ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (Former PM Manmohan Singh) ಅವರ ಸ್ಮಾರಕಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ (Congress), ಬಿಜೆಪಿ (BJP) ನಡುವೆ ರಾಜಕೀಯ ಜಟಾಪಟಿ ನಡೆಯುತ್ತಿರುವ ಹೊತ್ತಲ್ಲಿ ಕೇಂದ್ರ ನಗರಾಭಿವೃದ್ಧಿ ಸಚಿವಾಲಯದ ಅಧಿಕಾರಿಗಳು ರಾಜ್‌ಘಾಟ್‌ನಲ್ಲಿರುವ ಸಮಾಧಿ ಸ್ಥಳಗಳಿಗೆ ಭೇಟಿ ಸ್ಥಳ ಪರಿಶೀಲನೆ ಮಾಡಿದ್ದಾರೆ.
ರಾಷ್ಟ್ರೀಯ ಸ್ಮೃತಿಸ್ಥಳ, ರಾಷ್ಟ್ರಪತಿ, ಉಪರಾಷ್ಟ್ರಪತಿ ಮತ್ತು ಪ್ರಧಾನ ಮಂತ್ರಿಗಳ ಅಂತ್ಯಕ್ರಿಯೆಗೆ ಗೊತ್ತುಪಡಿಸಿದ ಸ್ಥಳ, ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಸ್ಮಾರಕ ಕಿಸಾನ್ ಘಾಟ್, ಸಂಜಯ್ ಗಾಂಧಿ ಸಮಾಧಿ, ಪಿ.ವಿ.ನರಸಿಂಹರಾವ್ ಸಮಾಧಿ ಏಕತಾ ಸ್ಥಳದ ಬಳಿ ಮನಮೋಹನ್ ಸಿಂಗ್ ಸ್ಮಾರಕ ನಿರ್ಮಿಸುವ ಬಗ್ಗೆ ಅಧಿಕಾರಿಗಳಿಂದ ಪರಿಶೀಲನೆ ನಡೆದಿದೆ.ಇದನ್ನೂ ಓದಿ: ಕೈಯಲ್ಲಿ ಡೆತ್‌ನೋಟ್ ಹಿಡ್ಕೊಂಡು KSDL ಅಧಿಕಾರಿ ಆತ್ಮಹತ್ಯೆ
ದೇಶದ ಮೊದಲ ಸಿಖ್ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತಿಮ ಸಂಸ್ಕಾರಕ್ಕೆ ಕೇಂದ್ರ ಸರ್ಕಾರ ಸರಿಯಾದ ಮತ್ತು ಗೌರವಾನ್ವಿತ ಸ್ಥಳವನ್ನು ಒದಗಿಸಿಲ್ಲ ಎಂದು ಕಾಂಗ್ರೆಸ್ ಆರೋಪಿಸಿದೆ. ಅವರ ಸ್ಮಾರಕವನ್ನು ನಿರ್ಮಿಸುವ ಸ್ಥಳದಲ್ಲಿ ಅಂತ್ಯಕ್ರಿಯೆ ನಡೆಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿತ್ತು. ಅದಾಗ್ಯೂ ಕೇಂದ್ರ ಸರ್ಕಾರ ನಿಗಮ್‌ಬೋಧ್ ಘಾಟ್‌ನಲ್ಲಿ ಅಂತ್ಯಕ್ರಿಯೆ ನಡೆಸಿತ್ತು.
ಈ ನಡುವೆ ಕೇಂದ್ರ ಸರ್ಕಾರ ಸ್ಮಾರಕಕ್ಕೆ ಸ್ಥಳ ನೀಡುವ ಭರವಸೆ ನೀಡಿದ್ದು, ಈ ಹಿನ್ನೆಲೆ ಸ್ಥಳ ಪರಿಶೀಲನೆ ಆರಂಭವಾಗಿದೆ. ಈ ನಡುವೆ 2000ನೇ ಇಸವಿಯಲ್ಲಿ ಯುಪಿಎ ಸರ್ಕಾರವು ರಾಜಧಾನಿಯಲ್ಲಿ ಭೂಮಿ ಕೊರತೆ ಹಿನ್ನೆಲೆ ಕಳವಳ ವ್ಯಕ್ತಪಡಿಸಿತ್ತು. ಇದರೊಂದಿಗೆ ಹೊಸ ಸ್ಮಾರಕಗಳನ್ನು ನಿರ್ಮಿಸದಿರಲು ನಿರ್ಧರಿಸಲಾಗಿತ್ತು. ಈ ನಿರ್ಧಾರ ಮನಮೋಹನ್ ಸಿಂಗ್ ಸ್ಮಾರಕಕ್ಕೆ ಅಡ್ಡಿಯಾಗಬಹುದು ಎನ್ನಲಾಗುತ್ತಿದೆ.ಇದನ್ನೂ ಓದಿ: ಅರ್ಚಕರಿಗೆ ಪ್ರತಿ ತಿಂಗಳು 18 ಸಾವಿರ ಸಹಾಯಧನ: ಕೇಜ್ರಿವಾಲ್ ಘೋಷಣೆ
ಬೆಳಗಾವಿ: ಮದಗಜಗಳ ಕಾದಾಟದಲ್ಲಿ ವೀರಮರಣ ಹೊಂದಿದ ಅರ್ಜುನ (Arjuna) ಆನೆಗೆ (Elephant) ಹಾಸನ (Hassan) ಹಾಗೂ ಮೈಸೂರಿನಲ್ಲಿ (Mysuru) ಸ್ಮಾರಕ ನಿರ್ಮಾಣ ಮಾಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ (Eshwar Khandre) ಹೇಳಿದ್ದಾರೆ.
