Tag: mes

  • ಮೂರನೇ ಬಾರಿಗೆ ಛತ್ರಪತಿ ಶಿವಾಜಿ ಪ್ರತಿಮೆಗೆ ಎಂಇಎಸ್‌ನಿಂದ ಪೂಜೆ

    ಮೂರನೇ ಬಾರಿಗೆ ಛತ್ರಪತಿ ಶಿವಾಜಿ ಪ್ರತಿಮೆಗೆ ಎಂಇಎಸ್‌ನಿಂದ ಪೂಜೆ

    ಬೆಳಗಾವಿ: ಗ್ರಾಮೀಣ ಕ್ಷೇತ್ರದಲ್ಲಿ ರಾಜಹಂಸಗಡ ಕೋಟೆಯ ರಾಜಕೀಯ ಜೋರಾಗಿದ್ದು ಬಿಜೆಪಿ, ಕಾಂಗ್ರೆಸ್ ಬಳಿಕ ಈಗ ಎಂಇಎಸ್ (MES) ಎಂಟ್ರಿಯಾಗಿದೆ. ಮಹಾರಾಷ್ಟ್ರದ (Maharashtra) ರಾಯಗಡದಿಂದ ಅರ್ಚಕರನ್ನು ಕರೆತಂದು ಎಂಇಎಸ್ ಪುಂಡರು ರಾಜಹಂಸಗಡ ಕೋಟೆಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

    ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ರಾಜಹಂಸಗಡ ಕೋಟೆಯಲ್ಲಿ ಈಗಾಗಲೇ ಎರಡೆರಡು ಬಾರಿ ಪ್ರತಿಮೆ ಲೋಕಾರ್ಪಣೆ ಆಗಿದೆ. ಇದರಿಂದ ಶಿವಾಜಿ ಪ್ರತಿಮೆಗೆ (Chhatrapati Shivaji Statue) ಅಪಮಾನ ಆಗಿದೆ ಎಂದು ಆರೋಪಿಸಿ ಶಿವಾಜಿ ಪ್ರತಿಮೆ ಶುದ್ಧೀಕರಣ ಹೆಸರಲ್ಲಿ ಎಂಇಎಸ್ ವತಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದನ್ನೂ ಓದಿ: ಬಿಜೆಪಿ ಶಾಸಕ ಅನಿಲ್ ಬೆನಕೆಗೆ ನಡು ರಸ್ತೆಯಲ್ಲೇ ಮತದಾರರಿಂದ ಕ್ಲಾಸ್

    ಮಹಾರಾಷ್ಟ್ರದ ರಾಯಗಡದಿಂದ ಅರ್ಚಕರನ್ನು ಕರೆತಂದು ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಎದುರು ಉತ್ಸವ ಮೂರ್ತಿಗೆ ಪೂಜೆ ಮಾಡಲಾಯಿತು. ಮಹಾರಾಷ್ಟ್ರದ ಪಂಡರಪುರದ ಚಂದ್ರಭಾಗಾ, ಭೀಮಾ ಭಾಮಾ ಇಂದ್ರಾಯಣಿ, ರಾಜಹಂಸಗಡ, ರಾಮಶೇಜ ಸಾಲ್ಹೇರ, ಪನ್ಹಾಳಗಡ, ರಾಯಗಡ, ಗಂಗಾಸಾಗರದಿಂದ ನೀರು ತಂದು ಶಿವಾಜಿ ಉತ್ಸವ ಮೂರ್ತಿಗೆ ಪೂಜೆ ಮಾಡಲಾಯಿತು.

    ಇತ್ತ ಶಿವಾಜಿ ಪ್ರತಿಮೆ ಎದುರು ಯಾವುದೇ ರೀತಿಯ ಪೂಜೆಗೆ ಅವಕಾಶ ಇಲ್ಲ ಎಂದು ಜಿಲ್ಲಾಡಳಿತ ಸೂಚನಾ ಫಲಕ ಹಾಕಿದೆ. ಮತ್ತೊಂದೆಡೆ ಎಂಇಎಸ್ ವತಿಯಿಂದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಎದುರು ಪೂಜಾ ಕೈಂಕರ್ಯ ನಡೆಸಲಾಗಿದೆ. ಇದನ್ನೂ ಓದಿ: ಡಿಸಿ ಕಚೇರಿ ಮೇಲೆ ಆಜಾನ್ ಕೂಗಿದ ಕೇಸ್ – ಎಚ್ಚರಿಕೆ ನೀಡಿ ಯುವಕನಿಗೆ ಜಾಮೀನು ನೀಡಿದ ಪೊಲೀಸರು

  • ಶಿವಾಜಿ ಪ್ರತಿಮೆಯ ಕಾಂಗ್ರೆಸ್, ಬಿಜೆಪಿ ಕ್ರೆಡಿಟ್ ವಾರ್‌ಗೆ MES ಎಂಟ್ರಿ – ಕ್ಷೀರಾಭಿಷೇಕಕ್ಕೆ ನಿರ್ಧಾರ

    ಶಿವಾಜಿ ಪ್ರತಿಮೆಯ ಕಾಂಗ್ರೆಸ್, ಬಿಜೆಪಿ ಕ್ರೆಡಿಟ್ ವಾರ್‌ಗೆ MES ಎಂಟ್ರಿ – ಕ್ಷೀರಾಭಿಷೇಕಕ್ಕೆ ನಿರ್ಧಾರ

    ಬೆಳಗಾವಿ: ರಾಜಹಂಸಗಡ ಕೋಟೆ ಶಿವಾಜಿ ಪ್ರತಿಮೆಯ ಬಿಜೆಪಿ (BJP), ಕಾಂಗ್ರೆಸ್ (Congress) ಕ್ರೆಡಿಟ್ ಪಾಲಿಟಿಕ್ಸ್‌ಗೆ ಎಂಇಎಸ್ (MES) ಎಂಟ್ರಿಯಾಗಿದೆ.

    ರಾಜಹಂಸಗಡ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ (Chhatrapati Shivaji Maharaj Statue) ವಾರ್ ಮುಂದುವರಿದಿದ್ದು ಶಿವಾಜಿ ಪ್ರತಿಮೆಗೆ ಇಂದು ಎಂಇಎಸ್ ಮುಖಂಡರು ಕ್ಷೀರಾಭಿಷೇಕ ಮಾಡಲು ನಿರ್ಧರಿಸಿದ್ದಾರೆ. ಕಾಂಗ್ರೆಸ್, ಬಿಜೆಪಿ ನಾಯಕರಿಂದ ಛತ್ರಪತಿ ಶಿವಾಜಿ ಮಹಾರಾಜರಿಗೆ ಅಪಮಾನ ಆರೋಪಿಸಿ ಭಾನುವಾರ ಎಂಇಎಸ್‌ನಿಂದ ರಾಜಹಂಸಗಡದ (Rajahamsagada) ಶಿವಾಜಿ ಪ್ರತಿಮೆ ಶುದ್ಧೀಕರಣ ಕಾರ್ಯಕ್ರಮ ನಡೆಸಲಾಗುತ್ತಿದೆ.

