ರಾಮನಗರ: ಮೇಕೆದಾಟು ಪಾದಯಾತ್ರೆಯ ಪಾಲ್ಗೊಂಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ನಾಲ್ಕು ಕಿ.ಮೀ. ನಡೆದು ಸುಸ್ತಾಗಿ ಬೇರೊಂದು ಕಾರಿನಲ್ಲಿ ವಾಪಸ್ಸಾಗಿದ್ದಾರೆ.
73 ವರ್ಷ ವಯಸ್ಸಿನ ಸಿದ್ದರಾಮಯ್ಯ ಅವರು ಮೇಕೆದಾಟು ಪಾದಯಾತ್ರೆಯಲ್ಲಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ನೇತೃತ್ವ ವಹಿಸಿದ್ದರು. ಜನವರಿ 18ರವರೆಗೆ ನಡೆಯುವ ಈ ಪಾದಯಾತ್ರೆಗೆ ಇಂದು ಕನಕಪುರ ತಾಲ್ಲೂಕಿನ ಕಾವೇರಿ ತಟ, ಸಂಗಮದಲ್ಲಿ ಚಾಲನೆ ನೀಡಲಾಯಿತು. ಕೋವಿಡ್ ಕಾರಣ ಸರ್ಕಾರ ವೀಕೆಂಡ್ ಕರ್ಫ್ಯೂ ವಿಧಿಸಿದ್ದರೂ ಅಪಾರ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ. ಇದನ್ನೂ ಓದಿ: ರೈತ ಗೀತೆ ಮೂಲಕ ಮೇಕೆದಾಟು ಪಾದಯಾತ್ರೆಗೆ ಕಾಂಗ್ರೆಸ್ ಚಾಲನೆ
ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ಮೇಕೆದಾಟು ಪಾದಯಾತ್ರೆಯ ನೇತೃತ್ವ ವಹಿಸಿದ್ದರು. ಇಂದು 15 ಕಿ.ಮೀ. ಪಾದಯಾತ್ರೆ ನಡೆಸಿ ಕನಕಪುರ ತಲುಪಲು ಯೋಜನೆ ಹಾಕಿಕೊಳ್ಳಲಾಗಿತ್ತು. ಆದರೆ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಸಿದ್ದರಾಮಯ್ಯ ಅವರು ನಾಲ್ಕು ಕಿ.ಮೀ. ನಡೆಯುವಷ್ಟರಲ್ಲಿ ಸುಸ್ತಾಗಿದ್ದಾರೆ. ಸುಸ್ತಾಗಿ ಕುಳಿತ ಅವರನ್ನು ಕಾರಿನಲ್ಲಿ ವಾಪಸ್ ಕರೆದುಕೊಂಡು ಹೋಗಲಾಯಿತು.
ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆ ವಿರುದ್ಧ ಬಿಜೆಪಿ ನಾಯಕರು ಟೀಕೆ ವ್ಯಕ್ತಪಡಿಸಿದ್ದಾರೆ. ಇದು ರಾಜಕೀಯ ಪ್ರೇರಿತ ಪಾದಯಾತ್ರೆ ಎಂದು ಟೀಕಿಸಿದೆ. ಅಲ್ಲದೇ ಕೋವಿಡ್ ನಿಯಮ ಉಲ್ಲಂಘಿಸಿದ್ದಾರೆ ಎಂದು ಕಾಂಗ್ರೆಸ್‌ನವರ ವಿರುದ್ಧ ಶಿಸ್ತುಕ್ರಮ ಜರುಗಿಸುವ ಬಗ್ಗೆ ತೀರ್ಮಾನಿಸಲು ಸರ್ಕಾರ ಸಭೆ ಕೂಡ ಕರೆದಿದೆ. ಇದನ್ನೂ ಓದಿ: ಕಾಂಗ್ರೆಸ್‍ನ ಮೇಕೆದಾಟು ಪಾದಯಾತ್ರೆ ರಾಜಕೀಯ ಪ್ರೇರಿತ: ಬೊಮ್ಮಾಯಿ
ರಾಮನಗರ: ಮೇಕೆದಾಟು ಪಾದಯಾತ್ರೆ ಕೈಗೊಂಡಿರುವ ಉದ್ದೇಶ ನೀರಿಗಾಗಿ, ಎರಡೂವರೆ ಕೋಟಿ ಜನರು ಈ ನೀರಿನಿಂದಲೇ ಬದುಕುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
ಕರ್ನಾಟಕ ಕಾಂಗ್ರೆಸ್ ಪಕ್ಷ ನಡೆಸುತ್ತಿರುವ ಮೇಕೆದಾಟು ಪಾದಯಾತ್ರೆಗೆ ಭಾನುವಾರ ಚಾಲನೆ ನೀಡಿದ್ದು, ಗಣ್ಯ ವ್ಯಕ್ತಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್ ಕರ್ನಾಟಕದಲ್ಲಿ 26 ಅಣೆಕಟ್ಟುಗಳಿವೆ. ಆ ಪೈಕಿ 20 ಅಣೆಕಟ್ಟುಗಳನ್ನು ಕಾಂಗ್ರೆಸ್ ಸರ್ಕಾರ ಕಟ್ಟಿಸಿದೆ ಎಂದು ತಿಳಿಸಿದರು.
ನಮ್ಮ ನಾಯಕರಲ್ಲಿ ಹೋರಾಟದ ಛಲ ರಕ್ತಗತವಾಗಿ ಬಂದಿದೆ. ಮಹಾತ್ಮಗಾಂಧಿ, ನೆಹರೂ, ಇಂದಿರಾಗಾAಧಿ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅಧ್ಯಕ್ಷರಾಗಿದ್ದರು. ಕಾಂಗ್ರೆಸ್ ಶಕ್ತಿಯೇ ದೇಶದ ಶಕ್ತಿ. ಕಾಂಗ್ರೆಸ್ ಶಕ್ತಿಯೇ ಇತಿಹಾಸ. ನಮ್ಮ ಹೋರಾಟ ಅಧಿಕಾರಕ್ಕಾಗಿ ಅಲ್ಲ, ಬಡಜನರಿಗಾಗಿ ಎಂದರು. ಇದನ್ನೂ ಓದಿ: ರೈತ ಗೀತೆ ಮೂಲಕ ಮೇಕೆದಾಟು ಪಾದಯಾತ್ರೆಗೆ ಕಾಂಗ್ರೆಸ್ ಚಾಲನೆ
ರಾಜ್ಯದ ಉದ್ದಗಲಕ್ಕೂ ಹೋರಾಟ ನಡೆಯುತ್ತಿದೆ. ಪಾದಯಾತ್ರೆಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ನಮ್ಮ ಗುರಿ ಮುಟ್ಟಲು ಜನತೆಯ ಆಶೀರ್ವಾದ ಬೇಕು. ನಮ್ಮ ನೀರು ನಮ್ಮ ಹಕ್ಕು. ಮೇಕೆದಾಟು ಹೋರಟಕ್ಕೆ ಜಯವಾಗಲಿ ಎಂದು ಡಿಕೆಶಿ ಹೇಳಿದರು. ಇದನ್ನೂ ಓದಿ: ಸರ್ಕಾರ ಜನರಿಗೆ ತಪ್ಪು ಮಾಹಿತಿ ನೀಡುತ್ತಿದೆ: ಸಿದ್ದರಾಮಯ್ಯ ಕಿಡಿ