ಬೆಳಗಾವಿ (Belagavi) ಸುವರ್ಣ ಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸ್ಮಾರಕ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸಿಎಂ ಜೊತೆ ಚರ್ಚ ಮಾಡಿದ್ದೇನೆ. ರಾಜ್ಯ, ರಾಷ್ಟ್ರಕ್ಕೆ ಹೆಮ್ಮೆ ತಂದಂತಹ 8 ಬಾರಿ ದಸರಾ ಹಬ್ಬ ಯಶಸ್ಸಿಗೆ ಕಾರಣವಾದಂತಹ ಅರ್ಜುನ ಸ್ಮಾರಕ ನಿರ್ಮಾಣಕ್ಕೆ ತೀರ್ಮಾನ ಮಾಡಲಾಗಿದೆ ಎಂದರು. ಇದನ್ನೂ ಓದಿ: ಕಾಂಗ್ರೆಸ್ ಪಕ್ಷದವರು ಕೋಮುವಾದಿಗಳು: ಅಶ್ವಥ್ ನಾರಾಯಣ್
ಎಂಟು ಬಾರಿ ಅಂಬಾರಿ ಹೊತ್ತ ಅರ್ಜುನ ಸಾವಿಗೆ ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯ ಎಂದು ಈಗಲೇ ಹೇಳಲು ಆಗುವುದಿಲ್ಲ. ಇಂತಹ ಕಾರ್ಯಾಚರಣೆಗಳಲ್ಲಿ ಸುಮಾರು ಅರಣ್ಯ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಅಪಾಯ ಇದೆ ಎಂದು ತಿಳಿದು ಸಾರ್ವಜನಿಕರ ಆಸ್ತಿ, ಜೀವ ರಕ್ಷಣೆಗೆ ಸೇವೆ ಮಾಡುತ್ತಾರೆ. ಇಂಥ ಪರಿಸ್ಥಿತಿಯಲ್ಲಿ ಹೀಗೆ ಆಗಿದೆ ಎನ್ನುವುದಕ್ಕಿಂತ ಹೇಗೆ ಆಗಿದೆ ಎಂದು ಪರಿಶೀಲಿಸಲಾಗುವುದು ಈಗಲೇ ಈ ಬಗ್ಗೆ ಹೇಳಲು ಆಗುವುದಿಲ್ಲ. ತನಿಖಾ ವರದಿ ಬಂದ ಮೇಲೆ ಲೋಪದೋಷಗಳಿದ್ದರೆ ಕ್ರಮ ಕೈಗೊಳ್ಳಲಾಗುವುದು. ಎಲ್ಲಾ ವಿಷಯಗಳ ಬಗ್ಗೆ ತನಿಖಾ ವರದಿ ಬರುತ್ತದೆ ಎಂದರು. ಇದನ್ನೂ ಓದಿ: ನೈಸ್‌ಗೆ ಕೊಟ್ಟಿರುವ ಹೆಚ್ಚುವರಿ 554 ಎಕ್ರೆ ಜಾಗ ವಾಪಸ್
ಕನ್ನಡದ ಹೆಸರಾಂತ ನಟ ಡಾ.ವಿಷ್ಣುವರ್ಧನ್ (Vishnuvardhan) ಅವರ ಸಮಾಧಿ ವಿವಾದ ಮತ್ತಷ್ಟು ತಾರಕಕ್ಕೇರಿದೆ. ಮೈಸೂರಿಗೆ ಸ್ಮಾರಕವನ್ನು ಶಿಫ್ಟ್ ಮಾಡಿರುವ ಹಿನ್ನೆಲೆಯಲ್ಲಿ ಅವರ ಸಮಾಧಿ ಸ್ಥಳವನ್ನು ತೆರವು ಮಾಡಲು ನಿರ್ಧರಿಸಲಾಗಿತ್ತು. ಈ ವಿವಾದ ಕೋರ್ಟ್ ಮೆಟ್ಟಿಲು ಕೂಡ ಏರಿತ್ತು. ಈಗ ಮತ್ತೆ ಅಭಿಮಾನಿಗಳ ಮತ್ತು ಅಭಿಮಾನ ಸ್ಟುಡಿಯೋ ಮಾಲೀಕರ ನಡುವೆ ಮತ್ತೊಂದು ಸುತ್ತಿನ ಸಮರ ಶುರುವಾಗುತ್ತಿದೆ. ಈ ಕುರಿತಂತೆ ಅಭಿಮಾನಿಗಳು ಮೊನ್ನೆ ಸಭೆ ಸೇರಿ ಬೃಹತ್ ಪ್ರತಿಭಟನೆ (Protest) ಮಾಡಲು ನಿರ್ಧರಿಸಿದ್ದಾರೆ. ಈ ಕುರಿತಂತೆ ವಿಷ್ಣು ಸೇನಾ ಸಮಿತಿ ಅಧ್ಯಕ್ಷರಾದ ವೀರಕಪುತ್ರ ಶ್ರೀನಿವಾಸ್ (Veerakaputra Srinivas) ಅವರ ಬರೆದ ಪತ್ರ ಇಲ್ಲಿದೆ.
ಮೇರು ನಟ ಡಾ.ವಿಷ್ಣುವರ್ಧನ್ ಅವರು ಅಗಲಿ 14 ವರ್ಷಗಳಾದವು. ಆದರೆ ಇಂದಿಗೂ ಅವರ ಅಂತ್ಯಸಂಸ್ಕಾರಗೊಂಡ ಜಾಗವನ್ನು ಅಭಿವೃದ್ದಿಪಡಿಸುವ ಕೆಲಸವನ್ನು ಯಾವುದೇ ಸರ್ಕಾರ ಮಾಡಿಲ್ಲ. ವಾಸ್ತವದಲ್ಲಿ ಹಿರಿಯ ಕಲಾವಿದ ಬಾಲಕೃಷ್ಣ ಅವರಿಗೆ ಸರ್ಕಾರ ಅನುದಾನವಾಗಿ ನೀಡಿರುವ ಜಾಗವೇ ಅಭಿಮಾನ್ ಸ್ಟುಡಿಯೋ. ಕನ್ನಡಿಗರು ಚಿತ್ರರಂಗದ ಕೆಲಸಗಳಿಗೆ ಮದರಾಸಿಗೆ ಹೋಗುವುದನ್ನು ತಪ್ಪಿಸಬೇಕು ಎಂದು ಕನಸು ಹೊತ್ತು ಬಾಲಣ್ಣನವರು ಸರ್ಕಾರದ ಬಳಿ ಇಪ್ಪತ್ತು ಎಕರೆ ಜಾಗವನ್ನು 99 ವರುಷಕ್ಕೆ ಅನುದಾನವಾಗಿ ಪಡೆದು ಅಭಿಮಾನ್ ಸ್ಟುಡಿಯೋ ನಿರ್ಮಿಸಿದ್ದರು. ಆದರೆ ಅವರ ಅಗಲಿಕೆಯ ನಂತರ 2004 ರಲ್ಲಿ ಅವರ ಮಕ್ಕಳು ಅದರಲ್ಲಿ ಹತ್ತು ಎಕರೆ ಜಾಗವನ್ನು ಮಾರಾಟ ಮಾಡಿ, ಸರ್ಕಾರಿ ಜಮೀನನ್ನು ದುರುಪಯೋಗಪಡಿಸಿಕೊಂಡಿದ್ದರು. ಈ ಕಾರಣದಿಂದ ಹಿಂದಿನ ಜಿಲ್ಲಾಧಿಕಾರಿ ಶಂಕರ್ ಅವರು ಅಭಿಮಾನ್ ಸ್ಟುಡಿಯೋ ಮುಟ್ಟುಗೋಲಿಗೆ ಆದೇಶಿಸಿದ್ದರು. ಆಗ ಬಾಲಕೃಷ್ಣ ಅವರ ಕುಟುಂಬಸ್ಥರು ನ್ಯಾಯಾಲಯದಲ್ಲಿ ತಡೆಯಾಜ್ಞೆಯನ್ನು ತಂದಿದ್ದರು.
