Tag: mes

  • ಬಲವಂತವಾಗಿ ಬಂದ್‌ ಮಾಡಿದ್ರೆ ಶಿಸ್ತು ಕ್ರಮ – ಬೆಳಗ್ಗೆಯಿಂದಲೇ ಬೆಂಗಳೂರಿನಲ್ಲಿ ಪೊಲೀಸರ ಕಟ್ಟೆಚ್ಚರ

    ಬಲವಂತವಾಗಿ ಬಂದ್‌ ಮಾಡಿದ್ರೆ ಶಿಸ್ತು ಕ್ರಮ – ಬೆಳಗ್ಗೆಯಿಂದಲೇ ಬೆಂಗಳೂರಿನಲ್ಲಿ ಪೊಲೀಸರ ಕಟ್ಟೆಚ್ಚರ

    – ಬೆಳಗ್ಗೆ ಟೌನ್‌ಹಾಲ್‌ನಿಂದ ಫ್ರೀಡಂ ಪಾರ್ಕ್‌ವರೆಗೆ ಮೆರವಣಿಗೆ
    – ಕರಾವಳಿ ಕರ್ನಾಟಕದಲ್ಲಿ ಬಂದ್‌ಗಿಲ್ಲ ಬೆಂಬಲ
    – ಹಳೇ ಮೈಸೂರು, ಕಲ್ಯಾಣ ಕರ್ನಾಟಕದಲ್ಲಿ ಮಿಶ್ರ ಬೆಂಬಲ

    ಬೆಂಗಳೂರು: ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಮರಾಠಿ ಪುಂಡರ ಹಲ್ಲೆ ಪ್ರಕರಣ ಸಂಬಂಧ ಶುರುವಾದ ಸಮರ ಈಗ ಕರ್ನಾಟಕ ಬಂದ್‌ವರೆಗೆ (Karnataka Bandh) ಬಂದಿದೆ. ಕರ್ನಾಟಕದಲ್ಲಿ ಎಂಇಎಸ್ ನಿಷೇಧ, ಮೇಕೆದಾಟು, ಕಳಸಬಂಡೂರಿ ಯೋಜನೆಗೆ ಶೀಘ್ರ ಅನುಮತಿ ಸೇರಿದಂತೆ ನಾಡು-ನುಡಿ, ನೆಲ-ಜಲ ವಿಷಯವಾಗಿ ಕನ್ನಡ ಒಕ್ಕೂಟಗಳು ಇಂದು ಕರ್ನಾಟಕ ಬಂದ್‌ಗೆ ಕರೆ ನೀಡಿವೆ.

    ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಅಖಂಡ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದು ಬೆಳಗ್ಗೆ ಬೆಂಗಳೂರಿನ (Bengaluru) ಟೌನ್‌ಹಾಲ್‌ನಿಂದ ಫ್ರೀಡಂ ಪಾರ್ಕ್ವರೆಗೆ ಬೃಹತ್ ಮೆರವಣಿಗೆ ಹಮ್ಮಿಕೊಂಡಿವೆ. ಬೆಳಗಾವಿ, ಮಂಡ್ಯ, ರಾಮನಗರದಲ್ಲಿ ಸಂಪೂರ್ಣ ಬೆಂಬಲ ಸಿಕ್ಕಿದೆ. ಮೈಸೂರು, ಕಲ್ಯಾಣ ಕರ್ನಾಟಕದಲ್ಲಿ ಮಿಶ್ರ ಬೆಂಬಲ ಇದೆ. ಕರಾವಳಿ ಕರ್ನಾಟಕದಲ್ಲಿ ಬಂದ್‌ಗೆ ಯಾವುದೇ ಸಂಘಟನೆ ಕರೆ ನೀಡಿಲ್ಲ.

    ಬಂದ್‌ಗೆ ಬೆಂಗಳೂರಿನಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ನಗರದ ಪ್ರಮುಖ ರಸ್ತೆಗಳಲ್ಲಿ ಪೊಲೀಸರು ಬೆಳಗ್ಗೆಯಿಂದಲೇ ಗಸ್ತಿನಲ್ಲಿದ್ದಾರೆ. ಯಾವುದೇ ಮೆರವಣಿಗೆ, ಪ್ರತಿಭಟನೆಗೆ ಅವಕಾಶವಿಲ್ಲ ಎಂದು ಪೊಲೀಸರು ಈಗಾಗಲೇ ಎಚ್ಚರಿಕೆ ನೀಡಿದ್ದಾರೆ.

    ಫ್ರೀಡಂ ಪಾರ್ಕ್‌ನಲ್ಲಿ ಮಾತ್ರ ಪ್ರತಿಭಟನೆಗೆ ಅವಕಾಶ ನೀಡಲಾಗಿದೆ. ಬಲವಂತವಾಗಿ ಬಂದ್ ಮಾಡಿಸಿದ್ರೆ ಶಿಸ್ತುಕ್ರಮ ಕೈಗೊಳ್ಳಲಿದ್ದಾರೆ. ಟೌನ್ ಹಾಲ್, ಮೈಸೂರ್ ಬ್ಯಾಂಕ್ ಸರ್ಕಲ್, ಮೆಜೆಸ್ಟಿಕ್‌ನಲ್ಲಿ ಖಾಕಿ ಅಲರ್ಟ್‌ ಆಗಿದ್ದು 4 ಎಸಿಪಿ ಸೇರಿದಂತೆ 11 ಇನ್ಸ್‌ಪೆಕ್ಟರ್‌ಗಳನ್ನು ಭದ್ರತೆಗೆ ನಿಯೋಜಿಸಲಾಗಿದೆ.

    ಪ್ರಮುಖ ಸ್ಥಳದಲ್ಲಿ 65 ಪಿಎಸ್‌ಐ, ನಗರದಲ್ಲಿ ಒಟ್ಟು 1,200 ಪೊಲೀಸರ ನಿಯೋಜನೆ ಮಾಡಲಾಗಿದೆ. ಕೆಎಸ್‌ಆರ್‌ಪಿ 46, ಸಿಎಆರ್ 30 ತುಕಡಿ ಜೊತೆ ಎರಡು ವಾಟರ್ ಜೆಟ್‌ಗಳನ್ನು ನಿಯೋಜಿಸಿದ್ದಾರೆ.

