Tag: Meitei

  • ಮೈತೇಯಿ ಸಮುದಾಯದ ನಾಯಕ ಬಂಧನ – ಪೆಟ್ರೋಲ್‌ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳುವುದಾಗಿ ಯುವಕರ ಬೆದರಿಕೆ

    ಮೈತೇಯಿ ಸಮುದಾಯದ ನಾಯಕ ಬಂಧನ – ಪೆಟ್ರೋಲ್‌ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳುವುದಾಗಿ ಯುವಕರ ಬೆದರಿಕೆ

    ಇಂಫಾಲ್: ಮಣಿಪುರದ (Manipur) ರಾಜಧಾನಿ ಇಂಫಾಲ್‌ನಲ್ಲಿ ಮೈತೇಯಿ-ಕುಕಿ ಜನಾಂಗೀಯ ಘರ್ಷಣೆ ಮತ್ತೆ ಹೆಚ್ಚಾಗಿದೆ. ಮೈತೇಯಿ ಸಮುದಾಯದ ಸ್ವಯಂಸೇವಕ ಗುಂಪಾದ ಅರಾಂಬೈ ಟೆಂಗೋಲ್ (ಎಟಿ)ನ ಪ್ರಮುಖ ನಾಯಕನ ಬಂಧನವನ್ನು ವಿರೋಧಿಸಿ ಯುವಕರ ಗುಂಪೊಂದು ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳುವುದಾಗಿ ಬೆದರಿಕೆ ಹಾಕಿದೆ.

    ಭದ್ರತಾ ಪಡೆಗಳು ಎಟಿ ನಾಯಕ ಕಾನನ್ ಸಿಂಗ್‌ನನ್ನು ಬಂಧಿಸಿದ ನಂತರ ಇಂಫಾಲ್‌ನಲ್ಲಿ ಶನಿವಾರ ರಾತ್ರಿ ಪ್ರತಿಭಟನೆಗಳು ಭುಗಿಲೆದ್ದವು. ಪ್ರತಿಭಟನಾಕಾರರು ಟೈರ್‌ಗಳನ್ನು ಸುಟ್ಟು ರಸ್ತೆಗಳನ್ನು ತಡೆದರು. ಕೆಲವು ಇಂಫಾಲ್ ನಿವಾಸಿಗಳು ಗುಂಡಿನ ಶಬ್ದ ಕೇಳಿರುವುದಾಗಿ ವರದಿ ಮಾಡಿದ್ದಾರೆ. ಇದನ್ನೂ ಓದಿ:

    ಕಪ್ಪು ಟಿ-ಶರ್ಟ್‌ಗಳಲ್ಲಿ ಯುವಕರ ಗುಂಪೊಂದು ಪೆಟ್ರೋಲ್ ತುಂಬಿದ ಬಾಟಲಿಗಳನ್ನು ಹಿಡಿದು ಪ್ರತಿಭಟಿಸಿದೆ. ‘ನಾವು ಶಸ್ತ್ರಾಸ್ತ್ರಗಳನ್ನು ತ್ಯಜಿಸಿದ್ದೇವೆ. ಪ್ರವಾಹದ ಸಮಯದಲ್ಲಿ ನೀವು ಮಾಡಬೇಕಾದ್ದನ್ನು ನಾವು ಮಾಡಿದ್ದೇವೆ. ಈಗ ನೀವು ನಮ್ಮನ್ನು ಬಂಧಿಸುತ್ತಿದ್ದೀರಿ. ನಾವು ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’ ಎಂದು ಪೆಟ್ರೋಲ್‌ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ.

    2024ರ ಫೆಬ್ರವರಿಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮೊಯಿರಾಂಗ್ಥೆಮ್ ಅಮಿತ್ ಅವರ ಮನೆಯ ಮೇಲಿನ ದಾಳಿ ಹಾಗೂ ಹಿರಿಯ ಪೊಲೀಸ್ ಅಧಿಕಾರಿಯ ಅಪಹರಣದಲ್ಲಿ ಕಾನನ್ ಸಿಂಗ್ ಪ್ರಮುಖ ಶಂಕಿತನಾಗಿದ್ದಾನೆ.

