Tag: Mens Hockey

  • Paris Olympics: ಹಾಕಿಯಲ್ಲಿ ಗ್ರೇಟ್‌ ಬ್ರಿಟನ್‌ ಮಣಿಸಿ ಸೆಮಿಫೈನಲ್‌ಗೆ ಭಾರತ ಲಗ್ಗೆ

    Paris Olympics: ಹಾಕಿಯಲ್ಲಿ ಗ್ರೇಟ್‌ ಬ್ರಿಟನ್‌ ಮಣಿಸಿ ಸೆಮಿಫೈನಲ್‌ಗೆ ಭಾರತ ಲಗ್ಗೆ

    – ಪದಕಕ್ಕೆ ಇನ್ನೊಂದು ಹೆಜ್ಜೆಯಷ್ಟೇ ಬಾಕಿ

    ಪ್ಯಾರಿಸ್‌: 2024ರ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ (Paris Olympics) ಪುರುಷರ ಹಾಕಿಯಲ್ಲಿ (Hockey) ಗ್ರೇಟ್‌ ಬ್ರಿಟನ್‌ ಮಣಿಸಿ ಭಾರತ ತಂಡವು ಸೆಮಿಫೈನಲ್‌ಗೆ ಲಗ್ಗೆಯಿಟ್ಟಿದೆ.

    ಸ್ಟೇಡ್ ಯ್ವೆಸ್-ಡು-ಮನೋಯಿರ್‌ನಲ್ಲಿ ಶೂಟ್-ಔಟ್ ಮೂಲಕ ಗ್ರೇಟ್ ಬ್ರಿಟನ್ ಅನ್ನು ಭಾರತ ಸೋಲುಣಿಸಿದೆ. ಒಲಿಂಪಿಕ್ಸ್‌ನಲ್ಲಿ ಸತತ ಎರಡನೇ ಪದಕಕ್ಕೆ ಭಾರತ ಒಂದು ಗೆಲುವಿನ ಅಂತರದಲ್ಲಿದೆ. ಸೆಮಿಫೈನಲ್‌ನಲ್ಲಿ ಜರ್ಮನಿ ಅಥವಾ ಅರ್ಜೆಂಟೀನಾವನ್ನು ಭಾರತ ತಂಡ ಎದುರಿಸಲಿದೆ. ಇದನ್ನೂ ಓದಿ: ಬೆಂಗಳೂರಿಗೆ ಮತ್ತೊಂದು ಹೆಮ್ಮೆ – ಶೀಘ್ರದಲ್ಲೇ ಉದ್ಘಾಟನೆಯಾಗಲಿದೆ ಹೊಸ ರಾಷ್ಟ್ರೀಯ ಕ್ರಿಕೆಟ್‌ ಅಕಾಡೆಮಿ

    ಪಂದ್ಯದ 17 ನೇ ನಿಮಿಷದಲ್ಲಿ ಹರ್ಮನ್‌ಪ್ರೀತ್ ಸಿಂಗ್ ತನ್ನ ಏಳನೇ ಗೋಲು ಗಳಿಸಿದರು. ಆ ಮೂಲಕ ಭಾರತ ಮುನ್ನಡೆ ಸಾಧಿಸಿತು. ಹರ್ಮನ್‌ಪ್ರೀತ್ 22ನೇ ನಿಮಿಷದಲ್ಲಿ ಪೆನಾಲ್ಟಿ ಕಾರ್ನರ್ ಅನ್ನು ಗೋಲಾಗಿ ಪರಿವರ್ತಿಸಿದರು. ಇದಾದ ಐದು ನಿಮಿಷದಲ್ಲೇ ಲೀ ಮಾರ್ಟನ್ ಗ್ರೇಟ್ ಬ್ರಿಟನ್‌ಗೆ ಸಮಬಲ ಸಾಧಿಸಿದರು.