ಬೆಂಗಳೂರು: ಕಾಂಗ್ರೆಸ್ ಪಕ್ಷ ಈ ಪಾದಯಾತ್ರೆಯನ್ನು ಯಾಕೆ ಮಾಡುತ್ತಿದೆ ಎನ್ನುವ ಪ್ರಶ್ನೆ ಸಾರ್ವಜನಿಕರಿಗೆ ಈಗಾಗಲೆ ತಿಳಿದಿದೆ. ಚುನಾವಣೆ ಹತ್ತಿರ ಬಂದಿದೆ ಅಂತ ರಾಜಕೀಯ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಐದು ವರ್ಷಗಳು ಸರ್ಕಾರದಲ್ಲಿದ್ದಾಗ ಡಿಪಿಆರ್ ಸರಿಯಾಗಿ ಮಾಡಲು ಆಗಲಿಲ್ಲ. ನಂತರ ಸಮ್ಮಿಶ್ರ ಸರ್ಕಾರದಲ್ಲಿ ಡಿಪಿಆರ್ ಮಾಡಿದ್ದರು. ಅವರಿಗೆ ಯಾವುದೇ ಬದ್ಧತೆ ಇಲ್ಲ. ಸಮ್ಮಿಶ್ರ ಸರ್ಕಾರದಲ್ಲಿ ಡಿಕೆಶಿ ನೀರಾವರಿ ಸಚಿವರಾಗಿದ್ದರು ಆಗ ಏನೂ ಮಾಡಲಿಲ್ಲ. ಕಳೆದ ಮೂರು ವರ್ಷಗಳು ಈ ವಿಚಾರವಾಗಿ ಎಲ್ಲೂ ಚರ್ಚೆ ಕೂಡ ಆಗಿಲ್ಲ. ಆದರೆ ಚುನಾವಣೆ ಹತ್ತಿರ ಬಂದಿದೆ ಎಂದು ರಾಜಕೀಯ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ಇದನ್ನೂ ಓದಿ: ರೈತ ಗೀತೆ ಮೂಲಕ ಮೇಕೆದಾಟು ಪಾದಯಾತ್ರೆಗೆ ಕಾಂಗ್ರೆಸ್ ಚಾಲನೆ
ಬಹುತೇಕ ತಾವು ಕೆಲಸ ಮಾಡಿಲ್ಲ ಎಂಬ ಅಪರಾಧ ಮನೋಭಾವ ಅವರನ್ನು ಕಾಡುತ್ತಿದೆ. ನೀರಾವರಿ ಯೋಜನೆ ಬಗ್ಗೆ ಬದ್ಧತೆಯಿಂದ ಕೆಲಸ ಮಾಡುತ್ತಿಲ್ಲ, ಬದಲಾಗಿ ಜನರನ್ನು ಮರಳು ಮಾಡಲು ಕಾಂಗ್ರೆಸ್ ಅವರು ಈ ಕೆಲಸ ಮಾಡುತ್ತಿದ್ದಾರೆ. ಇದು ರಾಜಕೀಯ ಪ್ರೇರಿತ ಕಾಂಗ್ರೆಸ್ ಪಾದಯಾತ್ರೆಯಾಗಿದೆ. ಮೇಕೆದಾಟು ಪಾದಯಾತ್ರೆಯಲ್ಲಿ ಕೋವಿಡ್ ನಿಯಮ ಉಲ್ಲಂಘನೆ ಮಾಡಿದ್ದು, ನೋಟಿಸ್ ಕೊಟ್ಟಿದ್ದೇವೆ. ನಾವು ಬದ್ಧತೆಯಿಂದ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಜನಸಾಮಾನ್ಯರಿಗೊಂದು, ಕಾಂಗ್ರೆಸ್‍ಗೆ ಒಂದು ಕಾನೂನು ಇಲ್ಲ: ಆರಗ ಜ್ಞಾನೇಂದ್ರ
ರಾಜ್ಯದ ಅಭಿವೃದ್ಧಿಗೆ, ಯಶಸ್ಸಿಗೆ ಕಾರಣವಾಗುವ ಮೇಕೆದಾಟು ಯೋಜನೆ ಜಾರಿಗಾಗಿ ಕೋವಿಡ್ ನಿಯಮಗಳನ್ನು ಮರೆಯದೆ ಪಾಲಿಸುತ್ತಾ ಈ ಐತಿಹಾಸಿಕ ನೀರಿಗಾಗಿ ನಡಿಗೆಯಲ್ಲಿ ನಾವು ನೀವೆಲ್ಲ ಸೇರಿ ಹೆಜ್ಜೆ ಹಾಕೋಣ.
– @DKShivakumar
ಇಂದಿನಿಂದ ಜನವರಿ 18ರವರೆಗೆ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ನಡೆಯಲಿದೆ. ಕಾರ್ಯಕ್ರಮದಕ್ಕೆ ಇಂದು ಚಾಲನೆ ನೀಡಲಾಗಿದೆ. ನಮ್ಮ ನೀರು ನಮ್ಮ ಹಕ್ಕು ಘೋಷ ವಾಕ್ಯದೊಂದಿಗೆ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ನಡೆಸುತ್ತಿದೆ. ಪಾದಯಾತ್ರೆ ಸಂಜೆಯ ವೇಳೆಗೆ ಕನಕಪುರವನ್ನು ತಲುಪಲಿದೆ.
ಬೆಂಗಳೂರು: ಮೇಕೆದಾಟು ಪಾದಯಾತ್ರೆ ಮೂಲಕ ಆ ಯೋಜನೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡುತ್ತದೆ ಎಂದು ಕಾಂಗ್ರೆಸ್ಸಿಗರು ನನಗೆ ಗ್ಯಾರಂಟಿ ಕೊಟ್ಟರೆ, ನಾನು ಎಲ್ಲರಿಗಿಂತ ಮೊದಲೇ ಪಾದಯಾತ್ರೆಯಲ್ಲಿ ಪಾಲ್ಗೊಳ್ಳುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.
ಕಾಂಗ್ರೆಸ್ ಪಕ್ಷದ್ದು ಪಾದಯಾತ್ರೆ ಅಲ್ಲ, ಅದು ಮತಯಾತ್ರೆ ಮಾತ್ರ. ಕೇವಲ ಮುಂದಿನ ಚುನಾವಣೆಯಲ್ಲಿ ಮತ ಪಡೆಯುವ ಏಕೈಕ ಉದ್ದೇಶದಿಂದ ಆ ಪಕ್ಷ ಜನರಿಗೆ ಪಾದಯಾತ್ರೆ ಹೆಸರಿನಲ್ಲಿ ಮಂಕುಬೂದಿ ಎರಚುತ್ತಿದೆ ಎಂದು ಟೀಕಾಪ್ರಹಾರ ನಡೆಸಿದರು.
ಆ ಪಕ್ಷದ ಪ್ರತಿಪಕ್ಷ ನಾಯಕರು ಮೇಕೆದಾಟು ಯೋಜನೆ ಬಗ್ಗೆ ದಿನಕ್ಕೆ ಒಂದೊಂದು ಹಸಿಸುಳ್ಳು ಹೇಳುತ್ತಿದ್ದಾರೆ. ಆ ಪಕ್ಷದ ರಾಜ್ಯಾಧ್ಯಕ್ಷರು ಪ್ರಾಣ ಹೋದರೂ ಪಾದಯಾತ್ರೆ ನಿಲ್ಲಲ್ಲ ಅಂತಾರೆ. ಪಾಪ.. ನಿಮ್ಮ ಪ್ರಾಣ ಯಾಕೆ ವ್ಯರ್ಥ ಮಾಡಿಕೊಳ್ತೀರಾ? ನೀವು ಕಾವೇರಿ ಕೊಳ್ಳದ ಜನರ ಭಾವನೆಗಳ ಜೊತೆ ಚೆಲ್ಲಾಟ ಆಡಿಕೊಂಡು ಅವರ ಜೀವ ತೆಗೆಯಲು ಹೊರಟಿದ್ದಾರಾ? ಅಂಥ ಕೆಲಸ ಬೇಡ ಎಂದು ಕಾಂಗ್ರೆಸ್ ನಾಯಕರಿಗೆ ಚಾಟಿ ಬೀಸಿದರು. ಇದನ್ನೂ ಓದಿ: ಅಧಿಕಾರದಲ್ಲಿದ್ದಾಗ ಕುಂಭಕರ್ಣ ನಿದ್ದೆ, ಈಗ ಮೇಕೆದಾಟು ಹೋರಾಟ: ಡಿಕೆಶಿಗೆ ಕಾರಜೋಳ ಟಾಂಗ್
ಇಲ್ಲಿ ಮೇಕೆದಾಟು, ತಮಿಳುನಾಡಿನಲ್ಲಿ ಡಿಎಂಕೆ ಸಖ್ಯ!