    ಬಿಷ್ಣುಪುರ, ಇಂಫಾಲ್ ಪಶ್ಚಿಮ, ಇಂಫಾಲ್ ಪೂರ್ವ, ತೌಬಲ್ ಮತ್ತು ಕಕ್ಚಿಂಗ್ ಎಂಬ ಐದು ಜಿಲ್ಲೆಗಳಲ್ಲಿ ಐದು ದಿನಗಳವರೆಗೆ ಕರ್ಫ್ಯೂ ವಿಧಿಸಲಾಗಿದ್ದು, ಇಂಟರ್ನೆಟ್ ಸಂಪರ್ಕ ಕಡಿತಗೊಳಿಸಲಾಗಿದೆ.

  • ಮಣಿಪುರದಲ್ಲಿ ನಿಲ್ಲದ ಸಂಘರ್ಷ – ತಂದೆ, ಮಗ ಸೇರಿ ಮೂವರು ಬಲಿ

    ಮಣಿಪುರದಲ್ಲಿ ನಿಲ್ಲದ ಸಂಘರ್ಷ – ತಂದೆ, ಮಗ ಸೇರಿ ಮೂವರು ಬಲಿ

    ಇಂಪಾಲ: ಮಣಿಪುರದ (Manipur) ಬಿಷ್ಣುಪುರ (Bishnupur) ಜಿಲ್ಲೆಯಲ್ಲಿ ಇಂದು (ಶನಿವಾರ) ಮುಂಜಾನೆ ನಡೆದ ಹಿಂಸಾಚಾರದಲ್ಲಿ (Violence) ತಂದೆ-ಮಗ ಸೇರಿದಂತೆ ಮೂವರು ಗ್ರಾಮಸ್ಥರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಮೂಲಗಳು ತಿಳಿಸಿವೆ.

    ಶಂಕಿತ ದಂಗೆಕೋರರು ಮಧ್ಯರಾತ್ರಿ 2 ಗಂಟೆಯ ಸುಮಾರಿಗೆ ಬಿಷ್ಣುಪುರದ ಕ್ವಾಕ್ಟ ಬಳಿಯ ಉಖಾ ತಂಪಕ್ ಗ್ರಾಮದ ಮೇಲೆ ದಾಳಿ ನಡೆಸಿದ್ದು, ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಒಂದು ಫ್ರಿಡ್ಜ್‌ಗಾಗಿ 7 ತಿಂಗಳ ಗರ್ಭಿಣಿಯ ಜೀವವೇ ಹೋಯ್ತು!

    ಈ ಗುಂಡಿನ ದಾಳಿಯಲ್ಲಿ ತಮ್ಮ ಮನೆಗಳನ್ನು ಕಾಯುತ್ತಿದ್ದ ತಂದೆ – ಮಗ ಮತ್ತು ಇನ್ನೋರ್ವ ವ್ಯಕ್ತಿ ಸಾವನ್ನಪ್ಪಿದ್ದು, ಮೃತರು ಯಾವುದೇ ಶಸ್ತ್ರಾಸ್ತ್ರಗಳನ್ನು ಹೊಂದಿರಲಿಲ್ಲ. ಬಫರ್ ಝೋನ್ ದಾಟಿ ಮೈತೇಯ್ ಪ್ರದೇಶಕ್ಕೆ ನುಗ್ಗಿದ ದಂಗೆಕೋರರು ಗುಂಡಿನ ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಹರಿಯಾಣ ಧಗಧಗ: ಅಕ್ರಮ ವಲಸಿಗರ 250 ಗುಡಿಸಲುಗಳು ನೆಲಸಮ, 41 ಕೇಸ್, 176 ಮಂದಿ ಅರೆಸ್ಟ್, 90 ಮಂದಿ ವಶಕ್ಕೆ

    ಮೃತರು ಮೈತೇಯ್ (Meitei) ಸಮುದಾಯದವರಾಗಿದ್ದು, ದಂಗೆಕೋರರು ಕುಕಿ (Kuki) ಸಮುದಾಯದ ಹಲವಾರು ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ. ಸದ್ಯ ಕ್ವಾಕ್ಟ ಪ್ರದೇಶದಲ್ಲಿ ಕುಕಿ ಸಮುದಾಯ ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ. ಇದನ್ನೂ ಓದಿ: ಹಿಜಬ್‌ ಹಾಕದೇ ಶಾಲೆಗೆ ಬಂದ ಬಾಲಕಿಯರನ್ನು ತಡೆದ 10 ನೇ ತರಗತಿ ಮುಸ್ಲಿಂ ವಿದ್ಯಾರ್ಥಿ – ಗುಂಪಿನಿಂದ ಹಲ್ಲೆ

