Tag: Mekedadatu padayatre

  • ಕಾಂಗ್ರೆಸ್ ಪಾದಯಾತ್ರೆ ಎಫೆಕ್ಟ್ – 25 ಪೊಲೀಸರಿಗೆ ಕೊರೊನಾ

    ಕಾಂಗ್ರೆಸ್ ಪಾದಯಾತ್ರೆ ಎಫೆಕ್ಟ್ – 25 ಪೊಲೀಸರಿಗೆ ಕೊರೊನಾ

    ಕೋಲಾರ: ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಯಿಂದಾಗಿ ಕೊರೊನಾ ಸ್ಫೋಟಗೊಂಡಿದ್ದು, ಈಗಾಗಲೇ ಭದ್ರತೆಗಾಗಿ ತೆರಳಿದ್ದ 25 ಮಂದಿ ಪೊಲೀಸರಿಗೆ ಸೋಂಕು ದೃಢಪಟ್ಟಿದೆ.

    ಶುಕ್ರವಾರ ನಗರದ ಟ್ರಾಫಿಕ್ ಪೊಲೀಸ್ ಠಾಣೆಯ ಮೂವರು ಪೊಲೀಸ್ ಪೇದೆಗಳಿಗೆ ಕೊರೊನಾ ಕಾಣಿಸಿಕೊಂಡಿತ್ತು. ಇಂದು ಮತ್ತೆ ಕೆಜಿಎಫ್ ತಾಲೂಕಿನ 25 ಪೊಲೀಸರಿಗೆ ಸೋಂಕು ಕಾಣಿಸಿಕೊಂಡಿದೆ. ಇದರಿಂದಾಗಿ ಮೇಕೆದಾಟು ಪಾದಯಾತ್ರೆ ಬಂದೊಬಸ್ತ್‍ಗೆ ತೆರಳಿದ್ದ ಪೊಲೀಸರಿಗೆ ಹಾಗೂ ಅವರ ಕುಟುಂಬದವರಿಗೆ ಆತಂಕ ಉಂಟುಮಾಡಿದೆ. ಇದನ್ನೂ ಓದಿ: 8 ಪ್ರಯಾಣಿಕರ ವಾಹನದಲ್ಲಿ 6 ಏರ್‌ಬ್ಯಾಗ್‌ ಕಡ್ಡಾಯ

    ಈಗಾಗಲೇ ಜಿಲ್ಲೆಯಲ್ಲಿ ಪಾದಯಾತ್ರೆಯಲ್ಲಿ ಭದ್ರತೆಗಾಗಿ ತೆರಳಿದ್ದ 50 ಹೆಚ್ಚು ಸಿಬ್ಬಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಇನ್ನೂ ಹಲವು ಪೊಲೀಸರು ಬಂದೋಬಸ್ತ್‍ಗೆ ರಾಮನಗರಕ್ಕೆ ತೆರಳಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಹಲವು ಪೆÇಲೀಸರಿಗೆ ಸೊಂಕು ತಗುಲಿರುವ ಸಾಧ್ಯತೆಯಿದ್ದು, ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಲು ಪೊಲೀಸರು ಮುಂದಾಗಿದ್ದಾರೆ. ಇದನ್ನೂ ಓದಿ: 3 ಲಕ್ಷ ರೂ. ಗೆ ಹೆತ್ತ ಮಗುವನ್ನೇ ಮಾರಿದ ದಂಪತಿ ಅರೆಸ್ಟ್

  • ಸೋಂಕು ಹೆಚ್ಚಿಲ್ಲದ ಜಿಲ್ಲೆಗಳಲ್ಲಿ ಲಾಕ್‍ಡೌನ್ ಬೇಡ: ಎಚ್ ವಿಶ್ವನಾಥ್

    ಸೋಂಕು ಹೆಚ್ಚಿಲ್ಲದ ಜಿಲ್ಲೆಗಳಲ್ಲಿ ಲಾಕ್‍ಡೌನ್ ಬೇಡ: ಎಚ್ ವಿಶ್ವನಾಥ್

    ಮೈಸೂರು: ಕೋವಿಡ್ ಸೋಂಕು ಹೆಚ್ಚಿಲ್ಲದ ಜಿಲ್ಲೆಗಳಲ್ಲಿ ಲಾಕ್‍ಡೌನ್ ಬೇಡ ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಆಗ್ರಹಿಸಿದರು.

    ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಾಲೆಗಳಲ್ಲಿ 1 ರಿಂದ 9 ತರಗತಿಯ ವರೆಗೆ ಸಂಪೂರ್ಣ ರಜೆ ಮಾಡಿ. ಎಸ್‍ಎಸ್‍ಎಲ್‍ಸಿ ಮತ್ತು 2ನೇ ಪಿಯುಸಿ ಮಕ್ಕಳಿಗೆ ಮಾತ್ರ ಭೌತಿಕವಾಗಿ ಕ್ಲಾಸ್ ಮಾಡಿ. ಇಡೀ ರಾಜ್ಯಕ್ಕೆ ಲಾಕ್‍ಡೌನ್ ಬೇಡ. ಸೋಂಕು ಹೆಚ್ಚಿರುವ ಜಿಲ್ಲೆಗಳಲ್ಲಿ ಮಾತ್ರ ಕಠಿಣ ಕ್ರಮ ಕೈಗೊಳ್ಳಬೇಕು. ಸೋಂಕು ಹೆಚ್ಚಿಲ್ಲದ ಜಿಲ್ಲೆಗಳಲ್ಲಿ ಲಾಕ್‍ಡೌನ್ ಬೇಡ ವೀಕೆಂಡ್ ಕರ್ಫ್ಯೂ  ನಿಂದ ಯಾವ ಪ್ರಯೋಜನಾವಾಗುತ್ತಿಲ್ಲ ಆದೇಶ ನೀಡಿದರು. ಇದನ್ನೂ ಓದಿ: ರಾಜ್ಯದಲ್ಲಿ ಕೋವಿಡ್ ನಿರ್ವಹಣೆಗೆ 5T ಸೂತ್ರ: ಪ್ರಧಾನಿ ಮೆಚ್ಚುಗೆ

    night curfew

    ನಾವು ಅಂತರ ಜಿಲ್ಲಾ ಓಡಾಟಕ್ಕೆ ಕಡಿವಾಣ ಹಾಕಿಲ್ಲ. ವೀಕೆಂಡ್ ಕರ್ಫ್ಯೂನಿಂದ ಉದ್ದೇಶ ಸಾಧನೆ ಆಗುತ್ತಿಲ್ಲ. ಜನ ವೀಕೆಂಡ್ ಕರ್ಫ್ಯೂ ಹೆಸರಲ್ಲಿ ಪ್ರವಾಸ ಮಾಡುತ್ತಿದ್ದಾರೆ. ಕರ್ಫ್ಯೂ  ಬಿಟ್ಟು ಜನರ ನಿಯಂತ್ರಣಕ್ಕೆ ಕಠಿಣ ಕ್ರಮ ಜರುಗಿಸಿ ಎಂದರು. ಇದನ್ನೂ ಓದಿ: ಕೊರೊನಾ ಸೋಂಕು ಏರಿಕೆ ಮಧ್ಯೆ ಸಿಹಿ ಸುದ್ದಿ – ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಕಡಿಮೆ

    ಮೇಕೆದಾಟು ಪಾದಯಾತ್ರೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಇದು ಪಾದಯಾತ್ರೆ ಸಮರ ಅಲ್ಲ ಕಾನೂನು ಸಮರ ಆಗಬೇಕು. ಕೋಟ್ಯಂತರ ರೂ. ಖರ್ಚು ಮಾಡಿ ಪಾದಯಾತ್ರೆ ಮಾಡಿದ್ದಾರೆ. ಇಂತಹ ಪಾದಯಾತ್ರೆ ಯಿಂದ ಏನೂ ಉಪಯೋಗವಿಲ್ಲ. ಬಳ್ಳಾರಿ ಜನಾರ್ದನ ರೆಡ್ಡಿಯವರಿಗೆ ಜೈಲು ಶಿಕ್ಷೆ ಆಗಿದ್ದು, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನಡೆಸಿದ ಪಾದಯಾತ್ರೆಯಿಂದಲ್ಲ. ಕಾನೂನು ಮೂಲಕ ರೆಡ್ಡಿಯವರಿಗೆ ಶಿಕ್ಷೆಯಾಗಿದೆ. ಹೀಗಾಗಿ ಮೇಕೆದಾಟು ವಿಚಾರ ಕೂಡ ಕಾನೂನಿನ ಮೂಲಕವೇ ಬಗೆಹರಿಯಬೇಕು ಎಂದರು.