ಈ ನಡುವೆ, ಡಾ.ವಿಷ್ಣುವರ್ಧನ್ ಅವರ ಸ್ಮಾರಕವು ಮೈಸೂರಿಗೆ ಸ್ಥಳಾಂತರಗೊಂಡಿತು. ಆದರೆ ಅಭಿಮಾನಿಗಳು ಸ್ಮಾರಕ ಎಲ್ಲೇ ಆದರೂ ಅಂತ್ಯಸಂಸ್ಕಾರಗೊಂಡ ಜಾಗದಲ್ಲಿಯೇ ಪುಣ್ಯಭೂಮಿ ಇರಬೇಕು ಎಂದು ಹಠವಿಡಿದು, ಪ್ರತಿವರ್ಷದ ಹುಟ್ಟುಹಬ್ಬ ಮತ್ತು ಪುಣ್ಯಸ್ಮರಣೆಯನ್ನು ಅತ್ಯಂತ ಅದ್ದೂರಿಯಾಗಿ ಅಭಿಮಾನ್ ಸ್ಟುಡಿಯೋದ ಡಾ.ವಿಷ್ಣು ಪುಣ್ಯಭೂಮಿಯಲ್ಲಿ ಆಚರಿಸುತ್ತಾ ಬರುತ್ತಿದ್ದಾರೆ.
ಆದರೆ, ಈಗ ಅಭಿಮಾನ್ ಸ್ಟುಡಿಯೋದ ಮಾಲೀಕರು ಅಭಿಮಾನಿಗಳಿಗೆ ಒಳಪ್ರವೇಶಿಸಲು ನಿರ್ಬಂಧಗಳನ್ನು ವಿಧಿಸುವುದರ ಜೊತೆಗೆ, ಪ್ರತಿವರ್ಷದ ಹುಟ್ಟುಹಬ್ಬ ಮತ್ತು ಪುಣ್ಯಸ್ಮರಣೆಗೆ ಹಲವಾರು ತೊಂದರೆಗಳನ್ನು ನೀಡುತ್ತಿದ್ದಾರೆ. ಈ ಕುರಿತಾಗಿ ಮಾನ್ಯ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ ಅವರನ್ನು ಭೇಟಿಮಾಡಿ ಅಹವಾಲನ್ನು ಸಲ್ಲಿಸಲಾಗಿದೆ. ಒಬ್ಬೇ ನಟನಿಗೆ ಎರಡೆರಡು ಕಡೆ ಸ್ಮಾರಕ, ಪುಣ್ಯಭೂಮಿ ಮಾಡುವುದು ಸರ್ಕಾರಕ್ಕೆ ಕಷ್ಟವಾದರೆ, ಆ ಜಮೀನಿಗೆ ತಗಲುವ ಮತ್ತು ಪುಣ್ಯಭೂಮಿ ಅಭಿವೃದ್ಧಿಗೆ ಬೇಕಾಗುವ ಹಣವನ್ನು ಅಭಿಮಾನಿಗಳೇ ನೀಡುವುದಾಗಿ ತಿಳಿಸಿರುತ್ತೇವೆ.
ಆದರೂ ಯಾವುದೇ ಸೂಕ್ತಪ್ರತಿಕ್ರಿಯೆಗಳು ಅವರಿಂದ ಬರದೇ ಇರುವುದರಿಂದ ಇದೇ ಡಿಸೆಂಬರ್ 17 ರಂದು ಡಾ.ವಿಷ್ಣುವರ್ಧನ್ ಅಭಿಮಾನಿ ಸಂಘಗಳ ಒಕ್ಕೂಟದ ವತಿಯಿಂದ ಬೃಹತ್ ಪ್ರತಿಭಟನೆಯನ್ನು ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೆಳಿಗ್ಗೆ ಹತ್ತರಿಂದ ಸಂಜೆ ಆರು ಗಂಟೆ ತನಕ ಹಮ್ಮಿಕೊಳ್ಳಲಾಗಿದೆ. ಈ ಸಂದರ್ಭದಲ್ಲಿ ನಾಡಿನ ಎಲ್ಲಾ ಕನ್ನಡಪರ ಸಂಘಟನೆಗಳು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ಕಲಾವಿದರ ಸಂಘ ಆದಿಯಾಗಿ ಡಾ.ವಿಷ್ಣುವರ್ಧನ್ ಅವರ ಒಡನಾಡಿಗಳೆಲ್ಲರೂ ಈ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದಾರೆ. ಅಂದು ಸುಮಾರು ಐವತ್ತು ಸಾವಿರ ಜನ ಸೇರುವ ನಿರೀಕ್ಷೆ ಇದೆ.
ಒಂದು ವೇಳೆ ಈ ಪ್ರತಿಭಟನೆಗೂ ಸರ್ಕಾರ ಸ್ಪಂದಿಸದೇ ಹೋದಲ್ಲಿ, ದೆಹಲಿಯಲ್ಲಿ ನಾವು ಹೋರಾಟವನ್ನು ಮುಂದುವರಿಸಲಿದ್ದೇವೆ ಜೊತೆಗೆ ಸರ್ಕಾರದ ಮಂತ್ರಿಗಳು ಭಾಗವಹಿಸುವ ಎಲ್ಲಾ ಕಾರ್ಯಕ್ರಮಗಳಲ್ಲಿ ಕಪ್ಪುಬಾವುಟ ಪ್ರದರ್ಶನಕ್ಕೆ ಮುಂದಾಗಲಿದ್ದೇವೆ ಎಂದು ವಿಷ್ಣು ಸೇನಾ ಸಮಿತಿ ಮಾಧ್ಯಮ ಪ್ರಕಟಣೆ ನೀಡಿದೆ. ಪ್ರತಿಭಟನೆ ಸಲುವಾಗಿ ಸಮಾಲೋಚನೆ ಸಭೆಯನ್ನು ಇದೇ ಭಾನುವಾರ ವೀರಕಪುತ್ರ ಶ್ರೀನಿವಾಸ ನೇತೃತ್ವದಲ್ಲಿ ಕರೆಯಲಾಗಿತ್ತು. ಈ ಸಭೆಗೆ ಐನೂರಕ್ಕೂ ಹೆಚ್ಚು ಸೇನಾನಿಗಳು ಹಾಜರಿದ್ದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ 14ನೇ ಬಜೆಟ್ (Karnataka Budget 2023) ಮಂಡನೆ ಮಾಡಿದ್ದು, ಹಲವು ವರ್ಷಗಳ ಒಂದು ಬೇಡಿಕೆಯನ್ನು ಈಡೇರಿಸಿದ್ದಾರೆ. ಚಿತ್ರಂಗದ ಇತಿಹಾಸವನ್ನು ಸಾರುವಂತಹ ವಸ್ತು ಸಂಗ್ರಹಾಲಯ (Museum) ಬೇಕು ಎನ್ನುವುದು ಸಿನಿ ಇತಿಹಾಸಕಾರರ ಆಗ್ರಹವಾಗಿತ್ತು. ಅದನ್ನು ಈ ಬಾರಿಯ ಬಜೆಟ್ ನಲ್ಲಿ ಈಡೇರಿಸಿದ್ದಾರೆ.