ಕರ್ನಾಟಕದಲ್ಲಿ ಕಾಂಗ್ರೆಸ್ ಮೇಕೆದಾಟು ವಿಚಾರವಾಗಿ ಪಾದಯಾತ್ರೆ ಮಾಡುತ್ತಿದೆ. ಆದರೆ ಪಕ್ಕದ ತಮಿಳುನಾಡಿನಲ್ಲಿ ಮೇಕೆದಾಟು ಯೋಜನೆಯನ್ನು ವಿರೋಧ ಮಾಡುತ್ತಿರುವ ಡಿಎಂಕೆ ಪಕ್ಷದ ಮಿತ್ರಪಕ್ಷವಾಗಿದೆ. ಯಾವುದೇ ಕಾರಣಕ್ಕೂ ಮೇಕೆದಾಟು ಯೋಜನೆ ಮಾಡಲು ಬಿಡುವುದಿಲ್ಲ ಎಂದು ರಾಜ್ಯಪಾಲರಿಂದ ಭಾಷಣ ಮಾಡಿಸಿರುವ ಸ್ಟಾಲಿನ್ ಸರ್ಕಾರದ ಜೊತೆ ಕಾಂಗ್ರೆಸ್ ಚರ್ಚೆ ನಡೆಸಿ ಸಮಸ್ಯೆ ಬಗೆಹರಿಸಬಹದಲ್ಲ? ಅದನ್ನು ಬಿಟ್ಟು ಪಾದಯಾತ್ರೆ ಮೂಲಕ ನಾಟಕ ಮಾಡುವುದು ಏಕೆ ಎಂದು ಪ್ರಶ್ನಿಸಿದರು.
ದೇವೇಗೌಡರ ಮೇಲೆ ನಂಬಿಕೆ ಇದ್ದರೆ ಪಾದಯಾತ್ರೆ ಯಾಕೆ?
ದೇವೇಗೌಡರು ಮಾಡಿದ ಪ್ರಯತ್ನದ ಫಲವಾಗಿ ಇಂದು ಬೆಂಗಳೂರು ಜನರಿಗೆ ಕಾವೇರಿ ನಾಲ್ಕನೇ ಹಂತದಲ್ಲಿ 9 ಟಿಎಂಸಿ ನೀರು ಸಿಕ್ಕಿದೆ. ದೇವೇಗೌಡರು ಪ್ರಧಾನಿಗಳ ಜೊತೆ ವಿಶ್ವಾಸ ಇಟ್ಟುಕೊಂಡಿದ್ದಾರೆಂದು ಸಿದ್ದರಾಮಯ್ಯ ಹೇಳಿದ್ದಾರೆ. ಅಷ್ಟು ನಂಬಿಕೆ ಇದ್ದ ಮೇಲೆ ದೇವೇಗೌಡರನ್ನೇ ಪ್ರಧಾನಿ ಜೊತೆ ಮಾತನಾಡಿ ಎಂದು ಕಾಂಗ್ರೆಸ್ ನಾಯಕರು ಹೇಳಬಹುದಲ್ಲವೆ? ಹಾಗಿದ್ದ ಮೇಲೆ ಪಾದಯಾತ್ರೆ ಏತಕ್ಕೆ ಎಂದು ಕೇಳಿದರು. ಇದನ್ನೂ ಓದಿ: ಅಧಿಕಾರದಲ್ಲಿದ್ದಾಗ ನಿಮ್ಮ ಗಂಡಸ್ತನ ಎಲ್ಲಿ ಹೋಗಿತ್ತು: ರೇಣುಕಾಚಾರ್ಯ
ಕರ್ನಾಟಕದ ನೀರಿನ ವಿಚಾರದಲ್ಲಿ ದೇವೇಗೌಡರನ್ನು ನಿರ್ಲಕ್ಷ್ಯ ಮಾಡುವಂತಿಲ್ಲ. ಏಕೆಂದರೆ 1962ರಲ್ಲಿ ಪಕ್ಷೇತರ ಶಾಸಕರಾಗಿ ಗೆದ್ದು ಶಾಸನಸಭೆಗೆ ಬಂದ ಅವರು ನಡೆಸಿದ ಹೋರಾಟದ ಫಲವೇ ಹಾರಂಗಿ, ಕಬಿನಿ, ಹೇಮಾವತಿ ಯೋಜನೆಗಳು. ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಕಾನೂನಾತ್ಮಕ, ಆಡಳಿತ ಹಾಗೂ ತಾಂತ್ರಿಕವಾಗಿ ಅಪಾರ ಜ್ಞಾನವುಳ್ಳ ದೇವೇಗೌಡರು ಮಾಡಿರುವ ಕೆಲಸಗಳ ಬಗ್ಗೆ ಸಿದ್ದರಾಮಯ್ಯ ಅವರಿಗೇನು ಗೊತ್ತು? ಒಂದು ವೇಳೆ ನೀರಾವರಿ ವಿಷಯಗಳಲ್ಲಿ ದೇವೇಗೌಡರನ್ನು ಕಡೆಗಣಿಸಿದರೆ ರಾಜ್ಯಕ್ಕೇ ನಷ್ಟ ಎಂದು ಸ್ಪಷ್ಟವಾಗಿ ಹೇಳಿದರು.
ಮಾತೆತ್ತಿದರೆ ಕುಮಾರಣ್ಣ, ನಮ್ಮಣ್ಣ ಅನ್ನುತ್ತಾರೆ. ಅವರು ಹೊಡೆದರೆ ಹೊಡೆಸಿಕೊಳ್ತೀನಿ ಎನ್ನುತ್ತಾರೆ. ಅಶೋಕಣ್ಣ, ಅಶ್ವತ್ಥನಾರಾಯಣ ಅಣ್ಣ ಅಂತ ಮಾತನಾಡುತ್ತಾರೆ. ನೀರಾವರಿ ವಿಷಯದಲ್ಲಿ ಇಂಥ ಡ್ರಾಮಾ ಎಲ್ಲಾ ಯಾಕೆ ಎಂದು ಡಿಕೆಶಿಗೆ ಟಾಂಗ್ ಕೊಟ್ಟರು.
ಚಿತ್ರದುರ್ಗ: ಬಿ.ಎಸ್.ಯಡಿಯೂರಪ್ಪ, ಎಚ್.ಡಿ.ದೇವೇಗೌಡರಂತೆ ಸಿದ್ದರಾಮಯ್ಯ ಅವರು ಕೂಡ ಈ ರಾಜ್ಯದ ಆಸ್ತಿ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಬಣ್ಣಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು, ಸಿದ್ಧರಾಮಯ್ಯ ಇಬ್ಬರೂ ಕೋವಿಡ್ ಅನುಭವಿಸಿದ್ದೇವೆ. ಮೇಕೆದಾಟು ಹೋರಾಟ ಮಾಡಲಿ, ಆದರೆ ರಿಸ್ಕ್ ತೆಗೆದುಕೊಳ್ಳುವುದು ಬೇಡ. ಬಿಎಸ್‌ವೈ, ದೇವೇಗೌಡರಂತೆ ಸಿದ್ಧರಾಮಯ್ಯ ಸಹ ರಾಜ್ಯದ ಆಸ್ತಿ. ಕೊವಿಡ್‌ನಿಂದಾಗಿ ಏನಾದರು ಹೆಚ್ಚು ಕಡಿಮೆ ಆದರೆ ಯಾರು ಜವಾಬ್ದಾರಿ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಜನರೊಟ್ಟಿಗೆ ಪಾದಯಾತ್ರೆಗೆ ಅವಕಾಶ ನೀಡದಿದ್ರೆ ನಾನು, ಸಿದ್ದರಾಮಯ್ಯ ಇಬ್ಬರೇ ನಡೆಯುತ್ತೇವೆ: ಡಿಕೆಶಿ
ಇಂಧಿರಾಗಾಂಧಿ ಹತ್ಯೆ ಇರಬಹುದು, ಮೋದಿ ಭದ್ರತಾ ಲೋಪ ಇರಬಹುದು, ಇಂಥ ವಿಷಯದಲ್ಲಿ ರಾಜಕಾರಣ ಮಾಡಬಾರದು. ಇಂದಿರಾಗಾಂಧಿ ಸತ್ತರೆ ಸಾಯಲಿ ಬಿಡು, ಮೋದಿಗೆ ತೊಂದರೆ ಆಗಲಿ ಬಿಡು ಅನ್ನಬಾರದು. ಒಂದಷ್ಟು ಜನ, ಸಂಸ್ಥೆಗಳು ಅಭದ್ರತೆ ಸೃಷ್ಟಿಸಲೆಂದೇ ಇದ್ದಾರೆ. ಅಂಥವರನ್ನು ಹುಡುಕಿ ಬಿಗಿ ಮಾಡುವ ಕೆಲಸ ನಡೆದಿದೆ. ಪಾಕಿಸ್ತಾನದಿಂದ ಬಂದು ದುಷ್ಕೃತ್ಯ ಮೆರೆದವರಿಗೆ ತಕ್ಕ ಉತ್ತರ ನೀಡಲಾಗಿದೆ. ಅಭದ್ರತೆ ಮಾಡಿದರೂ ಮೋದಿಯ ಕೂದಲು ಅಲುಗಾಡಿಸಲಾಗಲ್ಲ. ಇಡೀ ಪ್ರಪಂಚ ಪ್ರಧಾನಿ ಮೋದಿ ಜೊತೆಗಿದೆ ಎಂದು ಹೇಳಿದ್ದಾರೆ.