    ಗುಂಡಿನ ದಾಳಿಯಲ್ಲಿ ಮಣಿಪುರದ ಕಮಾಂಡೋ ತಲೆಗೆ ತೀವ್ರ ಗಾಯವಾಗಿದ್ದು, ಬಿಷ್ಣುಪುರದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಗಾಯಾಳು ಕಮಾಂಡೋವನ್ನು ಬಿಷ್ಣುಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲದೇ ಘಟನೆ ನಡೆದ ಪ್ರದೇಶದಲ್ಲಿ ಅರೆಸೇನಾ ಪಡೆಗಳನ್ನು ನಿಯೋಜಿಸಲಾಗಿದೆ. ಇದನ್ನೂ ಓದಿ: ಕಾಶ್ಮೀರದಲ್ಲಿ ಉಗ್ರರಿಂದ ಗುಂಡಿನ ದಾಳಿ – ಮೂವರು ಯೋಧರು ಹುತಾತ್ಮ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಣಿಪುರ ಸಂಘರ್ಷ ಎಫೆಕ್ಟ್‌ – ಮೈತೇಯ್‌ ಸಮುದಾಯದ ಪತಿಯಿಂದ ಬೇರೆಯಾದ ಕುಕಿ ಮಹಿಳೆ

    ಮಣಿಪುರ ಸಂಘರ್ಷ ಎಫೆಕ್ಟ್‌ – ಮೈತೇಯ್‌ ಸಮುದಾಯದ ಪತಿಯಿಂದ ಬೇರೆಯಾದ ಕುಕಿ ಮಹಿಳೆ

    ಇಂಫಾಲ್: ಮೀಸಲಾತಿ ವಿಚಾರವಾಗಿ ಮಣಿಪುರದಲ್ಲಿ (Manipur violence) ಮೈತೇಯ್‌ (Meitei) ಮತ್ತು ಕುಕಿ ಸಮುದಾಯಗಳ (Kuki woman) ನಡುವೆ ಉಂಟಾದ ಸಂಘರ್ಷ ಈಗ ದೇಶಾದ್ಯಂತ ಸದ್ದು ಮಾಡುತ್ತಿದೆ. ಇದರ ಪರಿಣಾಮವಾಗಿ ಈ ಎರಡೂ ಸಮುದಾಯಕ್ಕೆ ಸೇರಿದ ದಂಪತಿ ಪರಸ್ಪರ ಬೇರಾಗಿದ್ದು, ಕಣ್ಣೀರಿಡುತ್ತಿದ್ದಾರೆ.

    ಕುಕಿ ಸಮುದಾಯದ ಮಹಿಳೆಯೊಬ್ಬರಿಗೆ ಮೈತೇಯ್‌ ಸಮುದಾಯದ ವ್ಯಕ್ತಿಯನ್ನು ಪ್ರೇಮಿಸಿ ಮದುವೆಯಾಗಿದ್ದರು. ಮಣಿಪುರ ಸಂಘರ್ಷಕ್ಕೂ ಹಿಂದಿನ ದಿನಗಳವರೆಗೂ ಇಬ್ಬರು ಚೆನ್ನಾಗಿಯೇ ಸಂಸಾರ ನಡೆಸುತ್ತಿದ್ದರು. ಆದರೆ ಸಂಘರ್ಷ ಉಂಟಾಗಿದ್ದು, ಇವರಿಬ್ಬರನ್ನು ಬೇರಾಗುವಂತೆ ಮಾಡಿದೆ. ಇದನ್ನೂ ಓದಿ: ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ

    ಹಿಂಸಾಚಾರ ಪೀಡಿತ ಸ್ಥಳಗಳಿಂದ ನೂರಾರು ಕುಟುಂಬಗಳು ಬೇರೆ ಕಡೆ ಹೋಗಿ ನೆಲೆಸಿವೆ. ಅದೇ ರೀತಿ ಈ ಇಬ್ಬರು ದಂಪತಿ ಪರಿಹಾರ ಶಿಬಿರದಲ್ಲಿ ಆಶ್ರಯ ಪಡೆದಿದ್ದರು. ದಂಪತಿಯು ಇಂಫಾಲ್‌ನ ಪರಿಹಾರ ಶಿಬಿರದಲ್ಲಿ ಒಟ್ಟಿಗೆ ಇದ್ದರು. ಆದರೆ ಜನರು ಆಕೆ ಕುಕಿ ಸಮುದಾಯದಿಂದ ಬಂದವಳು ಎಂದು ತಿಳಿದಾಗ, ಪರಿಹಾರ ಶಿಬಿರವನ್ನು ತೊರೆಯುವಂತೆ ಒತ್ತಾಯಿಸಲಾಯಿತು.

    ಜನರ ಒತ್ತಡದ ಕಾರಣದಿಂದಾಗಿ ದಂಪತಿ ಪರಸ್ಪರ ಬೇರಾಗಿದ್ದಾರೆ. ಈ ಬಗ್ಗೆ ಮಹಿಳೆ ಅಳಲು ತೋಡಿಕೊಂಡಿದ್ದಾರೆ. ರಾಜ್ಯದಲ್ಲಿ ತಲೆದೋರಿರುವ ಹಿಂಸಾಚಾರ ಇನ್ನೂ ಕಡಿಮೆಯಾಗಿಲ್ಲ. ಮಣಿಪುರ ಹಿಂಸಾಚಾರ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ಸಂಸತ್‌ನಲ್ಲೂ ಗದ್ದಲಕ್ಕೆ ಕಾರಣವಾಗಿದೆ. ಈ ಎಲ್ಲದರ ಮಧ್ಯೆ ಮತ್ತೊಂದು ಪ್ರಕರಣ ಸುದ್ದಿಯಾಗಿದೆ. ಇದನ್ನೂ ಓದಿ: ನಿಮಗೆ ಬೇಕಾದಂತೆ ಕರೆಯಿರಿ ಮಿಸ್ಟರ್‌ ಮೋದಿ – ಪ್ರಧಾನಿಗೆ ರಾಹುಲ್‌ ಗಾಂಧಿ ತಿರುಗೇಟು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಣಿಪುರ ಮಹಿಳೆಯ ಬೆತ್ತಲೆ ಮೆರವಣಿಗೆ ಪ್ರಕರಣ – ಓರ್ವ ಆರೋಪಿ ಅರೆಸ್ಟ್

    ಮಣಿಪುರ ಮಹಿಳೆಯ ಬೆತ್ತಲೆ ಮೆರವಣಿಗೆ ಪ್ರಕರಣ – ಓರ್ವ ಆರೋಪಿ ಅರೆಸ್ಟ್

    ಇಂಫಾಲ್: ಮಣಿಪುರದಲ್ಲಿ (Manipur) ಇಬ್ಬರು ಮಹಿಳೆಯರ (Women) ಬೆತ್ತಲೆ ಮೆರವಣಿಗೆ ಮಾಡಿದ್ದ ಪ್ರಕರಣದಲ್ಲಿ ಓರ್ವ ಆರೋಪಿಯನ್ನು ಪೊಲೀಸರು (Police) ಗುರುವಾರ ಬಂಧಿಸಿದ್ದಾರೆ.

    ಬಂಧಿತ ಆರೋಪಿಯನ್ನು ಹೆರಾದಾಸ್ (32) ಎಂದು ಗುರುತಿಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದ ಮೆರವಣಿಗೆಯ ವೀಡಿಯೋದಲ್ಲಿ ಆರೋಪಿ ಹಸಿರು ಟಿ ಶರ್ಟ್ ಧರಿಸಿದ್ದ. ಇದೇ ವೀಡಿಯೋ ಸಹಾಯದಿಂದ ತೌಬಲ್ ಜಿಲ್ಲೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಸೀಮಾ ಹೈದರ್‌ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌ – ಪಾಕ್‌ ಮಹಿಳೆಯಿಂದ ಭಾರತೀಯ ಯೋಧರಿಗೆ ಫ್ರೆಂಡ್‌ ರಿಕ್ವೆಸ್ಟ್‌

