಕ್ಸಿ ಸಂಚರಿಸಬಹುದು

    ಬ್ಲಡ್‌ಕ್ಯಾನ್ಸರ್‌ನಿಂದ ಚಿಕಿತ್ಸೆ ಪಡೆಯುತ್ತಿದ್ದ ಚೊಕ್ಸಿ
    2024ರ ಸೆಪ್ಟೆಂಬರ್‌ನಲ್ಲಿ ಚೋಕ್ಸಿಯನ್ನು ಭಾರತಕ್ಕೆ ಹಸ್ತಾಂತರಿಸುವಂತೆ ತನಿಖಾ ಸಂಸ್ಥೆಗಳು ಬೆಲ್ಜಿಯಂಗೆ ಮನವಿ ಮಾಡಿದ್ದವು. ಆದ್ರೆ ಅಂದು ಚೋಕ್ಸಿ ಪರ ವಕೀಲರು, ನನ್ನ ಕಕ್ಷಿಗಾರನ ಆರೋಗ್ಯ ಸರಿಯಿಲ್ಲ, ಬ್ಲಡ್‌ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ. ಆದ್ದರಿಂದ ಅವರನ್ನು ಹಸ್ತಾಂತರಿಸಲು ಸಾಧ್ಯವಿಲ್ಲ ಎಂದು ಹೇಳಿದ್ದರು. ಇದಕ್ಕೆ ಪ್ರತ್ಯುತ್ತರ ನೀಡಿದ್ದ ಭಾರತೀಯ ಅಧಿಕಾರಿಗಳು, ಚೋಕ್ಸಿ ಭಾರತದಲ್ಲೂ ಚಿಕಿತ್ಸೆ ಪಡೆಯಬಹುದು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಟ್ಟಿದ್ದರು. ಇಡಿ ಮತ್ತು ಸಿಬಿಐನಿಂದ ಹಸ್ತಾಂತರ ಕೋರಿಕೆಯ ಮೇರೆಗೆ ಬೆಲ್ಜಿಯಂ ಪೊಲೀಸರು ಅವರನ್ನು ಬಂಧಿಸಿದ್ದಾರೆ.

  • ದೇಶ ಭ್ರಷ್ಟ ವಜ್ರೋದ್ಯಮಿ ಮೆಹುಲ್ ಚೋಕ್ಸಿ ಬೆಲ್ಜಿಯಂನಲ್ಲಿರುವುದು ದೃಢ

    ದೇಶ ಭ್ರಷ್ಟ ವಜ್ರೋದ್ಯಮಿ ಮೆಹುಲ್ ಚೋಕ್ಸಿ ಬೆಲ್ಜಿಯಂನಲ್ಲಿರುವುದು ದೃಢ

    ಮುಂಬೈ: ಪಂಜಾಬ್ ನ್ಯಾಷನಲ್ ಬ್ಯಾಂಕ್ ಸಾಲ ಹಗರಣದಲ್ಲಿ ಪ್ರಮುಖ ಆರೋಪಿಯಾದ ದೇಶ ಭ್ರಷ್ಟ ವಜ್ರೋದ್ಯಮಿ ಮೆಹುಲ್ ಚೋಕ್ಸಿ (Mehul Choksi) ತನ್ನ ದೇಶದಲ್ಲಿರುವುದಾಗಿ ಯೂರೋಪಿಯನ್‌ ದೇಶವಾದ ಬೆಲ್ಜಿಯಂ (Belgium) ಖಚಿತಪಡಿಸಿದೆ ಎಂದು ವರದಿಯಾಗಿದೆ.

    ಸಂದರ್ಶನವೊಂದರಲ್ಲಿ ಮಾತನಾಡುವಾಗ ಬೆಲ್ಜಿಯಂ ವಿದೇಶಾಂಗ ಸಚಿವಾಲಯವು ಅವರ ಉಪಸ್ಥಿತಿಯನ್ನು ಖಚಿತಪಡಿಸಿದೆ. ಆದಾಗ್ಯೂ ಅವರ ವೈಯಕ್ತಿಕ ಪ್ರಕರಣಗಳ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದೆ. ಆದ್ರೆ ಚೋಕ್ಸಿಯನ್ನು ಭಾರತಕ್ಕೆ ಹಸ್ತಾಂತರಿಸುವ ಪ್ರಕ್ರಿಯೆ ಪ್ರಾರಂಭಿಸಲು ಭಾರತೀಯ ಅಧಿಕಾರಿಗಳು ತಮ್ಮ ಸಹವರ್ತಿಗಳನ್ನು ಸಂಪರ್ಕಿಸಿದ್ದಾರೆ ಎಂದು ಹೇಳಿಕೊಂಡಿದೆ.

    ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ (ಪಿಎನ್‌ಬಿ) 13,850 ಕೋಟಿ ರೂಪಾಯಿ ವಂಚಿಸಿದ ಆರೋಪದ ಮೇಲೆ ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇಡಿ)ಕ್ಕೆ ಪ್ರಮುಖವಾಗಿ ಬೇಕಾಗಿರುವ ಚೋಕ್ಸಿ ಸದ್ಯ ಕೆರಿಬಿಯನ್ ದ್ವೀಪ ರಾಷ್ಟ್ರವಾದ ಆಂಟಿಗುವಾ ಮತ್ತು ಬಾರ್ಬುಡಾದಲ್ಲಿ ವಾಸಿಸುತ್ತಿದ್ದಾರೆ.

    ವೈದ್ಯಕೀಯ ಚಿಕಿಯತ್ಸೆಗಾಗಿ ತೆರಳಿದ್ದ ಚೋಕ್ಸಿ ದ್ವೀಪರಾಷ್ಟ್ರದ ಪ್ರಜೆಯಾಗಿ ಉಳಿದಿದ್ದಾರೆ ಎಂದು ಅಲ್ಲಿನ ಸಚಿವ ಇಪಿ ಚೆಟ್ ಗ್ರೀನ್ ಇತ್ತೀಚೆಗೆ ತಿಳಿಸಿದ್ದಾರೆ ಎಂದು ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ. ಇದನ್ನೂ ಓದಿ: ದೇಶ ಭ್ರಷ್ಟ ವಜ್ರೋದ್ಯಮಿ ಮೆಹುಲ್ ಚೋಕ್ಸಿ ಬೆಲ್ಜಿಯಂನಲ್ಲಿ ವಾಸ್ತವ್ಯ – ಶೀಘ್ರದಲ್ಲೇ ಭಾರತಕ್ಕೆ ಕರೆತರಲು ಪ್ಲ್ಯಾನ್‌

    65 ವರ್ಷದ ಚೋಕ್ಸಿ 2023ರ ನವೆಂಬರ್ 15ರಿಂದ ʻಎಫ್- ರೆಸಿಡೆನ್ಸಿʼ ಪೌರತ್ವ ಕಾರ್ಡ್ ಪಡೆದು ಬೆಲ್ಜಿಯಂನಲ್ಲಿ ಕಾನೂನುಬದ್ಧವಾಗಿ ವಾಸಿಸುತ್ತಿದ್ದಾರೆ. ಅವರ ಪತ್ನಿ ಬೆಲ್ಜಿಯಂ ನವರೇ ಆದ್ದರಿಂದ ಪೌರತ್ವ ಕಾರ್ಡ್ ಪಡೆಯಲು ಚೋಕ್ಸಿಗೆ ಸಹಕಾರ ನೀಡಿದ್ದಾರೆ. ಈ ನಡುವೆ ಭಾರತಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಯಿಂದ ತಪ್ಪಿಸಿಕೊಳ್ಳೋದಕ್ಕೆ ಚೋಕ್ಸಿ ನಕಲಿ ದಾಖಲೆಗಳನ್ನ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