ಸಚಿವ ಸಂಪುಟ ಪುನಾರಚನೆ ಬಗ್ಗೆ ಈಶ್ವರಪ್ಪ ಪ್ರತಿಕ್ರಿಯಿಸಿ, ಈ ಕುರಿತು ಸಿಎಂ ಮತ್ತು ಹೈಕಮಾಂಡ್ ತೀರ್ಮಾನಿಸುತ್ತದೆ. ಯಾರನ್ನು ಡ್ರಾಪ್ ಮಾಡಬೇಕು, ಯಾರನ್ನು ಸಂಪುಟಕ್ಕೆ ತೆಗೆದುಕೊಳ್ಳಬೇಕು ಎಂದು ಅವರು ನಿರ್ಧರಿಸುತ್ತಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕೋವಿಡ್ ಟಫ್ ರೂಲ್ಸ್ ಜಾರಿಯಾದ್ರೂ ಪಾದಯಾತ್ರೆ ಮಾಡೇ ಮಾಡ್ತೀವಿ: ಸಿದ್ದರಾಮಯ್ಯ
ಬೆಂಗಳೂರು: ನಗರದ ಬಿಜೆಪಿ ಮುಖಂಡರು ಮತ್ತು ಜನಪ್ರತಿನಿಧಿಗಳು ಕೋವಿಡ್ ನಿಯಂತ್ರಣಕ್ಕೆ ಪ್ರಯತ್ನಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ ನೀಡಿದ್ದಾರೆ.
ನಗರದ ಬಿಜೆಪಿ ರಾಜ್ಯ ಕಾರ್ಯಾಲಯ ʻಜಗನ್ನಾಥ ಭವನʼದಲ್ಲಿ ಸಚಿವರು, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಮತ್ತು ಪಕ್ಷದ ಮುಖಂಡರ ಜೊತೆ ಬುಧವಾರ ಸಭೆ ನಡೆಸಿ ಮಾತನಾಡಿದ ಅವರು, ನಗರ ಮತ್ತು ರಾಜ್ಯದಲ್ಲಿ ಮುಂದಿನ ಕೆಲವು ವಾರಗಳಲ್ಲಿ ಕೋವಿಡ್ ಪ್ರಮಾಣ ತೀವ್ರವಾಗಿ ಹೆಚ್ಚುವ ಸಾಧ್ಯತೆ ಇದೆ. ಇದರ ನಿಗ್ರಹಕ್ಕೆ ಜನ ಜಾಗೃತಿ, ವಾರ್ಡ್ ಮಟ್ಟದಲ್ಲಿ ವಾರ್ ರೂಂ, ಕಾಲ್ ಸೆಂಟರ್ ಮಾಡಿ ಜನರ ಸೇವೆಯಲ್ಲಿ ಪಕ್ಷದ ಪ್ರಮುಖರು ಮತ್ತು ಕಾರ್ಯಕರ್ತರು ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕೋವ್ಯಾಕ್ಸಿನ್ ಲಸಿಕೆ ಪಡೆದ ಮಕ್ಕಳಿಗೆ ನೋವು ನಿವಾರಕ, ಪ್ಯಾರಸಿಟಮಲ್ ಮಾತ್ರೆ ನೀಡಲ್ಲ: ಭಾರತ್ ಬಯೋಟೆಕ್
ಮೇಕೆದಾಟು ವಿಚಾರದಲ್ಲಿ ಕಾಂಗ್ರೆಸ್ ಪಾದಯಾತ್ರೆ ಅನಪೇಕ್ಷಿತವಾದುದು. ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಸರ್ಕಾರ ಬದ್ಧವಾಗಿದೆ. ಇದಕ್ಕಾಗಿ ಸರ್ವಪ್ರಯತ್ನವೂ ನಡೆದಿದೆ. ಈ ಬಗ್ಗೆ ಕಾಂಗ್ರೆಸ್ಸಿಗರು ತಪ್ಪು ಮಾಹಿತಿ ನೀಡುತ್ತಿದ್ದು, ಪ್ರಚಾರ ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಇದರ ಕುರಿತು ಜನರಿಗೆ ಮಾಹಿತಿ ನೀಡಬೇಕು ಎಂದು ಸಿಎಂ ಸಲಹೆ ನೀಡಿದ್ದಾರೆ.
ಬೆಂಗಳೂರು: ನಾವು ಕಾನೂನು ಚೌಕಟ್ಟಿನಲ್ಲಿ ನಿಯಮ ಪಾಲಿಸಿ ನೀರಿಗಾಗಿ ನಡಿಗೆ ಮಾಡುತ್ತೇವೆ. ಒಂದು ವೇಳೆ ಸಾರ್ವಜನಿಕರು ನಡಿಗೆಯಲ್ಲಿ ಭಾಗವಹಿಸಲು ಸರ್ಕಾರ ಅವಕಾಶ ಮಾಡಿಕೊಡದಿದ್ದರೆ, ನಾನು ಹಾಗೂ ಸಿದ್ದರಾಮಯ್ಯ ಇಬ್ಬರೇ ನಡೆಯುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೃಢ ನಿಲುವನ್ನು ವ್ಯಕ್ತಪಡಿಸಿದ್ದಾರೆ.