    ಬೆಂಗಳೂರಿನ ಆರ್.ಮಾರ್ಕೆಟ್‌ಗೆ ತಟ್ಟದ ಬಂದ್ ಬಿಸಿ ತಟ್ಟಿಲ್ಲ. ಬೆಳಗ್ಗೆ ಎಂದಿನಂತೆ ವ್ಯಾಪಾರ, ವಹಿವಾಟು ನಡೆಯುತ್ತಿದೆ. ಹೂ, ಹಣ್ಣು ಖರೀದಿಸುವಲ್ಲಿ ಜನರು ಬ್ಯುಸಿಯಾಗಿದ್ದು ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಬಸ್ಸುಗಳು ಎಂದಿನಂತೆ ನಗರದಲ್ಲಿ ಸಂಚರಿಸುತ್ತಿದೆ.

     

    ಬೆಂಬಲ ಎಲ್ಲಿ ಇಲ್ಲ:
    ರಾಮನಗರ, ಚಾಮರಾಜನಗರ, ಚಿಕ್ಕಮಗಳೂರು, ಕೋಲಾರ, ಚಿತ್ರದುರ್ಗ, ದಾವಣಗೆರೆ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ಬಾಗಲಕೋಟೆ.

    ಬಂದ್- 50:50
    ಮೈಸೂರು, ಕೊಡಗು, ತುಮಕೂರು, ಹಾಸನ, ಚಿಕ್ಕಬಳ್ಳಾಪುರ, ಬಳ್ಳಾರಿ, ಬೀದರ್, ವಿಜಯಪುರ, ಚಿಕ್ಕೋಡಿ, ಕಲಬುರಗಿ, ಹಾವೇರಿ, ಹುಬ್ಬಳ್ಳಿ, ಕಾರವಾರ, ಮಂಗಳೂರು, ಶಿವಮೊಗ್ಗ, ಉಡುಪಿ, ಯಾದಗಿರಿ.

  • ಎಂಇಎಸ್ ನಿಷೇಧಕ್ಕೆ ಒತ್ತಾಯ – ಪೊರಕೆ ಹಿಡಿದು ವಾಟಾಳ್ ನಾಗರಾಜ್ ಪ್ರತಿಭಟನೆ

    ಎಂಇಎಸ್ ನಿಷೇಧಕ್ಕೆ ಒತ್ತಾಯ – ಪೊರಕೆ ಹಿಡಿದು ವಾಟಾಳ್ ನಾಗರಾಜ್ ಪ್ರತಿಭಟನೆ

    ರಾಮನಗರ: ರಾಜ್ಯದಲ್ಲಿ ಎಂಇಎಸ್ (MES) ಪುಂಡಾಟ ಮುಂದುವರಿದ ಹಿನ್ನೆಲೆ ಎಂಇಎಸ್ ವಿರುದ್ಧ ರಾಮನಗರದಲ್ಲಿ (Ramanagara) ವಾಟಾಳ್ ನಾಗರಾಜ್ (Vatal Nagaraj) ಪ್ರತಿಭಟನೆ ನಡೆಸಿದ್ದಾರೆ.

    ನಗರದ ಐಜೂರು ವೃತ್ತದಲ್ಲಿ ಪ್ರತಿಭಟನೆ ನಡೆಸಿ ಎಂಇಎಸ್ ನಿಷೇಧ ಮಾಡುವಂತೆ ಪೊರಕೆ ಹಿಡಿದು ವಿನೂತನ ಪ್ರತಿಭಟನೆ ನಡೆಸಿದ್ದಾರೆ. ರಾಜ್ಯದಲ್ಲಿ ದಿನೇದಿನೇ ಎಂಇಎಸ್ ಪುಂಡಾಟ ಹೆಚ್ಚಾಗಿದೆ. ಬೆಳಗಾವಿಯಲ್ಲಿ ಗ್ರಾ.ಪಂ ಅಧಿಕಾರಿ ಮೇಲೆ ಹಲ್ಲೆ ನಡೆಸಲಾಗಿದೆ. ಕನ್ನಡದಲ್ಲಿ ದಾಖಲಾತಿ ನೀಡಿದ್ದಕ್ಕೆ ಹಲ್ಲೆ ಮಾಡಿದ್ದಾರೆ ಎಂದರೆ ಅವರ ಪುಂಡಾಟಕ್ಕೆ ಮಿತಿ ಇಲ್ಲದಂತಾಗಿದೆ. ಪದೇಪದೇ ಕನ್ನಡಿಗರ ಮೇಲೆ ಹಲ್ಲೆ ನಡೆಸುವ ಕೆಲಸವನ್ನು ಎಂಇಎಸ್ ಮಾಡುತ್ತಿದೆ. ಅದಕ್ಕಾಗಿ ಮಾ.22ರಂದು ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಈಗಾಗಲೇ ಎರಡು ಸಾವಿರ ಸಂಘಟನೆಗಳು ಬಂದ್‌ಗೆ ಬೆಂಬಲ ನೀಡಿವೆ. ಅಖಂಡ ಕರ್ನಾಟಕ ಬಂದ್ ಸಂಪೂರ್ಣ ಯಶಸ್ವಿಯಾಗಲಿದೆ. ರಾಜ್ಯದ ನೀರಾವರಿ ಯೋಜನೆಗಳು ಶೀಘ್ರ ಜಾರಿಯಾಗಬೇಕು. ಎಂಇಎಸ್ ಸಂಪೂರ್ಣ ನಿಷೇಧ ಮಾಡುವಂತೆ ವಾಟಾಳ್ ನಾಗರಾಜ್ ಒತ್ತಾಯ ಮಾಡಿದರು. ಇದನ್ನೂ ಓದಿ: ಜೈಲುಗಳಲ್ಲಿ ಅಕ್ರಮ ಚಟುವಟಿಕೆ ತಡೆಯಲು ವಿಶೇಷ ಕ್ರಮ : ಪರಮೇಶ್ವರ್

