Tag: Mess

  • BSF ಕಾನ್ಸ್‌ಟೇಬಲ್‌ನಿಂದಲೇ ಕ್ಯಾಂಟೀನ್‍ನಲ್ಲಿ ಗುಂಡಿನ ದಾಳಿ- ಐವರು ಸೈನಿಕರು ಸಾವು

    BSF ಕಾನ್ಸ್‌ಟೇಬಲ್‌ನಿಂದಲೇ ಕ್ಯಾಂಟೀನ್‍ನಲ್ಲಿ ಗುಂಡಿನ ದಾಳಿ- ಐವರು ಸೈನಿಕರು ಸಾವು

    ಚಂಡೀಗಢ: ಗಡಿ ಭದ್ರತಾ ಪಡೆ (Border Security Force) ಯೋಧರ ಕ್ಯಾಂಟೀನ್‍ನಲ್ಲಿ ಗುಂಡಿನ ದಾಳಿಯಾಗಿದ್ದು, 5 ಮಂದಿ ಯೋಧರು ಸಾವನ್ನಪಿರುವ ಘಟನೆ ನಡೆದಿದೆ.

    ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿ ಅಟ್ಟಾರಿ-ವಾಘಾ ಗಡಿ ದಾಟುವಿಕೆಯಿಂದ ಸುಮಾರು 20 ಕಿಮೀ ದೂರದಲ್ಲಿರುವ ಖಾಸಾ ಪ್ರದೇಶದ ಫೋರ್ಸ್ ಮೆಸ್‍ನಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಮೊದಲು ಉಕ್ರೇನ್ ಸ್ವರ್ಗದಂತಿತ್ತು, ಈಗ ನರಕವಾಗಿದೆ – ಉಕ್ರೇನ್‍ನಲ್ಲಿ ಸಿಲುಕಿದ್ದ ಬೀದರ್ ಮೂಲದ ಯುವಕ

    ಬಿಎಸ್‍ಎಫ್ ಕಾನ್ಸ್‌ಟೇಬಲ್‌ ಮನಬಂದಂತೆ ಗುಂಡಿನ ದಾಳಿ ನಡೆಸಿದಾಗ ಐವರು ಯೋಧರ ಮೃತಪಟ್ಟಿದ್ದಾರೆ. ದಾಳಿಯಲ್ಲಿ ಓರ್ವ ಯೋಧ ಗಾಯಗೊಂಡಿದ್ದಾರೆ, ಕಾನ್ಸ್‌ಟೇಬಲ್‌ ಕೂಡಾ ಸಾವನ್ನಪ್ಪಿದ್ದಾನೆ. ಗಡಿ ಭದ್ರತಾ ಪಡೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

    ಪಂಜಾಬ್‍ನ ಅಮೃತಸರದ ಫೋರ್ಸ್ ಕ್ಯಾಂಪ್‍ನಲ್ಲಿ ಇಂದು ಬಿಎಸ್‍ಎಫ್ ಕಾನ್ಸ್‌ಟೇಬಲ್‌ ತನ್ನ ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿದ್ದು, ಘಟನೆಯಲ್ಲಿ ಕನಿಷ್ಠ ಐವರು ಗಡಿ ಭದ್ರತಾ ಪಡೆ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