  • ಮೇಕೆದಾಟು ಪಾದಯಾತ್ರೆ – ಹಾಸನದಿಂದ ಹೊರಟಿದ್ದಾರೆ 300 ಮಂದಿ

    ಮೇಕೆದಾಟು ಪಾದಯಾತ್ರೆ – ಹಾಸನದಿಂದ ಹೊರಟಿದ್ದಾರೆ 300 ಮಂದಿ

    ಹಾಸನ: ಮೇಕೆದಾಟು ಪಾದಯಾತ್ರೆಗೆ ಹಾಸನ ಜಿಲ್ಲೆಯಿಂದ ಸುಮಾರು 6 ಸಾವಿರ ಜನ ಹೊರಟಿದ್ದು, ಕಾಂಗ್ರೆಸ್ ಮುಖಂಡರಿಂದ ಕೊರೊನಾ ನಿಯಮಗಳನ್ನು ಸಂಪೂರ್ಣ ಗಾಳಿಗೆ ತೂರಿದಂತಾಗಿದೆ.

    ಮಾಜಿ ಎಂಎಲ್‍ಸಿ ಗೋಪಾಲಸ್ವಾಮಿ, ಮಾಜಿ ಶಾಸಕ ಪುಟ್ಟೇಗೌಡ, ಬಾಗೂರು ಮಂಜೇಗೌಡ, ಕೃಷ್ಣೇಗೌಡ ನೇತೃತ್ವದಲ್ಲಿ ಸುಮಾರು 300 ವಾಹನದಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಕಾಂಗ್ರೆಸ್ ಕಾರ್ಯಕರ್ತರು ಹೊರಟಿದ್ದಾರೆ. ಇದನ್ನೂ ಓದಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಕೊರೊನಾ ಪಾಸಿಟಿವ್

    ಜಿಲ್ಲೆಯ ಗಡಿಭಾಗ ಹಿರೀಸಾವೆ ಬಳಿ ಆಜನೇಯ ಸ್ವಾಮಿ ದೇವಾಲಯದ ಬಳಿ ಪೂಜೆ ಸಲ್ಲಿಸಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ತೆರಳಿದ್ದಾರೆ. ಇದನ್ನೂ ಓದಿ: ಬಿಜೆಪಿ ಶಾಸಕರು, ಸಚಿವರು, ನಾಯಕರಿಗೆ ಹೈಕಮಾಂಡ್ ಕ್ಲಾಸ್

  • ಸರ್ಕಾರ ಬದುಕಿದ್ಯಾ, ಸತ್ತಿದ್ಯಾ ಅನ್ನೋದನ್ನ ತೋರಿಸ್ತೀವಿ: ಸಚಿವ ಸುಧಾಕರ್

    ಸರ್ಕಾರ ಬದುಕಿದ್ಯಾ, ಸತ್ತಿದ್ಯಾ ಅನ್ನೋದನ್ನ ತೋರಿಸ್ತೀವಿ: ಸಚಿವ ಸುಧಾಕರ್

    ಬೆಂಗಳೂರು: ಸರ್ಕಾರ ಬದುಕಿದೆಯಾ, ಸತ್ತಿದಿಯಾ ಎಂಬುವುದನ್ನು ಇಂದು ತೋರಿಸುತ್ತೇವೆ. ಕಾನೂನು ಉಲ್ಲಂಘನೆ ಮಾಡಿದರೇ ಶಿಸ್ತು ಕ್ರಮ ಕೈಗೊಳ್ಳುತ್ತೇವೆ ಎಂದು ಎಂದು ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಎಚ್ಚರಿಕೆ ನೀಡಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಬಸವರಾಜ ಬೊಮ್ಮಾಯಿ ಸಭೆ ಕರೆದಿದ್ದಾರೆ. ಇದೊಂದು ವಿಶೇಷ ಪ್ರಕರಣದ ಎಂಬಂತೆ ಕಾಂಗ್ರೆಸ್ ಸ್ಥಿತಿ ನಿರ್ಮಾಣ ಮಾಡಿದೆು ಎಚ್ಚರಿಸಿದರು.