    ಕ್ಷೇತ್ರ ಪುನರ್ ವಿಂಗಡಣೆ ಖಂಡಿಸಿ ತಮಿಳುನಾಡಿನಲ್ಲಿ ದಕ್ಷಿಣ ರಾಜ್ಯಗಳ ಸಭೆ ಹಿನ್ನೆಲೆ, ತಮಿಳುನಾಡು ಸಿಎಂ ನೇತೃತ್ವದ ಸಭೆಯಲ್ಲಿ ಕರ್ನಾಟಕ ಭಾಗಿಯಾಗದಂತೆ ವಾಟಾಳ್ ಒತ್ತಾಯ ಮಾಡಿದ್ದಾರೆ. ತಮಿಳುನಾಡು ಹಿಂದಿನಿಂದಲೂ ಪ್ರತ್ಯೇಕವಾದ ಬಯಸುತ್ತಿದೆ. ಈಗ ಕ್ಷೇತ್ರ ಪುನರ್ ವಿಂಗಡಣೆ ಕುರಿತು ದಕ್ಷಿಣ ರಾಜ್ಯಗಳ ಸಭೆ ಮಾಡುತ್ತಿದೆ. ಆದರೆ ಈ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಬಾರದು. ರಾಜ್ಯದಲ್ಲೇ ಪುನರ್ ವಿಂಗಡಣೆ ಬಗ್ಗೆ ಹೋರಾಟ ಮಾಡಲಿ. ಆದರೆ ತಮಿಳುನಾಡಿನ ಜೊತೆ ಹೋರಾಟಕ್ಕೆ ಹೋಗದಂತೆ ವಾಟಾಳ್ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಬಿಜೆಪಿ ಬಣ ವೀರರ ಲಿಂಗಾಯತ ಸಭೆಗಳಿಗೆ ಹೈಕಮಾಂಡ್ ಬ್ರೇಕ್ – ಬಿವೈವಿ ವಿರುದ್ಧ ಅಮಿತ್ ಶಾಗೆ ಲಿಂಬಾವಳಿ ದೂರು

  • ಬೆಳಗಾವಿಯಲ್ಲಿ ಮತ್ತೆ ಎಂಇಎಸ್ ಪುಂಡರ ಅಟ್ಟಹಾಸ – ಮರಾಠಿಯಲ್ಲಿ ಪಹಣಿ ಕೊಡದಿದ್ದಕ್ಕೆ ಕನ್ನಡಿಗ ಕಾರ್ಯದರ್ಶಿ ಮೇಲೆ ಹಲ್ಲೆ

    ಬೆಳಗಾವಿಯಲ್ಲಿ ಮತ್ತೆ ಎಂಇಎಸ್ ಪುಂಡರ ಅಟ್ಟಹಾಸ – ಮರಾಠಿಯಲ್ಲಿ ಪಹಣಿ ಕೊಡದಿದ್ದಕ್ಕೆ ಕನ್ನಡಿಗ ಕಾರ್ಯದರ್ಶಿ ಮೇಲೆ ಹಲ್ಲೆ

    – ರಾಡ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ ಪುಂಡರು

    ಬೆಳಗಾವಿ: ನಗರದಲ್ಲಿ ಎಂಇಎಸ್ ಪುಂಡರ ಹಾವಳಿ ಮತ್ತೆ ಮುಂದುವರಿದಿದೆ. ಮರಾಠಿಯಲ್ಲಿ ಪಹಣಿ ಕೊಡಲಿಲ್ಲ ಎಂದು ಕನ್ನಡಿಗ ಕಾರ್ಯದರ್ಶಿ ಮೇಲೆ ರಾಡ್‌ನಿಂದ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ನಡೆದಿದೆ.

    ಕನ್ನಡದ ಬಸ್ ಕಂಡಕ್ಟರ್ ಮೇಲಿನ ಹಲ್ಲೆ ಪ್ರಕರಣ ಕರ್ನಾಟಕ ಮತ್ತು ಮಹಾರಾಷ್ಟ್ರ ಎರಡೂ ರಾಜ್ಯಗಳಲ್ಲಿ ಸಂಚಲನ ಮೂಡಿಸಿತ್ತು. ಈ ಘಟನೆ ಮಾಸುವ ಮುನ್ನವೇ ಕುಂದಾನಗರಿಯಲ್ಲಿ ಮತ್ತೊಂದು ಘಟನೆ ನಡೆದಿದೆ.

    ಮರಾಠಿಯಲ್ಲಿ ಪಹಣಿ ಕೊಡಲಿಲ್ಲ ಹಾಗೂ ಅವರ ಕಾನೂನು ಬಾಹಿರ ಕೃತ್ಯಕ್ಕೆ ಸಹಕಾರ ನೀಡಲಿಲ್ಲ ಎಂದು ಕನ್ನಡಿಗ ಕಾರ್ಯದರ್ಶಿ ಮೇಲೆ ಎಂಇಎಸ್ ಪುಂಡರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಅಂಬೆವಾಡಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ನಾಗಪ್ಪಾ ಕೊಡಲಿ ಹಲ್ಲೆಗೊಳಗಾದವರು.

    ಮಹಾರಾಷ್ಟ್ರ ಎಕೀಕರಣ ಸಮಿತಿಯ ಸಕ್ರಿಯ ಜಿಲ್ಲಾ ಸಂಚಾಲಕ ಚೇತನ ಪಾಟೀಲ ಹಾಗೂ ವಿಕ್ರಂ ಯಳ್ಳೂರಕರ್ ಬೆಂಬಲಿಗರು ಕೃತ್ಯ ಎಸಗಿದ್ದಾರೆ. ತಲೆಗೆ ಹಾಗೂ ಕಾಲುಗಳಿಗೆ ರಾಡ್‌ನಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ನಾಗಪ್ಪಾರನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮಚ್ಚು-ಲಾಂಗು ಮಾರಕಾಸ್ತ್ರಗಳಿಂದ ಗೋಜಗಾ ಗ್ರಾಮದ ಬಳಿ ನಡು ರಸ್ತೆಯಲ್ಲಿಯೇ ಮನಸೋ ಇಚ್ಛೆ ಥಳಿಸಿದ್ದಾರೆ.

    ಚೇತನ ಪಾಟೀಲ ಅಂಬೆವಾಡಿ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ. ಹಾಲಿ ಅಧ್ಯಕ್ಷರ ಮಗ ವಿಕ್ರಂ ಯಳ್ಳೂರಕರ್ ಧಮ್ಕಿ ಹಾಕುತ್ತಿರುವ ಆಡಿಯೋ ‘ಪಬ್ಲಿಕ್ ಟಿವಿ’ಗೆ ಲಭ್ಯವಾಗಿದೆ.

    ನಾವು ಹೇಳಿದ ಹಾಗೆ ಕೆಲಸ ಮಾಡು. ಇಲ್ಲವಾದರೆ ಪರಿಣಾಮ ನೆಟ್ಟಗಿರಲ್ಲ. ನಾವೆಲ್ಲಾ ಸೇರಿ ನೀವು ಐವತ್ತು ಸಾವಿರ ಲಂಚ ಪಡೆಯುತ್ತಿದ್ದೀರಿ ಎಂದು ಹೇಳಿ ಏನ್ ಬೇಕಾದರೂ ಮಾಡಬಹುದು ಎಂದು ಧಮ್ಕಿ ಹಾಕಿದ್ದಾರೆ. ನಾಡದ್ರೋಹಿ ಎಂಇಎಸ್ ಗೂಂಡಾಗಳನ್ನು ತಕ್ಷಣವೇ ಬಂಧಿಸಬೇಕು ಹಾಗೂ ಎಂಇಎಸ್ ಸಂಘಟನೆಯನ್ನು ನಿಷೇಧಿಸಬೇಕೆಂದು ಕನ್ನಡಪರ ಸಂಘಟನೆಗಳಿAದ ಎಚ್ಚರಿಕೆ ರವಾನೆಯಾಗಿದೆ.