    ಗುಡ್ಡಗಾಡು ಪ್ರದೇಶಗಳಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡುತ್ತಿರುವುದು ಇಂಟರ್‍ನೆಟ್‍ನಲ್ಲಿ ಬುಧವಾರ ಹರಿದಾಡಿತ್ತು. ಹರಿದಾಡಿದ್ದ ವೀಡಿಯೋ 2 ತಿಂಗಳ ಹಳೆಯದ್ದಾಗಿದೆ. ಮಣಿಪುರದಲ್ಲಿ ಹಿಂಸಾಚಾರ ಆರಂಭಗೊಂಡ ಬಳಿಕ ಕಾಂಗ್‍ಫೋಕ್ಪಿ ಜಿಲ್ಲೆಯಲ್ಲಿ ಮೇ 4 ರಂದು ಈ ಘಟನೆ ನಡೆದಿದೆ. ಈ ಸಂಬಂಧ ಅಪಹರಣ, ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ಉಳಿದ ಆರೋಪಿಗಳನ್ನು ಬಂಧಿಸಲು 12 ಜನ ಪೊಲೀಸರ ತಂಡ ರಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಘಟನೆಯ ದಿನ ಸುಮಾರು 800 ರಿಂದ 1,000 ಜನರು ಶಸ್ತ್ರಾಸ್ತ್ರಗಳನ್ನು ಹಿಡಿದು ಗ್ರಾಮವೊಂದಕ್ಕೆ ನುಗ್ಗಿ ಆಸ್ತಿಗಳನ್ನು ಧ್ವಂಸಗೊಳಿಸಿದ್ದರು. ಬಳಿಕ ಮನೆಗಳನ್ನು ಸುಟ್ಟು ಹಾಕಿದ್ದರು. ಈ ವೇಳೆ ಇಬ್ಬರು ಪುರುಷರು ಮತ್ತು ಮೂವರು ಮಹಿಳೆಯರು ದಾಳಿಕೋರರಿಂದ ತಪ್ಪಿಸಿಕೊಳ್ಳಲು ಅರಣ್ಯಕ್ಕೆ ಓಡಿಹೋದರು. ನಂತರ ಅವರನ್ನು ನಾಂಗ್‍ಪೋಕ್ ಸೆಕ್ಮೈ ಪೊಲೀಸ್ ತಂಡವು ರಕ್ಷಿಸಿತ್ತು. ಬಳಿಕ ಪೊಲೀಸ್ ಠಾಣೆಗೆ ಕರೆದೊಯ್ಯುತ್ತಿದ್ದಾಗ ದಾಳಿಕೋರರ ಗುಂಪು ಅಪಹರಿಸಿತ್ತು. ದುಷ್ಕರ್ಮಿಗಳು ಮೇಟಿ (Meitei) ಸಂಘಟನೆಗಳ ಸದಸ್ಯರು ಎಂದು ಶಂಕಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಎಫ್‍ಐಆರ್‌ನಲ್ಲಿ ದಾಖಲಾದ ಮಾಹಿತಿ ಪ್ರಕಾರ ಮಹಿಳೆಯರಿಗೆ ತಮ್ಮ ಬಟ್ಟೆಗಳನ್ನು ತೆಗೆಯುವಂತೆ ದಾಳಿಕೋರರು ಒತ್ತಾಯಿಸಿದ್ದಾರೆ. ಈ ವೇಳೆ ಮಹಿಳೆಯ ಸಹೋದರ ತಡೆಯಲು ಪ್ರಯತ್ನಿಸಿದಾಗ ಆತನನ್ನು ಕೊಲೆ ಮಾಡಲಾಗಿದೆ. ಬಳಿಕ ಸಾಮೂಹಿಕ ಅತ್ಯಾಚಾರ ಮಾಡಲಾಗಿದೆ ಎಂದು ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಮಣಿಪುರದಲ್ಲಿ ಅಮಾನವೀಯ ಘಟನೆ – ಇಬ್ಬರು ಮಹಿಳೆಯರನ್ನು ಬೆತ್ತಲಾಗಿಸಿ ಮೆರವಣಿಗೆ; ಅತ್ಯಾಚಾರ ಆರೋಪ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಆಸ್ಪತ್ರೆಗೆ ತೆರಳುತ್ತಿದ್ದ ಅಂಬುಲೆನ್ಸ್‌ಗೆ ಬೆಂಕಿಯಿಟ್ಟ ಜನರ ಗುಂಪು – 8ರ ಬಾಲಕ, ತಾಯಿ ದುರ್ಮರಣ