  • ಊಟಕ್ಕಾಗಿ 24 ವರ್ಷದ ಹಿಂದೆ ಗಲಾಟೆ – 17 ವರ್ಷಗಳ ಬಳಿಕ ಆರೋಪಿ ಸೆರೆ

    ಊಟಕ್ಕಾಗಿ 24 ವರ್ಷದ ಹಿಂದೆ ಗಲಾಟೆ – 17 ವರ್ಷಗಳ ಬಳಿಕ ಆರೋಪಿ ಸೆರೆ

    ಚಿಕ್ಕಮಗಳೂರು : ಜಿಲ್ಲೆಯ ಮೂಡಿಗೆರೆ ತಾಲೂಕಿನ ಕುದುರೆಮುಖ ಅದಿರು ಕಂಪನಿ ಉತ್ತುಂಗದ ಸ್ಥಿತಿಯಲ್ಲಿದ್ದಾಗ ಮೆಸ್‍ನಲ್ಲಿ ನಡೆದಿದ್ದ ಗಲಾಟೆ ಸಂಬಂಧ 24 ವರ್ಷಗಳ ಬಳಿಕ ಆರೋಪಿಯನ್ನು ಕೇರಳದ ಅಲೆಪ್ಪಿಯಲ್ಲಿ ಬಂಧಿಸಿ ಕರೆತರಲಾಗಿದೆ.

    ಬಂಧಿತನನ್ನು ಅಲೆಕ್ಸಾಂಡರ್ ಎಂದು ಗುರುತಿಸಲಾಗಿದೆ. ಬಂಧಿತ ಅಲೆಕ್ಸಾಂಡರ್ ಕುದುರೆಮುಖ ಕಂಪನಿಯಲ್ಲಿ ಕಾರ್ಮಿಕನಾಗಿದ್ದ. ಕ್ಷುಲ್ಲಕ ಎರಡು ಗುಂಪಿನ ಮಧ್ಯೆ ಮಾರಾಮಾರಿ ನಡೆದಿತ್ತು. ಗಲಾಟೆ ವೇಳೆ ಚಾಕು ಹಾಕಿದ್ದ ಆರೋಪಿ ಅಲೆಕ್ಸಾಂಡರ್ 2004ರಲ್ಲಿ ಎಸ್ಕೇಪ್ ಆಗಿ ಕೇರಳಕ್ಕೆ ಪರಾರಿಯಾಗಿದ್ದ.

    1997ರಲ್ಲಿ ನಡೆದ ಗಲಾಟೆ ಕೇಸ್ 2004 ರವರೆಗೂ ನ್ಯಾಯಾಲಯದಲ್ಲಿತ್ತು. ಘಟನೆ ನಡೆದು ಹಲವು ವರ್ಷವಾದರೂ ಪೊಲೀಸರು ಹೋಗದ ಕಾರಣ ನಾನು ಬಚಾವ್ ಆದೆ ಎಂದು ಭಾವಿಸಿದ್ದ. ಆದರೆ, 17 ವರ್ಷಗಳ ಬಳಿಕ ಮಾಹಿತಿ ಕಲೆ ಹಾಕಿದ ಚಿಕ್ಕಮಗಳೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

    ಏನಿದು ಪ್ರಕರಣ?
    ಈ ಮೂಲಕ ಖಾಕಿ ರೆಕಾರ್ಡಲ್ಲಿ ಎಂಟ್ರಿಯಾದರೆ ಪಾತಾಳದಲ್ಲಿದ್ದರೂ ಬಿಡಲ್ಲ ಅನ್ನೋದಕ್ಕೆ ಕಾಫಿನಾಡ ಪೊಲೀಸರು ಸಾಕ್ಷಿಯಾಗಿದ್ದಾರೆ. ಯಾಕೆಂದರೆ, ಅದು 1997ರ ಜೂನ್ ತಿಂಗಳಲ್ಲಿ ನಡೆದ ಗಲಾಟೆ. ಸುಮಾರು 25 ವರ್ಷಗಳ ಸಮೀಪ. ಕುದುರೆಮುಖ ಸಂಸ್ಥೆಯ ಕ್ಯಾಂಟೀನಲ್ಲಿ ಊಟದ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಇಬ್ಬರಿಗೆ ಚಾಕು ಹಾಕಿದ್ದರು. ಕುದುರೆಮುಖ ಠಾಣೆಯಲ್ಲಿ ಕೇಸ್ ದಾಖಲಾಗಿ, ನಾಲ್ವರು ಮೇಲೆ ಎಫ್‍ಐಆರ್ ಆಗಿತ್ತು.