    ಈಗಾಗಲೇ ಎರಡು ಬಾರಿ ಲೋಕಾರ್ಪಣೆ ಆದರೂ ವಿಧಿವಿಧಾನವಾಗಿ ಆಗಿಲ್ಲ ಎಂದು ಆರೋಪಿಸಿ ಎಂಇಎಸ್ ಮುಖಂಡರು ಇಂದು ಶಿವಾಜಿ ಮಹಾರಾಜರ ಪ್ರತಿಮೆ ಶುದ್ಧೀಕರಣ ಹೆಸರಲ್ಲಿ ಕಾರ್ಯಕ್ರಮ ಆಯೋಜನೆಗೊಂಡಿದೆ. ರಾಜಹಂಸಗಡ ಕೋಟೆಯ ಪ್ರವೇಶ ದ್ವಾರದಿಂದ ರಾಜಹಂಸಗಡ ಕೋಟೆವರೆಗೆ ಮೆರವಣಿಗೆ ನಡೆಯಲಿದ್ದು, ಬಳಿಕ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಬಳಿಯ ಚಿಕ್ಕ ಮೂರ್ತಿಗೆ ಕ್ಷೀರಾಭಿಷೇಕಕ್ಕೆ ನಿರ್ಧಾರ ಮಾಡಲಾಗಿದೆ. ಇತ್ತೀಚೆಗಷ್ಟೇ ರಾಜಹಂಸಗಡ ಕೋಟೆಯ ಶಿವಾಜಿ ಪ್ರತಿಮೆ ಎದುರು ನಿಂತು ಎಂಇಎಸ್ ಮುಖಂಡರು ನಾಡದ್ರೋಹಿ ಘೋಷಣೆ ಕೂಗಿದ್ದರು‌. ಹೀಗಾಗಿ ಎಂಇಎಸ್‌ನ ಇಂದಿನ ಕಾರ್ಯಕ್ರಮಕ್ಕೆ ಷರತ್ತುಬದ್ಧ ಅನುಮತಿಯನ್ನು ಬೆಳಗಾವಿ ಜಿಲ್ಲಾಡಳಿತ ನೀಡಿದೆ. ಇದನ್ನೂ ಓದಿ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ನಿವಾಸದ ಮೇಲೆ ವಾಣಿಜ್ಯ ತೆರಿಗೆ ಅಧಿಕಾರಿಗಳ ದಾಳಿ – ಎಫ್‌ಐಆರ್ ದಾಖಲು

    ಶಿವಾಜಿ ಮಹಾರಾಜರ ಬೃಹತ್ ಪ್ರತಿಮೆಗೆ ಕ್ಷೀರಾಭಿಷೇಕ ನೆರವೇರಿಸದಂತೆ ಷರತ್ತು ಹಾಕಲಾಗಿದ್ದು, ಇಂದು ರಾಜಹಂಸಗಡ ಕೋಟೆಯಲ್ಲಿ ವಿವಿಧ ಕಾರ್ಯಕ್ರಮ ಆಯೋಜನೆಗೆ ನಿರ್ಧರಿಸಲಾಗಿದೆ. ಇತ್ತೀಚೆಗೆ ರಾಜಹಂಸಗಡ ಕೋಟೆಯಲ್ಲಿ ನಾಡದ್ರೋಹಿ ಘೋಷಣೆ ಕೂಗಿದ್ದ ಎಂಇಎಸ್ ಮುಖಂಡರ ವಿರುದ್ಧ ಕನ್ನಡಪರ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಸಿದ್ದು ಪರ ಬ್ಯಾಟ್‌ ಬೀಸಿದ ಬಿಜೆಪಿ ಶಾಸಕ ರಾಜುಗೌಡ

  • ಪೊಲೀಸರ ವಿರುದ್ಧ ಭುಗಿಲೆದ್ದ ಕನ್ನಡಿಗರ ಆಕ್ರೋಶ

    ಪೊಲೀಸರ ವಿರುದ್ಧ ಭುಗಿಲೆದ್ದ ಕನ್ನಡಿಗರ ಆಕ್ರೋಶ

    ಬೆಳಗಾವಿ: ಕಳೆದ ವರ್ಷದ ಎಂಇಎಸ್ (MES) ಮುಖಂಡ ದೀಪಕ್ ದಳವಿ ಮುಖಕ್ಕೆ ಕಪ್ಪು ಮಸಿ ಬಳಿದ ಇಬ್ಬರು ಕನ್ನಡಪರ ಹೋರಾಟಗಾರರ ಮೇಲೆ ನಗರ ಪೊಲೀಸರು ರೌಡಿಶೀಟ್ ಓಪನ್ ಮಾಡಿದ್ದು, ಚುನಾವಣೆ ಹೊಸ್ತಿಲಲ್ಲಿ ರಾಜ್ಯಸರ್ಕಾರದ ಹಾಗೂ ಬೆಳಗಾವಿ (Belagavi) ಪೊಲೀಸರ (Police) ನಡೆಗೆ ಕನ್ನಡಿಗರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ನಗರದ ಕನ್ನಡಪರ ಹೋರಾಟಗಾರರಾದ ಸಂಪತ್‌ ಕುಮಾರ್ ದೇಸಾಯಿ ಹಾಗೂ ಅನಿಲ್ ದಡ್ಡಿಮನಿ ವಿರುದ್ಧ ರೌಡಿಶೀಟ್ ಓಪನ್ ಮಾಡಲಾಗಿದೆ. ಕಳೆದ 2021ರ ಡಿಸೆಂಬರ್‌ನಲ್ಲಿ ಬೆಳಗಾವಿ ಅಧಿವೇಶನಕ್ಕೆ ಪ್ರತಿಯಾಗಿ ಎಂಇಎಸ್ ಆಯೋಜಿಸಿದ್ದ ಮಹಾಮೇಳಾವ್‌ಗೆ ನುಗ್ಗಿ ಎಂಇಎಸ್ ಮುಖಂಡ ದೀಪಕ್ ದಳವಿಯ ಮೇಲೆ ಈ ಇಬ್ಬರು ಕನ್ನಡಿಗ ಯುವಕರು ಮಸಿ ಬಳಿದಿದ್ದರು‌. ಇದಲ್ಲದೇ ಪೀರಣವಾಡಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ಹೋರಾಟದಲ್ಲೂ ಮುಂಚೂಣಿಯಲ್ಲಿದ್ದರು.