    ಆಸ್ಪತ್ರೆಗೆ ತೆರಳುತ್ತಿದ್ದ ಅಂಬುಲೆನ್ಸ್‌ಗೆ ಬೆಂಕಿಯಿಟ್ಟ ಜನರ ಗುಂಪು – 8ರ ಬಾಲಕ, ತಾಯಿ ದುರ್ಮರಣ

    – ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ

    ಗುವಾಹಟಿ: ಈಶಾನ್ಯ ರಾಜ್ಯ ಮಣಿಪುರದಲ್ಲಿ (Manipur Violence) ಜನಾಂಗೀಯ ದ್ವೇಷ, ಹಿಂಸಾಚಾರ ತೀವ್ರ ಸ್ವರೂಪ ಪಡೆದುಕೊಂಡಿದೆ. ತಲೆಗೆ ಗುಂಡೇಟು ಬಿದ್ದು ಗಾಯಗೊಂಡಿದ್ದ 8 ವರ್ಷದ ಬಾಲಕನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಜನರ ಗುಂಪೊಂದು ಅಂಬುಲೆನ್ಸ್‌ಗೆ ಬೆಂಕಿ ಹಚ್ಚಿದೆ. ಇದರಿಂದ ಬಾಲಕ ಮತ್ತು ಆತನ ತಾಯಿ ಮೃತಪಟ್ಟಿರುವ ಘಟನೆ ನಡೆದಿದೆ.

    ಲ್ಯಾಂಫೆಲ್ ಪೊಲೀಸ್ ಠಾಣಾ ವ್ಯಾಪ್ತಿಯ ಇಂಫಾಲ್ ಪಶ್ಚಿಮದ ಇರೊಸೆಂಬಾ ಪ್ರದೇಶದಲ್ಲಿ ಭಾನುವಾರ ಅಂಬುಲೆನ್ಸ್‌ಗೆ ಬೆಂಕಿ ಹಚ್ಚಲಾಗಿದೆ. 8 ವರ್ಷದ ಬಾಲಕ ಟೋನ್ಸಿಂಗ್ ಹ್ಯಾಂಗ್ಸಿಂಗ್, ಬಾಲಕನ ತಾಯಿ ಮೀನಾ ಹ್ಯಾಂಗ್ಸಿಂಗ್ ಮತ್ತು ಅವರ ಸಂಬಂಧಿ ಲಿಡಿಯಾ ಲೌರೆಂಬಮ್ ಮೃತರು ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಮಣಿಪುರದಲ್ಲಿ ಕುಕಿ ದಂಗೆಕೋರರೊಂದಿಗೆ ಬಿಎಸ್‌ಎಫ್ ಗುಂಡಿನ ಚಕಮಕಿ – ಓರ್ವ ಯೋಧ ಸಾವು, ಇಬ್ಬರಿಗೆ ಗಾಯ

    ಪರಿಶಿಷ್ಟ ಪಂಗಡ ಸ್ಥಾನಮಾನಕ್ಕಾಗಿ ಮೈತೇಯಿ ಸಮುದಾಯದ ಬೇಡಿಕೆ ವಿರೋಧಿಸಿ ಮೇ 3 ರಂದು ಗುಡ್ಡಗಾಡು ಜಿಲ್ಲೆಗಳಲ್ಲಿ ಮೆರವಣಿಗೆ ಆಯೋಜಿಸಲಾಗಿತ್ತು. ಇದಾದ ನಂತರ ಮಣಿಪುರದಲ್ಲಿ ಘರ್ಷಣೆ ಭುಗಿಲೆದ್ದಿದೆ. ಮೈತೇಯಿ ಮತ್ತು ಕುಕಿ ಸಮುದಾಯಗಳ ನಡುವೆ ಘರ್ಷಣೆ ನಡೆಯುತ್ತಿದೆ.