  • ಮಾ.22 ರಂದು ಕರ್ನಾಟಕ ಬಂದ್‌

    ಮಾ.22 ರಂದು ಕರ್ನಾಟಕ ಬಂದ್‌

    ಬೆಂಗಳೂರು: ಕನ್ನಡಿಗರ ಮೇಲೆ ಮರಾಠಿಗರ ದಬ್ಬಾಳಿಕೆ ಖಂಡಿಸಿ ಮತ್ತುಬೆಳಗಾವಿಯಲ್ಲಿ (Belagavi) ಎಂಇಎಸ್‌ ಪುಂಡರಿಗೆ ಕಡಿವಾಣ ಹಾಕುವಂತೆ  ಆಗ್ರಹಿಸಿ ವಿವಿಧ ಕನ್ನಡಪರ ಸಂಘಟನೆಗಳು ಮಾ.22 ಶನಿವಾರ ಕರ್ನಾಟಕ ಬಂದ್‌ಗೆ (Karnataka Bandh) ಕರೆ ನೀಡಿವೆ.

    ಇಂದು ಬೆಂಗಳೂರಿನಲ್ಲಿ ವಿವಿಧ ಕನ್ನಡ ಸಂಘಟನೆಗಳ ಸಭೆ ಸೇರಿ ಈ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಕನ್ನಡಕ್ಕಾಗಿ, ಕನ್ನಡಿಗರಿಗಾಗಿ ಮಾ.22 ರಂದು ಬೆಳಗ್ಗೆ 6 ರಿಂದ ಸಂಜೆ 6 ರವರೆಗೆ ಕರ್ನಾಟಕ ಬಂದ್ ನಡೆಯಲಿದೆ ವಾಟಾಳ್ ನಾಗರಾಜ್ (Vatal Nagaraj) ಹೇಳಿದ್ದಾರೆ.

    ಸುದ್ದಿಗೋಷ್ಠಿ ನಡೆಸಿದ ಮಾತನಾಡಿದ ಅವರು, ಮಾ.3 ರಂದು ಬೆಳಗ್ಗೆ 11 ಗಂಟೆಗೆ ರಾಜಭವನ ಮುತ್ತಿಗೆ ಹಾಕಲಿದ್ದೇವೆ. ಮಾ.7ಕ್ಕೆ ಬೆಳಗಾವಿ ಚಲೋ ಕೈಗೊಳ್ಳುತ್ತೇವೆ. ಮಾ.11 ರಂದು ಮೇಕೆದಾಟು ಯೋಜನೆಗೆ ಆಗ್ರಹಿಸಿ ಅತ್ತಿಬೆಲೆ ತಮಿಳುನಾಡು ಗಡಿ ಬಂದ್ ಮಾಡಿ ಪ್ರತಿಭಟಿಸುತ್ತೇವೆ. ಮಾ.14 ರಂದು ಮೈಸೂರು, ಮಂಡ್ಯ, ರಾಮನಗರ ಡಿಸಿ ಕಚೇರಿಗೆ ಮುತ್ತಿಗೆ ಹಾಕುತ್ತೇವೆ ಎಂದು ತಿಳಿಸಿದರು.

    ಜಿಲ್ಲಾಧಿಕಾರಿ ಸೇರಿದಂತೆ ಇಡೀ ಬೆಳಗಾವಿಯ ಎಲ್ಲಾ ಅಧಿಕಾರಿಗಳ ಬದಲಾವಣೆ ಆಗಬೇಕು. ಎಲ್ಲಾ ಕನ್ನಡ ಅಧಿಕಾರಿಗಳನ್ನ ಹಾಕಬೇಕು. ಎಂಇಎಸ್ ನಿಷೇಧ ಮಾಡಿ ಶಿವಸೇನೆ ಕಾರ್ಯಕರ್ತರನ್ನು ಗಡಿಪಾರು ಮಾಡಬೇಕು. ಸಾಂಬಾಜಿ ಪ್ರತಿಮೆ ತೆರವು ಮಾಡಬೇಕು. ಕೇಂದ್ರ ಸರ್ಕಾರ ರಾಜ್ಯಕ್ಕೆ ಮಲತಾಯಿ ಧೋರಣೆ ಮಾಡುತ್ತಿದೆ ಎಂದು ಆಕ್ರೋಶ ಹೊರಹಾಕಿದರು.

  • ಶಿವಸೇನೆ, ಮಹಾರಾಷ್ಟ್ರ ನವನಿರ್ಮಾಣ ಸೇನೆ ಕಾರ್ಯಕರ್ತರ ಪುಂಡಾಟ

    ಶಿವಸೇನೆ, ಮಹಾರಾಷ್ಟ್ರ ನವನಿರ್ಮಾಣ ಸೇನೆ ಕಾರ್ಯಕರ್ತರ ಪುಂಡಾಟ

    ಚಿಕ್ಕೋಡಿ: ಮಹಾರಾಷ್ಟ್ರದಲ್ಲಿ ಶಿವಸೇನೆ (Shiv Sena) ಹಾಗೂ ಮಹಾರಾಷ್ಟ್ರ ನವನಿರ್ಮಾಣ ಸೇನೆ ಕಾರ್ಯಕರ್ತರ ಪುಂಡಾಟ ಮುಂದುವರೆದಿದೆ.

    ಮಹಾರಾಷ್ಟ್ರದ ಪುಣೆಯ ಸ್ವಾರಗೇಟ್‌ ನಲ್ಲಿ KSRTC ಅಂಬಾರಿ ಬಸ್ ಮೇಲೆ ಕಪ್ಪು ಮಸಿ ಬಳಿದು ಪುಂಡಾಟಿಕೆ ಪ್ರದರ್ಶಿಸಿದ್ದಾರೆ. ಜಯ ಮಹಾರಾಷ್ಟ್ರ ಮರಾಠ ಮಾನುಸ ಎಂದು ಬರಹ ಬರೆದು ಪುಂಡಾಟ ಮೆರೆದಿದ್ದಾರೆ‌.