ಬೆಂಗಳೂರಿನ ಕಂಠೀರವ ಸ್ಟುಡಿಯೋದ ಆವರಣದಲ್ಲಿರುವ ಡಾ.ರಾಜ್ ಕುಮಾರ್ ಸ್ಮಾರಕದ (Dr. Raj Kumar) ಬಳಿ ಕನ್ನಡ ಚಿತ್ರರಂಗ ಬೆಳೆದು ಬಂದ ಇತಿಹಾಸವನ್ನು ದಾಖಲಿಸುವ ವಸ್ತು ಸಂಗ್ರಹಾಲಯವನ್ನು ನಿರ್ಮಿಸುವುದಾಗಿ ಈ ಬಾರಿಯ ಬಜೆಟ್ ನಲ್ಲಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಈ ಮೂಲಕ ಚಿತ್ರರಂಗದ ಬೆಳವಣಿಗೆ ಇತಿಹಾಸ ಪರಿಚಯಿಸಲು ಮುಂದಾಗಿದ್ದಾರೆ. ಇದನ್ನೂ ಓದಿ:ಫ್ಯಾನ್ಸ್ ಭೇಟಿಗಾಗಿ ಮಲೇಷ್ಯಾಗೆ ಹೊರಟು ನಿಂತ ರಾಕಿಭಾಯ್ ಯಶ್
ಡಾ.ರಾಜ್ ಕುಮಾರ್ ಸ್ಮಾರಕದ ಬಳಿ ವಸ್ತು ಸಂಗ್ರಹಾಲಯದ ಜೊತೆಗೆ ಸುಸಜ್ಜಿತದ ಥಿಯೇಟರ್ ನಿರ್ಮಾಣವಾಗಬೇಕು ಎನ್ನುವುದು ಹಲವರ ಕೋರಿಕೆಯಾಗಿತ್ತು. ಜೊತೆಗೆ ಡಾ.ರಾಜ್ ಕುಮಾರ್ ಅವರ ಕುರಿತಾಗಿಯೇ ವಸ್ತು ಸಂಗ್ರಹಾಲಯ ಇರಬೇಕು ಎಂದು ಮನವಿ ಸಲ್ಲಿಸಲಾಗಿತ್ತು. ಆದರೆ, ಸಮಗ್ರ ಚಿತ್ರರಂಗವನ್ನು ಒಳಗೊಳ್ಳುವಂತಹ ಸಂಗ್ರಹಾಲಯಕ್ಕೆ ಸಿದ್ದರಾಮಯ್ಯ ಸರಕಾರ ಅಸ್ತು ಎಂದಿದೆ.
ಆ ದಿನಗಳು ಖ್ಯಾತಿಯ ನಟ, ಸಾಮಾಜಿಕ ಹೋರಾಟಗಾರ ನಟ ಚೇತನ್ (Chetan) ವಿರುದ್ಧ ಚಿತ್ರರಂಗ ಸಿಡಿದೆದ್ದಿದೆ. ಚಿತ್ರರಂಗದ ವಿರುದ್ಧ ಮಾತನಾಡುತ್ತಾ ಬಂದಿರುವ ಚೇತನ್ ವಿರುದ್ಧ ಕಾನೂನು ಕ್ರಮಕ್ಕಾಗಿ ಆಗ್ರಹಿಸಿದೆ. ಈಗಾಗಲೇ ಹಲವಾರು ಬಾರಿ ಚಿತ್ರೋದ್ಯಮದ ಬಗ್ಗೆ ಕೀಳುಮಟ್ಟದಲ್ಲಿ ಮಾತನಾಡಿರುವ ಚೇತನ್, ಆಗಾಗ್ಗೆ ಅದನ್ನು ಮುಂದುವರೆಸುತ್ತಲೇ ಬಂದಿದ್ದಾರೆ. ಇತ್ತೀಚೆಗಷ್ಟೇ ಅಂಬರೀಶ್ (Ambarish) ಸ್ಮಾರಕ ವಿಚಾರವಾಗಿ ವ್ಯಂಗ್ಯವಾಗಿ ಚೇತನ್ ಟ್ವೀಟ್ ಮಾಡಿದ್ದರು. ಈ ಹಿಂದೆಯೂ ಪುನೀತ್ ರಾಜ್ ಕುಮಾರ್ ಸ್ಮಾರಕ ವಿಚಾರವಾಗಿಯೂ ಅವರು ಮಾತನಾಡಿದ್ದರು.
ಕಲಾವಿದರ ಸಂಘ ಸೇರಿದಂತೆ ಹಲವು ಅಂಗ ಸಂಸ್ಥೆಗಳು ಚೇತನ್ ವಿರುದ್ದ ಕ್ರಮಕ್ಕೆ ಮನವಿ ಮಾಡಿದ್ದರ ಹಿನ್ನೆಲೆಯಲ್ಲಿ ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ (Film Chamber) ಮಂಡಳಿಯಲ್ಲಿ ಸುದ್ದಿಗೋಷ್ಠಿ ಆಯೋಜನೆಯಾಗಿತ್ತು. ಸುದ್ದಿಗೋಷ್ಠಿಯಲ್ಲಿ ಭಾಗಿಯಾದ ಚೇಂಬರ್ ಅಧ್ಯಕ್ಷ ಭಾಮ ಹರೀಶ್ (Bha.Ma.Harish), ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ (Umesh Bankar) ಹಾಗೂ ಪದಾಧಿಕಾರಿಗಳು ಚೇತನ್ ವಿರುದ್ಧದ ಕ್ರಮಕ್ಕೆ ಆಗ್ರಹಿಸಿದರು. ಇದನ್ನೂ ಓದಿ: ಹಿಂದಿ ಚಿತ್ರರಂಗದಲ್ಲಿ ಸೌತ್‌ನಷ್ಟು ಶಿಸ್ತಿಲ್ಲ: ಕಾಜಲ್ ಅಗರ್‌ವಾಲ್
ಫಿಲ್ಮ್ ಚೇಂಬರ್ ಅಧ್ಯಕ್ಷ ಭಾ. ಮಾ. ಹರೀಶ್ ಮಾತನಾಡಿ, ‘ರೇಸ್ ಕೋರ್ಸ್ ರಸ್ತೆಗೆ ಅಂಬರೀಶ್ ಹೆಸರಿಟ್ಟು ಇತ್ತಿಚೆಗೆ ಉದ್ಘಾಟನೆ ಆಗಿದೆ. ಇದರ ವಿರುದ್ಧ ನಟ ಚೇತನ್ ಮಾತನಾಡಿದ್ದಾರೆ. ಉದ್ಘಾಟನೆ ಇಡೀ ಇಂಡಸ್ಟ್ರಿಯ ಒತ್ತಾಯ ಆಗಿತ್ತು. ಎಲ್ಲರೂ ಅದನ್ನು ಸುಲಲಿತವಾಗಿ ನಡೆಸಿಕೊಟ್ಟರು. ನಮ್ಮ ಕುಟುಂಬದಲ್ಲಿಯೇ ಆಗಾಗ ಗೊಂದಲ ಆಗುತ್ತೆ. ಚೇತನ್ ಮುಜುಗರವಾಗುವಂತ ಹೇಳಿಕೆ ನೀಡುತ್ತಾ ಇರುತ್ತಾರೆ. ಅಂಬರೀಶ್ ಅವರ ವಿಚಾರದಲ್ಲಿ ಸ್ಮಾರಕ ನಿರ್ಮಾಣ ಕುಟುಂಬದ ಒತ್ತಾಯ ಅಂತ ಚೇತನ್ ಆರೋಪ ಮಾಡ್ತಾರೆ. ಆದರೆ ಅದು ಕುಟುಂಬದ ಒತ್ತಾಯ ಅಲ್ಲ ಇಂಡಸ್ಟ್ರಿಯದ್ದು ಆಗಿತ್ತು ಎಂದು ಚೇತನ್ ಗೆ ಈ ಮೂಲಕ ಹೇಳಲು ಬಯಸುತ್ತೇನೆ. ಇದು ಸುಮಲತಾ ಒತ್ತಾಯ ಅಲ್ಲ’ ಎಂದರು.