    ಅಂಬುಲೆನ್ಸ್‌ ಬೆಂಕಿ ದುರಂತದಲ್ಲಿ ಮೃತಪಟ್ಟ ಮಹಿಳೆ ಮೈತೇಯಿ ಸಮುದಾಯಕ್ಕೆ ಸೇರಿದವರು. ಆಕೆ ಮದುವೆಯಾಗಿರುವ ವ್ಯಕ್ತಿ ಕುಕಿ ಸಮುದಾಯಕ್ಕೆ ಸೇರಿದಾತ. ಇವರಿಗೆ 8 ವರ್ಷ ವಯಸ್ಸಿನ ಮಗನಿದ್ದ. ಈ ದಂಪತಿ ಮಗ ಕಾಂಗ್‌ಚುಪ್‌ನಲ್ಲಿರುವ ಅಸ್ಸಾಂ ರೈಫಲ್ಸ್ ಪರಿಹಾರ ಶಿಬಿರದಲ್ಲಿ ವಾಸಿಸುತ್ತಿದ್ದ. ಶಿಬಿರದಲ್ಲಿ ಮತ್ತು ಸುತ್ತಮುತ್ತ ಭದ್ರತೆ ಬಲಪಡಿಸಲಾಗಿತ್ತು. ಆದರೆ ಭಾನುವಾರ ಈ ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆದು ಬಾಲಕನ ತಲೆಗೆ ಬುಲೆಟ್‌ ಹೊಕ್ಕಿ ಗಾಯಗೊಂಡಿದ್ದ. ಇದನ್ನೂ ಓದಿ: ಮಣಿಪುರದಲ್ಲಿ ಕೋಮು ಸಂಘರ್ಷ: ಅನಧಿಕೃತ ಶಸ್ತ್ರಾಸ್ತ್ರಗಳನ್ನು ಕೂಡಲೇ ಒಪ್ಪಿಸಿ – ದಂಗೆಕೋರರಿಗೆ ಅಮಿತ್‌ ಶಾ ವಾರ್ನಿಂಗ್‌

    ಅಸ್ಸಾಂ ರೈಫಲ್ಸ್ ಹಿರಿಯ ಅಧಿಕಾರಿಯೊಬ್ಬರು ತಕ್ಷಣವೇ ಇಂಫಾಲ್‌ನಲ್ಲಿ ಪೊಲೀಸರೊಂದಿಗೆ ಮಾತನಾಡಿ ಅಂಬುಲೆನ್ಸ್‌ ವ್ಯವಸ್ಥೆ ಮಾಡಿದರು. ತಾಯಿ ಬಹುಸಂಖ್ಯಾತ ಸಮುದಾಯದವಳಾಗಿದ್ದರಿಂದ ಬಾಲಕನನ್ನು ರಸ್ತೆಯ ಮೂಲಕ ಇಂಫಾಲ್‌ನಲ್ಲಿರುವ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದರು. ಐಸೊಸೆಂಬಾದಲ್ಲಿ ನಾಗರಿಕರು ಅಂಬುಲೆನ್ಸ್‌ನ್ನು ಸುಟ್ಟು ಹಾಕಿದರು. ವಾಹನದಲ್ಲಿದ್ದ ಮೂವರೂ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಹಿಂಸಾಚಾರ ನಿಯಂತ್ರಣಕ್ಕೆ ಸ್ಥಳೀಯ ಆಡಳಿತವು ಐದು ದಿನಗಳವರೆಗೆ ಇಂಟರ್ನೆಟ್ ನಿಷೇಧವನ್ನು ವಿಸ್ತರಿಸಿದೆ. ರಾಜ್ಯದ ಮೈತೇಯಿ ಮತ್ತು ಕುಕಿ ಸಮುದಾಯಗಳ ನಡುವೆ ಹಿಂಸಾಚಾರ ಭುಗಿಲೆದ್ದ ನಂತರ ಮೇ 3 ರಿಂದ ಜಾರಿಯಲ್ಲಿರುವ ನಿಷೇಧಾಜ್ಞೆಯನ್ನು ವಿಸ್ತರಿಸಲಾಗಿದೆ. ಇದನ್ನೂ ಓದಿ: ಮಣಿಪುರ ಘರ್ಷಣೆ – ಮೃತರ ಕುಟುಂಬದವರಿಗೆ ಪರಿಹಾರ, ಸರ್ಕಾರಿ ಉದ್ಯೋಗ