    ನಿನ್ನೆ ಪುಣೆಗೆ ತೆರಳಿದ್ದ ಬಸ್, ವಾಪಸ್ ಬರುವಾಗ ಮಸಿ ಬಳೆದು ಪುಂಡಾಟ ಮೆರೆದಿದ್ದಾರೆ‌‌. ಇನ್ನೂ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಮಹಾರಾಷ್ಟ್ರ ಸಾರಿಗೆ ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಳಿಸುವಂತೆ ಮಹಾರಾಷ್ಟ್ರ ಸಾರಿಗೆ ಸಚಿವ ಪ್ರತಾಪ ಸರನಾಯಿ ಆದೇಶಿಸಿದ್ದಾರೆ. ಇದನ್ನೂ ಓದಿ: ಕನ್ನಡದಲ್ಲಿ ಮಾತನಾಡು ಎಂದಿದ್ದಕ್ಕೆ ಹಲ್ಲೆ – ಈಗ ನಿರ್ವಾಹಕನ ಮೇಲೆಯೇ ಪೋಕ್ಸೋ ಕೇಸ್‌ ದಾಖಲು

    ಎರಡು ಕಡೆ ಪರಿಸ್ಥಿತಿ ಸರಿ ಆಗುವವರೆಗೆ ಬಸ್ ಸಂಚಾರ ಸ್ಥಗಿತ ಮಾಡುವಂತೆ ಆದೇಶ ಮಾಡಿದ್ದಾರೆ. ಇದನ್ನೂ ಓದಿ: ಬೆಳಗಾವಿ: ಮರಾಠಿ ಬರಲ್ಲ.. ಕನ್ನಡದಲ್ಲಿ ಹೇಳಿ ಎಂದಿದ್ದಕ್ಕೆ ಬಸ್ ಕಂಡಕ್ಟರ್ ಮೇಲೆ ಹಲ್ಲೆ

  • ರಾಜ್ಯೋತ್ಸವದಂದು ಕರಾಳ ದಿನ ಆಚರಿಸಿದ ಎಂಇಎಸ್ ಪುಂಡರ ವಿರುದ್ಧ ಕೇಸ್

    ರಾಜ್ಯೋತ್ಸವದಂದು ಕರಾಳ ದಿನ ಆಚರಿಸಿದ ಎಂಇಎಸ್ ಪುಂಡರ ವಿರುದ್ಧ ಕೇಸ್

    ಬೆಳಗಾವಿ: ಕರ್ನಾಟಕ ರಾಜ್ಯೋತ್ಸವಕ್ಕೆ (Karnataka Rajyotsava) ಪ್ರತಿಯಾಗಿ ಎಂಇಎಸ್ (MES) ನಡೆಸಿದ ಕರಾಳ ದಿನಾಚರಣೆ ಸಂಬಂಧ 45ಕ್ಕೂ ಹೆಚ್ಚು ಎಂಇಎಸ್ ನಾಯಕರು ಹಾಗೂ ಕಾರ್ಯಕರ್ತರ ವಿರುದ್ಧ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಜಿಲ್ಲಾಡಳಿತ ಕರಾಳ ದಿನಾಚರಣೆಗೆ ಅನುಮತಿ ನೀಡದಿದ್ದರೂ ಮಹಾರಾಷ್ಟ್ರ ಏಕೀಕರಣ ಸಮಿತಿಯ ಮನವಿಗೆ ಸ್ಪಂದಿಸಿ ಕಾರ್ಯಕರ್ತರು ಬೀದಿಗಿಳಿದು ಬೃಹತ್ ಪ್ರತಿಭಟನೆ ನಡೆಸಿದ್ದರು.  ಇದನ್ನೂ ಓದಿ: ನಾಲ್ಕು ಅನುಮಾನಗಳಿಗೆ ಕಾರಣವಾದ ಗುರುಪ್ರಸಾದ್ ಸಾವು!

    ಕರ್ನಾಟಕ ಸರ್ಕಾರವು ಕಾಲಕಾಲಕ್ಕೆ ನಾಯಕರು ಮತ್ತು ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲಿಸುವ ಮೂಲಕ ಗಡಿ ಒಡೆಯಲು ಪ್ರಯತ್ನಿಸುತ್ತಿದೆ. ಆದರೆ ಕರ್ನಾಟಕ ಸರ್ಕಾರವು ಈ ಬಾರಿ ಮರಾಠಿ ಭಾಷಿಕ ಪತ್ರಕರ್ತರು ಮತ್ತು ವಕೀಲರ ವಿರುದ್ಧವೂ ಪ್ರಕರಣಗಳನ್ನು ದಾಖಲಿಸಿದೆ ಎಂದು ಸಮಿತಿ ಈಗ ಆರೋಪ ಮಾಡಿದೆ.

     

    ಮಾಜಿ ಶಾಸಕ ಮನೋಹರ ಕಿಣೇಕರ, ಮಾಜಿ ಮೇಯರ್ ಮಾಲೋಜಿ ಅಷ್ಟೇಕರ, ಪ್ರಕಾಶ ಮರಗಾಳೆ, ರಮಾಕಾಂತ ಕೊಂಡುಸ್ಕರ್, ರಂಜಿತ್ ಚವ್ಹಾಣ, ಅಮರ ಯಳೂರಕರ, ಗಜಾನನ ಪಾಟೀಲ, ನೇತಾಜಿ ಜಾಧವ, ಅಂಕುಶ ಕೇಸರಕರ, ವಿಕಾಸ ಕಲಘಟಗಿ, ಮದನ ಬಾಮನೆ, ಸಚಿನ ಕೇಳೇಕರ, ಪ್ರಶಾಂತ ಭಾಮನೆ, ಪ್ರಶಾಂತ್, ಕಿರಣ್ ಗಾವಡೆ, ಮಹಾದೇವ ಪಾಟೀಲ, ಶುಭಂ ಶೆಲ್ಕೆ, ರೇಣು ಕಿಲ್ಲೇಕರ್, ಸರಸ್ವತಿ ಪಾಟೀಲ, ಸರಿತಾ ಪಾಟೀಲ, ಕಿರಣ ಹುದ್ದಾರ್, ದತ್ತಾ ಉಘಾಡೆ, ಶ್ರೀಕಾಂತ ಕದಂ, ಚಂದ್ರಕಾಂತ ಕೊಂಡುಸ್ಕರ, ಸಂತೋಷ ಕೃಷ್ಣಾಚೆ, ಗುಂಡು ಕದಂ, ಸುನೀಲ ಬಾಳೇಕುಂದ್ರಿ, ಗಣೇಶ ದಡ್ಡಿಕರ, ಪ್ರಕಾಶ ಶಿರೋಲ್ಕರ್, ಆರ್. ಎಂ. ಚೌಗುಲೆ, ಸುಧೀರ ಚವ್ಹಾಣ, ಮಲ್ಲಪ್ಪ ಪಾಟೀಲ, ನಾಗೇಶ ಪಾಟೀಲ, ಸೂರಜ್ ಯಳ್ಳೂರಕರ, ಶ್ರೀಕಾಂತ ಚವ್ಹಾಣ, ಸದಾ ಚವ್ಹಾಣ, ಕಿರಣ ಮೋದಗೇಕರ, ಶಿವಾಜಿ ಮಂಡೋಳಕರ ಸೇರಿದಂತೆ ಹಲವು ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ:ಆತ್ಮಹತ್ಯೆ ಮಾಡಿಕೊಂಡ ಪತಿ ಗುರುಪ್ರಸಾದ್‌ ನೋಡಲು ಕಣ್ಣೀರಿಡುತ್ತಲೇ ಧಾವಿಸಿದ 2ನೇ ಪತ್ನಿ