    ಪೂರ್ಣಾವಧಿಯ ನಂತರ ಪಂದ್ಯ 1-1 ರಲ್ಲಿ ಕೊನೆಗೊಂಡರೆ, ಭಾರತವು ಶೂಟ್-ಔಟ್ ಅನ್ನು 4-2 ರಿಂದ ಗೆದ್ದು ಸೆಮಿಫೈನಲ್‌ಗೆ ಪ್ರವೇಶಿಸಿತು. ಇದನ್ನೂ ಓದಿ: ಒಲಿಂಪಿಕ್ಸ್‌ ಪದಕ ಗೆದ್ದ ಬೆನ್ನಲ್ಲೇ ಮನು ಭಾಕರ್‌ಗೆ ಭರ್ಜರಿ ಆಫರ್‌ – ಬ್ರ್ಯಾಂಡ್‌ ಮೌಲ್ಯ 6 ಪಟ್ಟು ಹೆಚ್ಚಳ

  • Paris Olympics 2024: ಹಾಕಿಯಲ್ಲಿ 52 ವರ್ಷಗಳ ಬಳಿಕ ಆಸ್ಟ್ರೇಲಿಯಾ ಮಣಿಸಿದ ಭಾರತ

    Paris Olympics 2024: ಹಾಕಿಯಲ್ಲಿ 52 ವರ್ಷಗಳ ಬಳಿಕ ಆಸ್ಟ್ರೇಲಿಯಾ ಮಣಿಸಿದ ಭಾರತ

    ಪ್ಯಾರಿಸ್‌: ಶುಕ್ರವಾರ ನಡೆದ ಪ್ಯಾರಿಸ್‌ ಒಲಿಂಪಿಕ್ಸ್‌ 2024ರ (Paris Olympics 2024) ಪುರುಷರ ಹಾಕಿ ಪೂಲ್‌ ಬಿ ಪಂದ್ಯದಲ್ಲಿ ಆಸ್ಟ್ರೇಲಿಯಾಗೆ ಭಾರತ ತಂಡವು ಆಘಾತ ನೀಡಿದೆ. 52 ವರ್ಷಗಳ ಬಳಿಕ ಆಸ್ಟ್ರೇಲಿಯಾವನ್ನು 3-2 ಗೋಲುಗಳಿಂದ ಸೋಲಿಸುವ ಮೂಲಕ ಭಾರತದ (India) ಹಾಕಿ (Hockey) ತಂಡವು ಐತಿಹಾಸಿಕ ಸಾಧನೆ ಮಾಡಿದೆ.

    1972ರ ಒಲಿಂಪಿಕ್ಸ್ ನಂತರ ಭಾರತವು ಹಾಕಿಯಲ್ಲಿ ಆಸ್ಟ್ರೇಲಿಯಾ (Australia) ತಂಡವನ್ನು ಸೋಲಿಸಿದ್ದು ಇದೇ ಮೊದಲು. ಕಳೆದ ಬಾರಿ ಟೋಕಿಯೊದಲ್ಲಿ ನಡೆದಿದ್ದ ಒಲಿಂಪಿಕ್ಸ್‌ನಲ್ಲಿ ಆಸ್ಟ್ರೇಲಿಯಾ ತಂಡವು ರಜತ ಪದಕ ಜಯಿಸಿತ್ತು. ಇದನ್ನೂ ಓದಿ: Paris Olympics | ಭಾರತಕ್ಕೆ ಮೂರನೇ ಪದಕ- ಕಂಚು ಗೆದ್ದ ಸ್ವಪ್ನಿಲ್

    ಭಾರತ ಪರ ಅಭಿಷೇಕ್ ಮತ್ತು ಹರ್ಮನ್‌ಪ್ರೀತ್ ಸಿಂಗ್ (2) ಗೋಲು ಗಳಿಸಿದರು. ಥಾಮಸ್ ಕ್ರೇಗ್ ಮತ್ತು ಬ್ಲೇಕ್ ಗೋವರ್ಸ್ ಆಸ್ಟ್ರೇಲಿಯಾ ಪರ ಗೋಲು ಗಳಿಸಿದರು. ಈ ಗೆಲುವಿನೊಂದಿಗೆ ಭಾರತ (10 ಅಂಕಗಳು, 5 ಪಂದ್ಯಗಳು) ಪೂಲ್ ಬಿಯಲ್ಲಿ ಎರಡನೇ ಸ್ಥಾನಕ್ಕೆ ಏರಿದೆ.