    ಎಂಇಎಸ್ ಮುಖಂಡ ದೀಪಕ್ ದಳವಿ ಮುಖಕ್ಕೆ ಮಸಿ ಬಳಿದಾದ ನಂತರ ಜೈಲು ಸೇರಿ ಬಿಡುಗಡೆಯಾಗಿದ್ದರು. ಇದೀಗ ದೀಪಕ್ ದಳವಿ ಮುಖಕ್ಕೆ ಮಸಿ ಬಳಿದಿದ್ದಕ್ಕೆ ಆ ಇಬ್ಬರು ಯುವಕರ ವಿರುದ್ಧ ರೌಡಿಶೀಟ್ ಓಪನ್ ಮಾಡಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಾರಿ ಮಾಡಿರುವ ನೋಟಿಸ್ ನೋಡಿ ಕನ್ನಡಪರ ಹೋರಾಟಗಾರರಿಗೆ ಶಾಕ್ ಆಗಿದ್ದು, ನಗರದ ಟಿಳಕವಾಡಿ ಪೊಲೀಸ್ ಠಾಣೆಯಿಂದ ಅನಿಲ್ ದಡ್ಡಿಮನಿಗೆ ಕಾರಣ ಕೇಳಿ ನೋಟಿಸ್ ನೀಡಿದರೇ, ಎಪಿಎಂಸಿ ಠಾಣೆಯಿಂದ ಸಂಪತ್‌ಕುಮಾರ್ ದೇಸಾಯಿಗೆ ಕಾರಣ ಕೇಳಿ ಎಂದು ನೋಟಿಸ್ ನೀಡಲಾಗಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಶಂಕಿತ ಉಗ್ರ ಟೆಕ್ಕಿಯ ಬಂಧನ

    ಚುನಾವಣೆ ವೇಳೆಯಲ್ಲಿ ಸಾರ್ವಜನಿಕ ಶಾಂತಿ ಹಾಗೂ ಸುವ್ಯವಸ್ಥೆ ಭಂಗ ಉಂಟು ಮಾಡುವ ಸಾಧ್ಯತೆ ಇರುವುದರಿಂದ ಮುಚ್ಚಳಿಕೆ ನೀಡುವಂತೆ ನೋಟಿಸ್ ಕೊಡಲಾಗಿದೆ. 50 ಸಾವಿರ ರೂ. ಮೊತ್ತದ ಸ್ವಯಂ ಮುಚ್ಚಳಿಕೆ ಹಾಗೂ ಇಷ್ಟೇ ಮೊತ್ತದ ಇಬ್ಬರು ಜಾಮೀನುದಾರರಿಂದ ಮುಚ್ಚಳಿಕೆ ಪಡೆಯುವಂತೆ ನೋಟಿಸ್ ನೀಡಲಾಗಿದೆ. ಇದು ಕನ್ನಡಪರ ಹೋರಾಟಗಾರ ಆಕ್ರೋಶಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಗುಂಡಿಕ್ಕಿ ಬಿಜೆಪಿ ಜಿಲ್ಲಾಧ್ಯಕ್ಷನ ಕೊಲೆ- ನಕ್ಸಲರ ಕೈವಾಡ ಶಂಕೆ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಬೆಳಗಾವಿ ಪಾಲಿಕೆ ಮೇಯರ್ ಆಗಿ ಶೋಭಾ ಅವಿರೋಧ ಆಯ್ಕೆ, ರೇಷ್ಮಾ ಉಪಮೇಯರ್

    ಬೆಳಗಾವಿ ಪಾಲಿಕೆ ಮೇಯರ್ ಆಗಿ ಶೋಭಾ ಅವಿರೋಧ ಆಯ್ಕೆ, ರೇಷ್ಮಾ ಉಪಮೇಯರ್

    ಬೆಳಗಾವಿ: ಇಲ್ಲಿನ ಮಹಾನಗರ ಪಾಲಿಕೆ (Belagavi City Corporation) ಮೇಯರ್ (Mayor) ಆಗಿ ಮರಾಠ ಸಮುದಾಯದ (Marathi Community) ಶೋಭಾ ಸೋಮನಾಚೆ ಅವಿರೋಧವಾಗಿ ಆಯ್ಕೆಯಾಗಿದ್ದು, ಉಪಮೇಯರ್ ಆಗಿ ಬಿಜೆಪಿಯ ರೇಷ್ಮಾ ಪಾಟೀಲ್ ಆಯ್ಕೆಗೊಂಡಿದ್ದಾರೆ ಎಂದು ಪ್ರಾದೇಶಿಕ ಆಯುಕ್ತರು ಹಾಗೂ ಚುನಾವಣಾಧಿಕಾರಿ ಎಂ.ಜಿ ಹಿರೇಮಠ ಘೋಷಿಸಿದ್ದಾರೆ.

    ಬೆಳಗಾವಿ ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಉಪಮೇಯರ್ ಆಗಿ ಬಿಜೆಪಿಯ ರೇಷ್ಮಾ ಪಾಟೀಲ್ ಆಯ್ಕೆಯಾಗಿದ್ದಾರೆ. ರೇಷ್ಮಾ ಪಾಟೀಲ್‌ಗೆ 42 ಮತಗಳು ಪಡೆದರೆ, ಉಪಮೇಯರ್ ಸ್ಥಾನಕ್ಕೆ ಸ್ಪರ್ಧಿಸಿದ್ದ ಎಂಇಎಸ್ (MES) ಅಭ್ಯರ್ಥಿ ವೈಶಾಲಿ ಭಾತಕಾಂಡೆ ಕೇವಲ 4 ಮತ ಪೆಡೆದು ತೀವ್ರ ಮುಖಭಂಗ ಅನುಭವಿಸಿದ್ದಾರೆ.