    2004ರಲ್ಲಿ ಅಲೆಕ್ಸಾಂಡರ್ ಎಸ್ಕೇಪ್ ಆಗಿದ್ದ. ಬಳಿಕ ಕುದುರೆಮುಖ ಕಂಪನಿ ಬಾಗಿಲು ಹಾಕಿತು. ಆದರೆ, ಪೊಲೀಸರು ಆರೋಪಿಗಾಗಿ ಹುಡುಕೋದನ್ನು ಬಿಡಲಿಲ್ಲ. 17 ವರ್ಷಗಳ ಕಾಲ ಎಲ್ಲಿದ್ದಾನೆ ಅಂತಾನೆ ಗೊತ್ತಾಗಲಿಲ್ಲ. 17 ವರ್ಷಗಳೇ ಕಳೆದು ಹೋದವು. ಪೊಲೀಸರು ಕೇಸನ್ನು ಮರೆತಿರುತ್ತಾರೆ ನಾನು ಬಚಾವ್ ಅಂತ ಅಂದುಕೊಂಡಿದ್ದ ಆರೋಪಿಗೆ ಕಾಫಿನಾಡ ಪೊಲೀಸರು ಅನ್‍ಎಕ್ಸ್ ಪೆಕ್ಟೆಡ್ ಶಾಕ್ ನೀಡಿ ಕರೆತಂದು ಕೋರ್ಟಿಗೆ ಹಾಜರು ಪಡಿಸಿದ್ದಾರೆ.

    ಕುದುರೆಮುಖ ಠಾಣೆಗೆ ಇತ್ತೀಚೆಗೆ ಪಿ.ಎಸ್.ಐ. ಆಗಿ ಕುಮಾರ್ ಚಾರ್ಜ್ ತೆಗೆದುಕೊಂಡು ಈ ಹಳೇ ಕೇಸಿನ ಬೆನ್ನು ಬಿದ್ದಿದ್ದರು. ಸ್ನೇಹಿತನ ಮೂಲಕ ಆರೋಪಿ ಕೇರಳದಲ್ಲಿ ಇರೋದನ್ನು ಖಚಿತಪಡಿಸಿಕೊಂಡು ಪೊಲೀಸ್ ಸಿಬ್ಬಂದಿಯಾದ ಸುರೇಶ್ ರಾವ್, ಯುವರಾಜ್, ಶ್ರೀಧರ್ ಎಂಬುವರನ್ನು ಕಳುಹಿಸಿ ಲಾಕ್ ಮಾಡಿಸಿದ್ದಾರೆ. ಇಬ್ಬರಿಗೆ ಚಾಕು ಹಾಕಿ 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಪೊಲೀಸರ ಅತಿಥಿಯಾಗಿದ್ದಾನೆ. 17 ವರ್ಷಗಳ ಹಿಂದಿನ ಕೇಸು. ಬೇಲ್ ಸಿಗುತ್ತೆ ಎಂದು ಆರೋಪಿ ಅಲೆಕ್ಸಾಂಡರ್ ಕೂಡ ಭಾವಿಸಿದ್ದ. ಆದರೆ, ನ್ಯಾಯಾಲಯ 15 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

  • ಪಬ್ಲಿಕ್ ಟಿವಿ ಇಂಪ್ಯಾಕ್ಟ್- ಅವ್ಯವಸ್ಥೆ ಸರಿಪಡಿಸಿದ ಜಿಲ್ಲಾ ಕೋವಿಡ್ ಆಸ್ಪತ್ರೆ

    ಪಬ್ಲಿಕ್ ಟಿವಿ ಇಂಪ್ಯಾಕ್ಟ್- ಅವ್ಯವಸ್ಥೆ ಸರಿಪಡಿಸಿದ ಜಿಲ್ಲಾ ಕೋವಿಡ್ ಆಸ್ಪತ್ರೆ

    ಮಡಿಕೇರಿ: ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿದ್ದ ಅವ್ಯವಸ್ಥೆ ಕುರಿತು ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತ ರೋಗಿಯೊಬ್ಬರು ವಿಡಿಯೋ ಮಾಡಿ ಅಳಲನ್ನು ತೋಡಿಕೊಂಡಿದ್ದರು.