    ಪೂಲ್‌ನಲ್ಲಿ ಬೆಲ್ಜಿಯಂ ಮುನ್ನಡೆ ಸಾಧಿಸಿದರೆ ಆಸ್ಟ್ರೇಲಿಯಾ ಮೂರನೇ ಸ್ಥಾನದಲ್ಲಿದೆ. ಭಾರತವು ನ್ಯೂಜಿಲೆಂಡ್ ವಿರುದ್ಧ ಜಯದೊಂದಿಗೆ ಓಟ ಆರಂಭಿಸಿತು. ಅರ್ಜೆಂಟೀನಾ ವಿರುದ್ಧದ ಪಂದ್ಯ ಡ್ರಾ ಆಯಿತು. ಐರ್ಲೆಂಡ್ ತಂಡದ ವಿರುದ್ಧ ಭಾರತ ಗೆಲುವು ದಾಖಲಿಸಿದೆ. ಇದನ್ನೂ ಓದಿ: ಸೂಪರ್‌ ಓವರ್‌ ಥ್ರಿಲ್ಲಿಂಗ್‌ – ಮೊದಲ ಎಸೆತದಲ್ಲೇ ಭಾರತಕ್ಕೆ ಗೆಲುವು – ಕ್ಲೀನ್‌ಸ್ವೀಪ್‌ನೊಂದಿಗೆ ಸರಣಿ ಜಯ

  • Commonwealth Games: ಆಂಗ್ಲರ ವಿರುದ್ಧ ಗೆಲ್ಲುವ ಅವಕಾಶ ಕೈಚೆಲ್ಲಿದ ಭಾರತದ ಹಾಕಿ ತಂಡ

    Commonwealth Games: ಆಂಗ್ಲರ ವಿರುದ್ಧ ಗೆಲ್ಲುವ ಅವಕಾಶ ಕೈಚೆಲ್ಲಿದ ಭಾರತದ ಹಾಕಿ ತಂಡ

    ಬರ್ಮಿಂಗ್‌ಹ್ಯಾಮ್: ಕಾಮನ್‌ವೆಲ್ತ್ ಗೇಮ್ಸ್-2022ರಲ್ಲಿ ಭಾರತದ ಪುರುಷರ ಹಾಕಿ ತಂಡವು ಇಂಗ್ಲೆಂಡ್ ವಿರುದ್ಧ ನಡೆದ ತನ್ನ ಪೂಲ್ ಪಂದ್ಯದಲ್ಲಿ ಗೆಲ್ಲುವ ಅವಕಾಶ ಕಳೆದುಕೊಂಡು ನಿರಾಶೆಗೆ ಒಳಗಾಗಿದೆ. 4-4 ರಲ್ಲಿ ಪಂದ್ಯವನ್ನು ಡ್ರಾ ಮಾಡಿಕೊಂಡು, ಸುಲಭದಲ್ಲಿ ಗೆಲ್ಲುವ ಅವಕಾಶವನ್ನು ಕೈಚೆಲ್ಲಿದೆ.