ಸಿದ್ದರಾಮಯ್ಯ ಅವರ ಜೊತೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ಕಾನೂನು ಚೌಕಟ್ಟಿನಲ್ಲಿ ನಿಯಮ ಪಾಲಿಸಿ ನೀರಿಗಾಗಿ ನಡಿಗೆ ಮಾಡುತ್ತೇವೆ. ಒಂದು ವೇಳೆ ಸಾರ್ವಜನಿಕರು ನಡಿಗೆಯಲ್ಲಿ ಭಾಗವಹಿಸಲು ಸರ್ಕಾರ ಅವಕಾಶ ಮಾಡಿಕೊಡದಿದ್ದರೆ, ನಾನು ಹಾಗೂ ಸಿದ್ದರಾಮಯ್ಯ ಇಬ್ಬರೇ ನಡೆಯುತ್ತೇವೆ. ರಾಜ್ಯ ಹಾಗೂ ಜನರ ಹಿತಕ್ಕಾಗಿ ಕಾಂಗ್ರೆಸ್ ಪಕ್ಷ ನೀರಿಗಾಗಿ ನಡೆಯಬೇಕು ಎಂದು ಜ. 9ರಿಂದ 19 ರವರೆಗೂ ನಡೆಯಲಿದ್ದು, ಅದಕ್ಕೆ ಬೇಕಾದ ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕೋವಿಡ್ ಟಫ್ ರೂಲ್ಸ್ ಜಾರಿಯಾದ್ರೂ ಪಾದಯಾತ್ರೆ ಮಾಡೇ ಮಾಡ್ತೀವಿ: ಸಿದ್ದರಾಮಯ್ಯ
ಪಕ್ಷಬೇಧ ಮರೆತು, ಎಲ್ಲ ಪಕ್ಷದ ನಾಯಕರು, ಸಂಘಟನೆಗಳಿಗೆ ಆಹ್ವಾನ ನೀಡಿದ್ದು, ಜನರು ಕೂಡ ಪಕ್ಷಾತೀತವಾಗಿ ಬೆಂಬಲ ಸೂಚಿಸಿದ್ದಾರೆ. ಈ ಮಧ್ಯೆ ರಾಜ್ಯ ಸರ್ಕಾರ ಹಾಗೂ ಕೆಲವು ಪಕ್ಷಗಳಿಗೆ ಇದನ್ನು ಸಹಿಸಲು ಆಗುತ್ತಿಲ್ಲ. ಅವರ ಅಸೂಯೆಗೆ ಮದ್ದಿಲ್ಲ. ನೀರಿಗಾಗಿ ನಡಿಗೆಗೆ ಜನ ತೋರುತ್ತಿರುವ ಉತ್ಸಾಹ ನೋಡಿ ಇದನ್ನು ತಡೆಯಲು ದೊಡ್ಡ ಪಿತೂರಿ ರೂಪಿಸಿ, ಕೋವಿಡ್ ನೆಪದಲ್ಲಿ ನಿರ್ಬಂಧ ಹಾಕಿದ್ದಾರೆ ಎಂದು ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
ರಾಜ್ಯದ ಆರೂವರೆ ಕೋಟಿ ಜನರಲ್ಲಿ 3 ಸಾವಿರ ಪ್ರಕರಣ ದಾಖಲಾಗಿದೆ ಎಂದು ಯಾವುದೇ ಕಾರ್ಯಕ್ರಮ, ಪ್ರತಿಭಟನೆ ನಡೆಯಬಾರದು ಎಂದು ನಿರ್ಬಂಧ ಹಾಕಿದ್ದಾರೆ. ಅವರು ಜ. 19 ರಂದು ಬೆಳಗ್ಗೆ 5 ರವರೆಗೂ ಕರ್ಫ್ಯೂ ಹಾಕಿದ್ದಾರೆ. ಆ ಮೂಲಕ 19 ರ ಸಾರ್ವಜನಿಕ ಸಭೆಗೆ ಅವಕಾಶ ಕೊಟ್ಟಿದ್ದಾರೆ. ಅಲ್ಲಿಯವರೆಗೂ ವೀಕೆಂಡ್ ಕರ್ಫ್ಯೂ ಹಾಗೂ ನಿರ್ಬಂಧ ಹಾಕಿದ್ದಾರೆ. ಪಕ್ಷದಲ್ಲಿ ನಾವೆಲ್ಲ ಚರ್ಚಿಸಿದ್ದು, ಈ ನಡಿಗೆ ರಾಜ್ಯದ ಹಿತಕ್ಕಾಗಿಯೇ ಹೊರತು ರಾಜಕಾರಣಕ್ಕೆ ಅಲ್ಲ. ರಾಜ್ಯದ ಹಿತಕ್ಕಾಗಿ ನೀರಿಗಾಗಿ ನಡಿಗೆ ಕಾರ್ಯಕ್ರಮವನ್ನು ಕಾನೂನು ಹಾಗೂ ಕೋವಿಡ್ ನಿಯಮದಂತೆ ಮುಂದುವರಿಸುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮೋದಿಯ ಎಲ್ಲಾ ರ‍್ಯಾಲಿಗಳನ್ನು ಬಂದ್ ಮಾಡಿ ನಂತರ ನಮ್ಮ ಪಾದಯಾತ್ರೆ ಬಗ್ಗೆ ಯೋಚಿಸುತ್ತೇವೆ: ಡಿ.ಕೆ.ಸುರೇಶ್
ಜನವರಿ 9 ರಂದು ಬೆಳಗ್ಗೆ ಈ ಕಾರ್ಯಕ್ರಮ ಆರಂಭಿಸಿ, 19 ರಂದು ಬಹಿರಂಗ ಸಭೆ ಮೂಲಕ ಮುಕ್ತಾಯ ಮಾಡುತ್ತೇವೆ. ಹರಿಯೋ ನೀರು, ಬೀಸೋ ಗಾಳಿ, ಉದಯಿಸುವ ಸೂರ್ಯನನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಇದು ಪ್ರಕೃತಿ ನಿಯಮ ಎಂದು ಬಿಜೆಪಿ ನಾಯಕರು ಗಮನದಲ್ಲಿಟ್ಟುಕೊಳ್ಳಲಿ. ಹೀಗಾಗಿ ನಾವು ಘೋಷಿಸಿರುವಂತೆ ನೀರಿಗಾಗಿ ನಡಿಗೆಗೆ ನಮ್ಮ ಮಾತಿಗೆ ಬದ್ಧರಾಗಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.
ಸರ್ಕಾರದ ಈ ನಿರ್ಬಂಧಕ್ಕೆ ಸಾರ್ವಜನಿಕರು ಹಿಡಿ ಶಾಪ ಹಾಕುತ್ತಿರುವುದನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ. ಅವರ ಸ್ಥಿತಿ ನೋಡಿದರೆ ನಮ್ಮ ಹೊಟ್ಟೆ ಉರಿಯುತ್ತಿದೆ. ಕ್ಯಾಬ್ ಚಾಲಕರು, ಬೀದಿಬದಿ ವ್ಯಾಪಾರಿಗಳು, ವರ್ತಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಅವರನ್ನು ಬದುಕಿಸುವ ಕೆಲಸ ಮಾಡಲಿ. ಇವರ ರಾಜಕೀಯಕ್ಕೆ ಸೋಂಕಿನ ಸಂಖ್ಯೆ ಹೆಚ್ಚಿಸಿ ನಿರ್ಬಂಧ ಹಾಕಿದ್ದಾರೆ. ರಾಜಕೀಯ ಬಿಟ್ಟು ಜನರಿಗೆ ನೆರವಾಗಲಿ ಎಂದಿದ್ದಾರೆ.
ನಾವು 100 ನಾಟೌಟ್ ಮಾಡಿದಾಗ ಕೇಸ್ ಹಾಕಿದ್ದಾರೆ. 50ಕ್ಕೂ ಹೆಚ್ಚು ಜನ ಸೇರುವಂತಿಲ್ಲ ಎಂಬ ನಿರ್ಬಂಧ ಇರುವಾಗ ಸಿಎಂ ಬಸವರಾಜ ಬೊಮ್ಮಾಯಿ ಅವರು ಸೇರಿದಂತೆ ಬಿಜೆಪಿ ನಾಯಕರು ಸಾವಿರಾರು ಜನ ಸೇರಿದ್ದ ಮದುವೆ ಸಮಾರಂಭಗಳಲ್ಲಿ ಭಾಗವಹಿಸಿ ನಿಯಮ ಉಲ್ಲಂಘಿಸಿದ್ದರು. ಕೇಂದ್ರ ಸಚಿವರು ಜನಾರ್ಶೀವಾದ ಯಾತ್ರೆ ಮಾಡಿದಾಗ ನಿಯಮ ಉಲ್ಲಂಘನೆಯಾಗಲಿಲ್ಲವೇ? ಅವರ ವಿರುದ್ಧ ಯಾವುದೇ ಕ್ರಮ ಜರುಗಿಸಿಲ್ಲ ಯಾಕೆ? ನಾವು ತಪ್ಪು ಮಾಡಲು ಹೊರಟಿಲ್ಲ. ಆ ತಪ್ಪಿನ ಬಗ್ಗೆ ನೀವು ಅವರನ್ನು ಪ್ರಶ್ನಿಸಿ ಎಂದು ವಾಗ್ದಾಳಿ ನಡೆಸಿದ್ದಾರೆ.