    ಬೆಳಗಾವಿ ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆ ಪ್ರಕ್ರಿಯೆ ವೇಳೆ ಪ್ರಮಾಣ ವಚನ ಸ್ವೀಕರಿಸಿ ಕಾಂಗ್ರೆಸ್ (Congress) ಸದಸ್ಯರು ಹೊರನಡೆದು, ಚುನಾವಣೆಗೆ ಬಹಿಷ್ಕಾರ ಹಾಕಿದರು. ಇದನ್ನೂ ಓದಿ: ಬಿಜೆಪಿ ಆಡಳಿತಕ್ಕೆ ಬೇಸತ್ತು ಯುವಕರು ಕಾಂಗ್ರೆಸ್ ಸೇರ್ಪಡೆ: ಸತೀಶ್ ಜಾರಕಿಹೊಳಿ

    ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕನ್ನಡ ಭಾಷಿಕ ಸದಸ್ಯರಿಗೆ ಮೇಯರ್ ಸ್ಥಾನ ನೀಡಲು ಕನ್ನಡಪರ ಸಂಘಟನೆಗಳ ಆಗ್ರಹಿಸಿದ್ದವು. ಈ ನಡುವೆ ಮೇಯರ್ ಸ್ಥಾನಕ್ಕಾಗಿ ಲಿಂಗಾಯತ, ಮರಾಠಾ ಸಮುದಾಯಗಳ ಮಧ್ಯೆ ಪೈಪೋಟಿ ಏರ್ಪಟ್ಟಿತ್ತು. ಇದನ್ನೂ ಓದಿ: ಹುಬ್ಬಳ್ಳಿಯಿಂದ ಪುಣೆಗೆ ನೇರ ವಿಮಾನ ಸೇವೆ ಆರಂಭ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಬೆಳಗಾವಿ ಮಹಾನಗರ ಪಾಲಿಕೆ ಮುಂದೆ MES ಸದಸ್ಯರ ನಾಡದ್ರೋಹಿ ಘೋಷಣೆ

    ಬೆಳಗಾವಿ ಮಹಾನಗರ ಪಾಲಿಕೆ ಮುಂದೆ MES ಸದಸ್ಯರ ನಾಡದ್ರೋಹಿ ಘೋಷಣೆ

    ಬೆಳಗಾವಿ: ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಸ್ಥಾನಕ್ಕೆ ಚುನಾವಣೆ ಹಿನ್ನೆಲೆಯಲ್ಲಿ ಉಪಮೇಯರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆಗೆ ಎಂಇಎಸ್ ಬೆಂಬಲಿತ ಸದಸ್ಯರು ನಾಡದ್ರೋಹಿ ಘೋಷಣೆ ಕೂಗಿರುವ ಘಟನೆ ನಡೆದಿದೆ.

    ನಗರದ ಮಹಾನಗರ ಪಾಲಿಕೆ ಕಚೇರಿಗೆ ಆಗಮಿಸಿದ ಎಂಇಎಸ್ (MES) ಬೆಂಬಲಿತ ಸದಸ್ಯರು ಆವರಣದಲ್ಲಿ ಬೀದರ್‌ (Bidar), ಬಾಲ್ಕಿ, ಕಾರವಾರ, ನಿಪ್ಪಾಣಿ, ಸಂಯುಕ್ತ ಮಹಾರಾಷ್ಟ್ರ ಎಂದು‌ ಘೋಷಣೆ ಕೂಗಿದ್ದಾರೆ. ಎಂಇಎಸ್ ಬೆಂಬಲಿತ ಮೂರು ಜನ ಪಾಲಿಕೆ ಸದಸ್ಯರಿಂದ‌ ನಾಡದ್ರೋಹಿ ಘೋಷಣೆ ಕೂಗಿದ್ದಾರೆ. ಇದನ್ನೂ ಓದಿ: ಭವಾನಿ ರೇವಣ್ಣ ಸ್ಪರ್ಧೆ ಮಾಡೋದನ್ನು ಪಕ್ಷದ ವರಿಷ್ಠರು ತೀರ್ಮಾನ ಮಾಡ್ತಾರೆ: ನಿಖಿಲ್

    ರವಿ ಸಾಳುಂಕೆ, ರವಿ ಮಂಡೋಳ್ಕರ್ ಹಾಗೂ ವೈಷಾಲಿ ಭಾತಕಾಂಡೆ ಅವರಿಂದ ನಾಡದ್ರೋಹಿ ಘೋಷಣೆ ಕೂಗಲಾಗಿದ್ದು, ಉಪಮೇಯರ್ ಸ್ಥಾನ ಹಿಂದುಳಿದ ವರ್ಗ ಬಿಗೆ ಮೀಸಲು ಹಿನ್ನೆಲೆ ಎಂಇಎಸ್ ಬೆಂಬಲಿತ ಅಭ್ಯರ್ಥಿಯಾಗಿ ವೈಷಾಲಿ ಭಾತಕಾಂಡೆ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಪದೇ ಪದೇ ಭಾಷೆ ಗಡಿ ವಿಚಾರವನ್ನು ‌ಮುಂದಿಟ್ಟುಕೊಂಡ ಎಂಇಎಸ್ ನಾಯಕರು ಕನ್ನಡಿಗರನ್ನು ಕೆಣಕುವ ಕೆಲಸ ಮಾಡುತ್ತಿದ್ದಾರೆ. ಇದನ್ನೂ ಓದಿ: ಭವಾನಿ ರೇವಣ್ಣ ಸ್ಪರ್ಧೆ ಮಾಡೋದನ್ನು ಪಕ್ಷದ ವರಿಷ್ಠರು ತೀರ್ಮಾನ ಮಾಡ್ತಾರೆ: ನಿಖಿಲ್

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮಾರುವೇಷದಲ್ಲಿ ಬೆಳಗಾವಿಗೆ ನುಗ್ಗಲು ಶಿವಸೇನೆ ಯತ್ನ

    ಮಾರುವೇಷದಲ್ಲಿ ಬೆಳಗಾವಿಗೆ ನುಗ್ಗಲು ಶಿವಸೇನೆ ಯತ್ನ

    ಚಿಕ್ಕೋಡಿ: ವೇಷ ಬದಲಿಸಿಕೊಂಡು ಗಡಿ ನುಗ್ಗಲು ಪ್ರಯತ್ನಿಸಿದ್ದ ಶಿವಸೇನೆಯ ನಾಯಕನ ಯೋಜನೆಯನ್ನು ಕರ್ನಾಟಕ‌ ಪೊಲೀಸರು ವಿಫಲಗೊಳಿಸಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕರ್ನಾಟಕ (Karnataka) ಹಾಗೂ ಮಹಾರಾಷ್ಟ್ರದ (Maharashtra) ಗಡಿಯ ಕೋಗನೋಳಿ ಚೆಕ್ ಪೋಸ್ಟ್ ಬಳಿ ನಡೆದಿದೆ.