ಉಮೇಶ್ ಬಣಕಾರ ಮಾತನಾಡಿ, ‘ನಮ್ಮ ಚಿತ್ರರಂಗದ ವಿಚಾರಕ್ಕೆ ಅಂಬರೀಶ್ ತುಂಬಾ ಸ್ಪಂದಿಸಿದ್ದಾರೆ. ನಮ್ಮ ಕುಟುಂಬದಲ್ಲಿಯೇ ಇದ್ದುಕೊಂಡು ಆರೋಪ ಮಾಡಿದರೆ ನೋವಾಗುತ್ತೆ. ಅಣ್ಣಾವ್ರದ್ದೇ ಆಗಲಿ, ಅಂಬರೀಶ್, ಅಪ್ಪು ಅವರದ್ದಾಗಲಿ ಕುಟುಂಬದವರ ಒತ್ತಾಯವಲ್ಲ. ಚೇತನ್ ಅವರು ಜನರನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ. ಯಾರು ಕೇಳದೆ ಇದ್ದರು ಹೇಳಿಕೆ ಕೊಡುತ್ತಿದ್ದಾರೆ. ನಿನ್ನೆಯೆಲ್ಲಾ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳ ಜೊತೆ, ಕಲಾವಿದರ ಸಂಘದಲ್ಲೂ ಚರ್ಚೆ ಮಾಡಿದ್ದೇವೆ. ಆತನೂ ನಮ್ಮ ಚಿತ್ರರಂಗದ ವ್ಯಕ್ತಿಯೇ. ಹೀಗಾಗಿ ತಿಳಿ ಹೇಳಿ ಎಂಬ ಮಾತುಗಳು ಕೇಳಿ ಬಂದಿದೆ. ಬುದ್ದಿ ಹೇಳಿದಾಗಲೂ ಸರಿ ಹೋಗಲಿಲ್ಲ ಎಂದರೆ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇವೆ. ಇಡೀ ಇಂಡಸ್ಟ್ರಿ ಆತನ ವಿರುದ್ಧ ಅಸಹಕಾರದ ತೀರ್ಮಾನ ತೆಗೆದುಕೊಳ್ಳಬೇಕು ಎಂದು ತೀರ್ಮಾನ ಮಾಡಬೇಕು ಎಂದುಕೊಂಡಿದ್ದೇವೆ’ ಎಂದರು.
ಈ ಕುರಿತಾಗಿ ಚೇತನ್ ಅವರನ್ನು ಸಂಪರ್ಕಿಸಿ ಎಲ್ಲರೂ ಕೂತು ಅವರ ಜೊತೆ ಮಾತನಾಡುತ್ತೇವೆ. ಮಾತು ಕೇಳದೆ ಹೋದಲ್ಲಿ ಮುಂದೆ ಏನು ಮಾಡಬೇಕು ಎಂಬುದನ್ನು ಮತ್ತೆ ಕೂತು ತೀರ್ಮಾನ ಮಾಡುತ್ತೇವೆ. ಈ ಹಿಂದೆ ಅರ್ಜುನ್ ಸರ್ಜಾ ವಿರುದ್ಧ ಶೃತಿ ಹರಿಹರನ್ ಆರೋಪ ಮಾಡಿದ್ರು. ಅದು ಕೋರ್ಟ್ ನಲ್ಲಿ ಸುಳ್ಳು ಆಗಿದೆ. ಅರ್ಜುನ್ ಸರ್ಜಾ ಪರ ಜಯ ಸಿಕ್ಕಿದೆ. ಅದರ ಹಿಂದೆ ಯಾರೆಲ್ಲ ಇದ್ದರೂ ಎನ್ನುವುದನ್ನು ಬಿಡಿಸಿ ಹೇಳಬೇಕಿಲ್ಲ ಎನ್ನುವ ಮಾತುಗಳೂ ಸುದ್ದಿಗೋಷ್ಠಿಯಲ್ಲಿ ಕೇಳಿ ಬಂದವು.
ಕನ್ನಡ ಸಿನಿಮಾ ರಂಗದ ಖ್ಯಾತ ನಟ, ರೆಬಲ್ ಸ್ಟಾರ್ ಅಂತಾನೇ ಫೇಮಸ್ ಆಗಿರುವ ಅಂಬರೀಶ್ (Ambarish) ಅವರ ಸ್ಮಾರಕವನ್ನು (memorial) ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಅವರು ಸಂಜೆ 6 ಗಂಟೆಗೆ ಲೋಕಾರ್ಪಣೆ ಮಾಡಲಿದ್ದಾರೆ. ಹಲವು ವರ್ಷಗಳ ಅಂಬರೀಶ್ ಅಭಿಮಾನಿಗಳ ಕನಸು ಇಂದು ನನಸಾಗುತ್ತಿದೆ.