    ಕಾಂಗ್ರೆಸ್ ಅವರು ಮಾಡುತ್ತಿರುವುದು ಬೀದಿ ನಾಟಕ. ಇದನ್ನು ಖಂಡಿಸುತ್ತೇವೆ. ರಾಜ್ಯದಲ್ಲಿ ತುರ್ತು ಪರಿಸ್ಥಿತಿ ಇದೆ. ಈ ರೀತಿ ಪಾದಯಾತ್ರೆ ಮಾಡಿದರೆ ಕೊರೊನಾ ಇನ್ನೂ ಜಾಸ್ತಿ ಆಗುತ್ತದೆ. ಕಾಂಗ್ರೆಸ್ ಪಾದಯಾತ್ರೆ ಬೀದಿ ನಾಟಕ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ರೈತ ಗೀತೆ ಮೂಲಕ ಮೇಕೆದಾಟು ಪಾದಯಾತ್ರೆಗೆ ಕಾಂಗ್ರೆಸ್‌ ಚಾಲನೆ

    ಚುನಾವಣೆಗೋಸ್ಕರ ಕಾಂಗ್ರೆಸ್ ಈ ಬೀದಿ ನಾಟಕ ಮಾಡುತ್ತಿದ್ದಾರೆ. ಇದು ಕಾಂಗ್ರೆಸ್‍ನವರು ಕಾವೇರಿಗೆ ಮಾಡುತ್ತಿರುವ ಅಪಮಾನವಾಗಿದೆ. ಬಿಬಿಎಂಪಿ ಚುನಾವಣೆ ಗುರಿಯಾಗಿಟ್ಟುಕೊಂಡು ಬೀದಿ ನಾಟಕ ಮಾಡುತ್ತಿದ್ದಾರೆ. ಇದಕ್ಕೆ ನನ್ನ ದಿಕ್ಕಾರವಿದೆ ಎಂದು ಖಂಡಿಸಿದರು. ಇದನ್ನೂ ಓದಿ: ಕಾಂಗ್ರೆಸ್‍ನ ಮೇಕೆದಾಟು ಪಾದಯಾತ್ರೆ ರಾಜಕೀಯ ಪ್ರೇರಿತ: ಬೊಮ್ಮಾಯಿ

    ಕಾಂಗ್ರೆಸ್ ಐದು ವರ್ಷ ಅಧಿಕಾರದಲ್ಲಿದ್ದಾಗ ಏನು ಮಾಡಿದ್ದರು? ಮೇಕೆದಾಟುಗೆ ಸಂಬಂಧಿಸಿ ಏನೇ ಒಳ್ಳೆಯ ಕೆಲಸ ಆಗಬೇಕು ಅಂದರೂ ಅದು ಬಿಜೆಪಿ ಸರ್ಕಾರದಿಂದ ಮಾತ್ರ ಸಾಧ್ಯ ಎಂದ ಅವರು, ರಾಜ್ಯ ಸರ್ಕಾರ ಕೋವಿಡ್ ಪ್ರಕರಣಗಳ ಕುರಿತು ಸುಳ್ಳು ವರದಿ ಕೊಡುತ್ತಿದೆ ಎಂದು ಕಾಂಗ್ರೆಸ್‍ನವರು ಆರೋಪಿಸುತ್ತಿದ್ದಾರೆ. ಹಾಗಾದರೆ ಮಹಾರಾಷ್ಟ್ರದಲ್ಲಿ ಬರುತ್ತಿರುವ ಕೇಸ್‍ಗಳು ಸುಳ್ಳಾ ಎಂದು ಡಿಕೆಶಿಗೆ ಟಾಂಗ್ ನೀಡಿದರು.