    ಜನಸಾಮಾನ್ಯರಂತೆ ಗೂಡ್ಸ್‌ ವಾಹನದಲ್ಲಿ ಪ್ರಯಾಣಿಸುವ ಮೂಲಕ ಕೊಲ್ಲಾಪುರ ಉದ್ಧವ್ ಠಾಕ್ರೆ ಬಣದ ಕೊಲ್ಲಾಪುರ ಶಿವಸೇನೆ ಅಧ್ಯಕ್ಷ ವಿಜಯ ದೇವನೆ ಯತ್ನಿಸಿದ್ದ. ಆದರೆ ನಿಪ್ಪಾಣಿ ಬಳಿಯ ಕೋಗನೋಳಿ ಚೆಕ್ ಪೋಸ್ಟ್‌ನಲ್ಲಿ ತಡೆದ ನಿಪ್ಪಾಣಿ ಸಿಪಿಐ ಸಂಗಮೇಶ ಶಿವಯೋಗಿ ಅವರ ತಂಡ ವಾಪಸ್ ಕಳುಹಿಸಿದ್ದಾರೆ. ಇದನ್ನೂ ಓದಿ: ಹೊಸ ವರ್ಷಾಚರಣೆಗೆ ನ್ಯೂ ರೂಲ್ಸ್- ಮಧ್ಯರಾತ್ರಿ 1 ಗಂಟೆವರೆಗಷ್ಟೇ ಸೆಲಬ್ರೇಷನ್!

    ಬೆಳಗಾವಿಯಲ್ಲಿ ಎಂಇಎಸ್ ಮಹಾಮೇಳಕ್ಕೆ ಬ್ರೇಕ್ ಹಿನ್ನೆಲೆಯಲ್ಲಿ MESನಿಂದ ಇಂದು ಕೊಲ್ಲಾಪುರವರೆಗೆ ಆಯೋಜಿಸಿದ್ದ ಬೈಕ್ ರ‍್ಯಾಲಿಯಲ್ಲಿ ಭಾಗವಹಿಸಲು ಬೆಳಗಾವಿಗೆ ಬರಲು ವಿಜಯ ದೇವನೆ ಯತ್ನಿಸಿದ್ದ ಎಂಬ ವಿಷಯ ಬೆಳಕಿಗೆ ಬಂದಿದೆ. ಅಷ್ಟೇ ಅಲ್ಲದೇ ಎಂಇಎಸ್ ಪುಂಡರು ಮತ್ತೆ ನಾಡದ್ರೋಹಿ ಘೋಷಣೆ ಕೂಗಿದ್ದಾರೆ. ಬೆಳಗಾವಿಯ ಛತ್ರಪತಿ ಶಿವಾಜಿ ಮಹಾರಾಜ ಉದ್ಯಾನವನದಲ್ಲಿ ಇದ್ರೆ ನಾವು ಮಹಾರಾಷ್ಟ್ರದಲ್ಲೇ ಇರ್ತೇವೆ ಇಲ್ಲದಿದ್ದರೆ ಜೈಲ್‍ನಲ್ಲಿ ಇರುತ್ತೇವೆ ಅಂದಿದ್ದಾರೆ. ಇದನ್ನೂ ಓದಿ: ಕೊರೊನಾ ಪಾಸಿಟಿವ್ ಎಂದಾಕ್ಷಣ ನಾವು ಚೀನಾಗೆ ಹೋಲಿಕೆ ಮಾಡೋದು ಬೇಡ: ಸುಧಾಕರ್‌

    Live Tv
    [brid partner=56869869 player=32851 video=960834 autoplay=true]

  • ಗಡಿ ವಿಚಾರದಲ್ಲಿ ಮತ್ತೆ ಕ್ಯಾತೆ ಮುಂದುವರಿಸಿದ MESನಿಂದ ನಾಡದ್ರೋಹಿ ಘೋಷಣೆ

    ಗಡಿ ವಿಚಾರದಲ್ಲಿ ಮತ್ತೆ ಕ್ಯಾತೆ ಮುಂದುವರಿಸಿದ MESನಿಂದ ನಾಡದ್ರೋಹಿ ಘೋಷಣೆ

    ಬೆಳಗಾವಿ: ಮಹಾಮೇಳಾವ್‌ಗೆ ಅನುಮತಿ ನೀಡದ್ದಕ್ಕೆ ನಾಡದ್ರೋಹಿ MES ಸದಸ್ಯರು ಗಡಿ ವಿಚಾರದಲ್ಲಿ ಮತ್ತೆ ಕ್ಯಾತೆ ಮುಂದುವರಿಸಿದ್ದು, ಮಹಾರಾಷ್ಟ್ರಕ್ಕೆ ತೆರಳಿ ನಾಡದ್ರೋಹಿ ಘೋಷಣೆ ಕೂಗಿದ್ದಾರೆ.

    ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದವನ್ನೇ ರಾಜಕೀಯವಾಗಿ ಬೇಳೆ ಬೇಯಿಸಿಕೊಳ್ಳಲು ಮುಂದಾಗಿರುವ ಮಹಾರಾಷ್ಟ್ರದ ಮಹಾವಿಕಾಸ್ ಆಘಾಡಿ ಪಕ್ಷವೂ ಕೊಲ್ಲಾಪುರದಲ್ಲಿ ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಸಭೆ ಸೇರಿ ಮತ್ತೆ ಕ್ಯಾತೆ ಮುಂದುವರಿಸಿದ್ದಾರೆ. ಇತ್ತ ಮಹಾವಿಕಾಸ್ ಆಘಾಡಿ ಸಭೆಯಲ್ಲಿ ಬೆಳಗಾವಿಯ ಎಂಇಎಸ್ ನಾಯಕರು ಭಾಗಿಯಾಗಿದ್ದು ಬೈಕ್ ರ‍್ಯಾಲಿ ಮೂಲಕ ಬೆಳಗಾವಿಯಿಂದ (Belagavi) ಕೊಲ್ಲಾಪುರಕ್ಕೆ ತೆರಳಲು ಎಂಇಎಸ್ ಸದಸ್ಯರು ತೀರ್ಮಾನ ಮಾಡಿದ್ದಾರೆ.

