Tag: Meppadi

  • ವಯನಾಡ್ ಲೋಕಸಭಾ ಕ್ಷೇತ್ರದ ಮೆಪ್ಪಾಡಿಗೆ ಕರ್ನಾಟಕ ಸರ್ಕಾರದಿಂದ 10 ಕೋಟಿ ಹಣ

    ವಯನಾಡ್ ಲೋಕಸಭಾ ಕ್ಷೇತ್ರದ ಮೆಪ್ಪಾಡಿಗೆ ಕರ್ನಾಟಕ ಸರ್ಕಾರದಿಂದ 10 ಕೋಟಿ ಹಣ

    ಬೆಂಗಳೂರು: ನಮ್ಮ ದುಡ್ಡು, ಕೇರಳಕ್ಕೆ (Kerala) ನೆರವು. ಇದು ರಾಜ್ಯ ಸರ್ಕಾರದ ನಿಲುವು. ಕಾಂಗ್ರೆಸ್ (Congress) ನಾಯಕಿ ಪ್ರಿಯಾಂಕಾ ಗಾಂಧಿ ಕ್ಷೇತ್ರಕ್ಕೆ ಕರ್ನಾಟಕ (Karnataka) ಸರ್ಕಾರ ನೆರವು ನೀಡುತ್ತಿದೆ.

    ಪೂರಕ ಅಂದಾಜಿನಲ್ಲಿ ಕೇರಳ ರಾಜ್ಯದ ವಯನಾಡ್ (Wayanad) ಜಿಲ್ಲೆಯ ಮೆಪ್ಪಾಡಿ ಭೂಕುಸಿತ (Meppadi Landslide) ಕಾರಣದಿಂದ ಹಾನಿಗೊಳಗಾದವರ ಪುನರ್ವಸತಿಗೆ 10 ಕೋಟಿ ರೂ. ಕೊಡಲಾಗಿದೆ. ಭೂಕುಸಿತದಿಂದ ಹಾನಿಗೊಳಗಾದ 100 ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸಲು 10 ಕೋಟಿ ಅನುದಾನ ಎಂದು ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಪೋಷಕರಿಗೆ ಸೆಡ್ಡು – ಸಹಾಯವಾಣಿಗೆ ಕರೆ ಮಾಡಿ ತನ್ನ ಬಾಲ್ಯ ವಿವಾಹವನ್ನೇ ನಿಲ್ಲಿಸಿದ ಬಾಲಕಿ

    ಕಂದಾಯ ಇಲಾಖೆ ಅಡಿಯಲ್ಲಿ ಬರುವ ಎಸ್‌ಡಿಆರ್‌ಎಫ್ ಅನುದಾನ ನೀಡುತ್ತಿರುವುದಾಗಿ ಉಲ್ಲೇಖಿಸಿದೆ. ಆದರೆ ಪ್ರಿಯಾಂಕ ಗಾಂಧಿ ಸಂಸದೆಯಾಗಿರುವ ವಯನಾಡ್ ಕ್ಷೇತ್ರದ ಮೆಪ್ಪಾಡಿ ಹಾನಿಗೆ ರಾಜ್ಯ ಸರ್ಕಾರ ಹಣ ನೀಡುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ. ಇದನ್ನೂ ಓದಿ: ಕಳ್ಳತನ ಪ್ರಕರಣದ ಆರೋಪಿ ಠಾಣೆಯಲ್ಲಿ ಆತ್ಮಹತ್ಯೆ – ಕುಟುಂಬಸ್ಥರಿಂದ ಲಾಕಪ್ ಡೆತ್ ಶಂಕೆ

  • ಸೈನಿಕರಿಗೆ ಸೆಲ್ಯೂಟ್‌: ಕೇವಲ 16 ಗಂಟೆಯಲ್ಲಿ 24 ಟನ್‌ ಸಾಮರ್ಥ್ಯದ 190 ಅಡಿ ಉದ್ದದ ಸೇತುವೆ ರೆಡಿ!

    ಸೈನಿಕರಿಗೆ ಸೆಲ್ಯೂಟ್‌: ಕೇವಲ 16 ಗಂಟೆಯಲ್ಲಿ 24 ಟನ್‌ ಸಾಮರ್ಥ್ಯದ 190 ಅಡಿ ಉದ್ದದ ಸೇತುವೆ ರೆಡಿ!