    ಪೂಲ್-ಬಿ ನಲ್ಲಿ ನಡೆದ ಈ ಪಂದ್ಯದಲ್ಲಿ, ಕೊನೆಯ ಕ್ವಾರ್ಟರ್‌ನಲ್ಲಿ ಭಾರತ ತಂಡವು ಒಂದರ ನಂತರ ಒಂದರಂತೆ ಹಲವು ಬಾರಿ ಎಡವಿತು. ಇದರಿಂದಾಗಿ ಟೀಂ ಇಂಡಿಯಾ ದೀರ್ಘಕಾಲ ಆಂಗ್ಲರ ವಿರುದ್ಧ ಸೆಣಸಬೇಕಾಯಿತು. ತಂಡದಲ್ಲಿದ್ದ ಗೊಂದಲಗಳಿಂದಾಗಿ ಇಂಗ್ಲೆಂಡ್ ಮೂರು ಗೋಲ್‌ಗಳ ಲಾಭ ಪಡೆಯಿತು. ಈ ಮೂಲಕ ಇಂಗ್ಲೆಂಡ್ ತಂಡ ಪಂದ್ಯವನ್ನು ಡ್ರಾ ಮಾಡುವುದರಲ್ಲಿ ಯಶಸ್ವಿಯಾಯಿತು. ಈ ಫಲಿತಾಂಶದ ನಂತರ, ಭಾರತ ತಂಡವು ಪೂಲ್‌ನ ಅಗ್ರಸ್ಥಾನಕ್ಕೆ ಹೋಗುವ ಅವಕಾಶವನ್ನೂ ಕಳೆದುಕೊಂಡಿತು. ಇದನ್ನೂ ಓದಿ: Commonwealth Games: ಪದಕಗೆಲ್ಲೋ ತವಕದಲ್ಲಿದ್ದ ಭಾರತದ ಮೀನಾಕ್ಷಿಗೆ ಅಪಘಾತ – ಆಂಗ್ಲರ ಪಾಲಾದ ಚಿನ್ನ

    ಪಂದ್ಯದಲ್ಲಿ, ಭಾರತ ತಂಡವು ಮೊದಲ ಕ್ವಾರ್ಟರ್‌ನಲ್ಲಿಯೇ 2-0 ಮುನ್ನಡೆ ಸಾಧಿಸಿತ್ತು. ಇದು 2ನೇ ಕ್ವಾರ್ಟರ್‌ನ ಅಂತ್ಯದಲ್ಲಿ 3-0 ಸಾಧಿಸುವ ಮೂಲಕ ಇಂಗ್ಲೆಂಡ್ ಅನ್ನು ಹಿಂದಕ್ಕೆ ತಳ್ಳಿತ್ತು. ಆದಾಗ್ಯೂ ಇಂಗ್ಲೆಂಡ್ 3ನೇ ಕ್ವಾರ್ಟರ್‌ನಲ್ಲಿ ಪುನರಾಗಮನದ ಕಡೆಗೆ ಮೊದಲ ಹೆಜ್ಜೆ ಇಡುತ್ತಾ, 3-1 ಅಂತರಕ್ಕೆ ಅಂಕ ಗಳಿಸಿತ್ತು. ನಂತರ 4ನೇ ಕ್ವಾರ್ಟರ್‌ನಲ್ಲಿ, ಭಾರತ ತಕ್ಷಣವೇ ಸ್ಕೋರ್ ಅನ್ನು 4-1 ಗೆ ಇಳಿಸಿತು. ಆದರೆ ಕೊನೆಯ 10 ನಿಮಿಷಗಳಲ್ಲಿ ಭಾರತೀಯ ಆಟಗಾರರು ಫೌಲ್ ಮಾಡುತ್ತಲೇ ಇದ್ದರು, ಇದರಿಂದಾಗಿ ಇಬ್ಬರು ಆಟಗಾರರು ಎಲ್ಲೋ ಕಾರ್ಡ್ ಪಡೆದು ಹೊರಹೋಗಬೇಕಾಯಿತು. ಕಡಿಮೆ ಆಟಗಾರರಿಂದಾಗಿ ಗೇಲನ್ನು ಸರಿಯಾಗಿ ರಕ್ಷಿಸಲು ಸಾಧ್ಯವಾಗದ ಭಾರತ ತಂಡ ಸಂಪೂರ್ಣ ಹಿನ್ನಡೆ ಅನುಭವಿಸಿತು.

    Live Tv
    [brid partner=56869869 player=32851 video=960834 autoplay=true]