ಡಿ.ಕೆ.ಶಿವಕುಮಾರ್ ಅವರಿಗೂ ಮೇಕೆದಾಟು ಡಿಪಿಆರ್‌ಗೂ ಸಂಬಂಧವಿಲ್ಲ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ಕುಮಾರಣ್ಣ ಅವರು ವಿದ್ಯಾವಂತ, ಬುದ್ಧಿವಂತ, ಮೇಧಾವಿಗಳಿದ್ದಾರೆ. ಈಗ ಅವರ ಬಗ್ಗೆ ಮಾತಾಡುವುದಿಲ್ಲ. ಮಾತಾಡಲು ಬೇಕಾದಷ್ಟು ಸಮಯ ಇದೆ. ಅವರ ಸಂಪುಟದಲ್ಲಿ ನಾನು ನೀರಾವರಿ ಸಚಿವನಾಗಿ ಎಷ್ಟು ಬಾರಿ ಕೇಂದ್ರ ಸಚಿವರ ಭೇಟಿ ಮಾಡಿದ್ದೇನೆ. ಜೊತೆಗೆ ತಮಿಳುನಾಡು ಸಿಎಂ ಭೇಟಿ ಮಾಡಲು ಎಷ್ಟು ಪತ್ರ ಬರೆದು ಪ್ರಯತ್ನಿಸಿದ್ದೇನೆ. ಕೇಂದ್ರ ಸಚಿವರು ಉಭಯ ರಾಜ್ಯಗಳ ಸಚಿವರ ಸಭೆ ನಡೆಸಲು ಪ್ರಯತ್ನಿಸಿದ ಬಗ್ಗೆ ನನ್ನ ಬಳಿ ದಾಖಲೆಗಳು ಇವೆ. ಅವರು ಮೈಲೇಜ್ ತೆಗೆದುಕೊಂಡು ಖುಷಿಪಡಲು ಮಾತನಾಡುತ್ತಿದ್ದಾರೆ, ಮಾತನಾಡಲಿ’ ಎಂದು ಉತ್ತರಿಸಿದ್ದಾರೆ.
ಬೆಂಗಳೂರು: ಮಕ್ಕಿಕಾಮಕ್ಕಿ ಕೊರೊನಾ ಟಫ್ ರೂಲ್ಸ್ ಜಾರಿಯಾದರೂ ನಾವು ಪಾದಯಾತ್ರೆ ಮಾಡೇ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಪಾದಯಾತ್ರೆ ಮಾಡಿಯೇ ಮಾಡುತ್ತೇವೆ. ಯಾವುದೇ ಕಾರಣಕ್ಕೂ ಪಾದಯಾತ್ರೆ ನಿಲ್ಲಿಸುವುದಿಲ್ಲ. ನಾವು ಜನರನ್ನು ಉಳಿಸುವ ಕೆಲಸವನ್ನೂ ಮಾಡುತ್ತೇವೆ. ಪಾದಯಾತ್ರೆಯಿಂದ ಯಾರಿಗೂ ತೊಂದರೆಯಾಗಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಟಾಪ್ ದುಬಾರಿ ಬಜೆಟ್ ಸಿನಿಮಾಗಳಿಗೆ ಕೋವಿಡ್ ಶಾಕ್ – ರಿಲೀಸ್ ಡೇಟ್ ಮುಂದಕ್ಕೆ
ಪಾದಯಾತ್ರೆ ನಿಲ್ಲಿಸಲು ಟಫ್ ರೂಲ್ಸ್ ತಂದಿದ್ದಾರಾ? ಅದೆಲ್ಲ ನನಗೆ ಗೊತ್ತಿಲ್ಲ. ಆದರೆ ಪಾದಯಾತ್ರೆ ಮಾಡಿಯೇ ಮಾಡುತ್ತೇವೆ ಎಂದು ಹೇಳಿದ್ದಾರೆ.
144 ಸೆಕ್ಷನ್ ಜಾರಿಯಿದ್ದರೆ 5ಕ್ಕೂ ಹೆಚ್ಚು ಜನ ಸೇರುವಂತಿಲ್ಲ. ನಾವು ನಾಲ್ಕು ಜನ ನಡೆಯುತ್ತೇವೆ. ಜನರಿಗೆ ಪಾದಯಾತ್ರೆಗೆ ಬರಲು ಮನವಿ ಮಾಡಿದ್ದೇವೆ. ಬಂದವರಿಗೆ ಮಾಸ್ಕ್, ಸ್ಯಾನಿಟೈಸ್, ಗ್ಲೌಸ್ ಹಾಕಿಸುತ್ತೇವೆ. ನಿಯಮಮಾನುಸಾರ ಮಾಡಿಸುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಕೊರೊನಾ ಸೋಂಕಿತ ಆಸ್ಪತ್ರೆಯಿಂದ ಎಸ್ಕೇಪ್
ಬೆಂಗಳೂರು: ಮೇಕೆದಾಟು ವಿಚಾರದಲ್ಲಿ ಕಾಂಗ್ರೆಸ್ – ಜೆಡಿಎಸ್ ನಡುವೆ ರಾಜಕೀಯ ಗುದ್ದಾಟ ದಿನೇ ದಿನೇ ತೀವ್ರಗೊಳ್ಳುತ್ತಿದೆ. ಸರಣಿ ಟ್ವೀಟ್ ಮೂಲಕ ಕಾಂಗ್ರೆಸ್ ನಾಯಕರ ವಿರುದ್ಧ ಎಚ್.ಡಿ.ಕುಮಾರಸ್ವಾಮಿ ಅವರು ಗುಡುಗಿದ್ದಾರೆ. ಇಂದು 13 ಟ್ವೀಟ್‌ಗಳಲ್ಲಿ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಗೆ ಮಾಜಿ ಸಿಎಂ ಕುಮಾರಸ್ವಾಮಿ ಅವರು ಕಟುವಾದ ಟೀಕೆ ಮಾಡಿದ್ದಾರೆ.
ಎಚ್‌ಡಿಕೆ ಟ್ವೀಟ್‌ನಲ್ಲೇನಿದೆ..?:
ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ನಾವು ಕೈಗೊಂಡಿರುವ ಹೋರಾಟ ಪಕ್ಷಾತೀತ. ಇದನ್ನು ಟೀಕೆ ಮಾಡುತ್ತಿರುವ ಹೆಚ್.ಡಿ.ಕುಮಾರಸ್ವಾಮಿ ಅವರೂ ಪಾದಯಾತ್ರೆಯಲ್ಲಿ ಭಾಗವಹಿಸಬಹುದು ಎಂದಿದ್ದಾರೆ ಕೆಪಿಸಿಸಿ ಅಧ್ಯಕ್ಷರು. ಅವರು ನನ್ನನ್ನೂ ಸೇರಿಸಿ 83 ತಾಲೂಕುಗಳ ಜನರಿಗೆ ʼಮೇಕೆದಾಟು ಮಕ್ಮಲ್ ಟೋಪಿʼ ಹಾಕಲು ಹೊರಟಿದ್ದಾರೆ. ಇದನ್ನೂ ಓದಿ: ಕರ್ನಾಟಕ ಬಂದ್ ದಿನಾಂಕ ಮುಂದೂಡಲು ವಾಟಾಳ್ ನಾಗರಾಜ್‌ಗೆ ಕರವೇ ಪತ್ರ
ನಿಮ್ಮ ʼಬ್ರೂಟಸ್ʼ ಬುದ್ಧಿ, ಸರಕಾರವನ್ನೇ ಸ್ವಾಹ ಮಾಡಿದ ʼಸಿದ್ಧಕಲೆʼಯ ಬಗ್ಗೆ 2018ರಲ್ಲೇ ನನಗೆ ಅರಿವಾಯಿತು. ‘ಕೈ’ ಚಿಹ್ನೆ ಇಟ್ಟುಕೊಂಡು ಕಂಡೋರ ಮೇಲೆ ʼಕೈʼ ಇಡುವ ಭಸ್ಮಾಸುರ ರಾಜಕಾರಣದ ಅನುಭವ ನನಗೂ, ದೇವೇಗೌಡರಿಗೂ ಆಗಿದೆ. ಈ ಪಾದಯಾತ್ರೆ ಯಿಂದ ಜನರಿಗೇನು ಸಂದೇಶ ನೀಡುತ್ತಿದ್ದೀರಿ. 23/13
— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) December 29, 2021
ನೀರಾವರಿ ವಿಷಯದಲ್ಲಿ ರಾಜ್ಯಕ್ಕೆ ಶ್ರೀ ಹೆಚ್.ಡಿ.ದೇವೇಗೌಡರು ಕೊಟ್ಟ ಕಾಣಿಕೆ ಅಗಣಿತ. ತಮ್ಮ ಜೀವಿತಾವಧಿಯನ್ನೇ ಈ ನೆಲಕ್ಕೆ ನೀರರಿಸಲು ಮುಡಿಪಿಟ್ಟ ಭಗೀರಥರು ಅವರು. ಮೇಕೆದಾಟು ಯೋಜನೆಯ ಮೂಲ ರೂವಾರಿಯೇ ಅವರು. ಅವರನ್ನೇ ಮರೆತ ಕಾಂಗ್ರೆಸ್ ನಾಯಕರು ‘ಸತ್ಯಕ್ಕೆ ಸಮಾಧಿ’ ಕಟ್ಟುತ್ತಿದ್ದಾರೆ ಎಂದು ಇನ್ನೊಂದು ಟ್ವೀಟ್‌ನಲ್ಲಿ ಹೇಳಿದ್ದಾರೆ.