    ವಯನಾಡು: ಭೂಕುಸಿತ ಸಂಭವಿಸಿದ್ದ ಚೂರಲ್ಮಲ (Chooralmala) ಮತ್ತು ಮುಂಡಕ್ಕೈಗೆ (Mundakkai) ಸಂರ್ಪಕ್ಕೆ ಕಲ್ಪಿಸುವ ಚಾರಲ್‌ಮಲೈ ನದಿಗೆ ಅಡ್ಡಲಾಗಿ ಕಟ್ಟಲಾದ 190 ಅಡಿ ಉದ್ದದ ಸೇತುವೆಯನ್ನು ಭಾರತೀಯ ಸೇನೆ ದಾಖಲೆಯ ಕೇವಲ 16 ಗಂಟೆಯಲ್ಲಿ ಪೂರ್ಣಗೊಳಿಸಿದೆ.

    ಜುಲೈ 31 ರ ರಾತ್ರಿ 9 ಗಂಟೆಗೆ ನಿರ್ಮಾಣಕ್ಕೆ ಕೈ ಹಾಕಿದ ಸೇನೆಯ ಎಂಜಿನಿಯರ್‌ಗಳು ಆಗಸ್ಟ್ 01 ರ ಸಂಜೆ 5:30ಕ್ಕೆ ಪೂರ್ಣಗೊಳಿಸಿದರು. ಈ ಸೇತುವೆ 24 ಟನ್‌ ತೂಕದ ಸಾಮರ್ಥ್ಯವನ್ನು ಹೊಂದಿದೆ.  ಇದನ್ನೂ ಓದಿ: Wayanad Landslide | ದಯವಿಟ್ಟು ಅಳಿಯನ ಮೃತ ದೇಹ ಹುಡುಕಿ, ಕೊನೆ ಬಾರಿ ನೋಡ್ತಿವಿ!

    ಎಲ್ಲಾ ರೀತಿಯ ಸವಾಲುಗಳನ್ನು ಮೀರಿ 1 ಮದ್ರಾಸ್ ಎಂಜಿನಿಯರ್ಸ್ ಗ್ರೂಪ್‌ನ ಮೇಜ್ ಸೀತಾ ಶೆಲ್ಕೆ ಮತ್ತು ಅವರ ತಂಡ ಈ ಸೇತುವೆಯನ್ನು ಯಶಸ್ವಿಯಾಗಿ ನಿರ್ಮಿಸಿದೆ. ಇದನ್ನೂ ಓದಿ: 206 ಮಂದಿ ನಾಪತ್ತೆ – ಇಂದಿನಿಂದ 3 ಸಾವಿರ ಮಂದಿಯಿಂದ ಮೃತದೇಹ ಶೋಧ ಕಾರ್ಯ

    ಈ ಸೇತುವೆ ನಿರ್ಮಾಣವನ್ನು ಮಧ್ಯಾಹ್ನ 12 ಗಂಟೆಯ ಒಳಗಡೆ ಪೂರ್ಣಗೊಳಿಸಲು ಸೇನೆ ಟಾರ್ಗೆಟ್‌ ಹಾಕಿಕೊಂಡಿತ್ತು.ಆದರೆ ಭಾರೀ ಮಳೆಯಿಂದ ಕೆಲಸಕ್ಕೆ ಅಡ್ಡಿಯಾಗಿದ್ದರೂ ಸೇನೆಯ ಎಂಜಿನಿಯರ್‌ಗಳು ದಾಖಲೆಯ ಅವಧಿಯಲ್ಲಿ ಸೇತುವೆ ನಿರ್ಮಿಸಿ ಕಾರ್ಯಾಚರಣೆಗೆ ಅನುವು ಮಾಡಿಕೊಟ್ಟಿದ್ದಾರೆ. ಬೈಲಿ ಸೇತುವೆಯು ತಾತ್ಕಾಲಿಕ ಸೇತುವೆಯಾಗಿದ್ದು ಉಕ್ಕಿನ ತುಂಡುಗಳನ್ನು ಜೋಡಿಸಿ ನಿರ್ಮಾಣ ಮಾಡಲಾಗಿದೆ.