ಕೇವಲ ಸ್ಮಾರಕ ಮಾತ್ರವಲ್ಲ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಗೆ (Race Course Road) ಅಂಬರೀಶ್ ಅವರ ಹೆಸರನ್ನು ಇಡುವುದಾಗಿ ಈ ಹಿಂದೆ ಸಿಎಂ ಘೋಷಿಸಿದ್ದರು. ಅದರಂತೆ ಇಂದು ಸಂಜೆ 5 ಗಂಟೆಗೆ ಶಿವಾಜಿನಗರ ಕ್ಷೇತ್ರಕ್ಕೆ ಒಳಪಡುವ ರೇಸ್ ಕೋರ್ಸ್ ರಸ್ತೆಗೆ ಅಂಬರೀಶ್ ಅವರ ಹೆಸರನ್ನು ನಾಮಕರಣ ಮಾಡಲಾಗುತ್ತಿದೆ. ಈ ಸಮಾರಂಭವನ್ನು ಸಿಎಂ ಬಸವರಾಜ ಬೊಮ್ಮಾಯಿ ಅವರೇ ಉದ್ಘಾಟಿಸಲಿದ್ದಾರೆ. ಇದನ್ನೂ ಓದಿ: ಪಿಂಕ್ ಕಲರ್ ಡ್ರೆಸ್‌ನಲ್ಲಿ ದೀಪಿಕಾ ದಾಸ್ ಮಿಂಚಿಂಗ್
ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಸ್ಮಾರಕ ತಲೆಯೆತ್ತಿದೆ. ವಿಶೇಷ ವಿನ್ಯಾಸದಲ್ಲಿ ಸ್ಮಾರಕವನ್ನು ನಿರ್ಮಾಣ ಮಾಡಲಾಗದೆ. ಅಸಂಖ್ಯಾತ ಅಭಿಮಾನಿಗಳ ಸಮ್ಮುಖದಲ್ಲಿ ನಡೆಯಲಿರುವ ಲೋಕಾರ್ಪಣೆ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್. ಅಶೋಕ್, ತೋಟಗಾರಿಕಾ ಸಚಿವ ಮುನಿರತ್ನ, ಅಂಬರೀಶ್ ಪತ್ನಿ ಸುಮಲತಾ ಅಂಬರೀಶ್ (Sumalatha Ambarish), ಪುತ್ರ ಅಭಿಷೇಕ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಸೇರಿದಂತೆ ಹಲವರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಡಾ.ರಾಜ್ ಕುಮಾರ್ ಸ್ಮಾರಕದ ಕೂಗಳತೆಯಲ್ಲಿಯೇ ಅಂಬರೀಶ್ ಸ್ಮಾರಕವಿದೆ. ಒಂದು ಕಡೆ ಡಾ.ರಾಜ್ ಕುಮಾರ್, ಪಾರ್ವತಮ್ಮ ರಾಜ್ ಕುಮಾರ್ ಹಾಗೂ ಪುನೀತ್ ರಾಜ್ ಕುಮಾರ್ ಸಮಾಧಿ ಇದ್ದು, ಪಕ್ಕದಲ್ಲೇ ಅಂಬರೀಶ್ ಸ್ಮಾರಕ ತಲೆಯೆತ್ತಿದೆ. ಅಲ್ಲದೇ ಕೆಲವೇ ತಿಂಗಳಲ್ಲಿ ಪುನೀತ್ ರಾಜ್ ಕುಮಾರ್ ಸ್ಮಾರಕಕ್ಕೂ ಸರಕಾರ ಮುಂದಾಗಲಿದೆಯಂತೆ. ಅಲ್ಲಿಗೇ ಪಕ್ಕಪಕ್ಕದಲ್ಲೇ ಮೂರು ಸ್ಮಾರಕಗಳು ತಲೆಯೆತ್ತಲಿವೆ.
ರೆಬಲ್ ಸ್ಟಾರ್ ಅಂಬರೀಶ್ (Ambarish) ಅವರ ಸ್ಮಾರಕವನ್ನು (memorial) ಮಾರ್ಚ್ 27 ರಂದು ಲೋಕಾರ್ಪಣೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಹೇಳಿದ್ದಾರೆ. ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದ ಉದ್ಘಾಟನೆಯ ಸಮಾರಂಭದಲ್ಲಿ ಮಾತನಾಡಿದ ಅವರು, ‘ನನ್ನ ನೆಚ್ಚಿನ ಗೆಳೆಯ ಅಂಬರೀಶ್ ಅವರ ಸ್ಮಾರಕವನ್ನು ಇದೇ ಮಾರ್ಚ್ 27ಕ್ಕೆ ಉದ್ಘಾಟನೆ ಮಾಡಲಿದ್ದೇನೆ’ ಎಂದು ಘೋಷಿಸಿದರು.
ಕೇವಲ ಸ್ಮಾರಕ ಮಾತ್ರವಲ್ಲ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಗೆ ಅಂಬರೀಶ್ ಅವರ ಹೆಸರನ್ನು ಅಂದೇ ಇಡುವುದಾಗಿಯೂ ತಿಳಿಸಿದರು. ‘ಅಂಬರೀಶ್ ಗೆ ರೇಸ್ ಕೋರ್ಸ್ ರಸ್ತೆ ಅಂದರೆ ತುಂಬಾ ಇಷ್ಟ. ಸದಾ ಪ್ರತಿಷ್ಠಿತ ಹೋಟೆಲ್ ನಲ್ಲಿ ವಾಸ್ತವ್ಯ ಹೂಡುತ್ತಿದ್ದ. ಗೆಳೆಯರ ಹೆಸರು ಗೊತ್ತಿರುತ್ತಿತ್ತೋ ಇಲ್ಲವೋ, ಕುದುರೆ ಹೆಸರು ಮಾತ್ರ ಗೊತ್ತಿರುತ್ತಿತ್ತು’ ಎಂದು ಸಿಎಂ ತಮಾಷೆಯಾಗಿ ಅಂಬರೀಶ್ ಅವರನ್ನು ನೆನಪಿಸಿಕೊಂಡರು. ಇದನ್ನೂ ಓದಿ: ಮಗಳ ನಟನೆ ಬಗ್ಗೆ ತಂದೆ-ತಾಯಿಗೆ ಖುಷಿ ಇದ್ಯಾ? ಅಸಲಿ ವಿಚಾರ ಬಿಚ್ಚಿಟ್ಟ ರಶ್ಮಿಕಾ ಮಂದಣ್ಣ
ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಸ್ಮಾರಕ ತಲೆಯೆತ್ತಿದೆ. ವಿಶೇಷ ವಿನ್ಯಾಸದಲ್ಲಿ ಸ್ಮಾರಕವನ್ನು ನಿರ್ಮಾಣ ಮಾಡಲಾಗಿದೆ. ಈಗಾಗಲೇ ಸ್ಮಾರಕದ ಬಹುತೇಕ ಕೆಲಸಗಳು ಕೂಡ ಮುಗಿದಿವೆ. ಉದ್ಘಾಟನೆಗೆ ಈಗ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್. ಅಶೋಕ್, ತೋಟಗಾರಿಕಾ ಸಚಿವ ಮುನಿರತ್ನ ಸೇರಿದಂತೆ ಹಲವರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಡಾ.ರಾಜ್ ಕುಮಾರ್ ಸ್ಮಾರಕದ ಕೂಗಳತೆಯಲ್ಲಿಯೇ ಅಂಬರೀಶ್ ಸ್ಮಾರಕವಿದೆ. ಅಲ್ಲದೇ ಕೆಲವೇ ತಿಂಗಳಲ್ಲಿ ಪುನೀತ್ ರಾಜ್ ಕುಮಾರ್ ಸ್ಮಾರಕಕ್ಕೂ ಸರಕಾರ ಮುಂದಾಗಲಿದೆಯಂತೆ. ಅಲ್ಲಿಗೇ ಪಕ್ಕಪಕ್ಕದಲ್ಲೇ ಮೂರು ಸ್ಮಾರಕಗಳು ತಲೆಯೆತ್ತಲಿವೆ.