ಅವರಿಗೆ ಸತ್ಯ ಹೇಳಲು ನಾಲಿಗೆ ಹೊರಳುತ್ತದೆ. ಆದರೆ, ಸತ್ಯಕ್ಕೆ ನಾಲಿಗೆ ಪ್ರಮೇಯವೇ ಇಲ್ಲ, ಸತ್ಯ ಸತ್ಯವೇ. ದೇವೇಗೌಡರು ಅಂತಹ ಸತ್ಯದ ಸಾಕ್ಷಿ. ನೀರಾವರಿಗಾಗಿ ಅವರು ಅವಿರತವಾಗಿ ಶ್ರಮಿಸಿ ನಡೆದಾಡಿದ ನೆಲದ ಮಣ್ಣಿನಮಕ್ಕಳ ನಂಬಿಕೆಯನ್ನೇ ʼಬುಲ್ಡೋಜ್ʼ ಮಾಡುವಂಥ ರಾಜಕಾರಣ ʼಕೈʼ ಪಕ್ಷ ಮಾಡುತ್ತಿದೆ.
ಈಗ ಬೇಕಿರುವುದು ತಾಂತ್ರಿಕವಾಗಿ ಮೇಕೆದಾಟು ಯೋಜನೆಯನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗಬೇಕು. ಕೇಂದ್ರದ ಮೇಲೆ ಒತ್ತಡ ತಂದು ಯೋಜನೆಗೆ ಒಪ್ಪಿಗೆ ಪಡೆಯಲು ಹೋರಾಟ ನಡೆಸಬೇಕು. ಅದು ಬಿಟ್ಟು ಹೊಸ ಸ್ಲೋಗನ್ ಅಗತ್ಯ ಇಲ್ಲ. 11/13
— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) December 29, 2021
ಆಗ ಸಿಎಂ ಆಗಿದ್ದ ಗೌಡರನ್ನು ತಡೆದ ಪಕ್ಷಕ್ಕೆ ಪ್ರಧಾನಿಯಾದ ಗೌಡರನ್ನು ತಡೆಯಲು ಧೈರ್ಯ ಸಾಲಲಿಲ್ಲ. ಕಾಂಗ್ರೆಸ್ ಕುತ್ಸಿತತನದಿಂದ ತಡೆಯಲ್ಪಟ್ಟಿದ್ದ 9 ಟಿಎಂಸಿ ನೀರು ರಾಜ್ಯಕ್ಕೆ ದಕ್ಕುವ ಯೋಜನೆಗೆ ಮಣ್ಣಿನಮಗ ಎದೆಗುಂದದೆ ಹಸಿರುನಿಶಾನೆ ತೋರಿದ್ದರು. ಜಪಾನ್ʼನಿಂದ ಹಣವನ್ನೂ ತಂದರು.
ದೇವೇಗೌಡರು ಕೃಷ್ಣೆ, ಕಾವೇರಿ ಕೊಳ್ಳದಲ್ಲಿ ಮಾಡಿದ ಸಾಧನೆಗಳನ್ನು ತಿಳಿಯಲು ಇತಿಹಾಸದ ಪುಟಗಳನ್ನು ತೆರೆದು ನೋಡಬೇಕು. 10/13
— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) December 29, 2021
ಬೆಂಗಳೂರಿಗೆ ಕಾವೇರಿ ನೀರು ಕೊಟ್ಟವರು ದೇವೇಗೌಡರು. ಜೀವಜಲ ತಂದು ಬವಣೆ ನೀಗಿಸಿದವರು ಅವರೇ. ಈ ಭಗೀರಥನನ್ನೇ ಮರೆತ ಕಾಂಗ್ರೆಸ್ ‘ ಕೃತಘ್ನ ‘ ರಾಜಕಾರಣಕ್ಕೆ ಏನು ಹೇಳುವುದು ಎಂದು ಪ್ರಶ್ನಿಸಿದ್ದಾರೆ.
ಕಾಂಗ್ರೆಸ್‌ನ 5 ವರ್ಷದ ಸರಕಾರವೇ ಇತ್ತು. ‘ಸಿದ್ದಹಸ್ತರೇ’ ಸಿಎಂ ಆಗಿದ್ದರು. ಆಗ ಕೇಂದ್ರದ ಮುಂದೆ ಪ್ರತಾಪ ತೋರಬಹುದಿತ್ತು. ಬರೀ ಮಾತಿನ ಉತ್ತರ ಪೌರುಷ. ಆಗ ಗಾಂಧೀಜಿ ಪ್ರತಿಮೆ ಮುಂದೆ ಉಪವಾಸ ಕೂತ ಮಣ್ಣಿನಮಗನ ಖದರಿಗೆ ಕೇಂದ್ರವೇ ನಡುಗಿತ್ತು. ದಿಲ್ಲಿಯಿಂದ ಮಂತ್ರಿಗಳು ಓಡಿಬಂದರು. ಅದೆಲ್ಲವನ್ನೂ ಕಾಂಗ್ರೆಸ್ ಮರೆತಿದೆಯಾ? ಇದನ್ನೂ ಓದಿ: ಕರ್ನಾಟಕ ಬಂದ್‍ಗೆ ಎರಡೇ ದಿನ ಬಾಕಿ – ಹಲವು ವಲಯಗಳಿಂದ ಇನ್ನು ಸಿಕ್ಕಿಲ್ಲ ಪರಿಪೂರ್ಣ ಬೆಂಬಲ
ಹೌದು. ಜಾಣ ಮರೆವು ಕೂಡ ಒಂದು ರೋಗ. ಮಲತಾಯಿ ದೋರಣೆಯೇ ಮೈವೇತ್ತ ಕಾಂಗ್ರೆಸ್ ಈಗ ಪವಿತ್ರ ಗಂಗೆಯನ್ನೂ ಮತಕ್ಕೆ ಬಳಸುತ್ತಿದೆ. ಆಗ ಏನೂ ಮಾಡದ ʼಉತ್ತರಕುಮಾರ ಸಿದ್ದಸೂತ್ರಧಾರʼ, ಈಗೇನು ಮಾಡಲು ಸಾಧ್ಯ? ಆದರೆ; ರಾಜ್ಯದ ಹಿತದ ಪ್ರಶ್ನೆ ಬಂದಾಗ ಗೌಡರು ರಾಜಿಯಾದವರಲ್ಲ. ಅವರೊಬ್ಬರಿಂದಲೇ ಮೇಕೆದಾಟು ಯೋಜನೆ ಸಾಕಾರ ಸಾಧ್ಯ. 8/13
— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) December 29, 2021
ಹೌದು. ಜಾಣ ಮರೆವು ಕೂಡ ಒಂದು ರೋಗ. ಮಲತಾಯಿ ದೋರಣೆಯೇ ಮೈವೆತ್ತ ಕಾಂಗ್ರೆಸ್ ಈಗ ಪವಿತ್ರ ಗಂಗೆಯನ್ನೂ ಮತಕ್ಕೆ ಬಳಸುತ್ತಿದೆ. ಆಗ ಏನೂ ಮಾಡದ ʼಉತ್ತರಕುಮಾರ ಸಿದ್ದಸೂತ್ರಧಾರʼ, ಈಗೇನು ಮಾಡಲು ಸಾಧ್ಯ? ಆದರೆ; ರಾಜ್ಯದ ಹಿತದ ಪ್ರಶ್ನೆ ಬಂದಾಗ ಗೌಡರು ರಾಜಿಯಾದವರಲ್ಲ. ಅವರೊಬ್ಬರಿಂದಲೇ ಮೇಕೆದಾಟು ಯೋಜನೆ ಸಾಕಾರ ಸಾಧ್ಯ ಎಂದಿದ್ದಾರೆ.