    ಸೇತುವೆ ನಿರ್ಮಾಣಗೊಂಡ ಬಳಿಕ ರಕ್ಷಣಾ ಕಾರ್ಯಾಚರಣೆ ಬಿರುಸು ಪಡೆದಿದೆ. ಜೆಸಿಬಿಗಳು, ಅಂಬುಲೆನ್ಸ್‌ಗಳು, ರಕ್ಷಣಾ ಪಡೆ ಎಲ್ಲರೂ ಈ ಸೇತುವೆಯ ಮೂಲಕವೇ ಸಾಗುತ್ತಿದ್ದಾರೆ.

     

  • Wayanad Landslide |ಮೃತಪಟ್ಟ ಕನ್ನಡಿಗರಿಗೆ ತಲಾ 5 ಲಕ್ಷ ರೂ. ಪರಿಹಾರ : ಸಿಎಂ ಘೋಷಣೆ

    Wayanad Landslide |ಮೃತಪಟ್ಟ ಕನ್ನಡಿಗರಿಗೆ ತಲಾ 5 ಲಕ್ಷ ರೂ. ಪರಿಹಾರ : ಸಿಎಂ ಘೋಷಣೆ

    ನವದೆಹಲಿ: ಕೇರಳದ ವಯನಾಡು ದುರಂತದಲ್ಲಿ ಮೃತಪಟ್ಟ ಕನ್ನಡಿಗರಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಘೋಷಣೆ ಮಾಡಿದ್ದಾರೆ. ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಪ್ರಕಟಿಸಿದ್ದಾರೆ. ಇದೇ ವೇಳೆ ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.

    ಈಗಾಗಲೇ ರಾಜ್ಯದ ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳು, ಎನ್.ಡಿ.ಆರ್.ಎಫ್ ತಂಡ ಮತ್ತು ಸೇನಾ ಪಡೆಯ ತಂಡಗಳು ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಇಂದು ರಕ್ಷಣಾ ಕಾರ್ಯದ ಉಸ್ತುವಾರಿಗಾಗಿ ಸಚಿವರಾದ ಸಂತೋಷ್ ಲಾಡ್ ಅವರನ್ನು ವಯನಾಡಿಗೆ ಕಳುಹಿಸಿಕೊಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: Wayanad Landslide| ಪಾಪುವನ್ನು ಹಿಡಿಯುವಷ್ಟರಲ್ಲಿ ಗೋಡೆ ಕುಸಿದು ಬಿತ್ತು: ಕಣ್ಣೀರಿಟ್ಟ ತಾಯಿ

    ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವಿನ ಸಂಖ್ಯೆ ಏರುತ್ತಲೇ ಹೋಗುತ್ತಿದೆ. ಇದೊಂದು ಅತ್ಯಂತ ಘೋರ ದುರಂತ, ಈ ದುರಂತದಲ್ಲಿ ಕನ್ನಡಿಗರು ಪ್ರಾಣ ಕಳೆದುಕೊಂಡದ್ದು ಮತ್ತಷ್ಟು ನೋವುಂಟು ಮಾಡಿದೆ ಅಂತಾ ಟ್ವೀಟ್ ಮಾಡಿದ್ದಾರೆ.  ಇದನ್ನೂ ಓದಿ: Wayanad Landslide | ಒಂದೇ ಕುಟುಂಬದ 9 ಜನ ಕನ್ನಡಿಗರು ನಾಪತ್ತೆ – ಕಣ್ಣೀರಿಟ್ಟ ಸಂಬಂಧಿಕ

    ಸಂತ್ರಸ್ತರ ಪ್ರಾಣ ರಕ್ಷಣೆ ನಮ್ಮ ಮೊದಲ ಆದ್ಯತೆಯಾಗಿದ್ದು, ಸಂಕಷ್ಟದಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ನಾಡಿಗೆ ಕರೆತರಲು ನಮ್ಮ ಸರ್ಕಾರ ಶಕ್ತಿಮೀರಿ ಶ್ರಮಿಸುತ್ತಿದೆ ಎಂದು ತಿಳಿಸಿದ್ದಾರೆ.