    ಇದನ್ನು ಶುಕ್ರವಾರ ಪಬ್ಲಿಕ್ ಟಿವಿ ಸುದ್ದಿ ಮಾಡಿತ್ತು. ಈ ಸುದ್ದಿಯ ನಂತರ ಜಿಲ್ಲಾಡಳಿತ ಕೊನೆಗೂ ಎಚ್ಚೆತ್ತುಕೊಂಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಆಸ್ಪತ್ರೆಯ ಆಡಳಿತಾಧಿಕಾರಿಗಳು ಹಾಗೂ ಜಿಲ್ಲಾಡಳಿತ ಆಸ್ಪತ್ರೆಯ ಅವ್ಯವಸ್ಥೆಯನ್ನು ಸರಿಪಡಿಸಿ ಶುಚಿತ್ವದ ಕಡೆ ಗಮನಹರಿಸಿದೆ. ಇದಕ್ಕೆಲ್ಲ ಸಹಾಯ ಮಾಡಿದ ಪಬ್ಲಿಕ್ ಟಿಗೆ ಕೊರೊನಾ ಒಳರೋಗಿಗಳು ಧನ್ಯವಾದ ಹೇಳಿದ್ದಾರೆ.

    ಅಸಮಾಧಾನ ವ್ಯಕ್ತಪಡಿಸಿದ್ದ ಸೋಂಕಿತ:
    ಆಸ್ಪತ್ರೆಯಲ್ಲಿ 20 ರೋಗಿಗಳಿಗೆ ಒಂದೇ ಟಾಯ್ಲೆಟ್ ಇದ್ದು, ಕುಡಿಯಲು ಬಿಸಿ ನೀರಿಗೂ ಪರದಾಡಬೇಕಿದೆ. ದಿನಕ್ಕೆ ಎರಡು ಬಾರಿ ಮಾತ್ರ ಬಿಸಿ ನೀರನ್ನು ಕೊಡುತ್ತಿದ್ದಾರೆ. ಸ್ಯಾನಿಟೈಸರ್ ವಿತರಣೆಯಲ್ಲೂ ವ್ಯತ್ಯಾಸ ಮಾಡಲಾಗಿದೆ. ಎರಡು ಮೂರು ದಿನಗಳಾದರೂ ಸ್ಯಾನಿಟೈಸರ್ ಕೊಡುತ್ತಿಲ್ಲ. ಆಸ್ಪತ್ರೆಯಲ್ಲಿ ಇರುವುದಕ್ಕಿಂತ ಮನೆಯಲ್ಲಿದ್ದರೆ ಚೆನ್ನಾಗಿರುತ್ತಿದ್ದೆವು ಎಂದು ಮಡಿಕೇರಿಯ ಕೋವಿಡ್ ವಾರ್ಡ್‍ನಲ್ಲಿರುವ ಕೊರೊನಾ ಸೋಂಕಿತ ಅಸಮಾಧಾನ ವ್ಯಕ್ತಪಡಿಸಿದ್ದರು.

  • ಅವ್ಯವಸ್ಥೆಯ ಆಗರವಾಗಿದೆ ಬೆಳಗಾವಿ ಉಪ ನೋಂದಣಿ ಕಚೇರಿ

    ಅವ್ಯವಸ್ಥೆಯ ಆಗರವಾಗಿದೆ ಬೆಳಗಾವಿ ಉಪ ನೋಂದಣಿ ಕಚೇರಿ

    ಬೆಳಗಾವಿ: ಪ್ರತಿ ನಿತ್ಯ ಸಾವಿರಾರು ಜನರು ವಿವಾಹ ನೋಂದಣಿ ಸೇರಿದಂತೆ ಇನ್ನಿತರ ಕಾರ್ಯಗಳಿಗೆ ಬೆಳಗಾವಿ ಸಬ್ ರಿಜಿಸ್ಟರ್ ಕಚೇರಿಗೆ ಆಗಮಿಸುತ್ತಾರೆ. ಆದರೆ ಈ ಕಚೇರಿಯಲ್ಲಿ ಮೂಲಭೂತ ಸೌಕರ್ಯಗಳೇ ಇಲ್ಲದಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತವಾಗಿದೆ.