    ಸದ್ಯ ಚೋಕ್ಸಿ ಭಾರತದ ಪೌರತ್ವವನ್ನೂ ತ್ಯಜಿಸಿಲ್ಲ. ಒಂದು ವೇಳೆ ತಾತ್ಕಾಲಿಕವಾಗಿ ಪಡೆದಿರುವ ಬೆಲ್ಜಿಯಂ ಪೌರತ್ವವನ್ನು ಶಾಶ್ವತವಾಗಿ ಪರಿವರ್ತಿಸಿದ್ರೆ, ಮುಂದೆ ಆತ ಯುರೋಪಿಯನ್ ರಾಷ್ಟ್ರಗಳಲ್ಲಿ ಸ್ವತಂತ್ರವಾಗಿ ಪ್ರಯಾಣಿಸಲು ಅವಕಾಶ ಮಾಡಿಕೊಟ್ಟಂತಾಗುತ್ತದೆ. ಬಳಿಕ ಆತನನ್ನು ಕರೆತರಲು ಭಾರತಕ್ಕೆ ಕಷ್ಟವಾಗಬಹುದು ಎನ್ನಲಾಗಿದೆ. ಈ ನಡುವೆ ಚೋಕ್ಸಿ ಕ್ಯಾನ್ಸರ್ ಚಿಕಿತ್ಸೆಗಾಗಿ ಸ್ವಿಟ್ಜರ್ಲೆಂಡ್‌ಗೆ ತೆರಳುವ ಪ್ಲ್ಯಾನ್‌ನಲ್ಲಿದ್ದಾರೆ ಎಂದು ಕೆಲ ವರದಿಗಳು ತಿಳಿಸಿವೆ.

    ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣದ ಪ್ರಮುಖ ಆರೋಪಿಯಾದ ಚೋಕ್ಸಿ 2018ರಲ್ಲಿ ಭಾರತದಿಂದ ಫಲಾಯನ ಮಾಡಿದರು. ಇದನ್ನೂ ಓದಿ: ಗಗನಯಾತ್ರಿಗಳ ಆರೋಗ್ಯದ ಮೇಲೆ ಬಾಹ್ಯಾಕಾಶ ಪ್ರಯಾಣದ ಪರಿಣಾಮಗಳೇನು? – ಪರಿಹಾರವೇನು?

  • ದೇಶ ಭ್ರಷ್ಟ ವಜ್ರೋದ್ಯಮಿ ಮೆಹುಲ್ ಚೋಕ್ಸಿ ಬೆಲ್ಜಿಯಂನಲ್ಲಿ ವಾಸ್ತವ್ಯ – ಶೀಘ್ರದಲ್ಲೇ ಭಾರತಕ್ಕೆ ಕರೆತರಲು ಪ್ಲ್ಯಾನ್‌

    ದೇಶ ಭ್ರಷ್ಟ ವಜ್ರೋದ್ಯಮಿ ಮೆಹುಲ್ ಚೋಕ್ಸಿ ಬೆಲ್ಜಿಯಂನಲ್ಲಿ ವಾಸ್ತವ್ಯ – ಶೀಘ್ರದಲ್ಲೇ ಭಾರತಕ್ಕೆ ಕರೆತರಲು ಪ್ಲ್ಯಾನ್‌

    ಮುಂಬೈ: ಪಂಜಾಬ್ ನ್ಯಾಷನಲ್ ಬ್ಯಾಂಕ್ ಸಾಲ ಹಗರಣದಲ್ಲಿ (PNB Scam) ಪ್ರಮುಖ ಆರೋಪಿಯಾದ ದೇಶ ಭ್ರಷ್ಟ ವಜ್ರೋದ್ಯಮಿ ಮೆಹುಲ್ ಚೋಕ್ಸಿ (Mehul Choksi) ಬೆಲ್ಜಿಯಂನ್‌ ಆಂಟ್ವೆರ್ಪ್‌ನಲ್ಲಿ ಪತ್ನಿ ಪ್ರೀತಿ ಚೋಕ್ಸಿಯೊಂದಿಗೆ ವಾಸಿಸುತ್ತಿದ್ದಾರೆ. ಅವರನ್ನು ಭಾರತಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಲು ಭಾರತೀಯ ಅಧಿಕಾರಿಗಳು ಬೆಲ್ಜಿಯಂ ಅಧಿಕಾರಿಗಳನ್ನ ಸಂಪರ್ಕಿಸಿದ್ದಾರೆ ಎಂದು ವರದಿಯಾಗಿದೆ.

    ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ (PNB) 13,850 ಕೋಟಿ ರೂಪಾಯಿ ವಂಚಿಸಿದ ಆರೋಪದ ಮೇಲೆ ಕೇಂದ್ರೀಯ ತನಿಖಾ ಸಂಸ್ಥೆ (CBI) ಮತ್ತು ಜಾರಿ ನಿರ್ದೇಶನಾಲಯ (ED)ಕ್ಕೆ ಪ್ರಮುಖವಾಗಿ ಬೇಕಾಗಿರುವ ಚೋಕ್ಸಿ ಸದ್ಯ ಕೆರಿಬಿಯನ್ ದ್ವೀಪ ರಾಷ್ಟ್ರವಾದ ಆಂಟಿಗುವಾ ಮತ್ತು ಬಾರ್ಬುಡಾದಲ್ಲಿ ವಾಸಿಸುತ್ತಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಮರಗಳ ಮಾರಣ ಹೋಮ – 100 ವರ್ಷಗಳ ಹಳೆಯ ಮರಗಳಿಗೆ ಕೊಡಲಿ ಏಟು!

    ವೈದ್ಯಕೀಯ ಚಿಕಿಯತ್ಸೆಗಾಗಿ ತೆರಳಿದ್ದ ಚೋಕ್ಸಿ ದ್ವೀಪರಾಷ್ಟ್ರದ ಪ್ರಜೆಯಾಗಿ ಉಳಿದಿದ್ದಾರೆ ಎಂದು ಅಲ್ಲಿನ ಸಚಿವ ಇಪಿ ಚೆಟ್ ಗ್ರೀನ್ ಇತ್ತೀಚೆಗೆ ತಿಳಿಸಿದ್ದಾರೆ ಎಂದು ಸುದ್ದಿಷಂಸ್ಥೆಯೊಂದು ವರದಿ ಮಾಡಿದೆ.

    65 ವರ್ಷದ ಚೋಕ್ಸಿ 2023ರ ನವೆಂಬರ್‌ 15ರಿಂದ ʻಎಫ್‌- ರೆಸಿಡೆನ್ಸಿʼ ಪೌರತ್ವ ಕಾರ್ಡ್‌ ಪಡೆದು ಬೆಲ್ಜಿಯಂನಲ್ಲಿ ಕಾನೂನುಬದ್ಧವಾಗಿ ವಾಸಿಸುತ್ತಿದ್ದಾರೆ. ಅವರ ಪತ್ನಿ ಬೆಲ್ಜಿಯಂ ನವರೇ ಆದ್ದರಿಂದ ಪೌರತ್ವ ಕಾರ್ಡ್‌ ಪಡೆಯಲು ಚೋಕ್ಸಿಗೆ ಸಹಕಾರ ನೀಡಿದ್ದಾರೆ. ಈ ನಡುವೆ ಭಾರತಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಯಿಂದ ತಪ್ಪಿಸಿಕೊಳ್ಳೋದಕ್ಕೆ ಚೋಕ್ಸಿ ನಕಲಿ ದಾಖಲೆಗಳನ್ನ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಬಿಸಿಲಿನಿಂದ ಬರಿದಾದ ವೇದಾವತಿ ನದಿ ಒಡಲು – ತೀರದಲ್ಲೇ ಬೋರ್ ಕೊರೆಸಲು ರೈತರ ಸಾಹಸ

    ಸದ್ಯ ಚೋಕ್ಸಿ ಭಾರತದ ಪೌರತ್ವವನ್ನೂ ತ್ಯಜಿಸಿಲ್ಲ. ಒಂದು ವೇಳೆ ತಾತ್ಕಾಲಿಕವಾಗಿ ಪಡೆದಿರುವ ಬೆಲ್ಜಿಯಂ ಪೌರತ್ವವನ್ನು ಶಾಶ್ವತವಾಗಿ ಪರಿವರ್ತಿಸಿದ್ರೆ, ಮುಂದೆ ಆತ ಯುರೋಪಿಯನ್‌ ರಾಷ್ಟ್ರಗಳಲ್ಲಿ ಸ್ವತಂತ್ರವಾಗಿ ಪ್ರಯಾಣಿಸಲು ಅವಕಾಶ ಮಾಡಿಕೊಟ್ಟಂತಾಗುತ್ತದೆ. ಬಳಿಕ ಆತನನ್ನು ಕರೆತರಲು ಭಾರತಕ್ಕೆ ಕಷ್ಟವಾಗಬಹುದು ಎನ್ನಲಾಗಿದೆ. ಈ ನಡುವೆ ಚೋಕ್ಸಿ ಕ್ಯಾನ್ಸರ್‌ ಚಿಕಿತ್ಸೆಗಾಗಿ ಸ್ವಿಟ್ಜರ್ಲೆಂಡ್‌ಗೆ ತೆರಳುವ ಪ್ಲ್ಯಾನ್‌ನಲ್ಲಿದ್ದಾರೆ ಎಂದು ಕೆಲ ವರದಿಗಳು ತಿಳಿಸಿವೆ.

    ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ ಹಗರಣದ ಪ್ರಮುಖ ಆರೋಪಿಯಾದ ಚೋಕ್ಸಿ 2018ರಲ್ಲಿ ಭಾರತದಿಂದ ಫಲಾಯನ ಮಾಡಿದರು. ಇದನ್ನೂ ಓದಿ: Photo Gallery | IPL ಉದ್ಘಾಟನಾ ವೇದಿಕೆಯಲ್ಲಿ ಬೆಡಗು ಬಿನ್ನಾಣ; ಬಳ್ಳಿಯಂತೆ ಬಳುಕಿದ ದಿಶಾ!

  • ರೆಡ್‌ ಕಾರ್ನರ್‌ ನೋಟಿಸ್‌ ಪಟ್ಟಿಯಿಂದ ಔಟ್‌- ಇನ್ನು ಮುಂದೆ ವಿಶ್ವದೆಲ್ಲೆಡೆ ವಂಚಕ ಮೆಹುಲ್‌ ಚೋಕ್ಸಿ ಸಂಚರಿಸಬಹುದು

    ರೆಡ್‌ ಕಾರ್ನರ್‌ ನೋಟಿಸ್‌ ಪಟ್ಟಿಯಿಂದ ಔಟ್‌- ಇನ್ನು ಮುಂದೆ ವಿಶ್ವದೆಲ್ಲೆಡೆ ವಂಚಕ ಮೆಹುಲ್‌ ಚೋಕ್ಸಿ ಸಂಚರಿಸಬಹುದು

    ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್‌ನ 13 ಸಾವಿರ ಕೋಟಿ ರೂ. ವಂಚನೆ ಪ್ರಕರಣದಲ್ಲಿ ಭಾಗಿಯಾಗಿರುವ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿ (Mehul Choksi) ಹೆಸರನ್ನು ಇಂಟರ್‌ಪೋಲ್‌ (Interpol) ರೆಡ್‌ ಕಾರ್ನರ್‌ ನೋಟಿಸ್‌ ಪಟ್ಟಿಯಿಂದ ತೆಗೆದು ಹಾಕಿದೆ.

    ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಮೆಹುಲ್ ಚೋಕ್ಸಿ ಪರ ವಕೀಲ ವಿಜಯ್ ಅಗರ್ವಾಲ್, ನಮ್ಮ ಕಾನೂನು ತಂಡದ ಪ್ರಯತ್ನಗಳಿಂದಾಗಿ ನನ್ನ ಕಕ್ಷಿದಾರರ ಮೇಲಿರುವ ಆರೋಪ ಮತ್ತು ಅವರ ಮೇಲೆ ಹೇರಿದ ಹಲವಾರು ಷರತ್ತುಗಳನ್ನು ಅಂತರರಾಷ್ಟ್ರೀಯ ಸಮುದಾಯವು ಅನುಮೋದಿಸದ ಕಾರಣ ರೆಡ್‌ ಕಾರ್ನರ್‌ ನೋಟಿಸ್‌ ಪಟ್ಟಿಯಿಂದ ಇಂಟರ್‌ಪೋಲ್‌ ತೆಗೆದು ಹಾಕಿದೆ ಎಂದು ತಿಳಿಸಿದ್ದಾರೆ.