     

  • ಎಂಇಎಸ್ ಭಯೋತ್ಪಾದನಾ ಸಂಘಟನೆ: ಬೆಳಗಾವಿಯಲ್ಲಿ ಕರವೇ ಆಕ್ರೋಶ

    ಎಂಇಎಸ್ ಭಯೋತ್ಪಾದನಾ ಸಂಘಟನೆ: ಬೆಳಗಾವಿಯಲ್ಲಿ ಕರವೇ ಆಕ್ರೋಶ

    ಬೆಳಗಾವಿ: ರಾಜ್ಯೋತ್ಸವದ (Kannada Rajyotsava) ದಿನದಂದು ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿಗೆ (MES) ಕರಾಳ ದಿನಾಚರಣೆ ಆಚರಿಸಲು ಅನುಮತಿ ಕೊಡಬಾರದೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯಿಂದ (Karnataka Rakshana Vedike) ಇಂದು ನಗರ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.

    ನವೆಂಬರ್ 1 ರಂದು ಕರ್ನಾಟಕ ರಾಜ್ಯೋತ್ಸವದ ದಿನ ಬೆಳಗಾವಿ (Belagavi) ಸೇರಿದಂತೆ ರಾಜ್ಯಾದ್ಯಂತ ಕನ್ನಡದ ಹಬ್ಬವನ್ನು ಆಚರಿಸುವ ಸಂದರ್ಭದಲ್ಲಿ ಬೆಳಗಾವಿಯಲ್ಲಿ ನಾಡದ್ರೋಹಿ ಎಂಇಎಸ್ ಕರಾಳ ದಿನಾಚರಣೆ ಆಚರಿಸುತ್ತಿದೆ. ಕನ್ನಡದ ನೆಲದಲ್ಲಿ ಕನ್ನಡಿಗರಿಗೆ ದ್ರೋಹ ಬಗೆಯುವ ಕರಾಳ ದಿನಾಚರಣೆಗೆ ಈ ವರ್ಷ ಯಾವುದೇ ಕಾರಣಕ್ಕೂ ಬೆಳಗಾವಿ ನಗರ ಪೊಲೀಸ್ ಇಲಾಖೆಯು ಅನುಮತಿ ನೀಡಬಾರದು. ಅನುಮತಿ ನೀಡುವದಿಲ್ಲ ಎಂದು ಸುಳ್ಳು ಹೇಳಿ ಪೊಲೀಸ್ ಇಲಾಖೆಯು ಮಧ್ಯರಾತ್ರಿ ಅನುಮತಿ ನೀಡುವ ಮೂಲಕ ಕನ್ನಡಿಗರಿಗೆ ಅನ್ಯಾಯ ಮಾಡುತ್ತಾ ಬಂದಿರುತ್ತದೆ. ಈ ಕುರಿತು ನಾವು ರಾಜ್ಯದ ಗೃಹ ಮಂತ್ರಿಗಳಿಗೂ ಮತ್ತು ಮುಖ್ಯಮಂತ್ರಿಗಳಿಗೂ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸುತ್ತೇವೆ ಎಂದು ತಿಳಿಸಿದರು.

    ರಾಜ್ಯೋತ್ಸವದ ದಿನದಂದು ಕರಾಳ ದಿನಾಚರಣೆ ಮಾಡುತ್ತೇವೆ ಎಂದು ತಮ್ಮ ಬಳಿ ಬರುವ ಎಂಈಎಸ್ ನಾಯಕರನ್ನು ರಾಜ್ಯದಿಂದ ಗಡಿಪಾರು ಮಾಡಬೇಕು. ಅವರನ್ನು ಮುಂಜಾಗ್ರತವಾಗಿ ಬಂಧಿಸುವ ಮೂಲಕ ಕನ್ನಡದ ನೆಲದಲ್ಲಿ ಕನ್ನಡದ ಹಿತ ಕಾಯಬೇಕೆಂದು ಒತ್ತಾಯಿಸಿದರು.

     

  • ನಾಮಫಲಕಗಳಲ್ಲಿ ಕನ್ನಡ ಬಳಕೆ ಕಡ್ಡಾಯ – ಎಂಇಎಸ್‌ಗೆ ಬೆಳಗಾವಿ ಪಾಲಿಕೆ ಆಯುಕ್ತರ ಶಾಕ್!

    ನಾಮಫಲಕಗಳಲ್ಲಿ ಕನ್ನಡ ಬಳಕೆ ಕಡ್ಡಾಯ – ಎಂಇಎಸ್‌ಗೆ ಬೆಳಗಾವಿ ಪಾಲಿಕೆ ಆಯುಕ್ತರ ಶಾಕ್!

    ಬೆಳಗಾವಿ: ನಾಡದ್ರೋಹಿ ಎಂಇಎಸ್‌ಗೆ (MES) ಬೆಳಗಾವಿ ಪಾಲಿಕೆ ಆಯುಕ್ತರು ಶಾಕ್ ಕೊಟ್ಟಿದ್ದಾರೆ. ನಾಮಫಲಕಗಳಲ್ಲಿ ಕನ್ನಡ ಕಡ್ಡಾಯಗೊಳಿಸಲಾಗಿದೆ. ಅಲ್ಲದೇ ‘ಬೆಳಗಾವಿ’ ಎಂಬ ಪದವನ್ನೇ ಬಳಸಬೇಕು ಎಂದು ಸೂಚನೆ ನೀಡಿದೆ.