    ಡಿ. 26ರಂದು ಬೆಳಗಾವಿಯಿಂದ ಕೊಲ್ಲಾಪುರಕ್ಕೆ ತೆರಳಿ ಪ್ರತಿಭಟನೆ ನಡೆಸಲು ನಿರ್ಧಾರ ಮಾಡಿದ್ದು, ನಿಪ್ಪಾಣಿ ತಾಲೂಕಿನ ಕೊಗನೊಳ್ಳಿ ಟೋಲ್‌ಗೇಟ್‌ನಿಂದ ಬೈಕ್ ರ‍್ಯಾಲಿಗೆ ಎಂಇಎಸ್ ಸದಸ್ಯರು ತೀರ್ಮಾನ ಮಾಡಿದ್ದು, ಕೊಗನೊಳ್ಳಿ ಟೋಲ್‌ಗೇಟ್ ಬಳಿ ಎಂಇಎಸ್ ಕಾರ್ಯಕರ್ತರನ್ನು ಮಹಾವಿಕಾಸ್ ಆಘಾಡಿ ಮೈತ್ರಿಕೂಟ ಪಕ್ಷಗಳಾದ ಎಂಇಎಸ್‌ಗೆ ಶಿವಸೇನೆ ಉದ್ಧವ್ ಠಾಕ್ರೆ ಬಣ, ಎನ್‌ಸಿಪಿ, ಕಾಂಗ್ರೆಸ್ ಕಾರ್ಯಕರ್ತರು ಸ್ವಾಗತ ಮಾಡಿಕೊಳ್ಳಲಿದ್ದಾರೆ. ಇದನ್ನೂ ಓದಿ: 2022ರಲ್ಲಿ ದಾಖಲೆಯ ಡ್ರಿಂಕ್ ಅಂಡ್ ಡ್ರೈವ್ ಕೇಸ್ ದಾಖಲು

    ಬಳಿಕ ಅಲ್ಲಿಂದ ಕೊಲ್ಲಾಪುರ ಡಿಸಿ ಕಚೇರಿಯವರೆಗೆ ಬೈಕ್ ರ‍್ಯಾಲಿ ನಡೆಸಲಿದ್ದಾರೆ. ಈ ವೇಳೆ ಕರ್ನಾಟಕ (Karnataka), ಮಹಾರಾಷ್ಟ್ರ (Maharashtra) ಗಡಿ ವಿಚಾರದಲ್ಲಿ ಪ್ರಧಾನಿ ಮೋದಿ ಮಧ್ಯಪ್ರವೇಶ ಮಾಡಬೇಕದು ಆಗ್ರಹಿಸಿ ಕೊಲ್ಲಾಪುರ ಡಿಸಿ ಮುಖೇನ ಪ್ರಧಾನಿ ಮೋದಿಗೆ ಮನವಿ ಮಾಡಲಿದ್ದಾರೆ. ಇದನ್ನೂ ಓದಿ: ಸುರತ್ಕಲ್ ಬಳಿ ಚಾಕು ಇರಿದು ವ್ಯಕ್ತಿ ಕೊಲೆ – 4 ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

    Live Tv
    [brid partner=56869869 player=32851 video=960834 autoplay=true]

  • ಬೆಳಗಾವಿಯಲ್ಲಿ ಕಿಡಿಗೇಡಿಗಳು ಬಾಲ ಬಿಚ್ಚಿದ್ರೆ ನಾವು ಸುಮ್ಮನಿರಲ್ಲ: ಅಲೋಕ್ ಕುಮಾರ್ ಎಚ್ಚರಿಕೆ

    ಬೆಳಗಾವಿಯಲ್ಲಿ ಕಿಡಿಗೇಡಿಗಳು ಬಾಲ ಬಿಚ್ಚಿದ್ರೆ ನಾವು ಸುಮ್ಮನಿರಲ್ಲ: ಅಲೋಕ್ ಕುಮಾರ್ ಎಚ್ಚರಿಕೆ

    ಬೆಳಗಾವಿ: ಕಾನೂನು ಮತ್ತು ಸುವ್ಯವಸ್ಥೆ ದೃಷ್ಟಿಯಿಂದ ಜಿಲ್ಲಾಡಳಿತದ ನಿರ್ದೇಶನದ ಮೇರೆಗೆ ಮಹಾಮೇಳಾವ್‍ಗೆ (Maha Melava) ಅನುಮತಿ ನೀಡಿಲ್ಲ. ಬೆಳಗಾವಿಯಲ್ಲಿ (Belagavi) ಕಿಡಿಗೇಡಿಗಳು ಬಾಲ ಬಿಚ್ಚಿದ್ರೆ ನಾವು ಸುಮ್ಮನಿರಲ್ಲ ಎಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ (Alok Kumar)  ಎಚ್ಚರಿಕೆ ನೀಡಿದ್ದಾರೆ.

     

    ನಾಡದ್ರೋಹಿ ಎಂಇಎಸ್ (MES) ನಡೆಸುತ್ತಿದ್ದ ಮಹಾಮೇಳಾವ್‍ಗೆ ಮೊದಲ ಬಾರಿಗೆ ಬ್ರೇಕ್ ಹಾಕಿರುವ ವಿಚಾರಕ್ಕೆ ಮಾಧ್ಯಮದವರೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮಹಾಮೇಳಾವ್ ನಡೆಸದಂತೆ ನಾವು ನಿನ್ನೆಯೇ ಎಂಇಎಸ್ ನಾಯಕರಿಗೆ ಸೂಚನೆ ನೀಡಿದ್ದೇವೆ. ಕಾನೂನು ಮತ್ತು ಸುವ್ಯವಸ್ಥೆ ದೃಷ್ಟಿಯಿಂದ ಜಿಲ್ಲಾಡಳಿತ ಮಹಾಮೇಳಾವ್‍ಗೆ ಅನುಮತಿ ನೀಡಿಲ್ಲ. ಜಿಲ್ಲಾಡಳಿತದ ನಿರ್ದೇಶನ ಮೇರೆಗೆ ಮಹಾಮೇಳಾವ್ ನಡೆಸಲು ನಾವು ಬಿಟ್ಟಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಮೊದಲ ಬಾರಿಗೆ ಎಂಇಎಸ್ ಮಹಾಮೇಳಾವ್‌ಗೆ ಬ್ರೇಕ್

     