    ರೆಡ್‌ ಕಾರ್ನರ್‌ ನೋಟಿಸ್‌ (Red Corner Notice) ಪಟ್ಟಿಯಿಂದ ತಮ್ಮ ಹೆಸರು ತೆಗೆದು ಹಾಕುವಂತೆ ಚೋಕ್ಸಿ ಪರ ವಕೀಲರು ಫ್ರಾನ್ಸ್‌ನ ಲಿಯಾನ್‌ನಲ್ಲಿ ಕೇಂದ್ರ ಕಚೇರಿ ಹೊಂದಿರುವ ಸಂಸ್ಥೆಗೆ ಮನವಿ ಸಲ್ಲಿಸಿದ್ದರು. ಅದರ ಆಧಾರದಲ್ಲಿ ಅವರ ಹೆಸರನ್ನು ಡೇಟಾಬೇಸ್‌ನಿಂದ ಕೈಬಿಡಲಾಗಿದೆ. ಇಂಟರ್‌ಪೋಲ್‌ ನಿರ್ಧಾರದ ಬಗ್ಗೆ ಕೇಂದ್ರೀಯ ತನಿಖಾ ದಳ (CBI) ಇಲ್ಲಿಯರೆಗೆ ಯಾವುದೇ ಪ್ರತಿಕ್ರಿಯೆನೀಡಿಲ್ಲ.

    ಮುಂದೇನು?
    ರೆಡ್ ಕಾರ್ನರ್ ನೋಟಿಸ್ ಜಾರಿಯಾದರೆ ಆರೋಪಿಗಳು ಯಾವುದೇ ದೇಶದಲ್ಲಿ ಅಡಗಿದ್ದರೂ ಬಂಧನ ಮಾಡಬಹುದು. ರೆಡ್‌ ಕಾರ್ನರ್‌ ನೋಟಿಸ್‌ ಪಟ್ಟಿಯಿಂದ ಹೆಸರನ್ನು ತೆಗೆದ ಹಿನ್ನೆಲೆಯಲ್ಲಿ ಭಾರತವನ್ನು ಹೊರತುಪಡಿಸಿ ಮೆಹುಲ್ ಚೋಕ್ಸಿ ಯಾವುದೇ ದೇಶಕ್ಕೆ ಮುಕ್ತವಾಗಿ ಪ್ರಯಾಣಿಸಬಹುದು.

    ಚೋಕ್ಸಿ ವಿರುದ್ಧ ಆರೋಪ ಏನು?
    ನೀರವ್ ಮೋದಿ ಜೊತೆ ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ ವಂಚನೆ ಪ್ರಕರಣದಲ್ಲಿ ಭಾಗಿಯಾಗಿದ್ದ ಗೀತಾಂಜಲಿ ಜುವೆಲ್ಲರಿಯ ಮೆಹುಲ್ ಚೋಕ್ಸಿ ವಿರುದ್ಧ ಕೂಡ ಸಿಬಿಐ ಎಫ್‍ಐಆರ್ ದಾಖಲಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ನಾಲ್ಕು ಬಾರಿ ಸಮನ್ಸ್ ನೀಡಿದರೂ ಆರೋಪಿಗಳಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ರೆಡ್ ಕಾರ್ನರ್ ನೋಟಿಸ್ (Red Corner Notice) ಜಾರಿಗೊಳಿಸುವಂತೆ ಇಂಟರ್ ಪೋಲ್‍ಗೆ ಮನವಿ ಮಾಡಿಕೊಂಡಿತ್ತು.  ಇದನ್ನೂ ಓದಿ: ಭಾರತದಲ್ಲಿ ವಂಚನೆ ಮಾಡಿದವರು ಕೆರಿಬಿಯನ್ ದ್ವೀಪಕ್ಕೆ ಓಡುವುದು ಯಾಕೆ?

    ಅತಿ ಹೆಚ್ಚು ಸಾಲ ಮನ್ನಾ ಮಾಡಿಸಿಕೊಂಡ ಉದ್ದೇಶಪೂರ್ವಕ ಸುಸ್ತಿದಾರರ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ಮೆಹುಲ್ ಚೋಕ್ಸಿ ಹೆಸರಿದೆ. ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ 13 ಸಾವಿರ ಕೋಟಿ ರೂ. ಸಾಲ ಮರುಪಾವತಿಸದೆ 2018ರಿಂದ ಬಾರ್ಬಡೋಸ್‍ನ ಆಂಟಿಗುವಾದಲ್ಲಿ ಮೆಹುಲ್ ಚೋಕ್ಸಿ ತಲೆಮರೆಸಿಕೊಂಡಿದ್ದು ಭಾರತಕ್ಕೆ ಕರೆ ತರಲು ಸರ್ಕಾರ ಅಲ್ಲಿನ ನ್ಯಾಯಾಲಯದಲ್ಲಿ ಕಾನೂನು ಸಮರ ನಡೆಸುತ್ತಿದೆ.