    ಬೆಳಗಾವಿ (Belagavi) ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ ಅವರು ಈ ಆದೇಶ ಹೊರಡಿಸಿದ್ದಾರೆ. ಬೆಳಗಾಂವ, ಬೆಳಗಾಮ್ ಅಂತಾ ಬರೆದಿರೋ ಅಂಗಡಿ ಮಾಲೀಕರಿಗೆ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ನನಗೆ 92 ವಯಸ್ಸಾಯ್ತು.. ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡಲ್ಲ: ಹೆಚ್‌ಡಿಡಿ

    ‘ಬೆಳಗಾವಿ’ ಅಂತಾ ಬಳಸಲು ಹಿಂದೇಟು ಹಾಕುತ್ತಾ ಬಂದಿದ್ದ ನಾಡದ್ರೋಹಿಗಳಿಗೆ ಇದರಿಂದ ಶಾಕ್ ಆಗಿದೆ. ಸರ್ಕಾರದ ಆದೇಶವನ್ನ ಕಟ್ಟುನಿಟ್ಟಾಗಿ ಪಾಲಿಸಲು 2 ಸಾವಿರ ಅಂಗಡಿಗಳಿಗೆ ನೋಟಿಸ್ ನೀಡಲಾಗಿದೆ.

    ಆದೇಶ ಪಾಲಿಸದವರ ಅಂಗಡಿ ಲೈಸನ್ಸ್ ರದ್ದು ಮಾಡುವ ಎಚ್ಚರಿಕೆ ನೀಡಲಾಗಿದೆ. ಬೆಳಗಾವಿ ಮಹಾನಗರದಲ್ಲಿ ಅನೇಕ ವರ್ಷಗಳಿಂದ ಕನ್ನಡ ಹೋರಾಟಗಾರ ಒತ್ತಾಯವಿತ್ತು. ಸರ್ಕಾರದ ಆದೇಶದಂತೆ ಶೇ.60 ರಷ್ಟು ನಾಮಫಲಕದಲ್ಲಿ ಕನ್ನಡ ಬರೆಸಬೇಕು ಎಂದಿದೆ. ಇದನ್ನೂ ಓದಿ: ಮೆಕ್ಕೆಜೋಳದಲ್ಲಿ ಅರಳಿದ ರಾಮಮಂದಿರ – ಭಗವಾನ್ ರಾಮನ ದರ್ಶನಕ್ಕೆ ಬನ್ನಿ..

    ಬೆಳಗಾAವ, ಬೆಳಗಾಮ್ ಬದಲಾಗಿ ಬೆಳಗಾವಿ ಬಳಸುವಂತೆ ಕನ್ನಡಪರ ಹೋರಾಟಗಾರರು ಪ್ರತಿಭಟನೆ ನಡೆಸಿದ್ದರು. ಈಗ ಸರ್ಕಾರದ ಆದೇಶ ಹಾಗೂ ಕನ್ನಡಿಗರ ಬೇಡಿಕೆ ಅನುಷ್ಠಾನಕ್ಕೆ ಪಾಲಿಕೆ ಆಯಕ್ತರೇ ಫೀಲ್ಡಿಗಿಳಿದು ಕ್ರಮಕೈಗೊಂಡಿದ್ದಾರೆ.

  • ಕರಾಳ ದಿನ ಆಚರಿಸಿದ MES ಪುಂಡರಿಗೆ ಬಿಸಿ ಮುಟ್ಟಿಸಿದ ಪೊಲೀಸರು – 18 ಮಂದಿ ವಿರುದ್ಧ FIR

    ಕರಾಳ ದಿನ ಆಚರಿಸಿದ MES ಪುಂಡರಿಗೆ ಬಿಸಿ ಮುಟ್ಟಿಸಿದ ಪೊಲೀಸರು – 18 ಮಂದಿ ವಿರುದ್ಧ FIR

    ಬೆಳಗಾವಿ: ಜಿಲ್ಲೆಯ ಮಹಾರಾಷ್ಟ್ರ ಗಡಿ ಭಾಗದಲ್ಲಿ MES ಪುಂಡರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಕನ್ನಡ ರಾಜ್ಯೋತ್ಸವಕ್ಕೆ (Kannada Rajyotsava) ವಿರುದ್ಧವಾಗಿ ಕರಾಳ ದಿನಾಚರಣೆ ಮಾಡಿದ 18 ಮಂದಿ ಎಂಇಎಸ್ ಪುಂಡರ ವಿರುದ್ಧ ಕೇಸ್ ದಾಖಲಾಗಿದೆ.

    ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ (Market Police Station) ಎಂಇಎಸ್ ಕಿಡಿಗೇಡಿಗಳ ವಿರುದ್ಧ FIR ದಾಖಲಾಗಿದೆ. ಕನ್ನಡ ರಾಜ್ಯೋತ್ಸವ ದಿನದಂದು ಕರಾಳ ದಿನ ಆಚರಿಸಿ ನಾಡದ್ರೋಹ ಘೋಷಣೆ ಕೂಗಿದ್ದ 18 ಜನರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಇದನ್ನೂ ಓದಿ: 5 ವರ್ಷ ಸಿಎಂ ಆಗಿ ಮುಂದುವರಿಯೋ ವಿಚಾರ ಗೊತ್ತಿರೋದು ಸಿದ್ದರಾಮಯ್ಯ, ಡಿಸಿಎಂಗೆ ಮಾತ್ರ: ಪರಂ

    ಜಿಲ್ಲಾಡಳಿತದಿಂದ ಎಂಇಎಸ್ ಕರಾಳ ದಿನಾಚರಣೆಗೆ ಅನುಮತಿ ನಿರಾಕರಿಸಲಾಗಿತ್ತು‌. ಅನುಮತಿ ಇಲ್ಲದಿದ್ದರೂ ನಗರದಲ್ಲಿ ಕರಾಳ ದಿನಾಚರಣೆ ಹೆಸರಲ್ಲಿ ಮೆರವಣಿಗೆ ಮಾಡಿ ಬೆಳಗಾವಿ, ಬೀದರ್, ಭಾಲ್ಕಿ, ನಿಪ್ಪಾಣಿ, ಕಾರವಾರ ಸಂಯುಕ್ತ ಮಹಾರಾಷ್ಟ್ರ ಅಂತ ನಾಡದ್ರೋಹಿ ಘೋಷಣೆ ಕೂಗಿ ಮೊಂಡತನ ಪ್ರದರ್ಶನ ಮಾಡಿದ್ದರು. ಇದನ್ನೂ ಓದಿ: ಶಮಿ ಬೆಂಕಿ ಬೌಲಿಂಗ್‌ಗೆ ನೀಲಿ ತಾರೆ ಫಿದಾ – ಕೇಂದ್ರ ಲಸ್ಟ್‌ ರಿಯಾಕ್ಷನ್‌ ಸಿಕ್ಕಾಪಟ್ಟೆ ವೈರಲ್‌