ಪಾಟ್ನಾ: 2020 ರಲ್ಲಿ ಗಾಲ್ವಾನ್ ಕಣಿವೆಯಲ್ಲಿ (Galwan Valley) ಚೀನಾದ ಸೈನಿಕರ ವಿರುದ್ಧ ಹೋರಾಡಿ ಹುತಾತ್ಮನಾಗಿದ್ದ ಸೇನಾಧಿಕಾರಿ (Soldier) ಜೈ ಕಿಶೋರ್ ಸಿಂಗ್ (Jai Kishore Singh) ಅವರ ತಂದೆ ತನ್ನ ಮಗನ ನೆನಪಿಗಾಗಿ ಕಾನೂನು ಬಾಹಿರವಾಗಿ ಸ್ಮಾರಕವನ್ನು (Memorial) ನಿರ್ಮಿಸಿದಕ್ಕೆ ಪೊಲೀಸರು ಅವರನ್ನು ಬಂಧಿಸಿದ್ದಾರೆ.
ಬಿಹಾರದ (Bihar) ವೈಶಾಲಿ ಜಿಲ್ಲೆಯ ಹಳ್ಳಿಯೊಂದರಲ್ಲಿ ಘಟನೆ ನಡೆದಿದ್ದು, ಪೊಲೀಸರು ಅಕ್ರಮವಾಗಿ ಸ್ಮಾರಕವನ್ನು ನಿರ್ಮಿಸಿದ್ದಕ್ಕೆ ವ್ಯಕ್ತಿಯೊಬ್ಬರನ್ನು ಬಂಧಿಸಿದ್ದಾರೆ. ಶನಿವಾರ ಮಧ್ಯರಾತ್ರಿ ಹುತಾತ್ಮ ಯೋಧನ ತಂದೆಯನ್ನು ಪೊಲೀಸರು ಠಾಣೆಗೆ ಎಳೆದುಕೊಂಡು ಹೋಗಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ವೀಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲೂ ಹರಿದಾಡಿದೆ.
ವರದಿಗಳ ಪ್ರಕಾರ ಜೈ ಕಿಶೋರ್ ಸಿಂಗ್ ಅವರ ತಂದೆ ರಾಜ್ ಕಪೂರ್ ಸಿಂಗ್ ಕಳೆದ ವರ್ಷ ಫೆಬ್ರವರಿ 24 ರಂದು ತಮ್ಮ ಮಗನ ನೆನಪಿಗಾಗಿ ಸ್ಮಾರಕವನ್ನು ನಿರ್ಮಿಸಿದ್ದರು. ಸ್ಮಾರಕದ ಉದ್ಘಾಟನೆ ಸಂದರ್ಭ ಹಲವಾರು ಸ್ಥಳೀಯರು ಹಾಗೂ ಸರ್ಕಾರಿ ಅಧಿಕಾರಿಗಳು ಕೂಡಾ ಸಮಾರಂಭದಲ್ಲಿ ಭಾಗಿಯಾಗಿದ್ದರು. ಆದರೆ ಕಳೆದ 2 ತಿಂಗಳಿನಿಂದ ಹುತಾತ್ಮ ಯೋಧನ ಕುಟುಂಬಕ್ಕೆ ತೊಂದರೆ ಪ್ರಾರಂಭವಾಗಿದೆ.
ರಾಜ್ ಕಪೂರ್ ಸಿಂಗ್ ಅವರ ನೆರೆಹೊರೆಯವರಾದ ಹರಿನಾಥ್ ರಾಮ್ ಅಕ್ರಮವಾಗಿ ಸ್ಮಾರಕವನ್ನು ನಿರ್ಮಿಸಿರುವುದಾಗಿ ಪೊಲೀಸರಿಗೆ ದೂರು ನೀಡಿದ್ದಾರೆ. ರಾಜ್ ಕಪೂರ್ ಸ್ಮಾರಕದ ಸುತ್ತಲೂ ಗೋಡೆಯನ್ನು ನಿರ್ಮಿಸಿದ್ದು, ಇದು ತಮ್ಮ ಮನೆಯ ದಾರಿಗೆ ಅಡ್ಡಲಾಗಿ ಕಟ್ಟಲಾಗಿದೆ, ಮನೆಗೆ ತೆರಳಲು ಇದು ನಿರ್ಬಧಿಸುತ್ತದೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ರೂಪಾ ವಿರುದ್ಧ ಕ್ರಿಮಿನಲ್ ಮಾನನಷ್ಟ ಕೇಸ್ – ಕೋರ್ಟ್‌ನಲ್ಲಿ ಇಂದು ಏನಾಯ್ತು?
ರಾಜ್ ಕಪೂರ್ ಸಿಂಗ್ ವಿರುದ್ಧ ಭಾರತೀಯ ದಂಡ ಸಂಹಿತೆ (IPC) ಸೆಕ್ಷನ್ 188, 323, 504, 506 ಮತ್ತು ಎಸ್‌ಸಿ/ಎಸ್‌ಟಿ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು ಅವರನ್ನು ಬಂಧಿಸಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಜೈ ಕಿಶೋರ್ ಸಿಂಗ್ ಸಹೋದರ ನಂದ್ ಕಿಶೋರ್, 15 ದಿನಗಳಲ್ಲಿ ಸ್ಮಾರಕವನ್ನು ತೆಗೆದು ಹಾಕಲು ಪೊಲೀಸರು ನಮಗೆ ಗಡುವು ನೀಡಿದ್ದರು. ಆದರೆ ಅದಕ್ಕೂ ಮುನ್ನವೇ ನಮ್ಮ ತಂದೆಯವರನ್ನು ರಾತ್ರೋರಾತ್ರಿ ಬಂಧಿಸಿ, ಹೊಡೆದು, ಬಲವಂತವಾಗಿ ಎಳೆದುಕೊಂಡು ಹೋಗಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ತಾಲಿಬಾನ್‌ನಿಂದ ISIS ಉಗ್ರನ ಹತ್ಯೆ
ದೂರುದಾರರು ಸ್ಮಾರಕ ನಿರ್ಮಾಣದ ಕಾರಣದಿಂದ ತಮ್ಮ ಮನೆಗೆ ತೆರಳಲು ಅಡ್ಡಿಯಾಗುತ್ತಿದೆ ಎಂದು ತಿಳಿಸಿದ್ದಾರೆ. ಈ ದೂರಿನ ಆಧಾರದ ಮೇಲೆ ರಾಜ್ ಕಪೂರ್ ಸಿಂಗ್‌ನನ್ನು ಬಂಧಿಸಲಾಗಿದೆ ಎಂದು ಡಿಎಸ್‌ಪಿ ಮಹುವಾ ಪೂನಂ ಕೇಸರಿ ಹೇಳಿದ್ದಾರೆ.