    ಏನಿದು ರೆಡ್‌ ಕಾರ್ನರ್‌ನೋಟಿಸ್‌?
    ಇಂಟರ್‌ಪೋಲ್‌ ತನ್ನ 192 ಸದಸ್ಯ ರಾಷ್ಟ್ರಗಳಿಗೆ ಆರೋಪಿ ತಮ್ಮ ದೇಶದಲ್ಲಿ ತಲೆಮರೆಸಿಕೊಂಡಿದ್ದಲ್ಲಿ ಅವರನ್ನು ಪತ್ತೆ ಹಚ್ಚಿ ಬಂಧಿಸುವಂತೆ ಸೂಚಿಸುವ ಆದೇಶವೇ ರೆಡ್‌ ಕಾರ್ನರ್‌ ನೋಟಿಸ್‌. ಚಾರ್ಜ್‌ಶೀಟ್‌ ಸಲ್ಲಿಕೆಯಾಗಿ ಒಂದು ದೇಶದಿಂದ ಇನ್ನೊಂದು ದೇಶಕ್ಕೆ ಪರಾರಿಯಾಗಿರುವ ಆರೋಪಿಗಳ ಇತರ ದೇಶಗಳಿಗೆ ಎಚ್ಚರಿಸುವುದು ರೆಡ್ ಕಾರ್ನರ್ ನೋಟಿಸ್‌ ನೀಡುವುದರ ಉದ್ದೇಶ.

    ಈ ನೋಟಿಸ್‌ ಜಾರಿಯಾದ ಬಳಿಕ ಆರೋಪಿಗಳು ಅಂತಾರಾಷ್ಟ್ರೀಯ ಗಡಿಗಳನ್ನು ದಾಟಿ ಪ್ರಯಾಣಿಸುವುದು ಅಸಾಧ್ಯವಾಗಲಿದೆ. ಬಂಧನದ ಬಳಿಕ ಆ ದೇಶದಿಂದ ಆರೋಪಿಗಳನ್ನು ಇನ್ನೊಂದು ದೇಶಕ್ಕೆ ಕಳುಹಿಸಲಾಗುತ್ತದೆ.

    ಪೌರತ್ವ ಹೇಗೆ ಸಿಗುತ್ತದೆ?
    ಕೆರಿಬಿಯನ್ ದ್ವೀಪ ರಾಷ್ಟಗಳ ಪೌರತ್ವ ಪಡೆಯುವುದು ಅತ್ಯಂತ ಸರಳ ಪ್ರಕ್ರಿಯೆಯಾಗಿದೆ. ಈ ರಾಷ್ಟ್ರಗಳ ಪೌರತ್ವ ಪಡೆಯಲು ಅಲ್ಲಿನ ಶುಗರ್ ಇಂಡಸ್ಟ್ರಿ ಡೈವರ್ಸಿಫಿಕೇಷನ್ ಫೌಂಡೇಶನ್‍ಗೆ 1.6 ಕೋಟಿ ರೂ. ದೇಣಿಗೆ ಅಥವಾ ಪೂರ್ವ ನಿಗದಿತ ರಿಯಲ್ ಎಸ್ಟೇಟ್ ಯೋಜನೆಗಳಲ್ಲಿ 2.8 ಕೋಟಿ ರೂ. ಹಣ ಹೂಡಿಕೆ ಮಾಡಿದರೆ ಆ ದೇಶದ ಪೌರತ್ವ ಸಿಗುತ್ತದೆ. ಆಂಟಿಗುವಾದಲ್ಲಿರುವ ಚೋಕ್ಸಿ ಭಾರತಕ್ಕೆ ಹಸ್ತಾಂತರ ಮಾಡಬೇಕಾದರೆ ಕಾನೂನು ಸಮರ ಮಾಡಬೇಕಾಗುತ್ತದೆ. ಅಲ್ಲಿನ ಕೋರ್ಟ್‌ ಭಾರತದ ವಾದವನ್ನು ಪುರಸ್ಕರಿಸಿದರೆ ಮಾತ್ರ ಚೋಕ್ಸಿಯನ್ನು ಮರಳಿ ದೇಶಕ್ಕೆ ಕರೆ ತರಬಹುದು.