    ಪ್ರತಿವರ್ಷವೂ ಅನುಮತಿ ಪಡೆಯದಿದ್ದರೂ ಮಹಾಮೇಳಾವ್ ಮಾಡ್ತಿದ್ರು ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಈ ಹಿಂದೆ ನಡೆದಿದ್ದೇನು? ಹಿಂದಿನ ಪೊಲೀಸರು ತೆಗೆದುಕೊಂಡ ನಿರ್ಧಾರ ಬಗ್ಗೆ ನಾನು ಮಾತನಾಡಲ್ಲ. ಬೆಳಗಾವಿ ವೇಗವಾಗಿ ಬೆಳೆಯುತ್ತಿರುವ ನಗರವಾಗಿದೆ. ಅಧಿವೇಶನ ಕಾರಣಕ್ಕೆ ಇಲ್ಲಿ ಹೋಟೆಲ್ ಉದ್ಯಮ ಅಭಿವೃದ್ಧಿ ಹೊಂದುತ್ತಿದೆ. ರಿಯಲ್ ಎಸ್ಟೇಟ್ ಸೇರಿ ಹಲವು ಕ್ಷೇತ್ರಗಳಲ್ಲಿ ಬೆಳಗಾವಿ ಅಭಿವೃದ್ಧಿ ಹೊಂದುತ್ತಿದೆ. ಅಧಿವೇಶನ ನೋಡಲು ಬೇರೆ ಜಿಲ್ಲೆಗಳ ಜನರು ಬೆಳಗಾವಿಗೆ ಬರುತ್ತಾರೆ. ಅಧಿವೇಶನ ನಡೆಯುವಾಗ ಯಾವುದೇ ಕಪ್ಪು ಚುಕ್ಕೆ ಬರಬಾರದು. ಎಲ್ಲರೂ ಸ್ನೇಹ-ಪ್ರೀತಿಯಿಂದ ನಡೆದುಕೊಳ್ಳಬೇಕು ಎಂಬುದು ನಮ್ಮ ಮನವಿಯಾಗಿದೆ. ಆದರೆ, ಬೆಳಗಾವಿ ವಿಚಾರದಲ್ಲಿ ಯಾರೇ ಕಿಡಿಗೇಡಿಗಳು ಬಾಲ ಬಿಚ್ಚಿದ್ರೆ ನಾವು ಸುಮ್ಮನಿರಲು ಸಾಧ್ಯವಿಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಬೆಳಗಾವಿಯಲ್ಲಿ MES ಪುಂಡರಿಂದ ನಾಡದ್ರೋಹಿ ಘೋಷಣೆ – 20ಕ್ಕೂ ಹೆಚ್ಚು ಮಂದಿ ವಶ

    ಮೀಸಲಾತಿಗೆ ಆಗ್ರಹಿಸಿ ಪಂಚಮಸಾಲಿ ಸಮಾಜದಿಂದ ಡಿ.22 ರಂದು ಬೃಹತ್ ಪ್ರತಿಭಟನೆ ವಿಚಾರಕ್ಕೆ, ಶಾಂತಿಯುತ ಪ್ರತಿಭಟನೆಗೆ ನಮ್ಮ ಅಭ್ಯಂತರವೇನೂ ಇಲ್ಲ. ನಮ್ಮ ಸಹಕಾರ ಕೊಡುತ್ತೇವೆ. ಕಾನೂನು ಸುವ್ಯವಸ್ಥೆಗೆ ಧಕ್ಕೆ ಬಂದ್ರೆ ನಾನು ಕಠಿಣ ಕ್ರಮ ಜರುಗಿಸಬೇಕಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಬೆಳಗಾವಿಯಲ್ಲಿ ಮೊದಲ ಬಾರಿಗೆ ಎಂಇಎಸ್ ಮಹಾಮೇಳಾವ್‌ಗೆ ಬ್ರೇಕ್

    ಬೆಳಗಾವಿಯಲ್ಲಿ ಮೊದಲ ಬಾರಿಗೆ ಎಂಇಎಸ್ ಮಹಾಮೇಳಾವ್‌ಗೆ ಬ್ರೇಕ್

    ಬೆಳಗಾವಿ: ಇದೇ ಮೊದಲ ಬಾರಿ ಬೆಳಗಾವಿಯಲ್ಲಿ (Belagavi) ಎಂಇಎಸ್ ಮಹಾಮೇಳಾವ್‌ಗೆ (MES Mahamelav) ಬ್ರೇಕ್ ಬಿದ್ದಿದೆ. ಇದರಿಂದ ಇಂಗು ತಿಂದ ಮಂಗನಂತಾದ ನಾಡದ್ರೋಹಿ ಎಂಇಎಸ್ (MES) ಪುಂಡರು ಸಾಮಾಜಿಕ ಜಾಲತಾಣಗಳಲ್ಲಿ ಕರ್ನಾಟಕ ಸರ್ಕಾರದ ವಿರುದ್ಧ ಅಪಪ್ರಚಾರ ನಡೆಸಿದ್ದಾರೆ.

    ನಗರದ ವ್ಯಾಕ್ಸಿನ್ ಡಿಪೋ ಪೆಂಡಾಲ್ ಹಾಕಿ ಎಂಇಎಸ್ ಪುಂಡರು ಮಹಾಮೇಳಾವ್ ನಡೆಸಲು ಸಿದ್ಧತೆ ನಡೆಸಿದ್ದರು. ಆದರೆ ಪೊಲೀಸ್ ಇಲಾಖೆ ಮಹಾಮೇಳಾವ್ ನಡೆಸಲು ಅನುಮತಿ ನೀಡಲಿಲ್ಲ. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಎಂಇಎಸ್ ಕರ್ನಾಟಕ ಇಂದು ಪ್ರಜಾಪ್ರಭುತ್ವದ ಹತ್ಯೆ ಮಾಡಿದೆ. ಎಂಇಎಸ್‌ನ ಎಲ್ಲಾ ನಾಯಕರನ್ನು ಬಂಧಿಸಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿ ಕರ್ನಾಟಕ ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ.

    ಪೆಂಡಾಲ್‌ಗಾಗಿ ತಂದಿದ್ದ ವಸ್ತುಗಳೆಲ್ಲ ಸೀಜ್:
    ಇದಕ್ಕೂ ಮುನ್ನ ಎಂಇಎಸ್ ಮಹಾಮೇಳಾವ್ ನಡೆಸಲು ಉದ್ದೇಶಿಸಿದ ವೇದಿಕೆ ಸ್ಥಳಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ ನೀಡಿದ್ದರು. ಈ ವೇಳೆ ಎಡಿಜಿಪಿ ಅಲೋಕ್ ಕುಮಾರ್, ಪೆಂಡಾಲ್ ಹಾಕುತ್ತಿದ್ದವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ಬೆಳಗಾವಿ ಅಧಿವೇಶನ: ಸಾವರ್ಕರ್‌ ಸೇರಿ 7 ಮಂದಿ ಫೋಟೋ ಅನಾವರಣ