     

  • Wayanad Landslide | ಒಂದೇ ಕುಟುಂಬದ 9 ಜನ ಕನ್ನಡಿಗರು ನಾಪತ್ತೆ – ಕಣ್ಣೀರಿಟ್ಟ ಸಂಬಂಧಿಕ

    Wayanad Landslide | ಒಂದೇ ಕುಟುಂಬದ 9 ಜನ ಕನ್ನಡಿಗರು ನಾಪತ್ತೆ – ಕಣ್ಣೀರಿಟ್ಟ ಸಂಬಂಧಿಕ

    – ಕೊಚ್ಚಿಕೊಂಡು ಹೋಯ್ತು ಎಸ್ಟೇಟ್ ಕ್ವಾಟರ್ಸ್
    – ನಾಪತ್ತೆಯಾದವರ ಸಂಬಂಧಿಕನ ಮನಕಲಕುವ ಮಾತುಗಳು

    ವಯನಾಡು: ಭೀಕರ ಭೂಕುಸಿತ ಸಂಭವಿಸಿದ್ದರಿಂದ ಚೂರಲ್ಮಲ (Chooralmala) ಎಸ್ಟೇಟ್ ಕ್ವಾಟರ್ಸ್ ಕೊಚ್ಚಿಕೊಂಡು ಹೋಗಿ 9 ಜನ ಕನ್ನಡಿಗರು ನಾಪತ್ತೆಯಗಿದ್ದಾರೆ.

    ಗುರುಮಲ್ಲಣ್ಣ (60), ಸಾವಿತ್ರಿ (54), ಸಬೀತಾ (43), ಶಿವಣ್ಣ (50), ಅಪ್ಪಣ್ಣ (39), ಅಶ್ವಿನ್ (13), ಜೀತು (11), ದಿವ್ಯ (35), ರತ್ನ (48) ಜಲಪ್ರಳಯದಲ್ಲಿ ನಾಪತ್ತೆಯಾಗಿರುವ ಕನ್ನಡಿಗರು.

    ಘಟನೆಯಲ್ಲಿ 11 ಜನ ನಾಪತ್ತೆಯಾಗಿದ್ದು, ಇಬ್ಬರ ಮೃತದೇಹ ಸಿಕ್ಕಿದೆ. ಇನ್ನೂ 9 ಜನರ ಮೃತದೇಹ ಸಿಗಲಿಲ್ಲ ಎಂದು ತಿಳಿದು ಬಂದಿದೆ. ಇದನ್ನೂ ಓದಿ: Wayanad Landslide : ಅರ್ಧ ಸೆಕೆಂಡ್‌ನಲ್ಲಿ ನೂರು ಜನ ಸಮಾಧಿ!

    ನಾಪತ್ತೆಯಾದವರ ಸಂಬಂಧಿಕ ರವಿ ಪಬ್ಲಿಕ್ ಟಿವಿ ಜೊತೆ ಮಾತನಾಡುತ್ತಾ, ಏನ್ ಮಾಡುವುದು ಹುಡುಕುವುದಕ್ಕಂತೂ ಆಗುವುದಿಲ್ಲ. ನೀರಲ್ಲಿ ಯಾರಿಗೂ ಇಳಿಯುವುದಕ್ಕೆ ಆಗುತ್ತಿಲ್ಲ. ಅವರನ್ನು ಹುಡುಕಬೇಕೆಂದರೆ 90 ಕಿ.ಮೀ. ದೂರ ಹೋಗಿ ಹುಡುಕಬೇಕು. ಆದರೆ ಅವರು ಅಲ್ಲಿ ಇದ್ದಾರೋ, ಇಲ್ವೋ ಗೊತ್ತಿಲ್ಲ? ಇವಾಗ 30-40 ಶವಗಳು ಸಿಕ್ಕಿದ್ದಾವೆ ಎಂದು ಹೇಳುತ್ತಿದ್ದಾರೆ ನೋಡಬೇಕು ಎಂದು ತನ್ನ ಅಸಾಹಾಯಕತೆಯನ್ನು ತೊಡಿಕೊಂಡಿದ್ದಾರೆ. ಇದನ್ನೂ ಓದಿ: Wayanad Landslide| ಪಾಪುವನ್ನು ಹಿಡಿಯುವಷ್ಟರಲ್ಲಿ ಗೋಡೆ ಕುಸಿದು ಬಿತ್ತು: ಕಣ್ಣೀರಿಟ್ಟ ತಾಯಿ