    ನಾಡದ್ರೋಹಿ ಘೋಷಣೆ ಕೂಗಿದ ಎಂಇಎಸ್‌ನ ಮಾಲೋಜಿರಾವ್ ಅಷ್ಟೇಕರ್, ಮನೋಹರ ಕಿಣೇಕರ, ರಂಜಿತ್ ಚವ್ಹಾಣ, ಸರಿತಾ ಪಾಟೀಲ, ಸಾರಿಕಾ ಪಾಟೀಲ, ಅಮರ, ಯಳ್ಳೂರಕರ್ ಪ್ರಕಾಶ ಮರಗಾಲಿ, ರವಿ ಸಾಳುಂಕೆ, ಅಂಕುಶ ಕೇಸರಕರ್ ಸೇರಿದಂತೆ 18 ಜನರ ವಿರುದ್ಧ ಕೇಸ್ ದಾಖಲಾಗಿದೆ. ಇದನ್ನೂ ಓದಿ: ಟೆಲಿವಿಷನ್ ಪ್ರೀಮಿಯರ್ ಲೀಗ್ ಸೀಸನ್-3: ಶುಭ ಕೋರಿದ ಬಸವರಾಜ ಹೊರಟ್ಟಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕನ್ನಡ ರಾಜ್ಯೋತ್ಸವಕ್ಕೆ ವಿರುದ್ಧವಾಗಿ MESನಿಂದ ಕರಾಳ ದಿನ ಆಚರಣೆ

    ಕನ್ನಡ ರಾಜ್ಯೋತ್ಸವಕ್ಕೆ ವಿರುದ್ಧವಾಗಿ MESನಿಂದ ಕರಾಳ ದಿನ ಆಚರಣೆ

    ಚಿಕ್ಕೋಡಿ: ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವಕ್ಕೆ (Kannada Rajyotsava) ವಿರುದ್ಧವಾಗಿ ಮಹಾರಾಷ್ಟ್ರ ಏಕೀಕರಣ ಸಮಿತಿಯಿಂದ (MES) ಕರಾಳ ದಿನ ಆಚರಿಸಲಾಗುತ್ತಿದೆ.

    ಬೆಳಗಾವಿ (Belagavi) ಜಿಲ್ಲಾಡಳಿತ ನಿಷೇಧದ ಮಧ್ಯೆಯೂ ಕರಾಳ ದಿನಾಚರಣೆಗೆ ಎಂಇಎಸ್ ತಯಾರಿ ನಡೆಸಿದ್ದು, ಶಿವಸೇನೆ ಉದ್ಧವ್ ಠಾಕ್ರೆ ಬಣದಿಂದ ಬೆಳಗಾವಿ ಚಲೋಗೆ ಕರೆ ನೀಡಲಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿಲ್ಲ ಕನ್ನಡ ಶಾಲೆಗಳಿಗೆ ಬೇಡಿಕೆ- ಕಾಫಿನಾಡಲ್ಲಿ ಒಂದೇ ವರ್ಷಕ್ಕೆ 21 ಶಾಲೆಗಳು ಬಂದ್

    ಶಿವಸೇನೆ ಉದ್ಧವ್ ಠಾಕ್ರೆ ಬಣದ ಕೊಲ್ಹಾಪುರ ಜಿಲ್ಲಾಧ್ಯಕ್ಷ ವಿಜಯ್ ದೇವಣೆ, ಮಹಾರಾಷ್ಟ್ರದ ಕೊಲ್ಹಾಪುರದಿಂದ ಬೆಳಗಾವಿ ಚಲೋಗೆ ಕರೆ ನೀಡಿದ್ದಾರೆ. ಬೆಳ್ಳಂಬೆಳಗ್ಗೆ ಕೊಲ್ಹಾಪುರ ಜಿಲ್ಲೆ ಕಾಗಲ್ ಬಳಿ ಜಮಾವಣೆಯಾಗಲು ಕರೆ ನೀಡಿದ್ದು, ಈಗಾಗಲೇ ಚಲೋ ಯಾತ್ರೆ ಆರಂಭಿಸಿದ್ದಾರೆ. ಇದನ್ನೂ ಓದಿ: ನನ್ನ ಸಿ.ಡಿ ಮಾಡಿಸಿದ್ದೇ ಡಿಕೆಶಿ, ಪ್ರಕರಣ ಸಿಬಿಐಗೆ ವಹಿಸಿ: ಜಾರಕಿಹೊಳಿ ಆಗ್ರಹ

    ಭಗವಾ ಧ್ವಜದೊಂದಿಗೆ ಮಹಾರಾಷ್ಟ್ರದ ಕಾಗಲ್ ಲಕ್ಷ್ಮಿಟೇಕ್ ಬಳಿ ಆಗಮಿಸುವಂತೆ ಶಿವಸೇನೆ ಕಾರ್ಯಕರ್ತರಿಗೆ ಕರೆ ನೀಡಲಾಗಿದೆ. ಕಾಗಲ್‌ನಿಂದ ಕೊಗನೊಳ್ಳಿ ಟೋಲ್‌ಗೇಟ್ ಮಾರ್ಗವಾಗಿ ಬೆಳಗಾವಿಗೆ ಆಗಮಿಸಲು ಶಿವಸೇನೆ ನಿರ್ಧರಿಸಿದ್ದು, ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿರುವ ಕೊಗನೊಳ್ಳಿ ಟೋಲ್‌ಗೇಟ್ ಬಳಿಯೇ ಅವರನ್ನ ತಡೆಯಲು ಪೊಲೀಸರು ಬಿಗಿ ಭದ್ರತಾ ವ್ಯವಸ್ಥೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿಲ್ಲ ಕನ್ನಡ ಶಾಲೆಗಳಿಗೆ ಬೇಡಿಕೆ- ಕಾಫಿನಾಡಲ್ಲಿ ಒಂದೇ ವರ್ಷಕ್ಕೆ 21 ಶಾಲೆಗಳು ಬಂದ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]