    ನಿಮಗೆಲ್ಲ ಯಾರು ಪೆಂಡಾಲ್ ಹಾಕಲು ಹೇಳಿದ್ದಾರೆ? ಎಲ್ಲಾ ವಸ್ತುಗಳನ್ನು ಸೀಜ್ ಮಾಡುತ್ತೇವೆ. ಟಿಳಕವಾಡಿ ಪೊಲೀಸ್ ಠಾಣೆ ಬಳಿ ವಸ್ತುಗಳು ಇರುತ್ತವೆ, ಸಂಜೆ ತಗೆದುಕೊಂಡು ಹೋಗಿ ಎಂದು ಪೆಂಡಾಲ್ ನಿರ್ಮಿಸುತ್ತಿದ್ದ ಸಿಬ್ಬಂದಿಗೆ ತಿಳಿಸಿದ್ದಾರೆ. ಪೆಂಡಾಲ್ ನಿರ್ಮಿಸಲು ಹೇಳಿದವರ ಬಗ್ಗೆ ಸ್ಟೇಟ್‌ಮೆಂಟ್ ತೆಗೆದುಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಬೆಂಗಳೂರಿನ ಇಂದಿರಾ ಕ್ಯಾಂಟೀನ್‍ಗಳ ಹೊಣೆಹೊತ್ತ BBMP ಆರೋಗ್ಯ ವಿಭಾಗ

    Live Tv
    [brid partner=56869869 player=32851 video=960834 autoplay=true]

  • MES ಪುಂಡರನ್ನು ಹದ್ದುಬಸ್ತಿನಲ್ಲಿ ಇಡುವುದು ನಮಗೆ ಗೊತ್ತಿದೆ : ಬೊಮ್ಮಾಯಿ

    MES ಪುಂಡರನ್ನು ಹದ್ದುಬಸ್ತಿನಲ್ಲಿ ಇಡುವುದು ನಮಗೆ ಗೊತ್ತಿದೆ : ಬೊಮ್ಮಾಯಿ

    ಹುಬ್ಬಳ್ಳಿ: ಎಂಇಎಸ್ (MES) ಪುಂಡರನ್ನು ಯಾವ ರೀತಿ ಹದ್ದುಬಸ್ತಿನಲ್ಲಿ ಇಡಬೇಕು ನಮಗೆ ಗೊತ್ತಿದೆ, ಆ ಕೆಲಸವನ್ನು ನಾವು ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai)  ಖಡಕ್ ವಾರ್ನಿಂಗ್ ನೀಡಿದರು.

    ಎಂಇಎಸ್ ಮಹಾಮೇಳ ನಡೆಸುತ್ತಿರುವ ವಿಚಾರವಾಗಿ ಮಾತನಾಡಿ, ಎಂಇಎಸ್ ಪುಂಡಾಟ ಇದೇ ಮೊದಲಲ್ಲ. ಕಳೆದ 50 ವರ್ಷದಿಂದ ಎಂಇಎಸ್ ಪುಂಡಾಟ ಮಾಡುತ್ತಲೇ ಬಂದಿದೆ. ಅವರನ್ನು ಯಾವ ರೀತಿ ಹದ್ದು ಬಸ್ತಿನಲ್ಲಿ ಇಡಬೇಕು ನಮಗೆ ಗೊತ್ತಿದೆ. ಆ ಕೆಲಸವನ್ನು ನಾವು ಮಾಡುತ್ತೇವೆ ಎಂದು ತಿಳಿಸಿದರು.

    ಡಿ.ಕೆ ಶಿವಕುಮಾರ್ (DK Shivakumar) ಕುಕ್ಕರ್ ಬಾಂಬ್ ವಿಚಾರ ಬಿಜೆಪಿ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿ, ಸಿದ್ದರಾಮಯ್ಯ (Siddaramaiah) ಅವರು ಜವಾಬ್ದಾರಿ ಸ್ಥಾನದಲ್ಲಿ ಇದ್ದಾರೆ. ಮೊದಲು ಕೆಪಿಸಿಸಿ ಅಧ್ಯಕ್ಷರ ಹೇಳಿಕೆಯನ್ನು ಗಮನಿಸಿ ಪ್ರತಿಕ್ರಿಯೆ ನೀಡಬೇಕು. ಅದೊಂದು ಆಕಸ್ಮಿಕ ಘಟನೆ, ಪ್ರೆಶರ್ ಕುಕ್ಕರ್‌ನಿಂದ ಆಗಿದ್ದು ಅಂತ ಹೇಳಿದ್ದಾರೆ. ಶಿವಕುಮಾರ್ ಹೇಳಿದ ಮಾತು ಕೇಳಿಸಿಕೊಂಡು ಮಾತನಾಡಲಿ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಕ್ಲಬ್, ಪಬ್‌ನಲ್ಲಿ ಮಹಿಳಾ ಸಿಬ್ಬಂದಿ ಕಡ್ಡಾಯ – ಹೊಸ ವರ್ಷಾಚರಣೆಗೆ ಪಿಂಕ್‌ಸ್ಕ್ವಾಡ್‌ ಸರ್ಪಗಾವಲು

    ಬೆಳಗಾವಿ ಅಧಿವೇಶನದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬೆಳಗಾವಿ ಅಧಿವೇಶನದಲ್ಲಿ ಕೆಲವು ಮಹತ್ವದ ಬಿಲ್ ತರುತ್ತಿದ್ದೇವೆ. ಎಸ್ಸಿ, ಎಸ್ಟಿ ಮೀಸಲಾತಿ ಜಾರಿ ಬಿಲ್ ಪ್ರಮುಖವಾಗಿ ಚರ್ಚೆಗೆ ಬರಲಿದೆ. ಬೆಳಗಾವಿ ಅಧಿವೇಶನದಲ್ಲಿ ಆರ್ಡಿನೆನ್ಸ್ ರೀ ಪೇಮೆಂಟ್ ಬಿಲ್ ಬರುತ್ತದೆ. ಉತ್ತರ ಕರ್ನಾಟಕ ಭಾಗದ ಪ್ರಮುಖ ವಿಚಾರಗಳು ಚರ್ಚೆಗೆ ಬರಲಿದ್ದು, ಅದಕ್ಕೆ ಸರ್ಕಾರ ಉತ್ತರ ನೀಡಲಿದೆ ಎಂದು ಹೇಳಿದರು. ಇದನ್ನೂ ಓದಿ: ಪಕ್ಕದ ಮನೆಯವರ ಕೋಳಿಗಳು ಕೂಗೋದ್ರಿಂದ ನಿದ್ರೆ ಮಾಡೋಕಾಗ್ತಿಲ್ಲ – ಬೆಂಗಳೂರು ಪೊಲೀಸರಿಗೆ ವ್ಯಕ್ತಿ ದೂರು

    Live Tv
    [brid partner=56869869 player=32851 video=960834 autoplay=true]