    ನಾವು ಸರಕಾರದಿಂದ ಕೊಡಿಸಲಾಗಿದ್ದ ಮನೆಯಲ್ಲಿದ್ದಿವಿ. ನಮ್ಮ ಸಂಬಂಧಿಕರು ಅವರಿದ್ದ ಸ್ವಂತ ಮನೆಯಿಂದ ಕೊಚ್ಚಿಕೊಂಡು ಹೋಗಿದ್ದಾರೆ. ಮನೆಯಲ್ಲಿರುವುದರಿಂದ ಹೀಗೆ ಆಗುವುದಿಲ್ಲವೆಂದು ನಂಬಿ ಅವರು ಅಲ್ಲೇ ಉಳಿದುಕೊಂಡಿದ್ದರು. ಹೀಗೆ ಆಗುತ್ತೆ ಎಂದು ಯಾರು ತಿಳಿದುಕೊಂಡಿಲ್ಲ. ಇವಾಗ ಹೋದವರು ನಮ್ಮ ನಾದಿನಿಯ ಕುಟುಂಬದವರು ಎಂದು ಹೇಳುತ್ತಾ, ನಮ್ಮ ದೊಡ್ಡಪ್ಪನ ಮಗಳು ಮತ್ತು ಭಾವನಿಗೆ ಆಶ್ರಮಕ್ಕೆ ಕರೆದುಕೊಂಡು ಹೋಗಿದ್ದಾರೆ ಎಂದು ದುಃಖತಪ್ತರಾಗಿ ತಿಳಿಸಿದರು.

    2018-19 ರಲ್ಲಿಯೂ ಕೂಡ ಇಲ್ಲಿ ಸ್ವಲ್ಪ ಭೂಕುಸಿತ ಸಂಭವಿಸಿತ್ತು. ಅದರ ಅನುಭವ ನಮಗಿದೆ. ಆ ಹೆದರಿಕೆಯಿಂದ ಜನರು ಬೇರೆ ಕಡೆಗೆ ಸ್ಥಳಾಂತರ ಆಗಿದ್ದರು. ನಾವು ಬಂದಾಗ ಹೆಚ್ಚು ಜನ ಕನ್ನಡಿಗರು ಇಲ್ಲಿ ಇದ್ದರು. ಹೀಗೆ ಆಗಿದ್ದರಿಂದ ಇವಾಗ ಎಲ್ಲರೂ ವಾಪಸ್ ಹೋಗಿದ್ದಾರೆ. ಇವಾಗ 500 ಜನ ಕನ್ನಡಿಗರು ಇಲ್ಲಿ ಇರಬಹುದು ಎಂದವರು ನೆನಪಿಸಿಕೊಂಡರು.

    ರವಿ ಮತ್ತು ಅವರ ಸಂಬಂಧಿಕರು ಮೂಲತಃ ಕರ್ನಾಟಕದ ಗುಂಡ್ಲುಪೇಟೆಯ ನಿವಾಸಿಯಾಗಿದ್ದಾರೆ. ಕನ್ನಡಿಗರ ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

     

  • ವಯನಾಡಿನ ಬೆಟ್ಟದಲ್ಲಿ ಜಲಸ್ಫೋಟ – 19 ಮಂದಿ ಸಾವು, ನೂರಾರು ಮಂದಿ ಸಿಲುಕಿರುವ ಸಾಧ್ಯತೆ

    ವಯನಾಡಿನ ಬೆಟ್ಟದಲ್ಲಿ ಜಲಸ್ಫೋಟ – 19 ಮಂದಿ ಸಾವು, ನೂರಾರು ಮಂದಿ ಸಿಲುಕಿರುವ ಸಾಧ್ಯತೆ

    – 2018ರಲ್ಲಿ ಕೊಡಗಿನಲ್ಲಿ ನಡೆದ ಭೂಕುಸಿತದಂತೆ ಕುಸಿದ ಭೂಮಿ

    ತಿರುವನಂತಪುರಂ: ಕೊಡಗಿನಲ್ಲಿ 2018ರಲ್ಲಿ ನಡೆದ ಜಲಸ್ಫೋಟದಂತೆ ಕೇರಳದಲ್ಲೂ (Kerala) ದುರಂತ ಸಂಭವಿಸಿದೆ. ಮಂಗಳವಾರ ಮುಂಜಾನೆ ವಯನಾಡ್ (Wayanad) ಜಿಲ್ಲೆಯ ಮೆಪ್ಪಾಡಿಯಲ್ಲಿ(Meppadi) ಗುಡ್ಡ ಕುಸಿದಿದೆ. ಈ ದುರಂತದಲ್ಲಿ 19 ಮಂದಿ ಸಾವನ್ನಪ್ಪಿ ನೂರಾರು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