  • ಮಲ್ಯ, ಮೋದಿ, ಚೋಕ್ಸಿಯ 18,170 ಕೋಟಿ ರೂ. ಆಸ್ತಿ ಜಪ್ತಿ

    ಮಲ್ಯ, ಮೋದಿ, ಚೋಕ್ಸಿಯ 18,170 ಕೋಟಿ ರೂ. ಆಸ್ತಿ ಜಪ್ತಿ

    ನವದೆಹಲಿ: ಬ್ಯಾಂಕುಗಳಿಗೆ ಸಾಲ ಮಾಡಿ ದೇಶ ಬಿಟ್ಟು ಪರಾರಿಯಾಗಿರುವ ವಿಜಯ್ ಮಲ್ಯ, ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿಗೆ ಜಾರಿ ನಿರ್ದೇಶನಾಲಯ(ಇಡಿ) ಶಾಕ್ ನೀಡಿದೆ.

    ವಿಜಯ್ ಮಲ್ಯ, ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿಗೆ ಸೇರಿದ 18,170 ಕೋಟಿ ರೂ. ಆಸ್ತಿಯನ್ನು ಅಕ್ರಮ ಹಣ ವರ್ಗಾವಣೆ ತಡೆ (ಪಿಎಂಎಲ್‍ಎ ಕಾಯ್ದೆ ಅಡಿ ಜಪ್ತಿ ಮಾಡಿದೆ.

    ಈ ಮೂಲಕ ಮೂವರಿಂದ ಬ್ಯಾಂಕ್‍ಗಳಿಗೆ ಆಗಿರುವ ನಷ್ಟದ ಶೇ.80ರಷ್ಟು ಮೊತ್ತವನ್ನು ಜಪ್ತಿ ಮಾಡಿದಂತಾಗಿದೆ. ಇದರಲ್ಲಿ 9,371 ಕೋಟಿ ರೂ.ಗಳನ್ನು ಬ್ಯಾಂಕ್ ಗಳಿಗೆ ಒಪ್ಪಿಸಲಾಗಿದೆ ಎಂದು ಇಡಿ ಟ್ವಿಟ್ಟರ್ ನಲ್ಲಿ ತಿಳಿಸಿದೆ. ಇದನ್ನೂ ಓದಿ: ಸ್ಫೋಟಕ ಬಳಸಿ ನೀರವ್ ಮೋದಿಯ 100 ಕೋಟಿ ಮೌಲ್ಯದ ಬಂಗಲೆ ಧ್ವಂಸ- ವಿಡಿಯೋ ನೋಡಿ

    ವಿಜಯ್ ಮಲ್ಯ ಹಾಗೂ ನೀರವ್ ಮೋದಿ, ಭಾರತದ ಬ್ಯಾಂಕ್‍ಗಳಲ್ಲಿ ಸಾಲ ಪಡೆದು ದೇಶ ಬಿಟ್ಟು ಪರಾರಿಯಾಗಿ ಇದೀಗ ಲಂಡನ್‍ನಲ್ಲಿ ನೆಲೆಸಿದ್ದಾರೆ. ಇಬ್ಬರನ್ನು ದೇಶಕ್ಕೆ ಕರೆತರಲು ಭಾರತ ಸರ್ಕಾರ ಇಂಗ್ಲೆಂಡ್ ಕೋರ್ಟ್‍ನಲ್ಲಿ ಕಾನೂನು ಹೋರಾಟ ನಡೆಸುತ್ತಿದೆ. ಡೊಮಿನಿಕಾದಲ್ಲಿ ಸಿಕ್ಕಿ ಬಿದ್ದಿರುವ ಮೆಹುಲ್ ಚೋಕ್ಸಿ ವಿರುದ್ಧ ಸಿಬಿಐ ಚಾರ್ಜ್‍ಶೀಟ್ ಸಲ್ಲಿಸಿದೆ. ಡೊಮಿನಿಕಾ ಸರ್ಕಾರ ಚೋಕ್ಸಿಯನ್ನು ನಿಷೇಧಿತ ವಲಸಿಗ ಎಂದು ಘೋಷಿಸಿದ್ದು, ಭಾರತದ ಕಾನೂನು ಹೋರಾಟಕ್ಕೆ ಬಲ ಬಂದಿದೆ.