ಬೆಂಗಳೂರಿನ ಅಭಿಮಾನ ಸ್ಟುಡಿಯೋ ಅವರಣದಲ್ಲಿ ಹೆಸರಾಂತ ನಟ ಡಾ.ವಿಷ್ಣುವರ್ಧನ್ ಸಮಾಧಿ ಸಂರಕ್ಷಣೆ ಮತ್ತು ಸ್ಮಾರಕ ಮಾಡಲು ನಾಡಪ್ರೇಮಿ ಡಾ.ವಿಷ್ಣು ಅಕಾಡೆಮಿ ಮನವಿ ಮಾಡಿತು. ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಮುಂಭಾಗದಲ್ಲಿ ಅಕಾಡೆಮಿ ವತಿಯಿಂದ ಬೆಂಗಳೂರಿನ ಅಭಿಮಾನ ಸ್ಟುಡಿಯೋ ಆವರಣದಲ್ಲಿರುವ ವಿಷ್ಣುವರ್ಧನ್ ಅವರ ಸ್ಮಾರಕದ ಸಂರಕ್ಷಣೆಗೆ ಆಗ್ರಹಿಸಿ ಪ್ರತಿಭಟನಾ ಧರಣಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ನಾಡಪ್ರೇಮಿ ಡಾ.ವಿಷ್ಣು ಅಕಾಡೆಮಿ ಗೌರವಾಧ್ಯಕ್ಷರಾದ ಕ್ರಾಂತಿ ರಾಜು, ಕನ್ನಡ ಪರ ಹೋರಾಟಗಾರ ಪಾಲನೇತ್ರ, ಅಕಾಡೆಮಿಯ ಸದಸ್ಯರು, ನಟ ವಿಷ್ಣುವರ್ಧನ್ ಅವರ ಅಭಿಮಾನಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಕ್ರಾಂತಿ ರಾಜು, ‘ಅಭಿಮಾನಿಗಳಿಂದ ಸಾಹಸಸಿಂಹ, ವಿಷ್ಣುದಾದ ಎಂಬ ಹಲವಾರು ಬಿರುದು ಪಡೆದ ಡಾ.ವಿಷ್ಣುವರ್ಧನ್ ಅವರು ಅಪ್ರತಿಮ ಕಲಾವಿದರು. 35ವರ್ಷಗಳ ಕಲಾಸೇವೆ ಮತ್ತು ನೂರಾರು ಕನ್ನಡ ಚಲನಚಿತ್ರದಲ್ಲಿ ಅಭಿನಯಿಸಿ ಕನ್ನಡಿಗರ ಮನಗೆದ್ದಿದ್ದಾರೆ. ನಮ್ಮ ರಾಜ್ಯದಲ್ಲಿ ಕಲೆ, ಕಲಾವಿದರನ್ನು ದೇವರಂತೆ ಆರಾಧಿಸುವ ಕನ್ನಡಿಗರ ಇದ್ದಾರೆ. ವಿಷ್ಣುವರ್ಧನ್ ಆಗಲಿಕೆಯಿಂದ ಕನ್ನಡ ಚಿತ್ರರಂಗ ಮತ್ತು ಅಭಿಮಾನಿಗಳಿಗೆ ಅಪಾರ ನೋವು, ನಷ್ಟವಾಗಿದೆ’ ಎಂದರು.
ಮುಂದುವರೆದು ಮಾತನಾಡಿ ರಾಜು, ‘ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಅಂತ್ಯಕ್ರಿಯೆ ನಡೆದ ಬೆಂಗಳೂರಿನ ಕೆಂಗೇರಿಯಲ್ಲಿರುವ ಅಭಿಮಾನ ಸ್ಟುಡಿಯೋ ಆವರಣದಲ್ಲಿರುವ ವಿಷ್ಣುವರ್ಧನ್ ಅವರ ಸಮಾಧಿಯನ್ನು ಸಂರಕ್ಷಿಸಿ, ಅದನ್ನು ಸ್ಮಾರಕ ಎಂದು ಘೋಷಿಸಬೇಕೆಂದು ಕರ್ನಾಟಕ ರಾಜ್ಯ ಸರ್ಕಾರ ಮತ್ತು ಚಲನಚಿತ್ರ ವಾಣಿಜ್ಯ ಮಂಡಳಿ ಮನವಿ ಸಲ್ಲಿಸಲಾಗುವುದು. ವಿಷ್ಣುವರ್ಧನ್ ಅವರ ಕೊಟ್ಯಂತರ ಅಭಿಮಾನಿಗಳ ಆಸೆ ಅವರ ಅಂತ್ಯಕ್ರಿಯೆ ನಡೆದ ಸ್ಥಳ ನೋಡಬೇಕು, ಗೌರವ ಸಲ್ಲಿಸಬೇಕು ಎಂಬುದಾಗಿದೆ’ ಎಂದರು. ಇದನ್ನೂ ಓದಿ: ನಟ ಉಪೇಂದ್ರ ಪಕ್ಷಕ್ಕೆ ಅಧಿಕೃತ ಚಿಹ್ನೆ ನೀಡಿದ ಚುನಾವಣಾ ಆಯೋಗ
ಕನ್ನಡ ಪರ ಹೋರಾಟಗಾರ ಪಾಲನೇತ್ರ ಮಾತನಾಡಿ ‘ಕನ್ನಡ ನಾಡಿಗೆ ಅಮೂಲ್ಯರತ್ನ ಸಾಹಸಿಸಿಂಹ ವಿಷ್ಣುವರ್ಧನ್ ಅವರ ಸಮಾಧಿ ಸ್ಥಳದಲ್ಲಿ ಸಾವಿರಾರು ಅಭಿಮಾನಿಗಳು ಪ್ರತಿನಿತ್ಯ ಆಗಮಿಸಿ, ಗೌರವ ಸಲ್ಲಿಸುತ್ತಿದ್ದಾರೆ. ಪ್ರತಿದಿನ ಒಂದಲ್ಲ, ಒಂದು ಸಮಾಜಮುಖಿ ಚಟುವಟಿಕೆಗಳು ನಡೆಯುತ್ತಿದೆ, ಅಭಿಮಾನಿಗಳ ಪಾಲಿಗೆ ಪವಿತ್ರ ಕ್ಷೇತ್ರವಾಗಿದೆ. ಕೂಡಲೆ ರಾಜ್ಯ ಸರ್ಕಾರ ಅಭಿಮಾನ ಸ್ಟುಡಿಯೊ ಸಂಸ್ಥೆಯವರ ಜೊತೆಯಲ್ಲಿ ಚರ್ಚಿಸಿ, ಸಮಾಧಿ ಸ್ಥಳ ಉಳಿಸಿ, ಸ್ಮಾರಕ ಮಾಡಬೇಕು ಎಂದು ಮನವಿ ಮಾಡಿದರು’ ಎಂದರು.
ವಾಣಿಜ್ಯ ಮಂಡಳಿ ಮುಂದೆ ನಡೆದ ಹೋರಾಟದಲ್ಲಿ ಸಾವಿರಾರು ವಿಷ್ಣು ಅಭಿಮಾನಿಗಳು ಜೊತೆಯಾಗಿದ್ದರು. ಈ ಸಂದರ್ಭದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್ ಅವರಿಗೆ ಮನವಿ ಪತ್ರವನ್ನು ನೀಡಲಾಯಿತು. ಸರಕಾರದ ಜೊತೆ ಮಾತನಾಡಿ, ವಿಷ್ಣು ಅಭಿಮಾನಿಗಳ ಜೊತೆ ನಿಂತುಕೊಳ್ಳುವಂತೆ ಮನವಿ ಆಗ್ರಹಿಸಲಾಯಿತು.