    ನಸುಕಿನ ಜಾವ 2 ಗಂಟೆಗೆ ಮೊದಲ ಭೂಕುಸಿತ ಸಂಭವಿಸಿದರೆ ಮುಂಜಾನೆ 4:10ರ ವೇಳೆ ಎರಡನೇ ಬಾರಿ ಸಂಭವಿಸಿದೆ. ಜಲಸ್ಫೋಟದಿಂದಾಗಿ ಗುಡ್ಡದಿಂದ ನೀರು ರಭಸವಾಗಿ ಮನೆಗಳ ಮೇಲೆ ಹರಿದು ಹೋಗಿದ್ದರಿಂದ ಸಾವು ನೋವಿನ ಪ್ರಮಾಣ ಏರಿಕೆಯಾಗುವ ಸಾಧ್ಯತೆಯಿದೆ.

     

    ವಯನಾಡು ಜಿಲ್ಲೆಯ ಅಧಿಕಾರಿಗಳ ಪ್ರಕಾರ ತೊಂಡರ್ನಾಡ್ ಗ್ರಾಮದಲ್ಲಿ ವಾಸಿಸುತ್ತಿದ್ದ ನೇಪಾಳಿ ಕುಟುಂಬದ ಒಂದು ವರ್ಷದ ಮಗು ಭೂಕುಸಿತವೊಂದರಲ್ಲಿ ಸಾವನ್ನಪ್ಪಿದೆ.

    ಭಾರೀ ಭೂಕುಸಿತದ ಹಿನ್ನೆಲೆಯಲ್ಲಿ ಎಲ್ಲಾ ಸರ್ಕಾರಿ ಸಂಸ್ಥೆಗಳು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಾರೆ. ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ತಂಡಗಳನ್ನು ಪೀಡಿತ ಪ್ರದೇಶಕ್ಕೆ ನಿಯೋಜಿಸಲಾಗಿದೆ.

    ಎನ್‌ಡಿಆರ್‌ಎಫ್‌ನ ಹೆಚ್ಚುವರಿ ತಂಡ ವಯನಾಡ್‌ಗೆ ತೆರಳುತ್ತಿದೆ. ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಕೆಎಸ್‌ಡಿಎಂಎ) ವಯನಾಡ್‌ಗೆ ತೆರಳಲು ಕಣ್ಣೂರು ರಕ್ಷಣಾ ಭದ್ರತಾ ದಳದ ಎರಡು ತಂಡಗಳಿಗೆ ಸೂಚನೆ ನೀಡಲಾಗಿದೆ.

    ನಿರಂತರ ಮಳೆಯಿಂದಾಗಿ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ. ಮುಂದಿನ 3 ಗಂಟೆಗಳಲ್ಲಿ ಕೇರಳ, ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಪ್ರತ್ಯೇಕವಾದ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ.

  • ಕೇರಳದಲ್ಲಿ ಭೂಕುಸಿತಕ್ಕೆ 38 ಮಂದಿ ಭೂಸಮಾಧಿ

    ಕೇರಳದಲ್ಲಿ ಭೂಕುಸಿತಕ್ಕೆ 38 ಮಂದಿ ಭೂಸಮಾಧಿ

    ತಿರುವನಂತಪುರಂ: ಮಹಾ ಮಳೆಗೆ ಸಂಭವಿಸಿದ ಭೂಕುಸಿತದಲ್ಲಿ 38 ಮಂದಿ ಭೂಸಮಾಧಿಯಾದ ಘಟನೆ ಕೇರಳದಲ್ಲಿ ಮೇಪ್ಪಾಡಿಯಲ್ಲಿ ನಡೆದಿದೆ.

    ಕೇರಳದಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ರಣ ಭೀಕರ ಮಳೆಯಾಗುತ್ತಿದೆ. ಕಳೆದ ಕೆಲವು ದಿನಗಳಿಂದ ದೇವರನಾಡಿದಲ್ಲಿ ವರುಣ ಅಬ್ಬರಿಸಿದ್ದಾನೆ. ಪರಿಣಾಮ ಗುರುವಾರ ಸಂಜೆ 4 ಗಂಟೆಗೆ ಮಸೀದಿ, ದೇವಸ್ಥಾನ ಹಾಗೂ ಒಂದು ಎಸ್ಟೇಟ್ ಸಂಪೂರ್ಣ ನೆಲಸಮವಾಗಿದೆ. ದೇವಸ್ಥಾನ ಹಾಗೂ ಮಸೀದಿಯಲ್ಲಿ 70ಕ್ಕೂ ಹೆಚ್ಚು ಜನರಿದ್ದರು. ಅವರ ಪೈಕಿ 38 ಮಂದಿ ಭೂಸಮಾಧಿಯಾಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

    ಭಾರೀ ಮಳೆಯಿಂದಾಗಿ ಸಂಚಾರ ಅಸ್ತವ್ಯಸ್ತವಾಗಿದ್ದು, ಘಟನೆ ನಡೆದು ಮೂರ್ನಾಲ್ಕು ಗಂಟೆ ಕಳೆದರೂ ಸ್ಥಳಕ್ಕೆ ತಲುಪಲು ರಕ್ಷಣಾ ತಂಡಕ್ಕೆ ಸಾಧ್ಯವಾಗಿಲ್ಲ. ಹೀಗಾಗಿ ಸೇನಾ ಹೆಲಿಕಾಪ್ಟರ್ ನೀಡುವಂತೆ ಕೇಂದ್ರ ರಕ್ಷಣಾ ಸಚಿವಾಲಯಕ್ಕೆ ಕೇರಳ ಸಿಎಂ ಪಿಣರಾಯಿ ವಿಜಯನ್ ಮನವಿ ಮಾಡಿಕೊಂಡಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

    ಉತ್ತರ ಕೇರಳದ ಹಲವು ನದಿಗಳು ತುಂಬಿ ಹರಿಯುತ್ತಿದ್ದು, ಅಣೆಕಟ್ಟುಗಳ ಗೇಟ್‍ಗಳನ್ನು ತೆರೆಯಲು ಅಧಿಕಾರಿಗಳು ಆದೇಶಿಸಿದ್ದಾರೆ. ಮಲ್ಲಪುರಂನ ನಿಲಂಬುರ್ ಮತ್ತು ಎತ್ತರದ ಪ್ರದೇಶಗಳಾದ ಕೋಝಿಕ್ಕೋಡು, ಕಣ್ಣೂರು, ಇಡುಕ್ಕಿ ಮತ್ತು ಪಾಲಕ್ಕಾಡ್‍ಗಳು ಮಳೆಗೆ ತತ್ತರಿಸಿ ಹೋಗಿವೆ. ಬುಧವಾರ ರಾತ್ರಿಯಿಡೀ ಸುರಿದ ಧಾರಾಕಾರ ಮಳೆಗೆ ಹಲವು ಕಡೆಗಳಲ್ಲಿ ಭೂಕುಸಿತ ಮತ್ತು ಪ್ರವಾಹ ಉಂಟಾಗಿತ್ತು. ಪಾಲಕ್ಕಾಡ್ ಜಿಲ್ಲೆಯ ಅಟ್ಟಪ್ಪಾಡಿ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ಮನೆಗೆ ಮರ ಬಿದ್ದು ಮೃತಪಟ್ಟಿದ್ದರು. ರಕ್ಷಣಾ ಕಾರ್ಯಾಚರಣೆ ವೇಳೆ ವಯನಾಡ್‍ನಲ್ಲಿ ಮಹಿಳೆಯೊಬ್ಬರು ಪ್ರಾಣ ಬಿಟ್ಟಿದ್ದರು.

    ಮಲಪ್ಪುರಂ, ಕೋಝಿಕ್ಕೋಡು, ವಯನಾಡು ಮತ್ತು ಇಡುಕ್ಕಿ ನಾಲ್ಕು ಜಿಲ್ಲೆಗಳಲ್ಲಿ ರೆಟ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕೇರಳದ ಉತ್ತರ ಭಾಗ ಮತ್ತು ಇಡುಕ್ಕಿಯಲ್ಲಿ ಪ್ರವಾಹ ಮತ್ತು ಭೂ ಕುಸಿತ ಉಂಟಾಗಿ ಅಪಾರ ಪ್ರಮಾಣದಲ್ಲಿ ನಷ್ಟವಾಗಿದೆ.