    ಸರ್ಕಾರಕ್ಕೆ ದಿನಕ್ಕೆ ಲಕ್ಷಾಂತರ ರೂ. ಆದಾಯ ಬರುವುದು ಈ ವಿವಾಹ ನೋಂದಣಿ ಕಚೇರಿಯಿಂದ. ಆದರೆ ಇಲ್ಲಿನ ಅಧಿಕಾರಿಗಳ ಒಣ ರಾಜಕಾರಣದಿಂದ ಇಲ್ಲಿ ಬರುವ ಜನರಿಗೆ ಕುಡಿಯುವ ನೀರು, ಕುಳಿತುಕೊಳ್ಳಲು ಆಸನದ ವ್ಯವಸ್ಥೆ ಮಾಡದಿರುವುದಕ್ಕೆ ಜನರು ಹಿಡಿಶಾಪ ಹಾಕಿಕೊಂಡು ತೆರಳುವ ಪರಿಸ್ಥಿತಿ ನಿರ್ಮಾಣವಾಗಿದೆ.

    ಬೆಳಗಾವಿ ಉಪ ನೋಂದಣಿ ಕಚೇರಿ ಬರೋಬ್ಬರಿ 140 ವರ್ಷ ಹಳೆಯದಾದ ಕಟ್ಟಡದಲ್ಲಿದೆ. ಅಮೂಲ್ಯ ದಾಖಲೆಗಳಿರುವ ಕಚೇರಿಯ ಮಾಡು ಸೋರುತ್ತಿದ್ದರೂ ಹೊಸ ಕಟ್ಟಡ ನಿರ್ಮಾಣವಾಗಿಲ್ಲ. ಕೇಂದ್ರದಲ್ಲಿ ಕುಳಿತುಕೊಳ್ಳಲು ಬೇಕಾದ ಆಸನದ ವ್ಯವಸ್ಥೆ ಇಲ್ಲ. ಇದರಿಂದ ಹೆಚ್ಚಿನ ಸಂಖ್ಯೆಯ ಜನರು ಬಂದರೆ ಕಟ್ಟಡದ ಬದಿಯಲ್ಲೇ ನಿಲ್ಲಬೇಕಿದೆ. ತುರ್ತಾಗಿ ಕುಡಿಯುವ ನೀರಿನ ವ್ಯವಸ್ಥೆ ಆಗಬೇಕಾಗಿದೆ. ಕಂಪ್ಯೂಟರ್, ಸ್ಕ್ಯಾನರ್ ಇನ್ನಿತರ ಉಪಕರಣ ಮೇಲ್ದರ್ಜೆಗೇರಬೇಕಿದೆ ಎನ್ನುತ್ತಾರೆ ಇಲ್ಲಿನ ಸಿಬ್ಬಂದಿ.

    ಒಟ್ಟಾರೆ ತಮ್ಮ ಕೆಲಸ ಬೇಗ ಇತ್ಯರ್ಥವಾಗಲು ವಿವಾಹ ನೋಂದಣಿ ಕಚೇರಿಗೆ ಬಂದರೆ ಸರ್ವರ್ ಸಮಸ್ಯೆ ಸೇರಿದಂತೆ ವಿವಿಧ ಕಾರಣ ನೀಡಿ ಜನರಿಗೆ ರಸ್ತೆಯ ಮಧ್ಯದಲ್ಲೇ ಕಾಯುವ ಸ್ಥಿತಿ ಬದಲಾಗಬೇಕು. ಶೀಘ್ರದಲ್ಲೇ ಇಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಬೇಕೆಂದು ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.