ಇಲ್ಲಿ 30 ವರ್ಷ ಆಳಿದವರು ಕಾವೇರಿ-ಕೃಷ್ಣಾ ವಿಚಾರದಲ್ಲಿ ಕೊಟ್ಟ ಕೊಡುಗೆ ಏನು? ಕಾಂಗ್ರೆಸ್ ನಡಿಗೆ ಕೃಷ್ಣೆಯ ಕಡೆಗೆ ಎಂದು ಸ್ಲೋಗನ್ ಹೇಳಿಕೊಂಡು ಹೋಗಿ ಉತ್ತರ ಕರ್ನಾಟಕಕ್ಕೆ ಟೋಪಿ ಹಾಕಿದ್ದಾಗಿದೆ. ಮೇಕೆದಾಟು ವಿಚಾರದಲ್ಲಿಯೂ ಅದೇ ಆಗಲಿದೆ ಎಂದರು.
ಬೆಂಗಳೂರಿಗೆ ಕಾವೇರಿ ನೀರು ಕೊಟ್ಟವರು ದೇವೇಗೌಡರು. ಜೀವಜಲ ತಂದು ಬವಣೆ ನೀಗಿಸಿದವರು ಅವರೇ. ಈ ಭಗೀರಥನನ್ನೇ ಮರೆತ ಕಾಂಗ್ರೆಸ್ ' ಕೃತಘ್ನ ' ರಾಜಕಾರಣಕ್ಕೆ ಏನು ಹೇಳುವುದು? 6/13
— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) December 29, 2021
ದೇವೇಗೌಡರು ಕೃಷ್ಣೆ, ಕಾವೇರಿ ಕೊಳ್ಳದಲ್ಲಿ ಮಾಡಿದ ಸಾಧನೆಗಳನ್ನು ತಿಳಿಯಲು ಇತಿಹಾಸದ ಪುಟಗಳನ್ನು ತೆರೆದು ನೋಡಬೇಕು.
ಈಗ ಬೇಕಿರುವುದು ತಾಂತ್ರಿಕವಾಗಿ ಮೇಕೆದಾಟು ಯೋಜನೆಯನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗಬೇಕು. ಕೇಂದ್ರದ ಮೇಲೆ ಒತ್ತಡ ತಂದು ಯೋಜನೆಗೆ ಒಪ್ಪಿಗೆ ಪಡೆಯಲು ಹೋರಾಟ ನಡೆಸಬೇಕು. ಅದು ಬಿಟ್ಟು ಹೊಸ ಸ್ಲೋಗನ್ ಅಗತ್ಯ ಇಲ್ಲ.
ನೀರಾವರಿ ವಿಷಯದಲ್ಲಿ ರಾಜ್ಯಕ್ಕೆ ಶ್ರೀ ಹೆಚ್.ಡಿ.ದೇವೇಗೌಡರು ಕೊಟ್ಟ ಕಾಣಿಕೆ ಅಗಣಿತ. ತಮ್ಮ ಜೀವಿತಾವಧಿಯನ್ನೇ ಈ ನೆಲಕ್ಕೆ ನೀರರಿಸಲು ಮುಡಿಪಿಟ್ಟ ಭಗೀರಥರು ಅವರು. ಮೇಕೆದಾಟು ಯೋಜನೆಯ ಮೂಲ ರೂವಾರಿಯೇ ಅವರು. ಅವರನ್ನೇ ಮರೆತ ಕಾಂಗ್ರೆಸ್ ನಾಯಕರು ‘ಸತ್ಯಕ್ಕೆ ಸಮಾಧಿ’ ಕಟ್ಟುತ್ತಿದ್ದಾರೆ. 2/13
— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) December 29, 2021
ಪಾಪ ತೊಳೆಯುವ ತಾಯಿ ‘ಲೋಕಪಾವನಿ’ ಈಗ ವೋಟಿನ ದಾಳವಾಗುತ್ತಿರುವುದು ನಾಡಿನ ದುರ್ದೈವ. ನೀರಿನ ಮುಂದೆ ʼಕಪಟ ನಾಟಕʼ ಮಾಡುವ ಸಿದ್ದಹಸ್ತ, ಡಿಸೈನ್ ಶೂರರಿಗೆ ಮುಂದೆ ಕಾದಿದೆ ಶಾಸ್ತಿ. ಭೂತಾಯಿ ಒಡಲಿನ ಮಣ್ಣು ಬಗೆದ, ಕಲ್ಲುಬಂಡೆಗಳನ್ನೇ ನುಂಗಿದ ‘ರಕ್ಕಸ ರಾಜಕಾರಣ’ದ ಕಾಕದೃಷ್ಟಿ ಈಗ ತಾಯಿ ಕಾವೇರಿ ಮೇಲೂ ಬಿದ್ದಿದೆ.
ಬೆಂಗಳೂರಿನ ನ್ಯಾಯಯುತ ಪಾಲು, ಕಾವೇರಿ 4ನೇ ಹಂತದ 9 ಟಿಎಂಸಿ ನೀರನ್ನು ತಮಿಳುನಾಡಿನ ಒತ್ತಡಕ್ಕೆ ಮಣಿದು ತಡೆದಿತ್ತು ಕಾಂಗ್ರೆಸ್. ಆಗ ಪಿ.ವಿ.ನರಸಿಂಹರಾವ್ ಪ್ರಧಾನಿ. ಕನ್ನಡಿಗರ ಕನಸುಗಳಿಗೆ ಕೊಳ್ಳಿ ಇಟ್ಟ ಅದೇ ಪಕ್ಷ ಈಗ ಸತ್ಯಗಳನ್ನು ಹೂತು ಮುಜುಗರವಿಲ್ಲದೆ ಮತಯಾತ್ರೆಗೆ ಹೊರಟಿದೆ. 4/13
— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) December 29, 2021
ನಿಮ್ಮ ‘ಬ್ರೂಟಸ್’ ಬುದ್ಧಿ, ಸರಕಾರವನ್ನೇ ಸ್ವಾಹ ಮಾಡಿದ ‘ಸಿದ್ಧಕಲೆ’ಯ ಬಗ್ಗೆ 2018ರಲ್ಲೇ ನನಗೆ ಅರಿವಾಯಿತು. ‘ಕೈ’ ಚಿಹ್ನೆ ಇಟ್ಟುಕೊಂಡು ಕಂಡೋರ ಮೇಲೆ ʼಕೈʼ ಇಡುವ ಭಸ್ಮಾಸುರ ರಾಜಕಾರಣದ ಅನುಭವ ನನಗೂ, ದೇವೇಗೌಡರಿಗೂ ಆಗಿದೆ. ಈ ಪಾದಯಾತ್ರೆ ಯಿಂದ ಜನರಿಗೇನು ಸಂದೇಶ ನೀಡುತ್ತಿದ್ದೀರಿ ಎಂದು ಪ್ರಶ್ನಿಸಿದ್ದಾರೆ.
ನೀರಾವರಿ ವಿಷಯದಲ್ಲಿ ರಾಜ್ಯಕ್ಕೆ ಶ್ರೀ ಹೆಚ್.ಡಿ.ದೇವೇಗೌಡರು ಕೊಟ್ಟ ಕಾಣಿಕೆ ಅಗಣಿತ. ತಮ್ಮ ಜೀವಿತಾವಧಿಯನ್ನೇ ಈ ನೆಲಕ್ಕೆ ನೀರರಿಸಲು ಮುಡಿಪಿಟ್ಟ ಭಗೀರಥರು ಅವರು. ಮೇಕೆದಾಟು ಯೋಜನೆಯ ಮೂಲ ರೂವಾರಿಯೇ ಅವರು. ಅವರನ್ನೇ ಮರೆತ ಕಾಂಗ್ರೆಸ್ ನಾಯಕರು ‘ಸತ್ಯಕ್ಕೆ ಸಮಾಧಿ’ ಕಟ್ಟುತ್ತಿದ್ದಾರೆ. 2/13
— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) December 29, 2021